Site icon Vistara News

Rishab Shetty: ವಿಶ್ವಸಂಸ್ಥೆಯ ವೇದಿಕೆಯಲ್ಲಿ ರಿಷಬ್‌ ಕನ್ನಡ ಭಾಷಣ: ವಿಡಿಯೊ ವೈರಲ್‌

Rishab's Kannada speech at the United Nations forum Kantara will be screened

ಬೆಂಗಳೂರು: ವಿಶ್ವಸಂಸ್ಥೆಯ ವಾರ್ಷಿಕ ಸಭೆ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದು, ವಿಶ್ವಸಂಸ್ಥೆಯ ಮಾನವ ಮಾನವ ಹಕ್ಕುಗಳ ಮಂಡಳಿ(UNHRC) ವಾರ್ಷಿಕ ಸಭೆಯಲ್ಲಿ ನಟ, ನಿರ್ಮಾಪಕ ರಿಷಬ್ ಶೆಟ್ಟಿ (Rishab Shetty) ಪಾಲ್ಗೊಂಡಿದ್ದಾರೆ. ಅಷ್ಟೇ ಅಲ್ಲದೇ ಸಭೆಯಲ್ಲಿ ಕನ್ನಡದಲ್ಲಿಯೇ ಮಾತನಾಡಲಿದ್ದಾರೆ ರಿಷಬ್‌. ಜತೆಗೆ ಮಾರ್ಚ್ 17 ರಂದು ಹಾಲ್ ಸಂಖ್ಯೆ 13ರ ಪಾಥೆ ಬಾಲೆಕ್ಸರ್ಟ್‌ನಲ್ಲಿ ಸಿನಿಮಾ ಪ್ರದರ್ಶನಗೊಳ್ಳುತ್ತಿರುವುದಾಗಿ ಸಿಜಿಎಪಿಪಿ ನಿರ್ದೇಶಕಿ ಅನಿಂಧ್ಯಾ ಸೇನ್ ಗುಪ್ತ ತಿಳಿಸಿರುವುದು ವರದಿಯಾಗಿದೆ.

ವಿವಿಧ ದೇಶಗಳ ಪ್ರತಿನಿಧಿಗಳು ಈ ಸಭೆಯಲ್ಲಿ ಭಾಗಿಯಾಗಿ ಹಲವು ವಿಷಯಗಳ ಕುರಿತು ಮಾತನಾಡುತ್ತಿದ್ದು, ರಿಷಬ್ ಕೂಡ ಪ್ರಚಲಿತ ವಿದ್ಯಮಾನಗಳ ಕುರಿತು ಮತ್ತು ಕಾಂತಾರ (Kantara) ಚಿತ್ರದ ಕುರಿತು ವಿಷಯ ಮಂಡಿಸಲಿದ್ದಾರೆ. ಕನ್ನಡದಲ್ಲೇ ರಿಷಬ್ ಭಾಷಣ ಮಾಡಿದ್ದು, ಇದೀಗ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ವಿಡಿಯೊದಲ್ಲಿ ನಟ ಕರ್ನಾಟಕ ಸಂಸ್ಕೃತಿ, ದೈವಾರಾಧನೆ, ಕಾಡಿನ ಜನರ ಬದುಕು ಹೀಗೆ ನಾಡಿ ಭವ್ಯ ಸಂಸ್ಕೃತಿಯ ಕುರಿತು ಮಾತನಾಡಿದ್ದಾರೆ.

ವಿಡಿಯೊ ಇಲ್ಲಿದೆ

ಮಾರ್ಚ್‌ 17ರಂದು ಸ್ವಿಟ್ಜರ್ಲ್ಯಾಂಡ್ ಕಾಲಮಾನದ ಪ್ರಕಾರ ಸಂಜೆ 6.30ಕ್ಕೆ ಕಾಂತಾರ ಸಿನಿಮಾದ ಪ್ರದರ್ಶನದಲ್ಲೂ ಭಾಗಿಯಾಗಲಿದ್ದಾರೆ. ಸಿನಿಮಾ ಪ್ರದರ್ಶನದ ನಂತರ ಅವರೊಂದಿಗೆ ಮಾತುಕತೆಗೂ ಕೂಡ ಸಂಸ್ಥೆಯು ಆಯೋಜನೆ ಮಾಡಿದೆ.

ವಿಶ್ವಸಂಸ್ಥೆಯ ಮಾನವ ಮಾನವ ಹಕ್ಕುಗಳ ಮಂಡಳಿ(UNHRC) ವಾರ್ಷಿಕ ಸಭೆಯಲ್ಲಿ ಮಾತನಾಡಲು ಈಗಾಗಲೇ ಸ್ವಿಟ್ಜರ್ಲ್ಯಾಂಡ್ ಜಿನಿವಾ ತಲುಪಿದ್ದಾರೆ. ಸೆಂಟರ್ ಫಾರ್ ಗ್ಲೋಬಲ್ ಅಫೇರ್ಸ್ ಮತ್ತು ಪಬ್ಲಿಕ್ ಪೊಲೀಸ್‍ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ನಲ್ಲಿ ರಿಷಬ್ ಪರಿಸರ, ಹವಾಮಾನ ಮತ್ತು ಸಂರಕ್ಷಣೆಯ ಕುರಿತು ಹಾಗೂ ಕಾಂತಾರ ಸಿನಿಮಾದ ಬಗ್ಗೆಯೂ ಮಾತನಾಡಲಿದ್ದಾರೆ ಎಂದು ನಿರ್ದೇಶಕಿ ಅನಿಂಧ್ಯಾ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಸೆಂಟರ್ ಫಾರ್ ಗ್ಲೋಬಲ್ ಅಫೇರ್ಸ್ ಮತ್ತು ಪಬ್ಲಿಕ್ ಪೊಲಿಸಿ ಟ್ವೀಟ್‌ನಲ್ಲಿ ʻʻಜಿನೀವಾದಲ್ಲಿ, UNHRC ಅಧಿವೇಶನದಲ್ಲಿ, ಪರಿಸರ, ಹವಾಮಾನ ಮತ್ತು ಸಂರಕ್ಷಣೆಯ ಕುರಿತು ಮತ್ತು ಭಾರತೀಯ ಸಿನಿಮಾ ಕುರಿತು ರಿಷಬ್‌ ಮಾತನಾಡಲಿದ್ದಾರೆ. CGAPP ನಿರ್ದೇಶಕ ಅನಿಂದ್ಯಾ ಸೇನ್‌ಗುಪ್ತ ಅವರನ್ನು ಭೇಟಿಯಾದ ಕ್ಷಣʼʼಎಂದು ಹಂಚಿಕೊಂಡಿದೆ

ಸೆಂಟರ್ ಫಾರ್ ಗ್ಲೋಬಲ್ ಅಫೇರ್ಸ್ ಮತ್ತು ಪಬ್ಲಿಕ್ ಪೊಲಿಸಿ ಟ್ವೀಟ್‌


ಇದನ್ನೂ ಓದಿ: Rishab Shetty: ಕಾಂತಾರ ಚಿತ್ರದ ಬಳಿಕ ಬೊಮ್ಮಾಯಿಗೆ ರಿಷಬ್‌ ಶೆಟ್ಟಿ ಮನವಿ ಸಲ್ಲಿಸಿದ್ದೇನು?

ಪ್ರಿಕ್ವೆಲ್‌ ಆಗಿ ಬರಲಿದೆ ಕಾಂತಾರ 2

ಕಾಂತಾರ-1 ಸಿಕ್ವೆಲ್‌ ಆಗಿದ್ದರೆ, ಕಾಂತಾರ-2 ಪ್ರಿಕ್ವೆಲ್‌ (Prequel film) ಆಗಿ ಮೂಡಿಬರಲಿದೆ. ಕಾಂತಾರ-2 ಸಿನಿಮಾ ಕಾಂತಾರಕ್ಕಿಂತ ಮೊದಲಿನ ಕತೆಯಾಗಿದ್ದು, ಇದು ಗ್ರಾಮಸ್ಥರು, ದೇವತೆ ಮತ್ತು ತೊಂದರೆಗೊಳಗಾದ ರಾಜನ ನಡುವಿನ ಸಂಬಂಧವನ್ನು ಅನ್ವೇಷಿಸುತ್ತದೆ. ರಾಜನು ಗ್ರಾಮಸ್ಥರನ್ನು ಮತ್ತು ತನ್ನ ಸುತ್ತಲಿನ ಭೂಮಿಯನ್ನು ರಕ್ಷಿಸಲು ದೇವತೆಯೊಂದಿಗೆ ಒಪ್ಪಂದ ಮಾಡಿಕೊಂಡಿರುತ್ತಾನೆ. ʻಮನುಷ್ಯ ಮತ್ತು ಪ್ರಕೃತಿಯ ಕದನʼ ಚಿತ್ರದ ತಿರುಳು ಇದಾಗಿದೆ. ಕಾಂತಾರ-2, 2024ರಲ್ಲಿ ಥಿಯೇಟರ್‌ಗೆ ಬರಲಿದೆ ಎಂದು ರಿಷಬ್‌ ಖಚಿತಪಡಿಸಿದ್ದಾರೆ.

Exit mobile version