Site icon Vistara News

Kantara movie | ರಿಷಬ್ ಶೆಟ್ಟಿ ನಿರ್ದೇಶನ, ನಟನೆಯ ಕಾಂತಾರ ಶುಭಾರಂಭ

kantara

ಬೆಂಗಳೂರು: ಮಾನವ ಮತ್ತು ಪ್ರಕೃತಿಯ ನಡುವಿನ ಸಂಘರ್ಷ ಈ ಸಿನಿಮಾದ ಕಥಾಹಂದರ

ರಿಷಬ್ ಶೆಟ್ಟಿ ನಿರ್ದೇಶನ ಜೊತೆಗೆ ಅಭಿನಯ ಹೊಂದಿರುವ ಕಾಂತಾರ ಚಲನಚಿತ್ರ ಇಂದು ರಾಜ್ಯಾದ್ಯಂತ 150ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ತೆರೆ ಕಂಡಿದೆ. ಬೆಂಗಳೂರಿನ ಮುಖ್ಯಚಿತ್ರಮಂದಿರ ಸಂತೋಷ್ ನಲ್ಲಿ 10.15ಕ್ಕೆ ಅದ್ದೂರಿ ಪ್ರದರ್ಶನ ಕಂಡಿತು. ಯುಎಸ್, ಯುಕೆ, ಯುರೋಪ್, ಮಧ್ಯಪ್ರಾಚ್ಯ ಮತ್ತು ಆಸ್ಟ್ರೇಲಿಯಾ ಸೇರಿದಂತೆ ಹಲವು ಕಡೆ ಏಕಕಾಲದಲ್ಲಿ ಬಿಡುಗಡೆಗೊಂಡಿದೆ.

ನಿನ್ನೆಯಷ್ಟೇ ಸ್ಯಾಂಡಲ್ ವುಡ್ ಸ್ಟಾರ್ಸ್ ದಂಡು ಪ್ರೀಮಿಯರ್ ಶೋ ನೋಡಿ ಸಿನಿಮಾವನ್ನು ಮೆಚ್ಚಿ ಕೊಂಡಾಡಿದೆ. ಅಶ್ವಿನಿ ಪುನೀತ್ ರಾಜ್ ಕುಮಾರ್, ರಮ್ಯಾ , ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಸೇರಿದಂತೆ ಹಲವು ಕಲಾವಿದರು ಸಿನಿಮಾ ಮೆಚ್ಚಿ ಮಾತನಾಡಿದ್ದಾರೆ. ಅಜನೀಶ್ ಬಿ. ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ. ಕಾಂತಾರ ಸಿನಿಮಾದಲ್ಲಿ ಸಪ್ತಮಿ ಗೌಡ, ಕಿಶೋರ್ ಮತ್ತು ಅಚ್ಯುತ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ | Kantara Movie | ಕಾಂತಾರ ಹೆಸರು ಸೂಚಿಸಿದ್ದು ಈ ನಿರ್ದೇಶಕ; ಕಾಂತಾರ ಅಂದರೆ?

Exit mobile version