Rishab Shetty: ವಿಶೇಷ ಜ್ಯೂರಿ ಅವಾರ್ಡ್ ತಮ್ಮ ನೆಚ್ಚಿನ ನಟನಿಗೆ ಅರ್ಪಿಸಿದ ರಿಷಬ್‌ ಶೆಟ್ಟಿ, ಯಾರವರು? - Vistara News

South Cinema

Rishab Shetty: ವಿಶೇಷ ಜ್ಯೂರಿ ಅವಾರ್ಡ್ ತಮ್ಮ ನೆಚ್ಚಿನ ನಟನಿಗೆ ಅರ್ಪಿಸಿದ ರಿಷಬ್‌ ಶೆಟ್ಟಿ, ಯಾರವರು?

Rishab Shetty: ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ʼಸಿಲ್ವರ್ ಪಿಕಾಕ್​ ಅವಾರ್ಡ್’​​ ಪಡೆದ ರಿಷಬ್‌ ಶೆಟ್ಟಿ ಈ ಪ್ರಶಸ್ತಿಯನ್ನು ಹಿರಿಯ ನಟ ಶಂಕರ್‌ ನಾಗ್‌ ಅವರಿಗೆ ಅರ್ಪಿಸಿದ್ದಾರೆ.

VISTARANEWS.COM


on

rishab letter
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಳೆದ ವರ್ಷ ತೆರೆಕಂಡು ದೇಶಾದ್ಯಂತ ಸಂಚಲನ ಮೂಡಿಸಿದ್ದ ಚಿತ್ರ ‘ಕಾಂತಾರ’ (Kantara). ರಿಷಬ್‌ ಶೆಟ್ಟಿ (Rishab Shetty) ಈ ಚಿತ್ರವನ್ನು ನಿರ್ದೇಶಿಸಿ, ನಾಯಕನಾಗಿ ಕಾಣಿಸಿಕೊಂಡಿದ್ದರು. ಕೇವಲ 16 ಕೋಟಿ ರೂ. ಬಜೆಟ್‌ನಲ್ಲಿ ತಯಾರಾಗಿದ್ದ ಈ ಚಿತ್ರ ಬರೋಬ್ಬರಿ 400 ಕೋಟಿ ರೂ. ಗಳಿಸಿತ್ತು. ಈ ಎಲ್ಲ ಹೆಗ್ಗಳಿಕೆ ನಡುವೆ ‘ಕಾಂತಾರ’ ಮುಡಿಗೆ ಇನ್ನೊಂದು ಗರಿ ಸಿಕ್ಕಿದೆ. ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದೈವಿಕ ಕತೆಯನ್ನು ಹೊಂದಿರುವ ʼಕಾಂತಾರʼ ಸಿನಿಮಾ ಚೊಚ್ಚಲ ಆವೃತ್ತಿಯ ʼಸಿಲ್ವರ್ ಪಿಕಾಕ್​ ಅವಾರ್ಡ್’​​ ತನ್ನದಾಗಿಸಿಕೊಂಡಿದೆ. ರಿಷಬ್‌ ಶೆಟ್ಟಿ ಅವರಿಗೆ ವಿಶೇಷ ಜ್ಯೂರಿ ಅವಾರ್ಡ್ (Special Jury Award) ಲಭಿಸಿದ್ದು, ಅದನ್ನು ಅವರು ಹಿರಿಯ ನಟ ಶಂಕರ್‌ ನಾಗ್‌ (Shankar Nag) ಅವರಿಗೆ ಅರ್ಪಿಸಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ಪತ್ರವೊಂದನ್ನು ಹಂಚಿಕೊಂಡಿರುವ ರಿಷಬ್‌ ಶೆಟ್ಟಿ ಈ ಪ್ರಶಸ್ತಿಯನ್ನು ಶಂಕರ್‌ ನಾಗ್‌ ಅವರಿಗೆ ಅರ್ಪಿಸಿದ್ದಾರೆ. ʼ54ನೇ ಗೋವಾ ಇಂಟರ್‌ ನ್ಯಾಷನಲ್‌ ಫಿಲ್ಮ್‌ ಫೆಸ್ಟಿವಲ್‌ ಆಫ್‌ ಇಂಡಿಯಾ ಸ್ಪೆಷಲ್‌ ಜ್ಯೂರಿ ಅವಾರ್ಡ್‌ ಹೊರಕಿದ್ದು ಎಂದೂ ಮರೆಯಾಗದ ಕ್ಷಣಗಳಲ್ಲಿ ಉಳಿದುಕೊಳ್ಳುತ್ತದೆ ಎಂದು ರಿಷಬ್‌ ಪತ್ರ ಆರಂಭಿಸಿದ್ದಾರೆ.

1979ರಲ್ಲಿ ನನ್ನ ಸ್ಫೂರ್ತಿಯಾದ ಶಂಕರ್‌ ನಾಗ್‌ ಸರ್‌ ಅವರಿಗೆ ʼಒಂದಾನೊಂದು ಕಾಲದಲ್ಲಿʼ ಚಿತ್ರಕ್ಕೆ ಅತ್ಯುತ್ತಮ ನಟ ಎಂಬ ಪ್ರಶಸ್ತಿ ಇದೇ ಚಿತ್ರೋತ್ಸವದಲ್ಲಿ ದೊರಕಿದ್ದು, ಅವರು ತೋರಿಸಿರುವ ದಾರಿಯಲ್ಲಿ ನಡೆಯಲು ಪ್ರಯತ್ನಿಸುತ್ತಿರುವ ನನಗೆ ಇಂದು ಈ ಅವಾರ್ಡ್‌ ದೊರೆತಿದ್ದು ಅತ್ಯಂತ ಸಂತಸ ನೀಡಿದೆ ಎಂದು ರಿಷಬ್‌ ಬರೆದಿದ್ದಾರೆ.

ಮುಂದುವರಿದು, ʼಕಾಂತಾರʼವನ್ನು ನೋಡಿ ಬೆಂಬಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಕನ್ನಡಿಗರು, ಇದೀಗ ʼಕಾಂತಾರ ಅಧ್ಯಾಯ 1ʼಕ್ಕೂ ನೀಡುತ್ತಿರುವ ಅಭೂತಪೂರ್ವ ಪ್ರಶಂಸೆ ಮತ್ತು ಬೆಂಬಲ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ.
ಮತ್ತೊಮ್ಮೆ ಉತ್ತಮ ಚಿತ್ರವನ್ನು ನೀಡಲು ಶ್ರಮಿಸುತ್ತೇನೆ. ಈ ನನ್ನ ಎಲ್ಲ ಪ್ರಯತ್ನ ಹಾಗೂ ಯಶಸ್ಸಿಗೆ ಕಾರಣವಾದ ಪ್ರೀತಿಯ ಕನ್ನಡಿಗರಿಗೆ ನಾನು ಸದಾ ಅಭಾರಿ. ಈ ಪ್ರಶಸ್ತಿಯನ್ನು ನಾನು ಶಂಕರ್‌ ನಾಗ್‌ ಅವರಿಗೆ ಅರ್ಪಿಸುತ್ತೇನೆʼ ಎಂದು ರಿಷಬ್‌ ಶೆಟ್ಟಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kantara Movie: ಯೂಟ್ಯೂಬ್​ನಲ್ಲಿ ದಾಖಲೆ ಬರೆದ ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್; ವೀವ್ಸ್ ಎಷ್ಟು?

ಪ್ರಿಕ್ವೆಲ್‌ಗೆ ಮುಹೂರ್ತ

ಸದ್ಯ ರಿಷಬ್‌ ಶೆಟ್ಟಿ ‘ಕಾಂತಾರ ಚಾಪ್ಟರ್ 1’ ಕೈಗೆತ್ತಿಕೊಂಡಿದ್ದಾರೆ. ಇದು ಕಾಂತಾರ ಚಿತ್ರದ ಪ್ರಿಕ್ವೆಲ್‌. ಅಂದರೆ ʼಕಾಂತಾರʼದ ಕಥೆ ನಡೆಯುವುದಕ್ಕೂ ಮೊದಲು ಏನಾಗಿತ್ತು ಎನ್ನುವುದನ್ನು ರಿಷಬ್‌ ಶೆಟ್ಟಿ ಅಧ್ಯಾಯ 1ರಲ್ಲಿ ಹೇಳಲಿದ್ದಾರೆ. ನವೆಂಬರ್‌ 27ರಂದು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಈ ಚಿತ್ರದ ಮುಹೂರ್ತ ನೆರವೇರಿದೆ. ಜತೆಗೆ ಅಂದೇ ಫಸ್ಟ್ ಲುಕ್ ಟೀಸರ್ ರಿಲೀಸ್‌ ಆಗಿ ದಾಖಲೆಯ ಪ್ರಮಾಣದಲ್ಲಿ ವೀಕ್ಷಣೆ ಕಂಡಿದೆ. ಏಳು ಭಾಷೆಗಳಲ್ಲಿ ರಿಲೀಸ್ ಆಗಿರುವ ಈ ಟೀಸರ್ 24 ಗಂಟೆಗಳಲ್ಲಿ ಬರೋಬ್ಬರಿ 12 ಮಿಲಿಯನ್ (1.2 ಕೋಟಿ) ಬಾರಿ ವೀಕ್ಷಣೆ ಕಂಡು ಹಲವು ದಾಖಲೆಗಳನ್ನು ಸರಿಗಟ್ಟಿದೆ. ರಿಷಬ್ ಶೆಟ್ಟಿ ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಖಡ್ಗ ಹಿಡಿದಿರುವ ಈ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲೂ ವೈರಲ್ ಆಗಿದೆ. ಅಲ್ಲದೆ ವಿಶ್ವದ ಅತಿ ದೊಡ್ಡ ಸರ್ಚ್ ಎಂಜಿನ್​ ಗೂಗಲ್​ ಕೂಡ ‘ಕಾಂತಾರ ಚಾಪ್ಟರ್ 1’ರ ಫಸ್ಟ್​ ಲುಕ್ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದು, ʼವಾಹ್​ʼ ಎಂದು ಉದ್ಗಾರ ತೆಗೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Harish Raj: ದಾರೀಲಿ ನಟ ಹರೀಶ್‌ ರಾಜ್‌ಗೆ ಜನ ಏನಂತ ಕರೆಯುತ್ತಿದ್ದರು? ಅವರೇ ಹೇಳಿದ್ದಿಷ್ಟು

Harish Raj: ಈವರೆಗೆ ‘ಕಲಾಕಾರ್’, ‘ಗನ್’, ‘ಶ್ರೀ ಸತ್ಯನಾರಾಯಣ’, ‘ಕಿಲಾಡಿ ಪೊಲೀಸ್’ ಮುಂತಾದ ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ಹರೀಶ್ ರಾಜ್ ಅವರು 3 ವರ್ಷದ ಗ್ಯಾಪ್ ಬಳಿಕ ಪ್ರೇತ ಚಿತ್ರದ ಮೂಲಕ ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್
ತೊಟ್ಟಿದ್ದಾರೆ.

VISTARANEWS.COM


on

Harish Raj serial Journey shares in interview
Koo

ಬೆಂಗಳೂರು: ಹರೀಶ್‌ ರಾಜ್‌ ನಾಯಕನಾಗಿ ನಟಿಸಿ, ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಔಟ್‌ ಆ್ಯಂಡ್‌ ಔಟ್‌ ಹಾರರ್‌-ಥ್ರಿಲ್ಲರ್‌ “ಪ್ರೇತ’ ಸಿನಿಮಾ ಇಂದು (ಫೆ.23) ರಾಜ್ಯಾದ್ಯಂತ ತೆರೆ ಕಂಡಿದೆ. ಪ್ರೇತ’ ಸಿನಿಮಾದಲ್ಲಿ ಹರೀಶ್‌ ರಾಜ್‌ ಅವರೊಂದಿಗೆ ಅಮೂಲ್ಯ ಭಾರದ್ವಾಜ್‌, ಅಹಿರಾ ಶೆಟ್ಟಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಈವರೆಗೆ ‘ಕಲಾಕಾರ್’, ‘ಗನ್’, ‘ಶ್ರೀ ಸತ್ಯನಾರಾಯಣ’, ‘ಕಿಲಾಡಿ ಪೊಲೀಸ್’ ಮುಂತಾದ ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ಹರೀಶ್ ರಾಜ್ ಅವರು 3 ವರ್ಷದ ಗ್ಯಾಪ್ ಬಳಿಕ ಪ್ರೇತ ಚಿತ್ರದ ಮೂಲಕ ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್
ತೊಟ್ಟಿದ್ದಾರೆ. ಇದೀಗ ಹರೀಶ್‌ ರಾಜ್‌ ತಮ್ಮ ಸೀರಿಯಲ್‌ ಜರ್ನಿ ಹೇಗೆ ಇತ್ತು ಎಂಬುದರ ಬಗ್ಗೆ ಮಾಧ್ಯಮವೊಂದಕ್ಕೆ ಹೇಳಿಕೊಂಡಿದ್ದಾರೆ.

ಹರೀಶ್‌ ರಾಜ್‌ ಮಾತನಾಡಿ ʻʻನಾನು ಅಭಿನಯಿಸಿದ ʻದಂಡಪಿಂಡಗಳುʼ ಧಾರಾವಾಹಿ ಬರುವ ಸಮಯದಲ್ಲಿ ಎಲ್ಲಿ ಹೋದರು ʻದಂಡ ಪಿಂಡʼ ಎಂದೇ ಕರೆಯುತ್ತಿದ್ದರು. ಅದರಲ್ಲಿ ಬರಗೆಟ್ಟ ರಮೇಶ ಪಾತ್ರ ಆಗಿತ್ತು. ಅದರಲ್ಲಿ ಪ್ರತಿ ಪಾತ್ರದಲ್ಲಿ ಐದು ಜನ ಹುಡುಗರು ಒಂದೊಂದು ಸಾಧನೆ ಮಾಡುತ್ತಾರೆ. ಆದರೆ ಈ ಬರಗೆಟ್ಟ ರಮೆಶ ಮಾತ್ರ ನಿರ್ದೇಶಕನಾಗುತ್ತಾನೆ. ಇದು 2000 ಇಸವಿಯ ಕಥೆ. ಆದರೆ ಅಂದು ನಾನು ನಿರ್ದೇಶಕ ಆಗುತ್ತೀನಾ ಎಂದು ಅಂದುಕೊಂಡಿರಲಿಲ್ಲ. ಈಗ ಅದು ನಿಜ ಆಗಿದೆ. ಪಾತ್ರದಲ್ಲಿ ನಿರ್ದೇಶಕ ಆದವನು ಇದೀಗ ರಿಯಲ್‌ ಲೈಫ್‌ನಲ್ಲಿ ಆಗಿದ್ದೇನೆʼʼಎಂದಿದ್ದಾರೆ.

ಇದನ್ನೂ ಓದಿ: Actor Prakash Raj: ಮಾರ್ಚ್ 15ಕ್ಕೆ ಪ್ರೇಕ್ಷಕರ ಎದುರು ಬರ್ತಿದೆ ʻಫೋಟೋʼಸಿನಿಮಾ!

ಕಿರಣ್ ಆರ್ ಹೆಮ್ಮಿಗೆ ಸಂಭಾಷಣೆ, ಪ್ರವೀಣ್ ಶ್ರೀನಿವಾಸ್ ಮೂರ್ತಿ ಸಂಗೀತ, ಶಿವಶಂಕರ್ ಛಾಯಾಗ್ರಹಣ, ಜೀವನ್ ಪ್ರಕಾಶ್ ಸಂಕಲನ, ಮಂಜು ಕಲಾ ನಿರ್ದೇಶನ ಪ್ರೇತ ಸಿನಿಮಾಗೆ ಇದೆ. ಪ್ರಮೋದ್ ಮರವಂತೆ, ಚಿತ್ರದ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ. ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಪ್ರೇತ ಸಿನಿಮಾವನ್ನು ಶಾಲಿನಿ ಆರ್ಟ್ಸ್ ನಡಿ ಜಾಕ್ ಮಂಜು ರಾಜ್ಯಾದ್ಯಂತ ರಿಲೀಸ್ ಮಾಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Darshan: ಸ್ತ್ರೀಯರನ್ನು ಅವಮಾನಿಸಿರುವ ನಟ ದರ್ಶನ್ ಅರೆಸ್ಟ್ ಮಾಡಿ; ಠಾಣೆಗೆ ಮುತ್ತಿಗೆ ಹಾಕಿ ಮಹಿಳೆಯರ ದೂರು

Actor Darshan:  ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ಮುಂಭಾಗ 50ಕ್ಕಿಂತಲೂ ಹೆಚ್ಚಿನ ಮಹಿಳೆಯರು ಜಮಾಯಿಸಿ ದರ್ಶನ್ ಬಂಧನಕ್ಕೆ ಆಗ್ರಹಿಸಿದ್ದಾರೆ. ಅವರು ತಮ್ಮ ನಡವಳಿಕೆ ಸರಿಪಡಿಸಿಕೊಂಡು, ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

VISTARANEWS.COM


on

More than 50 women gathered at the police station and filed a complaint against Darshan
Koo

ಬೆಂಗಳೂರು: `ಇವತ್ತು ಇವಳಿರ್ತಾಳೆ , ನಾಳೆ ಅವಳಿರ್ತಾಳೆ’ ಎಂದು ದರ್ಶನ್ (Actor Darshan) ಮಾತಿನ ಭರದಲ್ಲಿ ಹೇಳಿದ್ದು ಈಗ ಭಾರಿ ವಿವಾದ ಸೃಷ್ಟಿಸಿದೆ. ಈಗಾಗಲೇ ಗೌಡತಿಯರ ಸೇನೆಯಿಂದ ದರ್ಶನ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆ ಆಗಿದೆ . ಇದರ ಬೆನ್ನಲ್ಲೇ ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ಮುಂಭಾಗ 50ಕ್ಕಿಂತಲೂ ಹೆಚ್ಚಿನ ಮಹಿಳೆಯರು ಜಮಾಯಿಸಿ ದರ್ಶನ್ ತಮ್ಮ ನಡವಳಿಕೆ ಸರಿಪಡಿಸಿಕೊಂಡು, ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಸ್ವಯಂ ಪ್ರೇರಿತರಾಗಿ ನಾವು ಬಂದಿದ್ದು, ಯಾವುದೇ ರಾಜಕೀಯ ಉದ್ದೇಶದಿಂದ ಇಲ್ಲಿಗೆ ಬಂದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ಮಹಿಳೆಯರು ದೂರು ನೀಡಿದ್ದು, ʻʻಕರ್ನಾಟಕದಲ್ಲಿ ಖ್ಯಾತಿ ಹೊಂದಿರುವ ನಟ ದರ್ಶನ್‌ ಅವರು ಹಲವಾರು ಬಾರಿ ಮಹಿಳೆಯರ ಹಾಗೂ ಮಹಿಳೆಯರ ಘನತೆಗೆ ಅವಮಾನ ಆಗುವ ರೀತಿಯಲ್ಲಿ ಟಿ.ವಿ ಸಂದರ್ಶನಗಳಲ್ಲಿ ಮತ್ತು ಕೆಲವೊಂದು ವೇದಿಕೆಗಳಲ್ಲಿ ಬಹಳ ಕೆಟ್ಟದಾಗಿ ಬಿಂಬಿಸಿರುತ್ತಾರೆ. ಬಹಳ ದಿನಗಳಿಂದ ಸಹಿಸಿಕೊಂಡು ಬಂದ ನಾವು ಇನ್ನು ಮುಂದೆ ಸಹಿಸಿಕೊಳ್ಳಲು ಆಗುವುದಿಲ್ಲ. ಶ್ರೀರಂಗಪಟ್ಟಣದಲ್ಲಿ ನಡೆದ 25ನೇ ವರ್ಷದ ಬೆಳ್ಳಿ ಸಂದರ್ಭದಲ್ಲಿ ದರ್ಶನ್‌ ಅವರು ಮಹಿಳೆಯರಿಗೆ ಅವಮಾನವಾಗುವ ರೀತಿಯಲ್ಲಿ ಮಾನ್ಯ ಮಠಾಧೀಶರು, ಗಣ್ಯ ವ್ಯಕ್ತಿಗಳು ಹಾಗೂ ಸಾರ್ವಜನಿಕರ ಮಧ್ಯದಲ್ಲಿ ಘಂಟಾಘೋಷವಾಗಿ ನಿಂದಿಸಿದ್ದಾರೆ. ಹಾಗೂ ಅವರ ವೈಯಕ್ತಿಕ ಜೀವನದ ವಿಚಾರದಲ್ಲಿ ತಮ್ಮ ಹೆಂಡತಿಯನ್ನು ಸಹ ಸುಮಾರು ವರ್ಷಗಳಂದ ಕಿರುಕುಳ ನೀಡುತ್ತಿದ್ದು ಅದರ ವಿಚಾರವಾಗಿ ಕಾರಾಗೃಹಕ್ಕೂ ಹೋಗಿ ಬಂದಿರುತ್ತಾರೆ. ಇಡೀ ದೇಶವೇ ಪೂಜಿಸಿ ಆರಾಧಿಸುವ೦ತಹ ಮಹಾಲಕ್ಷ್ಮೀಯು ಸಹ ಒಂದು ಹೆಣ್ಣಾಗಿದ್ದು, ಆ ದೇವತೆಯನ್ನು ಸಹ ಬೆತ್ತಲೆ ಮಾಡಬೇಕೆಂದು ಹೇಳಿಕೆ ನೀಡಿದ್ದರು. ಇದರ ಸಂಬಂಧ ವೀಡಿಯೋ ಮತ್ತು ಆಡಿಯೋಗಳು ನಮ್ಮ ಬಳಿ ಸಾಕ್ಷಿ ಇರುತ್ತವೆ. ಮತ್ತು ಹೆಣ್ಣು ಮಕ್ಕಳನ್ನು ಹೆದರಿಸಿ-ಬೆದರಿಸಿ, ಕೆಟ್ಟ-ಕೆಟ್ಟ ಅವಾಚ್ಯ ಶಬ್ದಗಳಂದ ಬೈದು ಜೀವ ಬೆದರಿಕೆಯನ್ನು ಸಹ ಹಾಕಿರುತ್ತಾರೆ. ಅದ್ದರಿಂದ ಈ ರೀತಿ ಪದೇ ಪದೇ ಹೇಳೆ ನೀಡಿ ಮಹಿಳೆಯರಿಗೆ ಮಾನಸಿಕವಾಗಿ ತೊಂದರೆ ನೀಡುತ್ತಿರುವ ನಟ ದರ್ಶನ್‌ ಅವರ ವಿರುದ್ಧ ಸೂಕ್ತವಾದ ಕಾನೂನು ಕ್ರಮ ಜರುಗಿಸಿ, ಬಂಧಿಸಬೇಕೆಂದು ಕೇಳಿಕೊಳ್ಳುತ್ತೇವೆʼʼ ಎಂದು ಸಲ್ಲಿಕೆ ಮಾಡಿದ್ದಾರೆ.

ಇದನ್ನೂ ಓದಿ: Actor Darshan: `ಇವತ್ತು ಇವಳಿರ್ತಾಳೆ , ನಾಳೆ ಅವಳಿರ್ತಾಳೆ’ ಎಂದ ದರ್ಶನ್‌ಗೆ ಧಿಕ್ಕಾರ ಎಂದಿದೆ ಗೌಡತಿಯರ ಸೇನೆ!

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರು ಕನ್ನಡ ಚಿತ್ರರಂಗಕ್ಕೆ (Actor Darshan) ಪದಾರ್ಪಣೆ ಮಾಡಿ 25 ವರ್ಷಗಳು ಕಳೆದ ಹಿನ್ನೆಲೆಯಲ್ಲಿ ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಸ್ಮರಿಸಲು ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಅದ್ಧೂರಿಯಾಗಿ ʼಬೆಳ್ಳಿ ಪರ್ವ D-25ʼ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೈಯಕ್ತಿಕ ಹಾಗೂ ವೃತ್ತಿಪರ ವಿಚಾರಗಳನ್ನು ಯಾವುದೇ ಮುಚ್ಚು ಮರೆಯಿಲ್ಲದೇ ಹಂಚಿಕೊಂಡರು. ಇಷ್ಟೆಲ್ಲ ಮಾತಾಡಿ ʻʻಕೊನೆಗೆ ಫ್ಯಾಮಿಲಿ ಸಮಸ್ಯೆಗಳು, ಎಲ್ಲ ಸಮಸ್ಯೆಗಳನ್ನು ಪಕ್ಕಕ್ಕೆ ಇಡುತ್ತೇನೆ. `ಇವತ್ತು ಇವಳಿರ್ತಾಳೆ , ನಾಳೆ ಅವಳಿರ್ತಾಳೆ’. ನಾನ್ಯಾಕೆ ಇವರ ಬಗ್ಗೆ ತಲೆ ಕೆಡಿಸಿಕೊಳ್ಳಲಿ. ನನಗೆ ನನ್ನ ಕೆಲಸ ಅಷ್ಟೆ ಮುಖ್ಯ ಎಂದಿದ್ದರುʼʼ ದರ್ಶನ್. ದರ್ಶನ್ ಮಾತಿನ ಭರದಲ್ಲಿ ಹೇಳಿದ ಹೇಳಿಕೆ ಈಗ ವಿವಾದ ಸೃಷ್ಟಿಯಾಗಿದೆ. 

Continue Reading

ಸ್ಯಾಂಡಲ್ ವುಡ್

Movies in Theatres: ಈ ವಾರ ಬರೋಬ್ಬರಿ 15 ಸಿನಿಮಾಗಳು ರಿಲೀಸ್‌: ಇಂದು ಏಳು ಕನ್ನಡ ಸಿನಿಮಾಗಳು ತೆರೆಗೆ!

Movies in Theatres: ಈ ವಾರ 15 ಸಿನಿಮಾಗಳು ತೆರೆ ಕಂಡಿವೆ. ಕನ್ನಡದಲ್ಲಿ ಏಳು ಸಿನಿಮಾಗಳು. ಇಲ್ಲಿದೆ ಪೂರ್ಣ ವಿವರ!

VISTARANEWS.COM


on

Sandalwood News February 23 Release Movies
Koo

ಬೆಂಗಳೂರು: ಇಂದು ಬರೋಬ್ಬರಿ 15 ಸಿನಿಮಾಗಳು ತೆರೆ ಕಂಡಿವೆ. ಕನ್ನಡದಲ್ಲಿ ಮಿಸ್ಟರ್‌ ನಟ್ವರ್‌ಲಾಲ್‌, ಮತ್ಸ್ಯಗಂಧ, ಧೈರ್ಯಂ ಸರ್ವತ್ರ ಸಾಧನಂ, ಫಾರ್‌ ರಿಜಿಸ್ಟ್ರೇಷನ್‌, ಒಂದು ಪಿಶಾಚಿಯ ಕಥೆ, ಪ್ರೇತ, ಕಪ್ಪು ಬಿಳುಪಿನ ನಡುವೆ ಸಿನಿಮಾಗಳು ಬಿಡುಗಡೆಯಾಗಿದೆ. ಹಿಂದಿಯಲ್ಲಿ ಕ್ರ್ಯಾಕ್‌ ಮತ್ತು ಆರ್ಟಿಕಲ್‌ 370 ಸಿನಿಮಾಗಳು ಬಿಡುಗಡೆಯಾಗಲಿವೆ.

ಫಾರ್‌ ರಿಜಿಸ್ಟ್ರೇಷನ್‌

ಪೃಥ್ವಿ ಅಂಬಾರ್ ಹಾಗೂ ಮಿಲನಾ ನಾಗರಾಜ್‌ (Milana Nagaraj) ನಟಿಸಿರುವ ‘ಫಾರ್‌ ರಿಜಿಸ್ಟ್ರೇಷನ್‌’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಮಿಲನಾ ನಟಿಸಿದ್ದ ‘ಲವ್​ ಮಾಕ್ಟೇಲ್​’ ಚಿತ್ರ 2020ರ ಫೆಬ್ರವರಿ ಸನಿಹ ಅಂದರೆ ಜ.31 ತೆರೆ ಕಂಡಿತ್ತು. ‘ಲವ್​ ಮಾಕ್ಟೇಲ್​ 2’ ಚಿತ್ರ 2022ರ ಫೆ.11ರಂದು ಬಿಡುಗಡೆಯಾಗಿ ಸೂಪರ್​ ಹಿಟ್​ ಆಯಿತು. ಅದೇ ರೀತಿ ಪೃಥ್ವಿ ಅಂಬಾರ್​ ನಟಿಸಿದ್ದ ‘ದಿಯಾ’ ಚಿತ್ರ 2020ರ ಫೆ.7ರಂದು ತೆರೆಕಂಡು ಗಮನ ಸೆಳೆದಿತ್ತು. ಈಗ ಮಿಲನಾ ಮತ್ತು ಪೃಥ್ವಿ ಅಂಬಾರ್​ ಅವರು ಜತೆಯಾಗಿ ನಟಿಸಿರುವ ‘ಫಾರ್​ ರಿಜಿಸ್ಟ್ರೇಷನ್​’ ಸಿನಿಮಾ ಕೂಡ ಫೆಬ್ರವರಿ ತಿಂಗಳಲ್ಲೇ ರಿಲೀಸ್​ ಆಗಿದೆ. ರವಿಶಂಕರ್‌, ತಬಲಾ ನಾಣಿ, ಸುಧಾ ಬೆಳವಾಡಿ, ಬಾಬು ಹಿರಣಯ್ಯ, ಸ್ವಾತಿ, ರಮೇಶ್‌ ಭಟ್‌, ಉಮೇಶ್‌ ಎಂಬ ದೊಡ್ಡ ತಾರಾ ಬಳಗವೇ ಇದೆ. ಚಿತ್ರದ ಚಿತ್ರಕಥೆ, ನಿರ್ದೇಶನ ದ್ವಾರಕನಾಥ್‌, ಸಂಗೀತ ಸಂಯೋಜನೆ ಆರ್‌.ಕೆ ಹರೀಶ್‌, ಅಭಿಲಾಷ್‌ ಕಳತ್ತಿ, ಅಭಿಷೇಕ್‌ ಜಿ.ಕಾಸರಗೋಡು ಛಾಯಾಗ್ರಹಣ, ಮನು ಶೇಡ್ಗರ್‌ ಸಂಕಲನ ಚಿತ್ರಕ್ಕಿದೆ.

ಇದನ್ನೂ ಓದಿ: Milana Nagaraj: ಫೆಬ್ರವರಿ 23ಕ್ಕೆ ‘ಫಾರ್​ ರಿಜಿಸ್ಟ್ರೇಷನ್​’ ರಿಲೀಸ್; ಅದೃಷ್ಟದ ತಿಂಗಳಲ್ಲೇ ಅಖಾಡಕ್ಕಿಳಿದ‌ ಮಿಲನಾ-ಪೃಥ್ವಿ!

ಮಿಸ್ಟರ್‌ ನಟ್ವರ್‌ಲಾಲ್‌

ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಮಿ. ನಟ್ವರ್‌ಲಾಲ್‌ ಸಿನಿಮಾ ಬಿಡುಗಡೆಯಾಗಲಿದೆ. ಅಯೋಧ್ಯಾಪುರ ನಿರ್ದೇಶಕ ವಿ ಲವ ಅವರು ಈ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದಿದ್ದು, ನಿರ್ದೇಶನವನ್ನೂ ಮಾಡಿದ್ದಾರೆ. ಈ ಹಿಂದೆ ‘ನಂಜುಂಡಿ ಕಲ್ಯಾಣ’, ‘ಮಡಮಕ್ಕಿ’ ಚಿತ್ರಗಳಲ್ಲಿ ಅಭಿನಯಿಸಿದ್ದ ನಟ, ನಿರ್ಮಾಪಕ ತನುಷ್ ಶಿವಣ್ಣ ಈಗ ‘ನಟ್ವರ್ ಲಾಲ್’ ಚಿತ್ರದಲ್ಲಿ ನಟಿಸಿದ್ದಾರೆ.

ಕಪ್ಪು ಬಿಳುಪಿನ ನಡುವೆ

ತಮಿಳು ನಟ ವಿಜಯ್ ಸೇತುಪತಿ ನಟನೆಯ ಅಖಾಡ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ನಟ ವಸಂತ್ ವಿಷ್ಣು ಅವರು ನಂತರ ತಾಂಡವ ಮತ್ತು ಪವಿತ್ರ ಎಂಬ ತುಳು ಸಿನಿಮಾಗಳಲ್ಲಿ ಕಾಣಿಸಿಕೊಂಡರು. ಇದೀಗ ವಸಂತ್ ವಿಷ್ಣು ಅವರು ನಟನೆಯಿಂದ ನಿರ್ದೇಶನದತ್ತ ಹೊರಳಿದ್ದು, ‘ಕಪ್ಪು ಬಿಳುಪಿನ ನಡುವೆ’ ಮೂಲಕ ನಿರ್ದೇಶಕರಾಗಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಚಿತ್ರವನ್ನು ಹಾರರ್ ಥ್ರಿಲ್ಲರ್ ಎಂದು ಹೇಳಲಾಗಿದೆ.ವಸಂತ್ ವಿಷ್ಣು ಈ ಚಿತ್ರವನ್ನು ನಿರ್ದೇಶಿಸುವುದರೊಂದಿಗೆ, ನಾಯಕನಾಗಿಯೂ ಅಭಿನಯಿಸಿದ್ದಾರೆ.

ಪ್ರೇತ

ಪ್ರೇತ’ ಸಿನಿಮಾದಲ್ಲಿ ಹರೀಶ್‌ ರಾಜ್‌ ಅವರೊಂದಿಗೆ ಅಮೂಲ್ಯ ಭಾರದ್ವಾಜ್‌, ಅಹಿರಾ ಶೆಟ್ಟಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಬಿ. ಎಂ. ವೆಂಕಟೇಶ್‌, ಅಮಿತ್‌ ಮತ್ತಿತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. “ಹರೀಶ್‌ ರಾಜ್‌ ಪ್ರೊಡಕ್ಷನ್‌’ ಬ್ಯಾನರ್‌ನಲ್ಲಿ “ಪ್ರೇತ’ ಸಿನಿಮಾ ನಿರ್ಮಾಣವಾಗಿದೆ. ಈವರೆಗೆ ‘ಕಲಾಕಾರ್’, ‘ಗನ್’, ‘ಶ್ರೀ ಸತ್ಯನಾರಾಯಣ’, ‘ಕಿಲಾಡಿ ಪೊಲೀಸ್’ ಮುಂತಾದ ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ಹರೀಶ್ ರಾಜ್ ಅವರು 3 ವರ್ಷದ ಗ್ಯಾಪ್ ಬಳಿಕ ಪ್ರೇತ ಚಿತ್ರದ ಮೂಲಕ ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್
ತೊಟ್ಟಿದ್ದಾರೆ.

ಮತ್ಸ್ಯಗಂಧ

ಉತ್ತರ ಕನ್ನಡ, ಅಲ್ಲಿನ ಪರಿಸರ, ಸಂಸ್ಕ್ರತಿ ಹಾಗೂ ಬದುಕಿಗೆ ಕೈ ಗನ್ನಡಿ ಹಿಡಿಯುವ ಪ್ರಯತ್ನವೇ ಮತ್ಸ್ಯಗಂಧ ಸಿನಿಮಾ. ಕರಾವಳಿ ಮೀನುಗಾರರ ಭಾಷೆ, ಬದುಕು, ಸಂಪ್ರದಾಯ, ಹೋರಾಟದ ಕಥೆಯ ಮತ್ಸ್ಯಗಂಧದಲ್ಲಿ ಸ್ಯಾಂಡಲ್‌ವುಡ್‌ನ ಲವ್ಲೀ ಹುಡುಗ ಪೃಥ್ವಿ ಅಂಬಾರ್ ಖಾಕಿ ತೊಟ್ಟಿದ್ದು ಅಪರಾಧಿಗಳಿಗೆ ಹಡೆಮುರಿ ಕಟ್ಟಲು ಸಜ್ಜಾಗಿದ್ದಾರೆ.

ಧೈರ್ಯಂ ಸರ್ವತ್ರ ಸಾಧನಂ

‘ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾಗೆ ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಹೃದಯಶಿವ, ಅರಸು ಅಂತಾರೆ, ಕಿನ್ನಾಳ್‌ ರಾಜ್ ಅವರು ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ರವಿಕುಮಾರ್ ಸನಾ ಅವರು ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸಿದ್ದಾರೆ. ಶ್ರೀಕಾಂತ್ ಸಂಕಲನ ಈ ಚಿತ್ರಕ್ಕಿದೆ. ಕುಂಗ್​ಫು ಚಂದ್ರು ಸಾಹಸ ನಿರ್ದೇಶನ ಮಾಡಿದ್ದಾರೆ. ಕ್ಯಾಪ್ಟನ್ ಕಿಶೋರ್ ಅವರ ನೃತ್ಯ ನಿರ್ದೇಶನ ಈ ಸಿನಿಮಾಗೆ ಇದೆ. ತುಮಕೂರು, ದೇವರಾಯನದುರ್ಗ, ಕೊರಟಗೆರೆ ಮುಂತಾದ ಕಡೆಗಳಲ್ಲಿ ಶೂಟಿಂಗ್​ ಮಾಡಲಾಗಿದೆ. ಒಂದು ಪಿಶಾಚಿಯ ಕಥೆ, ಹಿಂದಿಯಲ್ಲಿ ಕ್ರ್ಯಾಕ್‌, ಆರ್ಟಿಕಲ್‌ 370 ರಿಲೀಸ್‌ ಆಗಿದೆ.

ಶುಕ್ರವಾರ ಬಿಡುಗಡೆಯಾಗುವ ತೆಲುಗು ಸಿನಿಮಾಗಳು

  • – ಸಿದ್ಧಾರ್ಥ್‌ ರಾಯ್‌
  • – ಸುಂದರಂ ಮಾಸ್ಟರ್‌
  • – ಮಸ್ತು ಶೇಡ್ಸ್‌ ಉನ್ನೈ ರಾ…
  • – ಮುಖ್ಯ ಗಮನಿಕ
  • ತಮಿಳು ಸಿನಿಮಾಗಳು
  • – ಬರ್ತ್‌ಮಾರ್ಕ್‌
  • – ಪಂಬಾತ್ತಂ
Continue Reading

ಕಾಲಿವುಡ್

Jailer 2: ʻಜೈಲರ್‌ 2ʼ ಬರೋದು ಕನ್‌ಫರ್ಮ್‌? ನಟಿ ಮಿರ್ನಾ ಮೆನನ್ ಹೇಳಿದ್ದೇನು?

Jailer 2: ನಟಿ ಮಿರ್ನಾ ಮೆನನ್ ತಮ್ಮ ಮುಂಬರುವ ಸಿನಿಮಾ ʻಬರ್ತ್ ಮಾರ್ಕ್ʼ ಪ್ರಚಾರ ಮಾಡುವಾಗ, ʻಜೈಲರ್ 2ʼ ಸಿನಿಮಾ ಆಗಲಿದೆ ಎಂದು ಹೇಳಿದ್ದಾರೆ. ಜೈಲರ್ ಚಿತ್ರದಲ್ಲಿ ರಜನಿಯ ಸೊಸೆಯಾಗಿ ನಟಿಸಿದ್ದರು ನಟಿ ಮಿರ್ನಾ ಮೆನನ್.

VISTARANEWS.COM


on

Mirnaa Menon gives a big update about Jailer 2
Koo

ಬೆಂಗಳೂರು: ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರ ʻಜೈಲರ್‌ʼ ಸಿನಿಮಾ (Jailer 2) ಹಿಟ್‌ ಕಂಡ ಬಳಿಕ ಜೈಲರ್‌ ಸೀಕ್ವೆಲ್ ಬರುತ್ತದೆ ಎಂದು ವರದಿಯಾಗಿತ್ತು. ರಜನಿಕಾಂತ್, ನೆಲ್ಸನ್ ದಿಲೀಪ್ ಕುಮಾರ್ ಹಾಗೂ ಅನಿರುದ್ಧ್ ಮೂವರ ಕಾಂಬಿನೇಷನ್‌ನಲ್ಲಿ ‘ಜೈಲರ್ 2’ ಬರಲಿದೆ ಎನ್ನಲಾಗುತ್ತಿದೆ. ಶೀಘ್ರದಲ್ಲಿಯೇ ‘ಜೈಲರ್ 2’ ಸೆಟ್ಟೇರಲಿದೆ ಎನ್ನುವ ಮಾತು ಕೂಡ ಕೇಳಿ ಬಂದಿತ್ತು. ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ಸ್ಕ್ರಿಪ್ಟ್ ವರ್ಕ್ ಶುರು ಮಾಡಿದ್ದಾರೆ ಎನ್ನಲಾಗಿದೆ.

ಇಲ್ಲಿಯವರೆಗೆ, ಚಿತ್ರತಂಡದಿಂದ ಅಧಿಕೃತ ಮಾಹಿತಿ ಬಂದಿಲ್ಲ. ಆದರೆ ನಟಿ ಮಿರ್ನಾ ಮೆನನ್ ತಮ್ಮ ಮುಂಬರುವ ಸಿನಿಮಾ ʻಬರ್ತ್ ಮಾರ್ಕ್ʼ ಪ್ರಚಾರ ಮಾಡುವಾಗ, ʻಜೈಲರ್ 2ʼ ಸಿನಿಮಾ ಆಗಲಿದೆ ಎಂದು ಹೇಳಿದ್ದಾರೆ. ಜೈಲರ್ ಚಿತ್ರದಲ್ಲಿ ರಜನಿಯ ಸೊಸೆಯಾಗಿ ನಟಿಸಿದ್ದರು ನಟಿ ಮಿರ್ನಾ ಮೆನನ್.

ಮಿರ್ನಾ ಮೆನನ್ ಮಾತನಾಡಿ, “ನಾನು ಇತ್ತೀಚೆಗೆ ನೆಲ್ಸನ್ ಸರ್ ಅವರೊಂದಿಗೆ ಮಾತನಾಡಿದ್ದೇನೆ. ಜೈಲರ್ 2 ಸಿನಿಮಾ ಸ್ಕ್ರಿಪ್ಟ್ ಕೆಲಸ ನಡೆಯುತ್ತಿದೆ ಎಂದು ಅವರು ನನಗೆ ಹೇಳಿದರು. ನಾನು ಜೈಲರ್ 2 ಸಿನಿಮಾದಲ್ಲಿ ಇದ್ದೇನೋ ಇಲ್ಲವೋ ಗೊತ್ತಿಲ್ಲ. ಅದು ನಿರ್ದೇಶಕರ ಆಯ್ಕೆ. ಒಂದು ವೇಳೆ ನನ್ನ ಪಾತ್ರವನ್ನು ವಿಸ್ತರಿಸಲು ಬಯಸಿದರೆ, ನಾನು ಮುಂದಿನ ಭಾಗದದಲ್ಲಿ ಇರಬಹುದುʼʼಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Jailer Movie: `ಜೈಲರ್‌ 2’ನಲ್ಲಿ ಸೂಪರ್‌ ಸ್ಟಾರ್‌ ರಜನಿ ಜತೆ ದಳಪತಿ ವಿಜಯ್‌?

`ಜೈ ಭೀಮ್‌’ ಖ್ಯಾತಿಯ ನಿರ್ದೇಶಕ ಟಿ.ಜೆ. ಜ್ಞಾನವೇಲ್ ನಿರ್ದೇಶನದ ʼತಲೈವರ್ 170ʼ ಸಿನಿಮಾಗೆ ʼವೆಟ್ಟಯ್ಯನ್’ ಎಂದು ಟೈಟಲ್‌ ಇಡಲಾಗಿದೆ. ವೆಟ್ಟಯ್ಯನ್ (Vettaiyan) ಎಂದರೆ ತಮಿಳಿನಲ್ಲಿ ʼಬೇಟೆಗಾರ (Hunter) ಎಂದು ಅರ್ಥ. ಇದು ಮಲ್ಟಿಸ್ಟಾರರ್‌ ಚಿತ್ರವಾಗಿದ್ದು, ಅಮಿತಾಬ್ ಬಚ್ಚನ್, ಫಹಾದ್ ಫಾಸಿಲ್, ರಾಣಾ ದಗ್ಗುಬಾಟಿ, ಮಂಜು ವಾರಿಯರ್ ಸೇರಿದಂತೆ ಪ್ರಮುಖ ಕಲಾವಿದರು ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾ ಚಿತ್ರೀಕರಣ ಕೂಡ ಭರದಿಂದ ಸಾಗುತ್ತಿದೆ. ಲೈಕಾ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ನಿರ್ಮಿಸುತ್ತಿದ್ದು,‌ ಸಿನಿಮಾಗೆ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಇರಲಿದೆ.

ಸಿನಿಮಾದಲ್ಲಿ ರಜನಿಕಾಂತ್ ನಿವೃತ್ತ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದು, ಪ್ರಕರಣವೊಂದನ್ನು ರಿ ಓಪನ್ ಮಾಡಿ ನ್ಯಾಯ ಒದಗಿಸುವ ಕೆಲಸವನ್ನು ಮಾಡಲಿದ್ದಾರೆ ಎನ್ನಲಾಗಿದೆ. ಇದಾದ ಬಳಿಕ ರಜನಿಕಾಂತ್‌ ಅವರು ಲೋಕೇಶ್ ಕನಕರಾಜ್ ಜತೆ ಸಿನಿಮಾ ಮಾಡಲಿದ್ದಾರೆ. ಹಾಗಾಗಿ, ಈ ಎರಡು ಚಿತ್ರಗಳು ಮುಗಿದ ನಂತರ ʻಜೈಲರ್ 2ʼ ಪ್ರಾರಂಭವಾಗಬಹುದು.

Continue Reading
Advertisement
dks
ಕರ್ನಾಟಕ15 mins ago

ನೀರಾ ಕುಡಿದಾಗ ನನಗೆ ಅಮಲಾಗಲಿಲ್ಲ: ಅನುಭವ ಮೆಲುಕು ಹಾಕಿದ ಡಿಸಿಎಂ ಡಿ.ಕೆ.ಶಿವಕುಮಾರ್

s jaishankar raisina dialogue
ಪ್ರಮುಖ ಸುದ್ದಿ45 mins ago

S Jaishankar: ವಿಶ್ವ ಸಂಸ್ಥೆಯಲ್ಲಿ ಸುಧಾರಣೆ ಅಗತ್ಯ: ವಿದೇಶಾಂಗ ಸಚಿವ ಜೈಶಂಕರ್‌ ಪ್ರತಿಪಾದನೆ

Sumalatha Ambareesh and Pralhad Joshi
ಧಾರವಾಡ52 mins ago

Sumalatha Ambareesh: ಸ್ಪರ್ಧೆ ಖಚಿತ ಎಂದ ಸುಮಲತಾ; ‌ಅವರು ಬಿಜೆಪಿಯೊಳಗೆ ಇರ್ತಾರೆ ಎಂದ ಜೋಶಿ

Fire breaks out in auto shed Burnt autos
ಬೆಂಗಳೂರು1 hour ago

Fire Accident : ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ! 40-50 ಆಟೋಗಳು ಬೆಂಕಿಗಾಹುತಿ

Rahul Gandhi
ದೇಶ1 hour ago

ಶಾ ವಿರುದ್ಧ ಹೇಳಿಕೆ; ಮಾನಹಾನಿ ಕೇಸ್‌ ರದ್ದು ಕೋರಿ ರಾಹುಲ್‌ ಗಾಂಧಿ ಸಲ್ಲಿಸಿದ ಅರ್ಜಿ ವಜಾ, ಮತ್ತೆ ಸಂಕಷ್ಟ

divorce
ವೈರಲ್ ನ್ಯೂಸ್2 hours ago

ವಿಚ್ಛೇದನ; ಪತ್ನಿಯೇ ಪತಿಗೆ 5 ಸಾವಿರ ರೂ. ಜೀವನಾಂಶ ಕೊಡಲು ಕೋರ್ಟ್‌ ಆದೇಶ!

Hindu temples money used for development of Hindu communities CM Siddaramaiah
ರಾಜಕೀಯ2 hours ago

Hindu Temples: ಹಿಂದೂ ದೇಗುಲದ ಹಣವು ಮುಂದೂ ಆ ಸಮುದಾಯಗಳ ಅಭಿವೃದ್ಧಿಗೇ ಬಳಕೆ: ಸಿಎಂ ಸಿದ್ದರಾಮಯ್ಯ

He sent a private photo video of his girlfriend
ಬೆಳಗಾವಿ2 hours ago

Belgavi News : ನವ ವಿವಾಹಿತೆಯ ಖಾಸಗಿ ವಿಡಿಯೊ ಹರಿಬಿಟ್ಟು ಹಳೇ ಪ್ರೇಮಿ ಕಿತಾಪತಿ!

Akash Deep
ಕ್ರಿಕೆಟ್2 hours ago

Akash Deep: ಮೊದಲ ಪಂದ್ಯದಲ್ಲೇ ಕ್ಲೀನ್‌ಬೌಲ್ಡ್‌ ಮಾಡಿದರೂ ಔಟ್‌ ಕೊಡದ ಅಂಪೈರ್;‌ ತಪ್ಪು ಯಾರದ್ದು?

Harish Raj serial Journey shares in interview
ಸ್ಯಾಂಡಲ್ ವುಡ್2 hours ago

Harish Raj: ದಾರೀಲಿ ನಟ ಹರೀಶ್‌ ರಾಜ್‌ಗೆ ಜನ ಏನಂತ ಕರೆಯುತ್ತಿದ್ದರು? ಅವರೇ ಹೇಳಿದ್ದಿಷ್ಟು

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ4 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Fire breaks out in auto shed Burnt autos
ಬೆಂಗಳೂರು1 hour ago

Fire Accident : ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ! 40-50 ಆಟೋಗಳು ಬೆಂಕಿಗಾಹುತಿ

read your daily horoscope predictions for february 23 2024
ಭವಿಷ್ಯ10 hours ago

Dina Bhavishya : ಈ ರಾಶಿಯವರಿಗೆ ಆಫೀಸ್‌ನಲ್ಲಿ ಬಾಸ್‌ನ ಕಿರಿಕಿರಿಯಿಂದ ದಿನಪೂರ್ತಿ ಟೆನ್ಷನ್‌!

Catton Candy contain cancer Will there be a ban in Karnataka
ಬೆಂಗಳೂರು22 hours ago

cotton candy Ban : ಕರ್ನಾಟಕದಲ್ಲಿ ಬ್ಯಾನ್‌ ಆಗುತ್ತಾ ಬಾಂಬೆ ಮಿಠಾಯಿ; ಕ್ಯಾನ್ಸರ್​​ ಕಾರಕ ವಿಷ ಪತ್ತೆ!

Swarnavalli Mutt appoints successor ceremony
ಕರ್ನಾಟಕ1 day ago

Swarnavalli Mutt: ಸ್ವರ್ಣವಲ್ಲೀ ಶ್ರೀಗಳ ಶಿಷ್ಯ ಸ್ವೀಕಾರ ಸಂಪನ್ನ; ಇಲ್ಲಿದೆ ಲೈವ್‌ ವಿಡಿಯೊ

read your daily horoscope predictions for february 21 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಸಂಗಾತಿಯ ವರ್ತನೆಯು ಕೋಪ, ಮುಜುಗರವನ್ನುಂಟು ಮಾಡುತ್ತೆ!

read your daily horoscope predictions for february 20 2024
ಭವಿಷ್ಯ3 days ago

Dina Bhavishya : ಈ ದಿನ ಆತುರದಲ್ಲಿ ಈ ರಾಶಿಯವರು ಯಾವ ತೀರ್ಮಾನವನ್ನು ಮಾಡ್ಬೇಡಿ!

read your daily horoscope predictions for february 19 2024
ಭವಿಷ್ಯ4 days ago

Dina Bhavishya : ನಿಮ್ಮನ್ನು ದ್ವೇಷಿಸುವವರೇ ಸ್ನೇಹಿತರಾಗಿ ಬದಲಾಗುತ್ತಾರೆ

read your daily horoscope predictions for february 18 2024
ಭವಿಷ್ಯ5 days ago

Dina Bhavishya : ಈ ರಾಶಿಯವರು ಇಂದು ನೀರಿನಂತೆ ಹಣವನ್ನು ಖರ್ಚು ಮಾಡ್ತಾರೆ

Challenging Darsha
ಪ್ರಮುಖ ಸುದ್ದಿ6 days ago

Actor Darshan : ಚಾಲೆಂಜಿಂಗ್ ಸ್ಟಾರ್​ ದರ್ಶನ್​ ‘ಬೆಳ್ಳಿ ಪರ್ವ’ ಕಾರ್ಯಕ್ರಮದ ಲೈವ್​ ಇಲ್ಲಿ ವೀಕ್ಷಿಸಿ

Children lock up their mother for property
ಕರ್ನಾಟಕ6 days ago

Inhuman Behaviour : ಆಸ್ತಿಗಾಗಿ ಹೆತ್ತ ತಾಯಿಯನ್ನೇ ಗೃಹ ಬಂಧನದಲ್ಲಿಟ್ಟರು ಮಕ್ಕಳು!

ಟ್ರೆಂಡಿಂಗ್‌