Site icon Vistara News

Rishab Shetty | ಬೆಳಕು, ಆದರೆ ಇದು ಬೆಳಕಲ್ಲ! 100 ದಿನದ ದರ್ಶನ ಎಂದು ಸ್ಪೆಷಲ್‌ ಪೋಸ್ಟ್‌ ಹಂಚಿಕೊಂಡ ರಿಷಬ್‌ ಶೆಟ್ಟಿ

Rishab Shetty

ಬೆಂಗಳೂರು: ನಟ, ನಿರ್ದೇಶಕ ರಿಷಬ್‌ ಶೆಟ್ಟಿ (Rishab Shetty ) ʻಕಾಂತಾರ’ ಸಿನಿಮಾದ ಸಕ್ಸಸ್‌ಫುಲ್ ಜರ್ನಿಯ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ವಿಶೇಷ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದಾರೆ. ಸೆಪ್ಟೆಂಬರ್ 30ರಂದು ʻಕಾಂತಾರ’ ಸಿನಿಮಾ ತೆರೆಕಂಡಿತ್ತು. 2022ರ ವರ್ಷದ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. 

‘ಬೆಳಕು..!! ಆದರೆ ಇದು ಬೆಳಕಲ್ಲ 100 ದಿನದ ದರ್ಶನ” ಎಂದು ರಿಷಬ್‌ ಶೆಟ್ಟಿ ಇನ್‌ಸ್ಟಾದಲ್ಲಿ ಬರೆದುಕೊಂಡಿದ್ದಾರೆ. ಪ್ರಯಾಣದ ಉದ್ದಕ್ಕೂ ನಮ್ಮನ್ನು ಹಿಡಿದಿಟ್ಟುಕೊಂಡು ದೈವತ್ವವನ್ನು ಕಂಡುಕೊಂಡಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳುʼʼ ಎಂದಿದ್ದಾರೆ. ಕಾಂತಾರ ಸಿನಿಮಾ ಡಿವೈನ್ ಬ್ಲಾಕ್ ಬಸ್ಟರ್ 100 ದಿನಗಳನ್ನು ಪೂರೈಸಿದೆ ಎಂದು ಬರೆದಿದ್ದಾರೆ.

ಕಿರುತೆರೆಗೆ ಕಾಂತಾರ
ರಿಷಬ್‌ ಶೆಟ್ಟಿ ನಿರ್ದೇಶನ ಹಾಗೂ ನಟನೆಯ ʻಕಾಂತಾರʼ ಸಿನಿಮಾ (Kantara Movie) ಜನವರಿ 15 ರಂದು ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಸಿನಿಮಾ ಪ್ರಸಾರವಾಗಲಿದೆ. ಸಿನಿಮಾವನ್ನು ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿದ್ದು, ಹೊಂಬಾಳೆ ಪ್ರೊಡಕ್ಷನ್‌ನವರು ನಿರ್ಮಾಣ ಮಾಡಿದ್ದಾರೆ. ಸಿನಿಮಾದಲ್ಲಿ ರಿಷಬ್ ಜತೆಗೆ ಸಪ್ತಮಿ ಗೌಡ ನಾಯಕಿಯಾಗಿ ನಟಿಸಿದ್ದಾರೆ. ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಇನ್ನೂ ಮುಂತಾದವರು ನಟಿಸಿದ್ದಾರೆ. ರಾಣಾ ದಗ್ಗುಬಾಟಿ, ಧನುಷ್, ಪ್ರಭಾಸ್‌, ಪೃಥ್ವಿರಾಜ್‌ ಸೇರಿದಂತೆ ದಕ್ಷಿಣ ಭಾರತ ಚಿತ್ರರಂಗದ ಸಾಕಷ್ಟು ಜನ ಸ್ಟಾರ್‌ಗಳು ಸಿನಿಮಾ ನೋಡಿ ಮೆಚ್ಚುಗೆ ಸೂಚಿಸಿದ್ದರು.

ಇದನ್ನೂ ಓದಿ | Rishab Shetty | ʻಅದ್ಭುತ ವ್ಯಕ್ತಿಗಳ ಜತೆ ಅದ್ಭುತ ಚರ್ಚೆʼ ಅಂದಿದ್ಯಾಕೆ ರಿಷಬ್‌ ಶೆಟ್ಟಿ: ಫೋಟೊ ವೈರಲ್‌!

ಈಗಾಗಲೇ ಕಾಂತಾರ ಚಿತ್ರವನ್ನು 2023ನೇ ಆಸ್ಕರ್‌ಗೆ ನಾಮನಿರ್ದೇಶನ ಮಾಡುವಂತೆ ಅರ್ಜಿ ಸಲ್ಲಿಸಿರುವುದಾಗಿ ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ತಿಳಿಸಿದೆ. ಚಿತ್ರದ ನಿರ್ಮಾಪಕರಾದ ಹೊಂಬಾಳೆ ಪ್ರೊಡಕ್ಷನ್ಸ್‌ ಇದನ್ನು ಖಾತ್ರಿಪಡಿಸಿದ್ದು, ಕಾಂತಾರ- ೨ ನಿರ್ಮಿಸುವ ಸುಳಿವನ್ನೂ ನೀಡಿದೆ. ಹೊಂಬಾಳೆ ಪ್ರೊಡಕ್ಷನ್ಸ್ ಸಂಸ್ಥಾಪಕ ವಿಜಯ್ ಕಿರಗಂದೂರ್ ಈ ಬಗ್ಗೆ ಖಾಸಗಿ ವಾಹಿನಿಯೊಂದಿಗೆ ಮಾತನಾಡಿದ್ದು, ಕೊನೆಯ ಕ್ಷಣದಲ್ಲಿ ಅರ್ಜಿ ಕಳುಹಿಸಿದ್ದು, ನಾಮನಿರ್ದೇಶನಕ್ಕೆ ಪರಿಗಣಿಸುವ ಬಗ್ಗೆ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. 

ಇದನ್ನೂ ಓದಿ | Rishab Shetty | 400 ಕೋಟಿ ರೂ. ಗಳಿಕೆ ಕಂಡ ಕಾಂತಾರ ಸಿನಿಮಾಗೆ ರಿಷಬ್‌ ಪಡೆದುಕೊಂಡ ಸಂಭಾವನೆ ಎಷ್ಟು?

Exit mobile version