Site icon Vistara News

Rishab Shetty: ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದ ಕ್ಷಣಗಳನ್ನು ಹಂಚಿಕೊಂಡ ರಿಷಬ್‌ ಶೆಟ್ಟಿ!

ಆಗಸ್ಟ್​ 25ರಂದು ಎಲ್ಲೆಡೆ ಸಂಭ್ರಮದಿಂದ (Rishab Shetty) ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಲಾಗಿತ್ತು. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಬಹಳ ಉತ್ಸಾಹದಲ್ಲಿ ಈ ಹಬ್ಬವನ್ನು ಆಚರಿಸಿದ್ದಾರೆ. ಇದೀಗ ರಿಷಬ್‌ ಶೆಟ್ಟಿ ಹಬ್ಬದಲ್ಲಿ ಸಂಭ್ರಮಿಸಿರುವ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ʻʻಕಳೆದ ಶುಭ ಶುಕ್ರವಾರ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಿದ ಕ್ಷಣಗಳು. ಆ ತಾಯಿ, ಎಲ್ಲರಿಗೂ ಆಯುರಾರೋಗ್ಯ ಐಶ್ವರ್ಯವನ್ನು ನೀಡಿ ಹರಸಲಿʼʼಎಂದು ರಿಷಬ್‌ ಫ್ಯಾಮಿಲಿ ಜತೆ ಇರುವ ಫೋಟೊಗಳನ್ನು ಶೇರ್‌ ಮಾಡಿದ್ದಾರೆ.

ಇದನ್ನೂ ಓದಿ: Rishab Shetty : ಭಾರಿ ಬಜೆಟ್‌ನಲ್ಲಿ ನಿರ್ಮಾಣವಾಗಲಿದೆ ಕಾಂತಾರ 2! ಶೂಟಿಂಗ್‌ ಯಾವಾಗ?

ಪ್ರಗತಿ ಶೆಟ್ಟಿ ಮತ್ತು ರಿಷಬ್​ ಶೆಟ್ಟಿ ದಂಪತಿಗೆ ಇಬ್ಬರು ಮಕ್ಕಳು. ಮಗನಿಗೆ ರಣ್ವಿತ್​ ಶೆಟ್ಟಿ ಎಂದು ಹೆಸರು ಇಟ್ಟಿದ್ದಾರೆ. ಮಗಳಿಗೆ ರಾಧ್ಯ ಎಂದು ನಾಮಕರಣ ಮಾಡಲಾಗಿದೆ.
‘ಕಾಂತಾರ’ ಸಿನಿಮಾಗೆ ರಿಷಬ್​ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆ ಮುಖ್ಯಭೂಮಿಕೆಯಲ್ಲಿ ನಟಿಸಿದರು. ಆ ಸಿನಿಮಾ 2022ರಲ್ಲಿ ಬಿಡುಗಡೆಯಾಗಿ ಸೂಪರ್​ ಹಿಟ್​ ಆಯಿತು. ಈಗ ಆ ಚಿತ್ರಕ್ಕೆ ಪ್ರೀಕ್ವೆಲ್​ ಸಿದ್ಧವಾಗುತ್ತಿದೆ.
ವರದಿಗಳ ಪ್ರಕಾರ ಕಾಂತಾರ 1 ಕ್ಕಿಂತ ಕಾಂತಾರ 2 ಸಿನಿಮಾ (Kantara 2 budget) ಭಾರಿ ಬಜೆಟ್‌ನಲ್ಲಿ ನಿರ್ಮಾಣವಾಗಲಿದೆ ಎಂದು ವರದಿಯಾಗಿದೆ.
ಕಾಂತಾರ 2 ಸಿನಿಮಾ ಬರೋಬ್ಬರಿ 125 ಕೋಟಿ ರೂ. ಬಜೆಟ್‌ನಲ್ಲಿ (budget of 125 crores) ನಿರ್ಮಾಣವಾಗುತ್ತಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.
Exit mobile version