Site icon Vistara News

Rishab Shetty: ಬಾಲಿವುಡ್ ಲೈಫ್ ಅವಾರ್ಡ್ಸ್‌ನಲ್ಲಿ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾದ ರಿಷಬ್‌ ಶೆಟ್ಟಿ

Rishab Shetty wins the Best Actor award at the BLAwards2023

ಬೆಂಗಳೂರು: ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಕಾಂತಾರ ಸಿನಿಮಾಮೂಲಕ ಖ್ಯಾತಿ ಪಡೆದಿದ್ದಾರೆ. ರಿಷಬ್‌ ಶೆಟ್ಟಿ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ (dada saheb phalke award 2023) ಪ್ರಶಸ್ತಿ ಪಡೆದ ಬೆನ್ನಲ್ಲೇ ಬಾಲಿವುಡ್ ಲೈಫ್ ಅವಾರ್ಡ್ಸ್‌ನ (BLAwards2023) (BLAwards) ದಕ್ಷಿಣ ಸಿನಿಮಾ ವಿಭಾಗದಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಈಗಾಗಲೇ ರಿಷಬ್‌ ಕಾಂತಾರ-2ಗೆ ಭರ್ಜರಿ ಪ್ಲಾನ್ ಮಾಡಿ ಬರವಣಿಗೆ ಆರಂಭಿಸಿದ್ದಾರೆ ನಟ ರಿಷಬ್‌. ಹೊಂಬಾಳೆ ಪ್ರೊಡಕ್ಷನ್ಸ್‌ ಅಡಿಯಲ್ಲಿ ಸಿನಿಮಾ ತಯಾರಾಗಲಿದ್ದು, ಮತ್ತೆ ಕೆಲಸದಲ್ಲಿ ನಿರತರಾಗಿದ್ದಾರೆ.

ಪ್ರಿಕ್ವೆಲ್‌ ಆಗಿ ಬರಲಿದೆ ಕಾಂತಾರ 2

ಕಾಂತಾರ-1 ಸಿಕ್ವೆಲ್‌ ಆಗಿದ್ದರೆ, ಕಾಂತಾರ-2 ಪ್ರಿಕ್ವೆಲ್‌ (Prequel film) ಆಗಿ ಮೂಡಿಬರಲಿದೆ. ಕಾಂತಾರ-2 ಪೂರ್ವಭಾವಿ ಕತೆಯಾಗಿದ್ದು, ಇದು ಗ್ರಾಮಸ್ಥರು, ದೇವತೆ ಮತ್ತು ತೊಂದರೆಗೊಳಗಾದ ರಾಜನ ನಡುವಿನ ಸಂಬಂಧವನ್ನು ಅನ್ವೇಷಿಸುತ್ತದೆ. ರಾಜನು ಗ್ರಾಮಸ್ಥರನ್ನು ಮತ್ತು ತನ್ನ ಸುತ್ತಲಿನ ಭೂಮಿಯನ್ನು ರಕ್ಷಿಸಲು ದೇವತೆಯೊಂದಿಗೆ ಒಪ್ಪಂದ ಮಾಡಿಕೊಂಡಿರುತ್ತಾನೆ. ʻಮನುಷ್ಯ ಮತ್ತು ಪ್ರಕೃತಿಯ ಕದನʼ ಚಿತ್ರದ ತಿರುಳು ಇದಾಗಿದೆ. ಕಾಂತಾರ-2, 2024ರಲ್ಲಿ ಥಿಯೇಟರ್‌ಗೆ ಬರಲಿದೆ ಎಂದು ರಿಷಬ್‌ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: Rishab Shetty: ಕಾಂತಾರ-2 ಬಗ್ಗೆ ಹೊಸ ಅಪ್‌ಡೇಟ್‌ ಹಂಚಿಕೊಂಡ ರಿಷಬ್‌ ಶೆಟ್ಟಿ

ಕಾಂತಾರ-1ರಲ್ಲಿ ನಾಯಕ ಶಿವ ಮತ್ತು ಅವರ ತಂದೆಯಾಗಿ ರಿಷಬ್ ಶೆಟ್ಟಿ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ, ಪ್ರಕಾಶ್ ತೂಮಿನಾಡ್, ನವೀನ್ ಡಿ ಪಡೀಲ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಾಂತಾರ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ. ಕಾಂತಾರ ಕನ್ನಡದಲ್ಲಿ ಬಿಡುಗಡೆಯಾಗಿ ಯಶಸ್ಸು ಕಂಡಾಗ ಹಿಂದಿ, ತಮಿಳು, ಮಲಯಾಳಂ ಮತ್ತು ತೆಲುಗು ಭಾಷೆಗಳಲ್ಲಿ ತೆರೆಕಂಡಿತು.

Exit mobile version