ಬೆಂಗಳೂರು: ʻವಿಜಯಾನಂದʼ ಹಾಗೂ ʻಟ್ರಂಕ್ʼ ಸಿನಿಮಾ ಚಲನಚಿತ್ರದ ನಿರ್ದೇಶಕಿ ರಿಷಿಕಾ ಶರ್ಮಾ (Rishika Sharma) ಹಾಗೂ ನಟ ನಿಹಾಲ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಫೆ.15ರಂದು ಬೆಂಗಳೂರಿನಲ್ಲಿರುವ ಮಲೇಶ್ವರಂನಲ್ಲಿರುವ ತಿರುಪತಿೊ ದೇವಸ್ಥಾನದಲ್ಲಿ ಮದುವೆ ಸಮಾರಂಭ ನಡೆದಿದೆ. ಕುಟುಂಬಸ್ಥರು ಮತ್ತು ಆಪ್ತರು ಮದುವೆಯಲ್ಲಿ ಭಾಗಿಯಾಗಿದ್ದಾರೆ.
9 ವರ್ಷಗಳ ಕಾಲ ಪ್ರೀತಿಯಲ್ಲಿ ಬಿದ್ದಿದ್ದ ಜೋಡಿ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಕನ್ನಡ ಚಿತ್ರರಂಗದ ಭಿಷ್ಮ ಎಂತಲೇ ಖ್ಯಾತಿ ಪಡೆದಿರುವ ಜಿ. ವಿ ಅಯ್ಯರ್ ಅವರ ಮೊಮ್ಮಗಳು ರಿಷಿಕಾ ಶರ್ಮಾ. ʻವಿಜಯಾನಂದ’ ಹಾಗೂ ಟ್ರಂಕ್ ಸಿನಿಮಾಗಳಲ್ಲಿ ಇವರಿಬ್ಬರು ಜತೆಯಾಗಿ ಕೆಲಸ ಮಾಡಿದ್ದರು.
ಇದನ್ನೂ ಓದಿ: ʼವಿಜಯಾನಂದʼ ನಟ ನಿಹಾಲ್ ಜತೆ ನಿರ್ದೇಶಕಿ ರಿಷಿಕಾ ಶರ್ಮಾ ಮದುವೆ ಫಿಕ್ಸ್
ಫೆಬ್ರವರಿ 17ರಂದು ಮಧ್ಯಾಹ್ನ 12 ಗಂಟೆ ನಂತರ ಧಾರವಾಡದ ಶ್ರೀ ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ರಿಸೆಪ್ಷನ್ ನಡೆಯಲಿದೆ.