Site icon Vistara News

Raktaksha Movie : ‘ರಕ್ತಾಕ್ಷ’ ಮೂಲಕ ಬೆಳ್ಳಿಪರದೆಗೆ ಎಂಟ್ರಿ ಕೊಟ್ಟ ರೋಹಿತ್

#image_title

ಬೆಂಗಳೂರು: ಮಾಡೆಲಿಂಗ್ ಲೋಕದಿಂದ ಸಿನಿಮಾ ಲೋಕಕ್ಕೆ ಎಂಟ್ರಿ ಕೊಟ್ಟ ಅದೆಷ್ಟೋ ಪ್ರತಿಭೆಗಳು ಸ್ಯಾಂಡಲ್‌ವುಡ್‌ನಲ್ಲಿ ನೆಲೆ ಕಂಡುಕೊಂಡಿದ್ದಾರೆ. ಇದೀಗ ಆ ಸಾಲಿಗೆ ಸೇರಲು ರೋಹಿತ್ (Raktaksha Movie) ಕಾತುರರಾಗಿದ್ದಾರೆ.

ಮೂಲತಃ ಉತ್ತರ ಕರ್ನಾಟಕದ ರಾಯಚೂರು ಜಿಲ್ಲೆಯ ಪುಟ್ಟ ಹಳ್ಳಿಯ ರೋಹಿತ್ ಆರು ವರ್ಷಗಳ ಕಾಲ ಮಾಡೆಲಿಂಗ್ ಸಾಮ್ರಾಜ್ಯದಲ್ಲಿ ಮಿಂಚಿದವರು. ಎರಡು ವರ್ಷಗಳ ರಂಗಭೂಮಿ ಅನುಭವ ಪಡೆದಿರುವ ಅವರೀಗ ʼರಕ್ತಾಕ್ಷʼ ಸಿನಿಮಾ ಮೂಲಕ ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದ್ದಾರೆ. ಒಂದಷ್ಟು ಪ್ರತಿಷ್ಠಿತ ಬ್ರ್ಯಾಂಡ್ ಪ್ರತಿನಿಧಿಸಿರುವ ರೋಹಿತ್ ಅವರಿಗೆ ಎಬಿ ಪಾಸಿಟಿವ್ ಸಿನಿಮಾದಲ್ಲಿ ಖಳನಾಯಕನಾಗಿ ಅಭಿನಯಿಸಿದ ಅನುಭವವಿದೆ. ಈಗ ಅವರು ನಾಯಕ ನಟನಾಗಿ ಬೆಳ್ಳಿ ಪರದೆಯಲ್ಲಿ ರಾರಾಜಿಸಬೇಕೆಂಬ ಹೊಸ ಉತ್ಸಹ ಹಾಗೂ ಹುಮ್ಮಸ್ಸಿನೊಂದಿಗೆ ತಮ್ಮದೇ ಆದ ಸಾಯಿ ಪ್ರೊಡಕ್ಷನ್ ಹೌಸ್‌ನಡಿ ರಕ್ತಾಕ್ಷ ಚಿತ್ರ ನಿರ್ಮಾಣ ಮಾಡಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: Samantha Ruth Prabhu: ವಿಜಯ್​ ದೇವರಕೊಂಡ – ಸಮಂತಾ ಒಡನಾಟ ಹೆಚ್ಚಾಗುತ್ತಿದೆಯಾ? ವಿಡಿಯೊದಲ್ಲಿ ಏನಿದೆ?
ವಾಸುದೇವ ಎಸ್. ಎನ್ ಎಂಬುವವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಇದು ಅವರ ಚೊಚ್ಚಲ ನಿರ್ದೇಶನದ ಸಿನಿಮಾವಾಗಿದೆ. ಒಂದಷ್ಟು ಸಿನಿಮೋತ್ಸಾಹಿ ಪ್ರತಿಭೆಗಳು ಸೇರಿ ತಯಾರಿಸುತ್ತಿರುವ ʼರಕ್ತಾಕ್ಷʼ ಸಿನಿಮಾಗೆ ವಸಿಷ್ಠ ಸಿಂಹ ಸಾಥ್ ಕೊಟ್ಟಿದ್ದಾರೆ. ರೋಹಿತ್ ಹೀರೋ ಆಗಿ ನಟಿಸುತ್ತಿರುವ ಈ ಚಿತ್ರದ ಟೈಟಲ್ ಟ್ರ್ಯಾಕ್‌ಗೆ ಚಿಟ್ಟೆ ಧ್ವನಿಯಾಗಿದ್ದಾರೆ. ಸುಜಿತ್ ವೆಂಕಟ್ ವೆಂಕಟರಾಮಯ್ಯ ಸಾಹಿತ್ಯ, ಧೀರೇಂದರ್ ದಾಸ್ ಸಂಗೀತ ಈ ಹಾಡಿಗಿದ್ದು, ಶೀಘ್ರದಲ್ಲಿ ರಕ್ತಾಕ್ಷ ಟೈಟಲ್ ಟ್ರ್ಯಾಕ್ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದೆ. ಚಿಕ್ಕಂದಿನಿಂದಲೇ ಬಣ್ಣದ ಲೋಕದಲ್ಲಿ ಮಿಂಚಬೇಕೆಂಬ ಕನಸುಕಟ್ಟಿಕೊಂಡಿರುವ ಪ್ರತಿಭಾವಂತ ರೋಹಿತ್ ತನ್ನ ಜೊತೆ ಹಳ್ಳಿ ಪ್ರತಿಭೆಗಳಿಗೂ ಈ ಸಿನಿಮಾದಲ್ಲಿ ಅವಕಾಶ ಕೊಟ್ಟಿದ್ದಾರೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗವನ್ನು ಮುಂದಿನ ದಿನಗಳಲ್ಲಿ ಚಿತ್ರತಂಡ ರಿವೀಲ್ ಮಾಡಲು ಪ್ಲ್ಯಾನ್ ಹಾಕಿಕೊಂಡಿದೆ.

Exit mobile version