ಬೆಂಗಳೂರು : ಕ್ಯಾಲಿಫೋರ್ನಿಯಾದಲ್ಲಿ ನಡೆದ 80ನೇ ಗೋಲ್ಡನ್ ಗ್ಲೋಬ್ಸ್‌ನಲ್ಲಿ ರಾಜಮೌಳಿ ನಿರ್ದೇಶನದ RRR ಸಿನಿಮಾದ (RRR Movie) ನಾಟು… ನಾಟು… ʼಅತ್ಯುತ್ತಮ ಒರಿಜಿನಲ್ ಹಾಡುʼ ವಿಭಾಗದಲ್ಲಿ ಪುರಸ್ಕಾರ ಪಡೆದಿದೆ. ಪ್ರಮುಖ ತಾರೆಯರಾದ ಜೂನಿಯರ್ ಎನ್‌ಟಿಆರ್ ,ರಾಮ್ ಚರಣ್ ಮತ್ತು ಚಲನಚಿತ್ರ ನಿರ್ಮಾಪಕ ಎಸ್‌ಎಸ್ ರಾಜಮೌಳಿ ಗೆ ಪ್ರಶಸ್ತಿ ಸಮಾರಂಭದಲ್ಲಿ ಕುಟುಂಬದೊಂದಿಗೆ ಭಾಗವಹಿಸಿದ್ದರು. ಈ ವೇಳೆ ರಾಮ್‌ಚರಣ್ ಪತ್ನಿ ಉಪಾಸನಾ ಕಾಮಿನೇನಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ್ದಾರೆ.
ರಾಮ್ ಚರಣ್ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. 80ನೇ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿಯ ಸಮಾರಂಭದಲ್ಲಿ ಸಾಂಪ್ರದಾಯಿಕ ಸೀರೆಯೊಂದಿಗೆ, ಬಿಂದಿಯಲ್ಲಿ ಮಿಂಚಿದ್ದಾರೆ ಉಪಾಸನಾ ಕಾಮಿನೇನಿ. ಅವರ ಉಡುಗೆಗೆ ಸೋಷಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಜೂನಿಯರ್ ಎನ್‌ಟಿಆರ್ ಅವರ ಪತ್ನಿ ಲಕ್ಷ್ಮಿ ಪ್ರಣತಿ ಅವರೊಂದಿಗಿನ ಸೆಲ್ಫಿಯನ್ನು ಉಪಾಸನಾ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ | RRR Film | ಏಷ್ಯನ್ ಫಿಲ್ಮ್ ಅವಾರ್ಡ್ಸ್ ರೇಸಿನಲ್ಲಿ ಪೊನ್ನಿಯನ್ ಸೆಲ್ವನ್, ಆರ್‌ಆರ್‌ಆರ್!
80ನೇ ಗೋಲ್ಡನ್ ಗ್ಲೋಬ್ ಪ್ರಶಸ್ತಿಯ ಅಂತಿಮ ಸುತ್ತಿನಲ್ಲಿ ಮಿಂಚಿದ RRR, ಎರಡು ವಿಭಾಗಗಳಿಗೆ ನಾಮನಿರ್ದೇಶನಗೊಂಡಿತ್ತು. ಅವು ʼಅತ್ಯುತ್ತಮ ಆಂಗ್ಲೇತರ ಚಿತ್ರʼ ಹಾಗೂ ʼಅತ್ಯುತ್ತಮ ಹಾಡುʼ ವಿಭಾಗಗಳು. ಇದೀಗ ಅತ್ಯುತ್ತಮ ಹಾಡು ಪ್ರಶಸ್ತಿಯನ್ನು ಆರ್‌ಆರ್‌ಆರ್‌ನ ʼನಾಟು ನಾಟುʼ ಗೆದ್ದುಕೊಂಡಿದೆ.
ಕ್ಯಾಲಿಫೋರ್ನಿಯಾದ ಬವರ್ಲಿ ಹಿಲ್ಸ್‌ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದ್ದು, ನಿರ್ದೇಶಕ ಎಸ್.ಎಸ್ ರಾಜಮೌಳಿ, ಜೂ.ಎನ್‌ಟಿಆರ್, ರಾಮ್‌ಚರಣ್ ಜೊತೆ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಭಾಗಿಯಾಗಿದ್ದರು. ಕೀರವಾಣಿ ಪ್ರಶಸ್ತಿ ಸ್ವೀಕರಿಸಿ ಸಂಭ್ರಮಿಸಿದರು.
ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ 2023ರ ಬೇರೆಬೇರೆ ವಿಭಾಗಗಳಲ್ಲಿ ಕೂಡ ಆರ್‌ಆರ್‌ಆರ್ ಸ್ಪರ್ಧೆಗೆ ಅರ್ಹತೆ ಪಡೆದಿದೆ. ಕೆಲವು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಈ ಚಿತ್ರಕ್ಕೆ ಈಗಾಗಲೇ ಮನ್ನಣೆ ಪ್ರಾಪ್ತವಾಗಿದೆ. ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ ಸರ್ಕಲ್ ಅವಾರ್ಡ್‌ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ, ಅಟ್ಲಾಂಟ ಫಿಲ್ಮ್ ಕ್ರಿಟಿಕ್ ಅವಾರ್ಡ್‌ನಲ್ಲಿ ಅತ್ಯುತ್ತಮ ಅಂತಾರಾಷ್ಟ್ರೀಯ ಚಿತ್ರ ಪ್ರಶಸ್ತಿಯನ್ನು ಆರ್‌ಆರ್‌ಆರ್ ಮುಡಿಗೇರಿಸಿಕೊಂಡಿದೆ. ಗಳಿಕೆಯ ವಿಚಾರದಲ್ಲಿ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದು, ಈವರೆಗೆ 1200 ಕೋಟಿ ರೂ. ಗಳಿಸಿದೆ.
ಇದನ್ನೂ ಓದಿ | RRR Film | ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್‌ನಿಂದ ರಾಜಮೌಳಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ