Site icon Vistara News

RRR Film | ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್‌ನಿಂದ ರಾಜಮೌಳಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

RRR Film

ಬೆಂಗಳೂರು : ಟಾಲಿವುಡ್‌ ಆರ್‌ಆರ್‌ಆರ್‌ ಸಿನಿಮಾ (RRR Film) ವಿಶ್ವಾದ್ಯಂತ ಅಗಾಧವಾದ ಪ್ರತಿಕ್ರಿಯೆಯನ್ನು ಪಡೆಯುತ್ತಿದೆ. ಹಲವಾರು ಪ್ರಶಸ್ತಿಗಳನ್ನು ಬಾಚಿಕೊಳ್ಳುತ್ತಿದೆ. ಇದೀಗ, ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಅವಾರ್ಡ್ಸ್ 2022ರಲ್ಲಿ ಅತ್ಯುತ್ತಮ ನಿರ್ದೇಶಕರಾಗಿ ಎಸ್ಎಸ್ ರಾಜಮೌಳಿ ಪ್ರಶಸ್ತಿ ಪಡೆದಿದ್ದಾರೆ. ಪ್ರಶಸ್ತಿಯನ್ನು ಸ್ವೀಕರಿಸಿದ ರಾಜಮೌಳಿ, ತಮ್ಮ ಚಿತ್ರದ ಮೇಲೆ ಪ್ರೀತಿಯನ್ನು ತೋರಿದ ತೀರ್ಪುಗಾರರಿಗೆ ಮತ್ತು ಪ್ರೇಕ್ಷಕರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಇದೀಗ ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಎಸ್‌ ಎಸ್ ರಾಜಮೌಳಿ, ರಾಮ್ ಚರಣ್ ಮತ್ತು ಜೂನಿಯರ್ ಎನ್‌ಟಿಆರ್ ಜನವರಿ 11, 2023 ರಂದು ಲಾಸ್ ಏಂಜಲೀಸ್‌ನಲ್ಲಿ ನಡೆಯಲಿರುವ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಸಮಾರಂಭದಲ್ಲಿ ಹಾಜರಾಗಲಿದ್ದಾರೆ. ಆರ್‌ಆರ್‌ಆರ್ ಅತ್ಯುತ್ತಮ ವಿದೇಶಿ ಚಿತ್ರಕ್ಕಾಗಿ ನಾಮನಿರ್ದೇಶನಗೊಂಡಿದ್ದರೆ, ಚಿತ್ರದ ನಾಟು ನಾಟು ಹಾಡು ಕೂಡ ಪ್ರಶಸ್ತಿ ರೇಸಿನಲ್ಲಿದೆ. ಬಿಯಾಂಡ್ ಫೆಸ್ಟ್‌ನ ಭಾಗವಾಗಿ ಜನವರಿ 9 ರಂದು ಯುನೈಟೆಡ್ ಸ್ಟೇಟ್ಸ್‌ನಲ್ಲಿ ಆರ್‌ಆರ್‌ಆರ್‌ನ ವಿಶೇಷ ಪ್ರದರ್ಶನವೂ ನಡೆಯಲಿದೆ. ಎಸ್‌ಎಸ್ ರಾಜಮೌಳಿ, ಜೂನಿಯರ್ ಎನ್‌ಟಿಆರ್, ರಾಮ್ ಚರಣ್ ಮತ್ತು ಸಂಗೀತ ಸಂಯೋಜಕ ಎಂಎಂ ಕೀರವಾಣಿ ಈ ಪ್ರದರ್ಶನಕ್ಕೂ ಹಾಜರಾಗಲಿದ್ದಾರೆ.

ಇದನ್ನೂ ಓದಿ | RRR Movie | ಆರ್‌ಆರ್‌ಆರ್‌ -2 ಸೀಕ್ವೆಲ್‌ನ ಕೆಲಸ ಶುರು: ನಿರ್ದೇಶಕ ರಾಜಮೌಳಿ ಹೇಳಿದ್ದೇನು?

ಆರ್​ಆರ್​ಆರ್’ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​, ರಾಮ್ ಚರಣ್, ಆಲಿಯಾ ಭಟ್, ಅಜಯ್ ದೇವಗನ್, ಶ್ರಿಯಾ ಶರಣ್​ ಸೇರಿದಂತೆ ಬಹುದೊಡ್ಡ ತಾರಾಗಣವೇ ಇದೆ. 2022ರ ಮಾರ್ಚ್ ತಿಂಗಳಲ್ಲಿ ಬಿಡುಗಡೆಯಾದ ಈ ಸಿನಿಮಾವನ್ನು ತೆಲುಗಿನ ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮ ರಾಜು ಮತ್ತು ಕೊಮರಂ ಭೀಮ್ ಅವರನ್ನಿಟ್ಟುಕೊಂಡು ಮಾಡಿದ ಕಾಲ್ಪನಿಕ ಕಥೆಯಾಗಿದೆ. ಈ ಸಿನಿಮಾವು ಬಾಕ್ಸ್ ಆಪೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿತ್ತು.

ಇದನ್ನೂ ಓದಿ | Oscars 2023 shortlist | ಆಸ್ಕರ್ ರೇಸಿನಲ್ಲಿ ಆರ್‌ಆರ್‌ಆರ್‌ ಸಿನಿಮಾದ ನಾಟು ನಾಟು ಸಾಂಗ್, ಇನ್ನೂ 3 ಚಿತ್ರ ನಾಮನಿರ್ದೇಶನ

Exit mobile version