RRR Movie | ಆರ್‌ಆರ್‌ಆರ್‌ ಚಿತ್ರಕ್ಕೆ ಸೆಲೆಬ್ರಿಟಿಗಳಿಂದ ಶುಭ ಹಾರೈಕೆಯ ಸುರಿಮಳೆ! - Vistara News

Golden Globe 2023

RRR Movie | ಆರ್‌ಆರ್‌ಆರ್‌ ಚಿತ್ರಕ್ಕೆ ಸೆಲೆಬ್ರಿಟಿಗಳಿಂದ ಶುಭ ಹಾರೈಕೆಯ ಸುರಿಮಳೆ!

RRR Movie ಐತಿಹಾಸಿಕ ಗೋಲ್ಡನ್ ಗ್ಲೋಬ್ ಗೆಲುವಿನ ಬಗ್ಗೆ ಭಾರತೀಯರು ಸಂತೋಷಪಟ್ಟಿದ್ದಾರೆ. ಸೆಲೆಬ್ರಿಟಿಗಳು ಟ್ವೀಟ್‌ ಮೂಲಕ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

VISTARANEWS.COM


on

RRR Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ರಾಜಮೌಳಿ ನಿರ್ದೇಶನದ RRR ಸಿನಿಮಾ (RRR Movie ), ಪ್ರತಿಷ್ಠಿತ ಗೋಲ್ಡನ್‌ ಗ್ಲೋಬ್‌ ಪ್ರಶಸ್ತಿಯ ʼಅತ್ಯುತ್ತಮ ಒರಿಜಿನಲ್‌ ಹಾಡುʼ ವಿಭಾಗದಲ್ಲಿ ಪುರಸ್ಕಾರ ಪಡೆದಿದೆ. RRR ಐತಿಹಾಸಿಕ ಗೋಲ್ಡನ್ ಗ್ಲೋಬ್ ಗೆಲುವಿನ ಬಗ್ಗೆ ಭಾರತೀಯರು ಸಂತೋಷಪಟ್ಟಿದ್ದಾರೆ. ಸೆಲೆಬ್ರಿಟಿಗಳು ಟ್ವೀಟ್‌ ಮೂಲಕ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

ಎಸ್‌ಎಸ್ ರಾಜಮೌಳಿ ಅವರು ತಂಡದ ಗೆಲುವಿಗಾಗಿ ಜನರಿಗೆ ಧನ್ಯವಾದ ಹೇಳಿದ್ದಾರೆ. ಬಾಲಿವುಡ್‌ ನಟ ಶಾರುಖ್‌ ಖಾನ್‌ ಟ್ವೀಟ್‌ ಮಾಡಿ ʻʻಸರ್ ಈಗಷ್ಟೇ ಎಚ್ಚರಗೊಂಡು ಗೋಲ್ಡನ್ ಗ್ಲೋಬ್‌ನಲ್ಲಿ ನಿಮ್ಮ ಗೆಲುವನ್ನು ಸಂಭ್ರಮಿಸುತ್ತಾ ನಾಟು ನಾಟುಗೆ ನೃತ್ಯ ಮಾಡಲು ಪ್ರಾರಂಭಿಸಿದೆ. ಇನ್ನಷ್ಟು ಪ್ರಶಸ್ತಿಗಳು ಬರಲಿ. ಆರ್‌ಆರ್‌ಆರ್‌ ಭಾರತವನ್ನು ಹೆಮ್ಮೆಪಡುವಂತೆ ಮಾಡಿದೆʼʼ ಎಂದು ಬರೆದುಕೊಂಡಿದ್ದಾರೆ.

ನಟ ಚಿರಂಜೀವಿ ಟ್ವೀಟ್‌ ಮಾಡಿ ʻʻಎಂತಹ ಅಪೂರ್ವ, ಐತಿಹಾಸಿಕ ಸಾಧನೆ. ಆರ್‌ಆರ್‌ಆರ್‌ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಭಾರತವು ನಿಮ್ಮ ಬಗ್ಗೆ ಹೆಮ್ಮೆಪಡುತ್ತದೆʼʼಎಂದಿದ್ದಾರೆ.

ಇದನ್ನೂ ಓದಿ | RRR Movie | ಆರ್‌ಆರ್‌ಆರ್ ಹಿಂದಕ್ಕೆಳೆಯುವ ಚಿತ್ರ ಎಂದು ಟೀಕಿಸಿದ ನಟಿ ರತ್ನಾ ಪಾಠಕ್ ಶಾ!

ಎ.ಆರ್. ರೆಹಮಾನ್ ಟ್ವೀಟ್ ಮಾಡಿ, ಇದೊಂದು “ಇನ್‌ಕ್ರೆಡಿಬಲ್.. ಪ್ಯಾರಾಡಿಗ್ಮ್ ಶಿಫ್ಟ್” ಎಂದು ಹೇಳಿದ್ದಾರೆ ಮತ್ತು ಆರ್‌ಆರ್‌ಆರ್‌ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡಿ ʻʻಪ್ರತಿಯೊಬ್ಬ ಭಾರತೀಯರು ಹೆಮ್ಮೆಯ ವಿಷಯ ಇದಾಗಿದೆ. ಇದು ಬಹಳ ವಿಶೇಷ ಸಾಧನೆ. ಎಂಎಂ ಕೀರವಾಣಿ, ರಾಜಮೌಳಿ, ರಾಮ್ ಚರಣ್, ಜೂನಿಯರ್ ಎನ್ ಟಿಆರ್ ಸೇರಿದಂತೆ ಇಡೀ ತಂಡಕ್ಕೆ ಶುಭಾಶಯʼʼ ಎಂದಿದ್ದಾರೆ.

ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಟ್ವೀಟ್‌ ಮಾಡಿ ʻʻಗೋಲ್ಡನ್ ಗ್ಲೋಬ್ ಪ್ರಶಸ್ತಿಯನ್ನು ಗೆದ್ದಿದ್ದಕ್ಕಾಗಿ ಆರ್‌ಆರ್‌ಆರ್‌ ತಂಡಕ್ಕೆ ಅಭಿನಂದನೆಗಳು. ಇದು ಅತ್ಯಂತ ಅರ್ಹವಾದ ಸಾಧನೆ. ನೀವು ಭಾರತವನ್ನು ಹೆಮ್ಮೆಪಡುವಂತೆ ಮಾಡಿದ್ದೀರಿʼʼಎಂದಿದ್ದಾರೆ.

80ನೇ ಗೋಲ್ಡನ್ ಗ್ಲೋಬ್ ಪ್ರಶಸ್ತಿಯ ಅಂತಿಮ ಸುತ್ತಿನಲ್ಲಿ‌ ಮಿಂಚಿದ RRR, ಎರಡು ವಿಭಾಗಗಳಿಗೆ ನಾಮನಿರ್ದೇಶನಗೊಂಡಿತ್ತು. ಅವು ʼಅತ್ಯುತ್ತಮ ಆಂಗ್ಲೇತರ ಚಿತ್ರʼ ಹಾಗೂ ʼಅತ್ಯುತ್ತಮ ಹಾಡುʼ ವಿಭಾಗಗಳು. ಇದೀಗ ಅತ್ಯುತ್ತಮ ಹಾಡು ಪ್ರಶಸ್ತಿಯನ್ನು ಆರ್‌ಆರ್‌ಆರ್‌ನ ʼನಾಟು ನಾಟುʼ ಗೆದ್ದುಕೊಂಡಿದೆ. ಕ್ಯಾಲಿಫೋರ್ನಿಯಾದ ಬವರ್ಲಿ ಹಿಲ್ಸ್‌ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದ್ದು, ನಿರ್ದೇಶಕ ಎಸ್‌.ಎಸ್‌ ರಾಜಮೌಳಿ, ಜೂ.ಎನ್‌ಟಿಆರ್, ರಾಮ್‌ಚರಣ್ ಜೊತೆ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಭಾಗಿಯಾಗಿದ್ದರು. ಕೀರವಾಣಿ ಪ್ರಶಸ್ತಿ ಸ್ವೀಕರಿಸಿ ಸಂಭ್ರಮಿಸಿದರು.

ಆಂಗ್ಲೇತರ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಲ್ಯಾಟಿನ್‌ ಅಮೆರಿಕನ್‌ ಚಿತ್ರ ಸ್ಯಾಮ್‌ ಮಿತ್ರೆ ನಿರ್ದೇಶನದ “ಅರ್ಜೆಂಟೀನಾ, 1985′ ಗೆದ್ದುಕೊಂಡಿದೆ. ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ʼದಿ ಫೇಬಲ್‌ಮನ್‌ʼ ಚಿತ್ರಕ್ಕಾಗಿ ಸ್ಟೀವನ್‌ ಸ್ಪೀಲ್‌ಬರ್ಗ್‌ ಗೆದ್ದುಕೊಂಡಿದ್ದಾರೆ.

ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿ 2023ರ ಬೇರೆಬೇರೆ ವಿಭಾಗಗಳಲ್ಲಿ ಕೂಡ ಆರ್‌ಆರ್‌ಆರ್‌ ಸ್ಪರ್ಧೆಗೆ ಅರ್ಹತೆ ಪಡೆದಿದೆ. ಕೆಲವು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಈ ಚಿತ್ರಕ್ಕೆ ಈಗಾಗಲೇ ಮನ್ನಣೆ ಪ್ರಾಪ್ತವಾಗಿದೆ. ನ್ಯೂಯಾರ್ಕ್‌ ಫಿಲ್ಮ್‌ ಕ್ರಿಟಿಕ್‌ ಸರ್ಕಲ್‌ ಅವಾರ್ಡ್‌ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ, ಅಟ್ಲಾಂಟ ಫಿಲ್ಮ್‌ ಕ್ರಿಟಿಕ್‌ ಅವಾರ್ಡ್‌ನಲ್ಲಿ ಅತ್ಯುತ್ತಮ ಅಂತಾರಾಷ್ಟ್ರೀಯ ಚಿತ್ರ ಪ್ರಶಸ್ತಿಯನ್ನು ಆರ್‌ಆರ್‌ಆರ್‌ ಮುಡಿಗೇರಿಸಿಕೊಂಡಿದೆ. ಗಳಿಕೆಯ ವಿಚಾರದಲ್ಲಿ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದು, ಈವರೆಗೆ 1200 ಕೋಟಿ ರೂ. ಗಳಿಸಿದೆ.

ಇದನ್ನೂ ಓದಿ | RRR Movie | ಆರ್‌ಆರ್‌ಆರ್‌ -2 ಸೀಕ್ವೆಲ್‌ನ ಕೆಲಸ ಶುರು: ನಿರ್ದೇಶಕ ರಾಜಮೌಳಿ ಹೇಳಿದ್ದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಪ್ರಮುಖ ಸುದ್ದಿ

Gold Rate : ಬೆಲೆ ಏರಿಕೆ ಪರಿಣಾಮ; ಏಪ್ರಿಲ್-ಜುಲೈನಲ್ಲಿ ಚಿನ್ನದ ಆಮದು ಶೇ.4.23ರಷ್ಟು ಇಳಿಕೆ

Gold Rate : ಜುಲೈನಲ್ಲಿ ಆಮದು ಪ್ರಮಾಣ ಶೇ.10.65ರಷ್ಟು ಇಳಿಕೆಯಾಗಿದ್ದು, 2 ಲಕ್ಷ ಕೋಟಿ ರೂಪಾಯಿ ವಹಿವಾಟು ನಡೆದಿದೆ. ಒಳಬರುವ ಚಿನ್ನದ ಪ್ರಮಾಣವು ಜೂನ್ (-38.66%) ಮತ್ತು ಮೇ (-9.76%) ರಷ್ಟು ನಕಾರಾತ್ಮಕ ಬೆಳವಣಿಗೆ ಕಂಡಿತ್ತು. ಏಪ್ರಿಲ್​​ನಲ್ಲಿ ಆಮದು 2.61 ಲಕ್ಷ ಕೋಟಿ ರೂಪಾಯಿಯಷ್ಟಿತ್ತು. ಇದು 2023 ರ ಏಪ್ರಿಲ್​​ನಲ್ಲಿ 86 ಸಾವಿರ ಕೋಟಿ ರೂಪಾಯಿ ಆಗಿತ್ತು.

VISTARANEWS.COM


on

Gold Rate
Koo

ಬೆಂಗಳೂರು: ದೇಶದ ವಿತ್ತೀಯ ಕೊರತೆ (ಸಿಎಡಿ) ಮೇಲೆ ಪರಿಣಾಮ ಬೀರುವಂಥ ಭಾರತದ ಚಿನ್ನದ (Gold Rate) ಆಮದು 2024-25ರ ಏಪ್ರಿಲ್-ಜುಲೈ ಅವಧಿಯಲ್ಲಿ 4.23% ರಷ್ಟು ಇಳಿದು 10 ಲಕ್ಷ ಕೋಟಿ ರೂಪಾಯಿಗೆ ನಿಂತಿದೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ. 2023ರ ಏಪ್ರಿಲ್-ಜುಲೈನಲ್ಲಿ ಆಮದು 11 ಲಕ್ಷ ಕೋಟಿ ರೂಪಾಯಿಯಷ್ಟಿತ್ತು. ಜುಲೈನಲ್ಲಿ ಆಮದು ಪ್ರಮಾಣ ಶೇ.1.06ರಷ್ಟು ಇಳಿಕೆಯಾಗಿದ್ದು, 2 ಲಕ್ಷ ಕೋಟಿ ರೂಪಾಯಿ ವಹಿವಾಟು ನಡೆದಿದೆ. ಒಳಬರುವ ಚಿನ್ನದ ಪ್ರಮಾಣವು ಜೂನ್ (-38.66%) ಮತ್ತು ಮೇ (-9.76%) ರಷ್ಟು ನಕಾರಾತ್ಮಕ ಬೆಳವಣಿಗೆ ಕಂಡಿತ್ತು. ಏಪ್ರಿಲ್​​ನಲ್ಲಿ ಆಮದು 61 ಸಾವಿರ ಕೋಟಿ ರೂಪಾಯಿಯಷ್ಟಿತ್ತು. ಇದು 2023 ರ ಏಪ್ರಿಲ್​​ನಲ್ಲಿ 86 ಸಾವಿರ ಕೋಟಿ ರೂಪಾಯಿ ಆಗಿತ್ತು.

ಆಭರಣ ವ್ಯಾಪಾರಿಯೊಬ್ಬರ ಪ್ರಕಾರ, ಬೆಲೆ ಏರಿಕೆಯು ಆಮದು ಕಡಿಮೆ ಮಾಡುತ್ತದೆ. ಆದರೆ ಭಾರತದಲ್ಲಿ ಹಬ್ಬದ ಋತುವು ಪ್ರಾರಂಭವಾಗುವುದರಿಂದ ಮತ್ತು ಆಮದು ಸುಂಕ ಕಡಿತದ ಪ್ರಯೋಜನವೂ ಇರುವುದರಿಂದ ಸೆಪ್ಟೆಂಬರ್ ನಿಂದ ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇ.15ರಿಂದ ಶೇ.6ಕ್ಕೆ ಇಳಿಸಲಾಗಿದ್ದು ಇದರ ಪ್ರಯೋಜನ ಮಾರುಕಟ್ಟೆ ಮೇಲೆ ಆಗಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಏರಿಕೆ ಕಂಡಿದ್ದು ಆಗಸ್ಟ್ 14ರಂದು ಡೆಲ್ಲಿಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 300 ರೂ.ಏರಿಕೆಯಾಗಿದ್ದು ಒಟ್ಟು 73,150 ರೂಪಾಯಿಗೆ ತಲುಪಿದೆ. 2023-24ರಲ್ಲಿ ಭಾರತದ ಚಿನ್ನದ ಆಮದು ಶೇ.30ರಷ್ಟು ಏರಿಕೆಯಾಗಿ 3.8 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ.

ಸ್ವಿಟ್ಜರ್ಲೆಂಡ್ ಚಿನ್ನದ ಆಮದಿನ ಅತಿದೊಡ್ಡ ಮೂಲವಾಗಿದ್ದು, ಸುಮಾರು 40% ಪಾಲನ್ನು ಹೊಂದಿದೆ. ನಂತರ ಯುಎಇ (16% ಕ್ಕಿಂತ ಹೆಚ್ಚು) ಮತ್ತು ದಕ್ಷಿಣ ಆಫ್ರಿಕಾ (ಸುಮಾರು 10%). ರಷ್ಟು ಚಿನ್ನವನ್ನು ಭಾರತಕ್ಕೆ ರಫ್ತು ಮಾಡುತ್ತದೆ. ದೇಶದ ಒಟ್ಟು ಆಮದಿನಲ್ಲಿ ಈ ಚಿನ್ನದ ಪಾಲು ಶೇ.5ರಷ್ಟಿದೆ.

ಚಿನ್ನದ ಆಮದಿನಲ್ಲಿ ಕುಸಿತದ ಹೊರತಾಗಿಯೂ, ದೇಶದ ವ್ಯಾಪಾರ ಕೊರತೆ (ಆಮದು ಮತ್ತು ರಫ್ತು ನಡುವಿನ ವ್ಯತ್ಯಾಸ) ಜುಲೈನಲ್ಲಿ 23.5 ಬಿಲಿಯನ್ ಡಾಲರ್ ಮತ್ತು ಈ ಹಣಕಾಸು ವರ್ಷದ ಮೊದಲ ನಾಲ್ಕು ತಿಂಗಳಲ್ಲಿ 85.58 ಬಿಲಿಯನ್ ಡಾಲರ್​ಗೆ ಏರಿಕೆಯಾಗಿದೆ. ಚೀನಾ ನಂತರ ಭಾರತವು ವಿಶ್ವದ ಎರಡನೇ ಅತಿದೊಡ್ಡ ಚಿನ್ನದ ಬಳಕೆದಾರ ರಾಷ್ಟ್ರವಾಗಿದೆ. ಆಮದುಗಳು ಮುಖ್ಯವಾಗಿ ಆಭರಣ ಉದ್ಯಮದ ಬೇಡಿಕೆಯನ್ನು ನೋಡಿಕೊಳ್ಳುತ್ತವೆ.

ಇದನ್ನೂ ಓದಿ: Paris Paralympics : ಪ್ಯಾರಾಲಿಂಪಿಕ್ಸ್​​ನಲ್ಲಿ 12 ಕ್ರೀಡೆಗಳಲ್ಲಿ ಭಾಗವಹಿಸಲಿದೆ ಭಾರತ

ಈ ಹಣಕಾಸು ವರ್ಷದ ಏಪ್ರಿಲ್-ಜುಲೈ ಅವಧಿಯಲ್ಲಿ ರತ್ನ ಮತ್ತು ಆಭರಣ ರಫ್ತು ಶೇಕಡಾ 7.45 ರಷ್ಟು ಕುಗ್ಗಿದ್ದು, 9.1 ಬಿಲಿಯನ್ ಡಾಲರ್​ಗೆ ತಲುಪಿದೆ. ಮಾರ್ಚ್ ತ್ರೈಮಾಸಿಕದಲ್ಲಿ ಭಾರತವು 5.7 ಬಿಲಿಯನ್ ಡಾಲರ್ ಅಥವಾ ಜಿಡಿಪಿಯ 0.6% ವಿತ್ತೀಯ ಕೊರತೆಯನ್ನು ದಾಖಲಿಸಿದೆ. 2024ರ ಹಣಕಾಸು ವರ್ಷದಲ್ಲಿ ವಿತ್ತೀಯ ಕೊರತೆಯು 23.2 ಬಿಲಿಯನ್ ಡಾಲರ್ ಅಥವಾ ಜಿಡಿಪಿಯ 0.7% ಕ್ಕೆ ಇಳಿದಿದೆ.

ಒಂದು ನಿರ್ದಿಷ್ಟ ಅವಧಿಯಲ್ಲಿ ಒಂದು ದೇಶವು ಆಮದು ಮಾಡಿಕೊಳ್ಳುವ ಸರಕು ಮತ್ತು ಸೇವೆಗಳು ಮತ್ತು ಇತರ ಪಾವತಿಗಳ ಮೌಲ್ಯವು ಸರಕು ಮತ್ತು ಸೇವೆಗಳ ರಫ್ತು ಮತ್ತು ಆಮದಿನ ಮೌಲ್ಯವನ್ನು ಮೀರಿದಾಗ ವಿತ್ತೀಯ ಕೊರತೆ ಉಂಟಾಗುತ್ತದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಬೆಳ್ಳಿ ಆಮದು 2024 ರ ಏಪ್ರಿಲ್-ಜುಲೈ ಅವಧಿಯಲ್ಲಿ 648.44 ಮಿಲಿಯನ್ ಡಾಲರ್​ಗೆ ಏರಿದೆ.

Continue Reading

Golden Globe 2023

RRR Movie | ʼತೆಲುಗು ಧ್ವಜʼಕ್ಕೆ ಕ್ಯಾತೆ ತೆಗೆದ ಅದ್ನಾನ್‌ ಸಾಮಿಗೆ ʼವಿವಿಧತೆಯಲ್ಲಿ ಏಕತೆʼಯ ಪಾಠ ಮಾಡಿದ ನಟಿ ರಮ್ಯಾ

ಸಂಗೀತ ನಿರ್ದೇಶಕ, ಗಾಯಕ ಅದ್ನಾನ್‌ ಸಾಮಿ ಅವರು ತೆಲುಗು ಧ್ವಜವನ್ನು ಪ್ರಶ್ನಿಸಿದ್ದಕ್ಕೆ ನಟಿ ರಮ್ಯಾ ತಿರುಗೇಟು ನೀಡಿದ್ದಾರೆ. ವೈವಿಧ್ಯತೆಯಲ್ಲಿ ಏಕತೆ ಎಂಬ ಪಾಠ ಮಾಡಿದ್ದಾರೆ.

VISTARANEWS.COM


on

Ramya Reply To Adnan Sami
Koo

ಬೆಂಗಳೂರು: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದ 80ನೇ ಗೋಲ್ಡನ್ ಗ್ಲೋಬ್ಸ್‌ನಲ್ಲಿ ರಾಜಮೌಳಿ ನಿರ್ದೇಶನದ RRR ಸಿನಿಮಾದ (RRR Movie) ನಾಟು… ನಾಟು… “ಅತ್ಯುತ್ತಮ ಒರಿಜಿನಲ್‌ ಹಾಡು” ವಿಭಾಗದಲ್ಲಿ ಪುರಸ್ಕಾರ ಪಡೆದಿದೆ. ಸಿನಿಮಾ ತಂಡಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ, ಸಂಗೀತ ನಿರ್ದೇಶಕ, ಗಾಯಕ ಅದ್ನಾನ್‌ ಸಾಮಿ ಮಾಡಿದ ಟ್ವೀಟ್‌ಗೆ ಆಕ್ಷೇಪ ವ್ಯಕ್ತವಾಗಿದೆ. ಸ್ಯಾಂಡಲ್‌ವುಡ್‌ ನಟಿ ರಮ್ಯಾ ಅವರಂತೂ ಅದ್ನಾನ್‌ ಸಾಮಿ ಅವರಿಗೆ ‘ವಿವಿಧತೆಯಲ್ಲಿ ಏಕತೆ’ಯ ಪಾಠ ಮಾಡಿದ್ದಾರೆ.

ಆರ್‌ಆರ್‌ಆರ್‌ ಚಿತ್ರವು ಜಾಗತಿಕ ಪ್ರಶಸ್ತಿಗೆ ಪುರಸ್ಕೃತವಾದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್‌ ಮೋಹನ್‌ ರೆಡ್ಡಿ ಅವರು ಚಿತ್ರತಂಡಕ್ಕೆ ಅಭಿನಂದನೆ ಸಲ್ಲಿಸಿದ್ದರು. “ತೆಲುಗು ಧ್ವಜ ಅತಿ ಎತ್ತರದಲ್ಲಿ ಹಾರಾಡುತ್ತಿದೆ. ಆಂಧ್ರಪ್ರದೇಶದ ಪರವಾಗಿ ಇಡೀ ಚಿತ್ರತಂಡಕ್ಕೆ ಅಭಿನಂದನೆಗಳು” ಎಂದು ಟ್ವೀಟ್‌ ಮಾಡಿದ್ದರು. ಆದರೆ, ಇದಕ್ಕೆ ಅದ್ನಾನ್‌ ಸಾಮಿ ಆಕ್ಷೇಪ ವ್ಯಕ್ತಪಡಿಸಿದ್ದರು.

“ತೆಲುಗು ಧ್ವಜವೇ? ನಾವು ಮೊದಲು ಭಾರತೀಯರು. ದೇಶದಿಂದ ಪ್ರತ್ಯೇಕವಾಗಿ ಇರುವ ನಿಮ್ಮ ಮನಸ್ಥಿತಿಯನ್ನು ದಯಮಾಡಿ ಬದಲಾಯಿಸಿಕೊಳ್ಳಿ. ಅದರಲ್ಲೂ, ಜಾಗತಿಕ ಮಟ್ಟದಲ್ಲಾದರೂ ನಾವು ಭಾರತೀಯರು ಎಂಬ ಭಾವನೆ ಇರಲಿ” ಎಂದು ಅದ್ನಾನ್‌ ಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ತಿರುಗೇಟು ನೀಡಿದ ರಮ್ಯಾ
ಅದ್ನಾನ್‌ ಸಾಮಿ ಟ್ವೀಟ್‌ಗೆ ನಟಿ ರಮ್ಯಾ ತಿರುಗೇಟು ನೀಡಿದ್ದಾರೆ. “ಹೌದು, ನಾವು ಭಾರತೀಯರು. ಆದರೆ, ನಾವು ಕನ್ನಡಿಗರು, ತಮಿಳಿಗರು, ತೆಲುಗು, ಬೆಂಗಾಲಿಗಳು. ನಮಗೆ ನಮ್ಮ ಧ್ವಜ ಇದೆ. ನಾವು ಭಾರತೀಯರು ಎಂಬುದಕ್ಕೆ ಹೆಮ್ಮೆ ಇದೆ ಹಾಗೂ ನಮ್ಮ ಮೂಲ ಸಂಸ್ಕೃತಿ, ಭಾಷೆ, ಧ್ವಜಗಳನ್ನು ಹೊಂದಿದ್ದೇವೆ. ವಿವಿಧತೆಯಲ್ಲಿ ಏಕತೆ ಎಂಬುದು ಸರಿಯಲ್ಲವೇ?” ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ | RRR Movie | ನಾಟು ನಾಟು ಹಾಡು ಚಿತ್ರೀಕರಣ ಆಗಿದ್ದ ಆ ಜಾಗ ಈಗ ಯುದ್ಧದ ಸ್ಥಳ! ಯಾವುದು ಆ ಜಾಗ?

Continue Reading

Golden Globe 2023

RRR Movie | RRR ತಂಡವನ್ನು ಅಭಿನಂದಿಸಲು ಟೈಗರ್ ಶ್ರಾಫ್ ವಿಶೇಷ ವಿಡಿಯೊ: ಇದು ವಿಜಯದ ನೃತ್ಯ!

RR ಸಿನಿಮಾ (RRR Movie ) ಪ್ರತಿಷ್ಠಿತ ಗೋಲ್ಡನ್‌ ಗ್ಲೋಬ್‌ ಪ್ರಶಸ್ತಿಯ ʼಅತ್ಯುತ್ತಮ ಒರಿಜಿನಲ್‌ ಹಾಡುʼ ವಿಭಾಗದಲ್ಲಿ ಪುರಸ್ಕಾರ ಪಡೆದಿದೆ.
ಬಾಲಿವುಡ್‌ ನಟ ಟೈಗರ್ ಶ್ರಾಫ್ ‘RRR’ ತಂಡವನ್ನು ಅಭಿನಂದಿಸಲು ವಿಶೇಷ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

VISTARANEWS.COM


on

RRR Movie
Koo

ಬೆಂಗಳೂರು : ರಾಜಮೌಳಿ ನಿರ್ದೇಶನದ RRR ಸಿನಿಮಾ (RRR Movie ) ಪ್ರತಿಷ್ಠಿತ ಗೋಲ್ಡನ್‌ ಗ್ಲೋಬ್‌ ಪ್ರಶಸ್ತಿಯ ʼಅತ್ಯುತ್ತಮ ಒರಿಜಿನಲ್‌ ಹಾಡುʼ ವಿಭಾಗದಲ್ಲಿ ಪುರಸ್ಕಾರ ಪಡೆದಿದೆ. ಇದೀಗ ಬಾಲಿವುಡ್‌ ನಟ ಟೈಗರ್ ಶ್ರಾಫ್ ‘RRR’ ತಂಡವನ್ನು ಅಭಿನಂದಿಸಲು ವಿಶೇಷ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ‘ನಾಟು ನಾಟು’ ಹಾಡಿಗೆ ಸಖತ್‌ ಸ್ಟೆಪ್ಸ್‌ ಹಾಕಿರುವ ವಿಡಿಯೊವನ್ನು ಇನ್‌ಸ್ಟಾದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

ʻನಾಟು ನಾಟುʼ ಹಾಡಿಗೆ ಹೆಜ್ಜೆ ಹಾಕಿದ ಟೈಗರ್‌ ಶ್ರಾಫ್‌ ʻʻಭಾರತೀಯ ಚಿತ್ರರಂಗಕ್ಕೆ ದೊಡ್ಡ ಗೆಲುವು. ಆರ್‌ಆರ್‌ಆರ್‌ ಇಡೀ ತಂಡಕ್ಕೆ ಅಭಿನಂದನೆಗಳು. ಇದು ವಿಜಯದ ನೃತ್ಯವಾಗಬೇಕುʼʼ ಎಂದು ಪೋಸ್ಟ್‌ ಮಾಡಿದ್ದಾರೆ. 80ನೇ ಗೋಲ್ಡನ್ ಗ್ಲೋಬ್ ಪ್ರಶಸ್ತಿಯ ಅಂತಿಮ ಸುತ್ತಿನಲ್ಲಿ‌ ಮಿಂಚಿದ RRR, ಎರಡು ವಿಭಾಗಗಳಿಗೆ ನಾಮನಿರ್ದೇಶನಗೊಂಡಿತ್ತು. ಅವು ʼಅತ್ಯುತ್ತಮ ಆಂಗ್ಲೇತರ ಚಿತ್ರʼ ಹಾಗೂ ʼಅತ್ಯುತ್ತಮ ಹಾಡುʼ ವಿಭಾಗಗಳು. ಅತ್ಯುತ್ತಮ ಹಾಡು ಪ್ರಶಸ್ತಿಯನ್ನು ಆರ್‌ಆರ್‌ಆರ್‌ನ ʼನಾಟು ನಾಟುʼ ಗೆದ್ದುಕೊಂಡಿದೆ. ಕ್ಯಾಲಿಫೋರ್ನಿಯಾದ ಬೆವರ್ಲಿ ಹಿಲ್ಸ್‌ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದ್ದು, ನಿರ್ದೇಶಕ ಎಸ್‌.ಎಸ್‌ ರಾಜಮೌಳಿ, ಜೂ.ಎನ್‌ಟಿಆರ್, ರಾಮ್‌ಚರಣ್ ಜತೆ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಭಾಗಿಯಾಗಿದ್ದರು. ಕೀರವಾಣಿ ಪ್ರಶಸ್ತಿ ಸ್ವೀಕರಿಸಿ ಸಂಭ್ರಮಿಸಿದರು.

ಇದನ್ನೂ ಓದಿ | RRR Movie | ನಾಟು ನಾಟು ಹಾಡು ಚಿತ್ರೀಕರಣ ಆಗಿದ್ದ ಆ ಜಾಗ ಈಗ ಯುದ್ಧದ ಸ್ಥಳ! ಯಾವುದು ಆ ಜಾಗ?

ಸಮಾರಂಭದಲ್ಲಿ ಸಂಗೀತ ಸಂಯೋಜಕ ಎಂ.ಎಂ.ಕೀರವಾಣಿ ಭಾವನಾತ್ಮಕ ಮಾತುಗಳನ್ನಾಡಿ ʻʻನಾನು ಇದೀಗ ಪಡೆದ ಈ ಶ್ರೇಷ್ಠ ಪ್ರಶಸ್ತಿಯ ಬಗ್ಗೆ ನಾನು ತುಂಬಾ ಉತ್ಸುಕನಾಗಿದ್ದೇನೆ. RRR ಇಬ್ಬರು ಸ್ನೇಹಿತರ ನಡುವಿನ ಬಾಂಧವ್ಯದ ಬಗ್ಗೆ ಹೇಳುತ್ತದೆ. ಇದು ದೇಶಭಕ್ತಿಯ ಬಗ್ಗೆ, ಭಾವನೆಗಳು, ಸಾಹಸ ದೃಶ್ಯಗಳು ಮತ್ತು ಸಂಗೀತದಿಂದ ತುಂಬಿರುತ್ತದೆ. ಮೊದಲ ಬಾರಿಗೆ, ಇದು ಅಂತಾರಾಷ್ಟ್ರೀಯ ಪ್ರೇಕ್ಷಕರ ಗಮನ ಮತ್ತು ಚಪ್ಪಾಳೆಗಳನ್ನು ಗಳಿಸಿದೆ. ಅದರ ಬಗ್ಗೆ ನನಗೆ ತುಂಬಾ ಸಂತೋಷವಾಗಿದೆ. ಭಾರತದಲ್ಲಿ ಅತ್ಯಂತ ಜನಪ್ರಿಯವಾಗಿರುವ ನನ್ನ ಸಹೋದರ ಎಸ್‌ಎಸ್ ರಾಜಮೌಳಿ ಅವರ ಜತೆ ಒಡನಾಟವಿರುವುದು ಖುಷಿ ತಂದಿದೆ. ವಿಶ್ವಾದ್ಯಂತ ಅಂತಹ ಉತ್ತಮ ಅವಕಾಶಗಳಿಗಾಗಿ ನಾನು ಎದುರು ನೋಡುತ್ತಿದ್ದೇನೆ.” ಎಂದಿದ್ದಾರೆ.

ಇದನ್ನೂ ಓದಿ | RRR Movie | ರೆಡ್ ಕಾರ್ಪೆಟ್‌ನಲ್ಲಿ ಸಾಂಪ್ರದಾಯಿಕ ಭಾರತೀಯ ಉಡುಗೆಯಲ್ಲಿ ಮಿಂಚಿದ ಆರ್‌ಆರ್‌ಆರ್‌ ಚಿತ್ರತಂಡ

Continue Reading

Golden Globe 2023

RRR Movie | ರೆಡ್ ಕಾರ್ಪೆಟ್‌ನಲ್ಲಿ ಸಾಂಪ್ರದಾಯಿಕ ಭಾರತೀಯ ಉಡುಗೆಯಲ್ಲಿ ಮಿಂಚಿದ ಆರ್‌ಆರ್‌ಆರ್‌ ಚಿತ್ರತಂಡ

ರಾಮ್ ಚರಣ್ ಮತ್ತು ಜೂನಿಯರ್ ಎನ್‌ಟಿಆರ್ ಜತೆಗೆ ನಿರ್ದೇಶಕ ಎಸ್‌ಎಸ್ ರಾಜಮೌಳಿ (RRR Movie) ಸಾಂಪ್ರಾದಾಯಿಕ ಉಡುಗೆಗಳಿಂದ ಪ್ರತಿಷ್ಠಿತ ಗೋಲ್ಡನ್‌ ಗ್ಲೋಬ್‌ ಪ್ರಶಸ್ತಿಯ ಸಮಾರಂಭದಲ್ಲಿ ಗಮನ ಸೆಳೆದಿದ್ದಾರೆ.

VISTARANEWS.COM


on

RRR Movie
Koo

ಬೆಂಗಳೂರು : ರಾಜಮೌಳಿ ನಿರ್ದೇಶನದ RRR ಸಿನಿಮಾ (RRR Movie ) ಪ್ರತಿಷ್ಠಿತ ಗೋಲ್ಡನ್‌ ಗ್ಲೋಬ್‌ ಪ್ರಶಸ್ತಿಯ ʼಅತ್ಯುತ್ತಮ ಒರಿಜಿನಲ್‌ ಹಾಡುʼ ವಿಭಾಗದಲ್ಲಿ ಪುರಸ್ಕಾರ ಪಡೆದಿದೆ. ರಾಮ್ ಚರಣ್ ಮತ್ತು ಜೂನಿಯರ್ ಎನ್‌ಟಿಆರ್ ಜತೆಗೆ ನಿರ್ದೇಶಕ ಎಸ್‌ಎಸ್ ರಾಜಮೌಳಿ ಸಾಂಪ್ರಾದಾಯಿಕ ಉಡುಗೆಗಳಿಂದ ಗಮನ ಸೆಳೆದಿದ್ದಾರೆ.

ರೆಡ್ ಕಾರ್ಪೆಟ್ ಮೇಲೆ ಸಾಂಪ್ರದಾಯಿಕ ಧೋತಿ-ಕುರ್ತಾವನ್ನು ಧರಿಸುವ ಮೂಲಕ ಎಸ್ಎಸ್ ರಾಜಮೌಳಿ ಸಮಾರಂಭದಲ್ಲಿ ಗಮನ ಸೆಳೆದರು. ಕೆಂಪು ಮತ್ತು ಕಪ್ಪು ಧೋತಿ-ಕುರ್ತಾ ಜತೆಗೆ ಕಡುಗೆಂಪು ಬಣ್ಣದ ಸ್ಟೋಲ್ ಅನ್ನು ಧರಿಸಿದ್ದರು. ಪ್ರತಿಭಾವಂತ ಚಲನಚಿತ್ರ ನಿರ್ದೇಶಕ ಪ್ರಮುಖ ಹಾಲಿವುಡ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಂಪ್ರದಾಯಿಕ ಭಾರತೀಯ ಉಡುಗೆಯಲ್ಲಿ ಭಾಗವಹಿಸಿದ್ದಕ್ಕಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪ್ರಶಂಸೆಯನ್ನು ಪಡೆಯುತ್ತಿದ್ದಾರೆ.

RRR Movie

ರಾಮ್ ಚರಣ್ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಕಪ್ಪು ಶೆರ್ವಾನಿ ಧರಿಸಿದ್ದರು. ಬ್ರೂಚ್‌ನೊಂದಿಗೆ ಬಂದ್ ಗಾಲಾ ಕುರ್ತಾವನ್ನು ಧರಿಸಿದ್ದರು. ಕಪ್ಪು ಪ್ಯಾಂಟ್, ಹೊಂದುವಂತಹ ಬೂಟುಗಳು, ಉಂಗುರ, ಇಯರ್ ಸ್ಟಡ್‌ಗಳು, ಟ್ರಿಮ್ ಮಾಡಿದ ಗಡ್ಡ , ಹೆರ್‌ಸ್ಟೈಲ್‌ ಹೊಂದಿಕೆಯಾಗುವಂತೆ ಗಮನ ಸೆಳೆದಿದ್ದಾರೆ.

RRR Movie

ಇದನ್ನೂ ಓದಿ | RRR Movie | ನಾಟು ನಾಟು ಸಾಂಗ್‌ಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ, ಇದೊಂದು ವಿಶೇಷ ಸಾಧನೆ ಎಂದ ಮೋದಿ

ಜೂನಿಯರ್ ಎನ್‌ಟಿಆರ್‌ ನಾಚ್-ಲ್ಯಾಪಲ್ ಜಾಕೆಟ್, ಬಿಳಿ ಶರ್ಟ್ ಮತ್ತು ಕಪ್ಪು ಪ್ಯಾಂಟ್‌ ಧರಿಸಿದ್ದರು. ಕೀರವಾಣಿ ಕಪ್ಪು ಕುರ್ತಾದೊಂದಿಗೆ ಕಾಣಿಸಿಕೊಂಡರೆ ರಾಮಚರಣ್‌ ಪತ್ನಿ ಸೀರೆಯನ್ನುಟ್ಟಿದ್ದರು. 80ನೇ ಗೋಲ್ಡನ್ ಗ್ಲೋಬ್ಸ್‌ ಪ್ರಶಸ್ತಿಯ ಸಮಾರಂಭದಲ್ಲಿ ಸಾಂಪ್ರದಾಯಿಕ ಸೀರೆಯೊಂದಿಗೆ, ಬಿಂದಿಯಲ್ಲಿ ಮಿಂಚಿದ್ದಾರೆ ಉಪಾಸನಾ ಕಾಮಿನೇನಿ. ಅವರ ಉಡುಗೆಗೆ ಸೋಷಿಯಲ್‌ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಜೂನಿಯರ್ ಎನ್‌ಟಿಆರ್‌ ಅವರ ಪತ್ನಿ ಲಕ್ಷ್ಮಿ ಪ್ರಣತಿ ಅವರೊಂದಿಗಿನ ಸೆಲ್ಫಿಯನ್ನು ಉಪಾಸನಾ ಹಂಚಿಕೊಂಡಿದ್ದಾರೆ.

80ನೇ ಗೋಲ್ಡನ್ ಗ್ಲೋಬ್ ಪ್ರಶಸ್ತಿಯ ಅಂತಿಮ ಸುತ್ತಿನಲ್ಲಿ‌ ಮಿಂಚಿದ RRR, ಎರಡು ವಿಭಾಗಗಳಿಗೆ ನಾಮನಿರ್ದೇಶನಗೊಂಡಿತ್ತು. ಅವು ʼಅತ್ಯುತ್ತಮ ಆಂಗ್ಲೇತರ ಚಿತ್ರʼ ಹಾಗೂ ʼಅತ್ಯುತ್ತಮ ಹಾಡುʼ ವಿಭಾಗಗಳು. ಇದೀಗ ಅತ್ಯುತ್ತಮ ಹಾಡು ಪ್ರಶಸ್ತಿಯನ್ನು ಆರ್‌ಆರ್‌ಆರ್‌ನ ʼನಾಟು ನಾಟುʼ ಗೆದ್ದುಕೊಂಡಿದೆ.

RRR Movie

ಕ್ಯಾಲಿಫೋರ್ನಿಯಾದ ಬವರ್ಲಿ ಹಿಲ್ಸ್‌ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದ್ದು, ನಿರ್ದೇಶಕ ಎಸ್‌.ಎಸ್‌ ರಾಜಮೌಳಿ, ಜೂ.ಎನ್‌ಟಿಆರ್, ರಾಮ್‌ಚರಣ್ ಜೊತೆ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಭಾಗಿಯಾಗಿದ್ದರು. ಕೀರವಾಣಿ ಪ್ರಶಸ್ತಿ ಸ್ವೀಕರಿಸಿ ಸಂಭ್ರಮಿಸಿದರು.

RRR Movie

ಇದನ್ನೂ ಓದಿ | RRR Movie | ಆರ್‌ಆರ್‌ಆರ್‌ ಚಿತ್ರಕ್ಕೆ ಸೆಲೆಬ್ರಿಟಿಗಳಿಂದ ಶುಭ ಹಾರೈಕೆಯ ಸುರಿಮಳೆ!

Continue Reading
Advertisement
Kodava Family Hockey Tournament Website Launched
ಕೊಡಗು1 ತಿಂಗಳು ago

Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ

Bengaluru News
ಬೆಂಗಳೂರು1 ತಿಂಗಳು ago

Bengaluru News : ಮಾಡಲಿಂಗ್‌ನಲ್ಲಿ ಗಿನ್ನಿಸ್‌ ರೆಕಾರ್ಡ್‌ ಮಾಡಲು ಹೊರಟ ಹಳ್ಳಿಹೈದ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ

Gadag News Father commits suicide by throwing three children into river
ಗದಗ1 ತಿಂಗಳು ago

Gadag News : ಮೂವರು ಮಕ್ಕಳನ್ನು ನದಿಗೆ ಎಸೆದು, ಆತ್ಮಹತ್ಯೆ ಮಾಡಿಕೊಂಡ ತಂದೆ!

Dina Bhavishya
ಭವಿಷ್ಯ1 ತಿಂಗಳು ago

Dina Bhavishya: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ, ಯಶಸ್ಸು ಖಂಡಿತ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ

Bengaluru airport
ಬೆಂಗಳೂರು1 ತಿಂಗಳು ago

Bengaluru Airport : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೈಗರ್‌ ವಿಂಗ್ಸ್‌; 2ನಲ್ಲಿ ಅತಿದೊಡ್ಡ ವರ್ಟಿಕಲ್‌ ಗಾರ್ಡನ್‌ ಅನಾವರಣ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಈ ರಾಶಿಯವರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಸದಾ ಕಲ್ಪನೆಯಲ್ಲಿ ಕನಸುಗಳನ್ನು ಕಾಣುತ್ತಾ ಕಾಲಹರಣ ಮಾಡ್ಬೇಡಿ

dina bhavishya read your daily horoscope predictions for november 4 2024
ಭವಿಷ್ಯ2 ತಿಂಗಳುಗಳು ago

Dina Bhavishya : ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಶುಭ ಸುದ್ದಿ

galipata neetu
ಕಿರುತೆರೆ1 ವರ್ಷ ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ1 ವರ್ಷ ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ1 ವರ್ಷ ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ತಿಂಗಳುಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್4 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ4 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ5 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌