RSS Movie: RSS ಯಶೋಗಾಥೆಯ ಸಿನೆಮಾ: ವಿಜಯೇಂದ್ರ ಪ್ರಸಾದ್ ಬರೆದ ಕಥೆಗೆ ರಾಜಮೌಳಿ ನಿರ್ದೇಶನ? Vistara News

ಟಾಲಿವುಡ್

RSS Movie: RSS ಯಶೋಗಾಥೆಯ ಸಿನೆಮಾ: ವಿಜಯೇಂದ್ರ ಪ್ರಸಾದ್ ಬರೆದ ಕಥೆಗೆ ರಾಜಮೌಳಿ ನಿರ್ದೇಶನ?

RSS ನಡೆದು (RSS Movie) ಬಂದ ಹಾದಿ, ಹೋರಾಟ, ಎಲ್ಲದರ ಕುರಿತು ಖ್ಯಾತ ಕಥೆಗಾರ ವಿಜಯೇಂದ್ರ ಪ್ರಸಾದ್ ಕಥೆ ಬರೆದಿದ್ದಾರೆ. ಚಿತ್ರವನ್ನು ರಾಜಮೌಳಿ ನಿರ್ದೇಶಿಸಲಿದ್ದಾರೆ ಎನ್ನುವ ಸುದ್ದಿಯೂ ಇದೆ. ಇದರ ಹಿಂದೆ ಕನ್ನಡದ ಲಹರಿ ವೇಲು ಇದ್ದು, ರಾಜಮೌಳಿ ನಿರ್ದೇಶನ ಮಾಡದಿದ್ದರೆ ಬೇರೆಯವರಿಂದ ನಿರ್ದೇಶನ ಮಾಡಿಸಲಿದ್ದಾರೆ ಎನ್ನಲಾಗುತ್ತಿದೆ.

VISTARANEWS.COM


on

RSS success story on big screen Rajamouli to direct Vijayendra Prasad's story
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದೊಡ್ಡ ಪರದೆ ಮೇಲೆ RSS (RSS Movie) ಯಶೋಗಾಥೆ ಬರಲಿದೆ. ನಿರ್ದೇಶಕ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್‌ ಈಗಾಗಲೇ ಕಥೆ ಬರೆಯುತ್ತಿದ್ದು, ಆರ್‌ಎಸ್‌ಎಸ್‌ ಕಥೆ ಕೇಳುತ್ತಲೇ ನಿರ್ದೇಶಕ ರಾಜಮೌಳಿ ಕೆಲವು ದಿನಗಳ ಹಿಂದೆ ಕಣ್ಣೀರಿಟ್ಟಿದ್ದರು. ಆರ್‌ಎಸ್‌ಎಸ್‌ ಸಿನಿಮಾ ಮಾಡುವ ಐಡಿಯಾ ಲಹರಿ ವೇಲು ಅವರದ್ದಾಗಿದೆ. ಇದೀಗ ಆರ್‌ಎಸ್‌ಎಸ್‌ ಸಿನಿಮಾ ಕುರಿತು ವಿಸ್ತಾರ ನ್ಯೂಸ್‌ಗೆ ಲಹರಿ ಸಂಸ್ಥೆಯ ವೇಲು ಒಂದಿಷ್ಟು ಮಾಹಿತಿ ಹಂಚಿಕೊಂಡಿದ್ದಾರೆ.

ಈ ಕುರಿತು ಲಹರಿ ವೇಲು ಮಾತನಾಡಿ ʻʻRSS ಕಥೆ ಬರೆಯಲು ಬರೆಯಲು ನಾನು ಹೇಳಿದ್ದೆ. ಕಥೆ ಈಗಾಗಲೇ ತಯಾರಿದೆ. ಒಳ್ಳೆಯ ನಿರ್ದೇಶಕರಿಗಾಗಿ ಹುಡುಕಾಟ ನಡೆಯುತ್ತಿದೆ. ಆರ್ ಎಸ್ ಎಸ್ ಸಿನಿಮಾ ನನ್ನ ಬ್ಯಾನರ್‌ನಲ್ಲಿಯೇ ಮೂಡಿ ಬರಲಿದೆ. ಈಗಾಗಲೇ ಎಲ್ಲ ಕಡೆ ಟೈಟಲ್‌ ರಿಜಿಸ್ಟರ್ ಆಗಿದೆʼʼ ಎಂದರು.

ವಿಜಯೇಂದ್ರ ಪ್ರಸಾದ್ ಬರೆದ ಕಥೆಗೆ ರಾಜಮೌಳಿ ನಿರ್ದೇಶನ?

ರಾಜಮೌಳಿ ಅವರು ಒಪ್ಪಿದರೆ ಚಿತ್ರವನ್ನು ಈ ಕೂಡಲೇ ಮಾಡುವುದಕ್ಕೂ ರೆಡಿ ಇರುವುದಾಗಿ ಲಹರಿ ವೇಲು ಹೇಳಿದ್ದಾರೆ. ಆದರೆ ಸದ್ಯ ರಾಜಮೌಳಿ ಅವರು ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಸ್ಪೈ ಚಿತ್ರ ಮಾಡುವುದರಲ್ಲಿ ಬ್ಯುಸಿ ಆಗಿದ್ದಾರೆ.

ರಾಜಮೌಳಿ ತಂದೆ ನಡೆಗೆ ಲಹರಿ ವೇಲು ಬೇಸರ ಹೊರ ಹಾಕಿದ್ರಾ?

ಲಹರಿ ವೇಲು ಅವರು ತಮ್ಮ RSS ಕಥೆಯನ್ನ ಪ್ಯಾನ್ ಇಂಡಿಯಾ ಮಟ್ಟದಲ್ಲಿಯೇ ತೆರೆಗೆ ತರಬೇಕು ಎನ್ನುವ ಇರಾದೆಯಲ್ಲಿ ಇದ್ದರೂ, ರಾಜಮೌಳಿ ಅವರಾಗಲಿ, ಅವರ ತಂದೆಯವರಾಗಲಿ ಎಲ್ಲೂ ತಮ್ಮ ಸಂಸ್ಥೆ ಹೆಸರೂ ಹೇಳಲಿಲ್ಲ ಎಂದು ಲಹರಿ ವೇಲು ಬೇಸರದಲ್ಲೂ ಇದ್ದಾರೆ ಎನ್ನಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

South Cinema

Santosham Awards 2023: ಚಿರಂಜೀವಿ ಪಿಆರ್‌ಒ ಸುರೇಶ್‌ರಿಂದ ಕನ್ನಡ ಸ್ಟಾರ್ಸ್‌ಗೆ ಅವಮಾನ!

Santosham Awards 2023: ಸುರೇಶ್ ಗೋವಾದಲ್ಲಿ ಬಂದಂತಹ ಅತಿಥಿಗಳಿಗೆ ಸರಿಯಾದ ಆತಿಥ್ಯ ನೀಡದೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.ಕನ್ನಡಿಗರಿಗೆ ತೆಲುಗು ಆಯೋಜಕರಿಂದ ಈ ರೀತಿ ಮೋಸವಾಗಿರುವ ಕಾರಣಗಳಿಂದಾಗಿ ಕಾರ್ಯಕ್ರಮವನ್ನು ಬಾಯ್ಕಾಟ್ ಮಾಡಿ ಬೆಂಗಳೂರಿಗೆ ಕನ್ನಡದ ಸ್ಟಾರ್ಸ್‌ ತೆರಳಿದ್ದಾರೆ.

VISTARANEWS.COM


on

Chiranjeevi PRO Suresh Kondeti Shame on Kannada Stars
Koo

ಬೆಂಗಳೂರು: ಮೆಗಾಸ್ಟಾರ್ ಚಿರಂಜೀವಿ ಪಿಆರ್‌ಒ ಸುರೇಶ್ ಕೊಂಡೇಟಿಯಿಂದ ಕನ್ನಡದ ತಾರೆಯರಿಗೆ ದೊಡ್ಡ ಅವಮಾನವಾಗಿದೆ. ಸಂತೋಷಂ ಅವಾರ್ಡ್ಸ್ (Santosham Awards 2023) ನೀಡಲು ಕನ್ನಡ ಸ್ಟಾರ್ಸ್‌ಗೆ ಗೋವಾಗೆ ಆಹ್ವಾನ ನೀಡಿದ್ದರು ಸುರೇಶ್‌. ಗೋವಾದಲ್ಲಿ ಬಂದಂತಹ ಅತಿಥಿಗಳಿಗೆ ಸರಿಯಾದ ಆತಿಥ್ಯ ನೀಡದೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಷ್ಟೇ ಅಲ್ಲದೇ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕ್ರಾಂತಿ ಸಿನಿಮಾಗೆ ಅವಾರ್ಡ್ ನೀಡುತ್ತಿದ್ದಂತೆ ವೇದಿಕೆಯಲ್ಲಿ ಕರೆಂಟ್ ಆಫ್ ಕೂಡ ಆಗಿದ್ದು, ಆಯೋಜನೆಯಲ್ಲಿ ಮಹಾ ಎಡವಟ್ಟು ಸಂಭವಿಸಿದೆ.

ಕನ್ನಡಿಗರಿಗೆ ತೆಲುಗು ಆಯೋಜಕರಿಂದ ಈ ರೀತಿ ಮೋಸವಾಗಿರುವ ಕಾರಣಗಳಿಂದಾಗಿ ಕಾರ್ಯಕ್ರಮವನ್ನು ಬಾಯ್ಕಾಟ್ ಮಾಡಿ ಬೆಂಗಳೂರಿಗೆ ಕನ್ನಡದ ಸ್ಟಾರ್ಸ್‌ ತೆರಳಿದ್ದಾರೆ. ರಮೇಶ್ ಅರವಿಂದ್, ಸಪ್ತಮಿ ಗೌಡ, ರಾಜವರ್ಧನ್, ಬಿ ಸುರೇಶ್, ಶೈಲಜಾ ನಾಗ್ ಸೇರಿದಂತೆ ಸುಮಾರು 30ರಿಂದ 35 ಮಂದಿ ಕನ್ನಡದ ಸ್ಟಾರ್ಸ್‌ಗಳು ಭಾಗಿಯಾಗಿದ್ದರು ಎನ್ನಲಾಗಿದೆ.

ತಮಿಳು ತಾರೆಯರು ಕೂಡ ಸಂತೋಷಂ ಫಿಲ್ಮ್ ಅವಾರ್ಡ್ಸ್ ನಲ್ಲಿ ಭಾಗಿಯಾಗದಿರಲು ನಿರ್ಧಾರ ಮಾಡಿರುವುದಾಗಿ ತಿಳಿದು ಬಂದಿದೆ. ರಿಯಾಜ್‌ ಎನ್ನುವರು ಟ್ವೀಟ್‌ನಲ್ಲಿ, ಕಾಲಿವುಡ್‌ ತಾರೆಯರಿಗೆ ಟಿಕೆಟ್‌ವನ್ನು ಸುರೇಶ್‌ ಅವರು ಕೊಡದೇ ಇರುವ ಕಾರಣ, ಸಂತೋಷಂ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ ಎಂದು ಟ್ವೀಟ್‌ ಮಾಡಿದ್ದಾರೆ. ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಏರ್ ಪೋರ್ಟ್‌ಗೆ ಕನ್ನಡದ ಸ್ಟಾರ್ಸ್‌ಗಳು ಆಗಮಿಸಲಿದ್ದಾರೆ.

ಇದನ್ನೂ ಓದಿ: Sachin Tendulkar: ವಿಕ್ಕಿ ಕೌಶಲ್‌ ಸಿನಿಮಾ ಕಂಡು ʻಸೂಪರ್ ಇಂಪ್ರೆಸ್ಡ್ʼ ಆದ ಸಚಿನ್ ತೆಂಡೂಲ್ಕರ್‌!

ಸುರೇಶ್ ಕೊಂಡೇಟಿ ಒಡೆತನದ ಸಂತೋಷಂ ಸೌತ್ ಇಂಡಿಯನ್ ಫಿಲ್ಮ್ ಅವಾರ್ಡ್ಸ್ ಟಾಲಿವುಡ್ ಮತ್ತು ಇತರ ಭಾರತೀಯ ಭಾಷೆಯ ಚಲನಚಿತ್ರಗಳಿಗೆ ಗೌರವ ನೀಡುವ ಪ್ರಶಸ್ತಿ ಇದಾಗಿದೆ. ನಟರಿಗೆ ಮಾತ್ರವಲ್ಲದೆ ಒಟಿಟಿ ವಿಭಾಗದಲ್ಲಿಯೂ ಪ್ರಶಸ್ತಿಗಳನ್ನು ನೀಡುತ್ತ ಬರುತ್ತಿದೆ.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ: https://vistaranews.com/tag/assembly-election-2023

Continue Reading

South Cinema

Ram Charan: ಮೈಸೂರಿನ ಚಾಮುಂಡೇಶ್ವರಿ ದರ್ಶನ ಪಡೆದ ರಾಮ್​ ಚರಣ್​!

Ram Charan: ‘ಗೇಮ್​ ಚೇಂಜರ್​’ ಸಿನಿಮಾದ ಶೂಟಿಂಗ್​ ಮೈಸೂರಿನಲ್ಲಿ ನಡೆಯುತ್ತಿದೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಸಲುವಾಗಿ ಅವರು ಸಣ್ಣ ಬ್ರೇಕ್​ ಪಡೆದುಕೊಂಡಿದ್ದರು.

VISTARANEWS.COM


on

am charan visits Chamundeshwari Temple Mysuru
Koo

ಮೈಸೂರು: ಟಾಲಿವುಡ್‌ ನಟ ರಾಮ್‌ಚರಣ್‌ ಅವರು ಡಿಸೆಂಬರ್​ 3ರಂದು ಮೈಸೂರಿನ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ‘ಗೇಮ್​ ಚೇಂಜರ್​’ (Ram Charan) ಸಿನಿಮಾದ ಶೂಟಿಂಗ್​ ಸಲುವಾಗಿ ರಾಮ್​ ಚರಣ್​ ಅವರು ಹಲವು ದಿನಗಳಿಂದ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದರು. ‘ಗೇಮ್​ ಚೇಂಜರ್​’ ಸಿನಿಮಾದ ಶೂಟಿಂಗ್​ ಮೈಸೂರಿನಲ್ಲಿ ನಡೆಯುತ್ತಿದೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಸಲುವಾಗಿ ಅವರು ಸಣ್ಣ ಬ್ರೇಕ್​ ಪಡೆದುಕೊಂಡಿದ್ದರು. ನವೆಂಬರ್​ 30ರಂದು ಮತದಾನ ಮಾಡಿದ ಬಳಿಕ ಅವರು ಮೈಸೂರಿಗೆ ವಾಪಸಾಗಿದ್ದರು.

ಇದೀಗ ರಾಮ್‌ಚರಣ್‌ ಅವರು ಚಿತ್ರತಂಡದೊಂದಿಗೆ ದೇವಾಲಯಕ್ಕೆ ಆಗಮಿಸಿ ನಾಡಿನ ಅಧಿದೇವತೆ ದರ್ಶನ ಪಡೆದಿದ್ದಾರೆ. ಮಾರ್ಚ್‌ 27ರ ಬೆಳಗ್ಗೆ RC 15 ಗೇಮ್ ಚೇಂಜರ್‌ ಎಂದು ಶಿರ್ಷಿಕೆ ಅನಾವರಣ ಮಾಡಿತ್ತಿ. ಚಿತ್ರತಂಡ ಟೈಟಲ್‌ ಟೀಸರ್‌ ಕೂಡ ಹಂಚಿಕೊಂಡಿತ್ತು. 2019 ರಲ್ಲಿ ಬಿಡುಗಡೆಯಾದ ವಿನಯ ವಿಧೇಯ ರಾಮ ಚಿತ್ರದ ನಂತರ ರಾಮ್ ಚರಣ್ ಮತ್ತು ಕಿಯಾರಾ ಆಡ್ವಾಣಿ ಈ ಸಿನಿಮಾದಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ.

ಜಯರಾಮ್, ಅಂಜಲಿ ಸುನೀಲ್, ಶ್ರೀಕಾಂತ್, ನವೀನ್ ಚಂದ್ರ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಎಸ್ ಥಮನ್ ಚಿತ್ರದ ಹಾಡುಗಳು ಮತ್ತು ಹಿನ್ನೆಲೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ತಿರು ಮತ್ತು ಆರ್.ರತ್ನವೇಲು ಛಾಯಾಗ್ರಹಣ, ಶಮೀರ್ ಮಹಮ್ಮದ್ ಸಂಕಲನ ಚಿತ್ರಕ್ಕಿದೆ.ಈ ಪ್ರಾಜೆಕ್ಟ್ ಅನ್ನು ಪ್ಯಾನ್-ಇಂಡಿಯಾ ಬಿಡುಗಡೆಗಾಗಿ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲ್ ರಾಜು ಮತ್ತು ಶಿರೀಶ್ ಗಾರು ಜಂಟಿಯಾಗಿ ನಿರ್ಮಿಸಿದ್ದಾರೆ. ಗೇಮ್ ಚೇಂಜರ್ ತೆಲುಗು, ತಮಿಳು ಮತ್ತು ಹಿಂದಿ ಮೂರು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Ram Charan: ಈಜುಕೊಳದಲ್ಲಿ ರಾಮ್‌ಚರಣ್‌ ಮಗಳ ಪ್ರತಿಬಿಂಬ; ಇಟಲಿಯಲ್ಲಿದೆ ಮೆಗಾ ಕುಟುಂಬ!

ಬುಚ್ಚಿ ಬಾಬು ಸನಾ ಜತೆ ಕೈ ಜೋಡಿಸಿದ ರಾಮ್‌ಚರಣ್‌

ನಟ ರಾಮ್ ಚರಣ್ (Ram Charan) ಅವರ ಮುಂದಿನ ಚಿತ್ರ ಸೂಪರ್ ಹಿಟ್ ‘ಉಪ್ಪೆನ’ ಸಿನಿಮಾ ನೀಡಿದ್ದ ನಿರ್ದೇಶಕ (Uppena director Buchi Babu Sana) ಬುಚ್ಚಿ ಬಾಬು ಸನಾ(Buchi Babu Sana) ಅವರೊಂದಿಗೆ ಎಂಬುದು ವರದಿಯಾಗಿದೆ. ಮುಂದಿನ ವರ್ಷ ಜನವರಿಯಲ್ಲಿ ಬುಚ್ಚಿ ಬಾಬು ಸನಾ ಮತ್ತು ರಾಮ್ ಚರಣ್ ತಮ್ಮ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸುವ ನಿರೀಕ್ಷೆಯಿದೆ. ಚಿತ್ರದ ತಾರಾಬಳಗಕ್ಕೆ ಸಂಬಂಧಿಸಿದಂತೆ ಇನ್ನಷ್ಟು ರೋಚಕ (Ram Charan and Vijay Sethupathi) ಸುದ್ದಿ ಹೊರಬೀಳುತ್ತಿದೆ. ಚಿತ್ರದಲ್ಲಿ ವಿಜಯ್ ಸೇತುಪತಿ ವಿಲನ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ವಿಜಯ್ ಸೇತುಪತಿ ಈಗಾಗಲೇ ದೇಶದ ಪ್ರಮುಖ ಸ್ಟಾರ್ ನಟರ ಎದುರು (Ramcharan upcoming project) ಖಳನಾಗಿ ಅಬ್ಬರಿಸಿದ್ದಾರೆ. ದಳಪತಿ ವಿಜಯ್‌ನಿಂದ ಶಾರುಖ್ ಖಾನ್, ಕಮಲ್ ಹಾಸನ್, ರಜನಿಕಾಂತ್ ಈ ಎಲ್ಲಾ ಸೂಪರ್‌ಸ್ಟಾರ್‌ಗಳ ಜತೆಗೆ ಕೆಲಸ ಮಾಡಿದ್ದಾರೆ.

ಟಾಲಿವುಡ್‌ನಲ್ಲಿ ಹರಿದಾಡುತ್ತಿರುವ ವರದಿಗಳ ಪ್ರಕಾರ ನಾಯಕ ಮತ್ತು ಖಳನಾಯಕರಾಗಿ ರಾಮ್ ಚರಣ್ ಮತ್ತು ವಿಜಯ್ ಸೇತುಪತಿ ಅವರನ್ನು ನೋಡುವುದು ಸಕತ್ ಅನುಭವವೆ ಆಗಿದೆ. ಈ ಹೊಸ ಸಿನಿಮಾದ ಮತ್ತೊಂದು ಮಾಹಿತಿ ಎಂದರೆ ಚಿತ್ರಕ್ಕೆ ಎ ಆರ್ ರೆಹಮಾನ್ ಸಂಗೀತ ನಿರ್ದೇಶನ ಮಾಡುವ ನಿರೀಕ್ಷೆ ಇದೆ. ಸಿನಿಮಾಗೆ ಘಟಾನುಘಟಿಗಳ ದಂಡು ಒಂದಾಗುತ್ತಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸುತ್ತಿದೆ.

Continue Reading

South Cinema

Rashmika Mandanna: ಅನಿಮಲ್‌ನಲ್ಲಿ ಮಿತಿ ಮೀರಿದ ರಶ್ಮಿಕಾ ಬೋಲ್ಡ್‌ನೆಸ್‌; ಡೀಪ್ ಫೇಕ್‌ ಅನ್ನೋದಲ್ಲ ಎಂದು ಟ್ರೋಲ್‌!

Rashmika Mandanna: ರಶ್ಮಿಕಾ ಮಂದಣ್ಣ ಅವರು ಸಖತ್ ಬೋಲ್ಡ್ ಆಗಿ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾದ ಕೆಲ ಪ್ರಮುಖ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಆಗಿವೆ. ಅಷ್ಟೇ ಅಲ್ಲ ನಟಿ ಟ್ರೋಲ್‌ಗೆ ಗುರಿಯಾಗಿದ್ದಾರೆ.

VISTARANEWS.COM


on

Rashmika Mandanna On Innerwear Animal Movie Scene
Koo

ಬೆಂಗಳೂರು: ಅನಿಮಲ್ (Rashmika Mandanna) ಡಿಸೆಂಬರ್ 1ರ ಶುಕ್ರವಾರದಂದು ದೇಶಾದ್ಯಂತ ಬಿಡುಗಡೆಯಾಗಿದೆ. ಬಿಡುಗಡೆಯಾದ ಮೊದಲನ ದಿನವೇ ಸಖತ್‌ ಕಲೆಕ್ಷನ್‌ ಮಾಡಿದೆ ಚಿತ್ರತಂಡ. ಆದರೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಚರ್ಚೆಯಲ್ಲಿರುವುದು ರಶ್ಮಿಕಾ ಮಂದಣ್ಣ. ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಸಿನಿಮಾದಲ್ಲಿ ಸಾಕಷ್ಟು ಬೋಲ್ಡ್ ದೃಶ್ಯಗಳು ಇರುತ್ತವೆ. ರಶ್ಮಿಕಾ ಮಂದಣ್ಣ ಅವರು ಸಖತ್ ಬೋಲ್ಡ್ ಆಗಿ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾದ ಕೆಲ ಪ್ರಮುಖ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಆಗಿವೆ. ಅಷ್ಟೇ ಅಲ್ಲ ನಟಿ ಟ್ರೋಲ್‌ಗೆ ಗುರಿಯಾಗಿದ್ದಾರೆ.

‘ಅನಿಮಲ್’ ಸಿನಿಮಾದಲ್ಲಿ ರಶ್ಮಿಕಾ ಅವರು ರಣಬಿರ್ ಕಪೂರ್ ಅವರ ಪತ್ನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಪತಿಯ ಎದುರು ಬಟ್ಟೆ ಬಿಚ್ಚಿ ನಿಂತಿದ್ದಾರೆ. ಈ ವಾರದ ಆರಂಭದಲ್ಲಿ, ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ ಎ ಪ್ರಮಾಣಪತ್ರವನ್ನು ಸಿನಿಮಾಗೆ ನೀಡಿತ್ತು. ಕೆಲವು ಬದಲಾವಣೆಗಳನ್ನು ಮಾಡಲು ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರಿಗೆ ಸೂಚಿಸಿತ್ತು ಎಂದು ವರಿಯಾಗಿದೆ. ಅದರಲ್ಲಿಯೂ ಇಂಟಿಮೇಟ್ ದೃಶ್ಯಗಳನ್ನು ಕಡಿಮೆ ಮಾಡಬೇಕು ಎಂದು ಹೇಳಿತ್ತು ಎನ್ನಲಾಗಿದೆ.

ಸಿನಿಮಾ ಪ್ರೇಕ್ಷಕರಿಂದ ಅಪಾರ ಪ್ರೀತಿಯನ್ನು ಪಡೆಯುತ್ತಿದೆ. ಬಿಡುಗಡೆಯಾದಾಗಿನಿಂದ ಬಾಕ್ಸ್ ಆಫೀಸ್‌ನಲ್ಲಿ ಹಲವು ದಾಖಲೆಗಳನ್ನು ಮುರಿಯುತ್ತಿದೆ. ಅಂದಹಾಗೆ, ಚಿತ್ರ ಬಿಡುಗಡೆಯಾಗುತ್ತಿದ್ದಂತೆ ಸಿನಿಮಾ ಎರಡನೇ ಭಾಗದಲ್ಲಿ ಬರಲಿದೆ ಎಂಬ ವದಂತಿಗಳು ಶುರುವಾಗಿವೆ. ಅಭಿಮಾನಿಗಳು ಈ ಬಗ್ಗೆ ಪೋಸ್ಟ್‌ ಹಾಕಿಕೊಂಡಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಟ್ರೆಂಡಿಂಗ್‌ ಆಗಿದೆ.ಸಿನಿಮಾ ಆರಂಭಿಕ ಅಂದಾಜಿನ ಪ್ರಕಾರ ಭಾರತದಲ್ಲಿ ಒಟ್ಟೂ ಎಲ್ಲಾ ಭಾಷೆಗಳಲ್ಲಿ 61 ಕೋಟಿ ರೂಪಾಯಿ ಗಳಿಸಿದೆ. ಹಿಂದಿ ಬೆಲ್ಟ್‌ಗಳಲ್ಲಿ 50.50 ಕೋಟಿ ರೂ. ಕಲೆಕ್ಷನ್ ಮಾಡಿದ್ದರೆ, ಚಿತ್ರದ ತೆಲುಗು ಆವೃತ್ತಿಯೂ 10 ಕೋಟಿ ರೂ. ಗಳಿಸಿದೆ. ಇದರೊಂದಿಗೆ ಅನಿಮಲ್ ಸಿನಿಮಾ ಮೂಲಕ ರಣಬೀರ್ ಕಪೂರ್ ಮತ್ತೊಮ್ಮೆ ದೊಡ್ಡ ಓಪನರ್ ಆಗಿ ಹೊರಹೊಮ್ಮಿದ್ದಾರೆ. ಬ್ರಹ್ಮಾಸ್ತ್ರ ಮೊದಲ ಭಾಗದ ಮೊದಲನೇ ದಿನ ಆರಂಭಿಕ ದಿನದಲ್ಲಿ 36 ಕೋಟಿ ಗಳಿಸಿತ್ತು.

ಇದನ್ನೂ ಓದಿ: Rashmika Mandanna: ರಶ್ಮಿಕಾ- ವಿಜಯ್‌ ಟ್ವಿನ್ನಿಂಗ್‌; ತೆಲಂಗಾಣ ಎಲೆಕ್ಷನ್‌ನಲ್ಲಿ ಸಿಕ್ಕಿಬಿದ್ದ ನಟ!

ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಅನಿಮಲ್ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಕೂಡ ನಾಯಕಿಯಾಗಿದ್ದಾರೆ. ಬಾಲಿವುಡ್‌ ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ರಣಬೀರ್ ಕಪೂರ್‌ ನಟನೆಯ ಅನಿಮಲ್‌ ಕೂಡ ಒಂದು. ಇತ್ತೀಚೆಗೆ ಈ ಸಿನಿಮಾದ ಟೀಸರ್‌ ಬಿಡುಗಡೆಯಾಗಿ ಭಾರಿ ಸದ್ದು ಮಾಡಿತ್ತು. ಜತೆಗೆ ನಟಿ ರಶ್ಮಿಕಾ ಮಂದಣ್ಣ ಕ್ಯಾರೆಕ್ಟರ್‌ ಪೋಸ್ಟರ್‌ ಕೂಡ ರಿಲೀಸ್‌ ಆಗಿತ್ತು. ತೆಲುಗಿನ ʼಅರ್ಜುನ್‌ ರೆಡ್ಡಿʼ, ಹಿಂದಿಯ ʼಕಬೀರ್‌ ಸಿಂಗ್‌ʼ ಮುಂತಾದ ಚಿತ್ರಗಳನ್ನು ನಿರ್ದೇಶಿಸಿ ಗೆದ್ದ ಸಂದೀಪ್‌ ರೆಡ್ಡಿ ನಿರ್ದೇಶನವಿದೆ. ’ಕಬೀರ್ ಸಿಂಗ್’ ನಂತರ ‘ಅನಿಮಲ್’ ಸಂದೀಪ್ ರೆಡ್ಡಿ ವಂಗಾ ಅವರ ಎರಡನೇ ಬಾಲಿವುಡ್ ಚಿತ್ರವಾಗಿದೆ.

Continue Reading

South Cinema

Kavya Gowda: ʻಮೀರಾ ಮಾಧವʼ ಧಾರಾವಾಹಿ ಖ್ಯಾತಿಯ ಕಾವ್ಯ ಗೌಡ ಬೇಬಿ ಬಂಪ್‌ ಫೋಟೊಗಳು ವೈರಲ್‌!

Kavya Gowda: 2024ರಲ್ಲಿ ಮಗು ಜನಿಸಲಿದೆ ಎಂದು ಕಾವ್ಯ ಗೌಡ ಅವರು ಹೇಳಿಕೊಂಡಿದ್ದಾರೆ. ಬೇಬಿ ಬಂಪ್‌ ಫೋಟೊಗಳನ್ನು ನಟಿ ಹಂಚಿಕೊಂಡಿದ್ದು, ಅವರ ಫ್ಯಾನ್ಸ್‌ ಶುಭ ಹಾರೈಸುತ್ತಿದ್ದಾರೆ.

VISTARANEWS.COM


on

Kavya Gowda of Meera Madhav serial fame baby bump photos are viral
Koo
Kavya Gowda

ರಾಧಾ ರಮಣ (Radha Ramana), ಮೀರಾ ಮಾಧವ, ಶುಭವಿವಾಹ ಧಾರಾವಾಹಿಗಳ ಮೂಲಕ ಮನೆಮಾತಾಗಿದ್ದ ನಟಿ ಕಾವ್ಯ ಗೌಡ ಆ್ಯನಿವರ್ಸರಿ ದಿನವೇ ಅಭಿಮಾನಿಗಳ ಜತೆ ಗುಡ್​ನ್ಯೂಸ್ ಹಂಚಿಕೊಂಡಿದ್ದಾರೆ.

Kavya Gowda

2024ರಲ್ಲಿ ಮಗು ಜನಿಸಲಿದೆ ಎಂದು ಕಾವ್ಯ ಗೌಡ ಅವರು ಹೇಳಿಕೊಂಡಿದ್ದಾರೆ. ಬೇಬಿ ಬಂಪ್‌ ಫೋಟೊಗಳನ್ನು ನಟಿ ಹಂಚಿಕೊಂಡಿದ್ದು, ಅವರ ಫ್ಯಾನ್ಸ್‌ ಶುಭ ಹಾರೈಸುತ್ತಿದ್ದಾರೆ.

Kavya Gowda

ಕಾವ್ಯ ಹಾಗೂ ಸೋಮಶೇಖರ್ ಅವರು 2021ರ ಡಿಸೆಂಬರ್ 2ರಂದು ಮದುವೆ ಆದರು. ಮದುವೆಯ ನಂತರ ನಟನೆಯಿಂದ ಬ್ರೇಕ್ ತೆಗೆದುಕೊಂಡು ಜ್ಯುವೆಲ್ಲರಿ ಡಿಸೈನರ್ ಆಗಿ ಕಾವ್ಯ ಗುರುತಿಸಿಕೊಂಡಿದ್ದಾರೆ.

Kavya Gowda

‘ರಾಧಾ ರಮಣ’ ಧಾರಾವಾಹಿಯಲ್ಲಿ ರಾಧಾ ಆಗಿ ಕಾಣಿಸಿಕೊಂಡರು. ‘ಗಾಂಧಾರಿ’ ಧಾರಾವಾಹಿಯಲ್ಲೂ ಕಾವ್ಯ ಗೌಡ ಬಣ್ಣ ಹಚ್ಚಿದ್ದಾರೆ.ಕಿರುತೆರೆ ಅಲ್ಲದೇ ನಟಿ ʻಬಕಾಸುರʼ ಸಿನಿಮಾದಲ್ಲಿಯೂ ಬಣ್ಣ ಹಚ್ಚಿದ್ದರು. 

Kavya Gowda

ಇದೀಗ ನಟಿಯ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ.

Continue Reading
Advertisement
sadghuru with students
ಅಂಕಣ6 mins ago

Prerane Column : ವಿದ್ಯಾಭ್ಯಾಸ ಎಂದರೆ ದುಡ್ಡು ಮಾಡುವ ದಂಧೆಯ ಅಡಿಪಾಯವೇ?

ಕರ್ನಾಟಕ20 mins ago

ವಿಜಯಪುರ ಗೋದಾಮು ದುರಂತ: ಮೃತರ ಸಂಖ್ಯೆ 7ಕ್ಕೆ, ಇನ್ನೂ ನಾಲ್ಕು ಶವ ಸಿಕ್ಕಿಲ್ಲ

cm siddaramaih respect captain pranjal
ಕರ್ನಾಟಕ53 mins ago

CM Siddaramaiah: ಹುತಾತ್ಮ ಯೋಧ ಪ್ರಾಂಜಲ್‌ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 50 ಲಕ್ಷ ರೂ. ಪರಿಹಾರ

Canara Bank Ammembala Subbarao Pai
ಅಂಕಣ1 hour ago

Raja Marga Column: ಹಿಡಿಯಕ್ಕಿ ಸಂಗ್ರಹಿಸಿ ಕೆನರಾ ಬ್ಯಾಂಕ್ ಕಟ್ಟಿದ ಅಮ್ಮೆಂಬಳ ಸುಬ್ಬರಾವ್ ಪೈ

CBSE Board Exam 2024 and many more changes proposed implemented in this year
ದೇಶ1 hour ago

ಸಿಬಿಎಸ್‌ಇ ಬೋರ್ಡ್‌ ಎಕ್ಸಾಂಗೆ ಘೋಷಿಸಿದ ಪ್ರಮುಖ ಬದಲಾವಣೆಗಳೇನು?

Saurav Gangly
ಕ್ರಿಕೆಟ್2 hours ago

Virat Kohli : ಕೊಹ್ಲಿಯನ್ನು ನಾಯಕತ್ವದಿಂದ ಇಳಿಸಿದ್ದಕ್ಕೆ ಕಾರಣ ತಿಳಿಸಿದ ಸೌರವ್​ ಗಂಗೂಲಿ

Physical Education Teacher
ಉದ್ಯೋಗ2 hours ago

Teachers Recruitment : ಪ್ರಾಥಮಿಕ ಶಾಲೆಯಲ್ಲಿ 2120 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ತೀರ್ಮಾನ

sufi
ಅಂಕಣ2 hours ago

ನನ್ನ ದೇಶ ನನ್ನ ದನಿ ಅಂಕಣ: ಸಯ್ಯಿದ್ ರಿಜ್ವಿ ಸ್ವತಃ ಹೇಳಿದ ಸೂಫಿಗಳ ನಿಜ ಕಥನ

Rain in Karnataka woman listening to music with an umbrella
ಕರ್ನಾಟಕ2 hours ago

Karnataka Weather : ಇಂದು – ನಾಳೆ ಬೆಂಗಳೂರು ಸೇರಿ ದಕ್ಷಿಣ ಒಳನಾಡಲ್ಲಿ ಭಾರಿ ಮಳೆ; ಇದು ಮಿಚುಂಗ್ ಎಫೆಕ್ಟ್‌

Congress party directed kamal nath to resign Madhya Pradesh Congress president post
ದೇಶ2 hours ago

ಎಂಪಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಮಲ್ ನಾಥ್‌ಗೆ ಸೂಚನೆ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ4 hours ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ1 day ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ2 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ2 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ3 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ4 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ4 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ5 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ5 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

ಟ್ರೆಂಡಿಂಗ್‌