Saif Ali Khan: ʻದೇವರʼ ಶೂಟ್‌ ವೇಳೆ ಅಪಘಾತ; ಸುಮ್ಮನೆ ಇದ್ದಿದ್ದರೆ ಕೈ ಕಳೆದುಕೊಳ್ಳುತ್ತಿದ್ದೆ ಎಂದ ಸೈಫ್ ಅಲಿಖಾನ್ - Vistara News

South Cinema

Saif Ali Khan: ʻದೇವರʼ ಶೂಟ್‌ ವೇಳೆ ಅಪಘಾತ; ಸುಮ್ಮನೆ ಇದ್ದಿದ್ದರೆ ಕೈ ಕಳೆದುಕೊಳ್ಳುತ್ತಿದ್ದೆ ಎಂದ ಸೈಫ್ ಅಲಿಖಾನ್

Saif Ali Khan: ಆಕ್ಷನ್ ಸೀಕ್ವೆನ್ಸ್ ಪ್ರದರ್ಶಿಸುತ್ತಿರುವಾಗ ನಟನ ಮೊಣಕಾಲಿಗೆ ಗಂಭೀರ ಗಾಯವಾಗಿ, ಭುಜದ ಮೂಳೆ ಕೂಡ ಮುರಿದಿತ್ತು ಎಂದು ಹೇಳಲಾಗಿತ್ತು. ಕೈಗೆ ಮಾತ್ರ ಪೆಟ್ಟಾಗಿದ್ದು, ಅದಕ್ಕೆ ಚಿಕಿತ್ಸೆ ಪಡೆದಿದ್ದಾರೆ. ಉಳಿದಂತೆ ಭುಜದ ಮೂಳೆಗೆ ಯಾವುದೇ ಸಮಸ್ಯೆ ಆಗಿಲ್ಲ ಎಂದು ವರದಿಯಾಗಿದೆ.

VISTARANEWS.COM


on

Saif Ali Khan Discharged After Tricep Surgery devara
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಮುಂಬೈ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಾಗಿದ್ದ ಸೈಫ್ ಅಲಿ ಖಾನ್ (Saif Ali Khan) ಮಂಗಳವಾರ (ಜ.23)ರಂದು ಡಿಸ್ಚಾರ್ಜ್ ಆಗಿದ್ದಾರೆ. ಪತ್ನಿ ಕರೀನಾ ಕಪೂರ್ ಜತೆ ಮನೆಗೆ ಮರಳಿದ್ದಾರೆ. ʻದೇವರʼ ಸಿನಿಮಾದ ಶೂಟಿಂಗ್ ವೇಳೆ ಅಪಘಾತವಾಗಿತ್ತು. ನಂತರದ ದಿನಗಳಲ್ಲಿ ಕೈ ನೋವು ಕಾಣಿಸಿಕೊಂಡಿದ್ದರಿಂದ ಸೈಫ್ ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ವೇಳೆ ಅವರು ಸುಮ್ಮನೆ ಇದ್ದಿದ್ದರೆ ಕೈ ಕಳೆದುಕೊಳ್ಳುವಂತಹ ಸ್ಥಿತಿ ನಿರ್ಮಾಣವಾಗುತ್ತಿತ್ತು ಎಂದಿದ್ದಾರೆ.

ಆಕ್ಷನ್ ಸೀಕ್ವೆನ್ಸ್ ಪ್ರದರ್ಶಿಸುತ್ತಿರುವಾಗ ನಟನ ಮೊಣಕಾಲಿಗೆ ಗಂಭೀರ ಗಾಯವಾಗಿ, ಭುಜದ ಮೂಳೆ ಕೂಡ ಮುರಿದಿತ್ತು ಎಂದು ಹೇಳಲಾಗಿತ್ತು. ಕೈಗೆ ಮಾತ್ರ ಪೆಟ್ಟಾಗಿದ್ದು, ಅದಕ್ಕೆ ಚಿಕಿತ್ಸೆ ಪಡೆದಿದ್ದಾರೆ. ಉಳಿದಂತೆ ಭುಜದ ಮೂಳೆಗೆ ಯಾವುದೇ ಸಮಸ್ಯೆ ಆಗಿಲ್ಲ ಎಂದು ವರದಿಯಾಗಿದೆ. ಸೈಫ್ ಅಲಿ ಖಾನ್ ಅವರು ತಮ್ಮ ಆರೋಗ್ಯದ ಬಗ್ಗೆ ಮಾತನಾಡಿ, “ಈ ಗಾಯ ಮತ್ತು ನಂತರದ ಶಸ್ತ್ರಚಿಕಿತ್ಸೆಯು ಕಣ್ಣೀರಿನ ಒಂದು ಭಾಗವಾಗಿದೆ. ಕಾಳಜಿಗಾಗಿ ಎಲ್ಲಾ ಹಿತೈಷಿಗಳಿಗೆ ಧನ್ಯವಾದಗಳುʼʼಎಂದು ಹೇಳಿಕೊಂಡಿದ್ದರು.

ಇದನ್ನೂ ಓದಿ: Saif Ali Khan: ನಟಿ ಕರೀನಾ ಕಪೂರ್ ಅತ್ತೆಗೆ ಕ್ಯಾನ್ಸರ್

ʻದೇವರʼ ಚಿತ್ರತಂಡ ಕೂಡ ಮಂಗಳವಾರ ಮಧ್ಯಾಹ್ನ ನಟ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಟ್ವೀಟ್‌ ಮೂಲಕ ಹಾರೈಸಿದರು. “ನೀವು ಶೀಘ್ರವಾಗಿ ಚೇತರಿಸಿಕೊಳ್ಳಿ ಎಂದು ಹಾರೈಸುತ್ತೇನೆ, ಸೈಫ್ ಸರ್! ಬೇಗ ಗುಣಮುಖರಾಗಿʼʼಎಂದು ಬರೆದುಕೊಂಡಿದ್ದರು.

ಸೈಫ್ ಅಲಿ ಖಾನ್ ಕೊನೆಯದಾಗಿ ಓಂರಾವತ್‌ ʻಆದಿಪುರುಷʼ ಚಿತ್ರದಲ್ಲಿ ಪ್ರಭಾಸ್ ಮತ್ತು ಕೃತಿ ಸನೂನ್‌ ಜತೆ ತೆರೆ ಹಂಚಿಕೊಂಡಿದ್ದರು. ಅದಕ್ಕೂ ಮೊದಲು, ಅವರು ಹೃತಿಕ್ ರೋಷನ್ ಅವರೊಂದಿಗೆ ʻವಿಕ್ರಮ್ ವೇದಾʼದಲ್ಲಿ ಕಾಣಿಸಿಕೊಂಡರು.

ಸೈಫ್ ಚಿತ್ರದಲ್ಲಿ ʻಭೈರಾʼ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ‘ದೇವರ‘ ಒಂದು ದೊಡ್ಡ-ಬಜೆಟ್ ಕಮರ್ಷಿಯಲ್ ಆ್ಯಕ್ಷನ್ ಎಂಟರ್‌ಟೈನರ್ ಆಗಿದ್ದು, ಕೊರಟಾಲ ಶಿವ ನಿರ್ದೇಶಿಸಲಿದ್ದಾರೆ.ಜ್ಯೂನಿಯರ್‌ ಎನ್‌ಟಿಆರ್‌, ಸೈಫ್ ಅಲಿ ಖಾನ್ ಮತ್ತು ಜಾನ್ವಿ ಕಪೂರ್ ಪ್ರಮುಖ ಪಾತ್ರಗಳಲ್ಲಿದ್ದಾರೆ.2016ರಲ್ಲಿ ಇವರು ಜನತಾ ಗ್ಯಾರೇಜ್ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದರು. ಅದರಲ್ಲಿ ಕೂಡ ಜ್ಯೂನಿಯರ್ ಎನ್​ಟಿಆರ್ ನಾಯಕನಾಗಿದ್ದರು. ಅದಾದ ಮೇಲೆ ಕೊರಟಾಲ ಶಿವ ಅವರೊಟ್ಟಿಗೆ ಜ್ಯೂ.ಎನ್​ಟಿಆರ್ ಯಾವುದೇ ಸಿನಿಮಾವನ್ನೂ ಮಾಡಿರಲಿಲ್ಲ.

ಇದನ್ನೂ ಓದಿ: Saif Ali Khan: ಜ್ಯೂನಿಯರ್‌ ಎನ್‌ಟಿಆರ್‌ `ದೇವರʼ ಸಿನಿಮಾದ ಸೈಫ್ ಅಲಿ ಖಾನ್ ಫಸ್ಟ್-ಲುಕ್ ಔಟ್‌!

ಇದೀಗ ‘ದೇವರ’ ಮೂಲಕ ಒಂದಾಗಿದ್ದಾರೆ. ದೇವರ ಸಿನಿಮಾದಲ್ಲಿ ಜ್ಯೂನಿಯರ್ ಎನ್​ಟಿಆರ್​ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿಯೂ ಇದೆ. ಅಪ್ಪ-ಮಗ ಎರಡೂ ಪಾತ್ರದಲ್ಲಿ ಇವರೇ ಅಭಿನಯ ಮಾಡಲಿದ್ದಾರಂತೆ. ಇದೊಂದು ಪಕ್ಕಾ ಆ್ಯಕ್ಷನ್​ ಚಿತ್ರದಂತೆ ಕಾಣಿಸುತ್ತಿದೆ. ಈ ಸಿನಿಮಾ 2024ರ ಏಪ್ರಿಲ್ 5ರಂದು ತೆಲುಗು, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂಗಳಲ್ಲಿ ಬಿಡುಗಡೆಯಾಗಲಿದೆ.ಯುವಸುಧಾ ಆರ್ಟ್ಸ್ ಮತ್ತು ಜ್ಯೂನಿಯರ್‌ ಎನ್‌ಟಿಆರ್‌ ಆರ್ಟ್ಸ್ ಈ ಚಿತ್ರವನ್ನು ನಿರ್ಮಿಸಿದ್ದು, ನಂದಮೂರಿ ಕಲ್ಯಾಣ್ ರಾಮ್ ಅವರು ಪ್ರಸ್ತುತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Vijayalakshmi Darshan: ಬಕೆಟ್ ಸೈಜ್​​​ ಕಪ್​​​​​ ಕಾಫಿ ಕುಡಿದ ದರ್ಶನ್ ಪತ್ನಿ! ನೆಟ್ಟಿಗರ ಪ್ರತಿಕ್ರಿಯೆ ಮಜವಾಗಿದೆ!

Vijayalakshmi Darshan: ವಿಜಯಲಕ್ಷ್ಮೀ ಅವರು ಈಗ ಕೈಯಲ್ಲಿ ಹಿಡಿಯಲಾಗದಷ್ಟು ದೊಡ್ಡದಾಗಿರುವ ಕಪ್​​ನಲ್ಲಿ ಕಾಫಿ ಸವಿದಿದ್ದಾರೆ. ಇದರ ಜತೆಗೆ ಕ್ರೋಸೆಂಟ್ (Croissant) ಕೂಡಾ ತಿಂದಿದ್ದಾರೆ. ವಿಶೇಷ ಅಂದರೆ ಈ ಕ್ರೋಸೆಂಟ್ ಎತ್ತಲು ಎರಡು ಕೈ ಕೂಡ ಸಾಕಾಗುವುದಿಲ್ಲ. ಈ ಫೋಟೊ ನೋಡಿ ನೆಟ್ಟಿಗರು ಕಾಫಿಯಿಂದ ಸ್ನಾನ ಕೂಡ ಮಾಡಬಹದು ಎಂದು ಕಮೆಂಟ್‌ ಮಾಡಿದ್ದಾರೆ.

VISTARANEWS.COM


on

Vijayalakshmi Darshan relishes a generous cup of coffee
Koo

ಬೆಂಗಳೂರು: ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಆಗಾಗ ವಿವಾದಾತ್ಮಕ ಪೋಸ್ಟ್‌ಗಳಿಗೆ ಸುದ್ದಿಯಾಗುತ್ತಲೇ ಇರುತ್ತಾರೆ. ಜತೆಗೆ ಎಂಜಾಯ್‌ ಮಾಡುತ್ತಿರುವ, ವೆಕೇಶನ್‌ ಮೂಡ್‌ನಲ್ಲಿರುವ ಫೋಟೊಗಳನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ಫುಡ್‌ವನ್ನು ತುಂಬ ಇಷ್ಟಪಡುವ ವಿಜಯಲಕ್ಷ್ಮೀ ಅವರು ಈಗ ಕೈಯಲ್ಲಿ ಹಿಡಿಯಲಾಗದಷ್ಟು ದೊಡ್ಡದಾಗಿರುವ ಕಪ್​​ನಲ್ಲಿ ಕಾಫಿ ಸವಿದಿದ್ದಾರೆ. ಇದರ ಜತೆಗೆ ಕ್ರೋಸೆಂಟ್ (Croissant) ಕೂಡಾ ತಿಂದಿದ್ದಾರೆ. ವಿಶೇಷ ಅಂದರೆ ಈ ಕ್ರೋಸೆಂಟ್ ಎತ್ತಲು ಎರಡು ಕೈ ಕೂಡ ಸಾಕಾಗುವುದಿಲ್ಲ. ಈ ಫೋಟೊ ನೋಡಿ ನೆಟ್ಟಿಗರು ಕಾಫಿಯಿಂದ ಸ್ನಾನ ಕೂಡ ಮಾಡಬಹುದು ಎಂದು ಕಮೆಂಟ್‌ ಮಾಡಿದ್ದಾರೆ!

ವಿಜಯಲಕ್ಷ್ಮಿ ದರ್ಶನ್ ಅವರ ಈ ಬಕೆಟ್ ಸೈಜ್ ಕಪ್ ಕಾಫಿ ಮತ್ತು ಬಿಗ್ ಸೈಜ್ ಕ್ರೋಸೆಂಟ್ ಫೋಟೊ ವೈರಲ್‌ ಆಗಿದೆ. ʻಒಂದು ಕಪ್ ಕಾಫಿ ತಗೊಂಡರೆ, ಒಂದು ತಿಂಗಳು ಚಿಂತೆ ಇಲ್ಲʼ ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ಮತ್ತೊಬ್ಬರುʻ ಕಾಫಿ ಎಷ್ಟು ಬೇಕು ನಿಮಗೆ ಕುಡಿಯಿರಿ. ಹಾಗೆ ನಮ್ಮ ಬಾಸ್​ಗೂ ಸ್ವಲ್ಪ ಉಳಿಸಿʼ ಎಂಬ ಮನವಿಯನ್ನೂ ಮಾಡಿಕೊಂಡಿದ್ದಾರೆ.

ವಿಜಯಲಕ್ಷ್ಮಿ ಅವರ ಜತೆ ವಿನೀಶ್ ಮತ್ತು ದರ್ಶನ್ ಅವರು ಕೂಡ ಈ ಫೋಟೊದಲ್ಲಿ ಇದ್ದಿದ್ದರೆ ಆಗ ಪರ್ಫೆಕ್ಟ್ ಫ್ಯಾಮಿಲಿ ಫೋಟೊ ಆಗ್ತಿತ್ತು ಅನ್ನುವ ಅಭಿಪ್ರಾಯವನ್ನೂ ಕೂಡ ಇದೇ ಸಮಯದಲ್ಲಿ ಅನೇಕರು ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: Darshan Thoogudeepa: ದರ್ಶನ್‌ ಜತೆಗಿನ ಫೋಟೊ ಹಂಚಿಕೊಂಡ ಪವಿತ್ರಗೌಡ; ವಿಜಯಲಕ್ಷ್ಮಿ ಕೆಂಡಾಮಂಡಲ!

ಪಾರ್ಟಿಯಲ್ಲಿ ಪತ್ನಿ ಜತೆ ಕುಣಿದು ಕುಪ್ಪಳಿಸಿದ್ದ ʻಡಿ ಬಾಸ್‌ʼ

ಚಾಲೆಂಜಿಂಗ್ ಸ್ಟಾರ್ ದರ್ಶನ್ (Actor Darshan) ವೈಯಕ್ತಿಕ ಜೀವನ ಆಗಾಗ ಚರ್ಚೆಯಲ್ಲಿ ಇರುತ್ತದೆ. ದರ್ಶನ್ ಜತೆ 10 ವರ್ಷಗಳಿಂದ ರಿಲೇಷನ್‌ಶಿಪ್‌ನಲ್ಲಿ ಇದ್ದೆ ಎಂದು ಪವಿತ್ರಾ ಗೌಡ ಹೇಳಿಕೆ ನೀಡಿದ್ದರು. ಇದಾದ ಬಳಿಕ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಹಾಗೂ ಪವಿತ್ರಾ ನಡುವೆ ಸೋಷಿಯಲ್‌ ಮೀಡಿಯಾದಲ್ಲಿ ವಾರ್‌ ನಡೆದೇ ಹೋಯ್ತು. ಶ್ರೀರಂಗಪಟ್ಟಣದಲ್ಲಿ ನಡೆದ ಬೆಳ್ಳಿಪರ್ವ ಕಾರ್ಯಕ್ರಮದಲ್ಲಿ ನಟ ದರ್ಶನ್ ಪರೋಕ್ಷವಾಗಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದರು. ಇದೂ ಕೂಡ ಭಾರೀ ಚರ್ಚೆ ಹುಟ್ಟು ಹಾಕಿತ್ತು. ಇದಾದ ನಂತರ ದರ್ಶನ್‌ ಅವರು ಪತ್ನಿ ವಿಜಯಲಕ್ಷ್ಮೀ ಜತೆ ಸ್ಟೆಪ್ಸ್‌ ಹಾಕಿರುವ ವಿಡಿಯೊ ವೈರಲ್‌ ಆಗಿತ್ತು.

ದರ್ಶನ್‌ ವಿರುದ್ಧ ಹಲವು ಕೇಸ್‌ಗಳು ದಾಖಲಾಗಿವೆ. ಇಷ್ಟೆಲ್ಲ ರಂಪಾಟ ನಡೆದಿದ್ದರೂ ಸ್ನೇಹಿತರ ಬರ್ತ್‌ಡೇ ಪಾರ್ಟಿಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಜತೆ ಕುಣಿದು ಕುಪ್ಪಳಿಸಿದ್ದರು. ವಿಜಯಲಕ್ಷ್ಮಿ ಜತೆ ವೇದಿಕೆ ಏರಿ ರೊಮ್ಯಾಂಟಿಕ್ ಆಗಿ ಹೆಜ್ಜೆ ಹಾಕಿದ್ದರು. ಆ ವಿಡಿಯೋ ಈಗ ವೈರಲ್ ಆಗುತ್ತಿದೆ. ʻಬಾಸ್- ಅತ್ತಿಗೆ ಡ್ಯಾನ್ಸ್ ಸೂಪರ್ʼ ಎಂದು ಅಭಿಮಾನಿಗಳು ಖುಷಿಯಾಗಿದ್ದರು.

Continue Reading

ಟಾಲಿವುಡ್

Jerusha Christopher: ಮಹೇಶ್ ಬಾಬು ಹೊಸ ಸಿನಿಮಾದಲ್ಲಿ ʻವೀರ ಮದಕರಿʼ ಬಾಲನಟಿ ನಾಯಕಿ!

Jerusha Christopher: ಮಹೇಶ್ ಬಾಬು ಹಾಗೂ ರಕ್ಷಿತ್ ಹೊಸ ಸಿನಿಮಾ ಈಗಾಗಲೇ ಅನೌನ್ಸ್ ಆಗಿದೆ. ಇದೀಗ ಹೊಸ ಸಮಾಚಾರ ಏನಂದರೆ ಈ ಚಿತ್ರದ ಮೂಲಕ ಮತ್ತೊಬ್ಬ ಯುವ ನಟಿಯನ್ನು ಲಾಂಚ್ ಮಾಡುತ್ತಿದ್ದಾರೆ ಮಹೇಶ್. ಇತ್ತೀಚೆಗಷ್ಟೇ `ಅಪರೂಪ’ ಎಂಬ ಸಿನಿಮಾ ಮೂಲಕ ಯುವ ಪ್ರತಿಭೆಗಳನ್ನು ಸ್ಯಾಂಡಲ್‌ವುಡ್‌ಗೆ ಪರಿಚಯಿಸಿದ್ದ ಅವರೀಗ (Jerusha Christopher) ಸ್ಮೈಲ್ ಗುರು ರಕ್ಷಿತ್ ಅವರನ್ನು ನಾಯಕನಾಗಿ ಕನ್ನಡ ಸಿನಿಮಾಪ್ರೇಮಿಗಳ ಎದುರು ತರುತ್ತಿದ್ದಾರೆ.

VISTARANEWS.COM


on

Jerusha Christopher In mahesh Babu Movie
Koo

ಬೆಂಗಳೂರು: ಮಹೇಶ್ ಬಾಬು ಕನ್ನಡ ಚಿತ್ರರಂಗದ ಸ್ಟಾರ್ ನಿರ್ದೇಶಕ. ʻಆಕಾಶ್ʼ, ʻಅರಸುʼ, ʻಪರಮೇಶ ಪಾನ್ ವಾಲʼ ಮುಂತಾದ ಸ್ಟಾರ್ ಸಿನಿಮಾಗಳನ್ನು ಮಾಡಿರುವ ಅವರು, ಈಗ ಮತ್ತೊಂದು ಹೊಸ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಇತ್ತೀಚೆಗಷ್ಟೇ `ಅಪರೂಪ’ ಎಂಬ ಸಿನಿಮಾ ಮೂಲಕ ಯುವ ಪ್ರತಿಭೆಗಳನ್ನು ಸ್ಯಾಂಡಲ್‌ವುಡ್‌ಗೆ ಪರಿಚಯಿಸಿದ್ದ ಅವರೀಗ (Jerusha Christopher) ಸ್ಮೈಲ್ ಗುರು ರಕ್ಷಿತ್ ಅವರನ್ನು ನಾಯಕನಾಗಿ ಕನ್ನಡ ಸಿನಿಮಾಪ್ರೇಮಿಗಳ ಎದುರು ತರುತ್ತಿದ್ದಾರೆ.

ಮಹೇಶ್ ಬಾಬು ಹಾಗೂ ರಕ್ಷಿತ್ ಹೊಸ ಸಿನಿಮಾ ಈಗಾಗಲೇ ಅನೌನ್ಸ್ ಆಗಿದೆ. ಇದೀಗ ಹೊಸ ಸಮಾಚಾರ ಏನಂದರೆ ಈ ಚಿತ್ರದ ಮೂಲಕ ಮತ್ತೊಬ್ಬ ಯುವ ನಟಿಯನ್ನು ಲಾಂಚ್ ಮಾಡುತ್ತಿದ್ದಾರೆ ಮಹೇಶ್. `ಮೆರವಣಿಗೆ’ ಸಿನಿಮಾ ಮೂಲಕ ಐಂದ್ರಿತಾ ರೇ , ಚಿರು ಸಿನಿಮಾ ಮೂಲಕ ಕೃತಿ ಕರಬಂದ, `ಅಜಿತ್ ಚಿತ್ರ’ದ ಮೂಲಕ ನಿಕ್ಕಿ ಗಲ್ರಾನಿ , ಕ್ರೇಜಿ ಬಾಯ್ ಮೂಲಕ ಆಶಿಕಾ ರಂಗನಾಥ್ ಮತ್ತು ಅಪರೂಪದ ಮೂಲಕ ಹೃತಿಕಾ ಶ್ರೀನಿವಾಸ್ ಹೀಗೆ ಹಲವಾರು ನಟಿಯರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ನಿರ್ದೇಶಕ ಮಹೇಶ್ ಬಾಬು ಇದೀಗ ಹೊಸ ಮುಖ ಜೆರುಶಾರನ್ನು ನಾಯಕಿಯಾಗಿ ಲಾಂಚ್ ಮಾಡುತ್ತಿದ್ದಾರೆ.

ಇದನ್ನೂ ಓದಿ: Rashmika Mandanna : ಮಹೇಶ್ ಬಾಬು ಫೋಟೊಗೆ ಹೋಲಿಸಿದ್ದಕ್ಕೆ ರಶ್ಮಿಕಾ ಮಂದಣ್ಣ ಕೊಟ್ಟ ರಿಯಾಕ್ಷನ್‌ ಏನು?

ಅಂದಹಾಗೇ ಜೆರುಶಾ ಕ್ಯಾಮೆರಾ ಹೊಸದೇನಲ್ಲ. ಈಗಾಗಲೇ ಸುದೀಪ್ ಅಭಿನಯದ ʻವೀರ ಮದಕರಿʼ ಚಿತ್ರದಲ್ಲಿ ಬಾಲ ಕಲಾವಿದೆಯಾಗಿ ಪ್ರೇಕ್ಷಕರ ಗಮನ ಸೆಳೆದಿದ್ದರು. ಜಾಹೀರಾತುಗಳು ಮತ್ತು ರಂಗಭೂಮಿ ಹಿನ್ನೆಲೆ ಹೊಂದಿರುವ ಜೆರುಶಾ ಇದೀಗ ಮಹೇಶ್ ಬಾಬು ನಿರ್ದೇಶನದ ಚಿತ್ರದ ಮೂಲಕ ಬೆಳ್ಳಿತೆರೆಗೆ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ. ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಳ್ಳಲು ಹೆಸರಾಗಿರುವ ಸ್ಮೈಲ್ ಗುರು ರಕ್ಷಿತ್ ಗೆ ಜೋಡಿಯಾಗಿ ಜೆರುಶಾ ಮಿಂಚಲಿದ್ದಾರೆ. ಮಹೇಶ್ ಬಾಬು ಅವರು ಪ್ರಮುಖ ಪಾತ್ರವೊಂದಕ್ಕೆ ಮತ್ತೊಬ್ಬ ಪ್ರತಿಭಾವಂತ ನಟಿ ಆಯ್ಕೆಯಲ್ಲಿ ತೊಡಗಿದ್ದು, ಅದರ ವಿವರಗಳನ್ನು ಶೀಘ್ರದಲ್ಲೇ ಅನಾವರಣಗೊಳಿಸಲಾಗುವುದು.

ಮಹೇಶ್ ಬಾಬು ಹೊಸ ಕಥೆಗೆ ಸದ್ಯ ಶೀರ್ಷಿಕೆ ಫೈನಲ್ ಆಗಿಲ್ಲ. ಈ ಚಿತ್ರಕ್ಕೆ ಚೇತನ್ ಮತ್ತು ಅನುರಾಗ್ ಬಂಡವಾಳ ಹೂಡಲಿದ್ದಾರೆ. ಚಿತ್ರಕ್ಕೆ ಅನೂಪ್ ಸೀಳಿನ್ ಅವರ ಸಂಗೀತ ಸಂಯೋಜನೆ ಮತ್ತು ಸತ್ಯ ಛಾಯಾಗ್ರಾಹಣವಿರಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರಮುಖ ಸ್ಥಳಗಳಲ್ಲಿ ಮೇ ತಿಂಗಳಿನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

Continue Reading

ಮಾಲಿವುಡ್

Actor Mohanlal: 56ನೇ ಬಾರಿಗೆ ಮೋಹನ್ ಲಾಲ್ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರೆ ಈ ಫೇಮಸ್‌ ನಟಿ!

Actor Mohanlal: ನಟಿ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಈ ಬಗ್ಗೆ ಶೇರ್‌ ಮಾಡಿ ʻʻನಾಲ್ಕು ವರ್ಷಗಳು ನಾಲ್ಕು ನಿಮಿಷಗಳಂತೆ ಕಳೆದಿವೆ. L360”ಎಂದು ಬರೆದುಕೊಂಡಿದ್ದಾರೆ. ಹಲವು ದಶಕಗಳಿಂದ ನಟಿ ಶೋಬನಾ ಮಲಯಾಳಂ ಚಿತ್ರರಂಗದಲ್ಲಿ ನಟಿಸಿಕೊಂಡು ಬಂದವರು. ನಟನೆ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹಲವು ನೃತ್ಯ ಪ್ರದರ್ಶನಗಳನ್ನು ನೀಡುತ್ತ ಬರುತ್ತಿದ್ದರು.

VISTARANEWS.COM


on

Actor Mohanlal Shobana reunites L360
Koo

ಬೆಂಗಳೂರು: ಮಾಲಿವುಡ್‌ ಫ್ಯಾನ್ಸ್‌ ನಟ ಮೋಹನ್ ಲಾಲ್ (Actor Mohanlal) ಮತ್ತು ಶೋಬನಾ (Shobana) ನಡುವಿನ ಆನ್-ಸ್ಕ್ರೀನ್ ಕೆಮಿಸ್ಟ್ರಿಯನ್ನು ಇಷ್ಟಪಡುತ್ತಾರೆ. ಇದೀಗ ಈ ತಾರೆಯರು ಹಲವು ವರ್ಷಗಳ ಬ್ರೇಕ್‌ ನಂತರ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ತಾತ್ಕಾಲಿಕವಾಗಿ ಶೀರ್ಷಿಕೆ ಇಡಲಾದ L360 ಗಾಗಿ ತೆರೆಯ ಮೇಲೆ ಮತ್ತೆ ಒಂದಾಗಲು ಸಿದ್ಧರಾಗಿದ್ದಾರೆ. ʻಆಪರೇಷನ್ ಜಾವಾʼ ಖ್ಯಾತಿಯ ತರುಣ್ ಮೂರ್ತಿ ನಿರ್ದೇಶಿಸುತ್ತಿರುವ ಈ ಚಿತ್ರ ಶೀಘ್ರದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದ್ದು, ಇಬ್ಬರೂ ತಾರೆಯರು 56ನೇ ಬಾರಿಗೆ ತೆರೆಯನ್ನು ಒಟ್ಟಿಗೆ ಹಂಚಿಕೊಳ್ಳುತ್ತಿದ್ದಾರೆ.

ನಟಿ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಈ ಬಗ್ಗೆ ಶೇರ್‌ ಮಾಡಿ ʻʻನಾಲ್ಕು ವರ್ಷಗಳು ನಾಲ್ಕು ನಿಮಿಷಗಳಂತೆ ಕಳೆದಿವೆ. L360”ಎಂದು ಬರೆದುಕೊಂಡಿದ್ದಾರೆ. ಹಲವು ದಶಕಗಳಿಂದ ನಟಿ ಶೋಬನಾ ಮಲಯಾಳಂ ಚಿತ್ರರಂಗದಲ್ಲಿ ನಟಿಸಿಕೊಂಡು ಬಂದವರು. ಸಾರ್ವಜನಿಕರಿಂದ ಹೆಚ್ಚಾಗಿ ದೂರವೇ ಇರುತ್ತಿದ್ದರು. ನಟನೆ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹಲವು ನೃತ್ಯ ಪ್ರದರ್ಶನಗಳನ್ನು ನೀಡುತ್ತ ಬರುತ್ತಿದ್ದರು.

ಈ ಹಿಂದೆ, ನಟಿ ಸುರೇಶ್ ಗೋಪಿ, ಕಲ್ಯಾಣಿ ಪ್ರಿಯದರ್ಶನ್ ಮತ್ತು ದುಲ್ಕರ್ ಸಲ್ಮಾನ್ ಅವರೊಂದಿಗೆ ನಟಿಸಿದ 2020 ರ ʻವಾರಣೆ ಅವಶ್ಯಮುಂದ್ʼ ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದರು. ಅನೂಪ್ ಸತ್ಯನ್ ಅವರ ಈ ʻವಾರಣೆ ಅವಶ್ಯಮುಂದ್ʼ ಚಿತ್ರದಲ್ಲಿ ಶೋಬನಾ 7 ವರ್ಷಗಳ ನಂತರ ಮತ್ತೆ ಬಣ್ಣ ಹಚ್ಚಿದ್ದರು. ಇದೀಗ ಮೋಹನ್‌ಲಾಲ್‌ ಅವರ ಜತೆ ನಟಿಸಲಿರುವ ಸಿನಿಮಾ ಶೋಬನಾ ಅವರ 91ನೇ ಸಿನಿಮಾವಾಗಿದೆ.

ಇದನ್ನೂ ಓದಿ: Actor Mohanlal: ಮೋಹನ್‌ಲಾಲ್ ಅಭಿನಯದ ʻಮಲೈಕೋಟ್ಟೈ ವಾಲಿಬನ್ʼ ಟೀಸರ್‌ ಔಟ್‌!

ಮೋಹನ್‌ಲಾಲ್‌ ಜತೆ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

ನಂದಕಿಶೋರ್ ಅವರು ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮಾಲಿವುಡ್‌ ಸ್ಟಾರ್‌ ಮೋಹನ್ ಲಾಲ್ (Actor Mohan Lal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್​ ಆರಂಭ ಆಗಿದೆ. ಈ ಚಿತ್ರದ ಪಾತ್ರವರ್ಗ ಗಮನ ಸೆಳೆಯುತ್ತಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಅವರು ನಟ ಮೋಹನ್​ಲಾಲ್​ ಜತೆ ನಟಿಸುತ್ತಿದ್ದಾರೆ. ಮೋಹನ್​ಲಾಲ್​ ಅಭಿನಯದ ‘ವೃಷಭ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

Continue Reading

ಸಿನಿಮಾ

Kalki 2898 AD: ನಾಳೆ ಮಹತ್ವದ  ಅಪ್‌ಡೇಟ್‌ ನೀಡಲಿದೆ ಪ್ರಭಾಸ್‌ ಅಭಿನಯದ ʼಕಲ್ಕಿ 2898 ಎಡಿʼ ಚಿತ್ರತಂಡ; ಹೊಸ ರಿಲೀಸ್‌ ದಿನಾಂಕ ಘೋಷಣೆ?

Kalki 2898 AD: ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಂಡಿರುವ ʼಕಲ್ಕಿ 2898 ಎಡಿʼ ನಾಳೆ ಹೊಸ ಅಪ್‌ಡೇಟ್‌ ನೀಡಲಿದೆ. ಟಾಲಿವುಟ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ, ಅಮಿತಾಭ್‌ ಬಚ್ಚನ್‌, ಕಮಲ್‌ ಹಾಸನ್‌, ದಿಶಾ ಪಠಾಣಿ ಮತ್ತಿತರರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ. ನಾಳೆ ಸಿನಿಮಾದ ರಿಲೀಸ್‌ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.

VISTARANEWS.COM


on

Kalki 2898 AD
Koo

ಹೈದರಾಬಾದ್‌: ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ತೆಲುಗು ಚಿತ್ರ ʼಕಲ್ಕಿ 2898 ಎಡಿʼ (Kalki 2898 AD) ಸದ್ಯ ನಿರೀಕ್ಷೆ ಹುಟ್ಟು ಹಾಕಿದೆ. ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನ್ನುವ ಖ್ಯಾತಿ ಈ ಸಿನಿಮಾಕ್ಕಿದೆ. ಟಾಲಿವುಟ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ. ಇವರ ಜತೆಗೆ ಘಟಾನುಘಟಿ ಕಲಾವಿದರಾದ ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ (Amitabh Bachchan) ಮತ್ತು ಕಮಲ್‌ ಹಾಸನ್‌ (Kamal Haasan) ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಮಧ್ಯೆ ಚಿತ್ರತಂಡ ಸಿನಿಮಾದ ಬಗ್ಗೆ ಅತೀ ದೊಡ್ಡ ಅಪ್‌ಡೇಟ್‌ ನೀಡಲು ಮುಂದಾಗಿದೆ. ನಾಳೆ (ಏಪ್ರಿಲ್‌ 21)ರಂದು ʼಕಲ್ಕಿ 2898 ಎಡಿʼ ಸಿನಿಮಾ ಬಗ್ಗೆ ಮಹತ್ವದ ಮಾಹಿತಿ ಹೊರಬೀಳಲಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಭೂತ ಮತ್ತು ಭವಿಷ್ಯತ್‌ ಕಾಲದ ಕಥೆ ಹೇಳಲಿರುವ ʼಕಲ್ಕಿ 2898 ಎಡಿʼ ಚಿತ್ರಕ್ಕೆ ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ʼʼಭಾನುವಾರ ಚಿತ್ರತಂಡ ಅತ್ಯಂತ ಮಹತ್ವದ ಘೋಷಣೆ ಹೊರಡಿಸಲು ಸಿದ್ಧತೆ ನಡೆಸಿದೆ. ಅಭಿಮಾನಿಗಳು ಬಹು ದಿನಗಳಿಂದ ಕಾತುರದಿಂದ ಕಾಯುತ್ತಿರುವ ಅಪ್‌ಡೇಟ್‌ ಅನ್ನು ಚಿತ್ರತಂಡ ಹಂಚಿಕೊಳ್ಳಲಿದೆ. ಜತೆಗೆ ಸಿನಿಮಾದ ಬಿಡುಗಡೆ ದಿನಾಂಕವನ್ನೂ ಘೋಷಿಸಲಿದೆʼʼ ಎಂದು ಮೂಲಗಳು ತಿಳಿಸಿವೆ. ಚಿತ್ರದ ಪಾತ್ರದ ಕುರಿತಾದ ವಿವರವೂ ಈ ವೇಳೆ ಬಹಿರಂಗಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಹಿಂದೆ 2024ರ ಮೇ 9ರಂದು ಚಿತ್ರ ತೆರೆ ಕಾಣಲಿದೆ ಎನ್ನಲಾಗಿತ್ತು. ಆದರೆ ಎಲ್ಲ ಕೆಲಸ ಪೂರ್ಣಗೊಂಡಿಲ್ಲದ ಕಾರಣ ರಿಲೀಸ್‌ ದಿನಾಂಕವನ್ನು ಮುಂದೂಡಲಾಗಿದೆ ಎಂದು ಕೆಲವು ದಿನಗಳ ಹಿಂದೆ ವರದಿಗಳು ತಿಳಿಸಿದ್ದವು. ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಾಗ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು.

ವೈಜಯಂತಿ ಮೂವೀಸ್‌ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಕೆಲವು ದಿನಗಳ ಹಿಂದೆ ದೀಪಿಕಾ ಪಡುಕೋಣೆ, ಪ್ರಭಾಸ್‌, ಅಮಿತಾಬ್‌ ಬಚ್ಚನ್‌ ಅವರ ಫಸ್ಟ್‌ ಲುಕ್‌ ಅನ್ನು ರಿಲೀಸ್‌ ಮಾಡಲಾಗಿತ್ತು. ಇದು ಚಿತ್ರಪ್ರೇಮಿಗಳ ಗಮನ ಸೆಳೆದಿತ್ತು. ಜತೆಗೆ ಶಿವರಾತ್ರಿಯಂದು ಪ್ರಭಾಸ್‌ ಅವರ ಪಾತ್ರ ಹೆಸರನ್ನೂ ರಿವೀಲ್‌ ಮಾಡಲಾಗಿತ್ತು. ಈ ಸಿನಿಮಾದಲ್ಲಿ ಪ್ರಭಾಸ್‌ ಭೈರವನಾಗಿ ಮಿಂಚಲಿದ್ದು, ಬಾಲಿವುಡ್‌ ನಟಿ ದಿಶಾ ಪಠಾಣಿ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ: Kalki 2898 AD:  ಪ್ರಭಾಸ್, ದೀಪಿಕಾ, ಅಮಿತಾಭ್‌ ಮುಖ್ಯಭೂಮಿಕೆಯ ʻಕಲ್ಕಿ 2898 ADʼ ರಿಲೀಸ್‌ ಡೇಟ್‌ ಅನೌನ್ಸ್‌!

ದುಬಾರಿ ಸಿನಿಮಾ

ʼಕಲ್ಕಿ 2898 ಎಡಿʼ ಈ ವರ್ಷದ ಅತೀ ಹೆಚ್ಚಿನ ಬಜೆಟ್‌ ಹೊಂದಿರುವ ಚಿತ್ರ ಎನಿಸಿಕೊಳ್ಳಲಿದೆ. ಈ ಚಿತ್ರದ ಬಜೆಟ್‌ ಬರೋಬ್ಬರಿ 600 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಅಂದರೆ ಇತ್ತೀಚಿನ ಬಹು ಕೋಟಿ ರೂ. ಬಜೆಟ್‌ನ ʼಸಲಾರ್‌ʼ (270 ಕೋಟಿ ರೂ.), ʼಅನಿಮಲ್‌ʼ (100 ಕೋಟಿ ರೂ.) ಮತ್ತು ʼಡಂಕಿʼ (140 ಕೋಟಿ ರೂ.) ಈ ಮೂರು ಚಿತ್ರಗಳ ಒಟ್ಟು ಬಜೆಟ್‌ಗಿಂತ ಜಾಸ್ತಿ. ಅಲ್ಲದೆ 2022ರಲ್ಲಿ ತೆರೆಕಂಡ ಬಾಲಿವುಡ್‌ ಚಿತ್ರ ʼಬಹ್ಮಾಸ್ತ್ರʼಕ್ಕಿಂತಲೂ (400 ಕೋಟಿ ರೂ.) ʼಕಲ್ಕಿʼಯ ಬಜೆಟ್‌ ಅಧಿಕ. ಹೀಗಾಗಿಯೇ ಈ ಚಿತ್ರದ ಮೇಲೆ ನಿರೀಕ್ಷೆ ಗರಿಗೆದರಿದೆ.

Continue Reading
Advertisement
Pralhad Joshi
ಕರ್ನಾಟಕ1 hour ago

Pralhad Joshi: ಯುಪಿಎ ಕಾಲದಲ್ಲಿ ಸತ್ತ ಉಗ್ರನಿಗಾಗಿ ಸೋನಿಯಾ ಗಾಂಧಿ ಕಣ್ಣೀರಿಟ್ಟಿದ್ದರು: ಪ್ರಲ್ಹಾದ್‌ ಜೋಶಿ

Lok Sabha Election 2024
ಕರ್ನಾಟಕ2 hours ago

Lok Sabha Election: ಮೋದಿಯಿಂದ ಮಧ್ಯಮ ವರ್ಗದ ಬದುಕು ಹೈರಾಣಾಗಿತ್ತು, ನಾವು ಗ್ಯಾರಂಟಿ ಮೂಲಕ ಸ್ಪಂದಿಸಿದ್ದೇವೆ: ಸಿಎಂ

The Great Khal
ಪ್ರಮುಖ ಸುದ್ದಿ2 hours ago

The Great Khali : ರಾಹುಲ್ ಗಾಂಧಿ ಸುಳ್ಳ ಎಂದು ಕರೆದ ಬಿಜೆಪಿ ನಾಯಕ ದಿ ಗ್ರೇಟ್ ಖಲಿ, ಇಲ್ಲಿದೆ ವಿಡಿಯೊ

IPL 2024
ಪ್ರಮುಖ ಸುದ್ದಿ2 hours ago

IPL 2024 : ಗುಜರಾತ್​ ತಂಡಕ್ಕೆ3 ವಿಕೆಟ್​ ವಿಜಯ, ಪಂಜಾಬ್​ಗೆ ಬಿಡದ ಸೋಲಿನ ನಂಟು

belagavi Airport
ಕರ್ನಾಟಕ2 hours ago

Indigo Airlines: ಪ್ರಯಾಣಿಕರ ಲಗೇಜ್‌ ಬೆಂಗಳೂರಲ್ಲೇ ಬಿಟ್ಟು ಬೆಳಗಾವಿಗೆ ಬಂದ ವಿಮಾನ; ಮಾಜಿ ಸಿಎಂ ಬ್ಯಾಗ್‌ ಕೂಡ ಮಿಸ್ಸಿಂಗ್!‌

Viral News
ವೈರಲ್ ನ್ಯೂಸ್2 hours ago

Viral News: ಚಲಿಸುತ್ತಿರುವ ಕಾರಿನ ಬಾಗಿಲಿನಲ್ಲಿ ನೇತಾಡುವ ಯುವಕ; ಶಾಕಿಂಗ್‌ ವಿಡಿಯೊ ನೋಡಿ

Sportsmanship
ಕ್ರೀಡೆ3 hours ago

Sportsmanship : ಭಾರತದವರನ್ನೇ ಸೋಲಿಸಿ ತ್ರಿವರ್ಣ ಧ್ವಜವನ್ನೂ ಎತ್ತಿ ಹಿಡಿದ ಪಾಕ್ ಕರಾಟೆ ಪಟು!

DK Suresh
ಬೆಂಗಳೂರು3 hours ago

DK Suresh: ಬೆಲೆ ಏರಿಕೆ, ಜಿಎಸ್‌ಟಿ ಹೊರೆಯೇ ಮೋದಿ ಗ್ಯಾರಂಟಿ: ಡಿ.ಕೆ. ಸುರೇಶ್

soil
ಕೃಷಿ3 hours ago

ವಿಸ್ತಾರ ಗ್ರಾಮ ದನಿ: ಅಡಿಕೆ ರೋಗಗಳ ನಿವಾರಣೆಗೆ ‘ಕೃಷಿ ಸುಣ್ಣ’ ರಾಮಬಾಣ!

Narendra modi
ದೇಶ4 hours ago

Narendra Modi : ಹೆಚ್ಚು ಮಕ್ಕಳಿದ್ದವರಿಗೆ ಕಾಂಗ್ರೆಸ್​ನಿಂದ ಸಂಪತ್ತು ವಿತರಣೆ; ಮೋದಿ ಹೇಳಿಕೆಗೆ ಕೈ ಪಕ್ಷದ ಆಕ್ಷೇಪ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ21 hours ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ1 day ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20241 day ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20241 day ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ2 days ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ2 days ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ2 days ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ3 days ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ5 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

ಟ್ರೆಂಡಿಂಗ್‌