Site icon Vistara News

Salaar Movie: ಸೆ. 28ಕ್ಕೆ ರಿಲೀಸ್‌ ಆಗುತ್ತಿಲ್ಲ ʻಸಲಾರ್‌ʼ; ಹೊಂಬಾಳೆ ಸಂಸ್ಥೆ ಹೇಳಿದ್ದೇನು?

Salaar Movie

ಪ್ರಶಾಂತ್‌ ನೀಲ್‌ ನಿರ್ದೇಶನ ಹಾಗೂ ಪ್ರಭಾಸ್‌ ನಟನೆಯ ‘ಸಲಾರ್’ (Salaar Movie) ಸಿನಿಮಾ ಸೆಪ್ಟೆಂಬರ್ 28ಕ್ಕೆ ರಿಲೀಸ್ (Release) ಆಗಲಿದೆ ಎಂದು ಈ ಹಿಂದೆ ಹೊಂಬಾಳೆ ಫಿಲ್ಮ್ಸ್ (salaar part 1 – ceasefire) ಘೋಷಣೆ ಮಾಡಿತ್ತು. ಆದರೆ, ಇದೀಗ ಸಿನಿಮಾವನ್ನು ಈ ದಿನಾಂಕದಂದು ಬಿಡುಗಡೆ ಮಾಡಲು ಆಗುತ್ತಿಲ್ಲವೆಂದು ಘೋಷಣೆ ಮಾಡಿದೆ. ಗುಣಮಟ್ಟದ ದೃಷ್ಟಿಯಿಂದ ʼಸಲಾರ್‌ʼ ಸಿನಿಮಾಗೆ ಮತ್ತಷ್ಟು ಶಕ್ತಿ ತುಂಬುವ ಕೆಲಸ ನಡೆಯುತ್ತಿದೆ ಎಂದು ಟ್ವಿಟರ್‌ ಮೂಲಕ ಅಧಿಕೃತ ಮಾಹಿತಿ ಹಂಚಿಕೊಂಡಿದೆ.

ಸಿನಿಮಾ ಬಿಡುಗಡೆ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಹೊಂಬಾಳೆ, ‘ನಾವು ಅತ್ಯುತ್ತಮವಾದ ಸಿನಿಮಾವನ್ನು ಕೊಡಲು ಸಿದ್ಧವಾಗುತ್ತಿದ್ದೇವೆ. ಆದರೆ ನಾನಾ ಕಾರಣಗಳಿಂದಾಗಿ ಸೆ.28ರಂದು ಸಿನಿಮಾ ಬಿಡುಗಡೆ ಮಾಡಲು ಆಗುತ್ತಿಲ್ಲ. ನಮ್ಮ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತೀರಿ ಎಂದು ಭಾವಿಸುತ್ತೇವೆ. ಬಿಡುಗಡೆ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಈ ಅದ್ಭುತ ಪ್ರಯಾಣದ ಭಾಗವಾಗಿದ್ದಕ್ಕಾಗಿ ನಿಮಗೆ ಧನ್ಯವಾದಗಳು’ ಎಂದು ಹೇಳಿದೆ.

ʻಆದಿಪುರುಷ’ ಚಿತ್ರದ ಸೋಲಿನ ನಂತರ, ಪ್ರಭಾಸ್ (Actor Prabhas) ತಮ್ಮ ಮುಂಬರುವ ಬಿಗ್-ಬಜೆಟ್ ಚಿತ್ರ ‘ಸಲಾರ್‌’ (Salaar Movie) ಮೇಲೆ ಭಾರಿ ಭರವಸೆಯನ್ನು ಇಟ್ಟುಕೊಂಡಿದ್ದಾರೆ. ‘ಕೆಜಿಎಫ್’ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರ 2023ರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ಸಲಾರ್’ ಟೀಸರ್ ಈಗಾಗಲೇ ಬಿಡುಗಡೆಗೊಂಡಿದ್ದು. ಸೂಪರ್ ಹಿಟ್ ಆಗಿದೆ. 100 ಮಿಲಿಯನ್‌ಗೂ ಅಧಿಕ ವ್ಯೂಸ್ ಸಾಧಿಸಿದೆ. ಆದರೂ ಕೂಡ ಟೀಸರ್ ಬಗ್ಗೆ ಕೆಲವು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು. ಪ್ರಭಾಸ್‌ ಲುಕ್ ರಿವೀಲ್ ಮಾಡಿಲ್ಲ ಎಂದಿದ್ದರು. ಇನ್ನು ʼಸಲಾರ್‌ʼ ಸಿನಿಮಾದ ವಿತರಣೆಯ ಹಕ್ಕನ್ನು ಪ್ರತ್ಯಾಂಗೀರ್‌ ಸಿನಿಮಾಸ್‌ ಪಡೆದುಕೊಂಡಿದೆ.

ಇದನ್ನೂ ಓದಿ: Salaar Movie: ʻಸಲಾರ್ʼ ಸಿನಿಮಾ ರಿಲೀಸ್‌ ಡೇಟ್‌ ಪೋಸ್ಟ್‌ಪೋನ್‌?

ಹೊಂಬಾಳೆ ಫಿಲ್ಮ್ಸ್ಸ್‌ ಟ್ವೀಟ್

ಈ ಸಿನಿಮಾವನ್ನು ಭರ್ಜರಿಯಾಗಿ ಬಿಡುಗಡೆ ಮಾಡುವುದಕ್ಕೆ ಪ್ರತ್ಯಾಂಗೀರ್‌ ಸಿನಿಮಾಸ್‌ ಭಾರಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಎಲ್ಲೆಡೆ ಸಿನಿಮಾ ಬಿಡುಗಡೆಗೆ ಮೊದಲೇ ಭಾರೀ ಸದ್ದು ಮಾಡುತ್ತಿದ್ದು, ಈ ಸಿನಿಮಾ ಪ್ರಭಾಸ್‌ಗೆ ಮತ್ತೆ ಒಳ್ಳೆಯ ಖ್ಯಾತಿ ತಂದುಕೊಡುವ ನಿರೀಕ್ಷೆಯಿದೆ. ಬಹು ನಿರೀಕ್ಷೆಯ ʼಸಲಾರ್‌ʼ ಸಿನಿಮಾದಲ್ಲಿ ನಟಿ ಶ್ರುತಿ ಹಾಸನ್‌ ಅವರು ನಾಯಕ ನಟಿಯಾಗಿದ್ದಾರೆ. ಪೃಥ್ವಿರಾಜ್‌ ಸುಕುಮಾರನ್‌, ಜಗಪತಿ ಬಾಬು, ಈಶ್ವರಿ ರಾವ್‌ ಸೇರಿ ಹಲವು ಪ್ರಮುಖರು ಈ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ಎರಡು ಭಾಗಗಳಲ್ಲಿ ನಿರ್ಮಾಣವಾಗಿದೆ ಎಂದೂ ವರದಿಯಾಗಿದೆ.

Exit mobile version