Site icon Vistara News

Salaar Movie: ʻಸಲಾರ್’ ಚಿತ್ರದ ಟ್ರೈಲರ್ ರಿಲೀಸ್‌ ಯಾವಾಗ? ಸಿಕ್ಕಿದೆ ಅಪ್‌ಡೇಟ್

Actor Prabhas

ಬೆಂಗಳೂರು: ‘ಆದಿಪುರುಷ’ ಚಿತ್ರದ ಸೋಲಿನ ನಂತರ, ಪ್ರಭಾಸ್ (Actor Prabhas) ತಮ್ಮ ಮುಂಬರುವ ಬಿಗ್-ಬಜೆಟ್ ಚಿತ್ರ ‘ಸಲಾರ್‌’ (Salaar Movie) ಮೇಲೆ ತಮ್ಮ ಭರವಸೆಯನ್ನು ಇಟ್ಟುಕೊಂಡಿದ್ದಾರೆ. ‘ಕೆಜಿಎಫ್’ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರ 2023ರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ವರದಿಗಳ ಪ್ರಕಾರ, ‘ಸಲಾರ್’ ಚಿತ್ರದ ಟ್ರೈಲರ್ ಸೆಪ್ಟೆಂಬರ್ (Salaar trailer ) 6ರಂದು ಬಿಡುಗಡೆಯಾಗುವ ಸಾಧ್ಯತೆಯಿದೆ.

ಸೆಪ್ಟೆಂಬರ್ 28 ರಂದು

ಪ್ಯಾನ್-ಇಂಡಿಯನ್ ಸ್ಟಾರ್ ಪ್ರಭಾಸ್ ಸಲಾರ್ (Salaar Movie ) ತಿಂಗಳಲ್ಲಿ ರಿಲೀಸ್‌ ಆಗಲಿದೆ. ಈಗಾಗಲೇ ಸಿನಿಮಾದ ಟ್ರೆಂಡ್‌ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಇದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರವು ಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಸೆಪ್ಟೆಂಬರ್ 28 ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಸಲಾರ್ ನಿರ್ಮಾಪಕರು ಚಿತ್ರದ ಇಂಗ್ಲಿಷ್ ಆವೃತ್ತಿಯನ್ನು ಬಿಡುಗಡೆ ಮಾಡಲು ಯೋಜಿಸುತ್ತಿದ್ದಾರೆ ಎಂತಲೂ ವರದಿಯಾಗಿದೆ.

ಸಲಾರ್’ ಟೀಸರ್ ಈಗಾಗಲೇ ಬಿಡುಗಡೆಗೊಂಡಿದ್ದು. ಸೂಪರ್ ಹಿಟ್ ಆಗಿದೆ. 100 ಮಿಲಿಯನ್‌ಗೂ ಅಧಿಕ ವ್ಯೂಸ್ ಸಾಧಿಸಿದೆ. ಆದರೂ ಕೂಡ ಟೀಸರ್ ಬಗ್ಗೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು. ಪ್ರಭಾಸ್‌ ಲುಕ್ ರಿವೀಲ್ ಮಾಡಿಲ್ಲ ಎಂದಿದ್ದರು.

ಇದನ್ನೂ ಓದಿ: Salaar Movie: ಸಲಾರ್‌ ಸೆಟ್‌ನಲ್ಲಿ ರಿಷಬ್‌ ಶೆಟ್ಟಿ; ರಟ್ಟಾಯ್ತು ಗುಟ್ಟು!

ಇನ್ನು ಸಲಾರ್‌ ಸಿನಿಮಾದ ವಿತರಣೆ ಹಕ್ಕನ್ನು ಪ್ರತ್ಯಾಂಗೀರ್‌ ಸಿನಿಮಾಸ್‌ ಪಡೆದುಕೊಂಡಿದೆ. ಸಿನಿಮಾವನ್ನು ಭರ್ಜರಿಯಾಗಿ ಬಿಡುಗಡೆ ಮಾಡುವುದಕ್ಕೆ ಪ್ರತ್ಯಾಂಗೀರ್‌ ಸಿನಿಮಾಸ್‌ ಭಾರಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಎಲ್ಲೆಡೆ ಸಿನಿಮಾ ಬಿಡುಗಡೆಗೆ ಮೊದಲೇ ಭಾರೀ ಸದ್ದು ಮಾಡುತ್ತಿದ್ದು, ಈ ಸಿನಿಮಾ ಪ್ರಭಾಸ್‌ಗೆ ಮತ್ತೆ ಒಳ್ಳೆಯ ಫೇಮ್‌ ಒಂದನ್ನು ತಂದುಕೊಡುವ ನಿರೀಕ್ಷೆಯಿದೆ. ಬಹು ನಿರೀಕ್ಷೆಯ ಸಲಾರ್‌ ಸಿನಿಮಾದಲ್ಲಿ ನಟಿ ಶ್ರುತಿ ಹಾಸನ್‌ ಅವರು ನಾಯಕ ನಟಿಯಾಗಿದ್ದಾರೆ. ಪೃಥ್ವಿರಾಜ್‌ ಸುಕುಮಾರನ್‌, ಜಗಪತಿ ಬಾಬು, ಈಶ್ವರಿ ರಾವ್‌ ಸೇರಿ ಅನೇಕರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ಎರಡು ಭಾಗಗಳಲ್ಲಿ ನಿರ್ಮಾಣವಾಗಿದೆ ಎಂತಲೂ ವರದಿಯಾಗಿದೆ. ಮೊದಲ ಭಾಗವು ಸೆಪ್ಟೆಂಬರ್ 28ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಮುಂದಿನ ದಿನಗಳಲ್ಲಿ ಭಾಗ 2 ಕುರಿತು ಹೆಚ್ಚಿನ ವಿವರಗಳನ್ನು ಚಿತ್ರತಂಡ ಹಂಚಿಕೊಳ್ಳಲಿದೆ.


Exit mobile version