Ira Khan Nupur Reception: ಜನವರಿ 13 ರಂದು ಆಮೀರ್‌ ಮಗಳ ಅದ್ಧೂರಿ ರಿಸೆಪ್ಶನ್; ಯಾರೆಲ್ಲ ಭಾಗಿ? - Vistara News

ಬಾಲಿವುಡ್

Ira Khan Nupur Reception: ಜನವರಿ 13 ರಂದು ಆಮೀರ್‌ ಮಗಳ ಅದ್ಧೂರಿ ರಿಸೆಪ್ಶನ್; ಯಾರೆಲ್ಲ ಭಾಗಿ?

Ira Khan Nupur Reception: ಜನವರಿ 13 ರಂದು ಮುಂಬೈನಲ್ಲಿ ಅದ್ಧೂರಿ ಆರತಕ್ಷತೆ ನಡೆಯಲಿದೆ. ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್ ಆರತಕ್ಷತೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.

VISTARANEWS.COM


on

Salman Khan Shah Rukh Khan to attend Ira reception
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆಮೀರ್ ಖಾನ್ ಅವರ ಪುತ್ರಿ ಇರಾ ಖಾನ್ (Ira Khan Nupur Reception) ಅವರು ತಮ್ಮ ಬಹುಕಾಲದ ಗೆಳೆಯ, ಫಿಟ್ನೆಸ್ ತರಬೇತುದಾರ ನೂಪುರ್ ಶಿಖರೆ ಅವರನ್ನು ಜನವರಿ 3ರಂದು ವಿವಾಹವಾದರು. ಈ ಯುವಜೋಡಿ ರಿಜಿಸ್ಟರ್ ಮದುವೆಯಾಗಿದೆ. ಮದುವೆಯಲ್ಲಿ ಕುಟುಂಬದವರು ಹಾಗೂ ಸ್ನೇಹಿತರು ಮಾತ್ರ ಭಾಗವಹಿಸಿದ್ದರು. ಸಮಾರಂಭದ ನಂತರ, ಜನವರಿ 3ರಂದು ಮುಂಬೈನ ತಾಜ್ ಲ್ಯಾಂಡ್ಸ್ ಎಂಡ್‌ನಲ್ಲಿ ಆಪ್ತರಿಗೆ ಹಾಗೂ ಸಿನಿಮಾ ಗಣ್ಯರಿಗೆ ಆರತಕ್ಷತೆಯನ್ನು ಏರ್ಪಡಿಸಲಾಗಿತ್ತು. ಜನವರಿ 8ರಂದು ಉದಯ್‌ಪುರದಲ್ಲಿ ಇಬ್ಬರ ಮದುವೆ ಅದ್ಧೂರಿಯಾಗಿ ನಡೆಯಲಿದೆ. ಇದಾದ ಅದರ ನಂತರ ಜನವರಿ 13 ರಂದು ಮುಂಬೈನಲ್ಲಿ ಅದ್ಧೂರಿ ಆರತಕ್ಷತೆ ನಡೆಯಲಿದೆ. ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್ ಆರತಕ್ಷತೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಜನವರಿ 13 ರಂದು, ಬಿಕೆಸಿ ಜಿಯೋ ಸೆಂಟರ್‌ನಲ್ಲಿ ಅದ್ಧೂರಿ ಆರತಕ್ಷತೆಯನ್ನು ಆಯೋಜಿಸಿದ್ದಾರೆ ಎನ್ನಲಾಗಿದೆ. ಅನೇಕ ಗಣ್ಯರನ್ನು ಇನ್ವೈಟ್‌ ಮಾಡಿದ್ದಾರೆ ಎನ್ನಲಾಗಿದೆ. ಸಲ್ಮಾನ್ ಖಾನ್, ಶಾರುಖ್ ಖಾನ್, ಅಜಯ್ ದೇವಗನ್, ಅಮಿತಾಭ್‌ ಬಚ್ಚನ್, ಕರಣ್ ಜೋಹರ್, ಅಕ್ಷಯ್ ಕುಮಾರ್, ಕರೀನಾ ಕಪೂರ್ ಖಾನ್, ರಾಜ್ ಕುಮಾರ್ ಹಿರಾನಿ, ಅಶುತೋಷ್ ಗೋವಾರಿಕರ್, ಜೂಹಿ ಚಾವ್ಲಾ, ರಾಕೇಶ್ ಓಂಪ್ರಕಾಶ್ ಮೆಹ್ರಾ, ಇತರರು ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ. ಆಮಿರ್ ಅಂಬಾನಿ ಕುಟುಂಬಕ್ಕೂ ಆಹ್ವಾನ ನೀಡಿದ್ದಾರೆ. ಜನವರಿ 3 ರಂದು ನಡೆದ ಆರತಕ್ಷತೆಯಲ್ಲಿ ಅಂಬಾನಿ ಕುಟುಂಬ ಉಪಸ್ಥಿತಿ ಇತ್ತು. ಇದರೊಂದಿಗೆ ಮುಂಬೈನಲ್ಲಿ ನಡೆದ ಅದ್ಧೂರಿ ಆರತಕ್ಷತೆಗೆ ದಕ್ಷಿಣ ಚಿತ್ರರಂಗದ ಸೆಲೆಬ್ರಿಟಿಗಳಿಗೂ ಆಹ್ವಾನ ನೀಡಲಾಗಿದೆ.

ಇನ್ನು ವಿವಾಹದ ಸಂದರ್ಭದಲ್ಲಿ ನೂಪರ್ ತಮ್ಮ ವಿಚಿತ್ರ ವರ್ತನೆಯಿಂದಾಗಿ ಗಮನ ಸೆಳೆದಿದ್ದಾರೆ. ಮದುಮಗ ಸಾಮಾನ್ಯವಾಗಿ ಸುಂದರ ಬಟ್ಟೆಗಳನ್ನು ಧರಿಸಿಕೊಂಡು ಮಿಂಚುತ್ತಾನೆ. ಆದರೆ, ನೂಪುರ್ ಶಿಖರೆ ಅವರು, ಜಾಗಿಂಗ್ ಬಟ್ಟೆಯಲ್ಲಿ ಮದುವೆ ಮನೆಯ ತನಕ ಓಡಿಕೊಂಡು ಬಂದಿದ್ದರು. ವಿಶೇಷ ಎಂದರೆ, ಮದುವೆ ನೋಂದಣಿ ಸಮಯದಲ್ಲೂ ಅದೇ ಡ್ರೆಸ್‌ನಲ್ಲಿ ಅಂದರೆ ಜಾಗಿಂಗ್ ಉಡುಪಿನಲ್ಲಿ ಅವರಿದ್ದರು. ಈ ಕಾರಣಕ್ಕಾಗಿ ಮದುವೆ ವಿಶೇಷ ಗಮನ ಸೆಳೆದಿತ್ತು.

ಇದನ್ನೂ ಓದಿ: Ira Khan-Nupur Shikhare Wedding: ಆಮೀರ್‌ ಖಾನ್‌ ಮಗಳ ಮದುವೆ ಸಂಭ್ರಮದ ಫೋಟೊಗಳಿವು!

ಇರಾ ಖಾನ್‌ ಮತ್ತು ನೂಪರ್‌ ಅವರ ವಿವಾಹ ನಿಶ್ಚಿತಾರ್ಥ ಕಳೆದ ವರ್ಷ ನೆರವೇರಿತ್ತು. ಖಾಸಗಿಯಾಗಿ ನಡೆದ ಈ ಸಮಾರಂಭದ ಬಳಿಕ ಇಬ್ಬರೂ ಮುಂಬೈಯಲ್ಲಿ ಪಾರ್ಟಿ ಆಯೋಜಿಸಿದ್ದರು. ಈ ಹಿಂದೆ ಮಾಧ್ಯಮದೊಂದಿಗೆ ಮಾತನಾಡಿದ್ದ ಆಮೀರ್‌ ಖಾನ್‌ ತಮ್ಮ ಮಗಳ ಮದುವೆ ಬಗ್ಗೆ ಮಾಹಿತಿ ನೀಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Sunil Lahri: ಅಯೋಧ್ಯೆಯಲ್ಲಿ ಬಿಜೆಪಿಗೆ ದಾರುಣ ಸೋಲು; ಅಲ್ಲಿಯ ಜನರ ವಿರುದ್ಧ ರಾಮಾಯಣದ ಲಕ್ಷ್ಮಣ ಕೆಂಡಾಮಂಡಲ!

Sunil Lahri: ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ, ಕಟ್ಟಪ್ಪ ಬಾಹುಬಲಿಯನ್ನು ಕೊಲ್ಲುವ ದೃಶ್ಯದ ಚಿತ್ರವನ್ನು ಸುನಿಲ್ ಹಂಚಿಕೊಂಡಿದ್ದಾರೆ. ಒಂದು ಪೋಸ್ಟ್‌ನಲ್ಲಿ ಅವರು ಬಾಹುಬಲಿ ಸಿನಿಮಾದಲ್ಲಿ ಕಟ್ಟಪ್ಪನು ಅಮರೇಂದ್ರ ಬಾಹುಬಲಿಗೆ ಹಿಂಭಾಗದಿಂದ ಕತ್ತಿಯನ್ನು ಇರಿಯುತ್ತಿರುವ ದೃಶ್ಯ ಇದೆ. ಇದರಲ್ಲಿ ಕಟ್ಟಪ್ಪನ್ನು ಅಯೋಧ್ಯೆ ಎಂದು ಕರೆದರೆ, ಬಾಹುಬಲಿ ಪ್ರಭಾಸ್ ಅವರನ್ನು ಬಿಜೆಪಿ ಎಂದು ಕರೆದಿದ್ದಾರೆ. ನಟ ಸುನಿಲ್ ಲಹರಿ ಬಿಜೆಪಿ ಸೋತಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ʻʻಅಯೋಧ್ಯೆಯ ಪ್ರಜೆಗಳು ಯಾವಾಗಲೂ ತಮ್ಮ ರಾಜನಿಗೆ ದ್ರೋಹ ಬಗೆಯುತ್ತಾರೆ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆʼʼಎಂದು ಇನ್‌ಸ್ಟಾದಲ್ಲಿ ಬರೆದುಕೊಂಡಿದ್ದಾರೆ. 

VISTARANEWS.COM


on

Sunil Lahri aka Lakshman of Ramayan lashes out at Ayodhya citizens
Koo

ಬೆಂಗಳೂರು: ಈ ವರ್ಷದ ಆರಂಭದಲ್ಲಿ ಭವ್ಯವಾದ ಶ್ರೀರಾಮ ಮಂದಿರದ (Ayodhya Ram Mandir) ಪ್ರಾಣಪ್ರತಿಷ್ಠೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ (Ayodhya election results 2024) ಮಾಡಲಾಗಿತ್ತು. ಆದರೆ ಅಯೋಧ್ಯೆಯನ್ನು ಒಳಗೊಂಡಿರುವ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ (Faizabad Election Result) ಎಸ್‌ಪಿ (SP) ಅಭ್ಯರ್ಥಿಯ ಮುಂದೆ ಬಿಜೆಪಿ (BJP) ಅಭ್ಯರ್ಥಿ ಸೋತಿದ್ದರು ‘ರಾಮಾಯಣ’ ಧಾರಾವಾಹಿಯಲ್ಲಿ ಲಕ್ಷ್ಮಣನ ಪಾತ್ರ ನಿರ್ವಹಿಸಿದ್ದ ನಟ ಸುನಿಲ್ ಲಹರಿ ಬಿಜೆಪಿ ಸೋತಿರುವ ಬಗ್ಗೆ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ. ʻʻಅಯೋಧ್ಯೆಯ ಪ್ರಜೆಗಳು ಯಾವಾಗಲೂ ತಮ್ಮ ರಾಜನಿಗೆ ದ್ರೋಹ ಬಗೆಯುತ್ತಾರೆ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆʼʼ ಎಂದು ಇನ್‌ಸ್ಟಾದಲ್ಲಿ ಬರೆದುಕೊಂಡಿದ್ದಾರೆ. 

ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ, ಕಟ್ಟಪ್ಪ ಬಾಹುಬಲಿಯನ್ನು ಕೊಲ್ಲುವ ದೃಶ್ಯದ ಚಿತ್ರವನ್ನು ಸುನಿಲ್ ಹಂಚಿಕೊಂಡಿದ್ದಾರೆ. ಒಂದು ಪೋಸ್ಟ್‌ನಲ್ಲಿ ಅವರು ಬಾಹುಬಲಿ ಸಿನಿಮಾದಲ್ಲಿ ಕಟ್ಟಪ್ಪನು ಅಮರೇಂದ್ರ ಬಾಹುಬಲಿಗೆ ಹಿಂಭಾಗದಿಂದ ಕತ್ತಿಯನ್ನು ಇರಿಯುತ್ತಿರುವ ದೃಶ್ಯ ಇದೆ. ಇದರಲ್ಲಿ ಕಟ್ಟಪ್ಪನ್ನು ಅಯೋಧ್ಯೆ ಎಂದು ಕರೆದರೆ, ಬಾಹುಬಲಿ ಪ್ರಭಾಸ್ ಅವರನ್ನು ಬಿಜೆಪಿ ಎಂದು ಕರೆದಿದ್ದಾರೆ. ʻʻವನವಾಸದಿಂದ ಹಿಂದಿರುಗಿದ ನಂತರ ಸೀತಾದೇವಿಯನ್ನು ಅನುಮಾನಿಸಿದ ಅಯೋಧ್ಯೆಯ ಪ್ರಜೆಗಳು ಇವರೇ ಎಂಬುದನ್ನು ನಾವು ಮರೆಯುತ್ತಿದ್ದೇವೆ. ದೇವರನ್ನು ನಿರಾಕರಿಸುವ ವ್ಯಕ್ತಿಯನ್ನು ನೀವು ಏನೆಂದು ಕರೆಯುತ್ತೀರಿ? ಸ್ವಾರ್ಥಿ. ಅಯೋಧ್ಯೆಯ ಪ್ರಜೆಗಳು ಯಾವಾಗಲೂ ತಮ್ಮ ರಾಜನಿಗೆ ದ್ರೋಹ ಬಗೆದಿದ್ದಾರೆ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಅವರಿಗೆ ನಾಚಿಕೆಯಾಗಬೇಕುʼʼ ಎಂದು ಬರೆದುಕೊಂಡಿದ್ದಾರೆ.

ಅವರ ಕೊನೆಯ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ, “ಅಯೋಧ್ಯೆಯ ಪ್ರಿಯ ನಾಗರಿಕರೇ, ಸೀತಾ ದೇವಿಯನ್ನು ಸಹ ಬಿಡದ ನಿಮ್ಮ ಶ್ರೇಷ್ಠತೆಗೆ ನಾವು ನಮಸ್ಕರಿಸುತ್ತೇವೆ. ಶ್ರೀರಾಮನು ಆ ಚಿಕ್ಕ ಗುಡಿಸಲಿನಿಂದ ಹೊರಬಂದು ಸುಂದರವಾದ ದೇವಾಲಯದಲ್ಲಿ ಪ್ರತಿಷ್ಠಾಪಿಸಲ್ಪಡುವಂತೆ ಮಾಡಿದ ವ್ಯಕ್ತಿಗೆ ನೀವು ದ್ರೋಹ ಮಾಡಿದಿರಿ. ಇಡೀ ರಾಷ್ಟ್ರವು ನಿಮ್ಮನ್ನು ಮತ್ತೆ ಗೌರವದಿಂದ ನೋಡುವುದಿಲ್ಲʼʼ ಎಂದೂ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kannada New Movie: ವಿಜಯ್‌ ರಾಘವೇಂದ್ರ “ಗ್ರೇ ಗೇಮ್ಸ್” ಸಿನಿಮಾ ಗೆಲುವು

ರಮಾನಂದ್ ಸಾಗರ್ ಅವರ ಟಿವಿ ಶೋ ರಾಮಾಯಣದಲ್ಲಿ ಭಗವಾನ್ ರಾಮ ಮತ್ತು ಸೀತೆಯ ಪಾತ್ರಗಳನ್ನು ನಿರ್ವಹಿಸಿದ ಅರುಣ್ ಗೋವಿಲ್ ಮತ್ತು ದೀಪಿಕಾ ಚಿಖ್ಲಿಯಾ ಅವರೊಂದಿಗೆ ಸುನೀಲ್ ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಿದ್ದರು.

ಜನವರಿಯಲ್ಲಿ ರಾಮ ಮಂದಿರದಲ್ಲಿ ನಡೆದ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ, ಇಡೀ ಭಾರತದಲ್ಲಿಯೇ ಬಿಜೆಪಿಯ ಪುನಃ ಪ್ರತಿಷ್ಠಾಪನೆಗೆ ಮೂಲವಾಗಲಿದೆ ಎಂದು ಭಾವಿಸಲಾಗಿತ್ತು. ಕಡೇ ಪಕ್ಷ ಉತ್ತರ ಪ್ರದೇಶದಲ್ಲಾದರೂ ಭಾರಿ ಮೆಜಾರಿಟಿಯಲ್ಲಿ ಬಿಜೆಪಿ ಬರಲಿದೆ ಎಂದು ತರ್ಕಿಸಲಾಗಿತ್ತು. ಆದರೆ ಅದು ಆಗಿಲ್ಲ. ಅಯೋಧ್ಯೆಯನ್ನು ಒಳಗೊಂಡ ಫೈಜಾಬಾದ್‌ ಕ್ಷೇತ್ರದಲ್ಲಿ ಸಮಾಜವಾದಿ ಪಾರ್ಟಿ ಅಭ್ಯರ್ಥಿ ಅವಧೇಶ್ ಪ್ರಸಾದ್ ಮುಂದೆ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಸೋತಿದ್ದಾರೆ.

ಫೈಜಾಬಾದ್‌ನಿಂದ ಮೂರು ಬಾರಿ ಸಂಸದರಾಗಿರುವ ಸಿಂಗ್ ಅವರ ಈ ಸಲದ ಸೋಲು ಅಚ್ಚರಿದಾಯಕವಾಗಿದೆ. ಸಮಾಜವಾದಿ ಪಕ್ಷದ ಅಭ್ಯರ್ಥಿಗಿಂತ 10,000ಕ್ಕೂ ಅಧಿಕ ಮತಗಳ ಅಂತರದಿಂದ ಸಿಂಗ್‌ ಹಿಂದುಳಿದರು. ಫೈಜಾಬಾದ್ ಜಿಲ್ಲೆಯನ್ನು 2018ರಲ್ಲಿ ಅಧಿಕೃತವಾಗಿ ಅಯೋಧ್ಯೆ ಎಂದು ಮರುನಾಮಕರಣ ಮಾಡಲಾಯಿತು. ಆದಾಗ್ಯೂ, ಲೋಕಸಭಾ ಸ್ಥಾನವನ್ನು ಇನ್ನೂ ಫೈಜಾಬಾದ್ ಎಂದು ಕರೆಯಲಾಗುತ್ತದೆ.

Continue Reading

ಕಿರುತೆರೆ

Megha Shetty: ನಟ ಮಾಧವನ್​ ಭೇಟಿ ಮಾಡಿ ಖುಷಿ ಹಂಚಿಕೊಂಡ ಮೇಘಾ ಶೆಟ್ಟಿ!

Megha Shetty:ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ʻಟ್ರಿಬಲ್ ರೈಡಿಂಗ್ʼ ಸಿನಿಮಾ ಮೂಲಕ ಚಂದನವನಕ್ಕೆ ಕಾಲಿಟ್ಟರು ಮೇಘಾ ಶೆಟ್ಟಿ. ಧನ್ವೀರ್ ನಟನೆಯ ʻಕೈವʼ ಸಿನಿಮಾದಲ್ಲೂ ನಾಯಕಿಯಾಗಿ ನಟಿಸಿದ್ದಾರೆ. ಇತ್ತೀಚೆಗೆ ಮರಾಠಿ ಭಾಷೆಗೂ ಕಾಲಿಟ್ಟಿದ್ದಾರೆ. ‘ಲಂಡನ್ ಕೆಫೆ’ ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ಈ ಚಿತ್ರದ ಬಗ್ಗೆ ಮೇಘಾ ಶೆಟ್ಟಿ ಅವರು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

VISTARANEWS.COM


on

Megha Shetty Pose With R Madhavan
Koo

ʻಜೊತೆ ಜೊತೆಯಲಿʼ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ (Megha Shetty) ಆಗಾಗ ರೀಲ್ಸ್‌ ಮಾಡುವುದರ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಅಷ್ಟೇ ಅಲ್ಲದೇ ಇದೀಗ ಹಲವು ಸಿನಿಮಾಗಳಲ್ಲಿಯೂ ಬ್ಯುಸಿಯಾಗಿದ್ದಾರೆ.

ನಟಿ ಇತ್ತೀಚೆಗೆ ಬಹುಭಾಷಾ ನಟ ಆರ್. ಮಾಧವನ್ ಅವರನ್ನು ಭೇಟಿ ಮಾಡಿದ್ದಾರೆ. ಆ ಸಂದರ್ಭದಲ್ಲಿ ತೆಗೆದ ಸೆಲ್ಫಿಯನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Mahindra Discount Offers: ಎಕ್ಸ್‌ಯುವಿ 700, 400 ಇವಿ ಮತ್ತು ಸ್ಕಾರ್ಪಿಯೋ ಮೇಲೆ ಭರ್ಜರಿ ರಿಯಾಯಿತಿ!

“ಅಂತಹ ಅದ್ಭುತ ನಟನೊಂದಿಗೆ ಚರ್ಚೆ ಮಾಡುತ್ತಾ ಸಮಯ ಕಳೆದೆ. ಒಂದೊಳ್ಳೆಯ ಕಲಿಕೆಯ ಅನುಭವ’ ಎಂದು ಮೇಘಾ ಶೆಟ್ಟಿ ಬರೆದುಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಮಾಧವನ್ ಜೊತೆ ಸ್ಮೈಲ್ ಮಾಡಿ ಪೋಸ್ ಕೊಟ್ಟಿದ್ದಾರೆ.

ಸತತ ನಾಲ್ಕು ವರ್ಷಗಳ ಕಾಲ ಪ್ರೇಕ್ಷಕರನ್ನು ರಂಜಿಸಿರುವ ಜೋತೆ ಜೊತೆಯಲಿ ಧಾರಾವಾಹಿಯಲ್ಲಿ ಮೇಘಾ ಶೆಟ್ಟಿಯ ಅಭಿನಯಕ್ಕೆ ಫ್ಯಾನ್ಸ್‌ ಫಿದಾ ಆಗಿದ್ದರು. 

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ʻಟ್ರಿಬಲ್ ರೈಡಿಂಗ್ʼ ಸಿನಿಮಾ ಮೂಲಕ ಚಂದನವನಕ್ಕೆ ಕಾಲಿಟ್ಟರು ಮೇಘಾ ಶೆಟ್ಟಿ. ಧನ್ವೀರ್ ನಟನೆಯ ʻಕೈವʼ ಸಿನಿಮಾದಲ್ಲೂ ನಾಯಕಿಯಾಗಿ ನಟಿಸಿದ್ದಾರೆ. ಇತ್ತೀಚೆಗೆ ಮರಾಠಿ ಭಾಷೆಗೂ ಕಾಲಿಟ್ಟಿದ್ದಾರೆ. ‘ಲಂಡನ್ ಕೆಫೆ’ ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ.

Continue Reading

ರಾಜಕೀಯ

Anupam Kher: ಪ್ರಾಮಾಣಿಕ ವ್ಯಕ್ತಿ ಸಹಿಸಿಕೊಳ್ಳಲೇಬೇಕು; ಉ.ಪ್ರ ಹಿನ್ನಡೆ ಕುರಿತು ಅನುಪಮ್ ಖೇರ್‌ ಟ್ವೀಟ್

ಉತ್ತರ ಪ್ರದೇಶದಲ್ಲಿ ಲೋಕಸಭಾ ಫಲಿತಾಂಶ ಬಿಜೆಪಿಗೆ ಬಹುದೊಡ್ಡ ಆಘಾತವನ್ನು ನೀಡಿದೆ. ಈ ಕುರಿತು ನಟ, ಚಿತ್ರ ನಿರ್ಮಾಪಕ ಅನುಪಮ್ ಖೇರ್ ಟ್ವಿಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಕೆಲವೊಮ್ಮೆ ಪ್ರಾಮಾಣಿಕ ವ್ಯಕ್ತಿ ತುಂಬಾ ಪ್ರಾಮಾಣಿಕವಾಗಿರಬಾರದು ಎಂದು ನಾನು ಭಾವಿಸುತ್ತೇನೆ. ನೇರವಾದ ತೊಗಟೆಯನ್ನು ಹೊಂದಿರುವ ಮರವನ್ನು ಸಾಮಾನ್ಯವಾಗಿ ಮೊದಲು ಕತ್ತರಿಸಲಾಗುತ್ತದೆ. ಪ್ರಾಮಾಣಿಕ ವ್ಯಕ್ತಿ ಜೀವನದಲ್ಲಿ ಹೆಚ್ಚಿನ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

VISTARANEWS.COM


on

By

Anupam Kher
Koo

ಲೋಕಸಭೆ ಚುನಾವಣೆ 2024ರ (Loksabha election-2024) ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಬಿಜೆಪಿ (Bjp) ಗರಿಷ್ಠ ಸಂಖ್ಯೆಯ ಸ್ಥಾನಗಳನ್ನು ಗಳಿಸಿದರೂ ಉತ್ತರ ಪ್ರದೇಶದಲ್ಲಿ (uttarpradesh) ಪಕ್ಷಕ್ಕೆ ಭಾರಿ ಆಘಾತವಾಗಿದೆ. ಅಯೋಧ್ಯೆ ಇರುವ ಫೈಜಾಬಾದ್ (Faizabad) ಸೇರಿದಂತೆ ಹಲವು ಕ್ಷೇತ್ರಗಳನ್ನು ಅದು ಸ್ಥಾನಗಳನ್ನು ಕಳೆದುಕೊಂಡಿದೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ (Ayodhya) ರಾಮಮಂದಿರವನ್ನು (rammandir) ನಿರ್ಮಿಸಿದರೂ ಬಿಜೆಪಿ ಅಲ್ಲಿ ಹಿನ್ನಡೆ ಕಂಡಿದೆ.

ಈ ಕುರಿತು ಬಾಲಿವುಡ್ ನಟ (Bollywood actor) ಮತ್ತು ಬಿಜೆಪಿ ಬೆಂಬಲಿಗ ಅನುಪಮ್ ಖೇರ್ (Anupam Kher) ಅವರು ಆಘಾತ ವ್ಯಕ್ತಪಡಿಸಿದ್ದಾರೆ. ಫಲಿತಾಂಶದ ಕುರಿತು ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕಭಿ ಕಭಿ ಸೋಚ್ತಾ ಹೂಂ ಕಿ ಇಮಾಂದಾರ್ ವ್ಯಕ್ತಿ ಕೋ ಬಹೋತ್ ಝಾದಾ ಇಮಾಂದಾರ್ ನಹೀ ಹೋನಾ ಚಾಹಿಯೇ. ಜಂಗಲ್ ಮೇ ಸೀಧೇ ತಾನೆ ವಾಲೇ ಪೇಡ್ ಹೇ ಸಬ್ಸೇ ಪೆಹಲೇ ಕಾತೇ ಜಾತೇ ಹೈ. ಬಹುತ್ ಝಾದಾ ಇಮಾಂದಾರ್ ವ್ಯಕ್ತಿ ಕೋ ಹೇ ಸಬ್ಸೇ ಝ್ಯಾದಾ ಕಷ್ಟ ಉಠನೇ ಪಡತೇ ಹೈ. ಪರ್ ಫಿರ್ ಭಿ ವೋ ಅಪ್ನಿ ಇಮಾಂದಾರಿ ನಹೀ ಛೋಡ್ತಾ. ಇಸ್ಲಿಯೇ ಕರೋಡೋ ಲೋಗೋ ಕೆ ಲಿಯೇ ಪ್ರೇರಣಾ ಕಾ ಸ್ತೋತ್ರ ಬಂತ ಹೈ” ಎಂದು ಅವರು ಹೇಳಿದ್ದಾರೆ.


ಇದರ ಅನುವಾದ ಇಂತಿದೆ. ಕೆಲವೊಮ್ಮೆ ಪ್ರಾಮಾಣಿಕ ವ್ಯಕ್ತಿ ತುಂಬಾ ಪ್ರಾಮಾಣಿಕವಾಗಿರಬಾರದು ಎಂದು ನಾನು ಭಾವಿಸುತ್ತೇನೆ. ನೇರವಾದ ತೊಗಟೆಯನ್ನು ಹೊಂದಿರುವ ಮರವನ್ನು ಸಾಮಾನ್ಯವಾಗಿ ಮೊದಲು ಕತ್ತರಿಸಲಾಗುತ್ತದೆ. ಪ್ರಾಮಾಣಿಕ ವ್ಯಕ್ತಿ ಜೀವನದಲ್ಲಿ ಹೆಚ್ಚಿನ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಡೆತಡೆಗಳ ಹೊರತಾಗಿಯೂ, ಅವನು ತನ್ನ ಪ್ರಾಮಾಣಿಕತೆಯನ್ನು ಬಿಟ್ಟುಕೊಡುವುದಿಲ್ಲ. ಅದಕ್ಕಾಗಿಯೇ ಅವರು ಕೋಟ್ಯಂತರ ಜನರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Election Results 2024: ಅತಿ ಹೆಚ್ಚು ಮತ್ತು ಅತಿ ಕಡಿಮೆ ಅಂತರದಿಂದ ಗೆದ್ದ ಅಭ್ಯರ್ಥಿಗಳಿವರು!


ಈ ನಡುವೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿಯ ಸತತ ಮೂರನೇ ಗೆಲುವಿಗೆ ಪ್ರೇಕ್ಷಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಅವರು ಹೀಗೆ ಬರೆದಿದ್ದಾರೆ: ಜನರು ಸತತ ಮೂರನೇ ಬಾರಿಗೆ ಎನ್‌ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದು ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆಯಾಗಿದೆ. ಈ ಪ್ರೀತಿಗಾಗಿ ನಾನು ಜನತಾ ಜನಾರ್ದನರಿಗೆ ನಮಸ್ಕರಿಸುತ್ತೇನೆ. ಜನರ ಆಶೋತ್ತರಗಳನ್ನು ಈಡೇರಿಸಲು ಕಳೆದ ದಶಕದಲ್ಲಿ ಮಾಡಿದ ಉತ್ತಮ ಕೆಲಸವನ್ನು ನಾವು ಮುಂದುವರಿಸುತ್ತೇವೆ ಎಂದು ಅವರಿಗೆ ಭರವಸೆ ನೀಡುತ್ತೇನೆ. ನಮ್ಮ ಎಲ್ಲಾ ಕಾರ್ಯಕರ್ತರ ಶ್ರಮಕ್ಕೆ ನಾನು ನಮಸ್ಕರಿಸುತ್ತೇನೆ. ಅವರ ಅಸಾಧಾರಣ ಪ್ರಯತ್ನಗಳಿಗೆ ಪದಗಳು ಎಂದಿಗೂ ನ್ಯಾಯವನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ.

Continue Reading

Lok Sabha Election 2024

Election Results 2024: ಕಂಗನಾ, ಸುರೇಶ್‌ ಗೋಪಿ, ಶತ್ರುಘ್ನ ಸಿನ್ಹಾ ಸೇರಿ ಹಲವು ನಟ–ನಟಿಯರ ಗೆಲುವು

Election Results 2024 : ಗಾಂಧಿ ಕುಟುಂಬದ ಕ್ಷೇತ್ರ ಅಮೇಠಿಯಲ್ಲಿ ಸ್ಮೃತಿ ಇರಾನಿಗೆ ಸೋಲಾಗಿದೆ. ನಟಿ ಮತ್ತು ಬಿಜೆಪಿ ನಾಯಕಿ ಕಂಗನಾ ರಣಾವತ್‌ (Kangana Ranaut) ಅವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ (Election Results 2024) ಗೆದ್ದು ಬೀಗಿದ್ದಾರೆ. ರಮಾನಂದ್ ಸಾಗರ್ ಅವರ `ರಾಮಾಯಣ’ ಶೋನ ಭಗವಾನ್ ರಾಮನ ಪಾತ್ರದಲ್ಲಿ ಹೆಸರುವಾಸಿಯಾಗಿರುವ ನಟ ಅರುಣ್ ಗೋವಿಲ್ ಅವರು ಗೆದ್ದಿದ್ದಾರೆ.

VISTARANEWS.COM


on

Election Results 2024 in celebrities
Koo

ಬೆಂಗಳೂರು: ನಟಿ ಮತ್ತು ಬಿಜೆಪಿ ನಾಯಕಿ ಕಂಗನಾ ರಣಾವತ್‌ (Kangana Ranaut) ಅವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ (Election Results 2024) ಗೆದ್ದು ಬೀಗಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್‌ ಅವರು ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ 72,088 ಮತಗಳಿಂದ ವಿನ್‌ ಆಗಿದ್ದಾರೆ.

ಟಿವಿ ರಾಮ ಅರುಣ್ ಗೋವಿಲ್

ರಮಾನಂದ್ ಸಾಗರ್ ಅವರ `ರಾಮಾಯಣ’ ಶೋನ ಭಗವಾನ್ ರಾಮನ ಪಾತ್ರದಲ್ಲಿ ಹೆಸರುವಾಸಿಯಾಗಿರುವ ನಟ ಅರುಣ್ ಗೋವಿಲ್ ಅವರು ಉತ್ತರ ಪ್ರದೇಶದ ಮೀರತ್‌ನಿಂದ ಗೆದ್ದಿದ್ದಾರೆ.

ಸುರೇಶ್‌ ಗೋಪಿ

ಈ ಹಿಂದಿನ ಲೋಕಸಭೆ ಚುನಾವಣೆ (2019)ಯಲ್ಲಿಯೂ ಸುರೇಶ್‌ ಗೋಪಿ ಉತ್ತಮ ಪ್ರದರ್ಶನ ತೋರಿದ್ದರು. ಶೇ. 28.19ರಷ್ಟು ಮತಗಳನ್ನು ತಮ್ಮದಾಗಿಸಿಕೊಂಡಿದ್ದರು. ಆಗ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಶೇ. 30.85 ಮತ ಪಡೆದಿದ್ದರು. ಕಾಂಗ್ರೆಸ್‌ನ ಟಿ.ಎಸ್.ಪಾರ್ಥಪನ್ ಶೇ. 39.83ರಷ್ಟು ಮತ ಪಡೆದು ಜಯ ಗಳಿಸಿದ್ದರು. ಅವರು 4,15,089 ಮತಗಳನ್ನು ಗಳಿಸಿ 3,21,456 ಮತಗಳನ್ನು ಪಡೆದ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಅವರನ್ನು ಸೋಲಿಸಿದ್ದರು.

ಇದನ್ನೂ ಓದಿ: Election Results 2024: 5 ಬಾರಿಯ ಸಂಸದನ ವಿರುದ್ಧ ಚೊಚ್ಚಲ ಪ್ರಯತ್ನದಲ್ಲೇ ಭರ್ಜರಿ ಗೆಲುವು ಸಾಧಿಸಿದ ಯೂಸುಫ್ ಪಠಾಣ್

ಶತ್ರುಘ್ನ ಸಿನ್ಹಾ (ಟಿಎಂಸಿ, ಅಸನ್ಸೋಲ್)

ಪಶ್ಚಿಮ ಬಂಗಾಳ ಅಸನ್ಸೋಲ್‌ ಕ್ಷೇತ್ರದಿಂದ ಬಾಲಿವುಡ್ ನಟ ಹಾಗೂ ರಾಜಕಾರಣಿ, ಬಿಹಾರಿ ಬಾಬು ಎಂದೇ ಖ್ಯಾತರಾಗಿರುವ ಶತ್ರುಘ್ನ ಸಿನ್ಹಾ ಟಿ ಎಂ ಸಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ 63,000 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಸುರಿಂದರ್‌ ಸಿಂಗ್‌ ಅಹ್ಲುವಾಲಿಯಾ ಅವರನ್ನು ಸೋಲಿಸಿದ್ದಾರೆ.

ಹೇಮಾ ಮಾಲಿನಿ (ಬಿಜೆಪಿ, ಮಥುರಾ)

2024ರ ಲೋಕಸಭಾ ಚುನಾವಣೆಯಲ್ಲೂ ಮಥುರಾ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಿರುವ ಹೇಮಾ ಮಾಲಿನಿ, ಈ ಬಾರಿಯೂ ಗೆಲುವು ಸಾಧಿಸಿದ್ದಾರೆ. ತಮ್ಮ ಸಮೀಪದ ಪ್ರತಿಸ್ಪರ್ಧಿ ಸಮಾಜವಾದಿ ಪಾರ್ಟಿಯ ಸುರೇಶ್ ಸಿಂಗ್ ಅವರನ್ನು 106924 ಮತಗಳ ಅಂತರದಿಂದ ಸೋಲಿಸಿದ್ದಾರೆ.

ರಾಧಿಕಾ ಶರತ್‌ಕುಮಾರ್ (ಬಿಜೆಪಿ, ವಿರುದ್‌ನಗರ)
ನಟಿ ರಾಧಿಕಾ ಶರತ್‌ಕುಮಾರ್ ಅವರು ತಮಿಳುನಾಡಿನ ವಿರುದ್‌ನಗರದಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು. ಆದರೆ ಸೋತಿದ್ದಾರೆ.

ಸ್ಮೃತಿ ಇರಾನಿ

ಗಾಂಧಿ ಕುಟುಂಬದ ಕ್ಷೇತ್ರ ಅಮೇಠಿಯಲ್ಲಿ ಸ್ಮೃತಿ ಇರಾನಿಗೆ ಈ ಬಾರಿ ಸೋಲಾಗಿದೆ. ಗಾಂಧಿ ಕುಟುಂಬದ ಬಲಗೈ ಬಂಟ ಕಿಶೋರಿ ಲಾಲ್‌ ಶರ್ಮಾ ಇಲ್ಲಿ ಇರಾನಿಗೆ ಸೋಲಿನ ರುಚಿ ತೋರಿಸಿದ್ದಾರೆ. ಈ ಮೂಲಕ ಕಳೆದ ಬಾರಿ ರಾಹುಲ್‌ ಗಾಂಧಿಯನ್ನೇ ಸೋಲಿಸಿದ್ದ ಇರಾನಿ, ಇದೀಗ ಅವರ ಬಂಟನ ಕೈಯಲ್ಲಿ ಸೋಲು ಕಾಣುವಂತಾಗಿದೆ.

ಮನೋಜ್ ತಿವಾರಿ (ಬಿಜೆಪಿ, ಈಶಾನ್ಯ ದೆಹಲಿ)

ಈಶಾನ್ಯ ದೆಹಲಿಯಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಭೋಜ್‌ಪುರಿ ನಟ, ಗಾಯಕ ಮನೋಜ್ ತಿವಾರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಕನ್ಹಯ್ಯ ಕುಮಾರ್ ವಿರುದ್ಧ ಭರ್ಜರಿ ಮತಗಳಿಂದ ಗೆದ್ದಿದ್ದಾರೆ.

ರವಿ ಕಿಶನ್

ರಾಜಕಾರಣಿ ಹಾಗೂ ಬಿಜೆಪಿ ನಾಯಕ ರವಿ ಕಿಶನ್ ಉತ್ತರ ಪ್ರದೇಶದ ಗೋರಖ್‌ಪುರ ಕ್ಷೇತ್ರದಿಂದ 74,536 ಮತಗಳ ಅಂತರದಿಂದ ಗೆದ್ದಿದ್ದಾರೆ.

ಪವನ್ ಸಿಂಗ್

ಜನಪ್ರಿಯ ಭೋಜ್‌ಪುರಿ ನಟ ಮತ್ತು ಗಾಯಕ ಪವನ್ ಸಿಂಗ್ ಬಿಹಾರದ ಕಾರಕಟ್‌ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮುನ್ನಡೆ ಸಾಧಿಸಿದ್ದಾರೆ.

Continue Reading
Advertisement
Gold Rate Today
ಚಿನ್ನದ ದರ12 mins ago

Gold Rate Today: ಕೈ ಸುಡುತ್ತಿದೆ ಚಿನ್ನದ ಬೆಲೆ; ಆಭರಣ ಖರೀದಿಗೆ ಮುನ್ನ ಬೆಲೆ ಹೆಚ್ಚಳ ಗಮನಿಸಿ

T20 World Cup 2024
ಕ್ರೀಡೆ13 mins ago

T20 World Cup 2024: ನಸೌ ಪಿಚ್​ ಬಗ್ಗೆ ಕಳವಳ ವ್ಯಕ್ತಪಡಿಸಿದ ಟೀಮ್​ ಇಂಡಿಯಾ ಆಟಗಾರರು

Sunil Lahri aka Lakshman of Ramayan lashes out at Ayodhya citizens
ಬಾಲಿವುಡ್22 mins ago

Sunil Lahri: ಅಯೋಧ್ಯೆಯಲ್ಲಿ ಬಿಜೆಪಿಗೆ ದಾರುಣ ಸೋಲು; ಅಲ್ಲಿಯ ಜನರ ವಿರುದ್ಧ ರಾಮಾಯಣದ ಲಕ್ಷ್ಮಣ ಕೆಂಡಾಮಂಡಲ!

Karnataka Rain
ಮಳೆ22 mins ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Miss You First Look Out Siddharth unveils intriguing poster
ಟಾಲಿವುಡ್31 mins ago

Miss You First Look Out: ಆಶಿಕಾ ರಂಗನಾಥ್‌ಗೆ ʻಮಿಸ್ ಯುʼ ಎಂದ ನಟ ಸಿದ್ಧಾರ್ಥ್!

Narendra Modi
ದೇಶ45 mins ago

Narendra Modi: ಜೂ.8ರಂದು ಮೋದಿ ಪ್ರಮಾಣವಚನ; ದೇಶ ವಿದೇಶಗಳ ಗಣ್ಯರು ಭಾಗಿ

NDA Meeting
Lok Sabha Election 202459 mins ago

NDA Meeting: ಮೋದಿ ನಿವಾಸದಲ್ಲಿ ಎನ್‌ಡಿಎ ಸಭೆ; ಯಾವೆಲ್ಲ ವಿಚಾರಗಳನ್ನು ಚರ್ಚಿಸಲಾಯ್ತು? ಇಲ್ಲಿದೆ ವಿವರ

uttarakhand Trekking Tragedy
ಪ್ರಮುಖ ಸುದ್ದಿ1 hour ago

Trekking Tragedy: ಸಾವಿನ ಕಣಿವೆಯಾದ ಸಹಸ್ತ್ರತಾಲ್; ಬೆಂಗಳೂರಿನ 9 ಚಾರಣಿಗರು ಬಲಿಯಾದದ್ದು ಹೇಗೆ?

India vs Ireland
ಕ್ರಿಕೆಟ್1 hour ago

India vs Ireland: ಪಂಜಾಬಿ ಪುಟ್ಟ ಪೋರನಿಂದ ಚಿನ್ನದ ಪದಕ ಪಡೆದ ಮೊಹಮ್ಮದ್​ ಸಿರಾಜ್

Dead Body Found
ಬಾಗಲಕೋಟೆ1 hour ago

Dead Body Found : ಸೇತುವೆ ಸಮೀಪದಲ್ಲಿತ್ತು ಕೊಳೆತ ಮಹಿಳೆಯ ಶವ; ಹಂತಕರು ಯಾರು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ22 mins ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ7 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌