ಬೆಂಗಳೂರು: ನಟ ಸಲ್ಮಾನ್ ಖಾನ್ (Salman Khan) ಬುಧವಾರ ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್ನಲ್ಲಿ ಹೊಸ ಫೋಟೊವನ್ನು ಹಂಚಿಕೊಂಡಿದ್ದಾರೆ. ಸರಳವಾದ ಕಪ್ಪು ಟೀ ಶರ್ಟ್ನಲ್ಲಿ ಸುಂದರವಾಗಿ ಕಾಣುತ್ತಿದ್ದರು. ನಟನ ಹೊಸ ಲುಕ್ ಕಂಡು ಅಭಿಮಾನಿಗಳು ಪ್ರತಿಕ್ರಿಯಿಸಿ ಪ್ರೀತಿಯ ಸುರಿಮಳೆಗೈದರು. ‘ಸಿಕಂದರ್’ ಚಿತ್ರೀಕರಣದಲ್ಲಿ ನಿರತರಾಗಿರುವ ಸಲ್ಮಾನ್, “ಗ್ರೀನ್ ಜೋನ್” ಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ.
ಈ ಹಿಂದೆ, ‘ಸಿಕಂದರ್’ ಸೆಟ್ನಿಂದ ಕೆಲವು ಫೋಟೊಗಳು ಲೀಕ್ ಆಗಿದ್ದವು. ಜೂನ್ 19 ರಂದು ‘ಸಿಕಂದರ್’ ಚಿತ್ರದ ಚಿತ್ರೀಕರಣ ಪ್ರಾರಂಭವಾಯಿತು. ಚಿತ್ರದಲ್ಲಿ ಸಲ್ಮಾನ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.
ಈ ಹಿಂದೆ ಸಿನಿಮಾ ಈದ್ 2025ರಂದು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ಪೋಸ್ಟರ್ ಜತೆ ಮಾಹಿತಿ ಹಂಚಿಕೊಂಡಿದ್ದಾರೆ. ಮಾರ್ಚ್ 12ರಂದು, ಸಲ್ಮಾನ್ ಖಾನ್ ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್ನಲ್ಲಿ ಸಿನಿಮಾ ಬಗ್ಗೆ ಹಂಚಿಕೊಂಡಿದ್ದರು. ಪ್ರತಿಭಾವಂತರಾದ ಎಆರ್ ಮುರುಗದಾಸ್ ನನ್ನ ಸ್ನೇಹಿತ, ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತೋಷವಾಗಿದೆ. ಈ ಸಹಯೋಗ ವಿಶೇಷವಾಗಿದೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ನಮ್ಮ ಮೇಲೆ ಇರಲಿʼʼಎಂದು ಬರೆದುಕೊಂಡಿದ್ದರು.
ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.
ಇದನ್ನೂ ಓದಿ: Salman Khan: ʻಅಲ್ಟಿಮೇಟ್ ಸೆಕ್ಸ್ ಸಿಂಬಲ್ʼ ನನ್ನ ಗಂಡ ಅಲ್ಲ, ಅದು ಸಲ್ಮಾನ್ ಖಾನ್ ಎಂದಳು ಖ್ಯಾತ ನಟಿ!
ಸೊನಾಕ್ಷಿ ಸಿನ್ಹಾ ನಟನೆಯ ‘ಅಕಿರಾ’ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದರು. ಮುರುಗದಾಸ್ ನಿರ್ದೇಶನದಲ್ಲಿ ಮೂಡಿ ಬಂದಿದ್ದ ‘ಸ್ಟಾಲಿನ್’ ಚಿತ್ರವನ್ನು ಹಿಂದಿಯಲ್ಲಿ ‘ಜೈ ಹೋ’ ಹೆಸರಲ್ಲಿ ರೀಮೇಕ್ ಮಾಡಲಾಗಿತ್ತು.
ʻಸಿಖಂದರ್’ ಸಿನಿಮಾ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿರಲಿದೆ. 400 ಕೋಟಿ ರೂಪಾಯಿ ಬಜೆಟ್ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ ಎಂದು ವರದಿಯಾಗಿದೆ. ಸಲ್ಮಾನ್ ಖಾನ್ ಕೊನೆಯದಾಗಿ ‘ಟೈಗರ್ 3’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.
ತಮಿಳು ಮತ್ತು ಹಿಂದಿಯ ʼಘಜನಿʼ, ತಮಿಳಿನ ʼ7 ಆಮ್ ಅರಿವುʼ, ʼತುಪಾಕಿʼ, ʼಕತ್ತಿʼ, ʼದರ್ಬಾರ್ʼ, ಹಿಂದಿಯ ʼಹಾಲಿ ಡೇʼ, ತೆಲುಗಿನ ʼಸ್ಪೈಡರ್ʼ ಮುಂತಾದ ಹಿಟ್ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದ ಎ.ಆರ್.ಮುರುಗದಾಸ್ ಸುಮಾರು 8 ವರ್ಷಗಳ ಬಳಿಕ ಸಲ್ಮಾನ್ ಚಿತ್ರದ ಮೂಲಕ ಬಾಲಿವುಡ್ಗೆ ಮತ್ತೆ ಕಾಲಿಡುತ್ತಿದ್ದಾರೆ. ಮೊದಲ ಬಾರಿ ಮುರುಗದಾಸ್ ಅವರು ಸಲ್ಮಾನ್ ಖಾನ್ ಚಿತ್ರವನ್ನು ನಿರ್ದೇಶಿಸುತ್ತಿರುವುದು ಕೂಡ ವಿಶೇಷವೆನಿಸಿದೆ.