Samantha Ruth Prabhu: ಗುಡ್‌ ನ್ಯೂಸ್‌ ಕೊಟ್ಟ ಸಮಂತಾ; ಸೆಲೆಬ್ರಿಟಿಗಳಿಂದ ಶುಭ ಹಾರೈಕೆ! - Vistara News

South Cinema

Samantha Ruth Prabhu: ಗುಡ್‌ ನ್ಯೂಸ್‌ ಕೊಟ್ಟ ಸಮಂತಾ; ಸೆಲೆಬ್ರಿಟಿಗಳಿಂದ ಶುಭ ಹಾರೈಕೆ!

Samantha Ruth Prabhu: ಸಮಂತಾ ರುತ್ ಪ್ರಭು ಕೊನೆಯ ಬಾರಿಗೆ ‘ಖುಶಿ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಮುಂದೆ, ಸಮಂತಾ ಸಿಟಾಡೆಲ್‌ನ ಭಾರತೀಯ ಆವೃತ್ತಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಇದರಲ್ಲಿ ವರುಣ್ ಧವನ್ ಸಹ ನಟಿಸಿದ್ದಾರೆ. ಇದನ್ನು ರಾಜ್ ಮತ್ತು ಡಿಕೆ ನಿರ್ದೇಶಿಸಿದ್ದಾರೆ.

VISTARANEWS.COM


on

Samantha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಮಂತಾ ರುತ್ ಪ್ರಭು (Samantha Ruth Prabhu) ಸದ್ಯ ಸಿನಿಮಾದಿಂದ ಬ್ರೇಕ್‌ ಪಡೆದಿದ್ದಾರೆ. ಜತೆಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ನಟಿ ಸಮಂತಾ ಭಾನುವಾರದಂದು (ಡಿ.10) ತಮ್ಮ ಬ್ಯಾನರ್ ‘ತ್ರಲಾಲಾ ಮೂವಿಂಗ್ ಪಿಕ್ಚರ್ಸ್’ ಪ್ರಾರಂಭಿಸುವುದರೊಂದಿಗೆ, ನಿರ್ಮಾಣ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ಸಮಂತಾ ಹೊಸ ಪ್ರೊಡಕ್ಷನ್ ಹೌಸ್‌ ಶೀರ್ಷಿಕೆ ಅನಿಮೇಶನ್‌ನ ವಿಡಿಯೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಸೆಲೆಬ್ರಿಟಿಗಳು , ಹಾಗೂ ಫ್ಯಾನ್ಸ್‌ ನಟಿಗೆ ಶುಭ ಹಾರೈಸುತ್ತಿದ್ದಾರೆ.

ಇತ್ತೀಚೆಗೆ ಹಿಂದಿಯ ರ್‍ಯಾಪ್ ರಿಯಾಲಿಟಿ ಶೋ ಜಡ್ಜ್ ಹನಿ ಸಿಂಗ್​ ಜತೆ ಸಮಂತಾ ವೇದಿಕೆ ಹಂಚಿಕೊಂಡಿದ್ದರು. MTV ರಿಯಾಲಿಟಿ ಶೋನಲ್ಲಿ ಸಮಂತಾ ಸ್ಟೈಲಿಶ್‌ ಆಗಿ ಕಾಣಿಸಿಕೊಂಡಿದ್ದರು. ಇದೀಗ ಸಮಂತಾ ತಮ್ಮ ಪ್ರೊಡಕ್ಷನ್‌ ಹೌಸ್‌ವನ್ನು ಪರಿಚಯಿಸಿದ್ದಾರೆ “ನನ್ನ ನಿರ್ಮಾಣ ಸಂಸ್ಥೆ, ತ್ರಲಾಲಾ ಮೂವಿಂಗ್ ಪಿಕ್ಚರ್ಸ್ ಘೋಷಿಸಲು ತುಂಬಾ ಉತ್ಸುಕವಾಗಿದೆ! ತ್ರಲಾಲಾ ಮೂವಿಂಗ್ ಪಿಕ್ಚರ್ಸ್ ಹೊಸ ಯುಗದ ಅಭಿವ್ಯಕ್ತಿ ಮತ್ತು ಚಿಂತನೆಯ ವಿಷಯವನ್ನು ಪ್ರತಿನಿಧಿಸುವ ಗುರಿಯನ್ನು ಹೊಂದಿದೆ. ಒಳ್ಳೆಯ ಕಥೆಗಳನ್ನು ಹೇಳಲು ಚಲನಚಿತ್ರ ನಿರ್ಮಾಪಕರಿಗೆ ಒಂದು ವೇದಿಕೆʼʼಎಂದು ಬರೆದುಕೊಂಡಿದ್ದಾರೆ. ನಟಿ ನಂದಿನಿ ರೆಡ್ಡಿ, ಪಾರ್ವತಿ, ಅನುಪಮಾ ಪರಮೇಶ್ವರನ್ ಮತ್ತು ಇತರರು ಇದೀಗ ಸಮಂತಾ ಅವರಿಗೆ ಕಮೆಂಟ್‌ ಮೂಲಕ ಅಭಿನಂದಿಸಿದ್ದಾರೆ.

ಸಮಂತಾ ರುತ್ ಪ್ರಭು ಕೊನೆಯ ಬಾರಿಗೆ ‘ಖುಶಿ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಮುಂದೆ, ಸಮಂತಾ ಸಿಟಾಡೆಲ್‌ನ ಭಾರತೀಯ ಆವೃತ್ತಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಇದರಲ್ಲಿ ವರುಣ್ ಧವನ್ ಸಹ ನಟಿಸಿದ್ದಾರೆ. ಇದನ್ನು ರಾಜ್ ಮತ್ತು ಡಿಕೆ ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: Samantha Ruth Prabhu: ರಿಯಾಲಿಟಿ ಶೋಗೆ ಸ್ಟೈಲಿಶ್‌ ಆಗಿ ಎಂಟ್ರಿ ಕೊಟ್ಟ ಸಮಂತಾ!

ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ನಿರ್ಮಿಸುವ ಮುಂಬರುವ ಚಿತ್ರದಲ್ಲಿ ಸಮಂತಾ ರುತ್ ಪ್ರಭು ಮತ್ತು ಸಲ್ಮಾನ್ ಖಾನ್ ರೊಮ್ಯಾನ್ಸ್ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಚಿತ್ರಕ್ಕಾಗಿ ನಿರ್ದೇಶಕ ವಿಷ್ಣುವರ್ಧನ್ ಅವರೊಂದಿಗೆ ಸಮಂತಾ ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ ಈ ಸಿನಿಮಾಗೆ ಸಮಂತಾ ಜತೆಗೆ ತ್ರಿಶಾ ಮತ್ತು ಅನುಷ್ಕಾ ಶೆಟ್ಟಿ ಕೂಡ ಇರಲಿದ್ದಾರೆ ಎಂದು ಹೇಳಲಾಗಿದೆ. ಸದ್ಯಕ್ಕೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.

ಸಲ್ಮಾನ್ ಖಾನ್ ಮತ್ತು ಕರಣ್ ಜೋಹರ್ ಒಟ್ಟಿಗೆ ಮತ್ತೆ ಸಿನಿಮಾ ಮಾಡಲಿದ್ದಾರೆ ಎಂದು ಈ ಮುಂಚೆಯೇ ಗಾಸಿಪ್‌ಗಳು ಹಬ್ಬಿತ್ತು. 1998ರಲ್ಲಿ ಕುಚ್ ಕುಚ್ ಹೋತಾ ಹೈನಲ್ಲಿ ಸಲ್ಮಾನ್ ಕಾಣಿಸಿಕೊಂಡ ನಂತರ ಬರೋಬ್ಬರಿ 25 ವರ್ಷಗಳ ಬಳಿಕ ಕರಣ್‌ ಜತೆ ಕೈ ಜೋಡಿಸುತ್ತಿದ್ದಾರೆ ಸಲ್ಮಾನ್‌. 2023ರ ನವೆಂಬರ್‌ನಲ್ಲಿ ಈ ಸಿನಿಮಾ ಸೆಟ್ಟೇರಲಿದೆ ಎಂದು ಹೇಳಲಾಗುತ್ತಿದೆ. ಪ್ರಿ-ಪ್ರೊಡಕ್ಷನ್ ಕೆಲಸವು ಆಗಸ್ಟ್ 2023ರಿಂದ ಶುರುವಾಗಲಿದೆ ಎಂದೂ ವರದಿಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Rachel Movie: ಮಲಯಾಳಿ ನಟಿ ಹನಿ ರೋಸ್ ನಾಯಕಿಯಾಗಿ ನಟಿಸಿರುವ ‘ರೆಚೆಲ್’ ಚಿತ್ರದ ಟೀಸರ್ ರಿಲೀಸ್‌

Rachel Movie: ಮಲಯಾಳಿ ನಟಿ ಹನಿ ರೋಸ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ರೆಚೆಲ್’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಮೂಲ ಮಲಯಾಳಂನಲ್ಲಿ ನಿರ್ಮಾಣವಾಗಿರುವ ಈ ಸಿನಿಮಾ ಕನ್ನಡದಲ್ಲೂ ರಿಲೀಸ್‌ ಆಗಲಿದೆ. ಚಿತ್ರವು ಹಿಂಸಾಚಾರ ಮತ್ತು ರಕ್ತಪಾತದ ಕಥೆಯಾಗಿರುತ್ತದೆ ಎಂದು ಟೀಸರ್ ಸುಳಿವು ನೀಡುತ್ತದೆ. ಎಬ್ರಿಡ್ ಶೈನ್ ಸಹ ನಿರ್ಮಾಣದ ಜತೆಗೆ ಮತ್ತು ಬರಹಗಾರರಾಗಿರುವ ಈ ಚಿತ್ರವನ್ನು ಆನಂದಿನಿ ಬಾಲಾ ನಿರ್ದೇಶಿಸಿದ್ದಾರೆ. ಹನಿ ರೋಸ್ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.

VISTARANEWS.COM


on

Malayali actress Honey Rose starring Rachel movie Teaser release
Koo

ಬೆಂಗಳೂರು: ಮಲಯಾಳಿ ನಟಿ ಹನಿ ರೋಸ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ರೆಚೆಲ್’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಮೂಲ ಮಲಯಾಳಂನಲ್ಲಿ ನಿರ್ಮಾಣವಾಗಿರುವ ಈ ಸಿನಿಮಾ ಕನ್ನಡದಲ್ಲೂ ರಿಲೀಸ್‌ ಆಗಲಿದೆ. ಚಿತ್ರವು ಹಿಂಸಾಚಾರ ಮತ್ತು ರಕ್ತಪಾತದ ಕಥೆಯಾಗಿರುತ್ತದೆ ಎಂದು ಟೀಸರ್ ಸುಳಿವು ನೀಡುತ್ತದೆ.

ಎಬ್ರಿಡ್ ಶೈನ್ ಸಹ ನಿರ್ಮಾಣದ ಜತೆಗೆ ಮತ್ತು ಬರಹಗಾರರಾಗಿರುವ ಈ ಚಿತ್ರವನ್ನು ಆನಂದಿನಿ ಬಾಲಾ ನಿರ್ದೇಶಿಸಿದ್ದಾರೆ. ಹನಿ ರೋಸ್ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.

ಚಿತ್ರದಲ್ಲಿ ಬಾಬು ರಾಜ್, ಕಲಾಭವನ್ ಶಾಜೋನ್, ರೋಷನ್ ಬಶೀರ್, ಚಂದು ಸಲೀಂಕುಮಾರ್, ರಾಧಿಕಾ ರಾಧಾಕೃಷ್ಣನ್, ಜಾಫರ್ ಇಡುಕ್ಕಿ, ವಿನೀತ್ ತಟ್ಟಿಲ್, ಜೋಜಿ, ದಿನೇಶ್ ಪ್ರಭಾಕರ್, ಪಾಲಿ ವಲ್ಸನ್, ವಂದಿತಾ ಮನೋಹರನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರವು ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Union Budget 2024: ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಏರಿಕೆ? ಇಲ್ಲಿದೆ ಮಹತ್ವದ ಅಪ್‌ಡೇಟ್

ಈ ಚಿತ್ರವನ್ನು ಬಾದುಶಾ ಪ್ರೊಡಕ್ಷನ್ಸ್ ಬ್ಯಾನರ್‌ನಡಿಯಲ್ಲಿ ಬಾದುಶಾ ಎನ್‌ಎಂ, ರಾಜನ್ ಚಿರಾಯಿಲ್ ಮತ್ತು ಎಬ್ರಿಡ್ ಶೈನ್ ನಿರ್ಮಿಸಿದ್ದಾರೆ. ಕಥೆಯನ್ನು ರಾಹುಲ್ ಮನಪ್ಪಟ್ಟು ಬರೆದಿದ್ದು, ಚಿತ್ರಕಥೆಯನ್ನು ರಾಹುಲ್ ಮನಪ್ಪಟ್ಟು ಮತ್ತು ಎಬ್ರಿಡ್ ಶೈನ್ ಮಾಡಿದ್ದಾರೆ. ಸಹ ನಿರ್ಮಾಪಕ – ಹನ್ನನ್ ಮರಮುತ್ತಮ್, ಛಾಯಾಗ್ರಹಣ – ಸ್ವರೂಪ್ ಫಿಲಿಪ್, ಸಂಗೀತ ಮತ್ತು ಬಿಜಿಎಂ – ಇಶಾನ್ ಛಾಬ್ರಾ, ಸಂಕಲನ – ಮನೋಜ್, ನಿರ್ಮಾಣ ವಿನ್ಯಾಸಕ – ಸುಜಿತ್ ರಾಘವ್, ಧ್ವನಿ ಮಿಶ್ರಣ – ರಾಜಕೃಷ್ಣನ್ ಎಂ ಆರ್, ಧ್ವನಿ ವಿನ್ಯಾಸ – ಶ್ರೀ ಶಂಕರ್, ಕಾರ್ಯನಿರ್ವಾಹಕ ನಿರ್ಮಾಪಕರು – ಮಂಜು ಬಾದುಷಾ, ಶೆಮಿ ಬಶೀರ್, ಶೈಮಾ ಮುಹಮ್ಮದ್ ಬಶೀರ್ ಅವರದ್ದು.

Continue Reading

ಸಿನಿಮಾ

Amala Paul: ಮದುವೆಯಾದ 8 ತಿಂಗಳಿಗೇ ಗಂಡು ಮಗುವಿಗೆ ಜನ್ಮ ನೀಡಿದ ಸುದೀಪ್‌ ಚಿತ್ರದ ನಾಯಕಿ

Amala Paul: ದಕ್ಷಿಣ ಭಾರತದ ಖ್ಯಾತ ನಟಿ, ಬಹುಭಾಷಾ ಕಲಾವಿದೆ, ʼಹೆಬ್ಬುಲಿʼ ಚಿತ್ರದಲ್ಲಿ ಕಿಚ್ಚ ಸುದೀಪ್‌ ಜತೆ ಹೆಜ್ಜೆ ಹಾಕಿ ಸ್ಯಾಂಡಲ್‌ವುಡ್‌ಗೆ ಪ್ರವೇಶಿಸಿದ್ದ ಅಮಲಾ ಪೌಲ್‌ ಜೂನ್‌ 11ರಂದು ಗಂಡು ಮುವಿಗೆ ಜನ್ಮ ನೀಡಿದ್ದಾರೆ. ಅಮಲಾ ಪೌಲ್‌-ಜಗತ್‌ ದೇಸಾಯಿ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಈ ಗುಡ್‌ನ್ಯೂಸ್‌ ಹಂಚಿಕೊಂಡಿದ್ದಾರೆ. ಅಮಲಾ ಪೌಲ್‌ ಪುಟ್ಟ ಮಗುವನ್ನು ಎತ್ತಿಕೊಂಡು ಆಸ್ಪತ್ರಯಿಂದ ಮನೆಗೆ ಮರಳುತ್ತಿರುವ ವಿಡಿಯೊ ಪೋಸ್ಟ್‌ ಮಾಡಿದ್ದು, ಫ್ಯಾನ್ಸ್‌ ಶುಭಾಶಯ ತಿಳಿಸಿದ್ದಾರೆ.

VISTARANEWS.COM


on

Amala Paul
Koo

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ, ಬಹುಭಾಷಾ ಕಲಾವಿದೆ, ʼಹೆಬ್ಬುಲಿʼ ಚಿತ್ರದಲ್ಲಿ ಕಿಚ್ಚ ಸುದೀಪ್‌ ಜತೆ ಹೆಜ್ಜೆ ಹಾಕಿ ಸ್ಯಾಂಡಲ್‌ವುಡ್‌ಗೆ ಪ್ರವೇಶಿಸಿದ್ದ ಅಮಲಾ ಪೌಲ್‌ (Amala Paul) ಜೂನ್‌ 11ರಂದು ಗಂಡು ಮುವಿಗೆ ಜನ್ಮ ನೀಡಿದ್ದಾರೆ. ಅಮಲಾ ಪೌಲ್‌ ಮತ್ತು ಜಗತ್‌ ದೇಸಾಯಿ ಕಳೆದ ನವೆಂಬರ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ಅಮಲಾ ಪೌಲ್‌-ಜಗತ್‌ ದೇಸಾಯಿ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಈ ಗುಡ್‌ನ್ಯೂಸ್‌ ಹಂಚಿಕೊಂಡಿದ್ದಾರೆ. ಅಮಲಾ ಪೌಲ್‌ ಪುಟ್ಟ ಮಗುವನ್ನು ಎತ್ತಿಕೊಂಡು ಆಸ್ಪತ್ರಯಿಂದ ಮನೆಗೆ ಮರಳುತ್ತಿರುವ ವಿಡಿಯೊ ಪೋಸ್ಟ್‌ ಮಾಡಿದ್ದು, ಫ್ಯಾನ್ಸ್‌ ಶುಭಾಶಯ ತಿಳಿಸಿದ್ದಾರೆ. ಅಮಲಾ ಪೌಲ್‌ ಮತ್ತು ಜಗನ್‌ ದೇಸಾಯಿ ದಂಪತಿ ಜೂನ್‌ 11ರಂದು ಮಗು ಜನಿಸಿರುವುದಾಗಿ ಹೇಳಿದ್ದಾರೆ. ಜತೆಗೆ ಮಗುವಿಗೆ ಇಳಯ್‌ ಎಂದು ಹೆಸರಿಟ್ಟಿರುವುದಾಗಿ ತಿಳಿಸಿದ್ದಾರೆ. ಇಳಯ್‌ ಎಂದರೆ ʼʼಸಂತೋಷದ ನಗುವಿನೊಂದಿಗೆ ಬೆಳಗುವ ಉತ್ಸಾಹಭರಿತ ಆತ್ಮʼʼ, ʼʼಶ್ರೇಷ್ಠ” ಮತ್ತು “ದೇವರಂತಹ” ಎಂಬ ಅರ್ಥವಿದೆ.

ʼʼನಮ್ಮ ಮಗ ಇಳಯ್‌ ಜೂನ್‌ 11ರಂದು ಜನಿಸಿದʼʼ ಎಂಬ ಕ್ಯಾಪ್ಶನ್‌ ನೀಡಿ ದಂಪತಿ ಈ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಸದ್ಯ ಸೆಲೆಬ್ರಿಟಿಗಳು, ಅಭಿಮಾನಿಗಳು ಇವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅಮಲಾ ಪೌಲ್‌ ಮತ್ತು ಉದ್ಯಮಿ ಜಗತ್ ದೇಸಾಯಿ 2023ರ ನವೆಂಬರ್ 5ರಂದು ಕೇರಳದ ಕೊಚ್ಚಿಯಲ್ಲಿ ವಿವಾಹವಾಗಿದ್ದರು. ಅದಾಗಿ ಎರಡನೇ ತಿಂಗಳಿಗೆ ಅಮಲಾ ಪೌಲ್ ತಾನು ಗರ್ಭಿಣಿ ಎನ್ನುವ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದರು.

ಅಂದಹಾಗೆ ಇದು ಅಮಲಾ ಪೌಲ್‌ ಅವರಿಗೆ ಎರಡನೇ ವಿವಾಹ. ಇದಕ್ಕೂ ಮೊದಲು ನಿರ್ದೇಶಕ ಎ.ಎಲ್.ವಿಜಯ್ ಅವರೊಂದಿಗೆ ಅಮಲಾ ಪೌಲ್‌ ವಿವಾಹ 2014ರಲ್ಲಿ ಚೆನ್ನೈನಲ್ಲಿ ನೆರವೇರಿತ್ತು. ಆದರೆ ಈ ದಾಂಪತ್ಯ ಹೆಚ್ಚು ಕಾಲ ಉಳಿಯಲಿಲ್ಲ. 2017ರಲ್ಲಿ ಅಮಲಾ ಮತ್ತು ವಿಜಯ್ ವಿಚ್ಛೇದನ ಪಡೆದುಕೊಂಡಿದ್ದರು.

ಬಹುಭಾಷಾ ನಟಿ

ಮಲಯಾಳಂ ಮೂಲದ ಅಮಲಾ ಪೌಲ್‌ ದಕ್ಷಿಣ ಭಾರತದ ಎಲ್ಲ ಚಿತ್ರರಂಗದಲ್ಲಿ ಅಭಿನಯಿಸಿ ಬಹುಭಾಷಾ ನಟಿ ಎನಿಸಿಕೊಂಡೊದ್ದಾರೆ. ಅದರಲ್ಲಿಯೂ ಅವರು ಒಂದು ಕಾಲದಲ್ಲಿ ತಮಿಳು ಚಿತ್ರರಂಗದ ಟಾಪ್‌ ನಾಯಕಿಯಾಗಿ ಗುರುತಿಸಿಕೊಂಡಿದ್ದರು. ಸೂರ್ಯ, ಮಾಧವನ್‌, ಆರ್ಯ, ಧನುಷ್‌ ಮುಂತಾದ ಸೂಪರ್‌ ಸ್ಟಾರ್‌ಗಳೊಂದಿಗೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು.

ಅಮಲಾ ಅಭಿನಯಿಸಿದ ಮೊದಲ ಚಿತ್ರ ಮಲೆಯಾಳಂನ ʼನೀಲ ತಾಮರʼ. ಇದು 2009ರಲ್ಲಿ ತೆರೆಕಂಡಿತ್ತು. ಬಳಿಕ ಕಾಲಿವುಡ್‌ಗೆ ಕಾಲಿಟ್ಟ ಅವರು 2010ರಲ್ಲಿ ಮೂರು ತಮಿಳು ಚಿತ್ರಗಳಲ್ಲಿ ಕಾಣಿಸಿಕೊಂಡರು. ಅದರಲ್ಲಿಯೂ ʼಮೈನಾʼ ಅವರಿಗೆ ಬಹು ಜನಪ್ರಿಯತೆ ತಂದುಕೊಟ್ಟಿತು. ಈ ಚಿತ್ರದಲ್ಲಿನ ನಟನೆಗಾಗಿ ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನೂ ಮುಡಿಗೇರಿಸಿಕೊಂಡರು. 2012ರಲ್ಲಿ ʼಲವ್‌ ಫೈಲೂರ್‌ʼ ಸಿನಿಮಾ ಮೂಲಕ ತೆಲುಗಿಗೆ ಕಾಲಿಟ್ಟರು. 2017ರಲ್ಲಿ ಕಿಚ್ಚ ಸುದೀಪ್‌ ಅಭಿನಯದ ʼಹೆಬ್ಬುಲಿʼ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೂ ಪ್ರವೇಶಿಸಿದರು. ಕಳೆದ ವರ್ಷ ತೆರೆಕಂಡ ಹಿಂದಿಯ ʼಭೋಲಾʼ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: Amala Paul: ಎರಡನೇ ಮದುವೆಯಾದ ‘ಹೆಬ್ಬುಲಿ’ ನಟಿ ಅಮಲಾ ಪೌಲ್!

ಇತ್ತೀಚೆಗೆ ತೆರೆಕಂಡ ಪ್ಯಾನ್‌ ಇಂಡಿಯಾ ಸಿನಿಮಾ ʼಆಡು ಜೀವಿತಂʼನಲ್ಲಿ ಅಮಲಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್‌ ಸುಕುಮಾರನ್‌ ನಾಯಕನಾಗಿದ್ದ ಈ ಚಿತ್ರ ಬಾಕ್ಸ್‌ ಆಫೀಸ್‌ನಲ್ಲಿ ಸದ್ದು ಮಾಡಿದೆ.

Continue Reading

ಕರ್ನಾಟಕ

Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Kalki 2898 AD: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ಬಿಡುಗಡೆಯ ಬಳಿಕ ಇದೀಗ ಇದೇ ಚಿತ್ರದ ಭೈರವ ಆಂಥಮ್‌ ಬಿಡುಗಡೆಯಾಗಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಹಾಡು ರಿಲೀಸ್‌ ಆಗಿದೆ. ನಟ ಪ್ರಭಾಸ್‌ ನಟಿಸಿರುವ ಈ ಚಿತ್ರದ ಹಾಡಿಗೆ ಮೊದಲ ಸಲ ಪಂಜಾಬಿ ಗಾಯಕ ದಿಲ್ಜಿತ್‌ ದೋಸಾಂಜ್‌ ಧ್ವನಿ ನೀಡಿದ್ದಾರೆ. ಸಂತೋಷ್‌ ನಾರಾಯಣನ್‌ ಈ ಹಾಡಿಗೆ ಸಂಗೀತ ನೀಡಿದ್ದಾರೆ.

VISTARANEWS.COM


on

Kalki 2898 AD Movie Bhairava Anthem Released
Koo

ಬೆಂಗಳೂರು: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ಬಿಡುಗಡೆಯ ಬಳಿಕ ಇದೀಗ ಇದೇ ಚಿತ್ರದ ಭೈರವ ಆಂಥಮ್‌ ಬಿಡುಗಡೆಯಾಗಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಹಾಡು ರಿಲೀಸ್‌ ಆಗಿದೆ. ನಟ ಪ್ರಭಾಸ್‌ ನಟಿಸಿರುವ ಈ ಚಿತ್ರದ ಹಾಡಿಗೆ ಮೊದಲ ಸಲ ಪಂಜಾಬಿ ಗಾಯಕ ದಿಲ್ಜಿತ್‌ ದೋಸಾಂಜ್‌ ಧ್ವನಿ ನೀಡಿದ್ದಾರೆ. ಸಂತೋಷ್‌ ನಾರಾಯಣನ್‌ ಈ ಹಾಡಿಗೆ ಸಂಗೀತ ನೀಡಿದ್ದಾರೆ.

ಪಕ್ಕಾ ಮಾಸ್‌ ಅವತಾರದಲ್ಲಿ ನಟ ಪ್ರಭಾಸ್‌ ಈ ಹಾಡಿನಲ್ಲಿ ಎದುರಾಗಿದ್ದಾರೆ. ತಲೆಗೆ ಟರ್ಬನ್‌ ಧರಿಸಿ ಮತ್ತು ಪಂಚೆಯಲ್ಲಿ ಮಿಂಚಿದ್ದಾರೆ. ಈಗಾಗಲೇ ಟ್ರೇಲರ್‌ ಮೂಲಕ ಎಲ್ಲರ ಗಮನ ಸೆಳೆದ ಈ ಸಿನಿಮಾ, ಇದೀಗ ಭೈರವ ಆಂಥಮ್‌ ಮೂಲಕ ಕಿಕ್‌ ಹೆಚ್ಚಿಸುತ್ತಿದೆ. ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

Continue Reading

ಸ್ಯಾಂಡಲ್ ವುಡ್

Rakshit Shetty: ʻಏಕಂʼ ವೆಬ್ ಸಿರೀಸ್​ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ!

Rakshit Shetty: ರಿಚರ್ಡ್ ಆ್ಯಂಟನಿ’ ಸಿನಿಮಾ ಸೇರಿದಂತೆ ರಕ್ಷಿತ್ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಟನೆ, ನಿರ್ದೇಶನ ಮತ್ತು ನಿರ್ಮಾಣ ಅಂತ ನಟ ತೊಡಗಿಸಿಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ (Rakshit Shetty) ತಮ್ಮ ನಿರ್ಮಾಣ ಸಂಸ್ಥೆಯಿಂದ ಒಟಿಟಿ ಫ್ಲಾರ್ಟ್ ಫಾರಂಗೆ 8 ಎಪಿಸೋಡ್‌ಗಳ ‘ಏಕಂ’ ವೆಬ್ ಸಿರೀಸ್ ನಿರ್ಮಾಣ ಮಾಡಿದ್ದಾರೆ.

VISTARANEWS.COM


on

Rakshit Shetty Ekam web series release date announce
Koo

ಬೆಂಗಳೂರು: ರಕ್ಷಿತ್ ಶೆಟ್ಟಿ (Rakshit Shetty) ತಮ್ಮ ನಿರ್ಮಾಣ ಸಂಸ್ಥೆಯಿಂದ ಒಟಿಟಿ ಫ್ಲಾರ್ಟ್ ಫಾರಂಗೆ 8 ಎಪಿಸೋಡ್‌ಗಳ ‘ಏಕಂ’ ವೆಬ್ ಸಿರೀಸ್ ನಿರ್ಮಾಣ ಮಾಡಿದ್ದಾರೆ. ಅವರೇ ನಿರ್ದೇಶನ ಕೂಡ ಮಾಡಿದ್ದಾರೆ ಎನ್ನಲಾಗಿದೆ. ಇದೀಗ ಈ ವೆಬ್‌ ಸಿರೀಸ್‌ ಜುಲೈ 13ರಂದು ರಿಲೀಸ್‌ ಆಗುತ್ತಿದೆ. ಈ ಬಗ್ಗೆ ರಕ್ಷಿತ್‌ ಶೆಟ್ಟಿ ಪೋಸ್ಟ್‌ ಮಾಡಿದ್ದು ಹೀಗೆ.  

ʻʻ2020 ಜನವರಿ. ಅಥವಾ ಫೆಬ್ರವರಿಯೇ? ನೆನಪು ಮಬ್ಬಾಗಿದೆ! ಇರಲಿ. ಪರಂವಃ ಹಾಗು ಜರ್ನಿಮ್ಯಾನ್‌
ಫಿಲಂಸ್‌ ಒಟ್ಟಿಗೆ “ಏಕಂ” ಮಾಡಲು ಹೊರಟಿದ್ದು ಅಂದು. ಏನೋ ಹೊಸತೊಂದನ್ನು ಮಾಡುವ
ಉತ್ಸಾಹ ನಮ್ಮಲ್ಲಿ. ಕನ್ನಡದಲ್ಲೊಂದು ವೆಬ್‌ ಸೀರೀಸ್‌ ಹೊರ ಬರಲು ಇದೆ ಸೂಕ್ತ ಸಮಯ
ಎಂದೆನಿಸಿತ್ತು. ಆದರೆ ಅದೇ ಸಮಯಕ್ಕೆ ಕೋವಿಡ್‌ ವಕ್ಕರಿಸಿತು! ಜಗತ್ತೇ ತಲೆ ಕೆಳಗಾದ ಸಮಯ.
ನಮ್ಮಲ್ಲೂ ಆತಂಕ, ಅನಿಶ್ಚಿತತೆ. ಆದರೂ ಹಿಂದೆ ಸರಿಯದೆ ಮುನ್ನುಗ್ಗಿದೆವು.

ಅಕ್ಟೋಬರ್‌ 2021. “ಏಕಂ”ನ ಫೈನಲ್‌ ಕಟ್‌ ನೋಡಿದೆ. ಖುಷಿ ಆಯಿತು. ಹೆಮ್ಮೆ ಎನಿಸಿತು.
ಇದನ್ನ ಜಗತ್ತಿಗೆ ತೋರಿಸಬೇಕೆನಿಸಿತು. ಅದಾಗಿ ಇಂದಿಗೆ ಬರೋಬ್ಬರಿ ಎರಡೂವರೆ ವರ್ಷಗಳು! “ಏಕಂ”
ಅನ್ನು ಹೊರ ತರಲು ಪಟ್ಟ ಶ್ರಮ ಅಷ್ಟಿಷ್ಟಲ್ಲ! ಎಲ್ಲೆಡೆ ನಿರಾಸೆ. ಅದೇ ನೆಪ. ಅದೇ ಸಬೂಬು| ಯಾವುದೇ
ಕೃತಿಯ ಅರ್ಹತೆಯನ್ನ ನಿರ್ಧರಿಸುವ ಅವಕಾಶ, ಹಾಗು ಹಕ್ಕು. ಪ್ರೇಕ್ಷಕರಿಗಿರಬೇಕು ಎ೦ದು ನಾನು
ಭಾವಿಸುತ್ತೇನೆ.

ಇದನ್ನೂ ಓದಿ: Rakshit Shetty: ಸಿಂಪಲ್‌ ಸ್ಟಾರ್‌ಗೆ ಇಂದು ಜನುಮದಿನದ ಸಂಭ್ರಮ; ರಕ್ಷಿತ್‌  ಸಿನಿ ಜರ್ನಿ ಹೀಗಿತ್ತು!

ಹಾಗಾಗಿ, “ಏಕಂ” ಅನ್ನು ನಾವು ನಮ್ಮದೇ ಆದ ವೇದಿಕೆಯಲ್ಲಿ ನಿಮ್ಮ ಮುಂದೆ ತರಲು ನಿಶ್ಚಯಿಸಿದ್ದೇವೆ.
‘ಏಕಂ” ನಿಮಗೆ ಇಷ್ಟವಾಗಬಹುದು. ಇಷ್ಟವಾಗದೇ ಇರಬಹುದು. ಆದರೆ ಈ ಪ್ರಯತ್ನವನ್ನು
ನಿರ್ಲಕ್ಷಿಸುವಂತಿಲ್ಲ ಎ೦ಬುದನ್ನು ನಾನು ಬಲವಾಗಿ. ನಂಬಿದ್ದೇನೆ. “ಏಕಂ” ಒಂದು ಶ್ಲಾಘನೀಯ ಪ್ರಯತ್ನ.
ಇದನ್ನು ನಾವು ಎಷ್ಟು ಪ್ರೀತಿಯಿಂದ ಮಾಡಿದ್ದೇವೋ, ಅಷ್ಟೇ ಪ್ರೀತಿಯಿಂದ ನೀವು ನಮ್ಮ ಈ ಪ್ರಯತ್ನವನ್ನ
ಸ್ವೀಕರಿಸುತ್ತೀರಿ ಎಂದು ಆಶಿಸುತ್ತೇನೆʼʼಎಂದು ರಕ್ಷಿತ್‌ ಶೆಟ್ಟಿ ಹೇಳಿಕೊಂಡಿದ್ದಾರೆ. ಇನ್ನು ಪೋಸ್ಟರ್‌ ಮಾಹಿತಿ ಪ್ರಕಾರ ಈ ಸಿರೀಸ್‌ ಜುಲೈ 13ರಂದು www.ekamtheseries.comನಲ್ಲಿ ರಿಲೀಸ್‌ ಆಗಲಿದೆ.

ರಿಚರ್ಡ್ ಆ್ಯಂಟನಿ’ ಸಿನಿಮಾ ಸೇರಿದಂತೆ ರಕ್ಷಿತ್ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಟನೆ, ನಿರ್ದೇಶನ ಮತ್ತು ನಿರ್ಮಾಣ ಅಂತ ನಟ ತೊಡಗಿಸಿಕೊಂಡಿದ್ದಾರೆ.

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ʻಎʼ ಹಾಗೂ ʻಬಿʼ ಕಳೆದ ವರ್ಷ ರಿಲೀಸ್ ಆಗಿತ್ತು. ಇದೀಗ ರಿಚರ್ಡ್​ ಆಂಟನಿ ಹಾಗೂ ‘ಪುಣ್ಯಕೋಟಿ ಸಿನಿಮಾಗಳನ್ನು ರಕ್ಷಿತ್‌ ನಿರ್ದೇಶನ ಮಾಡುತ್ತಿದ್ದಾರೆ. ನನ್ನ ಮುಂದಿನ ಎರಡು ಸಿನಿಮಾಗಳಿಗೆ (ʻರಿಚರ್ಡ್​ ಆಂಟನಿ’ ಹಾಗೂ ‘ಪುಣ್ಯಕೋಟಿ’) ಪರಶುರಾಮ ಹಾಗೂ ಆತನ ಕೊಡಲಿಯೇ ಸ್ಫೂರ್ತಿ. ಈ ಕಥೆ ಜತೆ ಹೀಗಾಗಲೇ 4 ವರ್ಷ ಕಳೆದಿದ್ದೇನೆ. ಇನ್ನೂ ನಾಲ್ಕು ವರ್ಷ ಕಳೆಯೋದು ಇದೆ ಅನಿಸುತ್ತಿದೆ ಎಂದು ರಕ್ಷಿತ್ ಶೆಟ್ಟಿ ಈ ಹಿಂದೆ ಹೇಳಿಕೊಂಡಿದ್ದರು.

ರಿಚರ್ಡ್‌ ಆಂಟನಿ ಜತೆಗೆ ರಕ್ಷಿತ್‌ ಶೆಟ್ಟಿ ಹಲವು ಯೋಜನೆಗಳನ್ನು ಹೊಂದಿದ್ದಾರೆ. ಈ ಬಗ್ಗೆ ಈ ಹಿಂದೆ ಅವರು ಟ್ವೀಟ್‌ ಹಂಚಿಕೊಂಡಿದ್ದರು. ʻʻಸಪ್ತ ಸಾಗರದಾಚೆ ಎಲ್ಲೋ ನಂತರ ನನ್ನ ಲೈನ್ ಅಪ್‌ಗಳು ಸಾಕಷ್ಟು ಸ್ಪಷ್ಟವಾಗಿವೆ. ಅಂದರೆ ರಿಚರ್ಡ್​ ಆಂಟನಿ, ಪುಣ್ಯ ಕೋಟಿ 1 (PK 1), ಪುಣ್ಯ ಕೋಟಿ 2 (PK 2), (RA), PK 1 ಮತ್ತು 2,ಮಿಡ್ನೈಟ್ ಟು ಮೋಕ್ಷ (M2M) ಇವುಗಳು ನನಗೆ ನಿದ್ದೆಯಿಲ್ಲದ ರಾತ್ರಿಗಳನ್ನು ನೀಡುವ ನಾಲ್ಕು ಚಲನಚಿತ್ರಗಳಾಗಿವೆ. ಆದರೆ ಕಿರಿಕ್‌ ಪಾರ್ಟಿ 2 (KP2) ಗಾಗಿ ನಾನು ವಿಭಿನ್ನ ಯೋಜನೆಗಳನ್ನು ಹೊಂದಿದ್ದೇನೆʼʼ ಎಂದಿದ್ದರು.

Continue Reading
Advertisement
Shot Dead
ವಿದೇಶ21 seconds ago

ಪಾಕ್‌ನಲ್ಲಿ ಮುಂದುವರಿದ ʼಅಪರಿಚಿತ ವ್ಯಕ್ತಿʼಗಳ ಕಾರ್ಯಾಚರಣೆ; ಭಾರತೀಯ ಸೇನಾ ಶಿಬಿರದ ಮೇಲಿನ ದಾಳಿಯ ಮಾಸ್ಟರ್‌ ಗುಂಡಿಗೆ ಮೈಂಡ್‌ ಬಲಿ

Kane Williamson
ಕ್ರೀಡೆ5 mins ago

Kane Williamson: ನಾಯಕತ್ವದಿಂದ ಕೆಳಗಿಳಿದ ಕೇನ್​ ವಿಲಿಯಮ್ಸನ್

Actor Darshan Renuka Swamy murder case umapathy counter
ಸ್ಯಾಂಡಲ್ ವುಡ್20 mins ago

Actor Darshan: ನಮ್ಮ ಚಟ, ಚಟ್ಟ ಹತ್ತಿಸುವರೆಗೂ ಇರಬಾರದು ಎಂದು ದರ್ಶನ್‌ಗೆ ತಿರುಗೇಟು ಕೊಟ್ಟ ಉಮಾಪತಿ!

International Yoga Day 2024
ಆರೋಗ್ಯ33 mins ago

International Yoga Day 2024: ಹಿರಿಯರಿಗೆ ಸೂಕ್ತವಾದ ಯೋಗಾಸನಗಳಿವು

Lucknow Airport
ದೇಶ39 mins ago

Lucknow Airport: ವಿಮಾನ ಸಿಬ್ಬಂದಿ ಮೇಲೆ ಏಕಾಏಕಿ ದಾಳಿ ನಡೆಸಿದ ಮಹಿಳೆ; ಕಾರಣ ಏನು?

USA vs SA
ಕ್ರಿಕೆಟ್41 mins ago

USA vs SA: ಇಂದು ದಕ್ಷಿಣ ಆಫ್ರಿಕಾ-ಅಮೆರಿಕ ನಡುವೆ ಸೂಪರ್​-8 ಕದನ

Vastu Tips
ಧಾರ್ಮಿಕ54 mins ago

Vastu Tips: ಗಂಗಾ ಜಲ ಮನೆಯಲ್ಲಿಟ್ಟರೆ ಸಾಲದು; ಅದನ್ನು ಎಲ್ಲಿ ಇಡಬೇಕು, ಹೇಗೆ ಇಡಬೇಕು?

actor Darshan Arrested
ಕ್ರೈಂ1 hour ago

Actor Darshan: `ನಾನೇ 30 ಲಕ್ಷ ರೂ. ಕೊಟ್ಟೆ….’ ಕೊಲೆ ಬಗ್ಗೆ ಸ್ವ ಇಚ್ಛೆ ಹೇಳಿಕೆ ನೀಡಿದ ದರ್ಶನ್‌

Narendra Modi
ದೇಶ1 hour ago

Narendra Modi: ಕಾಶಿಯಲ್ಲಿ ವೈಭವದ ಗಂಗಾ ಆರತಿ ಕಣ್ತುಂಬಿಕೊಂಡ ಮೋದಿ; ಇಲ್ಲಿದೆ Photo Gallery

New criminal laws
ದೇಶ1 hour ago

New Criminal Laws: ಹೊಸ ಕ್ರಿಮಿನಲ್ ಕಾನೂನು ಜು.1ರಿಂದ ಜಾರಿ; ಯಾವ ಕಾನೂನು? ಏನು ಬದಲಾವಣೆ? Complete Details!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು2 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ3 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ3 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ3 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ4 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ5 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ5 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌