ಬೆಂಗಳೂರು: ಸಮಂತಾ ರುತ್ ಪ್ರಭು (Samantha Ruth Prabhu) ಸದ್ಯ ಸಿನಿಮಾದಿಂದ ಬ್ರೇಕ್ ಪಡೆದಿದ್ದಾರೆ. ಜತೆಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ನಟಿ ಸಮಂತಾ ಭಾನುವಾರದಂದು (ಡಿ.10) ತಮ್ಮ ಬ್ಯಾನರ್ ‘ತ್ರಲಾಲಾ ಮೂವಿಂಗ್ ಪಿಕ್ಚರ್ಸ್’ ಪ್ರಾರಂಭಿಸುವುದರೊಂದಿಗೆ, ನಿರ್ಮಾಣ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ಸಮಂತಾ ಹೊಸ ಪ್ರೊಡಕ್ಷನ್ ಹೌಸ್ ಶೀರ್ಷಿಕೆ ಅನಿಮೇಶನ್‌ನ ವಿಡಿಯೊವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಸೆಲೆಬ್ರಿಟಿಗಳು , ಹಾಗೂ ಫ್ಯಾನ್ಸ್ ನಟಿಗೆ ಶುಭ ಹಾರೈಸುತ್ತಿದ್ದಾರೆ.
ಇತ್ತೀಚೆಗೆ ಹಿಂದಿಯ ರ್‍ಯಾಪ್ ರಿಯಾಲಿಟಿ ಶೋ ಜಡ್ಜ್ ಹನಿ ಸಿಂಗ್ ಜತೆ ಸಮಂತಾ ವೇದಿಕೆ ಹಂಚಿಕೊಂಡಿದ್ದರು. MTV ರಿಯಾಲಿಟಿ ಶೋನಲ್ಲಿ ಸಮಂತಾ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದರು. ಇದೀಗ ಸಮಂತಾ ತಮ್ಮ ಪ್ರೊಡಕ್ಷನ್ ಹೌಸ್‌ವನ್ನು ಪರಿಚಯಿಸಿದ್ದಾರೆ “ನನ್ನ ನಿರ್ಮಾಣ ಸಂಸ್ಥೆ, ತ್ರಲಾಲಾ ಮೂವಿಂಗ್ ಪಿಕ್ಚರ್ಸ್ ಘೋಷಿಸಲು ತುಂಬಾ ಉತ್ಸುಕವಾಗಿದೆ! ತ್ರಲಾಲಾ ಮೂವಿಂಗ್ ಪಿಕ್ಚರ್ಸ್ ಹೊಸ ಯುಗದ ಅಭಿವ್ಯಕ್ತಿ ಮತ್ತು ಚಿಂತನೆಯ ವಿಷಯವನ್ನು ಪ್ರತಿನಿಧಿಸುವ ಗುರಿಯನ್ನು ಹೊಂದಿದೆ. ಒಳ್ಳೆಯ ಕಥೆಗಳನ್ನು ಹೇಳಲು ಚಲನಚಿತ್ರ ನಿರ್ಮಾಪಕರಿಗೆ ಒಂದು ವೇದಿಕೆʼʼಎಂದು ಬರೆದುಕೊಂಡಿದ್ದಾರೆ. ನಟಿ ನಂದಿನಿ ರೆಡ್ಡಿ, ಪಾರ್ವತಿ, ಅನುಪಮಾ ಪರಮೇಶ್ವರನ್ ಮತ್ತು ಇತರರು ಇದೀಗ ಸಮಂತಾ ಅವರಿಗೆ ಕಮೆಂಟ್ ಮೂಲಕ ಅಭಿನಂದಿಸಿದ್ದಾರೆ.
ಸಮಂತಾ ರುತ್ ಪ್ರಭು ಕೊನೆಯ ಬಾರಿಗೆ ‘ಖುಶಿ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಮುಂದೆ, ಸಮಂತಾ ಸಿಟಾಡೆಲ್‌ನ ಭಾರತೀಯ ಆವೃತ್ತಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಇದರಲ್ಲಿ ವರುಣ್ ಧವನ್ ಸಹ ನಟಿಸಿದ್ದಾರೆ. ಇದನ್ನು ರಾಜ್ ಮತ್ತು ಡಿಕೆ ನಿರ್ದೇಶಿಸಿದ್ದಾರೆ.
ಇದನ್ನೂ ಓದಿ: Samantha Ruth Prabhu: ರಿಯಾಲಿಟಿ ಶೋಗೆ ಸ್ಟೈಲಿಶ್ ಆಗಿ ಎಂಟ್ರಿ ಕೊಟ್ಟ ಸಮಂತಾ!
ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ನಿರ್ಮಿಸುವ ಮುಂಬರುವ ಚಿತ್ರದಲ್ಲಿ ಸಮಂತಾ ರುತ್ ಪ್ರಭು ಮತ್ತು ಸಲ್ಮಾನ್ ಖಾನ್ ರೊಮ್ಯಾನ್ಸ್ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಚಿತ್ರಕ್ಕಾಗಿ ನಿರ್ದೇಶಕ ವಿಷ್ಣುವರ್ಧನ್ ಅವರೊಂದಿಗೆ ಸಮಂತಾ ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ ಈ ಸಿನಿಮಾಗೆ ಸಮಂತಾ ಜತೆಗೆ ತ್ರಿಶಾ ಮತ್ತು ಅನುಷ್ಕಾ ಶೆಟ್ಟಿ ಕೂಡ ಇರಲಿದ್ದಾರೆ ಎಂದು ಹೇಳಲಾಗಿದೆ. ಸದ್ಯಕ್ಕೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.
ಸಲ್ಮಾನ್ ಖಾನ್ ಮತ್ತು ಕರಣ್ ಜೋಹರ್ ಒಟ್ಟಿಗೆ ಮತ್ತೆ ಸಿನಿಮಾ ಮಾಡಲಿದ್ದಾರೆ ಎಂದು ಈ ಮುಂಚೆಯೇ ಗಾಸಿಪ್‌ಗಳು ಹಬ್ಬಿತ್ತು. 1998ರಲ್ಲಿ ಕುಚ್ ಕುಚ್ ಹೋತಾ ಹೈನಲ್ಲಿ ಸಲ್ಮಾನ್ ಕಾಣಿಸಿಕೊಂಡ ನಂತರ ಬರೋಬ್ಬರಿ 25 ವರ್ಷಗಳ ಬಳಿಕ ಕರಣ್ ಜತೆ ಕೈ ಜೋಡಿಸುತ್ತಿದ್ದಾರೆ ಸಲ್ಮಾನ್. 2023ರ ನವೆಂಬರ್‌ನಲ್ಲಿ ಈ ಸಿನಿಮಾ ಸೆಟ್ಟೇರಲಿದೆ ಎಂದು ಹೇಳಲಾಗುತ್ತಿದೆ. ಪ್ರಿ-ಪ್ರೊಡಕ್ಷನ್ ಕೆಲಸವು ಆಗಸ್ಟ್ 2023ರಿಂದ ಶುರುವಾಗಲಿದೆ ಎಂದೂ ವರದಿಯಾಗಿದೆ.