Samantha Ruth Prabhu: ನಿಮ್ಮ ಕೆಲಸ ನೀವು ನೋಡಿಕೊಳ್ಳಿ ಎಂದು ಸಮಂತಾ ಹೇಳಿದ್ದು ಯಾಕೆ? - Vistara News

ಕಾಲಿವುಡ್

Samantha Ruth Prabhu: ನಿಮ್ಮ ಕೆಲಸ ನೀವು ನೋಡಿಕೊಳ್ಳಿ ಎಂದು ಸಮಂತಾ ಹೇಳಿದ್ದು ಯಾಕೆ?

ನಾಗಚೈತನ್ಯ ಮತ್ತು ಶೋಭಿತಾ ಧೂಲಿಪಾಲ ಡೇಟಿಂಗ್‌ ಕುರಿತು ತಮ್ಮನ್ನು ಕೆಣಕಲು ಬಂದಿರುವ ಆನ್‌ಲೈನ್‌ ಟ್ರೋಲ್‌ಗಳಿಗೆ Samantha Ruth Prabhu ಟ್ವೀಟ್‌ ಮೂಲಕ ಖಡಕ್‌ ಉತ್ತರ ನೀಡಿದ್ದಾರೆ.

VISTARANEWS.COM


on

Samantha Ruth Prabhu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ನಟಿ ಸಮಂತಾ (Samantha Ruth Prabhu) ಅವರಿಂದ ದೂರವಾದ ಮೇಲೆ ನಟ ನಾಗಚೈತನ್ಯ (Naga Chaitanya) ಅವರು ಶೋಭಿತಾ ಧೂಲಿಪಾಲ (sobhita dhulipala) ಅವರೊಂದಿಗೆ ಡೇಟ್‌ ಮಾಡುತ್ತಿರುವುದಾಗಿ ಗಾಸಿಪ್‌ ಹರಿದಾಡುತ್ತಿದೆ. ಈ ಬಗ್ಗೆ ಸಮಂತಾ ಅವರನ್ನು ಕೆಣಕಲು ಹೋದ ಟ್ರೋಲ್‌ಗಳನ್ನು ಸಮಂತಾ ಖಡಕ್ಕಾಗಿ ಎಚ್ಚರಿಸಿದ್ದಾರೆ.

ಗಾಸಿಪ್‌ ಹರಡಿದ್ಯಾಕೆ?

ನಾಗ ಚೈತನ್ಯ ಮತ್ತು ಶೋಭಿತಾ ಧೂಲಿಪಾಲ ಜುಬಿಲಿ ಹಿಲ್ಸ್‌ನಲ್ಲಿರುವ ಅಪಾರ್ಟ್‌ಮೆಂಟ್‌ ಒಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಒಂದೇ ಕಾರಿನಲ್ಲಿ ಅವರಿಬ್ಬರು ಮನೆಯಿಂದ ಹೊರಬಂದಿದ್ದಾರೆ. ಆ ಮನೆಯ ಇಂಟೀರಿಯರ್ ಕೆಲಸ ಕೂಡ ನಡೆಯುತ್ತಿದೆ. ಮೇಜರ್‌ ಸಿನಿಮಾ ಶೂಟಿಂಗ್‌ ವೇಳೆ ಸಾಕಷ್ಟು ಬಾರಿ ನಾಗ ಚೈತನ್ಯ ಮತ್ತು ಶೋಭಿತಾ ಧೂಲಿಪಾಲ ಭೇಟಿಯಾಗಿದ್ದರು ಎಂದು ಸಿನಿ ಮೂಲಗಳು ಹೇಳಿವೆ. ಶೋಭಿತಾ ಧೂಲಿಪಾಲ ಅವರು ತಮ್ಮ 30ನೇ ಹುಟ್ಟುಹಬ್ಬವನ್ನು ಮೇ 31ರಂದು ಹೈದರಾಬಾದ್‌ನಲ್ಲಿ ನಾಗ ಚೈತನ್ಯ ಹಾಗೂ ಅವರ ಆಪ್ತ ಸ್ನೇಹಿತರೊಂದಿಗೆ ಆಚರಿಸಿದ್ದರು.

ಇದನ್ನೂ ಓದಿ | Kushi Movie : ಶೂಟಿಂಗ್‌ ವೇಳೆ ಅವಘಡದಲ್ಲಿ ವಿಜಯ್‌ ದೇವರಕೊಂಡ -ಸಮಂತಾಗೆ ಗಾಯ

ಫ್ಯಾನ್ಸ್‌ ವಾರ್‌

ಇದೀಗ ನಾಗಚೈತನ್ಯ ಹಾಗೂ ಶೋಭಿತಾ ಧೂಲಿಪಾಲ ಅವರ ಡೇಟಿಂಗ್‌ ಕಾರಣದಿಂದಲೇ ಇವರಿಬ್ಬರು ದೂರವಾಗಲು ಕಾರಣ ಎಂದು ಸೋಷಿಯಲ್‌ ಮೀಡಿಯಾ ಮೂಲಕ ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ನಾಗಚೈತನ್ಯ ಅಭಿಮಾನಿಗಳು ಈ ರೀತಿ ಗಾಸಿಪ್‌ಗಳನ್ನು ಸ್ವತಃ ಸಮಂತಾ ಅವರೇ ಸೃಷ್ಟಿ ಮಾಡುತ್ತಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಇದು ಸಮಂತಾ ಗಮನಕ್ಕೆ ಬಂದಿದ್ದು, ನಾನು ಈ ಸಂಬಂಧದಿಂದ ಮುಂದೆ ಹೋಗಿದ್ದೇನೆ, ನೀವು ಕೂಡ ಮೂವ್‌ ಆನ್‌ ಆಗಿ ಎಂದು ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಅಕ್ಟೋಬರ್‌ 2ರಂದು ಒಪ್ಪಂದದಂತೆ ಸಮಂತಾ ಪ್ರಭು ಹಾಗೂ ನಾಗಚೈತನ್ಯ ದೂರವಾಗಿರುವುದಾಗಿ ಘೋಷಿಸಿಕೊಂಡಿದ್ದರು.

ಹುಡುಗಿಯರ ಬಗ್ಗೆ ವದಂತಿ : ನಿಜವಾಗಿರಬಹುದು

ಹುಡುಗರ ಬಗ್ಗೆ ವದಂತಿ : ಹುಡುಗಿಯರೇ ಕ್ರಿಯೇಟ್‌ ಮಾಡಿರಬಹುದು!

ನೀವು ಬೆಳೆಯಿರಿ. ನಾನು ಮೂವ್‌ ಆನ್‌ ಆಗಿದ್ದೇನೆ, ನೀವು ಮೂವ್‌ ಆನ್‌ ಆಗಬೇಕು. ನಿಮ್ಮ ಕೆಲಸ ಮತ್ತು ಕುಟುಂಬದವರ ಮೇಲೆ ಗಮನಹರಿಸಿ- ಎಂದು ಸಮಂತಾ ಬರೆದುಕೊಂಡಿದ್ದಾರೆ.

ಶೋಭಿತಾ ಧೂಲಿಪಾಲ ಯಾರು?


ಆಂಧ್ರ ಪ್ರದೇಶದ ಶೋಭಿತಾ ಧೂಲಿಪಾಲ ಅವರು ಮಾಡೆಲ್ ಆಗಿದ್ದವರು. ಇಲ್ಲಿಯವರೆಗೆ ತೆಲುಗು, ತಮಿಳು, ಹಿಂದಿ ಚಿತ್ರಗಳಲ್ಲಿ ನಟಿಸಿರುವ ಶೋಭಿತಾ 2016ರಲ್ಲಿ ರಮನ್ ರಾಘವ್ 2.0 ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಗೂಢಚಾರಿ, ದಿ ಬಾಡಿ, ಘೋಸ್ಟ್ ಸ್ಟೋರೀಸ್, ಕುರುಪ್, ಮೇಜರ್ ಮುಂತಾದ ಸಿನಿಮಾಗಳಲ್ಲಿ ಶೋಭಿತಾ ಧೂಲಿಪಾಲ ನಟಿಸಿದ್ದಾರೆ. ಪೊನ್ನಿಯಿನ್ ಸೆಲ್ವನ್: 1, ಸಿತಾರಾ, ಮಂಕಿ ಮ್ಯಾನ್ ಸಿನಿಮಾಗಳಲ್ಲಿಯೂ ಶೋಭಿತಾ ನಟಿಸಿದ್ದು, ಅವುಗಳು ರಿಲೀಸ್ ಆಗಬೇಕಿವೆ. 2013ರಲ್ಲಿ ಫೇಮಿನಾ ಮಿಸ್‌ ಇಂಡಿಯಾ ಅವಾರ್ಡ್‌ ಕೂಡ ಪಡೆದಿದ್ದಾರೆ.

ಇದನ್ನೂ ಓದಿ | Happy Birthday ಸಮಂತಾ ರುತ್ ಪ್ರಭು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Kamal Haasan: ‘ಇಂಡಿಯನ್-2’ ಸಿನಿಮಾದ ಎರಡನೇ ಹಾಡು ರಿಲೀಸ್!

Kamal Haasan: 1996ರಲ್ಲಿ ‘ಇಂಡಿಯನ್’ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಸೇನಾಪತಿ ಎಂಬ ಪಾತ್ರದಲ್ಲಿ ಕಮಲ್ ಹಾಸನ್ ಅವರು ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ ಸಿನಿಮಾ ಮೂಡಿಬರುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಕಮಲ್ ಹಾಸನ್ ಹಿರಿಯ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

VISTARANEWS.COM


on

Kamal Haasan indian 2 second song out
Koo

ಬೆಂಗಳೂರು: ಕಾಲಿವುಡ್‌ ನಟ ಕಮಲ್ ಹಾಸನ್ (Kamal Haasan) ನಟನೆಯ ಬಹುನಿರೀಕ್ಷಿತ ಸಿನಿಮಾ ʻಇಂಡಿಯನ್ 2ʼ ಜುಲೈ 12ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿರುವ ಈ ಚಿತ್ರದ ಎರಡನೇ ಹಾಡು ಅನಾವರಣಗೊಂಡಿದೆ. ಬೊಮ್ಮರಿಲ್ಲು ಸಿದ್ದಾರ್ಥ್ ಹಾಗೂ ರಕುಲ್ ಪ್ರೀತ್ ಸಿಂಗ್ ನಡುವಿನ ಪ್ರೇಮಗೀತೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಾಮ ಜೋಗಯ್ಯಶಾಸ್ತ್ರಿ ತೆಲುಗು ವರ್ಷನ್ ಹಾಡಿಗೆ ಸಾಹಿತ್ಯ ಬರೆದಿದ್ದು, ತಾಮರೈ ತಮಿಳು ವರ್ಷನ್ ಗೆ ಪದ ಗೀಚಿದ್ದಾರೆ. ಅನಿರುದ್ಧ ರವಿಚಂದರ್ ಹಾಡಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.

1996ರಲ್ಲಿ ‘ಇಂಡಿಯನ್’ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಸೇನಾಪತಿ ಎಂಬ ಪಾತ್ರದಲ್ಲಿ ಕಮಲ್ ಹಾಸನ್ ಅವರು ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ ಸಿನಿಮಾ ಮೂಡಿಬರುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಕಮಲ್ ಹಾಸನ್ ಹಿರಿಯ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಮತ್ತದೇ ಅವತಾರದಲ್ಲಿ ನೋಡಬಹುದಾಗಿದೆ.

ಇದನ್ನೂ ಓದಿ: Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

ಕಮಲ್ ಹಾಸನ್ ಜತೆಯಲ್ಲಿ ಸಿದ್ದಾರ್ಥ್, ಎಸ್ ಜೆ ಸೂರ್ಯ, ಕಾಜಲ್ ಅಗರ್ವಾಲ್, ರಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್, ಕಾಳಿದಾಸ್ ಜಯರಾಂ, ಗುಲ್ಶನ್ ಗ್ರೋವರ್, ನೆಡುಮುಡಿ ವೇಣು, ವಿವೇಕ್, ಸಮುದ್ರಕಣಿ, ಬಾಬಿ ಸಿಂಹ, ಗುರು ಸೋಮಸುಂದರಂ, ದೆಹಲಿ ಗಣೇಶ್, ಜಯಪ್ರಕಾಶ್, ಮನೋಬಾಲಾ, ವೆನ್ನೆಲಾ ಕಿಶೋರ್, ಮತ್ತು ದೀಪಾ ಶಂಕರ್ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: IPL 2024 : ಜಿಯೋಸಿನಿಮಾದಲ್ಲಿ ದಾಖಲೆಯ 62 ಕೋಟಿಗೂ ಅಧಿಕ ವೀಕ್ಷಣೆ ಕಂಡ ಐಪಿಎಲ್​

ಎಸ್. ಶಂಕರ್ ನಿರ್ದೇಶನದಲ್ಲಿ ‘ಇಂಡಿಯನ್ 2’ ಸಿನಿಮಾ ಮೂಡಿ ಬರುತ್ತಿದ್ದು, ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

Continue Reading

ಕಾಲಿವುಡ್

Actor Rajinikanth: ಈ ಬಾರಿಯೂ ಮೋದಿ ಗೆಲ್ಲಬಹುದಾ ಎಂಬ ಪ್ರಶ್ನೆಗೆ ರಜನಿಕಾಂತ್ ಕೊಟ್ಟ ಉತ್ತರ ಏನು?

Actor Rajinikanth ಇತ್ತೀಚೆಗೆ ರಜನಿಕಾಂತ್ ಅವರು ಅಬುಧಾಬಿಯ ಬಿಎಪಿಎಸ್ ಹಿಂದೂ ಮಂದಿರಕ್ಕೆ ಭೇಟಿ ನೀಡಿದ್ದರು. ಕೆಲವು ದಿನಗಳ ಹಿಂದೆ ಯುನೈಟೆಡ್ ಅರಬ್ ಎಮಿರೇಟ್ಸ್, ನಟ ರಜನಿಕಾಂತ್ ಅವರಿಗೆ ಗೋಲ್ಡನ್ ವೀಸಾ ನೀಡಿ ಗೌರವಿಸಿದೆ. ವೆಟ್ಟೈಯನ್ ಚಿತ್ರದ ಶೂಟಿಂಗ್ ಮುಗಿಸಿರು ರಜನಿಕಾಂತ್​ (Rajinikanth) ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ವಿಶ್ರಾಂತಿ ಪಡೆದಿದ್ದರು. ಅಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ರಜನಿಕಾಂತ್ ಭಾಗವಹಿಸಿದ್ದರು. ಗೋಲ್ಡನ್​ ವೀಸಾ ನೀಡಿದ ಅಬುಧಾಬಿ ಸರ್ಕಾರಕ್ಕೆ ನಟ ರಜನಿಕಾಂತ್​ ಧನ್ಯವಾದ ಕೂಡ ಹೇಳಿದ್ದಾರೆ.

VISTARANEWS.COM


on

Actor Rajinikanth response to political questions is unmissable
Koo

ಬೆಂಗಳೂರು: ಪ್ರತಿ ಚಿತ್ರ ಮುಗಿದ ನಂತರ, ರಜನಿಕಾಂತ್ (Actor Rajinikanth) ಹಿಮಾಲಯದ ಪ್ರವಾಸವನ್ನು ಕೈಗೊಳ್ಳುತ್ತಾರೆ. ನಟ ರಜನಿಕಾಂತ್‌ ಅವರು ಆಗಾಗ ಆಧ್ಯಾತ್ಮಿಕದ ಕಡೆಗೆ ಹೊರಳುವುದನ್ನು ನೋಡಿಯೇ ಇರುತ್ತೀರ. ಭಕ್ತಿ, ದೇವರ ವಿಚಾರದಲ್ಲಿ ಅವರು ಮನಸ್ಸು ಸದಾ ಜಾಗೃತವಾಗಿರುತ್ತದೆ. ಈಗಾಗಲೆ ಹಲವಾರು ಸಲ ಹಿಮಾಲಕ್ಕೆ ಹೋಗಿ ಬಂದಿದ್ದಾರೆ. ಈ ಆಧ್ಯಾತ್ಮಿಕ ಪ್ರವಾಸವನ್ನು ಕೈಗೊಳ್ಳುವ ಸಂಪ್ರದಾಯವನ್ನು ಬಹು ವರ್ಷಗಳಿಂದ ನಟ ಹೊಂದಿದ್ದಾರೆ. ಈ ಹಿಂದೆ ಹಿಮಾಲಯಕ್ಕೆ ಆಧ್ಯಾತ್ಮಿಕ ಪ್ರವಾಸಗಳನ್ನು ಮಾಡಿದ್ದ ರಜನಿಕಾಂತ್ ಈಗ ಮತ್ತಷ್ಟು ಪವಿತ್ರ ಸ್ಥಳಗಳಿಗೆ ಭೇಟಿ ನೀಡಲು ಯೋಜಿಸುತ್ತಿದ್ದಾರೆ. ಈ ವೇಳೆ ಲೋಕಸಭಾ ಚುನಾವಣಾ ಫಲಿತಾಂಶಗಳ ಬಗ್ಗೆ ನಟನಿಗೆ ಪ್ರಶ್ನೆ ಎದುರಾಗಿದೆ. ಈ ವೇಳೆ ರಜನಿ ʻʻಯಾವುದೇ ರೀತಿಯ ರಾಜಕೀಯ ಪ್ರಶ್ನೆಗಳನ್ನು ಕೇಳಬೇಡಿʼʼ ಎಂದು ನಗುತ್ತ ವಿನಂತಿಸಿದ್ದಾರೆ.

ಈ ಹಿಂದೆ ಹಿಮಾಲಯಕ್ಕೆ ಆಧ್ಯಾತ್ಮಿಕ ಪ್ರವಾಸಗಳನ್ನು ಮಾಡಿದ್ದ ರಜನಿಕಾಂತ್ ಈಗ ಮತ್ತಷ್ಟು ಪವಿತ್ರ ಸ್ಥಳಗಳಿಗೆ ಭೇಟಿ ನೀಡಲು ಯೋಜಿಸುತ್ತಿದ್ದಾರೆ. ಸೂಪರ್‌ಸ್ಟಾರ್ ಚೆನ್ನೈನಿಂದ ಹೊರಟು ಉತ್ತರಾಖಂಡದ ಡೆಹ್ರಾಡೂನ್‌ಗೆ ಆಗಮಿಸಿ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದರು. ಈ ವೇಳೆ ಮಾಧ್ಯಮಗಳು ಲೋಕಸಭಾ ಚುನಾವಣಾ ಫಲಿತಾಂಶಗಳ ಬಗ್ಗೆ ನಟನಿಗೆ ಪ್ರಶ್ನೆ ಕೇಳಿದ್ದಾರೆ. ಈ ವೇಳೆ ರಜನಿ ʻʻಯಾವುದೇ ರೀತಿಯ ರಾಜಕೀಯ ಪ್ರಶ್ನೆಗಳನ್ನು ಕೇಳಬೇಡಿ. “ಅಣ್ಣಾ…ನೋ ಕಮೆಂಟ್ಸ್ ಎಂದು ಅಲ್ಲಿಂದ ಮುಂದೆ ತೆರಳಿದ್ದಾರೆ.

ಇದನ್ನೂ ಓದಿ: Actor Rajinikanth: ಮೊಮ್ಮಗನ ಕ್ರಿಕೆಟ್‌ ಥೀಮ್‌ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾದ ತಲೈವಾ!

ಡೆಹ್ರಾಡೂನ್ ವಿಮಾನ ನಿಲ್ದಾಣದಲ್ಲಿ, ರಜನಿಕಾಂತ್ ತಮ್ಮ ಆಧ್ಯಾತ್ಮಿಕ ಪ್ರವಾಸಗಳ ಬಗ್ಗೆ ಮಾಧ್ಯಮದ ಜತೆ ಮಾತನಾಡಿದರು. “ಪ್ರತಿ ವರ್ಷ ನಾನು ಹೊಸ ಅನುಭವವನ್ನು ಪಡೆಯುತ್ತಿದ್ದೆ, ಅದು ನನ್ನ ಆಧ್ಯಾತ್ಮಿಕ ಪ್ರಯಾಣವನ್ನು ಮತ್ತೆ ಮತ್ತೆ ಮುಂದುವರಿಸುವಂತೆ ಮಾಡಿತು. ಈ ಬಾರಿಯೂ ನಾನು ಹೊಸ ಅನುಭವಗಳನ್ನು ಪಡೆಯುತ್ತೇನೆ ಎಂದು ನಾನು ನಂಬುತ್ತೇನೆ” ಎಂದು ಅವರು ಹೇಳಿದರು.

ರಜನಿಕಾಂತ್ ಅವರು ಆಧ್ಯಾತ್ಮಿಕತೆ ಏಕೆ ಮುಖ್ಯ ಎಂಬುದರ ಕುರಿತು ಮಾತನಾಡಿದರು. “ಇಡೀ ಜಗತ್ತಿಗೆ ಆಧ್ಯಾತ್ಮಿಕತೆಯ ಅಗತ್ಯವಿದೆ, ಏಕೆಂದರೆ ಅದು ಪ್ರತಿಯೊಬ್ಬ ಮನುಷ್ಯನಿಗೂ ಮುಖ್ಯವಾಗಿದೆ. ಆಧ್ಯಾತ್ಮಿಕವಾಗಿರುವುದು ಎಂದರೆ ಶಾಂತಿ ಮತ್ತು ನೆಮ್ಮದಿಯನ್ನು ಅನುಭವಿಸುವುದು ಮತ್ತು ಮೂಲಭೂತವಾಗಿ ಇದು ದೇವರಲ್ಲಿ ನಂಬಿಕೆಯನ್ನು ಒಳಗೊಂಡಿರುತ್ತದೆʼʼಎಂದರು.

ಇತ್ತೀಚೆಗೆ ರಜನಿಕಾಂತ್ ಅವರು ಅಬುಧಾಬಿಯ ಬಿಎಪಿಎಸ್ ಹಿಂದೂ ಮಂದಿರಕ್ಕೆ ಭೇಟಿ ನೀಡಿದ್ದರು. ಕೆಲವು ದಿನಗಳ ಹಿಂದೆ ಯುನೈಟೆಡ್ ಅರಬ್ ಎಮಿರೇಟ್ಸ್, ನಟ ರಜನಿಕಾಂತ್ ಅವರಿಗೆ ಗೋಲ್ಡನ್ ವೀಸಾ ನೀಡಿ ಗೌರವಿಸಿದೆ. ವೆಟ್ಟೈಯನ್ ಚಿತ್ರದ ಶೂಟಿಂಗ್ ಮುಗಿಸಿರು ರಜನಿಕಾಂತ್​ (Rajinikanth) ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ವಿಶ್ರಾಂತಿ ಪಡೆದಿದ್ದರು. ಅಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ರಜನಿಕಾಂತ್ ಭಾಗವಹಿಸಿದ್ದರು. ಗೋಲ್ಡನ್​ ವೀಸಾ ನೀಡಿದ ಅಬುಧಾಬಿ ಸರ್ಕಾರಕ್ಕೆ ನಟ ರಜನಿಕಾಂತ್​ ಧನ್ಯವಾದ ಕೂಡ ಹೇಳಿದ್ದಾರೆ.

ಸಿನಿಮಾ ವಿಚಾರಕ್ಕೆ ಬಂದರೆ ರಜನಿಕಾಂತ್ ಅವರು ಟಿಜೆ ಜ್ಞಾನವೇಲ್ ನಿರ್ದೇಶನದ ʻವೆಟ್ಟೈಯಾನ್ʼ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ವೆಟ್ಟೈಯನ್ ಚಿತ್ರದಲ್ಲಿ ಅಮಿತಾಭ್‌ ಬಚ್ಚನ್ ಕೂಡ ನಟಿಸಿದ್ದಾರೆ.

ರಜನಿಕಾಂತ್ ಅವರ 170ನೇ ಚಿತ್ರವಾಗಿರುವ ವೆಟ್ಟೈಯಾನ್ ಈ ವರ್ಷದ ಅಕ್ಟೋಬರ್‌ನಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಫಹಾದ್ ಫಾಸಿಲ್, ರಾಣಾ ದಗ್ಗುಬಾಟಿ, ರಿತಿಕಾ ಸಿಂಗ್, ಮಂಜು ವಾರಿಯರ್ ಮತ್ತು ದುಶಾರಾ ವಿಜಯನ್ ಸೇರಿದಂತೆ ಸಮಗ್ರ ತಾರಾಗಣವಿದೆ. ಅನಿರುದ್ಧ್ ರವಿಚಂದರ್ ಚಿತ್ರಕ್ಕೆ ಸಂಗೀತ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ವೆಟ್ಟೈಯಾನ್ ಸಿನಿಮಾಗೆ ರಾಕ್ ಸ್ಟಾರ್ ಖ್ಯಾತಿಯ ಅನಿರುದ್ಧ್ ರವಿಚಂದರ್ ಸಂಗೀತ, ಎಸ್.ಆರ್. ಕಥಿರ್ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಸಂಕಲನವಿರಲಿದೆ. ತಿರುವನಂತಪುರಂ, ತಿರುನೆಲ್ವೇಲಿ, ಚೆನ್ನೈ, ಮುಂಬೈ, ಆಂಧ್ರಪ್ರದೇಶ ಮತ್ತು ಹೈದರಾಬಾದ್‌ನಲ್ಲಿ ಚಿತ್ರದ ಚಿತ್ರೀಕರಣ‌ ನಡೆಸಲಾಗಿದೆ.

Continue Reading

ಕಾಲಿವುಡ್

Surya Prakash: ʻಮಾಯಿʼ ಸಿನಿಮಾ ಖ್ಯಾತಿಯ ತಮಿಳು ನಿರ್ದೇಶಕ ಸೂರ್ಯ ಪ್ರಕಾಶ್ ಇನ್ನಿಲ್ಲ

Surya Prakash: ‘ಮಾಯಿ’, ‘ಮಾಣಿಕ್ಕಂ’ ಮತ್ತು ‘ದಿವಾನ್’ ಚಿತ್ರಗಳಿಗೆ ಹೆಚ್ಚು ಹೆಸರುವಾಸಿಯಾಗಿದ್ದರು. ಅವರಿಗೆ 56 ವರ್ಷ ವಯಸ್ಸಾಗಿತ್ತು. ಸೂರ್ಯ ಪ್ರಕಾಶ್ (‘Maayi’ director) ಅವರ ಅಂತಿಮ ವಿಧಿವಿಧಾನಗಳ ಕುರಿತು ಕುಟುಂಬ ಮಾಹಿತಿ ಹಂಚಿಕೊಂಡಿಲ್ಲ.

VISTARANEWS.COM


on

Surya Prakash Maayi director dies
Koo

ಬೆಂಗಳೂರು: ತಮಿಳು ನಿರ್ದೇಶಕ ಸೂರ್ಯ ಪ್ರಕಾಶ್ (Surya Prakash) ಸೋಮವಾರ (ಮೇ 27) ಹೃದಯಾಘಾತದಿಂದ ನಿಧನರಾದರು. ‘ಮಾಯಿ’, ‘ಮಾಣಿಕ್ಕಂ’ ಮತ್ತು ‘ದಿವಾನ್’ ಚಿತ್ರಗಳಿಗೆ ಹೆಚ್ಚು ಹೆಸರುವಾಸಿಯಾಗಿದ್ದರು. ಅವರಿಗೆ 56 ವರ್ಷ ವಯಸ್ಸಾಗಿತ್ತು. ಸೂರ್ಯ ಪ್ರಕಾಶ್ (‘Maayi’ director) ಅವರ ಅಂತಿಮ ವಿಧಿವಿಧಾನಗಳ ಕುರಿತು ಕುಟುಂಬ ಮಾಹಿತಿ ಹಂಚಿಕೊಂಡಿಲ್ಲ.

ನಟ ಶರತ್‌ಕುಮಾರ್ ಮತ್ತು ರಾಧಿಕಾ ಶರತ್‌ಕುಮಾರ್ ತಮ್ಮ ಸಾಮಾಜಿಕ ಜಾಲತಾಣ ಮೂಲಕ ಸಂತಾಪ ಸೂಚಿಸಿದ್ದಾರೆ. “ಮಾಯಿ ಮತ್ತು ದಿವಾನ್ ಚಿತ್ರಗಳನ್ನು ನಿರ್ದೇಶಿಸಿದ ನನ್ನ ಆತ್ಮೀಯ ಸ್ನೇಹಿತ ಸೂರ್ಯ ಪ್ರಕಾಶ್ ಅವರ ನಿಧನದ ಸುದ್ದಿ ಕೇಳಿ ಆಘಾತ ಮತ್ತು ನೋವಾಯ್ತು. ನಿನ್ನೆಯಷ್ಟೇ ಅವರ ಜತೆ ಮಾತನಾಡಿದ್ದೆ. ಅವರ ಹಠಾತ್ ನಿಧನ ತುಂಬ ದುಃಖ ಉಂಟುಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆʼʼಎಂದು ನಟ ಶರತ್‌ಕುಮಾರ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ರಾಧಿಕಾ ಶರತ್‌ಕುಮಾರ್ “ಅದ್ಭುತ ಮತ್ತು ಪ್ರತಿಭಾವಂತ ವ್ಯಕ್ತಿ, ಉತ್ತಮ ಬರಹಗಾರ, ಹಾಸ್ಯದ ಅಭಿರುಚಿಯುಳ್ಳ ನಿರ್ದೇಶಕ, ನಟ ಶರತ್‌ಕುಮಾರ್ ಅವರ ಆತ್ಮೀಯ ಸ್ನೇಹಿತ. ಅವರ ಕುಟುಂಬ ಮತ್ತು ಸಿನಿಮಾ ಉದ್ಯಮಕ್ಕೆ ದೊಡ್ಡ ನಷ್ಟʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Dhadak 2: ‘ಧಡಕ್ 2’ ಸಿನಿಮಾ ಅನೌನ್ಸ್‌ ಮಾಡಿದ ಕರಣ್‌ ಜೋಹರ್: ʻಅನಿಮಲ್‌ʼ ನಟಿ ನಾಯಕಿ!

ಸೂರ್ಯ ಪ್ರಕಾಶ್ ಅವರು ರಾಜ್‌ಕಿರಣ್‌ ಅವರ ‘ಮಾಣಿಕ್ಕಂ’ ಚಿತ್ರದ ಮೂಲಕ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ನಂತರ ಅವರು ಶರತ್‌ಕುಮಾರ್ ಮತ್ತು ಮೀನಾಅವರಿಗೆ ‘ಮಾಯಿ’ ಸಿನಿಮಾಗಾಗಿ ನಿರ್ದೇಶನ ಮಾಡಿದರು. ಇದು ಸಕಾರಾತ್ಮಕ ವಿಮರ್ಶೆಗಳನ್ನು ಪಡೆಯಿತು. ತೆಲುಗಿನಲ್ಲಿ ‘ಸಿಂಹರಸಿ’ ಮತ್ತು ಕನ್ನಡದಲ್ಲಿ ‘ನರಸಿಂಹ’ ಎಂದು ಸಿನಿಮಾ ರಿಮೇಕ್ ಆಗಿತ್ತು.

ರಾಜಶೇಖರ್ ಅಭಿನಯದ ‘ಭರತಸಿಂಹ ರೆಡ್ಡಿ’ ಚಿತ್ರದ ಮೂಲಕ ಟಾಲಿವುಡ್‌ಗೂ ಎಂಟ್ರಿ ಕೊಟ್ಟಿದ್ದರು. ಶರತ್‌ಕುಮಾರ್ ಅವರ ‘ದಿವಾನ್’ ಮತ್ತು ಜೀವನ್ ಅವರ ‘ಅಧಿಬರ್’ ಮೂಲಕ ತಮಿಳಿಗೆ ಮತ್ತೆ ಕಮ್‌ಬ್ಯಾಕ್‌ ಆಗಿದ್ದರು.

Continue Reading

ಕಾಲಿವುಡ್

Karthi next film: ಇಂದು ನಟ ಕಾರ್ತಿ ಬರ್ತ್‌ಡೇ: ತಮ್ಮನ ಚಿತ್ರಕ್ಕೆ ಅಣ್ಣ ಸೂರ್ಯ ಬಂಡವಾಳ!

Karthi next film: ವಿಜಯ್ ಸೇತುಪತಿ ಹಾಗೂ ತ್ರಿಷಾ ಕೃಷ್ಣನ್ ನಟನೆಯ ‘96’ ಚಿತ್ರವನ್ನು ಪ್ರೇಮ್ ಕುಮಾರ್ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ‘96’ ಬಳಿಕ ಅವರು ನಿರ್ದೇಶನ ಮಾಡುತ್ತಿರುವ ಮೊದಲ ಸಿನಿಮಾ ಇದು.  ‘96’ ಚಿತ್ರದ ಮ್ಯೂಸಿಕ್ ಡೈರೆಕ್ಟರ್ ಗೋವಿಂದ್ ವಸಂತ ಅವರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. 96 ಸಿನಿಮಾಗೆ ಸ್ಟಂಟ್‌ ಮಾಸ್ಟರ್‌ ಇರಲಿಲ್ಲ. ಈ ಚಿತ್ರಕ್ಕೂ ಇಲ್ಲ.

VISTARANEWS.COM


on

Karthi next film Suriya to produce Meiyazhagan
Koo

ಬೆಂಗಳೂರು: ಇಂದು ನಟ ಸೂರ್ಯ ಅವರ ಸಹೋದರ ಕಾರ್ತಿ ಜನುಮದಿನ. ನಟ ಸೂರ್ಯ ತನ್ನ ಸಹೋದರ, ನಟ ಕಾರ್ತಿ ಅವರಿಗೆ ಒಂದು ದಿನ ಮುಂಚಿತವಾಗಿ ವಿಶ್‌ ಮಾಡಿದ್ದಾರೆ. ಜತೆಗೆ ಕಾರ್ತಿ ಅವರ ಮುಂಬರುವ ಚಿತ್ರದ ಹೊಸ ಪೋಸ್ಟರ್‌ ಬಿಡುಗಡೆ ಮಾಡಿದರು. ಪ್ರೇಮ್ ಕುಮಾರ್ ನಿರ್ದೇಶಿಸಿರುವ ಮತ್ತು ಸೂರ್ಯ ಅವರೇ ಸ್ವತಃ ನಿರ್ಮಿಸಿದ, ʻಮೇಯಳಗನ್ʼ (Meiyazhagan ) ಸಿನಿಮಾದಲ್ಲಿ ಕಾರ್ತಿ (Karthi next film) ಕಾಣಿಸಿಕೊಳ್ಳುತ್ತಿದ್ದಾರೆ. ಕಾರ್ತಿ ಮತ್ತು ಅರವಿಂದ್ ಸ್ವಾಮಿ (Arvind Swamy) ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಪೋಸ್ಟರ್ ಒಂದರಲ್ಲಿ ಅರವಿಂದ್ ಅವರು ಸೈಕಲ್ ಮೇಲೆ ಕುಳಿತಿದ್ದಾರೆ. ಹಿಂದೆ ಕಾರ್ತಿ ಕೂತ್ತಿದ್ದಾರೆ. ಸವಾರಿ ಮಾಡುವಾಗ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ಕಾಣಬಹುದು. ಎರಡನೇ ಪೋಸ್ಟರ್‌ನಲ್ಲಿ, ಕಾರ್ತಿ ಅವರು ಎತ್ತಿನ ಎದುರು ನಿಂತಿದ್ದಾರೆ. ಅವರು ನಗುತ್ತಿದ್ದಾರೆ. ಇದು ಹಳ್ಳಿಯ ಕಥೆ ಇರಬಹುದು ಎನ್ನಲಾಗುತ್ತಿದೆ.

ವಿಜಯ್ ಸೇತುಪತಿ ಹಾಗೂ ತ್ರಿಷಾ ಕೃಷ್ಣನ್ ನಟನೆಯ ‘96’ ಚಿತ್ರವನ್ನು ಪ್ರೇಮ್ ಕುಮಾರ್ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ‘96’ ಬಳಿಕ ಅವರು ನಿರ್ದೇಶನ ಮಾಡುತ್ತಿರುವ ಮೊದಲ ಸಿನಿಮಾ ಇದು.  ‘96’ ಚಿತ್ರದ ಮ್ಯೂಸಿಕ್ ಡೈರೆಕ್ಟರ್ ಗೋವಿಂದ್ ವಸಂತ ಅವರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. 96 ಸಿನಿಮಾಗೆ ಸ್ಟಂಟ್‌ ಮಾಸ್ಟರ್‌ ಇರಲಿಲ್ಲ. ಈ ಚಿತ್ರಕ್ಕೂ ಇಲ್ಲ.

ಇದನ್ನೂ ಓದಿ: Kannada New Movie: ಸಿನಿಮಾ ಆಗುತ್ತಿದೆ ʼಪೆನ್‌ಡ್ರೈವ್ʼ! ಕುತೂಹಲಭರಿತ ಪೋಸ್ಟರ್

ಕಂಗುವ ಸಿನಿಮಾ

ಸೂರ್ಯ ಸದ್ಯ ಕಂಗುವ ಸಿನಿಮಾದಲ್ಲಿ ನಟಿಸಲಿದ್ದಾರೆ, ಅವರು ದ್ವಿಪಾತ್ರದಲ್ಲಿ ನಟಿಸಲಿದ್ದಾರೆ. ತಮಿಳು ಚಿತ್ರರಂಗದ (Tamil Cinema) ಖ್ಯಾತ ನಟ ಸೂರ್ಯ (Actor Surya) ಅವರ ಬಹು ನಿರೀಕ್ಷಿತ `ಕಂಗುವ’ (Kanguva Film) ಚಿತ್ರದ ಟೀಸರ್ ಔಟ್‌ ಆಗಿತ್ತು. ಬಾಲಿವುಡ್​ ನಟ ಬಾಬಿ ಡಿಯೋಲ್​ ಕೂಡ ಹೊಸ ಅವತಾರ ತಾಳಿದ್ದರು. ಬಾಬಿ ಡಿಯೋಲ್ ಒಳಗೊಂಡಿರುವ ಬೃಹತ್ ಯುದ್ಧದ ದೃಶ್ಯವನ್ನು ದೊಡ್ಡ ಪ್ರಮಾಣದಲ್ಲಿ ಚಿತ್ರೀಕರಿಸಲಾಗಿತ್ತು. ವರದಿಯ ಪ್ರಕಾರ ಬರೋಬ್ಬರಿ 10,000 ಜನರನ್ನು ಈ ದೃಶ್ಯದಲ್ಲಿ ಬಳಸಿಕೊಳ್ಳಲಾಗಿದೆ ಎಂದು ವರದಿಯಾಗಿತ್ತು.

ಖ್ಯಾತ ಕಾಲಿವುಡ್ ನಟ ಸೂರ್ಯ (Actor Suriya) ಅವರು ಸಿರುತೈ ಶಿವ ನಿರ್ದೇಶನದ ಬಹು ನಿರೀಕ್ಷಿತ ಪ್ರಾಜೆಕ್ಟ್ ʻಕಂಗುವʼ ಚಿತ್ರವನ್ನು 38 ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರದ ನಿರ್ಮಾಪಕ ಕೆ.ಇ.ಜ್ಞಾನವೇಲ್ ರಾಜಾ ಅವರು ಹೇಳಿದ್ದರು. ‘ಕಂಗುವ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಾತ್ರವಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆ ಮಾಡುವ ಆಲೋಚನೆಯನ್ನು ನಿರ್ಮಾಪಕರು ಹಾಕಿಕೊಂಡಿದ್ದರು.

ತಾತ್ಕಾಲಿಕವಾಗಿ ʻಸೂರ್ಯ 42ʼ ಎಂದು ಹೆಸರಿಸಲಾದ ಸೂರ್ಯ ಅವರ ಮುಂಬರುವ ಬಹು ನಿರೀಕ್ಷಿತ ಈ ಚಿತ್ರವು ಇದೀಗ ʻಕಂಗುವʼ ಎಂಬ ಹೆಸರನ್ನು ಪಡೆದುಕೊಂಡಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading
Advertisement
Reserve Bank of India
ದೇಶ25 mins ago

Reserve Bank of India : ಭಾರತದ ಬ್ಯಾಂಕ್​ಗಳಲ್ಲಿವೆ ವಾರಸುದಾರರಿಲ್ಲದ 78,213 ಕೋಟಿ ರೂಪಾಯಿ!

Modi Meditation
ದೇಶ33 mins ago

Modi Meditation: ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸಲ್ಲ ಮೋದಿ; 2 ದಿನ ಪಾನೀಯವೇ ಆಹಾರ!

Virat kohli
ಕ್ರಿಕೆಟ್1 hour ago

Virat Kohli : ವಿರಾಟ್​ ಕೊಹ್ಲಿ ಟೀಕಿಸಿದ ನ್ಯೂಜಿಲ್ಯಾಂಡ್​ ಮಾಜಿ ಆಟಗಾರನಿಗೆ ಕೊಲೆ ಬೆದರಿಕೆ!

Hindu Janajagruthi Samithi demands declaration of Zakir Naik as international terrorist
ಬೆಂಗಳೂರು2 hours ago

Zakir Naik: ಜಾಕೀರ್ ನಾಯಕ್‌ನನ್ನು ಭಯೋತ್ಪಾದಕನೆಂದು ಘೋಷಿಸಿ; ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Necessary Preparation for North East Graduate Constituency Election Voting says DC M S Diwakar
ವಿಜಯನಗರ2 hours ago

MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ ಮತದಾನಕ್ಕೆ ಸಿದ್ಧತೆ: ಡಿಸಿ ಎಂ.ಎಸ್. ದಿವಾಕರ್‌

Viral Video
ವೈರಲ್ ನ್ಯೂಸ್2 hours ago

Viral Video: ಮುಂಬಯಿ ವಿಮಾನ ನಿಲ್ದಾಣದಲ್ಲಿ ಯುವತಿಯ ರೀಲ್ಸ್ ಹುಚ್ಚಾಟ; ಸಿಡಿದೆದ್ದ ನೆಟ್ಟಿಗರು

Muslim Personal Law
ಪ್ರಮುಖ ಸುದ್ದಿ2 hours ago

Muslim Personal Law : ಹಿಂದೂ- ಮುಸ್ಲಿಂ ಜೋಡಿಯ ಮದುವೆಗೆ ವೈಯಕ್ತಿಕ ಕಾನೂನಿನ ಮಾನ್ಯತೆ ಇಲ್ಲ ಎಂದ ಕೋರ್ಟ್​, ವಿವರಣೆ ಹೀಗಿದೆ

Prajwal Revanna Case
ಕರ್ನಾಟಕ2 hours ago

ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರುವ ಮೊದಲೇ ಎಚ್‌ಡಿಕೆ ಅಂತರ; ಕಬಿನಿಯಲ್ಲಿ ಪತ್ನಿ ಜತೆ ಬೋಟಿಂಗ್!

Viral Video
ವೈರಲ್ ನ್ಯೂಸ್2 hours ago

Viral Video: ಪ್ರಜ್ಞೆ ಕಳೆದುಕೊಂಡು ಬಿದ್ದ ಕೋತಿಗೆ ಮರುಜೀವ ನೀಡಿದ ಪೊಲೀಸ್ ಅಧಿಕಾರಿ; ಮನ ಮಿಡಿಯೋ ವಿಡಿಯೊ ಇಲ್ಲಿದೆ

Cow Smugling
ಪ್ರಮುಖ ಸುದ್ದಿ2 hours ago

Cow Smugling : ಅಕ್ರಮ ಗೋ ಸಾಗಾಟದ ವಾಹನ ಬೆನ್ನಟ್ಟಿ ಹಿಡಿದ ಭಜರಂಗದಳದ ಕಾರ್ಯಕರ್ತರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ9 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌