ಬೆಂಗಳೂರು: ಸಮಂತಾ ರುತ್ ಪ್ರಭು (Samantha Ruth Prabhu) ಬಾಲಿಯಲ್ಲಿ ಸಖತ್ ಎಂಜಾಯ್ ಮಾಡಿರುವ ಫೋಟೊಗಳನ್ನು ಶೇರ್ ಮಾಡಿಕೊಂಡಿದ್ದರು. ತನ್ನ ಆಪ್ತ ಗೆಳತಿ, ಮೇಕಪ್ ಕಲಾವಿದೆ ಅನುಷಾ ಸ್ವಾಮಿಯೊಂದಿಗೆ ಟ್ರಿಪ್‌ಗೆ ಹೋಗಿದ್ದರು. ಸುಮಾರು ಒಂದು ವಾರದಿಂದ ಇವರಿಬ್ಬರೂ ಜತೆಗೆ ಇದ್ದಾರೆ. ಸಮಂತಾ ಸದ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ ಬದಲಿಗೆ ಬರೋಬ್ಬರಿ ಒಂದು ವರ್ಷಗಳ ಕಾಲ ಸಿನಿಮಾಗಳಿಂದ ವಿರಾಮ ಪಡೆದಿದ್ದಾರೆ. ಸಮಂತಾ ಮೈಯೋಸಿಟಿಸ್ ಕಾಯಿಲೆಯಿಂದ ಬಳಲುತ್ತಿರುವ ವಿಚಾರ ಗೊತ್ತೇ ಇದೆ. ಇದೀಗ ನಟಿ ಈ ಕಾಯಿಲೆಯಿಂದಾಗಿ ಸಾಕಷ್ಟು ಹಣ ಖರ್ಚು ಮಾಡುತ್ತಿದ್ದಾರೆ ಎನ್ನಲಾಗಿದೆ. ಮಾಧ್ಯಮವೊಂದರ ವರದಿ ಪ್ರಕಾರ ನಟಿ ತೆಲುಗು ಚಿತ್ರರಂಗದ ಪ್ರಮುಖ ನಟನಿಂದ 25 ಕೋಟಿ ರೂ. ಸಾಲ ಪಡೆದಿದ್ದಾರೆ ಎನ್ನಲಾಗಿದೆ.
ಈ ತಿಂಗಳ ಆರಂಭದಲ್ಲಿ, ಸಮಂತಾ ತಮ್ಮ ಆರೋಗ್ಯದ ಮೇಲೆ ಕೇಂದ್ರೀಕರಿಸಲು ಕೆಲಸದಿಂದ ವಿರಾಮ ತೆಗೆದುಕೊಳ್ಳುತ್ತಿದ್ದಾರೆ ಎಂದು ವರದಿಯಾಗಿತ್ತು. ನಟಿ ಮೈಯೋಸಿಟಿಸ್ ಎಂಬ ಆಟೋಇಮ್ಯೂನ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಖುಷಿ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿದೆ. ಸಿಟಾಡೆಲ್ ಇಂಡಿಯಾ ಇನ್ನೂ ಬಿಡುಗಡೆ ದಿನಾಂಕವನ್ನು ಪ್ರಕಟಿಸಿಲ್ಲ. ಖುಷಿ ಸಿನಿಮಾದಲ್ಲಿ, ಸಮಂತಾ ವಿಜಯ್ ದೇವರಕೊಂಡ ಅವರೊಂದಿಗೆ ನಟಿಸಿದರೆ, ರಾಜ್ ಮತ್ತು ಡಿಕೆ ಸಿರೀಸ್ ಸಿಟಾಡೆಲ್‌ನಲ್ಲಿ ವರುಣ್ ಧವನ್ ಜತೆ ತೆರೆ ಹಂಚಿಕೊಂಡಿದ್ದಾರೆ. ಈಗಾಗಲೇ ನಟಿ ಬಾಲಿಯಲ್ಲಿ ಸಖತ್ ಎಂಜಾಯ್ ಕೂಡ ಮಾಡಿ ಫೋಟೊಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಹೀಗಿರುವಾಗ ನಟಿ ಇದೀಗ ಕಾಯಿಲೆಗೆ ಸಂಬಂಧಪಟ್ಟಂತೆ ಸುದ್ದಿಯಲ್ಲಿದ್ದಾರೆ.
ಇದನ್ನೂ ಓದಿ: Samantha Ruth Prabhu: ಶಾರ್ಟ್ ಹೇರ್‌ನಲ್ಲಿ ಕ್ಯೂಟಾಗಿ ಕಂಡ ಸಮಂತಾ; ಬಾಲಿಯಲ್ಲಿ ಸ್ಯಾಮ್ ಜಾಲಿ
ಇದನ್ನೂ ಓದಿ: Actress Sreeleela: ರಶ್ಮಿಕಾ ಆಯ್ತು, ಇದೀಗ ಸಮಂತಾ ಜಾಗವನ್ನೂ ಕಬಳಿಸಿದ್ರಾ ಶ್ರೀಲೀಲಾ? ಪುಷ್ಪ 2 ಬಿಗ್ ಅಪ್‌ಡೇಟ್!
ಸಾಕ್ಷಿ ಟಿವಿ ವಿಡಿಯೊ ವರದಿಯ ಪ್ರಕಾರ ಸಮಂತಾ ತೆಲುಗು ಚಿತ್ರರಂಗದ ಪ್ರಮುಖ ನಟರಿಂದ 25 ಕೋಟಿ ರೂ. ಸಾಲ ಪಡೆದಿದ್ದಾರೆ. ನಟನ ಹೆಸರನ್ನು ಮಾತ್ರ ಬಹಿರಂಗಪಡಿಸಿಲ್ಲ. ಆದರೆ ಈ ಬಗ್ಗೆ ನಟಿ ಯಾವುದೇ ಹೇಳಿಕೆ ನೀಡಿಲ್ಲ. ಬಾಲಿ ವಕೇಶನ್ ಆದ ಬಳಿಕ ನಟಿ ಅಮೆರಿಕಾಕ್ಕೆ ಹೆಚ್ಚಿನ ಚಿಕಿತ್ಸೆಯನ್ನು ಪಡೆಯಲು ಹೊರಡಲಿದ್ದಾರೆ ಎಂತಲೂ ವರದಿಯಾಗಿದೆ. ಸಮಂತಾ ರುತ್ ಪ್ರಭು ಕೊನೆಯದಾಗಿ ಶಾಕುಂತಲಂ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.
ಬಾಲಿಯೂ ಮುಂಚೆ ನಟಿ ಕೊಯಮತ್ತೂರಿನ ಸದ್ಗುರುಗಳ ಇಶಾ ಫೌಂಡೇಶನ್‌ಗೆ ಭೇಟಿ ನೀಡಿದ್ದರು ಫೋಟೊ ಮತ್ತು ವಿಡಿಯೊಗಳನ್ನು ನಟಿ ಹಂಚಿಕೊಂಡಿದ್ದರು.