Samantha Ruth Prabhu: ನೀವು ಪರಿಪೂರ್ಣ ತಂದೆಯಾಗುತ್ತೀರಿ; ನಾಗಚೈತನ್ಯ ಬಗ್ಗೆ ಸಮಂತಾ ಹೇಳಿದ ವಿಡಿಯೊ ವೈರಲ್ - Vistara News

ಸಿನಿಮಾ

Samantha Ruth Prabhu: ನೀವು ಪರಿಪೂರ್ಣ ತಂದೆಯಾಗುತ್ತೀರಿ; ನಾಗಚೈತನ್ಯ ಬಗ್ಗೆ ಸಮಂತಾ ಹೇಳಿದ ವಿಡಿಯೊ ವೈರಲ್

ಶ್ರೇಷ್ಠ ವ್ಯಕ್ತಿಯಾಗಿರುವ ನೀವು ಒಂದು ದಿನ “ಪರಿಪೂರ್ಣ” ತಂದೆಯಾಗುತ್ತೀರಿ ಎಂದು ನಾಗಚೈತನ್ಯ ಅವರನ್ನು ಉದ್ದೇಶಿಸಿ ಸಮಂತಾ ರುತ್ ಪ್ರಭು (Samantha Ruth Prabhu) ಹೇಳಿರುವ ವಿಡಿಯೋ ಒಂದು ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ನಾಗ ಚೈತನ್ಯ ಮತ್ತು ಸಮಂತಾ ಅವರ ವಿವಾಹದ ಹಳೆಯ ವಿಡಿಯೋದ ತುಣುಕು ಇದಾಗಿದೆ.

VISTARANEWS.COM


on

Samantha Ruth Prabhu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಮಂತಾ ರುತ್ ಪ್ರಭು (Samantha Ruth Prabhu) ಮತ್ತು ನಾಗ ಚೈತನ್ಯ (Naga Chaitanya) ಅವರ ವಿವಾಹದ ಹಳೆಯ ವಿಡಿಯೋವೊಂದು (Viral Video) ಸಾಮಾಜಿಕ ಜಾಲತಾಣದಲ್ಲಿ (social media) ಮತ್ತೆ ಕಾಣಿಸಿಕೊಂಡಿದೆ. ಇಬ್ಬರೂ ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ವಿವಾಹ ಪ್ರತಿಜ್ಞೆ ( taking vows) ಮಾಡುವುದನ್ನು ಇದರಲ್ಲಿ ಕಾಣಬಹುದು. ಸಮಂತಾ ಸುಂದರವಾದ ಬಿಳಿ ಗೌನ್ ಧರಿಸಿ ನಾಗ ​​ಚೈತನ್ಯನ ಬಗ್ಗೆ ಮಾತನಾಡಿದ್ದಾರೆ.

ಶ್ರೇಷ್ಠ ವ್ಯಕ್ತಿಯಾಗಿರುವ ನೀವು ಒಂದು ದಿನ “ಪರಿಪೂರ್ಣ” ತಂದೆಯಾಗುತ್ತೀರಿ ಎಂದು ನಾಗಚೈತನ್ಯ ಅವರನ್ನು ಉದ್ದೇಶಿಸಿ ಸಮಂತಾ ಹೇಳಿದ್ದಾರೆ.

ಹೇಗೆ ಸ್ವರವನ್ನು ಬದಲಾಯಿಸದೆಯೇ ಎಲ್ಲಾ ವಾದಗಳನ್ನು ಪರಿಹರಿಸಲಾಗುತ್ತದೆಯೋ ಮತ್ತು ಅಳುವುದನ್ನು ಬಿಟ್ಟು ಬೇರೆ ಯಾವುದನ್ನೂ ಪಡೆಯುವುದನ್ನು ತಪ್ಪಿಸಲು ನನಗೆ ಎಂದಿಗೂ ಅನುಮತಿಸುವುದಿಲ್ಲ. ನಿಮ್ಮಿಂದಾಗಿ ನಾನು ನಿಧಾನವಾಗಿ ಮತ್ತು ಖಚಿತವಾಗಿ ನಾನು ಆಗಬೇಕೆಂದು ಕನಸು ಕಂಡಿದ್ದೇನೆ ಎಂದು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.


ಅವರು ತಮ್ಮ ಮಾತನ್ನು ಮುಂದುವರಿಸುತ್ತಾ, ನೀವು ನನಗೆ ತಿಳಿದಿರುವ ಅತ್ಯಂತ ಶ್ರೇಷ್ಠ ವ್ಯಕ್ತಿ ಮತ್ತು ಒಂದು ದಿನ ನೀವು ನಮ್ಮ ಸುಂದರ ಮಗುವಿಗೆ ಪರಿಪೂರ್ಣ ತಂದೆಯಾಗುತ್ತೀರಿ ಎಂದು ನನಗೆ ತಿಳಿದಿದೆ. ನಾನು ನಿಮ್ಮನ್ನು ನೂರು ಜೀವನ, ನೂರು ಪ್ರಪಂಚ ಮತ್ತು ಯಾವುದೇ ಪರಿಸ್ಥಿತಿಯಲ್ಲೂ ಆಯ್ಕೆ ಮಾಡುತ್ತೇನೆ. ನಾನು ನಿಮ್ಮನ್ನೇ ಆರಿಸುತ್ತೇನೆ ಎಂದು ಹೇಳಿದ್ದಾರೆ.


ಸಮಂತಾ ರುತ್ ಪ್ರಭು ಮತ್ತು ನಾಗ ಚೈತನ್ಯ ಅವರು 2017ರ ಅಕ್ಟೋಬರ್‌ನಲ್ಲಿ ವಿವಾಹವಾದರು. 2021ರಲ್ಲಿ ಇಬ್ಬರೂ ತಮ್ಮ ವಿಚ್ಛೇದನದ ಬಗ್ಗೆ ಘೋಷಿಸಿ ಅಭಿಮಾನಿಗಳಿಗೆ ಆಘಾತ ನೀಡಿದರು.

ಇತ್ತೀಚೆಗೆಷ್ಟೇ ನಾಗಚೈತನ್ಯ ಶೋಭಿತಾ ಧೂಳಿಪಾಲ ಅವರೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಬಳಿಕ ಸಮಂತಾ ಮತ್ತು ನಾಗಚೈತನ್ಯ ಅವರ ವಿವಾಹದ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: Actor Darshan: ನಟಿ ರಚಿತಾ ರಾಮ್‌ ಜೈಲಿಗೆ ಎಂಟ್ರಿ ಕೊಟ್ಟ ದಿನವೇ ನಡೀತಾ ದರ್ಶನ್ ಸಿಗರೇಟ್ ಪಾರ್ಟಿ?

ನಾಗ ಚೈತನ್ಯ ಅವರ ತಂದೆ ಸೂಪರ್‌ಸ್ಟಾರ್ ನಾಗಾರ್ಜುನ ಅವರು ಮಗ ನಾಗ ಚೈತನ್ಯ ಮತ್ತು ಶೋಭಿತಾ ಅವರ ನಿಶ್ಚಿತಾರ್ಥವನ್ನು ಕುರಿತು ಮಾಹಿತಿ ಹಂಚಿಕೊಂಡು, ಶೋಭಿತಾ ಧೂಳಿಪಾಲ ಅವಳನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸಲು ನಾವು ತುಂಬಾ ಸಂತೋಷಪಡುತ್ತೇವೆ. ದಂಪತಿಗೆ ಅಭಿನಂದನೆಗಳು, ಅವರಿಗೆ ಜೀವನಪೂರ್ತಿ ಪ್ರೀತಿ ಮತ್ತು ಸಂತೋಷವನ್ನು ಹಾರೈಸುತ್ತೇನೆ ಎಂದು ಹೇಳಿದ್ದರು. ವರದಿಗಳ ಪ್ರಕಾರ ನಾಗಚೈತನ್ಯ ಮತ್ತು ಶೋಭಿತಾ ಮುಂದಿನ ವರ್ಷ ಡೆಸ್ಟಿನೇಶನ್ ವೆಡ್ಡಿಂಗ್‌ಗೆ ಯೋಜನೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Suvarna Celebrity League : ವಾರಾಂತ್ಯದಲ್ಲಿ ಸೆಲೆಬ್ರಿಟಿಗಳ ಸಮರ; ಕಿರುತೆರೆಯಲ್ಲಿ ಶುರುವಾಗಲಿದೆ ಸುವರ್ಣ ಸೆಲೆಬ್ರಿಟಿ ಲೀಗ್

Suvarna Celebrity League : ರಿಯಾಲಿಟಿ ಶೋ ಮೂಲಕ ಕನ್ನಡ ಕಿರುತೆರೆಯಲ್ಲಿ ಹೊಸತನದ ಸಂಚಲನವನ್ನು ಸೃಷ್ಟಿಸಲು ಸ್ಟಾರ್ ಸುವರ್ಣ ವಾಹಿನಿ ಭರ್ಜರಿಯಾಗಿ ಸಜ್ಜಾಗಿದೆ . ವೀಕೆಂಡ್‌ನಲ್ಲಿ ಪ್ರೇಕ್ಷಕರಿಗೆ ಮತ್ತಷ್ಟು ಮನರಂಜನೆಯ ರಸದೌತಣ ನೀಡಲು ಹೊಚ್ಚ ಹೊಸ ಶೋ “ಸುವರ್ಣ ಸೆಲೆಬ್ರಿಟಿ ಲೀಗ್” ಹೊತ್ತು ತರ್ತಿದೆ.

VISTARANEWS.COM


on

By

Suvarna Celebrity League a reality show launched on Star Suvarna
Koo

ಬೆಂಗಳೂರು: ಕಿರುತೆರೆಯಲ್ಲಿ ಸೆಲೆಬ್ರಿಟಿಗಳ ಬಹುದೊಡ್ಡ ಸಮರ “ಸುವರ್ಣ ಸೆಲೆಬ್ರಿಟಿ ಲೀಗ್” (Suvarna Celebrity League) ಇದೇ ಭಾನುವಾರದಿಂದ (ಸೆ.15) ರಾತ್ರಿ 7 ಗಂಟೆಗೆ ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಇದೊಂದು ಕಿರುತೆರೆಯ ಜನಪ್ರಿಯ ಸೆಲೆಬ್ರಿಟಿಗಳನ್ನು ಒಳಗೊಂಡ ವಿನೂತನ ರೀತಿಯ ರಿಯಾಲಿಟಿ ಶೋ ಆಗಿದೆ. ಇದರಲ್ಲಿ ಒಟ್ಟು 2 ತಂಡಗಳು ಇರಲಿದ್ದು, 10 ಜನ ಸೆಲೆಬ್ರಿಟಿ ಸ್ಪರ್ಧಿಗಳ ನಡುವೆ ಸರಿ ಸುಮಾರು 8 ವಾರಗಳ ಕಾಲ ನಡೆಯುವ ಸಮರ ಇದಾಗಿದೆ. ಈ ಜಟಾಪಟಿಯಲ್ಲಿ ಯಾವ ತಂಡ ಗೆದ್ದು “ಸುವರ್ಣ ಸೆಲೆಬ್ರಿಟಿ ಲೀಗ್” ಪಟ್ಟವನ್ನು ತನ್ನದಾಗಿಸಿಕೊಳ್ಳುತ್ತದೆ ? ಎಂಬುದು ಈ ಕಾರ್ಯಕ್ರಮದ ಶೈಲಿಯಾಗಿದೆ. ಜತೆಗೆ ಮೋಜು-ಮಸ್ತಿ, ತರ್ಲೆ ತುಂಟಾಟದ ಜತೆ ಪೈಪೋಟಿಯ ಮಹಾ ಯುದ್ಧವೇ ನಡೆಯಲಿದೆ.

ನಿರೂಪಕರಾಗಿ ಮಿಂಚಲಿರುವ ಕಾರ್ತಿಕ್‌ ಮಹೇಶ್‌

ಇನ್ನು ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ನಟನೆಯ ಮೂಲಕ ಕನ್ನಡಿಗರ ಮನಸ್ಸನ್ನು ಅದ್ಧೂರಿಯಾಗಿ ಗೆದ್ದ ನಟ ಕಾರ್ತಿಕ್ ಮಹೇಶ್ ಇದೇ ಮೊದಲ ಬಾರಿಗೆ ‘ಸುವರ್ಣ ಸೆಲೆಬ್ರಿಟಿ ಲೀಗ್‌’ ನ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಇದು ಈ ಕಾರ್ಯಕ್ರಮದ ಮತ್ತೊಂದು ವಿಶೇಷತೆ ಆಗಿದೆ.

‘ಸುವರ್ಣ ಸೆಲೆಬ್ರಿಟಿ ಲೀಗ್’ ಶೋ ಲಾಂಚ್‌ಗೆ ಭರ್ಜರಿಯಾಗಿ ತಯಾರಿ ನಡೆದಿದ್ದು, ಪ್ರೊಮೋಗಳಿಂದ ವೀಕ್ಷಕರಲ್ಲಿ ಕಾತುರತೆ ಹೆಚ್ಚಾಗಿದೆ. 10 ಸ್ಪರ್ಧಿಗಳಾಗಿ ಕಿರುತೆರೆ ಕಲಾವಿದರುಗಳಾದ ವಿನಯ್ ಗೌಡ, ನಮ್ರತಾ ಗೌಡ ಹಾಗೂ ‘ಕಥೆಯೊಂದು ಶುರುವಾಗಿದೆ’ ಧಾರಾವಾಹಿಯ ಚಂದು ಗೌಡ, ‘ಆಸೆ’ ಧಾರಾವಾಹಿಯ ಪ್ರಿಯಾಂಕಾ ಮತ್ತು ನಿನಾದ್ ಹರಿತ್ಸ, ‘ಗೌರಿಶಂಕರ’ ಧಾರಾವಾಹಿಯ ಅಭಿಜ್ಞಾ ಭಟ್, ತನಿಷಾ ಕುಪ್ಪಂಡ, ಪ್ರಿಯಾಂಕಾ ಶಿವಣ್ಣ, ರಕ್ಷಕ್ ಬುಲೆಟ್ ಹಾಗೂ ‘ಕಾಮಿಡಿ ಗ್ಯಾಂಗ್ಸ್’ನ ಹಿತೇಶ್ ಭಾಗವಹಿಸಲಿದ್ದಾರೆ.

Suvarna Celebrity League a reality show launched on Star Suvarna
Suvarna Celebrity League a reality show launched on Star Suvarna

ಇನ್ಮುಂದೆ ವಾರಾಂತ್ಯದಲ್ಲಿ ಶುರುವಾಗಲಿದೆ ಸೆಲೆಬ್ರಿಟಿಗಳ ಬಹುದೊಡ್ಡ ಸಮರ “ಸುವರ್ಣ ಸೆಲೆಬ್ರಿಟಿ ಲೀಗ್” ಇದೇ ಭಾನುವಾರದಿಂದ ಪ್ರತೀ ಭಾನುವಾರ ರಾತ್ರಿ 7 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

Continue Reading

ಸಿನಿಮಾ

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಗ್ಯಾಂಗ್‌ಗೆ ಮತ್ತೊಂದು ದಿನ ಸೆರೆವಾಸ; ನಾಳೆಗೆ ವಿಚಾರಣೆ ಮುಂದೂಡಿದ ಕೋರ್ಟ್‌

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಗ್ಯಾಂಗ್‌ಗೆ ಒಂದು ದಿನದ ನ್ಯಾಯಾಂಗ ಬಂಧನ ಮುಂದುವರಿದಿದೆ. ಸೆ.13ಕ್ಕೆ ವಿಚಾರಣೆ ಮುಂದೂಡಿ ಕೋರ್ಟ್‌ ಆದೇಶ ಹೊರಡಿಸಿದೆ.

VISTARANEWS.COM


on

By

Actor darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ನ (Actor Darshan) ನ್ಯಾಯಾಂಗ ಬಂಧನ ಅವಧಿ ಗುರುವಾರ ಮುಕ್ತಾಯವಾದ ಈ ಹಿನ್ನೆಲೆಯಲ್ಲಿ ಇಂದು 24ನೇ ಎಸಿಎಂಎಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು. ನಟ ದರ್ಶನ್ ಪರ ವಕೀಲ ಶಿವಕುಮಾರ್ ಹಾಜರಾಗಿದ್ದರು. ಈ ವೇಳೆ ಕಮಿಟಲ್ ಆದೇಶಕ್ಕೆ ಆರೋಪಿಗಳ ಪರ ವಕೀಲರ ಆಕ್ಷೇಪ ವ್ಯಕ್ತಪಡಿಸಿದರು. ಟೆಕ್ನಿಕಲ್‌ ಎವಿಡೆನ್ಸ್‌ಗಳನ್ನು ಆರೋಪಿಗಳಿಗೆ ಕೊಟ್ಟ ನಂತರ ಕಮಿಟಲ್ ಮಾಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.

ಆರೋಪಿಗಳ ಪರ ವಕೀಲರ ಅಬ್ಜೆಕ್ಷನ್ ಹಿನ್ನೆಲೆಯಲ್ಲಿ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ಒಂದು ದಿನದ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದ್ದು, ನಾಳೆ ಶುಕ್ರವಾರಕ್ಕೆ ವಿಚಾರಣೆ ಮುಂದೂಡಿಕೆ ಆಗಿದೆ. ಇದೇ ವೇಳೆ ಕೊಲೆ ಪ್ರಕರಣವನ್ನು ಸೆಷನ್ಸ್ ಕೋರ್ಟ್‌ಗೆ ವರ್ಗಾವಣೆ ಮಾಡುವುದಾಗಿ ನ್ಯಾಯಾಧೀಶರು ಹೇಳಿದರು. ಈ ವೇಳೆ ಡಿಜಿಟಲ್ ಎವಿಡೆನ್ಸ್ ನೀಡಿದ ಬಳಿಕ ಸೆಷನ್ಸ್‌ ಕೋರ್ಟ್‌ಗೆ ವರ್ಗಾವಣೆ ಮಾಡುವಂತೆ ಆರೋಪಿ ಪರ ವಕೀಲ ಮನವಿ ಮಾಡಿದರು. ಈ ವೇಳೆ ಡಿಜಿಟಲ್ ಎವಿಡೆನ್ಸ್ ನೀಡಲು ಒಂದು ವಾರ ಸಮಯ ಬೇಕಾಗುತ್ತೆ ಎಂದು ಎಸ್‌ಪಿಪಿ ವಾದಿಸಿದರು.

ವಿಚಾರಣೆ ನಾಳೆಗೆ ಮುಂದೂಡಿಕೆ ಆಗಿದೆ. ಡಾಕ್ಯುಮೆಂಟ್ಸ್, ಪೆನ್ ಡ್ರೈವ್‌, ಸಿಡಿ, ಡಿವಿಆರ್ ಕೊಟ್ಟಿಲ್ಲ ಅದನ್ನೂ ನಾಳೆಗೆ ಕೇಳಿದ್ದೇವೆ. ಕಮಿಟಲ್ ಆರ್ಡರ್ ಆದ ನಂತರ ಸೆಷನ್ ಕೋರ್ಟ್‌ಗೆ ಜಾಮೀನಿಗೆ ಅರ್ಜಿ ಹಾಕಲಾಗುತ್ತದೆ ಎಂದು ದರ್ಶನ್ ಪರ ವಕೀಲ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ನಟ ದರ್ಶನ್‌, ಪವಿತ್ರಾಗೌಡ ಸೇರಿ ವಿವಿಧ ಜೈಲಿನಿಂದ ಒಟ್ಟು 17 ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಇದೀಗ ಸೆ.13ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿರುವುದರಿಂದ ದರ್ಶನ್ ಗ್ಯಾಂಗ್‌ಗೆ ಸೆರೆವಾಸ ಮುಂದುವರಿದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Assault Case : ಹುಡುಗರನ್ನು ಬಿಟ್ಟು ಜಿಮ್‌ ಟ್ರೈನರ್‌ಗೆ ಹೊಡೆಸಿದ್ದಕ್ಕೆ ನಟ ಧ್ರುವ ಸರ್ಜಾ ಮ್ಯಾನೇಜರ್‌ ಬಂಧನ

Assault Case : ನಟ ಧ್ರುವ ಸರ್ಜಾ (Dhruva Sarja) ಅವರ ಜಿಮ್‌ ಟ್ರೈನರ್‌ ಪ್ರಶಾಂತ್‌ ಪೂಜಾರಿ (Gym Trainer) ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದರ ಮಾಸ್ಟರ್‌ ಮೈಂಡ್‌ ಸರ್ಜಾ ಅವರ ಮ್ಯಾನೇಜರ್ ಅಶ್ವಿನ್ (Manager) ಎಂಬಾತನನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

Assault case Actor Dhruva Sarjas manager arrested for hitting gym trainer
Koo

ಬೆಂಗಳೂರು: ನಟ ಧ್ರುವ ಸರ್ಜಾ (Dhruva Sarja) ಮ್ಯಾನೇಜರ್ (Manager) ಅಶ್ವಿನ್‌ ಎಂಬಾತನನ್ನು ಬನಶಂಕರಿ ಪೊಲೀಸರು (Banashankari Police) ಬಂಧನ ಮಾಡಿದ್ದಾರೆ. ಪ್ರಶಾಂತ್ ಪೂಜಾರಿ ಎಂಬಾತನ ಮೇಲೆ ಹಲ್ಲೆ (Assault case) ನಡೆಸಲು ಈತ ಕೂಡ ಕಾರಣ ಎಂಬ ವಿಚಾರ ತನಿಖೆಯಿಂದ ಗೊತ್ತಾದ ಹಿನ್ನೆಲೆಯಲ್ಲಿ ಅಶ್ವಿನ್‌ನನ್ನು ಬಂಧನ ಮಾಡಲಾಗಿದೆ.

ಮೂರು ತಿಂಗಳ ಹಿಂದೆ ಅಂದರೆ ಮೇ 26ರಂದು ಕನಕಪುರ ಮೂಲದ ಹರ್ಷ ಹಾಗೂ ಸುಭಾಷ್ ಎಂಬುವವರು ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿದ್ದರು. ದೂರು ದಾಖಲಿಸಿದ ಬಳಿಕ ಅವರಿಬ್ಬರನ್ನು ಬಂಧನ ಮಾಡಲಾಗಿತ್ತು. ಇದೀಗ ತನಿಖೆ ವೇಳೆ ಹಲ್ಲೆ ಹಿಂದಿನ ಮಾಸ್ಟರ್ ಮೈಂಡ್ ನಟ ಧ್ರುವ ಸರ್ಜಾ ಮ್ಯಾನೇಜರ್ ಆಗಿರುವ ಅಶ್ವಿನ್ ಎಂದು ತಿಳಿದುಬಂದಿದೆ. ಬಂಧಿತ ಅಶ್ವಿನ್‌ ಸೇರಿ ಇಲ್ಲಿವರೆಗೆ ನಾಲ್ವರನ್ನು ಬಂಧನ ಮಾಡಲಾಗಿದೆ.

ಜಿಮ್‌ ಟ್ರೈನರ್‌ ಪ್ರಶಾಂತ್‌ ಪೂಜಾರಿಗೆ ಸರ್ಪೈಸ್‌ ಗಿಫ್ಟ್‌ ಕೊಟ್ಟಿದ್ದ ಸರ್ಜಾ

ಈ ಅಶ್ವಿನ್ ಹಲವು ವರ್ಷಗಳಿಂದ ನಟ ಧೃವ ಸರ್ಜಾ ಬಳಿ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದ. ಹಲ್ಲೆಗೊಳಗಾದ ಪ್ರಶಾಂತ್ ಪೂಜಾರಿ ಜಿಮ್ ಟ್ರೈನರ್ ಆಗಿದ್ದು, ನಟ ಧೃವ ಸರ್ಜಾ ಅವರಿಗೆ ಇತ್ತೀಚಿಗೆ ಹತ್ತಿರವಾಗಿದ್ದ. ಜಿಮ್ ವಿಚಾರದಲ್ಲಿ ಧೃವ ಸರ್ಜಾರನ್ನು ಕೇರ್ ಮಾಡುತ್ತಿದ್ದ . ಹೀಗಾಗಿ ಸಹಜವಾಗಿಯೇ ನಟ ಧೃವ ಸರ್ಜಾಗೆ ಪ್ರಶಾಂತ್‌ ಪೂಜಾರಿ ಆತ್ಮೀಯನಾಗಿದ್ದ.‌ ಮಾತ್ರವಲ್ಲ ನಟ ಧೃವ ಸರ್ಜಾಗೆ ಪ್ರಶಾಂತ್ ಒಳ್ಳೆತನ ಕಂಡು ದುಬಾರಿ ಬೆಲೆಯ ಕಾರನ್ನು ಸರ್ಪೈಸ್‌ ಆಗಿ ಕೊಟ್ಟಿದ್ದರು‌.

Actor Dhruva Sarjas manager arrested for hitting gym trainer
Actor Dhruva Sarjas manager arrested for hitting gym trainer

ಇದು ಮ್ಯಾನೇಜರ್‌ ಅಶ್ವಿನ್‌ ಹಾಗೂ ಆತನ ಆಪ್ತ ವಲಯಕ್ಕೆ ಸಹಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಧೃವ ಸರ್ಜಾ ಜತೆಗಿನ ಆತ್ಮೀಯತೆಯನ್ನು ಹೇಗಾದರೂ ಕಟ್ ಮಾಡಬೇಕು ಎಂದು ಕೊಂಡಿದ್ದರು. ಈ ಕಾರಣಕ್ಕೆ ನಟ ಧೃವ ಸರ್ಜಾ ಕಾರು ಚಾಲಕ ನಾಗೇಂದ್ರನ ಜತೆ ಸೇರಿ ಪ್ಲಾನ್ ಮಾಡಿ ಕನಕಪುರದ ಇಬ್ಬರು ಹುಡುಗರನ್ನು ಬಿಟ್ಟು ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆಸಿದ್ದರು. ಈ ಮೊದಲು ಡ್ರೈವರ್‌ ನಾಗೇಂದ್ರನೇ ಮಾಸ್ಟರ್ ಮೈಂಡ್ ಎಂದು ಹೇಳಲಾಗಿತ್ತು. ಆದರೆ ಆತನ ಜತೆ ಅಶ್ವಿನ್‌ ಕೂಡ ಇರುವುದು ತನಿಖೆಯಿಂದ ಸಾಬೀತಾಗಿದೆ. ಪ್ರಶಾಂತ್ ಪೂಜಾರಿ ಹಲ್ಲೆ ಪ್ರಕರಣದಲ್ಲಿ ನಾಲ್ವರು ಬಂಧನ ಮಾಡಲಾಗಿದೆ. ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Actor Darshan : ಚಿಕ್ಕಣ್ಣ ಇದ್ದಾಗಲೇ ರೇಣುಕಾಸ್ವಾಮಿ ಕೊಲೆ ಬಗ್ಗೆ ಚರ್ಚೆ ಆಯ್ತಾ! ಆ ದಿನ ದರ್ಶನ್‌ ಏನ್‌ ಅಂದ್ರು

Actor darshan : ಜೂನ್ 10 ರಂದು ನನ್ನ ಸ್ನೇಹಿತ ನಾಗೇಂದ್ರ ನನಗೆ ಕರೆ ಮಾಡಿ ದರ್ಶನ್ ಅರೆಸ್ಟ್ ಆಗಿದ್ದಾರೆ ಎಂದಿದ್ದರು. ನಾನು ಕೊಲೆಯ ಬಗ್ಗೆ ಸುದ್ದಿ ಮಾಧ್ಯಮಗಳಲ್ಲಿ ನೋಡಿದ್ದೆ. ದರ್ಶನ್ ಕಿವಿಯಲ್ಲಿ ಬಂದು ಏನೋ ಹೇಳಿದ್ದ ಪವನ್‌ನನ್ನು ಸಹ ಬಂಧಿಸಿರುವುದು ತಿಳಿದು ಬಂದಿತ್ತು ಎಂದು ಚಾರ್ಜ್‌ಶೀಟ್‌ನಲ್ಲಿ ನಟ ಚಿಕ್ಕಣ್ಣ (Actor Chikkanna) ಹೇಳಿಕೆ ನೀಡಿದ್ದಾರೆ.

VISTARANEWS.COM


on

By

Actor Chikkanna
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ (Renukaswamy case) ಚಾರ್ಜ್​ಶೀಟ್​ನಲ್ಲಿ ನಟ ಚಿಕ್ಕಣ್ಣನ (Actor Chikkanna) ಹೇಳಿಕೆಯೂ ಉಲ್ಲೇಖವಾಗಿದೆ. ಅಂದು ಸ್ಟೋನಿಬ್ರೂಕ್​​ನಲ್ಲಿ ದರ್ಶನ್​ (Actor Darshan) ಭೇಟಿ ಮಾಡಿದ್ದ ಚಿಕ್ಕಣ್ಣ ಪೊಲೀಸರಿಗೆ ಒಂದಷ್ಟು ವಿಷಯಗಳನ್ನು ಹೇಳಿದ್ದಾರೆ. ಜೂನ್ 8ರಂದು ಎ.ಪಿ ಅರ್ಜುನ್ ಕಛೇರಿಯಲ್ಲಿ ನನ್ನ ಮುಂದಿನ ಚಿತ್ರದ ಬಗ್ಗೆ ಚರ್ಚೆ‌ ಮಾಡುತ್ತಿದ್ದೆ. ಆಗ ನಟ ಯಶಸ್ ಕರೆ ಮಾಡಿ ದರ್ಶನ್ ಮಧ್ಯಾಹ್ನ ಸ್ಟೋನಿ ಬ್ರೂಕ್ ನಲ್ಲಿ ಊಟ ಅರೆಂಜ್ ಮಾಡಿದ್ದಾರೆ. ನಿನಗೆ ಕರೆ ಮಾಡಿ ತಿಳಿಸುವಂತೆ ಸೂಚಿಸಿದ್ದಾರೆ, ಡೈರೆಕ್ಟಾಗಿ ಸ್ಟೋನಿ ಬ್ರೂಕ್ ಬರುವಂತೆ ಹೇಳಿದ್ದರು. ನಾನು ಬರಲು ಟ್ರೈ ಮಾಡುತ್ತೇನೆಂದು ಯಶಸ್‌ಗೆ ತಿಳಿಸಿದೆ.

ಆದರೆ 10 ನಿಮಿಷಗಳ ನಂತರ ದರ್ಶನ್ ನನಗೆ ಕರೆ ಮಾಡಿ ಬರುವಂತೆ ತಿಳಿಸಿದರುನಾನು ಮನೆಗೆ ಬಂದು ಬಟ್ಟೆ ಬದಲಾಯಿಸಿಕೊಂಡು 02-45ಕ್ಕೆ‌‌ ನನ್ನ ಖಾಸಗಿ ವಾಹನದಲ್ಲಿ ಡ್ರೈವರ್ ಸಿದ್ದು ಜತೆಯಲ್ಲಿ ಸ್ಟೋನಿ ಬ್ರೂಕ್‌ಗೆ ಹೋಗಿದ್ದೆ. ನಾನು ಸಿದ್ದುನನ್ನು ಕಾರಲ್ಲಿ ಬಿಟ್ಟು ಡಿ ಬಾಸ್ ಸಫಾರಿ ಎಂಬ ಲಾಂಜ್‌ಗೆ ತೆರಳಿದೆ. ಅಲ್ಲಿ ದರ್ಶನ್, ವಿನಯ್, ಪ್ರದೂಷ್, ಯಶಸ್, ನಾಗರಾಜು ಊಟ ಮಾಡುತ್ತಿದ್ದರು. ​​ನಾನು ಕುಳಿತುಕೊಂಡು ನನ್ನ ಮುಂದಿನ ಚಿತ್ರದ ಬಗ್ಗೆ ಮಾತನಾಡುತ್ತಾ, ಊಟ ಮಾಡಿದೆ.

ಇದನ್ನೂ ಓದಿ: Renukaswamy case : ರೇಣುಕಾಸ್ವಾಮಿ ಪವಿತ್ರಾಗೌಡಗೆ ಮಾತ್ರವಲ್ಲ ಸ್ಯಾಂಡಲ್‌ವುಡ್‌ನ ಆ ಸ್ಟಾರ್‌ ನಟಿಯರಿಗೂ ಕಳಿಸಿದ್ದನಂತೆ ಬ್ಯಾಡ್‌ ಮಸೇಜ್‌

ಆಗ ಪವನ್, ದರ್ಶನ್ ಬಳಿಗೆ ಬಂದು ಕಿವಿಯಲ್ಲಿ ಯಾವುದೋ ವಿಚಾರ ತಿಳಿಸಿದರು. ವಿಷಯ ತಿಳಿಸಿದ ನಂತರ ದರ್ಶನ್ ಮುಖಭಾವ ಬದಲಾವಣೆಯಾಗಿತ್ತು. ನಂತರ ದರ್ಶನ್ ಯಾರಿಗೋ ಕರೆ ಮಾಡಿ ಗಂಭೀರವಾಗಿ ಯಾವುದೋ ವಿಚಾರದ ಬಗ್ಗೆ ಚರ್ಚೆ ಮಾಡಿದರು. ನಂತರ ಚಿಕ್ಕಣ್ಣ ನೀನು ಹೊರಡು ನಮಗೆ ಬೇರೆ ಕೆಲಸ ಇದೆ ಎಂದು ದರ್ಶನ್ ತಿಳಿಸಿದರು. ಹೀಗಾಗಿ ಎಲ್ಲರೂ ಒಟ್ಟಿಗೆ ಕೆಳಗೆ ಬಂದಿದ್ದು‌. ನಾನು ಅಲ್ಲಿಂದ ಹೊರಟು ಹೋದೆ. ಕಪ್ಪು ಬಣ್ಣದ ಸ್ಕಾರ್ಪಿಯೋ ವಾಹನದಲ್ಲಿ ದರ್ಶನ್, ಪ್ರದೂಷ್ ಹಾಗೂ ವಿನಯ್ ಹಾಗೂ ನಾಗರಾಜು ಬಿಳಿ ಬಣ್ಣದ ಸ್ಕಾರ್ಪಿಯೋ ವಾಹನವಲ್ಲಿ ಅಲ್ಲಿಂದ ಹೋದರು.

ಜೂನ್ 10 ರಂದು ನನ್ನ ಸ್ನೇಹಿತ ನಾಗೇಂದ್ರ ನನಗೆ ಕರೆ ಮಾಡಿ ದರ್ಶನ್ ಅರೆಸ್ಟ್ ಆಗಿದ್ದಾರೆ ಎಂದ್ದರು. ನಾನು ಕೊಲೆಯ ಬಗ್ಗೆ ಸುದ್ದಿ ಮಾಧ್ಯಮಗಳಲ್ಲಿ ನೋಡಿದ್ದೆ. ದರ್ಶನ್ ಕಿವಿಯಲ್ಲಿ ಬಂದು ಏನೋ ಹೇಳಿದ್ದ ಪವನ್‌ನನ್ನು ಸಹ ಬಂಧಿಸಿರುವುದು ತಿಳಿದು ಬಂದಿತ್ತು. ನಾನು ಸಿನಿಮಾ ಇಂಡಸ್ಟ್ರಿಯಲ್ಲಿ ನಾಯಕ ನಟ ಹಾಗೂ ಹಾಸ್ಯ ನಟನಾಗಿದ್ದೇನೆ. ನನಗೆ ದರ್ಶನ್ ಬುಲ್ ಬುಲ್ ಚಿತ್ರದ ಸಮಯದಿಂದ ಪರಿಚಯವಾಗಿರುತ್ತದೆ. ನಾನು ಅವರೊಂದಿಗೆ ಸುಮಾರು 03 ಚಿತ್ರಗಳಲ್ಲಿ ಹಾಸ್ಯನಟನಾಗಿ ಕೆಲಸ ಮಾಡಿದ್ದೇನೆ. ರಾಬರ್ಟ್ ಸಿನಿಮಾದ ವೇಳೆ ಹೆಚ್ಚಾಗಿ ಅವರೊಂದಿಗೆ ಒಡನಾಟ ಹೊಂದಿದ್ದೆ. ದರ್ಶನ್- ಪವಿತ್ರಗೌಡ ಜತೆಗೆ ಲಿವಿಂಗ್ ರಿಲೇಷನ್‌ನಲ್ಲಿ ಇದ್ದ ಬಗ್ಗೆ ನನಗೆ ತಿಳಿದಿದೆ ಎಂದು ಹೇಳಿಕೆ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prosecution against Siddaramaiah Hc reserves verdict after hearing arguments
ಕೋರ್ಟ್16 mins ago

CM Siddaramaiah : ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್;​ ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿಸಿರಿದ ಹೈಕೋರ್ಟ್, ಮಧ್ಯಂತರ ತಡೆ ಮುಂದುವರಿಕೆ

Colon cancer is on the rise‌ Those above 50 years of age are targeted
ಆರೋಗ್ಯ1 hour ago

Colon cancer : ಕರುಳಿನ ಕ್ಯಾನ್ಸರ್ ವಯಸ್ಸಾದವರಿಗೆ ಕಂಟಕ! ಈ ಆಹಾರಗಳನ್ನು ತಿನ್ನಲೇಬೇಡಿ

Suvarna Celebrity League a reality show launched on Star Suvarna
ಸಿನಿಮಾ2 hours ago

Suvarna Celebrity League : ವಾರಾಂತ್ಯದಲ್ಲಿ ಸೆಲೆಬ್ರಿಟಿಗಳ ಸಮರ; ಕಿರುತೆರೆಯಲ್ಲಿ ಶುರುವಾಗಲಿದೆ ಸುವರ್ಣ ಸೆಲೆಬ್ರಿಟಿ ಲೀಗ್

Self harming
ಬೆಂಗಳೂರು4 hours ago

Self Harming : ಅಮ್ಮ ಬೈಕ್‌ ಕೊಡಿಸಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಯುವಕ

Actor darshan
ಸಿನಿಮಾ5 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಗ್ಯಾಂಗ್‌ಗೆ ಮತ್ತೊಂದು ದಿನ ಸೆರೆವಾಸ; ನಾಳೆಗೆ ವಿಚಾರಣೆ ಮುಂದೂಡಿದ ಕೋರ್ಟ್‌

CM Siddaramaiah
ರಾಜಕೀಯ5 hours ago

CM Siddaramaiah : ಸಿದ್ದರಾಮಯ್ಯ ವಿಷ್ಯದಲ್ಲಿ ಆತುರದ ನಿರ್ಣಯ; ರಾಜ್ಯಪಾಲರಿಂದ ಸಂವಿಧಾನಕ್ಕೆ ಅಪಚಾರ- ಹಿರಿಯ ವಕೀಲ ಅಭಿಷೇಕ್‌ ಮನುಸಿಂಘ್ವಿ

Road Accident
ಪ್ರಮುಖ ಸುದ್ದಿ7 hours ago

Road Accident : ಏರ್‌ಪೋರ್ಟ್‌ ರೋಡ್‌ನಲ್ಲಿ ಡೆಡ್ಲಿ ಹಿಟ್‌ ಆ್ಯಂಡ್‌ ರನ್‌; ಲಾಂಗ್‌ ಡ್ರೈವ್‌‌ ಬಂದಿದ್ದ ಮೂವರು ವಿದ್ಯಾರ್ಥಿಗಳು ಬಲಿ

Dina Bhavishya
ಭವಿಷ್ಯ8 hours ago

Dina Bhavishya : ಈ ರಾಶಿಯವರ ಅನುಮಾನವೇ ಸಂಬಂಧಗಳನ್ನು ಹಾಳು ಮಾಡುತ್ತೆ

Installation of Ganesha idol at home Muslim man preaches message of unity
ಗದಗ1 day ago

Ganesh Chaturthi: ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ; ಭಾವೈಕ್ಯತೆಯ ಸಂದೇಶ ಸಾರಿದ ಮುಸ್ಲಿಂ ವ್ಯಕ್ತಿ

karnataka weather Forecast
ಮಳೆ2 days ago

Karnataka Weather : 40 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರಿಕೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್2 weeks ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 weeks ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ3 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 month ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 month ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 month ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌