Site icon Vistara News

Samantha: ಸಮಂತಾ ಅಭಿನಯದ ಪೌರಾಣಿಕ ಚಿತ್ರ ʻಶಾಕುಂತಲಂʼ ಬಿಡುಗಡೆ ದಿನಾಂಕ ಬದಲಾವಣೆ

Samantha Shakuntalam gets a new release date

ಬೆಂಗಳೂರು: ಸಮಂತಾ ರುತ್ ಪ್ರಭು (Samantha) ಅವರ ಬಹು ನಿರೀಕ್ಷಿತ ಪೌರಾಣಿಕ ಚಿತ್ರ “ಶಾಕುಂತಲಂ” ಬಿಡುಗಡೆ ದಿನಾಂಕ ಬದಲಾವಣೆಗೊಂಡಿದೆ. ಈ ಮೊದಲು ಫೆಬ್ರವರಿ 17 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಇದೀಗ ಚಿತ್ರತಂಡ ಏಪ್ರಿಲ್ 14 ರಂದು ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಸೇರಿದಂತೆ ಐದು ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ದೇವ್ ಮೋಹನ್ ಸಮಂತಾ ಎದುರು ನಾಯಕ ನಟನಾಗಿ ನಟಿಸಲಿದ್ದಾರೆ. ಮೂಲಗಳ ಪ್ರಕಾರ ಪಠಾಣ್‌ ಸಿನಿಮಾದಿಂದಾಗಿ (Pathaan effect) ಶಾಕುಂತಲಂ ಸಿನಿಮಾ ರಿಲೀಸ್‌ ಮಾಡಲು ಚಿತ್ರತಂಡ ಹಿಂದೇಟು ಹಾಕುತ್ತಿದೆ ಎನ್ನಲಾಗಿದೆ. ಗುಣಶೇಖರ್ ನಿರ್ದೇಶನದ ಶಾಕುಂತಲಂ 2ಡಿ ಮಾತ್ರವಲ್ಲದೆ 3ಡಿಯಲ್ಲಿಯೂ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Samantha: ಸಮಂತಾ ಮುಂಬೈನಲ್ಲಿ ಖರೀದಿಸಿದ ದುಬಾರಿ ಫ್ಲ್ಯಾಟ್ ಬೆಲೆ ಎಷ್ಟು?

ಇದನ್ನೂ ಓದಿ: Samantha: ಡಬ್ಬೂ ರತ್ನಾನಿ ಫೋಟೊಶೂಟ್‌ನಲ್ಲಿ ಮಿಂಚಿದ ಸಮಂತಾ

ಮಹಾಕವಿ ಕಾಳಿದಾಸನ ʻಅಭಿಜ್ಞಾನ ಶಾಕುಂತಲಂʼ ನಾಟಕವನ್ನು ಆಧರಿಸಿ ಚಿತ್ರ ನಿರ್ಮಾಣವಾಗಿದೆ. ರಾಜ ದುಷ್ಯಂತ ಪಾತ್ರದಲ್ಲಿ ದೇವ್ ಮೋಹನ್ ನಟಿಸಿದರೆ, ಶಾಕುಂತಲೆಯಾಗಿ ಸಮಂತಾ ಕಾಣಿಸಿಕೊಳ್ಳುತ್ತಿದ್ದಾರೆ. ಟಾಲಿವುಡ್‌ ನಟ ಅಲ್ಲು ಅರ್ಜುನ್‌ ಮಗಳು ಅರ್ಹಾ ಕೂಡ ಈ ಚಿತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ಚಿತ್ರವನ್ನು ಗುಣಶೇಖರ್ ನಿರ್ದೇಶಿಸಿದ್ದಾರೆ. ನೀಲಿಮಾ ಗುಣ ಮತ್ತು ದಿಲ್ ರಾಜು ನಿರ್ಮಾಣ ಮಾಡಿದ್ದಾರೆ. ಸಚಿನ್ ಖೇಡೇಕರ್, ಅನನ್ಯ ನಾಗಲ್ಲ, ಮೋಹನ್ ಬಾಬು, ಗೌತಮಿ ಮತ್ತು ಅದಿತಿ ಬಾಲನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಮಂತಾ ರುತ್ ಪ್ರಭು ಈಗಾಗಲೇ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

Exit mobile version