Kannada New Movie: ಹಳ್ಳಿಗಳನ್ನು ಉಳಿಸುವ ಹುಡುಗರ ಕಥೆ ʻಸಂಭವಾಮಿ ಯುಗೇ ಯುಗೇʼ: ಇದೇ ಜೂನ್‌ 21ಕ್ಕೆ ತೆರೆಗೆ! - Vistara News

ಸಿನಿಮಾ

Kannada New Movie: ಹಳ್ಳಿಗಳನ್ನು ಉಳಿಸುವ ಹುಡುಗರ ಕಥೆ ʻಸಂಭವಾಮಿ ಯುಗೇ ಯುಗೇʼ: ಇದೇ ಜೂನ್‌ 21ಕ್ಕೆ ತೆರೆಗೆ!

Kannada New Movie: ನಾಯಕನ ತಂಗಿಯ ಪಾತ್ರ ಮಾಡಿರುವ ಮಧುರಾಗೌಡ ಮಾತನಾಡಿ ಈ ಚಿತ್ರದಲ್ಲಿ ಸುಧಾರಾಣಿ ಅವರ ಮಗಳಾಗಿ ನಟಿಸಿದ್ದು ನನ್ನ ಅದೃಷ್ಟ ಎಂದುʼʼ ತನ್ನ‌ ಪಾತ್ರದ ಕುರಿತು ಹೇಳಿಕೊಂಡರು. ಪೂರನ್ ಶೆಟ್ಟಿಗಾರ್ ಅವರ ಸಂಗೀತ ಸಂಯೋಜನೆ, ರಾಜು ಹೆಮ್ಮಿಗೆಪುರ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಉಳಿದಂತೆ ಕಲಾವಿದರಾದ ಬಲ ರಾಜವಾಡಿ, ಪುನೀತ್, ಅಶ್ವಿನ್‌ಹಾಸನ್ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದು ತಮ್ಮ ಪಾತ್ರಗಳ‌ ಕುರಿತು ಮಾತನಾಡಿದರು.

VISTARANEWS.COM


on

Sambhavami Yuge Yuge in june 21st Release
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆಧುನಿಕತೆಯ ಸೋಗಿನಲ್ಲಿ (Kannada New Movie) ನಮ್ಮ ಹಳ್ಳಿಗಳಲ್ಲಿ ಮೊದಲಿದ್ದ ವೈಭವ ಕಡಿಮೆಯಾಗುತ್ತಿದೆ. ವಿದ್ಯಾವಂತರೆಲ್ಲ ಪಟ್ಟಣ ಸೇರುತ್ತಿದ್ದಾರೆ. ಹೀಗಾಗಬಾರದು, ಯುವಕರು ಹಳ್ಳಿಗಳಲ್ಲೇ ಇದ್ದು ಕೆಲಸ ಮಾಡಬೇಕೆನ್ನುವ ಸಂದೇಶ ಇಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ ʻಸಂಭವಾಮಿ ಯುಗೇ ಯುಗೇʼ. ರಾಜಲಕ್ಷ್ಮಿ ಎಂಟರ್‌ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರವು ಇದೇ ತಿಂಗಳು 21ರಂದು ಬಿಡುಗಡೆಯಾಗಲಿದೆ.

ಜಯ್ ಶೆಟ್ಟಿ – ನಿಶಾ ರಜಪೂತ್ ಹಾಗೂ ಮಧುರಾಗೌಡ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡ ಅರಮನೆಗಳ ನಗರ ಮೈಸೂರಿಗೆ ಭೇಟಿಕೊಟ್ಟು ಮಾಧ್ಯಮಗಳ ಜತೆ ಮಾತನಾಡಿತು.
ತಮ್ಮ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಕುರಿತಂತೆ ಮಾತನಾಡಿದ ಚೇತನ್ ಚಂದ್ರಶೇಖರ್ ಶೆಟ್ಟಿ, ʻನಾನು ಕಳೆದ ಹತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದು, ಸೋಷಿಯಲ್ ಕಂಟೆಂಟ್ ಇಟ್ಟುಕೊಂಡು ಈ ಚಿತ್ರ ನಿರ್ದೇಶನ ಮಾಡಿದ್ದೇನೆ. ಫ್ಯಾಮಿಲಿ ಆಡಿಯನ್ಸ್ ಕೂತು ನೋಡುವಂಥ ವಿಭಿನ್ನ ಕಮರ್ಷಿಯಲ್ ಕಾನ್ಸೆಪ್ಟ್ ಇರುವ ಈ ಚಿತ್ರಕ್ಕೆ ಚಿತ್ರದಲ್ಲಿ ಕೃಷ್ಣನ ಪಾತ್ರ ಹಾಗೂ ಅರ್ಜುನನನ್ನು ಹೋಲುವ ಪಾತ್ರಗಳೂ ಇವೆ. ಮಂಡ್ಯ, ಚನ್ನಪಟ್ಟಣ, ರಾಮನಗರ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಿದ್ದೇವೆ. ಈಗಾಗಲೇ ಚಿತ್ರದ ಟೀಸರ್, ಸಾಂಗ್ಸ್ ವೈರಲ್ ಆಗಿದ್ದು, ಸದ್ಯದಲ್ಲೇ ಟ್ರೈಲರ್ ಬಿಡುಗʼʼ ಮಾಡುತ್ತಿದ್ದೇವೆ ಎಂದರು.

ಇದನ್ನೂ ಓದಿ: Nandamuri Balakrishna: ಇಂದು ತೆಲುಗು ಸೂಪರ್‌ಸ್ಟಾರ್ ಬಾಲಯ್ಯ ಬರ್ತ್‌ಡೇ; ಹೊಸ ಸಿನಿಮಾ ಅನೌನ್ಸ್‌!

ʻʻಹಳ್ಳಿಯ ಹುಡುಗರು ವಿದ್ಯಾವಂತರಾದ ಮೇಲೆ, ಕೆಲಸದ ನಿಮಿತ್ತ ಪಟ್ಟಣಕ್ಕೆ ಅಂತ ಹೋದವರು ಅಲ್ಲೇ ನೆಲೆಸುತ್ತಾರೆ. ಇದರಿಂದ ಮುಂದಿನ ತಲೆಮಾರಿನ ಕಥೆ ಏನು ? ನಮ್ಮ ಹಳ್ಳಿಗಳು ಉಳಿಯುವುದಾದರೂ ಹೇಗೆ ?, ಹಾಗಾಗಿ ಯುವಕರು ಹಳ್ಳಿಯಲ್ಲೇ ನೆಲೆಸಬೇಕು, ಹಳ್ಳಿಗಳನ್ನು ಬೆಳೆಸಬೇಕು ಎಂಬ ಕಥಾಹಂದರದ ಮೇಲೆ ಈ ಚಿತ್ರ ಮಾಡಿದ್ದೇವೆ. ಜೂನ್ 21ಕ್ಕೆ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ. ಕಮರ್ಷಿಯಲ್ ಚಿತ್ರವಾದರೂ, ಇವತ್ತಿನ ತಲೆಮಾರಿನವರಿಗೆ ಕನೆಕ್ಟ್ ಆಗುವಂಥ ಹಲವಾರು ಅಂಶಗಳು ನಮ್ಮ ಚಿತ್ರದಲ್ಲಿವೆʼʼ ಎಂದು ಹೇಳಿದರು.

ನಾಯಕಿ ನಿಶಾ ರಜಪೂತ್ ಮಾತನಾಡಿ ʻʻನಾನು ಬಿಜಾಪುರದವಳಾದರೂ, ಬೆಳೆದಿದ್ದು ಮುಂಬೈನಲ್ಲಿ. ಕನ್ನಡದಲ್ಲಿ ನಟಿಸಬೇಕು ಎಂಬ ಆಸೆ ಇತ್ತು. ಈ ಚಿತ್ರದಲ್ಲಿ ಸ್ವಾತಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದು ಹೇಳಿದರು, ನಾಯಕನ ತಂಗಿಯ ಪಾತ್ರ ಮಾಡಿರುವ ಮಧುರಾಗೌಡ ಮಾತನಾಡಿ ಈ ಚಿತ್ರದಲ್ಲಿ ಸುಧಾರಾಣಿ ಅವರ ಮಗಳಾಗಿ ನಟಿಸಿದ್ದು ನನ್ನ ಅದೃಷ್ಟ ಎಂದುʼʼ ತನ್ನ‌ ಪಾತ್ರದ ಕುರಿತು ಹೇಳಿಕೊಂಡರು. ಪೂರನ್ ಶೆಟ್ಟಿಗಾರ್ ಅವರ ಸಂಗೀತ ಸಂಯೋಜನೆ, ರಾಜು ಹೆಮ್ಮಿಗೆಪುರ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಉಳಿದಂತೆ ಕಲಾವಿದರಾದ ಬಲ ರಾಜವಾಡಿ, ಪುನೀತ್, ಅಶ್ವಿನ್‌ಹಾಸನ್ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದು ತಮ್ಮ ಪಾತ್ರಗಳ‌ ಕುರಿತು ಮಾತನಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Appu Cup Badminton: ʼಅಪ್ಪು ಕಪ್ ಸೀಸನ್ 2ʼ; ಟೀಮ್ ಬಿಲ್ಡಿಂಗ್‌ಗೆ ಶುಭ ಕೋರಿದ ಅಶ್ವಿನಿ ಪುನೀತ್ ರಾಜಕುಮಾರ್

appu cup badminton: ಚೇತನ್ ಸೂರ್ಯ ಅವರ ಸ್ಟೆಲ್ಲರ್‌ ಸ್ಟುಡಿಯೋ ಮತ್ತು ಇವೆಂಟ್‌ ಮ್ಯಾನೇಜ್‌ಮೆಂಟ್ ಸಂಸ್ಥೆ, ಪಿ.ಆರ್‌.ಕೆ. ಆಡಿಯೋ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿರುವ ʼಅಪ್ಪು ಕಪ್ ಸೀಸನ್ 2ʼ (ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಜುಲೈ ಅಂತ್ಯದಲ್ಲಿ ನಡೆಯಲಿದ್ದು, ಈ ಟೂರ್ನಿಯ ಟೀಮ್ ಬಿಲ್ಡಿಂಗ್ ಇವೆಂಟ್ ಈಚೆಗೆ ನಡೆಯಿತು. ಅಶ್ವಿನಿ ಪುನೀತ್ ರಾಜಕುಮಾರ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಶುಭ ಕೋರಿದರು.

VISTARANEWS.COM


on

Appu Cup Season 2 to be held in July A team building event was held in Bengaluru
Koo

ಬೆಂಗಳೂರು: ಕನ್ನಡ ಚಿತ್ರರಂಗದೊಂದಿಗೆ (appu cup badminton) ಒಂದು ದಶಕದಿಂದ ಒಡನಾಟ ಹೊಂದಿರುವ ಚೇತನ್ ಸೂರ್ಯ ಅವರ ಸ್ಟೆಲ್ಲರ್‌ ಸ್ಟುಡಿಯೋ ಮತ್ತು ಇವೆಂಟ್‌ ಮ್ಯಾನೇಜ್‌ಮೆಂಟ್ ಸಂಸ್ಥೆ (STELLER STUDIO & EVENT MANAGEMENT) ಮತ್ತು ಪಿಆರ್‌ಕೆ ಆಡಿಯೋ (PRK Audio) ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿರುವ ʼಅಪ್ಪು ಕಪ್ ಸೀಸನ್ 2ʼ (ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಜುಲೈ ಅಂತ್ಯದಲ್ಲಿ ನಡೆಯಲಿದ್ದು, ಈ ಟೂರ್ನಿಯ ಟೀಮ್ ಬಿಲ್ಡಿಂಗ್ ಇವೆಂಟ್ ಈಚೆಗೆ (Bengaluru News) ನಡೆಯಿತು.

ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಶುಭ ಕೋರಿದರು. ಸಾಯಿ ಗೋಲ್ಡ್ ಪ್ಯಾಲೇಸ್ ಮಾಲೀಕರು ಹಾಗೂ ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಸೇರಿದಂತೆ ಅನೇಕ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

ಸತತವಾಗಿ ಮೂರು ವರ್ಷಗಳ ಕಾಲ ಗೆದ್ದ ತಂಡಕ್ಕೆ ಅಪ್ಪು ಅವರ ಭಾವಚಿತ್ರವುಳ್ಳ ಬೆಳ್ಳಿಯ ಐದು ಕೆಜಿ ತೂಕದ ಟ್ರೋಫಿ ನೀಡಲಾಗುವುದು ಎಂದು ತಿಳಿಸಿದ ರೋಲಿಂಗ್ ಟ್ರೋಫಿ ಪ್ರಯೋಜಕರಾಗಿರುವ ಶ್ರೀಸಾಯಿ ಗೋಲ್ಡ್ ಪ್ಯಾಲೆಸ್‌ನ ಮಾಲೀಕರು ಹಾಗೂ ವಿಧಾನ ಪರಿಷತ್ ಸದಸ್ಯ ಶರವಣ ಅವರು, ಈ ಬಾರಿ ಮೊದಲ ವಿಜೇತರಿಗೆ ನೂರು ಗ್ರಾಮ್ ಚಿನ್ನ, ಎರಡನೇ ವಿಜೇತರಿಗೆ ಐವತ್ತು ಗ್ರಾಮ್ ಚಿನ್ನ ಹಾಗೂ ಮೂರನೇ ವಿಜೇತರಿಗೆ ಇಪ್ಪತ್ತೈದು ಗ್ರಾಮ್ ಚಿನ್ನ ನೀಡುವುದಾಗಿ ಈ ವೇಳೆ ತಿಳಿಸಿದರು.

ಈ ಸಂದರ್ಭದಲ್ಲಿ ಟೂರ್ನಿಯ ಆಯೋಜಕ ಚೇತನ್ ಸೂರ್ಯ ಮಾತನಾಡಿ, ನಾನು ಕಳೆದ ಹನ್ನೆರಡು ವರ್ಷಗಳಿಂದ ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಸಕ್ರಿಯನಾಗಿದ್ದೇನೆ. ನಾಲ್ಕು ಸಿನಿಮಾಗಳಲ್ಲಿ ನಾಯಕನಾಗೂ ನಟಿಸಿರುವ ನನಗೆ, ಸಾಕಷ್ಟು ಇವೆಂಟ್‌ಗಳನ್ನು ಆಯೋಜಿಸಿರುವ ಅನುಭವವಿದೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನೆನಪಿನಲ್ಲಿ ನಮ್ಮ ಸಂಸ್ಥೆಯ ಮೂಲಕ ಕಳೆದ ವರ್ಷ “ಅಪ್ಪು ಕಪ್” (ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಆಯೋಜಿಸಲಾಗಿತ್ತು. ಟೂರ್ನಿ ಬಹಳ ಯಶಸ್ವಿಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಸಹ ” ಅಪ್ಪು ಕಪ್” ಬಗ್ಗೆ ಪ್ರಶಂಸೆಯ ಮಾತುಗಳಾಡಿ, ಈ ಟೂರ್ನಿಗೆ PRK audio ದ ಸಹಯೋಗವಿದೆ ಎಂದು ತಿಳಿಸಿದ್ದಾರೆ. ಈ ಬಾರಿಯ ಟೀಮ್‌ ಬಿಲ್ಡಿಂಗ್‌ಗೆ ಸಹ ಬಂದು ಶುಭ ಕೋರಿದ್ದು, ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಅವರು ಹೇಳಿದರು.

ಇದನ್ನೂ ಓದಿ: Job Recruitment: ನಮ್ಮ ಮೆಟ್ರೋದಲ್ಲಿದೆ ಉದ್ಯೋಗ ಅವಕಾಶ; ಕೂಡಲೇ ಅರ್ಜಿ ಸಲ್ಲಿಸಿ

“ಅಪ್ಪು ಕಪ್” ಶಟಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಒಟ್ಟು ಹತ್ತು ತಂಡಗಳಿರುತ್ತದೆ. ಒಂದೊಂದು ತಂಡದಲ್ಲಿ ಹದಿಮೂರು ಆಟಗಾರರಿರುತ್ತಾರೆ. ಹಿರಿತೆರೆ, ಕಿರುತೆರೆ ಹಾಗೂ ವಿವಿಧ ಕ್ಷೇತ್ರಗಳ ತಾರೆಯರು ಈ ತಂಡಗಳಲ್ಲಿರುತ್ತಾರೆ. ಪುನೀತ್ ಅವರಿಗೆ ಸಂಬಂಧಿಸಿದ ಹಾಗೆ ಹತ್ತು ತಂಡಗಳ ಹೆಸರುಗಳಿವೆ. ಹತ್ತು ತಂಡಗಳಿಗೂ ಮಾಲೀಕರಿರುತ್ತಾರೆ‌. ಈ ಬಾರಿ ಜುಲೈ 13 ರಂದು ಅದ್ದೂರಿ ಸಮಾರಂಭದ ಮೂಲಕ ಟೂರ್ನಿಗೆ ಚಾಲನೆ ನೀಡಲಾಗುವುದು. ಆದರೆ ಟೂರ್ನಿಯ ಪಂದ್ಯಗಳು ಜುಲೈ ಕೊನೆಯಲ್ಲಿ ನಡೆಯುವುದು ಎಂದು ಟೂರ್ನಿಯ ಆಯೋಜಕ ಚೇತನ್ ಸೂರ್ಯ ತಿಳಿಸಿದರು.

Continue Reading

ಬಾಲಿವುಡ್

Suniel Shetty: ಅಪ್ಪ ವೇಟರ್‌ ಆಗಿ ಕೆಲಸ ಮಾಡುತ್ತಿದ್ದ ರೆಸ್ಟೋರೆಂಟ್‌ಗೆ ಈಗ ಸುನೀಲ್‌ ಶೆಟ್ಟಿ ಒಡೆಯ; ಇದಪ್ಪ Success ಅಂದ್ರು ಜನ!

Suniel Shetty: ಸುನೀಲ್‌ ಶೆಟ್ಟಿ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ತಮ್ಮ ತಂದೆಯ ಬಗ್ಗೆ ಮಾತನಾಡಿದ್ದಾರೆ. ಅವರ ತಂದೆ ವೀರಪ್ಪ ಶೆಟ್ಟಿ ಅವರು ಮುಂಬೈಗೆ ಬಂದು, ಕಷ್ಟಪಟ್ಟು ದುಡಿದಿದ್ದನ್ನು ಅವರು ಸ್ಮರಿಸಿದ್ದಾರೆ. ಹಾಗೆಯೇ, ತಮ್ಮ ತಂದೆ ಕೆಲಸ ಮಾಡುತ್ತಿದ್ದ ರೆಸ್ಟೋರೆಂಟ್‌ಅನ್ನೂ ಖರೀದಿಸಿರುವುದಾಗಿ ತಿಳಿಸಿದ್ದಾರೆ. ಇದಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

VISTARANEWS.COM


on

Suniel Shetty
Koo

ಮುಂಬೈ: ಕಠಿಣ ಪರಿಶ್ರಮ, ಛಲ, ಜತೆಗೊಂದಿಷ್ಟು ಚಾಣಾಕ್ಷತನ ಇದ್ದರೆ ಎಂತಹವರು ಬೇಕಾದರೂ ಯಶಸ್ಸನ್ನು ಸಾಧಿಸುತ್ತಾರೆ. ಇದೇ ಕಾರಣಕ್ಕೆ, ಗುಡಿಸಲಿನಲ್ಲಿ ಹುಟ್ಟಿದವರು ಅರಮನೆಯಲ್ಲಿ ವಾಸಿಸುತ್ತಾರೆ, ಯಾವ ಹೋಟೆಲ್‌ನಲ್ಲಿ ವಾಸಿಸುತ್ತಿದ್ದರೋ ಅದೇ ಹೋಟೆಲ್‌ನ ಮಾಲೀಕರಾಗಿದ್ದಾರೆ, ಬಡತನದಲ್ಲಿ ಹುಟ್ಟಿ ಐಎಎಸ್‌ ಅಧಿಕಾರಿಯಾದವರು ನಮ್ಮ ಕಣ್ಣೆದುರು ಇದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಬಾಲಿವುಡ್‌ ನಟ, ಕರ್ನಾಟಕ ಮೂಲದ ಸುನೀಲ್‌ ಶೆಟ್ಟಿ (Suniel Shetty) ಅವರು ಮುಂಬೈನಲ್ಲಿ ತಮ್ಮ ತಂದೆ ವೀರಪ್ಪ ಶೆಟ್ಟಿ (Veerappa Shetty) ಅವರು ವೇಟರ್‌ ಆಗಿ ಕೆಲಸ ಮಾಡುತ್ತಿದ್ದ ರೆಸ್ಟೋರೆಂಟ್‌ಗೆ ಮಾಲೀಕರಾಗಿದ್ದಾರೆ. ಇದಕ್ಕೆ ಜನ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮನೆಯಲ್ಲಿನ ಬಡತನ, ಹೆಚ್ಚಿದ ಜವಾಬ್ದಾರಿಗಳಿಂದಾಗಿ ವೀರಪ್ಪ ಶೆಟ್ಟಿ ಅವರು ಮುಂಬೈಗೆ ತೆರಳಿದ್ದರು. ಮುಂಬೈನ ಖಂಡಾಲದಲ್ಲಿರುವ ರೆಸ್ಟೋರೆಂಟ್‌ ಒಂದರಲ್ಲಿ ಅವರು ವೇಟರ್‌ ಆಗಿ ಸೇರಿಕೊಂಡು, ಬಳಿಕ ಅದರಲ್ಲಿಯೇ ಮ್ಯಾನೇಜರ್‌ ಆಗಿದ್ದರು. ಈಗ ರೆಸ್ಟೋರೆಂಟ್‌ನ ಸೇರಿ ಮೂರು ಕಟ್ಟಡಗಳು ಇರುವ ಜಾಗವು ಫಾರ್ಮ್‌ಹೌಸ್‌ ಆಗಿ ಬದಲಾಗಿದ್ದು, ಮೂರೂ ಕಟ್ಟಡಗಳಿಗೆ ಸುನೀಲ್‌ ಶೆಟ್ಟಿ ಅವರೇ ಮಾಲೀಕರಾಗಿದ್ದಾರೆ. ಸುಮಾರು 83 ಕೋಟಿ ರೂ. ಕೊಟ್ಟು ಫಾರ್ಮ್‌ಹೌಸ್‌ಅನ್ನು ಖರೀದಿಸಿದ್ದಾರೆ ಎಂದು ತಿಳಿದುಬಂದಿದೆ.

ಮೂರು ಕಟ್ಟಡಗಳ ಖರೀದಿ ಕುರಿತು ಸುನೀಲ್‌ ಶೆಟ್ಟಿ ಅವರು ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. “ನನ್ನ ತಂದೆ ಬಡವರಾಗಿದ್ದರು. ಬಾಲ್ಯದಲ್ಲಿಯೇ ಅವರು ತಂದೆಯನ್ನು ಕಳೆದುಕೊಂಡಿದ್ದರು. 9 ವರ್ಷದವರಿದ್ದಾಗಲೇ ಅವರು ಮಂಗಳೂರಿನಿಂದ ಮುಂಬೈಗೆ ಬಂದರು. ಇಲ್ಲಿ ದಕ್ಷಿಣ ಭಾರತದ ರೆಸ್ಟೋರೆಂಟ್‌ನಲ್ಲಿ ಟೇಬಲ್‌ ಕ್ಲೀನ್‌ ಮಾಡುವುದು, ಊಟ-ತಿಂಡಿ ಸರಬರಾಜು ಮಾಡುವುದು ಅವರ ಕೆಲಸವಾಗಿತ್ತು. ಬಳಿಕ ಅವರು ಮ್ಯಾನೇಜರ್‌ ಕೂಡ ಆದರು. ಈಗ ರೆಸ್ಟೋರೆಂಟ್‌ ಸೇರಿ ಮೂರು ಕಟ್ಟಡಗಳನ್ನು ನಾನು ಖರೀದಿಸಿದ್ದೇನೆ” ಎಂಬುದಾಗಿ ಬಾಲಿವುಡ್‌ ನಟ ಹೇಳಿದ್ದಾರೆ. ಸುನೀಲ್‌ ಶೆಟ್ಟಿ ಅವರ ತಂದೆ 2017ರಲ್ಲಿ ನಿಧನರಾದರು.

“ನನ್ನ ತಂದೆಯು ತುಂಬ ಸಂಭಾವಿತರಾಗಿದ್ದರು. ಅವರು ಮಕ್ಕಳಿಗೂ ಏನೂ ಎನ್ನುತ್ತಿರಲಿಲ್ಲ. ಅವರು ಮ್ಯಾನೇಜರ್‌ ಆದಾಗಲೂ ಸಿಬ್ಬಂದಿಗೆ ಒಂದು ಮಾತೂ ಅನ್ನುತ್ತಿರಲಿಲ್ಲ. ಆದರೆ, ನಮ್ಮ ಬಗ್ಗೆ, ಅವರ ಸಿಬ್ಬಂದಿ ಬಗ್ಗೆ ಯಾರಾದರೂ ಒಂದು ಮಾತು ಆಡಿದರೂ ಅವರು ಸಹಿಸಿಕೊಳ್ಳುತ್ತಿರಲಿಲ್ಲ. ಎಲ್ಲವನ್ನೂ ಬಿಟ್ಟು ಊರಿಗೆ ಹೋಗುತ್ತೇನೆ, ಆದರೆ ಅನ್ಯಾಯವನ್ನು ಸಹಿಸಿಕೊಳ್ಳುವುದಿಲ್ಲ ಎಂಬುದಾಗಿ ಅವರು ಹೇಳುತ್ತಿದ್ದರು” ಎಂದು ಸುನೀಲ್‌ ಶೆಟ್ಟಿ ಸ್ಮರಿಸಿದ್ದಾರೆ. ಸುನೀಲ್‌ ಶೆಟ್ಟಿ ಅವರು 1992ರಲ್ಲಿ ಬಾಲಿವುಡ್‌ ಪ್ರವೇಶಿಸಿದರು. ಧಡಕನ್‌, ಮೊಹ್ರಾ, ಬಾರ್ಡರ್‌, ಹೇರಾ ಫೇರಿ, ದಿಲ್ವಾಲೆ ಸೇರಿ ಹಲವು ಹಿಟ್‌ ಸಿನಿಮಾಗಳನ್ನು ನೀಡಿದ್ದಾರೆ. ಅವರು ಸುದೀಪ್‌ ಅಭಿನಯದ ಪೈಲ್ವಾನ್‌ ಎಂಬ ಕನ್ನಡ ಸಿನಿಮಾದಲ್ಲೂ ನಟಿಸಿದ್ದಾರೆ.

ಇದನ್ನೂ ಓದಿ: Athiya Shetty: ಮೊದಲ ಮಗುವಿನ ನಿರೀಕ್ಷೆಯಲ್ಲಿ ಕೆ.ಎಲ್​. ರಾಹುಲ್ ದಂಪತಿ; ಸುಳಿವು ಕೊಟ್ಟ ಸುನೀಲ್‌ ಶೆಟ್ಟಿ!

Continue Reading

ಸಿನಿಮಾ

Hamare Baarah: ವಿವಾದಾತ್ಮಕ ಚಿತ್ರ ‘ಹಮಾರೆ ಬಾರಾ’ ಬಿಡುಗಡೆಗೆ ಅನುಮತಿ ನೀಡಿದ ಬಾಂಬೆ ಹೈಕೋರ್ಟ್

Hamare Baarah: ಅನ್ನು ಕಪೂರ್ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಹಮಾರೆ ಬಾರಾ’ ಈ ಚಿತ್ರದ ಮೊದಲ ಟ್ರೇಲರ್ ಬಿಡುಗಡೆಯಾದಾಗ ವಿವಾದವನ್ನು ಹುಟ್ಟುಹಾಕಿತ್ತು. ಈ ಬಗ್ಗೆ ಅಜರ್ ಎಂಬುವವರು ಬಾಂಬೆ ಹೈಕೋರ್ಟ್ ನಲ್ಲಿ ಚಿತ್ರದ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಆಕ್ಷೇಪಾರ್ಹ ದೃಶ್ಯಗಳೊಂದಿಗೆ ಚಿತ್ರದ ಟ್ರೇಲರ್ ಅನ್ನು ಬಿಡುಗಡೆ ಮಾಡಿದ್ದಕ್ಕಾಗಿ ಚಿತ್ರ ನಿರ್ಮಾಪಕರಿಗೆ 5 ಲಕ್ಷ ದಂಡ ವಿಧಿಸಿ ಅರ್ಜಿದಾರರು ತಿಳಿಸಿದ ಚಾರಿಟಿಗೆ ಮೊತ್ತವನ್ನು ದೇಣಿಗೆ ನೀಡುವಂತೆ ನ್ಯಾಯಾಲಯ ಸೂಚಿಸಿತ್ತು. ಆದರೆ ಇದೀಗ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಲು ಚಿತ್ರ ನಿರ್ಮಾಪಕರು ಒಪ್ಪಿಕೊಂಡ ಹಿನ್ನಲೆಯಲ್ಲಿ ಬಾಂಬೆ ಹೈಕೋರ್ಟ್ ವಿವಾದಾತ್ಮಕ ಚಿತ್ರ ‘ಹಮಾರೆ ಬಾರಾ’ ಬಿಡುಗಡೆಗೆ ಅನುಮತಿ ನೀಡಿದೆ.

VISTARANEWS.COM


on

Hamare Baarah
Koo

ಮುಂಬೈ : ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಲು ಚಿತ್ರ ನಿರ್ಮಾಪಕರು ಒಪ್ಪಿಕೊಂಡ ಹಿನ್ನಲೆಯಲ್ಲಿ ಬಾಂಬೆ ಹೈಕೋರ್ಟ್ ಬುಧವಾರ ವಿವಾದಾತ್ಮಕ ಚಿತ್ರ ‘ಹಮಾರೆ ಬಾರಾ’ (Hamare Baarah) ಬಿಡುಗಡೆಗೆ ಅನುಮತಿ ನೀಡಿದೆ. ಕಮಲ್ ಚಂದ್ರಾ ನಿರ್ದೇಶನದ ‘ಹಮಾರೆ ಬಾರಾ’ ಚಿತ್ರ ಮುಸ್ಲಿಂ ಮಹಿಳೆಯರ ಕುರಿತಾಗಿದೆ. ಇದರಲ್ಲಿ ಮುಸ್ಲಿಂ ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯದ ಕಥೆಯನ್ನು ಬಿಂಬಿಸಲಾಗಿದೆ. ಹಾಗಾಗಿ ಈ ಚಿತ್ರವನ್ನು ಬಿಡುಗಡೆ ಮಾಡದಂತೆ ಬಾಂಬೆ ಹೈಕೋರ್ಟ್ ತಡೆ ಹೇರಿತ್ತು.

ಆದರೆ ಚಿತ್ರದಲ್ಲಿರುವ ಆಕ್ಷೇಪಾರ್ಹ ಭಾಗಗಳನ್ನು ಅಳಿಸುವುದರ ಮೂಲಕ ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ ಮತ್ತು ಕುರಾನ್ ನ ಬೋಧನೆಗಳನ್ನು ತಿರುಚುವುದಿಲ್ಲ ಎಂಬುದನ್ನು ಗಮನಿಸಿದ ನ್ಯಾಯಾಮೂರ್ತಿ ಬಿಪಿ ಕೊಲಬಾ ವಾಲಾ ಮತ್ತು ನ್ಯಾಯಮೂರ್ತಿ ಫಿರ್ದೋಶ್ ಪೂನಿವಾಲಾ ಅವರನ್ನೊಳಗೊಂಡ ವಿಭಾಗೀಯ ಪೀಠವು ಒಂದು ದಿನದ ನಂತರ ಚಲನಚಿತ್ರ ಬಿಡುಗಡೆಗೆ ಅನುಮತಿ ನೀಡಿದೆ.

ಅಣ್ಣು ಕಪೂರ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಚಿತ್ರದ ಮೊದಲ ಟ್ರೇಲರ್ ಬಿಡುಗಡೆಯಾದಾಗ ವಿವಾದವನ್ನು ಹುಟ್ಟುಹಾಕಿತ್ತು. ಈ ಬಗ್ಗೆ ಅಜರ್ ಎಂಬುವವರು ಬಾಂಬೆ ಹೈಕೋರ್ಟ್ ನಲ್ಲಿ ಚಿತ್ರದ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಆಕ್ಷೇಪಾರ್ಹ ದೃಶ್ಯಗಳೊಂದಿಗೆ ಚಿತ್ರದ ಟ್ರೇಲರ್ ಅನ್ನು ಬಿಡುಗಡೆ ಮಾಡಿದ್ದಕ್ಕಾಗಿ ಚಿತ್ರ ನಿರ್ಮಾಪಕರಿಗೆ 5 ಲಕ್ಷ ದಂಡ ವಿಧಿಸಿ ಅರ್ಜಿದಾರರು ತಿಳಿಸಿದ ಚಾರಿಟಿಗೆ ಮೊತ್ತವನ್ನು ದೇಣಿಗೆ ನೀಡುವಂತೆ ನ್ಯಾಯಾಲಯ ಸೂಚಿಸಿತ್ತು. ಆದರೆ ಇದೀಗ ಅಂತಹ ದೃಶ್ಯಗಳನ್ನು ಚಿತ್ರದಿಂದ ತೆಗೆದುಹಾಕಿದೆ ಎಂಬುದಾಗಿ ಪೀಠ ತಿಳಿಸಿದೆ.

Hamare Baarah

ಹಮಾರೆ ಬಾರಾ ಚಿತ್ರವನ್ನು ಜೂನ್ 7ರಂದು ಮತ್ತು ನಂತರ ಜೂನ್ 14ರಂದು ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿತ್ತು. ಆದರೆ ಕೋರ್ಟ್ ನಿಂದ ತಡೆ ಬಂದ ಹಿನ್ನಲೆಯಲ್ಲಿ ಚಿತ್ರ ಬಿಡುಗಡೆಯಾಗಲಿಲ್ಲ. ಇದೀಗ ಕೋರ್ಟ್ ಚಿತ್ರ ಬಿಡುಗಡೆಗೆ ಅನುಮತಿ ನೀಡಿದ್ದ ಕಾರಣ ಇನ್ನೂ ಚಿತ್ರ ಬಿಡುಗಡೆಯ ದಿನಾಂಕವನ್ನು ಸೂಚಿಸಬೇಕಿದೆ. ಸಿಬಿಎಫ್ ಸಿ ಈಗಾಗಲೇ ಈ ಚಿತ್ರದ ಕೆಲವು ಸಂಭಾಷಣೆಗಳನ್ನು ಕಟ್ ಮಾಡಿಸಿ ಸಿನಿಮಾಕ್ಕೆ ಯು/ಎ ಸರ್ಟಿಫಿಕೇಟ್ ನೀಡಿದೆ.

ಈ ಚಿತ್ರದಲ್ಲಿ ಬಿರೇಂದರ್ ಭಗತ್, ರವಿ ಎಸ್ ಗುಪ್ತಾ, ಸಂಜಯ್ ನಾಗ್ಪಾಲ್ ಮತ್ತು ಶೀಯೋ ಬಾಲಕ್ ಸಿಂಗ್ ಜಂಟಿಯಾಗಿ ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ಅನ್ನು ಕಪೂರ್, ಮನೋಜ್ ಜೋಶಿ ಮತ್ತು ಪರಿತೋಷ್ ತ್ರಿಪಾಠಿ ನಟಿಸಿದ್ದಾರೆ.

ಇದನ್ನೂ ಓದಿ: Electric Shock: ಒಣ ಹಾಕಿದ್ದ ಟವೆಲ್‌ನಲ್ಲಿ ವಿದ್ಯುತ್; ತಂದೆ, ತಾಯಿ, ಮಗ ಸಾವು

ಈ ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ಕರ್ನಾಟಕ ಸರ್ಕಾರ ಈಗಾಗಲೇ ನಿಷೇಧ ಹೇರಿತ್ತು. ಈ ಸಿನಿಮಾದ ಪ್ರದರ್ಶನದಿಂದ ರಾಜ್ಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಆಗುತ್ತದೆ ಎಂದು ಸರ್ಕಾರ ಈ ಸಿನಿಮಾವನ್ನು ಬ್ಯಾನ್ ಮಾಡಿದೆ ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

Actor Darshan: ಮಾಧ್ಯಮಗಳಿಗೆ ತಡೆಯಾಜ್ಞೆ ತಂದ ವಿಜಯಲಕ್ಷ್ಮೀ; ದರ್ಶನ್‌ ಕುಟುಂಬದ ವಿರುದ್ಧ ಸುದ್ದಿ ಪ್ರಸಾರಕ್ಕೆ ನಿರ್ಬಂಧ!

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನ್ನ ಹಾಗೂ ಮಗ, ಪತಿ ದರ್ಶನ್ ಬಗ್ಗೆ ಕಪೋಲಕಲ್ಪಿತ ಸುದ್ದಿ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹಲವು ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ತನ್ನ ಹಾಗೂ ಮಗ, ಪತಿ ದರ್ಶನ್ ಬಗ್ಗೆ ಕಪೋಲಕಲ್ಪಿತ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದಿದ್ದಾರೆ.

ರೇಣುಕಾಸ್ವಾಮಿ ಸಾವಿಗೆ ಸಂತಾಪ

ರೇಣುಕಾಸ್ವಾಮಿ ಸಾವಿಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ರೇಣುಕಾಸ್ವಾಮಿ ಸಾವಿಗೆ ನಾನು ಸಂತಾಪ ವ್ಯಕ್ತಪಡಿಸುತ್ತೇನೆ.

ಕಳೆದ ಕೆಲವು ದಿನಗಳಿಂದ ದರ್ಶನ್, ನಾನು, ನನ್ನ ಮಗ ಮತ್ತು ದರ್ಶನ್ ಅವರ ಎಲ್ಲಾ ಸ್ನೇಹಿತರು, ಕುಟುಂಬ ಮತ್ತು ಅಭಿಮಾನಿಗಳು ದುಃಖದಲ್ಲಿದ್ದೇವೆ. ನ್ಯಾಯಾಲಯವು ತಡೆಯಾಜ್ಞೆ ನೀಡಿದ್ದು, ಪ್ರಕರಣದಲ್ಲಿ ವಿವಿಧ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದ್ದ ಕೆಲವು ಸುಳ್ಳು ಮಾಹಿತಿ ಮತ್ತು ಅಸತ್ಯಗಳನ್ನು ಜನರು ವಿಶ್ರಾಂತಿ ಪಡೆಯುತ್ತಾರೆ ಎಂದು ನಾನು ಭಾವಿಸುತ್ತೇನೆ. ಅಧಿಕಾರಿಗಳು ನೀಡುವ ಅಧಿಕೃತ ಮಾಹಿತಿಯನ್ನಷ್ಟೇ ಪ್ರಕಟಿಸಲು ನಾನು ಪ್ರತಿಯೊಬ್ಬರನ್ನೂ ಕೋರುತ್ತೇನೆ. ತಾಯಿ ಚಾಮುಂಡೇಶ್ವರಿ ಮತ್ತು ನಮ್ಮ ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ನ್ಯಾಯವು ಜಯ ಸಾಧಿಸಲಿ. ಸತ್ಯಮೇವ ಜಯತೇ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Actor Darshan: ಕಸ್ಟಡಿಯಲ್ಲಿರೋ ದರ್ಶನ್‌ಗೆ ಹೆಚ್ಚಾಯ್ತು ಬಿಪಿ; ಪವಿತ್ರಾಗೌಡ ಮಾತ್ರ ಕೂಲ್‌ ಕೂಲ್‌..!

ದರ್ಶನ್ ಬಗ್ಗೆ ಮಾತನಾಡಿದ್ದಕ್ಕೆ ಜೀವ ಬೆದರಿಕೆ; ಪೊಲೀಸರಿಗೆ ನಟ ಪ್ರಥಮ್‌ ದೂರು

Actor Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Actor Darshan) ಬಂಧನದ ಬಗ್ಗೆ ಮಾತನಾಡಿದ್ದಕ್ಕೆ ನಟ, ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಥಮ್ ಜೀವ ಬೆದರಿಕೆ ಹಾಕಿರುವುದು ಕಂಡುಬಂದಿದೆ. ದರ್ಶನ್‌ ಅಭಿಮಾನಿಗಳಿಂದ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಜ್ಞಾನಭಾರತಿ ನಗರ ಪೊಲೀಸ್ ಠಾಣೆಗೆ ಪ್ರಥಮ್‌ (Actor Pratham) ದೂರು ನೀಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಬಂಧನವಾಗಿದ್ದರೂ ಅವರ ಅಭಿಮಾನಿಗಳು ಸಮರ್ಥಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ನಟ ಪ್ರಥಮ್‌ ಕಿಡಿಕಾರಿದ್ದರು. ನನಗೆ ಒಂದು ವಾರ ಪೊಲೀಸ್‌ ಕಾನ್‌ಸ್ಟೇಬಲ್‌ ಆಗಲು ಅವಕಾಶ ಕೊಟ್ಟರೆ, ದರ್ಶನ್‌ ಅಂಧ ಅಭಿಮಾನಿಗಳಿಗೆ ನಾಯಿಗೆ ಹೊಡೆದಂಗೆ ಹೊಡೆಯುತ್ತೇನೆ. ಆ ಪೊಲೀಸ್‌ ಸ್ಟೇಷನ್‌ ಬಳಿ ಇದ್ದವರಲ್ಲಿ ಒಬ್ಬನಾದರೂ ಅವರ ತಾಯಿಗೆ ಒಂದು ಹೊತ್ತು ಊಟ ಕೊಡಿಸಲು ಯೋಗ್ಯತೆ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದರು. ಹೀಗಾಗಿ ಪ್ರಥಮ್‌ಗೆ ನಟ ದರ್ಶನ್ ಅಭಿಮಾನಿಗಳಿಂದ ಬೆದರಿಕೆ ಕರೆಗಳು ಬರುತ್ತಿವೆ.

ದೂರು ನೀಡಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿರುವ ಪ್ರಥಮ್‌ ಅವರು, ಜೀವನ ಬಹಳ ದೊಡ್ಡದು, ಯಾರಿಗೋಸ್ಕರವೋ ನೀವು ಅದನ್ನ ಹಾಳು ಮಾಡಿಕೊಳ್ಳಬೇಡಿ. ನಾನು ತುಂಬಾ ಶಾಂತಿಯಿಂದಲೇ ಇದ್ದೆ, ನೀವು ಅತಿಯಾಗಿ ನಮ್ಮ #ಕರ್ನಾಟಕದ_ಅಳಿಯ ತಂಡದ office no ಗೆ ಕಾಲ್ ಮಾಡಿ ಬೆದರಿಕೆ ಹಾಕುತ್ತಲೆ ಬಂದಿದ್ದೀರಿ. ಇನ್ಮೇಲೆ ನನಗೆ ಬರೋ ಕಾಲ್ msg ಅಥವಾ social media warning ಎಲ್ಲವೂ ಪೋಲೀಸರು ನೋಡಿಕೊಳ್ತಾರೆ. ಬದುಕು ಸುಂದರವಾದದ್ದು, ಅಂಧಾಭಿಮಾನಿಗಳೇ ನಿಮ್ಮ ತಂದೆ ತಾಯಿಗಳಿಗೆ ಮೀಸಲಿಡಿ; ಯಾರಿಗೋಸ್ಕರವೋ ಹಾಳುಮಾಡಿಕೊಳ್ಳಬೇಡಿ. ಕನ್ನಡಕ್ಕಾಗಿ, ಕಾವೇರಿಗಾಗಿ, ಸಂಸ್ಕೃತಿ ಉಳಿಸೋಕೆ ಬೇಕಾದ್ರೆ ಜೈಲಿಗೆ ಹೋಗಿ…; ಯಾರಿಗೋಸ್ಕರವೋ ಲೈಫ಼್ ಹಾಳುಮಾಡಿಕೊಳ್ಳಬೇಡಿ ಎಂದು ತಮಗೆ ಬೆದರಿಕೆ ಹಾಕಿರುವ ದರ್ಶನ್‌ ಅಭಿಮಾನಿಗಳಿಗೆ ಪರೋಕ್ಷವಾಗಿ ಸಲಹೆ ನೀಡಿದ್ದಾರೆ.

Continue Reading
Advertisement
Hooch Tragedy
ದೇಶ46 mins ago

Hooch Tragedy: ಕಳ್ಳಬಟ್ಟಿ ಸೇವಿಸಿ 16 ಮಂದಿ ಸಾವು, 70ಕ್ಕೂ ಅಧಿಕ ಜನ ಅಸ್ವಸ್ಥ

Blacklist contractors who do not complete work within time says Minister Mankala Vaidya
ಉತ್ತರ ಕನ್ನಡ55 mins ago

Uttara Kannada News: ಅವಧಿಯೊಳಗೆ ಕಾಮಗಾರಿ ಮುಕ್ತಾಯಗೊಳಿಸದ ಗುತ್ತಿಗೆದಾರರನ್ನು ಬ್ಲ್ಯಾಕ್ ಲಿಸ್ಟ್‌ಗೆ ಸೇರಿಸಿ: ಸಚಿವ ಮಂಕಾಳ ವೈದ್ಯ

Appu Cup Season 2 to be held in July A team building event was held in Bengaluru
ಬೆಂಗಳೂರು57 mins ago

Appu Cup Badminton: ʼಅಪ್ಪು ಕಪ್ ಸೀಸನ್ 2ʼ; ಟೀಮ್ ಬಿಲ್ಡಿಂಗ್‌ಗೆ ಶುಭ ಕೋರಿದ ಅಶ್ವಿನಿ ಪುನೀತ್ ರಾಜಕುಮಾರ್

RSA vs USA
ಕ್ರೀಡೆ1 hour ago

SA vs USA: ಮಿಂಚಿದ ಡಿಕಾಕ್; ಯುಎಸ್‌ಎ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ 18 ರನ್‌ಗಳ ಜಯ

NET 2024
ದೇಶ2 hours ago

NET 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ರದ್ದುಗೊಳಿಸಿದ ಕೇಂದ್ರ ಸರ್ಕಾರ; ಏನಿದು ಕೇಸ್?‌

Hajj Pilgrims
ದೇಶ3 hours ago

Hajj Pilgrims: ಬಿಸಿಗಾಳಿ, ಬಿಸಿಲಿನ ಹೊಡೆತ; ಹಜ್‌ ಯಾತ್ರೆ ಕೈಗೊಂಡ 68 ಭಾರತೀಯರ ಸಾವು

Bescom complaint against false information video about electricity compensation for farmers
ಕರ್ನಾಟಕ3 hours ago

Fact Check: ಹೊಲದಲ್ಲಿ ಟ್ರಾನ್ಸ್‌ಫಾರ್ಮರ್‌ ಇದ್ದರೆ ರೈತರಿಗೆ ಪರಿಹಾರ? ಬೆಸ್ಕಾಂ ಹೇಳಿದ್ದೇನು?

Murder Case
ಕರ್ನಾಟಕ4 hours ago

Murder Case: 3 ವರ್ಷದ ಬಾಲಕನ ಕತ್ತು ಸೀಳಿ ಕೊಂದ ಚಿಕ್ಕಪ್ಪ; ನದಿಯಲ್ಲಿ ಈಜಲು ಹೋಗಿ ಇಬ್ಬರು ನಾಪತ್ತೆ

Suniel Shetty
ಬಾಲಿವುಡ್4 hours ago

Suniel Shetty: ಅಪ್ಪ ವೇಟರ್‌ ಆಗಿ ಕೆಲಸ ಮಾಡುತ್ತಿದ್ದ ರೆಸ್ಟೋರೆಂಟ್‌ಗೆ ಈಗ ಸುನೀಲ್‌ ಶೆಟ್ಟಿ ಒಡೆಯ; ಇದಪ್ಪ Success ಅಂದ್ರು ಜನ!

DCM DK Shivakumar visit Kengal Anjaneya temple
ಕರ್ನಾಟಕ4 hours ago

DK Shivakumar: ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನದಿಂದ ನನ್ನ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ: ಡಿ.ಕೆ.ಶಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು2 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ3 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ3 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ4 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ5 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ5 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌