Samyuktha Hegde Bikini Photo Samyuktha Hegde: ಬಿಕಿನಿ ತೊಟ್ಟು ಹಾಟ್‌ ಬೆಡಗಿಯಾದ ಸಂಯುಕ್ತಾ ಹೆಗ್ಡೆ; ಇಲ್ಲಿವೆ ಫೋಟೋಗಳು - Vistara News

South Cinema

Samyuktha Hegde: ಬಿಕಿನಿ ತೊಟ್ಟು ಹಾಟ್‌ ಬೆಡಗಿಯಾದ ಸಂಯುಕ್ತಾ ಹೆಗ್ಡೆ; ಇಲ್ಲಿವೆ ಫೋಟೋಗಳು

ಕಿರಿಕ್‌ ಬೆಡಗಿ (Samyuktha Hegde) ಸಂಯುಕ್ತಾ ಹೆಗ್ಡೆ ಬಿಕಿನಿ ಧರಿಸಿದ ತಮ್ಮ ಫೋಟೊಗಳನ್ನು ಶೇರ್‌ ಮಾಡಿಕೊಂಡಿದ್ದಾರೆ.

VISTARANEWS.COM


on

Samyuktha Hegde Bikini Photo
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Samyuktha Hegde

ಕಿರಿಕ್‌ ಬೆಡಗಿ (Samyuktha Hegde) ಸಂಯುಕ್ತಾ ಹೆಗ್ಡೆ ತಾವು ಬಿಕಿನಿ ಧರಿಸಿದ ಹಾಟ್‌ ಫೋಟೊಗಳನ್ನು ಶೇರ್‌ ಮಾಡಿಕೊಂಡಿದ್ದಾರೆ.

Samyuktha Hegde

ಸಂಯುಕ್ತಾ ಹೆಗ್ಡೆ ಅವರು ಸದ್ಯ ಮಾಲ್ಡೀವ್ಸ್‌ನಲ್ಲಿ ಎಂಜಾಯ್‌ ಮಾಡುತ್ತಿದ್ದಾರೆ. ಫೋಟೊಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

Samyuktha Hegde

ಜಯಂರವಿ ನಟನೆಯ ‘ಕೋಮಲಿ’ ಸಿನಿಮಾದಲ್ಲಿ ಸಂಯುಕ್ತಾ ಹೆಗ್ಡೆ ಅಭಿನಯಿಸಿದ್ದರು. ಈ ಮೂಲಕ ಕಾಲಿವುಡ್‌ಗೆ ಎಂಟ್ರಿ ಕೊಟ್ಟರು.

Samyuktha Hegde

ರಿಷಬ್‌ ಶೆಟ್ಟಿ ನಿರ್ದೇಶನದ ಹಾಗೂ ರಕ್ಷಿತ್‌ ಶೆಟ್ಟಿ ಅಭಿನಯದ ಕಿರಿಕ್‌ ಪಾರ್ಟಿ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದರು.

Samyuktha Hegde

ಸಂಯುಕ್ತಾ ಹೆಗ್ಡೆ ಅವರು ಇನ್‌ಸ್ಟಾದಲ್ಲಿ ಆಗಾಗ ತಮ್ಮ ಬೋಲ್ಡ್‌ ಅವತಾರದ ಫೋಟೊಗಳನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Duniya Vijay: ವಿಚ್ಛೇದನ ಕೋರಿ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ

Duniya Vijay: ಕ್ರೌರ್ಯದ ಆಧಾರದ ಮೇಲೆ ನಟ ದುನಿಯಾ ವಿಜಯ್ ಅವರು ಪತ್ನಿ ನಾಗರತ್ನ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಇದನ್ನು ಸಾಬೀತುಪಡಿಸಲು ವಿಫಲವಾದ ಕಾರಣ ಅರ್ಜಿ ವಜಾ ಆಗಿದೆ.ಸದ್ಯ ಕೀರ್ತಿ ಗೌಡ ಅವರೊಂದಿಗೆ ದಾಂಪತ್ಯ ಜೀವನ ಮುಂದುವರಿಸಿದ್ದಾರೆ. ಆದರೆ ಈವರೆಗೂ ವಿಜಯ್‌ ಹಾಗೂ ನಾಗರತ್ನ ಡಿವೋರ್ಸ್‌ ಪಡೆದಿರಲಿಲ್ಲ.

VISTARANEWS.COM


on

Duniya Vijay divorce filed was dismissed
Koo

ಬೆಂಗಳೂರು: ನಟ ದುನಿಯಾ ವಿಜಯ್ (Duniya Vijay) ಅವರು ಪತ್ನಿ ನಾಗರತ್ನ ಅವರಿಂದ ವಿಚ್ಛೇದನ ಬೇಕು ಎಂದು ಅರ್ಜಿ ಸಲ್ಲಿಸಿದ್ದರು. 2018ರಲ್ಲಿಯೇ ಅರ್ಜಿ ಸಲ್ಲಿಸಲಾಗಿದ್ದು, ಈಗ ವಜಾ ಆಗಿದೆ. ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನ ಅವರಿಂದ ವಿಜಯ್‌ ದೂರವಾಗಿದ್ದಾರೆ. ಸದ್ಯ ಕೀರ್ತಿ ಗೌಡ ಅವರೊಂದಿಗೆ ದಾಂಪತ್ಯ ಜೀವನ ಮುಂದುವರಿಸಿದ್ದಾರೆ. ಆದರೆ ಈವರೆಗೂ ವಿಜಯ್‌ ಹಾಗೂ ನಾಗರತ್ನ ಡಿವೋರ್ಸ್‌ ಪಡೆದಿರಲಿಲ್ಲ.

ದುನಿಯಾ ವಿಜಯ್ ಪರ ವಕೀಲೆ ರಾಜ ರಾಜೇಶ್ವರಿ ಮಾಧ್ಯಮದ ಮುಂದೆ ಈ ಬಗ್ಗೆ ಮಾತನಾಡಿ ʻʻಅರ್ಜಿ ವಜಾ ಆಗಿದೆ. ವಿಜಯ್ ಅವರನ್ನು ಸಂಪರ್ಕ ಮಾಡಿ ಮುಂದೆ ಏನು ಮಾಡಬೇಕು ಎಂದು ಹೇಳುತ್ತೇವೆ. ವಿಜಯ್ ಅವರು ಶೂಟಿಂಗ್‌ನಲ್ಲಿ ಇದ್ದಾರೆ. ವಿಜಯ್ ಅವರಿಗೆ ಈ ಬಗ್ಗೆ ಇನ್ನೂ ಹೇಳಿಲ್ಲ. ಮಕ್ಕಳ ಫ್ಯೂಚರ್ ದೃಷ್ಟಿಯಿಂದ ಮಾತಾಡಿ ಹೇಳುತ್ತೇವೆ. ಇದು ಇಲ್ಲಿಗೆ ಮುಗಿದಿಲ್ಲ. ಹೈಕೋರ್ಟ್‌ಗೆ ಹೋಗಬೇಕಾ ಎನ್ನುವುದರ ಬಗ್ಗೆ ವಿಜಯ್ ಅವರ ಜತೆ ಚರ್ಚೆ ಮಾಡಿ ಹೇಳುತ್ತೇವೆʼʼಎಂದರು.

ಕ್ರೌರ್ಯದ ಆಧಾರದ ಮೇಲೆ ನಟ ದುನಿಯಾ ವಿಜಯ್ ಅವರು ಪತ್ನಿ ನಾಗರತ್ನ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಇದನ್ನು ಸಾಬೀತುಪಡಿಸಲು ವಿಫಲವಾದ ಕಾರಣ ಅರ್ಜಿ ವಜಾ ಆಗಿದೆ. ಬೆಂಗಳೂರಿನ ಶಾಂತಿನಗರ ಕೌಟುಂಬಿಕ ನ್ಯಾಯಾಲಯ ಆದೇಶ ನೀಡಿದೆ.

ಇದನ್ನೂ ಓದಿ: Duniya Vijay: ಇಂದು ದುನಿಯಾ ವಿಜಯ್‌-ನಾಗರತ್ನ ವಿಚ್ಛೇದನ ತೀರ್ಪು, ಕೀರ್ತಿ ಗೌಡ ಜತೆಗಿನ ದಾಂಪತ್ಯಕ್ಕೆ ಸಿಗುವುದೇ ಅಂಕಿತ?

2019ರಲ್ಲಿ ಮಹಿಳಾ ಆಯೋಗದ ಮುಂದೆ ದುನಿಯಾ ವಿಜಯ್‌ ಅವರು ‘ನಾಗರತ್ನ ಜತೆ ಬಾಳಲು ನನ್ನಿಂದ ಸಾಧ್ಯವಿಲ್ಲ’ ಎಂದು ವಿಜಯ್ ಹೇಳಿದ್ದರಂತೆ. ಜತೆಗೆ ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ. ನಾಗರತ್ನಗೆ ಜೀವನಾಂಶ ನೀಡಿದ್ದೇನೆ ಎಂದಿದ್ದರು. ಆದರೆ ನಾಗರತ್ನ ಮಾತ್ರ ಪ್ರತಿ ಸಲವೂ ಕೋರ್ಟ್‌ಗೆ ಬಂದಾಗ ಗಂಡ ಬೇಕು ಎಂದು ಹೇಳುತ್ತಿದ್ದರಂತೆ.

ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರತ್ನ ವಿರುದ್ಧ ಎಫ್‍ಐಆರ್

ನಟ ದುನಿಯಾ ವಿಜಯ್ ಅವರ ಎರಡನೇ ಪತ್ನಿ ಕೀರ್ತಿಗೌಡ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪತ್ನಿ ನಾಗರತ್ನ ವಿರುದ್ಧ ಎಫ್‍ಐಆರ್ ಕೂಡ ದಾಖಲಾಗಿತ್ತು. ದುನಿಯಾ ವಿಜಯ್ ಜೈಲು ಪಾಲಾಗಿದ್ದ ಸಂದರ್ಭದಲ್ಲಿ ಕೀರ್ತಿಗೌಡ ಅವರ ಮನೆಗೆ ಏಕಾಏಕಿ ನುಗ್ಗಿ ನಾಗರತ್ನ ಕೀರ್ತಿ ಮೇಲೆ ಹಲ್ಲೆ ನಡೆಸಿದ್ದರು. ಇದರ ಸತ್ಯಾಸತ್ಯತೆ ಸಿಸಿಟಿವಿ ಕ್ಯಾಮರಾ ಪರಿಶೀಲನೆ ಸಂದರ್ಭದಲ್ಲಿ ಗೊತ್ತಾಗಿದ್ದು ಅದರ ಆಧಾರದ ಮೇಲೆ ಪೊಲೀಸರು ಕೇಸು ದಾಖಲಿಸಿದ್ದರು.

ಸುಮಾರು ಎರಡೂವರೆ ವರ್ಷದ ಹಿಂದೆ ಮನಸ್ತಾಪ

ಎಲ್ಲರಿಗೂ ತಿಳಿದಿರುವಂತೆ ದುನಿಯಾ ವಿಜಯ್ ಮತ್ತು ನಾಗರತ್ನ ಅವರ ಮಧ್ಯೆ ಸುಮಾರು ಎರಡೂವರೆ ವರ್ಷದ ಹಿಂದೆ ಮನಸ್ತಾಪ ಉಂಟಾಗಿ, ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಇಬ್ಬರು ವಿಚ್ಛೇದನಕ್ಕೆ ಮುಂದಾಗಿದ್ದರು. ಆದರೆ , ಅಂತಿಮ ಕ್ಷಣದಲ್ಲಿ ಇಬ್ಬರು ಒಪ್ಪಂದ ಮಾಡಿಕೊಂಡು ಮತ್ತೆ ಒಟ್ಟಿಗೆ ಜೀವನ ನಡೆಸಲು ನಿರ್ಧರಿಸಿದ್ದರು

ಅಂದು ಕೋರ್ಟ್ ನಲ್ಲಿ, ವಕೀಲರ ಮುಂದೆ ದುನಿಯಾ ವಿಜಿ ಮತ್ತು ನಾಗರತ್ನ ಅವರು ಒಪ್ಪಂದ ಮಾಡಿಕೊಂಡಿದ್ದರಂತೆ. ಅದನ್ನ ಸ್ವತಃ ವಿಜಯ್‌ ಅವರೇ ಹೇಳಿದ್ದಾರೆ. ತಂದೆ-ತಾಯಿಯನ್ನು ಚೆನ್ನಾಗಿ ನೋಡ್ಕೋಬೇಕು. ಮನೆಯಲ್ಲಿ ನೆಮ್ಮದಿಯಾಗಿರಬೇಕು ಎಂದು ಷರತ್ತು ವಿಧಿಸಿ ರಾಜಿಯಾಗಿದ್ದೆ. ಆದರೆ, ಅಲ್ಲಿಂದ ಬಂದ ಮೇಲೂ ನಮ್ಮ ಮಧ್ಯೆ ಬಾಂಧವ್ಯ ಸರಿಯಾಗಿಲ್ಲ. ಹಾಗಾಗಿ ಬೇರೆ ಹೋಗಲು ನಿರ್ಧರಿಸಿದೆ” ಎಂದು ನಟ ವಿಜಯ್‌ ಈ ಮುಂಚೆ ತಿಳಿಸಿದ್ದರು. ಆದರೆ ಡಿವೋರ್ಸ್‌ ನೀಡಲು ವಜಯ್‌ ಮುಂದಾಗಿರಲಿಲ್ಲ. ಬೇರೆ ಮದುವೆ ಆಗುವುದಾಗಿ ಹೇಳಿ, ಕೀರ್ತಿ ಗೌಡ ಅವರನ್ನ ವಿವಾಹ ಮಾಡಿಕೊಂಡು ವಿಜಯ್‌ ಜೀವನ ನಡೆಸುತ್ತಿದ್ದರು.

Continue Reading

ಸ್ಯಾಂಡಲ್ ವುಡ್

Duniya Vijay: ಇಂದು ದುನಿಯಾ ವಿಜಯ್‌-ನಾಗರತ್ನ ವಿಚ್ಛೇದನ ತೀರ್ಪು, ಕೀರ್ತಿ ಗೌಡ ಜತೆಗಿನ ದಾಂಪತ್ಯಕ್ಕೆ ಸಿಗುವುದೇ ಅಂಕಿತ?

Duniya Vijay: ನಟ ದುನಿಯಾ ವಿಜಯ್ ಅವರ ಎರಡನೇ ಪತ್ನಿ ಕೀರ್ತಿಗೌಡ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪತ್ನಿ ನಾಗರತ್ನ ವಿರುದ್ಧ ಎಫ್‍ಐಆರ್ ಕೂಡ ದಾಖಲಾಗಿತ್ತು. ದುನಿಯಾ ವಿಜಯ್ ಜೈಲು ಪಾಲಾಗಿದ್ದ ಸಂದರ್ಭದಲ್ಲಿ ಕೀರ್ತಿಗೌಡ ಅವರ ಮನೆಗೆ ಏಕಾಏಕಿ ನುಗ್ಗಿ ನಾಗರತ್ನ ಕೀರ್ತಿ ಮೇಲೆ ಹಲ್ಲೆ ನಡೆಸಿದ್ದರು. ಇದರ ಸತ್ಯಾಸತ್ಯತೆ ಸಿಸಿಟಿವಿ ಕ್ಯಾಮರಾ ಪರಿಶೀಲನೆ ಸಂದರ್ಭದಲ್ಲಿ ಗೊತ್ತಾಗಿದ್ದು ಅದರ ಆಧಾರದ ಮೇಲೆ ಪೊಲೀಸರು ಕೇಸು ದಾಖಲಿಸಿದ್ದರು.

VISTARANEWS.COM


on

Duniya Vijay nagaratna Divorce case verdict to be announced
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಈಗ ಸಿನಿಮಾಕ್ಕಿಂತ ಡಿವೋರ್ಸ್‌ ಸುದ್ದಿಗಳೇ ಹೆಚ್ಚು. ಅಂತೆಯೇ ಇದೀಗ ನಟ ದುನಿಯಾ ವಿಜಯ್ ಮತ್ತು ಪತ್ನಿ ನಾಗರತ್ನ ವಿಚ್ಛೇದನ ತೀರ್ಪಿನ ಕುರಿತು ಕಾತರ ಹೆಚ್ಚಾಗಿದೆ. 2018ರಲ್ಲಿ ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ (Duniya Vijay) ಅರ್ಜಿ ಸಲ್ಲಿಸಿದ್ದರು. ಸುಮಾರು 6 ವರ್ಷಗಳಿಂದ ವಿಚಾರಣೆ ನಡೆಯುತ್ತಿದ್ದು ಗುರುವಾರ ಮಧ್ಯಾಹ್ಮ ಅಂತಿಮ ತೀರ್ಪು ಹೊರ ಬರಲಿದೆ ಎನ್ನಲಾಗಿದೆ. ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನ ಅವರಿಂದ ವಿಜಯ್‌ ದೂರವಾಗಿದ್ದಾರೆ. ಸದ್ಯ ಕೀರ್ತಿ ಗೌಡ ಅವರೊಂದಿಗೆ ದಾಂಪತ್ಯ ಜೀವನ ಮುಂದುವರಿಸಿದ್ದಾರೆ. ಆದರೆ ಈವರೆಗೂ ವಿಜಯ್‌ ಹಾಗೂ ನಾಗರತ್ನ ಡಿವೋರ್ಸ್‌ ಪಡೆದಿರಲಿಲ್ಲ.

2019ರಲ್ಲಿ ಮಹಿಳಾ ಆಯೋಗದ ಮುಂದೆ ದುನಿಯಾ ವಿಜಯ್‌ ಅವರು ‘ನಾಗರತ್ನ ಜತೆ ಬಾಳಲು ನನ್ನಿಂದ ಸಾಧ್ಯವಿಲ್ಲ’ ಎಂದು ವಿಜಯ್ ಹೇಳಿದ್ದರಂತೆ. ಜತೆಗೆ ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ. ನಾಗರತ್ನಗೆ ಜೀವನಾಂಶ ನೀಡಿದ್ದೇನೆ ಎಂದಿದ್ದರು. ಆದರೆ ನಾಗರತ್ನ ಮಾತ್ರ ಪ್ರತಿ ಸಲವೂ ಕೋರ್ಟ್‌ಗೆ ಬಂದಾಗ ಗಂಡ ಬೇಕು ಎಂದು ಹೇಳುತ್ತಿದ್ದರಂತೆ.

ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರತ್ನ ವಿರುದ್ಧ ಎಫ್‍ಐಆರ್

ನಟ ದುನಿಯಾ ವಿಜಯ್ ಅವರ ಎರಡನೇ ಪತ್ನಿ ಕೀರ್ತಿಗೌಡ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪತ್ನಿ ನಾಗರತ್ನ ವಿರುದ್ಧ ಎಫ್‍ಐಆರ್ ಕೂಡ ದಾಖಲಾಗಿತ್ತು. ದುನಿಯಾ ವಿಜಯ್ ಜೈಲು ಪಾಲಾಗಿದ್ದ ಸಂದರ್ಭದಲ್ಲಿ ಕೀರ್ತಿಗೌಡ ಅವರ ಮನೆಗೆ ಏಕಾಏಕಿ ನುಗ್ಗಿ ನಾಗರತ್ನ ಕೀರ್ತಿ ಮೇಲೆ ಹಲ್ಲೆ ನಡೆಸಿದ್ದರು. ಇದರ ಸತ್ಯಾಸತ್ಯತೆ ಸಿಸಿಟಿವಿ ಕ್ಯಾಮರಾ ಪರಿಶೀಲನೆ ಸಂದರ್ಭದಲ್ಲಿ ಗೊತ್ತಾಗಿದ್ದು ಅದರ ಆಧಾರದ ಮೇಲೆ ಪೊಲೀಸರು ಕೇಸು ದಾಖಲಿಸಿದ್ದರು.

ಇದನ್ನೂ ಓದಿ: Duniya Vijay: ಕೊಲ್ಲೂರಿನಲ್ಲಿ ʼಸ್ಯಾಂಡಲ್‌ವುಡ್‌ ಸಲಗʼವನ್ನು ಮುತ್ತಿಕೊಂಡ ಅಭಿಮಾನಿಗಳು!

ಸುಮಾರು ಎರಡೂವರೆ ವರ್ಷದ ಹಿಂದೆ ಮನಸ್ತಾಪ

ಎಲ್ಲರಿಗೂ ತಿಳಿದಿರುವಂತೆ ದುನಿಯಾ ವಿಜಯ್ ಮತ್ತು ನಾಗರತ್ನ ಅವರ ಮಧ್ಯೆ ಸುಮಾರು ಎರಡೂವರೆ ವರ್ಷದ ಹಿಂದೆ ಮನಸ್ತಾಪ ಉಂಟಾಗಿ, ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಇಬ್ಬರು ವಿಚ್ಛೇದನಕ್ಕೆ ಮುಂದಾಗಿದ್ದರು. ಆದರೆ , ಅಂತಿಮ ಕ್ಷಣದಲ್ಲಿ ಇಬ್ಬರು ಒಪ್ಪಂದ ಮಾಡಿಕೊಂಡು ಮತ್ತೆ ಒಟ್ಟಿಗೆ ಜೀವನ ನಡೆಸಲು ನಿರ್ಧರಿಸಿದ್ದರು

ಅಂದು ಕೋರ್ಟ್ ನಲ್ಲಿ, ವಕೀಲರ ಮುಂದೆ ದುನಿಯಾ ವಿಜಿ ಮತ್ತು ನಾಗರತ್ನ ಅವರು ಒಪ್ಪಂದ ಮಾಡಿಕೊಂಡಿದ್ದರಂತೆ. ಅದನ್ನ ಸ್ವತಃ ವಿಜಯ್‌ ಅವರೇ ಹೇಳಿದ್ದಾರೆ. ತಂದೆ-ತಾಯಿಯನ್ನು ಚೆನ್ನಾಗಿ ನೋಡ್ಕೋಬೇಕು. ಮನೆಯಲ್ಲಿ ನೆಮ್ಮದಿಯಾಗಿರಬೇಕು ಎಂದು ಷರತ್ತು ವಿಧಿಸಿ ರಾಜಿಯಾಗಿದ್ದೆ. ಆದರೆ, ಅಲ್ಲಿಂದ ಬಂದ ಮೇಲೂ ನಮ್ಮ ಮಧ್ಯೆ ಬಾಂಧವ್ಯ ಸರಿಯಾಗಿಲ್ಲ. ಹಾಗಾಗಿ ಬೇರೆ ಹೋಗಲು ನಿರ್ಧರಿಸಿದೆ” ಎಂದು ನಟ ವಿಜಯ್‌ ಈ ಮುಂಚೆ ತಿಳಿಸಿದ್ದರು. ಆದರೆ ಡಿವೋರ್ಸ್‌ ನೀಡಲು ವಜಯ್‌ ಮುಂದಾಗಿರಲಿಲ್ಲ. ಬೇರೆ ಮದುವೆ ಆಗುವುದಾಗಿ ಹೇಳಿ, ಕೀರ್ತಿ ಗೌಡ ಅವರನ್ನ ವಿವಾಹ ಮಾಡಿಕೊಂಡು ವಿಜಯ್‌ ಜೀವನ ನಡೆಸುತ್ತಿದ್ದರು.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್‌ಗೆ ನೆರವು ಕೊಟ್ಟ ಮತ್ತೊಬ್ಬ ಸ್ಯಾಂಡಲ್‌ವುಡ್‌ ನಟ ಅರೆಸ್ಟ್‌!

Actor Darshan: ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಮತ್ತೊಬ್ಬ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.ನಿನ್ನೆಯಷ್ಟೇ ಬಿಗಿ ಭದ್ರತೆಯಲ್ಲಿ ದರ್ಶನ್‌, ಪವಿತ್ರಾಗೌಡ ಸೇರಿ 13 ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಪಟ್ಟಣಗೆರೆ ಶೆಡ್‌ನ ಎಲ್ಲ ಕಡೆ ಪರಿಶೀಲನೆ ನಡೆಸಿ, ಪ್ರಕರಣದ ಬಗ್ಗೆ ಇಂಚಿಂಚೂ ಮಾಹಿತಿ ಕಲೆಹಾಕಲಾಗಿದೆ. ಘಟನೆಯಲ್ಲಿ ಯಾರ ಪಾತ್ರ ಏನು? ಯಾರು ಸ್ಥಳದಲ್ಲಿ ಇದ್ದರು ಎಂದು ಒಬ್ಬೊಬ್ಬರ ಬಳಿಯಿಂದ ಮಾಹಿತಿ ಪಡೆಯಲಾಗಿದೆ. ಸ್ಥಳ ಮಹಜರಿನ ಪ್ರತಿ ಹಂತದಲ್ಲಿ ವಿಡಿಯೊ ಸೆರೆಹಿಡಿಯಲಾಗಿದೆ.

VISTARANEWS.COM


on

Actor Darshan Another Sandalwood actor arrested for supporting Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ (Actor Darshan). ಕಸ್ಟಡಿಯಲ್ಲಿರುವ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳನ್ನು ಪಟ್ಟಣಗೆರೆಯ ಶೆಡ್‌ಗೆ ಬುಧವಾರ ಕರೆದೊಯ್ದು ಸ್ಥಳ ಮಹಜರು ನಡೆಸಿದರು. ಆರೋಪಿಗಳನ್ನು ತಂಡಗಳಾಗಿ ವಿಂಗಡಿಸಿ, ಶೆಡ್‌ನ ಪ್ರತಿ ಮೂಲೆಯಲ್ಲೂ ಪರಿಶೀಲನೆ ನಡೆಸಿ ಅಗತ್ಯ ಮಾಹಿತಿ ಕಲೆ ಹಾಕಲಾಗಿದೆ. ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಮತ್ತೊಬ್ಬ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಬಂಧಿತನನ್ನು ಪ್ರದೋಶ್ (Paradosh) ಎಂದು ಗುರುತಿಲಾಗಿದ್ದು, ಈತ ಕೂಡ ಸ್ಯಾಂಡಲ್ ವುಡ್ ನಟನಾಗಿದ್ದಾನೆ. ಕನ್ನಡದ ಕೆಲ ಚಿತ್ರಗಳಲ್ಲಿ ಅಭಿನಯ ಮಾಡಿರುವ ಈತ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ A14 ಆರೋಪಿಯಾಗಿದ್ದಾನೆ. ರೇಣುಕಾ ಸ್ವಾಮಿ ಮೃತಪಟ್ಟ ಬಳಿಕ ಗಾಬರಿಗೊಂಡ ದರ್ಶನ್‌ 30 ಲಕ್ಷ ರೂ. ನೀಡಿ ಬಾಡಿಯನ್ನು ಎಲ್ಲಾದರು ಬಿಸಾಕುವಂತೆ ಹೇಳುತ್ತಾರೆ. ಆಗ ತನ್ನ ಆಪ್ತ, ಹೋಟೆಲ್ ಉದ್ಯಮಿ ಪ್ರದೋಶ್‌ ದರ್ಶನ್‌ ಹೇಳಿದಾಗ ಪ್ರದೋಶ್ ಮತ್ತಿತರರು ದೇಹವನ್ನು ಸ್ಕಾರ್ಪಿಯೋ ಕಾರಿನಲ್ಲಿ ಒಯ್ದು ಸುಮ್ಮನಹಳ್ಳಿಯ ಅಪಾರ್ಟ್‌ಮೆಂಟ್ ಒಂದರ ಮುಂಭಾಗದ ಮೋರಿ ಬಳಿ ಎಸೆದು ಹೋಗಿದ್ದಾರೆ.

ಯಾರು ಈ ಪ್ರದೋಶ್‌?

ʻಬೃಂದಾವನʼ, ʻಬುಲ್ ಬುಲ್ʼ ಚಿತ್ರಗಳಲ್ಲಿ ಪ್ರದೋಶ್ ನಟಿಸಿದ್ದಾನೆ. ಇದಲ್ಲದೆ ಬಿಜೆಪಿ ಸಚಿವರೊಬ್ಬರ ಜೊತೆ ಆಪ್ತ ಸಹಾಯಕನಾಗಿ ಕೂಡ ಕೆಲಸ ಮಾಡಿದ್ದು, ಮಾತ್ರವಲ್ಲದೇ ಬಿಜೆಪಿ ಐಟಿ ವಿಭಾಗದಲ್ಲಿಯೂ ಕೆಲಸ ಮಾಡಿದ್ದ ಎಂದು ವರದಿಯಾಗಿದೆ.

ಇದನ್ನೂ ಓದಿ: Actor Darshan: ಪವಿತ್ರಾ ಗೌಡ ಜೈಲು ಸೇರುತ್ತಿದ್ದಂತೆ ಮಾಜಿ ಪತಿ ಪ್ರತ್ಯಕ್ಷ; ಅವರು ಹೇಳಿದ್ದೇನು?

ನಿನ್ನೆಯಷ್ಟೇ ಬಿಗಿ ಭದ್ರತೆಯಲ್ಲಿ ದರ್ಶನ್‌, ಪವಿತ್ರಾಗೌಡ ಸೇರಿ 13 ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಪಟ್ಟಣಗೆರೆ ಶೆಡ್‌ನ ಎಲ್ಲ ಕಡೆ ಪರಿಶೀಲನೆ ನಡೆಸಿ, ಪ್ರಕರಣದ ಬಗ್ಗೆ ಇಂಚಿಂಚೂ ಮಾಹಿತಿ ಕಲೆಹಾಕಲಾಗಿದೆ. ಘಟನೆಯಲ್ಲಿ ಯಾರ ಪಾತ್ರ ಏನು? ಯಾರು ಸ್ಥಳದಲ್ಲಿ ಇದ್ದರು ಎಂದು ಒಬ್ಬೊಬ್ಬರ ಬಳಿಯಿಂದ ಮಾಹಿತಿ ಪಡೆಯಲಾಗಿದೆ. ಸ್ಥಳ ಮಹಜರಿನ ಪ್ರತಿ ಹಂತದಲ್ಲಿ ವಿಡಿಯೊ ಸೆರೆಹಿಡಿಯಲಾಗಿದೆ.

ಪ್ರಕರಣದಲ್ಲಿ ಮತ್ತೊಬ್ಬ ಮಹಿಳೆ ಭಾಗಿ!

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಒಟ್ಟು 17 ಆರೋಪಿಗಳ ಪೈಕಿ 13 ಮಂದಿಯನ್ನು ಬಂಧಿಸಲಾಗಿದೆ. ಇದರಲ್ಲಿ ಮತ್ತೊಬ್ಬ ಮಹಿಳೆ ಕೂಡ ಭಾಗಿಯಾಗಿರುವುದು ತಿಳಿದುಬಂದಿದೆ. ಆರೋಪಿ ಅನು ಎಂಬ ಮಹಿಳೆ ಎಸ್ಕೇಪ್‌ ಆಗಿದ್ದಾಳೆ. ಜಗದೀಶ್ @ ಜಗ್ಗ, ಅನು, ರವಿ, ರಾಜು ಎಂಬುವವರು ಸದ್ಯ ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ರೇಣುಕಾಸ್ವಾಮಿ ಹತ್ಯೆ ಹೇಗೆ ನಡೆದಿತ್ತು?

ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು.

ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ 80 ಪರ್ಸೆಂಟ್ ಸಾವನ್ನಪ್ಪಿದ್ದ. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ನಟ ದರ್ಶನ್‌ ಸಹ ಹಲ್ಲೆ ಮಾಡಿದ್ದಾರೆ.

ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸಂಜೆ 6.30ರ ಸುಮಾರಿಗೆ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದ. ಅದಾದ ಮೇಲೆ ರಾತ್ರಿ ಒಂದು ಗಂಟೆವರೆಗೆ ಮೃತದೇಹದೊಂದಿಗೆ ಹಂತಕರು ಇದ್ದರು. ಬಳಿಕ ದರ್ಶನ್‌ಗೆ ರಾಘವೇಂದ್ರ ಹಾಗೂ ವಿನಯ್ ಮಾಹಿತಿ ನೀಡಿದ್ದರು. ಬಳಿಕ ಶವ ಬಿಸಾಡುವುದರ ಬಗ್ಗೆ ಡೀಲ್ ನಡೆದಿದೆ. ನಂತರ ಜೂನ್‌ 9ರಂದು ಬೆಳಗ್ಗೆ ಸುಮನಹಳ್ಳಿ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು.

Continue Reading

ಸ್ಯಾಂಡಲ್ ವುಡ್

Actor Darshan: ಪವಿತ್ರಾ ಗೌಡ ಜೈಲು ಸೇರುತ್ತಿದ್ದಂತೆ ಮಾಜಿ ಪತಿ ಪ್ರತ್ಯಕ್ಷ; ಅವರು ಹೇಳಿದ್ದೇನು?

Actor Darshan: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬುವರನ್ನು ಹೊಡೆದು ಕೊಂದ ಆರೋಪದ ಮೇಲೆ ಪೊಲೀಸ್​ ವಶದಲ್ಲಿರುವ ನಟ ದರ್ಶನ್ ವಿರುದ್ಧ (Actor Darshan Arrested) ರೌಡಿ ಪಟ್ಟಿ ತೆರೆಯಲು ಬೆಂಗಳೂರು ನಗರ ಪೊಲೀಸರು ಸಿದ್ದ ರಾಗಿದ್ದಾರೆ ಎಂಬುದಾಗಿ ವರದಿಯಾಗಿದೆ. ಪದೇ ಪದೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವ ಅವರ ಮೇಲೆ ಕಾನೂನಿನ ಹಿಡಿತ ಸ್ಥಾಪಿಸಲು ರೌಡಿ ಪಟ್ಟಿ ಅನಿವಾರ್ಯ ಎಂಬ ಅಭಿಪ್ರಾಯ ಹಿರಿಯ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

VISTARANEWS.COM


on

Actor Darshan Pavitra Gowda's ex-husband Sanjay Singh statement
Koo

ಬೆಂಗಳೂರು: ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಹಾಗೂ ಪವಿತ್ರಾ ಗೌಡ ನಡುವೆ ದೊಡ್ಡ ವಾರ್‌ ನಡೆದಿದ್ದು ಗೊತ್ತೇ ಇದೆ. ಮಾಡೆಲ್‌ ಪವಿತ್ರ ಗೌಡ ಅವರು ನಟ ದರ್ಶನ್ (Darshan Thoogudeepa) ಜತೆಗಿನ ಫೋಟೊಗಳನ್ನು ಹಂಚಿಕೊಂಡಿದ್ದರು. ಇದಾದ ಮೇಲೆ ಆ ಪೋಸ್ಟ್‌ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಖಡಕ್‌ ಆಗಿಯೇ ಪ್ರತಿಕ್ರಿಯಿಸಿದ್ದರು. ವಿಜಯಲಕ್ಷ್ಮಿ ಪೋಸ್ಟ್‌ನಲ್ಲಿ ಪವಿತ್ರಾ ಅವರ ಗಂಡ ಹಾಗೂ ಮಗಳ ಫೋಟೊವನ್ನು ಹಂಚಿಕೊಂಡಿದ್ದರು. ಆದರೀಗ ಪವಿತ್ರಾ ಗೌಡ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಈ ಮಧ್ಯೆ ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ಏಕಾಏಕಿ ಪ್ರತ್ಯಕ್ಷವಾಗಿದ್ದಾರೆ. ಮಾಧ್ಯಮವೊಂದಕ್ಕೆ ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

ಸಂಜಯ್ ಸಿಂಗ್ ಮಾತನಾಡಿ ʻʻಹೌದು.. ನಾನು ಉತ್ತರ ಪ್ರದೇಶದ ಹುಡುಗ. 2002ರಲ್ಲಿ ಬೆಂಗಳೂರಿಗೆ ಬಂದಿದ್ದೆ. ಆ ಟೈಮ್‌ನಲ್ಲಿ ನನಗೆ ಪವಿತ್ರಾ ಗೌಡ ಪರಿಚಯ ಆಗಿ, ಪ್ರೀತಿ ಆಗಿ, ಮದುವೆ ಆಗಿರೋದು. ಮಗಳ ಜತೆ ವರ್ಷಕ್ಕೆ ಒಂದು ಸಾರಿ…. ಎರಡು ವರ್ಷಕ್ಕೆ ಒಂದು ಸಾರಿ ಹೀಗೆ ಫೋನ್‌ನಲ್ಲಿ ಮಾತಾಡುತ್ತೀನಿ. ಆದರೆ, ಡೈರೆಕ್ಟ್ ಆಗಿ ಮಾತಾಡೋಕೆ ಆಗಲ್ಲ. ಯಾಕಂದ್ರೆ ಅವಳ ಫೋನ್‌ ನಂಬರ್ ನನ್ನ ಬಳಿ ಡೈರೆಕ್ಟ್ ಆಗಿಲ್ಲ. ನಮ್ಮ ಅತ್ತೆ ಮಾವನಿಗೆ ಫೋನ್ ಮಾಡಿದರೆ, ಮಗಳ ಬಳಿ ಮಾತಾಡಬಹುದುʼʼಎಂದಿದ್ದಾರೆ.

ʻʻಈ ಘಟನೆ ಬಳಿಕ ಮಗಳ ಹತ್ತಿರ ಮಾತನಾಡಿಲ್ಲ. ಯಾಕಂದ್ರೆ, ಅವಳ ಪರಿಸ್ಥಿತಿ ನನಗೆ ಗೊತ್ತಿದೆ. ಅವಳು ನನ್ನ ಹಾಗೆ. ಅವಳಿಗೆ ಕೋಪ ಬಂದರೆ ಏನ್ ಮಾಡಿಕೊಳ್ತಾಳೋ ಅವಳಿಗೆ ಗೊತ್ತಿಲ್ಲ. ಆ ಟೈಮ್‌ನಲ್ಲಿ ನಾನು ತೊಂದರೆ ಕೊಡುವುದು ಇಷ್ಟ ಪಡುವುದಿಲ್ಲʼʼಎಂದಿದ್ದಾರೆ.

ಇದನ್ನೂ ಓದಿ: Actor Darshan Arrested : ಪದೇ ಪದೆ ಕ್ರಿಮಿನಲ್ ಚಟುವಟಿಕೆ; ನಟ ದರ್ಶನ್​ ರೌಡಿ ಪಟ್ಟಿಗೆ ಸೇರ್ಪಡೆ?

ಪವಿತ್ರಾ ಗೌಡ ಬಗ್ಗೆ ಈ ಹಿಂದೆ ವಿಜಯಲಕ್ಷ್ಮಿ ಬರೆದುಕೊಂಡಿದ್ದೇನು?

ವಿಜಯಲಕ್ಷ್ಮಿ ಈ ಬಗ್ಗೆ ಪೋಸ್ಟ್‌ ಮಾಡಿ ʻʻಬೇರೊಬ್ಬರ ಗಂಡನ ಚಿತ್ರವನ್ನು ಪೋಸ್ಟ್ ಮಾಡುವ ಮೊದಲು ಈ ಮಹಿಳೆಗೆ ಸೆನ್ಸ್‌ ಮೊದಲು ಇರಬೇಕು. ಇದೀಗ ಆಕೆಯ ಕ್ಯಾರೆಕ್ಟರ್‌ ಹಾಗೂ ನೈತಿಕ ನಿಲುವಿನ ಬಗ್ಗೆ ತೋರಿಸುತ್ತಿದೆ. ವಿವಾಹಿತನೆಂದು ತಿಳಿದರೂ ಕೂಡ ತಮ್ಮ ವೈಯಕ್ತಿಕ ಅಗತ್ಯತೆಯಿಂದ ಈ ರೀತಿ ನಡೆದುಕೊಳ್ಳುತ್ತಿದ್ದಾರೆ. ಈ ಎಲ್ಲ ಫೋಟಗಳು ಪವಿತ್ರಾ ಮತ್ತು ಸಂಜಯ್ ಸಿಂಗ್ ಅವರ ಮಗಳು ಖುಷಿ ಗೌಡ ಅವರದ್ದು. ನಾನು ಸಾಮಾನ್ಯವಾಗಿ ವೈಯಕ್ತಿಕ ವಿಷಯಗಳ ಬಗ್ಗೆ ಧ್ವನಿ ಎತ್ತಲು ಸೋಷಿಯಲ್‌ ಮೀಡಿಯಾವನ್ನು ಬಖಸುವುದಿಲ್ಲ. ಆದರೆ ಈಗ ನನ್ನ ಕುಟುಂಬದ ಹಿತದೃಷ್ಟಿಯಿಂದ ಧ್ವನಿ ಎತ್ತುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ. ಇಡೀ ಸಮಾಜಕ್ಕೆ ವಿಭಿನ್ನ ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಅಂದರೆ ಸಂಜಯಸಿಂಗ್ , ಖುಷಿಗೌಡ, ಪವಿತ್ರ ಗೌಡ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದುʼʼಎಂದು ಬರೆದುಕೊಂಡಿದ್ದರು.

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬುವರನ್ನು ಹೊಡೆದು ಕೊಂದ ಆರೋಪದ ಮೇಲೆ ಪೊಲೀಸ್​ ವಶದಲ್ಲಿರುವ ನಟ ದರ್ಶನ್ ವಿರುದ್ಧ (Actor Darshan Arrested) ರೌಡಿ ಪಟ್ಟಿ ತೆರೆಯಲು ಬೆಂಗಳೂರು ನಗರ ಪೊಲೀಸರು ಸಿದ್ದ ರಾಗಿದ್ದಾರೆ ಎಂಬುದಾಗಿ ವರದಿಯಾಗಿದೆ. ಪದೇ ಪದೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವ ಅವರ ಮೇಲೆ ಕಾನೂನಿನ ಹಿಡಿತ ಸ್ಥಾಪಿಸಲು ರೌಡಿ ಪಟ್ಟಿ ಅನಿವಾರ್ಯ ಎಂಬ ಅಭಿಪ್ರಾಯ ಹಿರಿಯ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾದ ಆರೋಪಿ ಮೇಲೆ ರೌಡಿ ಪಟ್ಟಿಯನ್ನು ತೆರೆಯಲಾಗುತ್ತದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲೂ ದರ್ಶನ್​ ಪ್ರಮುಖ ಆರೋಪಿ. ಹೀಗಾಗಿ ಅವರ ಮೇಲೆಯೂ ರೌಡಿ ಶೀಟರ್​ ಓಪನ್ ಮಾಡಬೇಕು ಎಂಬ ಅಭಿಪ್ರಾಯಗಳು ಕೇಳಿ ಬಂದಿದೆ.

ಕೌಟುಂಬಿಕ ಕಲಹದಲ್ಲಿ ʼದಾಸʼ

ದರ್ಶನ್‌ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು. ಇನ್ನು ಕೌಟುಂಬಿಕ ಕಲಹದಲ್ಲಿಯೂ 28 ದಿನಗಳ ಕಾಲ ಜೈಲಿನಲ್ಲಿ ಇದ್ದು ಬಂದಿದ್ದರು. 2011ರಲ್ಲಿ ವಿಜಯಲಕ್ಷ್ಮಿ ಮೇಲೆ ದರ್ಶನ್ ಮಾರಣಾಂತಿಕ ಹಲ್ಲೆ ಮಾಡಿದ್ದರು. 2016ರಲ್ಲಿ ಮತ್ತೊಮ್ಮೆ ದರ್ಶನ್ ವಿರುದ್ಧ ವಿಜಯಲಕ್ಷ್ಮಿ ದೂರು ನೀಡಿದ್ದ ಘಟನೆಯೂ ನಡೆದಿತ್ತು. ಮಗನನ್ನು ಹತ್ಯೆ ಮಾಡುವುದಾಗಿಯೂ ದರ್ಶನ್‌ ಬೆದರಿಸುವುದಾಗಿ ಕೇಳಿ ಬಂದಿತ್ತು. ಮಾತ್ರವಲ್ಲ ವಿಜಯಲಕ್ಷ್ಮಿ ಅವರಿಗೆ ಸಿಗರೇಟ್‌ನಿಂದ ಸುಟ್ಟು ಗಾಯಗೊಳಿಸಿದ್ದರು. ಅಂಬರೀಶ್ ಮಧ್ಯಪ್ರವೇಶದಿಂದ ವಿಜಯಲಕ್ಷ್ಮಿ ಎಲ್ಲವನ್ನೂ ಮರೆತು ರಾಜಿ ಸಂಧಾನಕ್ಕೆ ಒಪ್ಪಿದ್ದರು.

Continue Reading
Advertisement
Bengalurus first double-decker flyover ready
ಬೆಂಗಳೂರು7 mins ago

Double Decker Flyover : ಬೆಂಗಳೂರಿನ ಮೊದಲ ಡಬಲ್‌ ಡೆಕ್ಕರ್‌ ಫ್ಲೈಓವರ್‌ ಕೊನೆಗೂ ಸಿದ್ಧ; ಯಾವಾಗಿಂದ ಸಂಚಾರಕ್ಕೆ ಅವಕಾಶ

Job Alert
ಉದ್ಯೋಗ9 mins ago

Job Alert: ಪದವೀಧರರಿಗೆ ಗುಡ್‌ನ್ಯೂಸ್‌; ಪಶುವೈದ್ಯ ಸೇವಾ ಇಲಾಖೆಯಲ್ಲಿದೆ 400 ವೈದ್ಯಾಧಿಕಾರಿ ಹುದ್ದೆ

Narendra Modi
ದೇಶ29 mins ago

Narendra Modi: ಕಾಶ್ಮೀರಲ್ಲಿ ಉಗ್ರರ ದಾಳಿ ಬೆನ್ನಲ್ಲೇ ದೋವಲ್‌ ಜತೆ ಮೋದಿ ಸಭೆ; ಉಗ್ರರ ನಿರ್ನಾಮಕ್ಕೆ ಸೂಚನೆ!

Duniya Vijay divorce filed was dismissed
ಸ್ಯಾಂಡಲ್ ವುಡ್37 mins ago

Duniya Vijay: ವಿಚ್ಛೇದನ ಕೋರಿ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ

Drowned in water
ಮಂಡ್ಯ43 mins ago

Drowned in water : ಈಜಲು ಕಾವೇರಿ ನದಿಗಿಳಿದ ಬಾಲಕರಿಬ್ಬರು ಜಲ ಸಮಾಧಿ

Agniveer Scheme
ದೇಶ52 mins ago

Agniveer Scheme: ʼಅಗ್ನಿವೀರ್‌ʼ ಯೋಜನೆಯಲ್ಲಿನ ಈ ಎಲ್ಲ ಬದಲಾವಣೆಗೆ ಭಾರತೀಯ ಸೇನೆ ಸಲಹೆ

Rajal Arora
ಕ್ರೀಡೆ54 mins ago

Rajal Arora: ಟೀಮ್​ ಇಂಡಿಯಾ ಜತೆಗಿರುವ ಏಕೈಕ ಮಹಿಳಾ ಸಿಬ್ಬಂದಿ ಯಾರು? ಇವರ ಕೆಲಸವೇನು?

Jagannath Temple
EXPLAINER1 hour ago

Jagannath Temple: 4 ವರ್ಷದ ಬಳಿಕ ಜಗನ್ನಾಥ ದೇಗುಲದ ಬಾಗಿಲು ಓಪನ್;‌ ಇದಕ್ಕೂ ಬಿಜೆಪಿ ಪ್ರಣಾಳಿಕೆಗೂ ಇದೆ ಸಂಬಂಧ!

Yuva Movie Premier On star Suvarna
ಕಿರುತೆರೆ1 hour ago

Yuva Movie: ಬರ್ತಿದೆ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಮೂವಿ ʻಯುವ; ವೀಕ್ಷಕರಿಗೆ ಬೈಕ್ ಗೆಲ್ಲುವ ಅವಕಾಶ!

Actor Darshan aryvardhan Guruji told RR nagar vasthu
ಸ್ಯಾಂಡಲ್ ವುಡ್2 hours ago

Actor Darshan: ಆರ್ ಆರ್​​ ನಗರ ವಾಸ್ತು ಸರಿಯಿಲ್ಲ, ಕೇಸುಗಳು ಬೀಳ್ತವೆ ಎಂದಿದ್ದರು ಆರ್ಯವರ್ಧನ್​ ಗುರೂಜಿ; ದರ್ಶನ್ ವಿಷಯದಲ್ಲಿ ಸತ್ಯವಾಯ್ತೇ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌