Sandalwood Actress: ದೀಪಾವಳಿಗೆ ಕಂಗೊಳಿಸಿದ ಸ್ಯಾಂಡಲ್‌ವುಡ್‌ ನಟಿಯರು! - Vistara News

South Cinema

Sandalwood Actress: ದೀಪಾವಳಿಗೆ ಕಂಗೊಳಿಸಿದ ಸ್ಯಾಂಡಲ್‌ವುಡ್‌ ನಟಿಯರು!

Sandalwood Actress: ʻʻಕತ್ತಲನ್ನು ಕಳೆದು ಬೆಳಕಿನ ಕಡೆಗೆ ಸಾಗುವ ಹಬ್ಬವೇ ದೀಪಾವಳಿ ! ನಿಮ್ಮ ಬಾಳು ದೀಪದಂತೆ ಬೆಳಗಲಿ ಎಲ್ಲಾರಿಗು ದೀಪವಳಿ ಹಬ್ಬದ ಶುಭಾಶಯಗಳುʼʼಎಂದು ಫೋಟೊ ಜತೆ ವಿಶ್‌ ಮಾಡಿದ್ದಾರೆ.

VISTARANEWS.COM


on

Sandalwood actresses
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೀಪಾವಳಿ ಹಬ್ಬಕ್ಕೆ ಸ್ಪಾಂಡಲ್‌ವುಡ್‌ (Sandalwood Actress) ನಟಿಯರು ಫೋಟೊಶೂಟ್‌ನಲ್ಲಿ ಕಂಗೊಳಿಸಿದ್ದಾರೆ. ಮಗಳು ಜಾನಕಿ ಖ್ಯಾತಿಯ ಗಾನವಿ ಲಕ್ಷ್ಮಣ ʻʻಕತ್ತಲನ್ನು ಕಳೆದು ಬೆಳಕಿನ ಕಡೆಗೆ ಸಾಗುವ ಹಬ್ಬವೇ ದೀಪಾವಳಿ ! ನಿಮ್ಮ ಬಾಳು ದೀಪದಂತೆ ಬೆಳಗಲಿ ಎಲ್ಲಾರಿಗು ದೀಪವಳಿ ಹಬ್ಬದ ಶುಭಾಶಯಗಳುʼʼಎಂದು ಫೋಟೊ ಜತೆ ವಿಶ್‌ ಮಾಡಿದ್ದಾರೆ.

ರಾಗಿಣಿ ಪ್ರಜ್ವಲ್‌ ಕೂಡ ʻʻಬೆಳಕಿನ ಹಬ್ಬ ದೀಪಾವಳಿ ನಿಮಗೂ ನಿಮ್ಮ ಕುಟುಂಬಕ್ಕೂ ಆರೋಗ್ಯ ಐಶ್ವರ್ಯ ತರಲಿ ದೀಪಾವಳಿಯ ಶುಭಕಾಮನೆಗಳುʼʼಎಂದು ಬರೆದುಕೊಂಡು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಕೂಡ ʻʻದೀಪಾವಳಿ ಅಂದರೆ ಕತ್ತಲೆಯಿಂದ ಬೆಳಕಿನ ಕಡೆ, ಕೆಡುಕಿನಿಂದ ಒಳ್ಳೆಯ ಕಡೆಗೆ, ಅಜ್ಞಾನದಿಂದ ಜ್ಞಾನದ ಕಡೆಗೆ. ನೀವು ಪ್ರಾರಂಭಿಸಲು ಬಯಸುವ ಹೊಸ ಆರಂಭಗಳಿಗೆ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ. ದೀಪಾವಳಿಯ ಶುಭಾಶಯಗಳುʼʼಎಂದು ಫೋಟೊಶೂಟ್‌ ಜತೆಗೆ ವಿಶ್‌ ಮಾಡಿದ್ದಾರೆ.

ʻʻದೀಪಾವಳಿ ಹಬ್ಬದ ಈ ದಿನದಲ್ಲಿ, ಹೃದಯದಲ್ಲಿ ಉಜ್ವಲತೆ ಮತ್ತು ಆನಂದವಿರಲಿ. ದೀಪಾವಳಿ ಹಬ್ಬದ ಶುಭಾಶಯಗಳುʼʼಎಂದು ಶ್ವೇತಾ ಶ್ರೀವಾತ್ಸವ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kiccha 47: ದೀಪಾವಳಿಗೆ ಬರ್ತಿದೆ ಕಿಚ್ಚ 47 ಸಿನಿಮಾ ಟೀಸರ್‌?

ಕನ್ನಡತಿ ರಂಜನಿ ರಾಘವನ್‌ ʻʻಕತ್ತಲೆಯಿಂದ ಬೆಳಕಿನೆಡೆಗೆ.. ಅಜ್ಞಾನದಿಂದ ಜ್ಞಾನದೆಡೆಗೆ..
ರೂಢಿಯಿಂದ ಸತ್ಯದೆಡೆಗೆ ಸಾಗುವ, ದೀಪಾವಳಿಯ ಶುಭಾಶಯಗಳುʼʼಎಂದು ಬರೆದುಕೊಂಡಿದ್ದಾರೆ.

ಬಿಗ್‌ ಬಸ್ ಖ್ಯಾತಿಯ ನಿವೇದಿತಾ ಗೌಡ ಅವರು ಹ್ಯಾಪಿ ದೀಪಾವಳಿ ಎಂದು ಲಂಗ ದಾವಣಿಯಲ್ಲಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ʻಡೆವಿಲ್‌ʼಗೆ ಜೈಲು ಗ್ಯಾರಂಟಿ ಆದ್ರೆ ಮುಂದಿನ ಸಿನಿಮಾಗಳ ಗತಿಯೇನು? ನಿರ್ಮಾಪಕರಿಗೆ ನಡುಕ!

Actor Darshan: ಬರೋಬ್ಬರಿ ಒಂಭತ್ತು ಸಿನಿಮಾಗಳು ದರ್ಶನ್‌ ಅವರ ಕೈಯಲ್ಲಿ ಇತ್ತು. ಇನ್ನೇನು ದಚ್ಚು ಫ್ಯಾನ್ಸ್‌ ʻಡೆವಿಲ್‌ʼ ಸಿನಿಮಾ ರಿಲೀಸ್‌ಗೆ ಕಾಯುತ್ತಿರುವಾಗಲೇ ʻದಾಸʼ ಕೊಲೆ ಪ್ರಕರಣದಲ್ಲಿ ಅರೆಸ್ಟ್‌ ಆಗಿದ್ದಾರೆ. ಈ ಮುಂಚೆಯೂ ಹಲವು ಪ್ರಕರಣಗಳಲ್ಲಿ ದರ್ಶನ್‌ ಪೊಲೀಸರು ಅತಿಥಿಯಾಗಿದ್ದರೂ ಈ ಬಾರಿ ಗಂಭೀರ ಪ್ರಕರಣವಾಗಿರುವುದರಿಂದ ದರ್ಶನ್‌ಗೆ ಜೈಲು ಶಿಕ್ಷೆ ಗ್ಯಾರಂಟಿ ಎನ್ನಲಾಗುತ್ತಿದೆ.

VISTARANEWS.COM


on

Actor Darshan arrest what about his future project
Koo

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Challenging Star Darshan) ʻಕಾಟೇರʼ ಸಿನಿಮಾ ಮೂಲಕ ವಿಜಯದ ಪತಾಕೆ ಹಾರಿಸಿದ್ದರು. ಇದಾದ ಬಳಿಕ ಹಲವು ಸಿನಿಮಾಗಳನ್ನು ಅನೌನ್ಸ್‌ ಮಾಡಿದ್ದರು. ಇನ್ನೇನು ದಚ್ಚು ಫ್ಯಾನ್ಸ್‌ ʻಡೆವಿಲ್‌ʼ ಸಿನಿಮಾ ರಿಲೀಸ್‌ಗೆ ಕಾಯುತ್ತಿರುವಾಗಲೇ ʻದಾಸʼ ಕೊಲೆ ಪ್ರಕರಣದಲ್ಲಿ ಅರೆಸ್ಟ್‌ ಆಗಿದ್ದಾರೆ. ಈ ಮುಂಚೆಯೂ ಹಲವು ಪ್ರಕರಣಗಳಲ್ಲಿ ದರ್ಶನ್‌ ಪೊಲೀಸರು ಅತಿಥಿಯಾಗಿದ್ದರೂ ಈ ಬಾರಿ ಗಂಭೀರ ಪ್ರಕರಣವಾಗಿರುವುದರಿಂದ ದರ್ಶನ್‌ಗೆ ಜೈಲು ಶಿಕ್ಷೆ ಗ್ಯಾರಂಟಿ ಎನ್ನಲಾಗುತ್ತಿದೆ.

ಇದೀಗ ದರ್ಶನ್‌ ಅವರನ್ನು ನಂಬಿಕೊಂಡು ಸಿನಿಮಾಗಳಿಗೆ ಈಗಾಗಲೇ ಕೋಟಿಗಟ್ಟಲೆ ಹಣ ಹೂಡಿಕೆ ಮಾಡಿರುವ ನಿರ್ಮಾಪಕರ ಗತಿ ಏನು? ಹಾಗೇ ಸಿನಿಮಾಗಳೆ ಬರುತ್ತಿಲ್ಲ ಎಂಬ ಗಾಸಿಪ್‌ಗಳ ಮಧ್ಯೆ ವರ್ಷಕ್ಕೆ ಒಂದೆರಡು ಸಿನಿಮಾ ಮಾಡುತ್ತಿದ್ದ ದರ್ಶನ್‌ ಜೈಲು ಪಾಲಾದರೆ ಏನು ಕಥೆ? ಎಂದು ಫ್ಯಾನ್ಸ್‌ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಯಾವೆಲ್ಲ ಸಿನಿಮಾಗಳು ʻದಚ್ಚುʼ ಕೈಯಲ್ಲಿತ್ತು?

ಬರೋಬ್ಬರಿ ಒಂಭತ್ತು ಸಿನಿಮಾಗಳು ದರ್ಶನ್‌ ಅವರ ಕೈಯಲ್ಲಿ ಇತ್ತು. ಆ ಪೈಕಿ ದರ್ಶನ್ ಅವರ ಆಪ್ತ ನಿರ್ಮಾಪಕರಾದ ಶೈಲಜಾ ನಾಗ್ ಮತ್ತು ಬಿ.ಸುರೇಶ್ ಕೂಡ ಇದ್ದಾರೆ. ಖ್ಯಾತ ನಿರ್ದೇಶಕ ತರುಣ್​ ಸುಧೀರ್​ (Tharun Sudhir) ಮತ್ತು ದರ್ಶನ್​ ಅವರ ಕಾಂಬಿನೇಶನ್‌​ನಲ್ಲಿ ಈ ಸಿನಿಮಾ ಮೂಡಿಬರಲಿದ್ದು, ಇದರಲ್ಲಿ ಐತಿಹಾಸಿಕ ಕಥಾಹಂದರ ಇರಲಿದೆ ಎನ್ನಲಾಗಿತ್ತು. ಶೈಲಜಾ ನಾಗ್​ ಮತ್ತು ಬಿ. ಸುರೇಶ ಅವರು ನಿರ್ಮಾಣದ D 59 ಸಿನಿಮಾ ಪೋಸ್ಟರ್​ ಬಿಡುಗಡೆ ಮಾಡಲಾಗಿತ್ತು.

ದರ್ಶನ್‌ ಅವರಿಗೆ ಐತಿಹಾಸಿಕ ಸಿನಿಮಾ ಮಾಡುವುದೆಂದರೆ ಅಚ್ಚು ಮೆಚ್ಚು. ಈ ಮೊದಲು ಸಂಗೊಳ್ಳಿ ರಾಯಣ್ಣನಾಗಿ ಅಬ್ಬರಿಸಿದ್ದ ದರ್ಶನ್ ಅವರು ಈಗ ಸಿಂಧೂರ ಲಕ್ಷ್ಮಣನ ಪಾತ್ರ ಮಾಡಲು ಒಪ್ಪಿಕೊಂಡಿದ್ದರು. ತರುಣ್​ ಸುಧೀರ್​ ಮತ್ತು ದರ್ಶನ್​ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಈ ಸಿನಿಮಾದಲ್ಲಿ ಸಿಂಧೂರ ಲಕ್ಷ್ಮಣನ ಕಥೆ ಇರಲಿದೆ ಎನ್ನಲಾಗಿತ್ತು. ದರ್ಶನ್​ ನಟನೆಯ 59ನೇ ಸಿನಿಮಾವಾಗಿ ಈ ಚಿತ್ರ ಮೂಡಿಬರಲಿತ್ತು. ಈ ಮೊದಲು ದರ್ಶನ್​ ನಟಿಸಿದ್ದ ‘ಯಜಮಾನ’ ಮತ್ತು ‘ಕ್ರಾಂತಿ’ ಸಿನಿಮಾಗಳಿಗೆ ‘ಮೀಡಿಯಾ ಹೌಸ್​ ಸ್ಟುಡಿಯೋ’ ಸಂಸ್ಥೆಯ ಮೂಲಕ ಶೈಲಜಾ ನಾಗ್​ ಮತ್ತು ಬಿ. ಸುರೇಶ್​ ಅವರು ಬಂಡವಾಳ ಹೂಡಿದ್ದರು.

ಇದನ್ನೂ ಓದಿ: Actor Darshan: ಕೊಲೆ ಕೇಸ್‌ನಿಂದ ಎಸ್ಕೇಪ್‌ ಆಗಲು 30 ಲಕ್ಷ ರೂ. ಕೊಟ್ಟಿದ್ದ ʻಡೆವಿಲ್‌ʼ? ಆದರೆ ಫ್ಲ್ಯಾನ್‌ ಆಗಿದ್ದು ಮಾತ್ರ ಉಲ್ಟಾ!

ಇದರ ಹೊರತಾಗಿ ದರ್ಶನ್ ಅವರ ಜತೆ ʻಅಂಬರೀಶʼ ಸಿನಿಮಾ ಮಾಡಿದ್ದ ಮಹೇಶ್ ಸುಖಧರೆ ಕೂಡ ದರ್ಶನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರವೊಂದನ್ನ ಘೋಷಿಸಿದ್ದರು. ಸಚ್ಚಿದಾನಂದ ಇಂಡುವಾಳ ಹೊಸ ಚಿತ್ರ ಘೋಷಿಸಿದ್ದರು, ಇದನ್ನು ತರುಣ್ ಸುಧೀರ್ ಅವರೇ ನಿರ್ದೇಶಿಸುತ್ತಿರುವುದು ವಿಶೇಷ. ರಮೇಶ್ ಪಿಳ್ಳೈ, ಮೋಹನ್ ನಟರಾಜನ್, ಕೆ.ಮಂಜುನಾಥ್, ರಘುನಾಥ್ ಸೋಗಿ, ದರ್ಶನ್ ಸಿನಿಮಾ ನಿರ್ಮಾಣ ಮಾಡಲು ಆಸಕ್ತಿಯನ್ನ ತೋರಿಸಿರುವ ಉಳಿದ ನಿರ್ಮಾಪಕರು. ಇವರ ಚಿತ್ರಕ್ಕೆ ಯಾರು ನಿರ್ದೇಶಕರು ಯಾರೆಂಬುದು ತಿಳಿದು ಬಂದಿಲ್ಲ. ಜಗ್ಗು ದಾದಾʼ ಚಿತ್ರವನ್ನು ಮಾಡಿದ್ದ ರಾಘವೇಂದ್ರ ಹೆಗ್ಡೆ ಅವರು ದರ್ಶನ್‌ ಜತೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿತ್ತು.

ʻಡೆವಿಲ್ʼ ಇನ್ನೂ ಕಂಪ್ಲೀಟ್‌ ಆಗಿಲ್ಲ

ಕಾಟೇರ ಯಶಸ್ಸಿನ ಬಳಿಕ ಡೆವಿಲ್‌ ಎಂಬ ಸಿನಿಮಾದಲ್ಲಿ ದರ್ಶನ್‌ ನಟಿಸುತ್ತಿದ್ದಾರೆ. ಈ ವರ್ಷ ಚಿತ್ರಮಂದಿರಗಳಿಗೆ ಆಗಮಿಸುವ ನಿರೀಕ್ಷೆಯಿತ್ತು. ಈ ಸಿನಿಮಾದ ಶೂಟಿಂಗ್‌ ಭರದಿಂದ ನಡೆಯುತ್ತಿತ್ತು. ಈ ಚಿತ್ರದ ಗ್ಲಿಂಪ್ಸ್‌ ವಿಡಿಯೋ ಕೂಡ ರಿಲೀಸ್‌ ಮಾಡಲಾಗಿತ್ತು.ಡೆವಿಲ್‌ನಲ್ಲಿ ಬಾಲಿವುಡ್‌ ನಟ ಮಹೇಶ್‌ ಮಂಜ್ರೇಕರ್‌ ಕೂಡ ನಟಿಸುತ್ತಿದ್ದಾರೆ. ಪ್ರಕಾಶ್‌ ವೀರ್‌ ನಿರ್ದೇಶನದ ಡೆವಿಲ್‌ ಸಿನಿಮಾದ ಭವಿಷ್ಯ ಏನಾಗಬಹುದು ಎಂಬ ಆತಂಕ ಫ್ಯಾನ್ಸ್‌ಗೆ ಇದೆ.

ಪ್ರೇಮ್‌ ಜತೆದ ಸಿನಿಮಾ

ಈಗಾಗಲೇ ದರ್ಶನ್‌ ನಟನೆಯ ಪ್ರೇಮ್‌ ನಿರ್ದೇಶನದ ಸಿನಿಮಾದ ಪ್ರಮೋ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದ ಹೆಸರು ಇನ್ನೂ ಬಹಿರಂಗವಾಗಿಲ್ಲ.

Continue Reading

ಸಿನಿಮಾ

Actor Darshan: ನಿಜ ಜೀವನದಲ್ಲಿ ನಟ ದರ್ಶನ್‌ನಂತಹ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು; ಚೇತನ್‌ ಅಹಿಂಸಾ!

Actor Darshan: ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ನಟ ದರ್ಶನ್​ಗೆ (Actor Darshan) ಮರಣದಂಡನೆಯಾಗಲಿ ಎಂಬ ಆಶಯವನ್ನು ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಎಕ್ಸ್‌ ಮೂಲಕ ನಟ ಚೇತನ್‌ ಅಹಿಂಸಾ ಅವರು ಕೂಡ ಪ್ರತಿಕ್ರಿಯಿಸಿದ್ದಾರೆ. ʻʻಚಲನಚಿತ್ರ ತಾರೆಯರು ಸುಮಾರು ಒಂದು ಶತಮಾನದಿಂದ ಅವರು ಪಡೆದಿರುವ ಜೀವನಕ್ಕಿಂತ ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ. ನಿಜ ಜೀವನದಲ್ಲಿ ನಟ ದರ್ಶನ್‌ನಂತಹ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು,” ಎಂಬುದಾಗಿ ಬರೆದುಕೊಂಡಿದ್ದಾರೆ.

VISTARANEWS.COM


on

Actor Darshan Murder accusations Chetan Kumar Ahimsa react
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ (Actor Darshan) ಸಮಾಜದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹಲವರು ಆರೋಪಿ ಯಾರೇ ಆಗರಲಿ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಹಾಗೆಯೇ ಇದೀಗ ಎಕ್ಸ್‌ ಮೂಲಕ ನಟ ಚೇತನ್‌ ಅಹಿಂಸಾ ಅವರು ಕೂಡ ಪ್ರತಿಕ್ರಿಯಿಸಿದ್ದಾರೆ. ʻʻಚಲನಚಿತ್ರ ತಾರೆಯರು ಸುಮಾರು ಒಂದು ಶತಮಾನದಿಂದ ಅವರು ಪಡೆದಿರುವ ಜೀವನಕ್ಕಿಂತ ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ. ನಿಜ ಜೀವನದಲ್ಲಿ ನಟ ದರ್ಶನ್‌ನಂತಹ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು,” ಎಂಬುದಾಗಿ ಬರೆದುಕೊಂಡಿದ್ದಾರೆ.

ಚೇತನ್‌ ಅಹಿಂಸಾ ಹೀಗೆ ಬರೆದುಕೊಂಡಿದ್ದಾರೆ. ʻʻನಟ ದರ್ಶನ ಮತ್ತು ಆತನ ಸಹಚರರ ವಿರುದ್ಧ ಕೊಲೆ ಆರೋಪಗಳು ಗಂಭೀರವಾಗಿವೆ. ನಮ್ಮ ರಾಜ್ಯ ಪೊಲೀಸರು ಅದಕ್ಕೆ ಅನುಗುಣವಾಗಿ ತನಿಖೆ ನಡೆಸುತ್ತಾರೆ ಎಂದು ನಾವು ನಂಬುತ್ತೇವೆ. ಅಲ್ಲದೆ, ಚಲನಚಿತ್ರ ತಾರೆಯರು ಸುಮಾರು ಒಂದು ಶತಮಾನದಿಂದ ಅವರು ಪಡೆದಿರುವ ಜೀವನಕ್ಕಿಂತ ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ. ಇಂತಹ ನಿಜ-ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ಒಂದು ಸಮಾಜವಾಗಿ ತಪ್ಪಿತಸ್ಥರುʼʼಎಂದು ಬರೆದುಕೊಂಡಿದ್ದಾರೆ.

ದರ್ಶನ್​ಗೆ ಮರಣದಂಡನೆ ಶಿಕ್ಷೆಯಾಗಲಿ! ನಟಿ ರಮ್ಯಾ ಟ್ವೀಟ್‌

ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ನಟ ದರ್ಶನ್​ಗೆ (Actor Darshan) ಮರಣದಂಡನೆಯಾಗಲಿ ಎಂಬ ಆಶಯವನ್ನು ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ವ್ಯಕ್ತಪಡಿಸಿದ್ದಾರೆ. ಕೊಲೆ ಪ್ರಕರಣದ ಕುರಿತು ಎಕ್ಸ್​ನಲ್ಲಿ ಪೋಸ್ಟ್​​ ಮಾಡಿರುವ ರಮ್ಯಾ ಐಪಿಸಿ ಸೆಕ್ಷನ್​ 302ರನ್ನು ಉಲ್ಲೇಖಿಸಿ ಅದರ ಅನ್ವಯ ದರ್ಶನ್​ಗೆ ಕಠಿಣ ಶಿಕ್ಷೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಲೆಯಾಗಿರುವ ವ್ಯಕ್ತಿಯ ಪರವಾಗಿ ನಿಂತಿರುವ ರಮ್ಯಾ, ದರ್ಶನ್​ಗೆ ಇಂಡಿಯನ್ ಪಿನಲ್​ ಕೋಡ್​ 302ರ ಪ್ರಕಾರ ಯಾವ ಪ್ರಕಾರಣದ ಶಿಕ್ಷೆಯಾಗುತ್ತದೆ ಎಂಬ ಬಗ್ಗೆ ಟ್ವೀಟ್ ಮಾಡಿದ್ದಾರೆ. ಈ ಸೆಕ್ಷನ್​ 302ರಲ್ಲಿ ಕೊಲೆ ಆರೋಪ ಸಾಬೀತಾದರೆ ಅವರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ ಎಂಬ ಮಾಹಿತಿ ಇರುವ ಪೋಸ್ಟ್‌ ಅನ್ನು ರಮ್ಯಾ ರೀಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: HD Kumaraswamy: ಎಚ್‌ಡಿಕೆ ಭೇಟಿಯಾದ ಉಕ್ಕು ಪ್ರಾಧಿಕಾರದ ಅಧ್ಯಕ್ಷ; ವಿಐಎಸ್‌ಎಲ್ ಪುನಶ್ಚೇತನದ ಬಗ್ಗೆ ಚರ್ಚೆ

ಸೆಕ್ಷನ್ 302 ರ ಅಡಿಯಲ್ಲಿ ನಟ ದರ್ಶನ್​ಗೆ ಜೀವಾವಧಿ ಶಿಕ್ಷೆ ಅಥವಾ ಶಿಕ್ಷೆಯಾಗಬೇಕು. ಬೇರೆ ಯಾವುದೇ ಹಣದ ಪ್ರಭಾವ ಮತ್ತು ಭಾರತೀಯ ಕಾನೂನು ವ್ಯವಸ್ಥೆಯನ್ನು ಅಣಕಿಸುವಂತಾಗಬಾರದು. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬ ಟ್ವೀಟ್‌ ಅನ್ನು ರಮ್ಯಾ ಮರು ಪೋಸ್ಟ್‌ ಮಾಡಿದ್ದಾರೆ.

ರಮ್ಯಾ ಈ ಹಿಂದೆಯೂ ಸ್ಟಾರ್ ನಟರ ನಡವಳಿಕೆಯ ಬಗ್ಗೆ ಆಕ್ಷೇಪ ಎತ್ತಿದ್ದರು. ಹಿಂದೆ ದರ್ಶನ್​ಗೆ ಚಪ್ಪಲಿ ಎಸೆತ ಪ್ರಕರಣ ನಡೆದಾಗ ಸ್ಪಂದಿಸಿದ್ದ ಅವರು, ಅಭಿಮಾನಿಗಳು ಹಾಗೂ ನಟರಿಗೆ ಬುದ್ಧಿ ಹೇಳಬೇಕಾಗಿದೆ ಎಂದು ಹೇಳಿದ್ದರು.

ದರ್ಶನ್‌ ಪರ ವಹಿಸಿ ಸಿಎಂ, ಗೃಹ ಸಚಿವರಿಗೆ ಮನವಿ ಮಾಡಿದ್ರಾ ರಾಜಕೀಯ ನಾಯಕರು?

ತನ್ನದೇ ಅಭಿಮಾನಿ ರೇಣುಕಾ ಸ್ವಾಮಿ ಎಂಬುವರನ್ನು ಕ್ರೂರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಜೈಲು ಸೇರಿದ್ದಾರೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan ). ಬುಧವಾರದಿಂದ ಆರಂಭಗೊಂಡಂತೆ ದರ್ಶನ್ ಗ್ಯಾಂಗ್​​ಗೆ ಆರು ದಿನಗಳ ಕಾಲ ಪೊಲೀಸ್ ವಿಚಾರಣೆ ನಡೆಯಲಿದೆ. ಕೊಲೆ ಕೇಸ್ ಸಂಬಂಧ ಪೊಲೀಸರು ಸಾಕ್ಷ್ಯಗಳನ್ನು ಒಟ್ಟು ಮಾಡಲಿದ್ದಾರೆ. ದರ್ಶನ್‌ ರಕ್ಷಣೆಗೆ ರಾಜಕೀಯ ನಾಯಕರು ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗಿದೆ. ಕೆಲ ನಾಯಕರು ನಿನ್ನೆಯಿಂದ (ಜೂ.11)ದರ್ಶನ್ ಮೇಲೆ ಕರುಣೆ ತೋರಿ ಎಂದು ಗೃಹ ಸಚಿವ ಪರಮೇಶ್ವರ್ ಹಾಗೂ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ದರ್ಶನ್ ಅವರನ್ನು ಬಚಾವ್ ಮಾಡಲು ಸಚಿವರು ಪ್ರಯತ್ನಿಸುತ್ತಿದ್ದಾರೆ ಎನ್ನುತ್ತಿದ್ದಂತೆ ಅವರು ಯಾರಾಗಿರಬಹುದು ಎನ್ನುವ ಚರ್ಚೆಯೂ ಜೋರಾಗಿದೆ. ಬೆಂಗಳೂರಿನ ಸಚಿವರ ಬಳಿ ಸಹಾಯ ಕೇಳಲಾಗಿದೆ ಎಂದೂ ವರದಿಯಾಗಿದೆ. ಆದರೆ ಅದು ಯಾರು ಎನ್ನುವುದು ರಿವೀಲ್ ಆಗಿಲ್ಲ. ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 13 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ದರ್ಶನ್, ಪವಿತ್ರಾ ಗೌಡ ಅವರ ಜೊತೆ ಪವನ್, ವಿನಯ್, ಪ್ರದೋಷ್, ನಂದೀಶ, ದೀಪಕ್, ಲಕ್ಷ್ಮಣ್, ನಾಗರಾಜು, ಕಾರ್ತಿಕ್, ನಿಖಿಲ್, ಕೇಶವಮೂರ್ತಿ,ರಾಘವೇಂದ್ರ ಅವರನ್ನು ಅರೆಸ್ಟ್ ಮಾಡಲಾಗಿದೆ. ಪವಿತ್ರಾ ಗೌಡ ಅವರು ಆರೋಪಿ 1, ದರ್ಶನ್ ಆರೋಪಿ 2 ಎಂದು ಹೇಳಲಾಗಿದೆ.

Continue Reading

ಸ್ಯಾಂಡಲ್ ವುಡ್

Actor Darshan: ಆರೋಪಿ ದರ್ಶನ್​ಗೆ 10ಕ್ಕೂ ಹೆಚ್ಚು ದೊನ್ನೆ ಬಿರಿಯಾನಿ ತರಿಸಿದ್ದ ಪೊಲೀಸರು!

Actor Darshan: ರೇಣುಕಾ ಸ್ವಾಮಿ ಎಂಬುವವರನ್ನು ಹತ್ಯೆ ಮಾಡಿದ ಆರೋಪದಲ್ಲಿ ದರ್ಶನ್​, ಪವಿತ್ರಾ ಗೌಡ, ವಿ. ವಿನಯ್, ಆರ್. ನಾಗರಾಜು, ಎಸ್​. ಪ್ರದೋಶ್​, ಎಂ. ಲಕ್ಷ್ಮಣ್​, ಕೆ. ಪವನ್, ನಂದೀಶ್​, ದೀಪಕ್​ ಕುಮಾರ್, ಕಾರ್ತಿಕ್​, ನಿಖಿಲ್ ನಾಯಕ್​, ರಾಘವೇಂದ್ರ ಅಲಿಯಾಸ್​ ರಾಘು, ಕೇಶವಮೂರ್ತಿ ಪೊಲೀಸರ ಅತಿಥಿ ಆಗಿದ್ದಾರೆ. ಎಲ್ಲರನ್ನೂ ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ. ಇಂದು ರೇಣುಕಾಸ್ವಾಮಿ ಕೊಲೆಯಾದ ಗೋಡಾನ್‌ಗೆ ಆರೋಪಿಗಳನ್ನ ಕರೆತರುವ ಸಾಧ್ಯತೆ ಇದೆ ಎನ್ನಲಾಗಿದೆ.

VISTARANEWS.COM


on

Actor Darshan 10 Biryani For Sent To Police Custody
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ (Actor Darshan) ಹಾಗೂ ಅವರ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ರೇಣುಕಾಸ್ವಾಮಿ ಕೊಲೆಯಾದ ಗೋಡಾನ್‌ಗೆ ಆರೋಪಿಗಳನ್ನು ಕರೆತರುವ ಸಾಧ್ಯತೆ ಇದೆ ಎನ್ನಲಾಗಿದೆ. ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳನ್ನು ಸ್ಥಳ ಮಹಜರ್‌ಗೆ ಕತೆ ತರುವ ಸಾಧ್ಯತೆ ಇದೆ ಎನ್ನಲಾಗಿದೆ. ಜತೆಗೆ ಪೊಲೀಸರು ದೊನ್ನೆ ಬಿರಿಯಾನಿ (Donne Biriyani) ತರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾತ್ರಿ ಠಾಣೆಗೆ ಹೊರಗಡೆಯಿಂದ 10ಕ್ಕೂ ಹೆಚ್ಚು ದೊನ್ನೆ ಬಿರಿಯಾನಿ ಬಾಕ್ಸ್​ಗಳು ಬಂದಿದ್ದವು. ಇದೀಗ ಈ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ.

ಪಟ್ಟಣಗೆರೆ ಗೋಡಾನ್‌ನಲ್ಲಿ ಸ್ಥಳ ಮಹಜರ್ ಸಾಧ್ಯತೆ!

ರೇಣುಕಾ ಸ್ವಾಮಿ ಎಂಬುವವರನ್ನು ಹತ್ಯೆ ಮಾಡಿದ ಆರೋಪದಲ್ಲಿ ದರ್ಶನ್​, ಪವಿತ್ರಾ ಗೌಡ, ವಿ. ವಿನಯ್, ಆರ್. ನಾಗರಾಜು, ಎಸ್​. ಪ್ರದೋಶ್​, ಎಂ. ಲಕ್ಷ್ಮಣ್​, ಕೆ. ಪವನ್, ನಂದೀಶ್​, ದೀಪಕ್​ ಕುಮಾರ್, ಕಾರ್ತಿಕ್​, ನಿಖಿಲ್ ನಾಯಕ್​, ರಾಘವೇಂದ್ರ ಅಲಿಯಾಸ್​ ರಾಘು, ಕೇಶವಮೂರ್ತಿ ಪೊಲೀಸರ ಅತಿಥಿ ಆಗಿದ್ದಾರೆ. ಎಲ್ಲರನ್ನೂ ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ. ಇಂದು ರೇಣುಕಾಸ್ವಾಮಿ ಕೊಲೆಯಾದ ಗೋಡಾನ್‌ಗೆ ಆರೋಪಿಗಳನ್ನ ಕರೆತರುವ ಸಾಧ್ಯತೆ ಇದೆ ಎನ್ನಲಾಗಿದೆ. ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳನ್ನ ಸ್ಥಳ ಮಹಜರ್ ಗೆ ಕರೆತರುವ ಸಾಧ್ಯತೆ ಇದೆ. ಸದ್ಯ ಪೊಲೀಸರು ಈ ಗೋಡಾನ್‌ವನ್ನು ಸೀಜ್ ಮಾಡಿದ್ದಾರೆ. ಈ ಗೋಡಾನ್ ಸುತ್ತಮುತ್ತ ಹೆಚ್ಚಾಗಿ ಸಾರ್ವಜನಿಕರು ಓಡಾಟ ಕೂಡ ಇಲ್ಲ ಎನ್ನಲಾಗಿದೆ. ಈ ಗೋಡಾನ್‌ ಪಟ್ಟಣಗೆರೆ ಜಯಣ್ಣ ಅವರಿಗೆ ಸೇರಿತ್ತು. ಸದ್ಯ ಬಾಡಿಗೆಗೆ ನೀಡಲಾಗಿತ್ತು. ನಿನ್ನೆಯಿಂದಲೂ ಪೊಲೀಸರ ವಶದಲ್ಲಿತ್ತು ಈ ಗೋಡಾನ್.

ಇದನ್ನೂ ಓದಿ: Actor Darshan : ದರ್ಶನ್‌ ಪರ ವಹಿಸಿ ಸಿಎಂ, ಗೃಹ ಸಚಿವರಿಗೆ ಮನವಿ ಮಾಡಿದ್ರಾ ರಾಜಕೀಯ ನಾಯಕರು?

ದೊನ್ನೆ ಬಿರಿಯಾನಿ ದಚ್ಚು ಗ್ಯಾಂಗ್‌ಗೆ!

ದರ್ಶನ್‌ ಹಾಗೂ ಅವರ ಗ್ಯಾಂಗ್‌ವನ್ನು 6 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಒಪ್ಪಿಸಲಾಗಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್​ ಠಾಣೆಯಲ್ಲಿ ದರ್ಶನ್ (Darshan) ಹಾಗೂ ಅವರ ಸಹಚರರು ಇದ್ದರು. ಠಾಣೆಗೆ ಹೊರಗಡೆಯಿಂದ 10ಕ್ಕೂ ಹೆಚ್ಚು ದೊನ್ನೆ ಬಿರಿಯಾನಿ ಬಾಕ್ಸ್​ಗಳು ಬಂದಿದ್ದವು. ಪೊಲೀಸರು ದೊನ್ನೆ ಬಿರಿಯಾನಿ (Donne Biriyani) ತರಿಸಿದ್ದಾರೆ ಎನ್ನಲಾಗಿತ್ತು.

ಲಾಕಪ್​ನಲ್ಲಿ ಸೊಳ್ಳೆ ಕಡಿತಕ್ಕೆ ಬೆಚ್ಚಿ ರಾತ್ರಿಯೆಲ್ಲ ಎದ್ದು ಕುಳಿತಿದ್ದ ನಟ ದರ್ಶನ್​!

ತನ್ನದೇ ಅಭಿಮಾನಿ ರೇಣುಕಾ ಸ್ವಾಮಿ ಎಂಬುವರನ್ನು ಕ್ರೂರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ (Actor Darshan Arrested)​, ಸೊಳ್ಳೆ ಕಡಿತಕ್ಕೆ ಬೆಚ್ಚಿ ರಾತ್ರಿಯೆಲ್ಲ ಎಚ್ಚರವಿದ್ದರು. ಕೊಲೆಯಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ದರ್ಶನ್ ಮತ್ತು ಆತನ ಸಹಚರಿಗೆ ಕಾಮಾಕ್ಷಿಪಾಳ್ಯ ಪೊಲೀಸರು ಬೇರೆ ಬೇರೆ ಲಾಕಪ್​ನಲ್ಲಿ ಮಲಗಲು ವ್ಯವಸ್ಥೆ ಮಾಡಿದ್ದರು. ಆದರೆ, ಇದುವರೆಗೆ ಜೇಬುಗಳ್ಳರ, ಮನೆಗಳ್ಳರ ಮತ್ತು ಸಣ್ಣಪುಟ್ಟ ಹೊಡೆದಾಟಗಳಲ್ಲಿ ಜೈಲು ಸೇರುತ್ತಿದ್ದವರ ರಕ್ತ ಹೀರಿ ಅಭ್ಯಾಸವಿದ್ದ ಸೊಳ್ಳೆಗಳು ದರ್ಶನ್​ಗೂ ಕಾಟ ಕೊಟ್ಟವು. ಪೊಲೀಸರು ‘ಸೆಲೆಬ್ರಿಟಿ ದರ್ಶನ್​ಗೆ’ ಕಾರ್ಪೆಟ್​, ದಿಂಬು ಎಲ್ಲ ಕೊಟ್ಟು ಮಲಗಲು ವ್ಯವಸ್ಥೆ ಮಾಡಿದ್ದರೂ ಸೊಳ್ಳೆಗಳು ಅವೆಲ್ಲವನ್ನೂ ಲೆಕ್ಕಕ್ಕೆ ತೆಗೆದುಕೊಳ್ಳದೇ ಬೆಡ್​ಶೀಟ್​ ಒಳಗಿನಿಂದ ತೂರಿಕೊಂಡು ಹೋಗಿ ಕಚ್ಚಿದವು.

ಕೊಲೆ ಆರೋಪ ಎದುರಿಸುತ್ತಿರುವ ದರ್ಶನ್ ಹಾಗೂ ಉಳಿದ 11 ಜನ ಆರೋಪಿಗಳು ಲಾಕ್ ಅಪ್ ನಲ್ಲೇ ಉಳಿಯಬೇಕಾಯಿತು. ದರ್ಶನ್‌, ರಾಘವೇಂದ್ರ ಮತ್ತು ವಿನಯ್ ಗೆ ಒಂದು ಲಾಕ್ ಅಪ್ ನಲ್ಲಿ ಮಲಗಲು ವ್ಯವಸ್ಥೆ ಮಾಡಿದ್ದರೆ, ಇತರ ಆರೋಪಿಗಳಿಗೆ ಮತ್ತೊಂದು ಲಾಕ್ ಅಪ್​ನಲ್ಲಿ ಮಲಗಲು ಹೇಳಿದ್ದರು. ರಾತ್ರಿ ಆರೋಪಿಗಳಿಗೆ ಖಾಸಗಿ ಹೋಟೆಲ್ ನಿಂದ ದೊನ್ನೆ ಬಿರಿಯಾನಿ‌ ವ್ಯವಸ್ಥೆ ಮಾಡಲಾಗಿತ್ತು. ಚೆನ್ನಾಗಿ ತಿಂದಿದ್ದ ಅವರು ಪೊಲೀಸರೇ ಒದಗಿಸಿದ್ದ ಹಾಸಿಗೆ ಪರಿಕರಗಳು, ಬೆಡ್ ಶೀಟ್, ತಲೆ ದಿಂಬು ಬಳಸಿ ಮಲಗಿದ್ದರು. ಆದರೆ, ಸೊಳ್ಳೆಗಳು ಅವರ ರಕ್ಷಣಾ ಕೋಟೆಯನ್ನು ಭೇದಿಸಿ ಬಂದು ಕಚ್ಚಿದ್ದವು.

Continue Reading

ಸ್ಯಾಂಡಲ್ ವುಡ್

Actor Darshan : ದರ್ಶನ್‌ ಪರ ವಹಿಸಿ ಸಿಎಂ, ಗೃಹ ಸಚಿವರಿಗೆ ಮನವಿ ಮಾಡಿದ್ರಾ ರಾಜಕೀಯ ನಾಯಕರು?

Actor Darshan : ದರ್ಶನ್ ಅವರನ್ನು ಬಚಾವ್ ಮಾಡಲು ಸಚಿವರು ಪ್ರಯತ್ನಿಸುತ್ತಿದ್ದಾರೆ ಎನ್ನುತ್ತಿದ್ದಂತೆ ಅವರು ಯಾರಾಗಿರಬಹುದು ಎನ್ನುವ ಚರ್ಚೆಯೂ ಜೋರಾಗಿದೆ. ಬೆಂಗಳೂರಿನ ಸಚಿವರ ಬಳಿ ಸಹಾಯ ಕೇಳಲಾಗಿದೆ ಎಂದೂ ವರದಿಯಾಗಿದೆ. ಆದರೆ ಅದು ಯಾರು ಎನ್ನುವುದು ರಿವೀಲ್ ಆಗಿಲ್ಲ. ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 13 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

VISTARANEWS.COM


on

Actor Darshan political leaders appeal to the CM and Home Minister not to twist case
Koo

ಬೆಂಗಳೂರು: ತನ್ನದೇ ಅಭಿಮಾನಿ ರೇಣುಕಾ ಸ್ವಾಮಿ ಎಂಬುವರನ್ನು ಕ್ರೂರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಜೈಲು ಸೇರಿದ್ದಾರೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan ). ಬುಧವಾರದಿಂದ ಆರಂಭಗೊಂಡಂತೆ ದರ್ಶನ್ ಗ್ಯಾಂಗ್​​ಗೆ ಆರು ದಿನಗಳ ಕಾಲ ಪೊಲೀಸ್ ವಿಚಾರಣೆ ನಡೆಯಲಿದೆ. ಕೊಲೆ ಕೇಸ್ ಸಂಬಂಧ ಪೊಲೀಸರು ಸಾಕ್ಷ್ಯಗಳನ್ನು ಒಟ್ಟು ಮಾಡಲಿದ್ದಾರೆ. ದರ್ಶನ್‌ ರಕ್ಷಣೆಗೆ ರಾಜಕೀಯ ನಾಯಕರು ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗಿದೆ. ಕೆಲ ನಾಯಕರು ನಿನ್ನೆಯಿಂದ (ಜೂ.11)ದರ್ಶನ್ ಮೇಲೆ ಕರುಣೆ ತೋರಿ ಎಂದು ಗೃಹ ಸಚಿವ ಪರಮೇಶ್ವರ್ ಹಾಗೂ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ದರ್ಶನ್ ಅವರನ್ನು ಬಚಾವ್ ಮಾಡಲು ಸಚಿವರು ಪ್ರಯತ್ನಿಸುತ್ತಿದ್ದಾರೆ ಎನ್ನುತ್ತಿದ್ದಂತೆ ಅವರು ಯಾರಾಗಿರಬಹುದು ಎನ್ನುವ ಚರ್ಚೆಯೂ ಜೋರಾಗಿದೆ. ಬೆಂಗಳೂರಿನ ಸಚಿವರ ಬಳಿ ಸಹಾಯ ಕೇಳಲಾಗಿದೆ ಎಂದೂ ವರದಿಯಾಗಿದೆ. ಆದರೆ ಅದು ಯಾರು ಎನ್ನುವುದು ರಿವೀಲ್ ಆಗಿಲ್ಲ. ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 13 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ದರ್ಶನ್, ಪವಿತ್ರಾ ಗೌಡ ಅವರ ಜೊತೆ ಪವನ್, ವಿನಯ್, ಪ್ರದೋಷ್, ನಂದೀಶ, ದೀಪಕ್, ಲಕ್ಷ್ಮಣ್, ನಾಗರಾಜು, ಕಾರ್ತಿಕ್, ನಿಖಿಲ್, ಕೇಶವಮೂರ್ತಿ,ರಾಘವೇಂದ್ರ ಅವರನ್ನು ಅರೆಸ್ಟ್ ಮಾಡಲಾಗಿದೆ. ಪವಿತ್ರಾ ಗೌಡ ಅವರು ಆರೋಪಿ 1, ದರ್ಶನ್ ಆರೋಪಿ 2 ಎಂದು ಹೇಳಲಾಗಿದೆ.

ಇದನ್ನೂ ಓದಿ: Actor Darshan Arrested : ದರ್ಶನ್​ನ ಅನ್​ಫಾಲೋ ಮಾಡಿ ಡಿಪಿ ಡಿಲೀಟ್‌ ಮಾಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ!

ಇದೀಗ ದರ್ಶನ್ ಆಪ್ತರಿರುವ ರಾಜಕಾರಣಿಗಳಿಂದ ದಚ್ಚು ಅವರನ್ನು ರಕ್ಷಿಸಲು ಒತ್ತಡ ಹೇರಲಾಗುತ್ತಿದೆ ಎನ್ನಲಾಗಿದೆ. ಕೇಸ್ ಟ್ವೀಸ್ಟ್ ಮಾಡದಂತೆ ನಾಯಕರು ಮನವಿ ಕೂಡ ಮಾಡಿದ್ದಾರಂತೆ. ಹಳೆ ಮೈಸೂರು ಭಾಗದ ನಾಯಕರಿಂದ ಮನವಿ ಮಾಡಲಾಗಿದೆ ಎನ್ನಲಾಗಿದೆ. ʻದರ್ಶನ್ ತನ್ನ ಅಭಿಮಾನಿಯನ್ನ ಸಾಯಿಸುವಷ್ಟು ಕ್ರೂರಿಯಲ್ಲ. ಹೀಗಾಗಿ ಈ ಪ್ರಕರಣದಲ್ಲಿ ದರ್ಶನ್ ಪಾತ್ರ ಇರುವುದಿಲ್ಲ. ದರ್ಶನ್ ಮೇಲೆ ಕರುಣೆ ತೋರಿ ಎಂದು ಗೃಹ ಸಚಿವ ಪರಮೇಶ್ವರ್ ಹಾಗೂ ಸಿಎಂ ಸಿದ್ದರಾಮಯ್ಯ ನಿನ್ನೆ ಸಂಜೆಯಿಂದಲೇ ಕೆಲ ನಾಯಕರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಭಾರೀ ಭದ್ರತೆ

ದರ್ಶನ್​ ಹಾಗೂ ಆತನ ಗ್ಯಾಂಗ್​ನ ಸದಸ್ಯರು ಇದ್ದ ಪೊಲೀಸ್ ಠಾಣೆಗೆ ಭದ್ರತೆಯನ್ನು ಹೆಚ್ಚಿಸಲಾಗಿತ್ತು . ವಿಐಪಿ ಆರೋಪಿಗಳ ಮೇಲೆ ದಾಳಿಯಾಗುವ ಅಥವಾ ಇನ್ಯಾವುದೇ ಅನಾಹುತಗಳನ್ನು ತಪ್ಪಿಸುವ ಉದ್ದೇಶದಿಂದ ಠಾಣೆಯ ಹೊರಗಡೆ ಕೆಎಸ್​ಆರ್​​ಪಿ ಪೊಲೀಸ್​ ತಂಡವೊಂದನ್ನು ನಿಯೋಜಿಸಲಾಗಿತ್ತು. ದರ್ಶನ್​ಗೆ ದೊಡ್ಡ ಪ್ರಮಾಣದ ಅಭಿಮಾನಿ ಬಳಗವಿದೆ. ಹುಚ್ಚು ಅಭಿಮಾನ ದರ್ಶನ್ ಆರೋಪಿಯೇ ಅಲ್ಲ ಎಂದು ವಾದಿಸುವ ಮಟ್ಟಕ್ಕೆ ಬಂದಿದೆ. ಹೀಗಾಗಿ ಡಿ ಬಾಸ್ ನೋಡಲು ಪೊಲೀಸ್​ ಠಾಣೆಗೆ ಬರಬಹುದು ಎಂಬ ಊಹೆ ಮೇಲೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

Continue Reading
Advertisement
Actor Darshan arest Actor Jaggesh Says Karma Follows You
ಸ್ಯಾಂಡಲ್ ವುಡ್2 mins ago

Actor Darshan: ದರ್ಶನ್‌ ಅರೆಸ್ಟ್​ ಆದ ಬೆನ್ನಲ್ಲೇ ಕರ್ಮ ಫಲ ಎಂದು ಜಗ್ಗೇಶ್‌ ಟ್ವೀಟ್‌!

Modi 3.0
ದೇಶ12 mins ago

Modi 3.0: ಶೀಘ್ರ ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್‌, ಡೀಸೆಲ್‌? ಕೇಂದ್ರ ಸಚಿವರು ಹೇಳಿದ್ದೇನು?

Vinod Raj admitted hospital
ಸ್ಯಾಂಡಲ್ ವುಡ್29 mins ago

Vinod Raj: ಲೀಲಮ್ಮನ ಮಗ, ನಟ ವಿನೋದ್‌ ರಾಜ್‌ ಆಸ್ಪತ್ರೆಗೆ ದಾಖಲು

Lok Sabha Election
ಪ್ರಮುಖ ಸುದ್ದಿ37 mins ago

Lok Sabha Election : ಬಿಜೆಪಿ-ಜೆಡಿಎಸ್ ಜತೆಯಾಗಿ ಸ್ಪರ್ಧಿಸಿದರೆ ವಿಧಾನಸಭೆ ಚುನಾವಣೆಯಲ್ಲಿ 142 ಸ್ಥಾನ!

Actor Darshan arrest what about his future project
ಸ್ಯಾಂಡಲ್ ವುಡ್50 mins ago

Actor Darshan: ʻಡೆವಿಲ್‌ʼಗೆ ಜೈಲು ಗ್ಯಾರಂಟಿ ಆದ್ರೆ ಮುಂದಿನ ಸಿನಿಮಾಗಳ ಗತಿಯೇನು? ನಿರ್ಮಾಪಕರಿಗೆ ನಡುಕ!

INDIA Bloc
Lok Sabha Election 20241 hour ago

INDIA Bloc: 6 ಸಂಸದರನ್ನು ಕಳೆದುಕೊಳ್ಳುವ ಭೀತಿಯಲ್ಲಿ ಇಂಡಿ ಒಕ್ಕೂಟ; ಕಾರಣವೇನು?

Actor Darshan a Want To Escape From This Case
ಸ್ಯಾಂಡಲ್ ವುಡ್1 hour ago

Actor Darshan: ಕೊಲೆ ಕೇಸ್‌ನಿಂದ ಎಸ್ಕೇಪ್‌ ಆಗಲು 30 ಲಕ್ಷ ರೂ. ಕೊಟ್ಟಿದ್ದ ʻಡೆವಿಲ್‌ʼ? ಆದರೆ ಫ್ಲ್ಯಾನ್‌ ಆಗಿದ್ದು ಮಾತ್ರ ಉಲ್ಟಾ!

Terroris Attack
ಪ್ರಮುಖ ಸುದ್ದಿ2 hours ago

Terrorist Attack : ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಯೋಧ ಹುತಾತ್ಮ , ಆರು ಯೋಧರಿಗೆ ಗಾಯ

Actor Darshan Murder accusations Chetan Kumar Ahimsa react
ಸಿನಿಮಾ2 hours ago

Actor Darshan: ನಿಜ ಜೀವನದಲ್ಲಿ ನಟ ದರ್ಶನ್‌ನಂತಹ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು; ಚೇತನ್‌ ಅಹಿಂಸಾ!

Bird Flu
ಆರೋಗ್ಯ2 hours ago

Bird Flu: ದೇಶದಲ್ಲಿ ಎರಡನೇ ಹಕ್ಕಿ ಜ್ವರದ ಪ್ರಕರಣ ಪತ್ತೆ; ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ19 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ20 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ21 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ23 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌