ಸಿನಿಮಾ
ಸ್ಯಾಂಡಲ್ವುಡ್ ನಿರ್ದೇಶಕ-ನಿರ್ಮಾಪಕರ ನಡುವೆ ಗಲಾಟೆ; ಕಡ್ಡಿಪುಡಿ ಚಂದ್ರು ವಿರುದ್ಧ ಪಿ.ಸಿ.ಶೇಖರ್ ಪೊಲೀಸರಿಗೆ ದೂರು
ಇನ್ನೂ ಹದಿನೆಂಟೂವರೆ ಲಕ್ಷ ರೂ.ಬಾಕಿ ಉಳಿಸಿಕೊಂಡಿರುವ ಕಡ್ಡಿಪುಡಿ ಚಂದ್ರು ವಿರುದ್ಧ ನಕಲಿ ಸಹಿ ಆರೋಪವೂ ಎದ್ದಿದೆ. ‘ನನಗೆ ಎಲ್ಲ ಹಣ ನೀಡಿದ್ದಾಗಿ ದಾಖಲಿಸಿ ನಕಲಿ ಸಹಿ ಮಾಡಿದ್ದಾರೆ ಎಂದೂ ಪಿ.ಸಿ.ಶೇಖರ್ ದೂರಿದ್ದಾರೆ.
ಇತ್ತೀಚೆಗೆ ತೆರೆಕಂಡ ‘ಲವ್ ಬರ್ಡ್ಸ್’ ಸಿನಿಮಾದ ನಿರ್ದೇಶಕ ಪಿ.ಸಿ.ಶೇಖರ್ (Director PC Shekhar) ಅವರು ಕನ್ನಡದ ನಿರ್ಮಾಪಕ, ನಟ ಕಡ್ಡಿಪುಡಿ ಚಂದ್ರು (ಎಂ.ಚಂದ್ರು) ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಹಣಕಾಸಿನ ವಿಷಯದಲ್ಲಿ ಪಿ.ಸಿ.ಶೇಖರ್ ಮತ್ತು ಕಡ್ಡಿಪುಡಿ ಚಂದ್ರು ನಡುವೆ ವಿವಾದ ಎದ್ದಿದ್ದು, ಅದೀಗ ಪೊಲೀಸರ ಎದುರು ಹೋಗಿದೆ. ನಿರ್ಮಾಪಕ ಕಡ್ಡಿಪುಡಿ ಚಂದ್ರು ಅವರು ತಮಗೆ ನೀಡಬೇಕಾದ ಸಂಭಾವನೆಯನ್ನು ಪೂರ್ಣವಾಗಿ ನೀಡಿಲ್ಲ ಎಂದು ನಿರ್ದೇಶಕ ಪಿ.ಸಿ ಶೇಖರ್ ದೂರಿನಲ್ಲಿ ಆರೋಪಿಸಿದ್ದಾರೆ
ಅವರ ಲವ್ ಬರ್ಡ್ಸ್ ಸಿನಿಮಾದಲ್ಲಿ 20 ಲಕ್ಷಕ್ಕೆ ನಿರ್ದೇಶಕರಾಗಿ ಕೆಲಸ ಮಾಡಲು ಒಪ್ಪಂದವಾಗಿತ್ತು. ಆದರೆ ಸಿನಿಮಾ ಎಡಿಟಿಂಗ್ಗಾಗಿ 5 ಲಕ್ಷ ರೂಪಾಯಿ ಹೆಚ್ಚುವರಿ ಹಣ ನೀಡುವ ಬಗ್ಗೆ ಮಾತುಕತೆಯಾಗಿತ್ತು. ಅಂದರೆ ಒಟ್ಟು 25 ಲಕ್ಷ ರೂಪಾಯಿಯನ್ನು ನಿರ್ಮಾಪಕರು ನನಗೆ ಕೊಡಬೇಕಿತ್ತು. ಆದರೆ ಇದುವರೆಗೆ ಒಟ್ಟು ಆರೂವರೆ ಲಕ್ಷ ರೂ. ಮಾತ್ರ ನೀಡಿದ್ದಾರೆ. ಉಳಿದ ಹಣ ಕೇಳಿದ್ದಕ್ಕೆ ಅವಾಚ್ಯ ಪದಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲ, ಸೆನ್ಸಾರ್ ಮತ್ತು ಇತರ ಸಂಗತಿಗಳನ್ನು ನನ್ನ ಗಮನಕ್ಕೆ ತರದೆ ಮಾಡಿ ಮುಗಿಸಿದ್ದಾರೆ ಎಂದು ಪಿ.ಸಿ.ಶೇಖರ್ ಹೇಳಿದ್ದಾರೆ.
ಇನ್ನೂ ಹದಿನೆಂಟೂವರೆ ಲಕ್ಷ ರೂ.ಬಾಕಿ ಉಳಿಸಿಕೊಂಡಿರುವ ಕಡ್ಡಿಪುಡಿ ಚಂದ್ರು ವಿರುದ್ಧ ನಕಲಿ ಸಹಿ ಆರೋಪವೂ ಎದ್ದಿದೆ. ‘ನನಗೆ ಎಲ್ಲ ಹಣ ನೀಡಿದ್ದಾಗಿ ದಾಖಲಿಸಿ ನಕಲಿ ಸಹಿ ಮಾಡಿದ್ದಾರೆ. ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಪಿ.ಸಿ.ಶೇಖರ್ಗೆ ಅವಕಾಶ ಕೊಡಬೇಡಿ ಎಂದು ಹಲವಾರು ನಿರ್ಮಾಪಕರಿಗೆ ಹೇಳಿದ್ದಾರೆ’ ಎಂದು ಪಿ.ಸಿ.ಶೇಖರ್ ತಿಳಿಸಿದ್ದಾರೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇದನ್ನೂ ಓದಿ: ARM Teaser: ಮಲಯಾಳಿ ಹಿರೋನ ಪ್ಯಾನ್ ಇಂಡಿಯಾ ಸಿನಿಮಾ ಟೀಸರ್ ಬಿಡುಗಡೆ ಮಾಡಿದ ನಟ ರಕ್ಷಿತ್ ಶೆಟ್ಟಿ
ಪಿ.ಸಿ.ಶೇಖರ್ ಅವರು ಕನ್ನಡ ಚಿತ್ರರಂಗದಲ್ಲಿ 2010ರಿಂದಲೂ ಸಕ್ರಿಯರಾಗಿದ್ದು, ದಿ ಟೆರರಿಸ್ಟ್, ರಾಗಾ, ಇತ್ತೀಚೆಗೆ ತೆರೆಕಂಡ, ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ಲವ್ ಬರ್ಡ್ಸ್ ಸೇರಿ ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಇನ್ನು ಕಡ್ಡಿಪುಡಿ ಚಂದ್ರು ಎಂದೇ ಖ್ಯಾತರಾದ ನಿರ್ಮಾಪಕ ಎಂ.ಚಂದ್ರು ಅವರು ‘ಕಡ್ಡಿಪುಡಿ, ಸ್ವಯಂವರ‘ ಇತ್ಯಾದಿ ಚಿತ್ರಗಳನ್ನು ನಿರ್ಮಾಣ ಮಾಡಿದ್ದು, ‘ಕೃಷ್ಣನ್ ಲವ್ ಸ್ಟೋರಿ, ಸಾಗರ ಸಿನಿಮಾಗಳಲ್ಲಿ ನಟನೆಯನ್ನೂ ಮಾಡಿದ್ದಾರೆ.
ದೇಶ
72 Hoorain: ಕಾಶ್ಮೀರ ಫೈಲ್ಸ್, ಕೇರಳ ಸ್ಟೋರಿ ಬಳಿಕ ಮತ್ತೊಂದು ವಿವಾದಾತ್ಮಕ ಸಿನಿಮಾ ’72 ಹೂರೇ’ ತೆರೆಗೆ ಬರಲು ಸಿದ್ಧ
72 Hoorain: ರಾಷ್ಟ್ರ ಪ್ರಶಸ್ತಿ ವಿಜೇತ ಸಂಜಯ್ ಪೂರನ್ ಸಿಂಗ್ ಚೌಹಾಣ್ ನಿರ್ದೇಶನದ 72 ಹೂರೇ ಚಿತ್ರದ ಟೀಸರ್ ಲಾಂಚ್ ಮಾಡಲಾಗಿದ್ದು, ಪರ ವಿರೋಧ ಚರ್ಚೆಗಳು ಶುರುವಾಗಿವೆ.
ನವದೆಹಲಿ: ದಿ ಕೇರಳ ಸ್ಟೋರಿ (The Kerala Story), ಕಾಶ್ಮೀರ್ ಫೈಲ್ (The Kashmir Files), ದಿ ಡೈರಿ ಆಫ್ ವೆಸ್ಟ್ ಬೆಂಗಾಲ್ ಸಿನಿಮಾ ಬೆನ್ನಲ್ಲೇ ಮತ್ತೊಂದು ವಿವಾದಾತ್ಮಕ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಇಸ್ಲಾಮಿಕ್ ತೀವ್ರವಾದದ ಕತೆಯನ್ನು ಹೊಂದಿರುವ 72 ಹೂರೇ(72 Hoorain) ಚಿತ್ರದ ಟೀಸರ್ ಲಾಂಚ್ ಆಗಿದ್ದು, ತೀವ್ರ ವಿರೋಧ ಕೂಡ ವ್ಯಕ್ತವಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಸಂಜಯ್ ಪೂರನ್ ಸಿಂಗ್ ಚೌಹಾಣ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಟೀಸರ್ ಲಾಂಚ್ ಆಗುತ್ತಿದ್ದಂತೆ ನೆಟ್ಟಿಗರು, ಮುಸ್ಲಿಮ್ ಮತ್ತು ಇಸ್ಲಾಮ್‌ಗೆ ಅವಮಾನ ಮಾಡುವ ಪ್ರಾಪಗ್ಯಾಂಡ ಚಿತ್ರ ಎಂದು ಟೀಕಿಸಿದ್ದಾರೆ.
ಇತ್ತೀಚೆಗಷ್ಟೇ 72 ಹೂರೇ ಚಿತ್ರದ ಫಸ್ಟ್ ಲುಕ್ ಅನಾವರಣ ಮಾಡಲಾಗಿತ್ತು. ಆಗಲೂ ಟ್ವಿಟರ್‌ನಲ್ಲಿ ಸಾಕಷ್ಟು ಪರ ಮತ್ತು ವಿರೋಧ ಚರ್ಚೆಗಳು ಶುರುವಾಗಿದ್ದವು. ಭಾರತದ ಕೋಮು ಸೌಹಾರ್ದತೆಯನ್ನು ಹಾಳು ಮಾಡುವ ಪ್ರಯತ್ನಗಳ ನಡೆಯುತ್ತಿವೆ ಎಂದು ಟೀಕೆ ವ್ಯಕ್ತವಾಗಿತ್ತು.
ಚಿತ್ರದ ಟೀಸರ್‌ನಲ್ಲಿ ಒಸಾಮಾ ಬಿನ್ ಲಾಡೆನ್, ಅಜ್ಮಲ್ ಕಸಬ್ ಸೇರಿದಂತೆ ಇತರ ಚಿತ್ರಗಳನ್ನು ಮತ್ತು ಯಾಕೂಬ್ ಮೆಮನ್‌ನ ಮಿಶ್ರಿತ ಫೋಟೋವನ್ನು ತೋರಿಸಲಾಗಿದೆ. ಮೇಲ್ನೋಟಕ್ಕೆ ಟೀಸರ್‌ನಲ್ಲಿ ಕಾಣುವ ಅಂಶಗಳು ಖಂಡಿತವಾಗಿಯೂ, ಈ ಸಿನಿಮಾ ಕೂಡ ಮುಸ್ಲಿಮರು ಸುತ್ತ ಸುತ್ತದೆ ಎಂಬುದು ವೇದ್ಯವಾಗುತ್ತದೆ. ಉಗ್ರರಾದ ಮಸೂದ್ ಅಜರ್ ಮತ್ತು ಹಫೀಜ್ ಸಯೀದ್ ಅವರನ್ನು ಹೋಲುವರವನ್ನು ಹೈಲೆಟ್ ಮಾಡಲಾಗಿರುವುದನ್ನು ಕಾಣಬಹುದಾಗಿದೆ.
ಇದನ್ನೂ ಓದಿ: The Kerala Story : ದಿ ಕೇರಳ ಸ್ಟೋರಿ ಸಿನಿಮಾದ ಬಗ್ಗೆ ಕೆಂಡ ಕಾರಿದ ಹಿರಿಯ ನಟ ನಾಸಿರುದ್ದೀನ್ ಶಾ
72 ಹೂರೇ ಚಿತ್ರದ ಟ್ರೈಲರ್ ಅನ್ನು ಸಹ ನಿರ್ದೇಶಕರಾಗಿರುವ ಅಶೋಕ್ ಪಂಡಿತ್ ಅವರು ಟ್ವಿಟರ್‌ನಲ್ಲಿ ಷೇರ್ ಮಾಡಿದ್ದಾರೆ. ಇವರು ಕಾಶ್ಮೀರ ಪಂಡತ್ ಕೂಡ ಹೌದು. ನಮ್ಮ ಚಿತ್ರ 72 Hoorain ಸಿನಿಮಾದ ಮೊದಲ ನೋಟವನ್ನು ನಿಮಗೆ ಪ್ರಸ್ತುತಪಡಿಸುವ ಭರವಸೆಯಂತೆ. ನೀವು ಅದನ್ನು ಇಷ್ಟಪಡುತ್ತೀರಿ ಎಂದು ನನಗೆ ಖಾತ್ರಿಯಿದೆ. ಭಯೋತ್ಪಾದಕರ ಮಾರ್ಗದರ್ಶಕರು ಭರವಸೆ ನೀಡಿದಂತೆ 72 ಕನ್ಯೆಯರನ್ನು ಭೇಟಿಯಾಗುವ ಬದಲು ನೀವು ಕ್ರೂರವಾಗಿ ಸಾಯುತ್ತಿದ್ದರೆ? ನನ್ನ ಮುಂಬರುವ ಚಿತ್ರ 72 ಹೂರೇ ನ ಮೊದಲ ನೋಟವನ್ನು ಪ್ರಸ್ತುತಪಡಿಸುತ್ತಿದ್ದೇನೆ. ಚಿತ್ರವು 7 ಜುಲೈ 2023 ರಂದು ಬಿಡುಗಡೆಯಾಗಲಿದೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
72 ಹೂರೇ ಚಿತ್ರದ ಟೀಸರ್
South Cinema
Kiccha Sudeep: ಅಭಿಷೇಕ್ ಅಂಬರೀಷ್ಗೆ ಭರ್ಜರಿ ಗಿಫ್ಟ್ ಕೊಟ್ಟ ಕಿಚ್ಚ ಸುದೀಪ್!
Kiccha Sudeep: ಕರ್ಕಾಟಕ ಲಗ್ನದಲ್ಲಿ (9:30-10:30)ಜೋಡಿ ಹಸೆಮಣೆ ಏರಿತು. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು
ಬೆಂಗಳೂರು; ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ (Abhishek Ambareesh Wedding) ) ಹಾಗೂ ಅವಿವ ಬಿಡಪ ಜೂನ್ 5ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕಿಚ್ಚ ಸುದೀಪ್ (Kiccha Sudeep) ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಸುದೀಪ್ ಅವರ ಆಗಮನದಿಂದ ಮದುವೆಯ ಕಳೆ ಹೆಚ್ಚಿತ್ತು. ಮಂಟಪದಲ್ಲಿ ಅಕ್ಷತೆ ಹಾಕಿ ನವ ಜೋಡಿಗೆ ಶುಭಕೋರಿದ ಸುದೀಪ್ ದಂಪತಿ, ಅಭಿಷೇಕ್-ಅವಿವಾಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಚಿನ್ನದ ಸರವನ್ನು ಸುದೀಪ್ ಉಡುಗೊರೆಯಾಗಿ ನೀಡಿದ್ದಾರೆ.
ಕರ್ಕಾಟಕ ಲಗ್ನದಲ್ಲಿ (9:30-10:30)ಜೋಡಿ ಹಸೆಮಣೆ ಏರಿತು. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು. ಅಭಿಷೇಕ್ ಮದುವೆಗೆ ಸುದೀಪ್ ಗ್ರ್ಯಾಂಡ್ ಆಗಿಯೇ ಎಂಟ್ರಿ ಕೊಟ್ಟರು. ಸುದೀಪ್ ಜತೆ ಪತ್ನಿ ಪ್ರಿಯಾ ಸುದೀಪ್ ಹಾಗೂ ಸಾನ್ವಿ ಸುದೀಪ್ ಕೂಡ ಆಗಮಿಸಿ ಅಭಿ-ಅವಿವಾಗೆ ಶುಭಕೋರಿದರು. ಮಂಟಪದಲ್ಲಿ ಅಕ್ಷತೆ ಹಾಕಿ ನವ ಜೋಡಿಗೆ ಶುಭಕೋರಿದ ಸುದೀಪ್ ದಂಪತಿ, ಅಭಿಷೇಕ್-ಅವಿವಾಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಚಿನ್ನದ ಸರವನ್ನು ಸುದೀಪ್ ಉಡುಗೊರೆಯಾಗಿ ನೀಡಿದ್ದಾರೆ.
ಇದನ್ನೂ ಓದಿ: Kiccha Sudeep: ಕನ್ನಡಿಗರ ಹೃದಯ ಗೆದ್ದ ʻ2018ʼ ಚಿತ್ರ; ಮಲಯಾಳಂ ಸಿನಿಮಾಗೆ ಕಿಚ್ಚ ಸುದೀಪ್ ಫುಲ್ ಫಿದಾ
ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ (Aviva Bidapa) ಹಾಗೂ ಅಭಿಷೇಕ್ ಅಂಬರೀಷ್ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು. ಪರಿಚಯ ಪ್ರೀತಿಗೆ ತಿರುಗಿತು. ಕುಟುಂಬದ ಒಪ್ಪಿಗೆ ಪಡೆದು ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರೂ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.
South Cinema
Actor Yash: ಅಭಿಷೇಕ್ ದಂಪತಿಗೆ ವಿಶ್ ಮಾಡಿದ ಯಶ್ -ರಾಧಿಕಾ; ಸೈಲಿಶ್ ಆಗಿ ಕಂಡ ರಾಕಿ ಭಾಯ್!
Actor Yash : ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು
South Cinema
Abhishek Ambareesh Wedding: ಅಭಿಷೇಕ್ ಅಂಬರೀಶ್- ಅವಿವ ಜೋಡಿಗೆ ಆಶೀರ್ವದಿಸಿದ ರಜನಿಕಾಂತ್!
Abhishek Ambareesh Wedding: ಸೂಪರ್‌ಸ್ಟಾರ್ ರಜನಿಕಾಂತ್ ಅವರು ಅಭಿಷೇಕ್ ಅಂಬರೀಶ್ ಹಾಗೂ ಅವಿವ ಮದುವೆಗೆ ಹಾಜರಿದ್ದರು. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.
ಸೂಪರ್‌ಸ್ಟಾರ್ ರಜನಿಕಾಂತ್ ಅವರು ಅಭಿಷೇಕ್ ಅಂಬರೀಶ್ (Abhishek Ambareesh Wedding) ಹಾಗೂ ಅವಿವ ಮದುವೆಗೆ ಹಾಜರಿದ್ದರು. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.
ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ (Aviva Bidapa) ಹಾಗೂ ಅಭಿಷೇಕ್ ಅಂಬರೀಷ್ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು.
ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ.
-
ಸುವಚನ18 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ23 hours ago
Odisha Train Accident: ಅಪಘಾತ ನಡೆದು 51 ಗಂಟೆಯಲ್ಲೇ ಹಳಿ ಸಿದ್ಧ, ರೈಲು ಸಂಚಾರ; 36 ತಾಸು ಸ್ಥಳದಲ್ಲೇ ಇದ್ದ ಸಚಿವ
-
ಕರ್ನಾಟಕ24 hours ago
Ullal News: ಆಪ್ತನ ಸಹೋದರನ ಅಂತಿಮಯಾತ್ರೆಗೆ ಹೆಗಲುಕೊಟ್ಟ ಸ್ಪೀಕರ್ ಯು.ಟಿ. ಖಾದರ್
-
ಕರ್ನಾಟಕ16 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ23 hours ago
Shivamogga News: ಶಿಕಾರಿಪುರದಲ್ಲಿ ರಾಷ್ಟ್ರಕೂಟರ ಕಾಲದ ಪ್ರಾಚ್ಯಾವಶೇಷಗಳು ಪತ್ತೆ
-
ಕರ್ನಾಟಕ13 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ದೇಶ11 hours ago
Odisha Train Accident: ಗಾಯದ ಮೇಲೆ ಬರೆ ಎಂದರೆ ಇದೇ; ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು
-
ದೇಶ15 hours ago
world environment day : ಇಂದು ವಿಶ್ವ ಪರಿಸರ ದಿನ 2023: ಈ ದಿನದ ಮಹತ್ವ, ಇತಿಹಾಸ, ಥೀಮ್ ತಿಳಿಯಿರಿ