Site icon Vistara News

Sandalwood Stars Birthday: ಇಂದು ಮೂವರು ಸ್ಯಾಂಡಲ್‌ವುಡ್‌ ಸ್ಟಾರ್‌ಗಳ ಹುಟ್ಟಿದ ದಿನ!

Upendra shruti vishnuvardhan

ಬೆಂಗಳೂರು: ಸೆಪ್ಟೆಂಬರ್ 18ರಂದು (Sandalwood Stars Birthday) ಕರ್ನಾಟಕದಾದ್ಯಂತ ಗಣೇಶ ಚತುರ್ಥಿ (Ganesh Chaturthi) ಹಬ್ಬದ ಸಂಭ್ರಮ ಮನೆಮಾಡಿದೆ. ಅಷ್ಟೇ ಅಲ್ಲದೇ ಈ ದಿನ ಕನ್ನಡ ಸಿನಿಮಾ ರಂಗದಲ್ಲಿ ವಿಶೇಷ ದಿನ. ಇಂದು ಮೂವರು ಕಲಾವಿದರ ಹುಟ್ಟುಹಬ್ಬ. ಸಾಹಸಸಿಂಹ ಡಾ.ವಿಷ್ಣುವರ್ಧನ್ (vishnuvardhan birthday), ರಿಯಲ್ ಸ್ಟಾರ್ ಉಪೇಂದ್ರ (Upendra birthday) ಮತ್ತು ನಟಿ ಶ್ರುತಿ (shruti Birthday) ಅವರ ಹುಟ್ಟುಹಬ್ಬ. ಕಲಾವಿದರ ಅಭಿಮಾನಿಗಳು ಸೋಷಿಯಲ್‌ ಮೀಡಿಯಾ ಮೂಲಕ ಶುಭಹಾರೈಸುತ್ತಿದ್ದಾರೆ.

ವಿಷ್ಣುವರ್ಧನ್

ನಮ್ಮೊಂದಿಗೆ ಇದ್ದಿದ್ದರೇ ತಮ್ಮ 73ನೇ ವರ್ಷದ ಬರ್ತ್‌ಡೇ ಆಚರಿಸಿಕೊಳ್ಳುತ್ತಿದ್ದರು. 1950ರ ಸೆಪ್ಟಂಬರ್ 18ರಂದು ಮೈಸೂರಿನಲ್ಲಿ ಜನಿಸಿದ ವಿಷ್ಣುವರ್ಧನ್‌ ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿದರು. ‘ವಂಶವೃಕ್ಷ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ನಾಗರಹಾವು’ ಸಿನಿಮಾ ದೊಡ್ಡ ಮಟ್ಟದ ಬ್ರೇಕ್ ತಂದುಕೊಟ್ಟ ಚಿತ್ರ. ‘ಭೂತಯ್ಯನ ಮಗ ಅಯ್ಯು’, ‘ಸಾಹಸ ಸಿಂಹ’, ‘ಬಂಧನ’, ‘ಹಬ್ಬ’, ‘ಜೀವನದಿ’, ‘ಯಜಮಾನ’, ‘ಸಿಂಹಾದ್ರಿಯ ಸಿಂಹ’, ‘ಆಪ್ತಮಿತ್ರ’, ಮುಂತಾದ ಅನೇಕ ಹಿಟ್ ಚಿತ್ರಗಳನ್ನು ಡಾ.ವಿಷ್ಣುವರ್ಧನ್ ನೀಡಿದರು. ಡಾ. ವಿಷ್ಣುವರ್ಧನ್‌ ಅವರಿಗೆ ರಾಜ್ಯ ಪ್ರಶಸ್ತಿ, ಡಾ.ರಾಜ್‌ಕುಮಾರ್ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಲಭಿಸಿವೆ.

ನಟಿ ಶ್ರುತಿ

ಶ್ರುತಿ ಕನ್ನಡ ಸಿನಿಮಾರಂಗದಲ್ಲಿ ಒಳ್ಳೆ ಹೆಸರು ಪಡೆದಿದ್ದಾರೆ. ಕನ್ನಡ ಸೇರಿದಂತೆ ತಮಿಳು, ಮಲಯಾಳಂ, ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ತಾಯಿ ಇಲ್ಲದ ತವರು, ವೀರಪ್ಪ ನಾಯಕ, ಗೌರಿ ಗಣೇಶ, ಬೊಂಬಾಟ್ ಹೆಂಡ್ತಿ ಸೇರಿದಂತೆ ಇನ್ನು ಹಲವು ಸಿನಿಮಾಗಳಲ್ಲಿ ನಟಿಸಿರುವ ಇವರು ಕನ್ನಡ ಚಿತ್ರರಂಗದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಕಿರುತೆರೆಗೂ ಎಂಟ್ರಿ ಕೊಟ್ಟಿರುವ ನಟಿ ಶ್ರುತಿ ರಿಯಾಲಿಟಿ ಶೋ ಜಡ್ಜ್ ಆಗಿ ವೀಕ್ಷಕರ ಮನಸೆಳೆದಿದ್ದಾರೆ.

ಇದನ್ನೂ ಓದಿ: Dunki Movie: ʻಡಂಕಿʼ ಸಿನಿಮಾ ರಿಲೀಸ್‌ ಬಗ್ಗೆ ಬಾಯ್ಬಿಟ್ಟ ಶಾರುಖ್‌; 2023 ಬಾದ್‌ಷಾರ ವರ್ಷ ಅಂದ್ರು ಫ್ಯಾನ್ಸ್‌!

ಉಪೇಂದ್ರ

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಉಪೇಂದ್ರ ಅವರದ್ದು ಈ ದಿನ ಜನುಮದಿನದ ಸಂಭ್ರಮ. ನಿರ್ದೇಶಕರಾಗಿ ಕನ್ನಡ ಇಂಡಸ್ಟ್ರಿಗೆ ಕಾಲಿಟ್ಟ ನಟ ಉಪೇಂದ್ರ ತನ್ನದೇ ಟ್ರೆಂಡ್ ಕ್ರಿಯೇಟ್ ಮಾಡಿದ್ದರು. ನಟ ಉಪೇಂದ್ರ ತರ್ಲೆನನ್ಮಗ, ಶ್ ಹಾಗೂ ಶಿವಣ್ಣ ಓಂ ಸಿನಿಮಾವನ್ನು ಉಪ್ಪಿ ನಿರ್ದೇಶಿಸಿದ್ದಾರೆ. ಇದೀಗ ಮತ್ತೆ ಯುಐ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್‌ ತೊಟ್ಟಿದ್ದಾರೆ. ಬಹುನಿರೀಕ್ಷಿತ ‘ಯುಐ’ ಸಿನಿಮಾ ಟೀಸರ್ ಕೂಡ ಇಂದು ರಿಲೀಸ್ ಆಗಲಿದೆ. ಬೆಂಗಳೂರಿನ ಊರ್ವಶಿ ಚಿತ್ರಮಂದಿರದಲ್ಲಿ ಹುಟ್ಟುಹಬ್ಬದ ಸಂಭ್ರಮಾಚರಣೆ ನಡೆಯಲಿದೆ.

Exit mobile version