777 Charlie: ಜಪಾನಿನಲ್ಲಿ `777 ಚಾರ್ಲಿ ಹವಾ': ವರ್ಲ್ಡ್​​ ಟೂರ್‌ಗೆ ಧರ್ಮ ಹಾಗೂ ಚಾರ್ಲಿ ರೆಡಿ! - Vistara News

ಸ್ಯಾಂಡಲ್ ವುಡ್

777 Charlie: ಜಪಾನಿನಲ್ಲಿ `777 ಚಾರ್ಲಿ ಹವಾ’: ವರ್ಲ್ಡ್​​ ಟೂರ್‌ಗೆ ಧರ್ಮ ಹಾಗೂ ಚಾರ್ಲಿ ರೆಡಿ!

777 Charlie: ಕನ್ನಡ ಸಿನಿಮಾಗಳು ಬೇರೆ ದೇಶದ ಭಾಷೆಗಳಿಗೆ ಡಬ್ ಆಗಿ ರಿಲೀಸ್ ಆಗುವುದು ಹೆಚ್ಚಾಗಿದೆ. ‘KGF’ ಹಾಗೂ ‘ಕಾಂತಾರ’ ಚಿತ್ರಗಳು ಇದೇ ರೀತಿ ಸದ್ದು ಮಾಡಿತ್ತು. ಇದೀಗ ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ (Rakshit Shetty) ಅಭಿನಯದ `777 ಚಾರ್ಲಿ’ (777 Charlie) ಚಿತ್ರ ಜಪಾನೀಸ್ ಭಾಷೆಯಲ್ಲಿ ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ರಷ್ಯಾ, ಲ್ಯಾಟಿನ್ ಅಮೆರಿಕ, ತೈವಾನ್, ಜರ್ಮನಿ ಹಾಗೂ ಇನ್ನಿತರ ದೇಶಗಳಲ್ಲಿ ಬಿಡುಗಡೆಯಾಗಲಿದೆ.

VISTARANEWS.COM


on

777 Charlie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪರಂವಃ ಸ್ಟುಡಿಯೋಸ್ (paramvah studios) ನಿರ್ಮಾಣದ, ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ (Rakshit Shetty) ಅಭಿನಯದ `777 ಚಾರ್ಲಿ’ (777 Charlie) ಚಿತ್ರ ಇದೀಗ ಜಪಾನೀಸ್ ಭಾಷೆಯಲ್ಲಿ ಬಿಡುಗಡೆಯಾಗಿದೆ. ಇಂದೇ (ಜೂ.28) ಜಪಾನ್ ದೇಶದ ಪ್ರಮುಖ ನಗರಗಳಲ್ಲಿ ಚಿತ್ರ ತೆರೆ ಕಂಡಿದೆ.

ಜಪಾನ್ ಚಿತ್ರರಂಗದಲ್ಲಿ 1೦೦ ವರ್ಷಕ್ಕೂ ಹೆಚ್ಚು ಅನುಭವ ಹೊಂದಿರುವ “ಶೋಚಿಕೋ ಮೂವಿ” (Shochiku Movie) ಎಂಬ ಸಂಸ್ಥೆ ಈ ಜಪಾನಿನಲ್ಲಿ ವಿತರಣೆ ಮಾಡಿದೆ. ವಿಶೇಷವೆಂದರೆ, ಇದೇ ಸಂಸ್ಥೆಯು ಈ ಹಿಂದೆ “Hachi: A Dog’s Tale” ಎಂಬ ಚಿತ್ರವನ್ನು ಜಪಾನಿನಲ್ಲಿ ವಿತರಣೆ ಮಾಡಿತ್ತು. ಕಳೆದ ವರ್ಷ ಥೈಲ್ಯಾಂಡ್‌ನಲ್ಲಿ ಡಬ್ ಆಗಿ ಬಿಡುಗಡೆಗೊಂಡ `777 ಚಾರ್ಲಿ’ ಚಿತ್ರ, ಮುಂದಿನ ದಿನಗಳಲ್ಲಿ ರಷ್ಯಾ, ಲ್ಯಾಟಿನ್ ಅಮೆರಿಕ, ತೈವಾನ್, ಜರ್ಮನಿ ಹಾಗೂ ಇನ್ನಿತರ ದೇಶಗಳಲ್ಲಿ ಬಿಡುಗಡೆಯಾಗಲಿದೆ.

ಇತ್ತೀಚೆಗೆ ಕನ್ನಡ ಸಿನಿಮಾಗಳು ಬೇರೆ ದೇಶದ ಭಾಷೆಗಳಿಗೆ ಡಬ್ ಆಗಿ ರಿಲೀಸ್ ಆಗುವುದು ಹೆಚ್ಚಾಗಿದೆ. ‘KGF’ ಹಾಗೂ ‘ಕಾಂತಾರ’ ಚಿತ್ರಗಳು ಇದೇ ರೀತಿ ಸದ್ದು ಮಾಡಿತ್ತು. 2೦22ರ ಜೂನ್ 10 ರಂದು ‘777 ಚಾರ್ಲಿ’ ಸಿನಿಮಾ 5 ಭಾಷೆಗಳಲ್ಲಿ ಬಿಡುಗಡೆಯಾಗಿ ಎಲ್ಲಾ ವರ್ಗದ ಪ್ರೇಕ್ಷಕರನ್ನು ಭಾವನಾತ್ಮಕವಾಗಿ ಸೆಳೆದಿತ್ತು. ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡ ಈ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಗರಿ ಕೂಡ ಲಭಿಸಿತ್ತು.

ಇದನ್ನೂ ಓದಿ: Rakshit Shetty: ʻರಿಚರ್ಡ್​ ಆಂಟನಿʼಯಲ್ಲಿ ಕರಾವಳಿ ಕಲಾವಿದರಿಗೆ ಮೊದಲ ಆದ್ಯತೆ ಅಂದ್ರಾ ರಕ್ಷಿತ್‌ ಶೆಟ್ಟಿ?

ಕಥೆ ಏನು?

ಪೋಷಕರನ್ನು ಕಳೆದುಕೊಂಡು ಗೊತ್ತು ಗುರಿಯಿಲ್ಲದೇ ತನ್ನದೇ ಪ್ರಪಂಚದಲ್ಲಿ ಯಾಂತ್ರಿಕ ಬದುಕು ನಡೆಸುತ್ತಿರುವ ಧರ್ಮ. ಅಚಾನಕ್ ಆಗಿ ಆತನ ಬದುಕಿಗೆ ನಾಯಿಯೊಂದು ಎಂಟ್ರಿ ಕೊಡುತ್ತದೆ. ಕಳೆಗುಂದಿದ ಆತನ ಬದುಕಿಗೆ ಆ ನಾಯಿ ಬಣ್ಣ ತುಂಬುತ್ತದೆ. ಅದಕ್ಕೆ ‘777 ಚಾರ್ಲಿ’ ಎಂದು ನಾಮಕರಣ ಮಾಡುತ್ತಾನೆ. ಇಂಟರ್‌ವಲ್ ವೇಳೆಗೆ ಕಥೆಗೆ ತಿರುವು ಸಿಗುತ್ತದೆ.

ಅತ್ಯುತ್ತಮ ಸಿನಿಮಾ

69ನೇ ರಾಷ್ಟ್ರೀಯ ಚಲನಚಿತ್ರ (National Film Awards 2023) ಪ್ರಶಸ್ತಿ ಪ್ರಾದೇಶಿಕ ಸಿನಿಮಾ ವಿಭಾಗದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಕನ್ನಡದ ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು. 777 ಚಾರ್ಲಿ ಸಿನಿಮಾ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುವುದಕ್ಕೂ ಮೊದಲೇ ಚಿತ್ರತಂಡ ಹಲವು ಕಡೆಗಳಲ್ಲಿ ಪ್ರೀಮಿಯರ್‌ ಶೋ ಏರ್ಪಡಿಸಿತ್ತು. ಇಲ್ಲಿಯೂ ಸಹ ಜನರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಚಿತ್ರದ ಪ್ರಸಾರದ ಹಕ್ಕು ಕೂಡ ಒಳ್ಳೆಯ ಮೊತ್ತಕ್ಕೆ ಮಾರಾಟವಾಗಿತ್ತು.

ರಾಜ್‌ ಬಿ ಶೆಟ್ಟಿ, ದಾನಿಶ್‌ ಸೇಠ್‌, ಸಂಗೀತಾ ಶೃಂಗೇರಿ, ತಮಿಳಿನ ಬಾಬಿ ಸಿಂಹ ನಟಿಸಿದ್ದರು. ಕಿರಣ್‌ ರಾಜ್‌ ಈ ಚಿತ್ರದ ನಿರ್ದೇಶಕರಾಗಿದ್ದು, ರಕ್ಷಿತ್‌ ಶೆಟ್ಟಿ ತಮ್ಮ ಹೋಮ್‌ ಬ್ಯಾನರ್‌ ಪರಂವಃ ಸ್ಟುಡಿಯೋಸ್ ಅಡಿಯಲ್ಲಿ ಚಿತ್ರ ನಿರ್ದೇಶಿಸಿದ್ದರು. ನೋಬಿನ್‌ ಪೌಲ್‌ ಸಂಗೀತ ಮತ್ತು ಹಿನ್ನೆಲೆ ಸಂಗೀತ ನೀಡಿದ್ದು, ಅರವಿಂದ್‌ ಕಶ್ಯಪ್‌ ಛಾಯಾಗ್ರಹಣ ಮಾಡಿದ್ದರು. ಪ್ರತೀಕ್‌ ಶೆಟ್ಟಿ ಸಂಕಲನ, ಪ್ರಗತಿ ರಿಷಬ್‌ ಶೆಟ್ಟಿ ಅವರ ವಸ್ತ್ರ ವಿನ್ಯಾಸ ಈ ಚಿತ್ರಕ್ಕಿದೆ. ಚಿತ್ರದ ಹಿಂದಿ ಅವತರಣಿಕೆಗೆ ಸಂಜಯ್‌ ಉಪಾಧ್ಯ ಸಂಭಾಷಣೆ ನೀಡಿದ್ದು, ಹಾಡುಗಳಿಗೆ ಹಿಂದಿಯಲ್ಲಿ ಶೈನಿ ದಾಸ್‌, ಕಾರ್ತಿಕಾ ನೈನನ್‌ ದುಬೆ, ಮಾನ್ಸಾ ಪಾಂಡೆ, ಅಲೆಕ್ಸ್‌ ಡಿಸೋಜಾ, ಸಾಯೇಶ್‌ ಪೈ ಪನಂಡಿಕರ್ ಸಾಹಿತ್ಯ ನೀಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Kannada New Movie: ‘ಗಾಡ್ ಪ್ರಾಮಿಸ್’ ಚಿತ್ರಕ್ಕೆ ಮುನ್ನುಡಿ; ಆನೆಗುಡ್ಡೆ ಗಣಪತಿ ದೇಗುಲದಲ್ಲಿ ಮುಹೂರ್ತ

Kannada New Movie: ಯುವ ಪ್ರತಿಭೆ ಸೂಚನ್ ಶೆಟ್ಟಿ ನಟಿಸಿ ನಿರ್ದೇಶನ ಮಾಡುತ್ತಿರುವ ಚೊಚ್ಚಲ ಪ್ರಯತ್ನ ʼಗಾಡ್ ಪ್ರಾಮಿಸ್ʼ ಸಿನಿಮಾಕ್ಕೆ ಉಡುಪಿ ಜಿಲ್ಲೆಯ ಕುಂದಾಪುರದ ಆನೆಗುಡ್ಡೆ ಗಣಪತಿ ದೇಗುಲದಲ್ಲಿ ಮುಹೂರ್ತ ನೆರವೇರಿದೆ. ʼಕಾಂತಾರʼ ಸರಣಿ ಸಿನಿಮಾಗಳ ಮುಹೂರ್ತ ಕೂಡ ಇದೇ ದೇಗುಲದಲ್ಲಿ ನಡೆದಿರುವುದು ವಿಶೇಷ.

VISTARANEWS.COM


on

Kannada New Movie
Koo

ಬೆಂಗಳೂರು: ಯುವ ಪ್ರತಿಭೆ ಸೂಚನ್ ಶೆಟ್ಟಿ ನಟಿಸಿ ನಿರ್ದೇಶನ ಮಾಡುತ್ತಿರುವ ಚೊಚ್ಚಲ ಪ್ರಯತ್ನ ʼಗಾಡ್ ಪ್ರಾಮಿಸ್ʼ (God Promise) ಸಿನಿಮಾಕ್ಕೆ ಮುನ್ನುಡಿ ಸಿಕ್ಕಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಆನೆಗುಡ್ಡೆಯ ಗಣಪತಿ ದೇಗುಲದಲ್ಲಿ ಮುಹೂರ್ತ ನೆರವೇರಿದದ್ದು, ನಟ ಪ್ರಮೋದ್ ಶೆಟ್ಟಿ ಹಾಗೂ ಸಂಗೀತ ನಿರ್ದೇಶಕ ರವಿ ಬಸ್ರೂರು ಸೂಚನ್ ಕನಸಿಗೆ ಸಾಥ್ ಕೊಟ್ಟಿದ್ದಾರೆ. ‘ಗಾಡ್ ಪ್ರಾಮಿಸ್’ ಸಿನಿಮಾಗೆ ರವಿ ಬಸ್ರೂರ್ ಕ್ಲ್ಯಾಪ್ ಮಾಡಿದ್ದು, ಪ್ರಮೋದ್ ಶೆಟ್ಟಿ ಕ್ಯಾಮರಾಕ್ಕೆ ಚಾಲನೆ ನೀಡಿದರು. ʼಕಾಂತಾರʼ ಸರಣಿ ಸಿನಿಮಾಗಳ ಮುಹೂರ್ತ ಕೂಡ ಇದೇ ದೇಗುಲದಲ್ಲಿ ನಡೆದಿರುವುದು ವಿಶೇಷ.

ಸೂಚನ್ ಶೆಟ್ಟಿ ಮಾತನಾಡಿ, ʼʼಗಾಡ್ ಪ್ರಾಮಿಸ್ʼ ಚಿತ್ರದ ಮುಹೂರ್ತ ಇಂದು ನೆರವೇರಿದೆ. ಕಳೆದ ಆರೇಳು ತಿಂಗಳಿನಿಂದ ಈ ಚಿತ್ರಕ್ಕೆ ಪ್ರೀ ಪ್ರೊಡಕ್ಷನ್ ಕೆಲಸ ಶುರು ಮಾಡಿದ್ದೇವೆ. 2015ರಿಂದ ರವಿ ಬಸ್ರೂರು ಜತೆ ಕೆಲಸ ಮಾಡುತ್ತಿದ್ದೇನೆ. ಈಗ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದೇನೆ. ಸಿನಿಮಾ ಕುಂದಾಪುರ ಸುತ್ತಮುತ್ತ ನಡೆಯುತ್ತಿದೆ. ಫ್ಯಾಮಿಲಿ ಡ್ರಾಮಾ ಕಥೆಯನ್ನು ಒಳಗೊಂಡಿದೆ. ಆಡಿಷನ್ ನಡೆಸಿದ್ದೇವೆ. ಯಾರು ಆಯ್ಕೆಯಾಗಿದ್ದಾರೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ. ರವಿ ಸರ್‌ಗೆ ನನಗೆ ಗುರುಗಳು. ಡೈರೆಕ್ಟನ್ ತಂಡದ ಜತೆಗೆ ʼಕಟಕʼ, ʼಗಿರ್ಮಿಟ್ʼ ಸಿನಿಮಾಗಳ ಬರವಣಿಗೆಯಲ್ಲಿಯೂ ತೊಡಗಿಸಿಕೊಂಡಿದ್ದೆ. ಹೀಗಾಗಿ ಆ ಅನುಭವದ ಇಟ್ಟುಕೊಂಡು ನಿರ್ದೇಶನಕ್ಕೆ ಇಳಿದಿದ್ದೇನೆʼʼ ಎಂದರು.

ರವಿ ಬಸ್ರೂರ್ ಮಾತನಾಡಿ, ʼʼಒಂದು ಸಿನಿಮಾ ಮಾಡುವುದರಿಂದ ಎಷ್ಟೋ ಜನ ಕಲಾವಿದರ ಭವಿಷ್ಯ ನಿರ್ಧಾರವಾಗುತ್ತದೆ. ನಮ್ಮ ಕರಾವಳಿಯವರಿಗೆ ಒಳ್ಳೆ ಫ್ಲಾಟ್ ಫಾರಂ ಸಿಗುತ್ತಿಲ್ಲ. ಆ ನಿಟ್ಟಿನಲ್ಲಿ ನಮ್ಮ ಜತೆ ಬಂದವರಿಗೆ ಎಲ್ಲ ಕೆಲಸ ಕಲಿಯಿರಿ ಎಂದು ಹೇಳುತ್ತೇನೆ. ಒಂದು ಸಿನಿಮಾದಿಂದ ಎಷ್ಟೋ ಜನರ ಬದುಕು ಹಸನಾಗಲಿ. ಇವರ ರೀತಿ ನಮ್ಮ ಭಾಗದಲ್ಲಿ ನೂರಾರು ಸಿನಿಮಾಗಳು ಆಗಲಿ. ಇಡೀ ತಂಡಕ್ಕೆ ಒಳ್ಳೆದಾಗಲಿʼʼ ಎಂದು ಹಾರೈಸಿದರು.

ನಟ ಪ್ರಮೋದ್ ಶೆಟ್ಟಿ ಮಾತನಾಡಿ, ʼʼಸೂಚನ್ ಯಾವುದೇ ಕೆಲಸ ಮಾಡಿದ್ರೂ ಅಚ್ಚುಕಟ್ಟಾಗಿ ಮಾಡಿ ಮುಗಿಸ್ತಾರೆ. ನಟನೆ, ನಿರ್ದೇಶನ ಎರಡು ಒಟ್ಟಿಗೆ ಮಾಡುತ್ತಿರುವುದರಿಂದ ಎಲ್ಲರೂ ಒಟ್ಟಿಗೆ ಸೇರಿ ಮುಂದುವರಿಯಲಿ. ಒಂದೊಳ್ಳೆ ತಂಡವಾಗಿ ಹೊರ ಹೊಮ್ಮಲಿ. ನನ್ನ ಪ್ರಕಾರ ಈ ಸಿನಿಮಾ ತುಂಬಾ ಚೆನ್ನಾಗಿ ಬರಲಿದೆ ಎಂಬ ಭರವಸೆ ಇದೆ. ಒಳ್ಳೆ ಬಜೆಟ್ ಕೂಡ ಇದೆ. ಸೂಚನ್ ನಮ್ಮ ಸಿನಿಮಾದಲ್ಲಿ ಅದ್ಭುತವಾಗಿ ನಟಿಸಿದ್ದಾನೆ. ಇಡೀ ತಂಡದ ಮೇಲೆ ನಿಮ್ಮ ಬೆಂಬಲ ಇರಲಿದೆʼʼ ಎಂದು ಹೇಳಿದರು.

ನಿರ್ಮಾಪಕ ಮೈತ್ರಿ ಮಂಜುನಾಥ್ ಮಾತನಾಡಿ, ʼʼನಾವು ಈ ಹಿಂದೆ ʼಹಫ್ತಾʼ ಸಿನಿಮಾ ಮಾಡಿದ್ದೇವೆ. ಇದು ನನ್ನ ಎರಡನೇ ಸಿನಿಮಾ. ಗಾಡ್ ಪ್ರಾಮಿಸ್ ಸಿನಿಮಾದ ಸ್ಕ್ರೀಪ್ಟ್ ತುಂಬಾ ಚೆನ್ನಾಗಿದೆ. ಒಳ್ಳೆ ಅನುಭವ ತಂಡದೊಂದಿಗೆ ಕೈ ಜೋಡಿಸಿದೆʼʼ ಎಂದರು.

ʼಗಾಡ್ ಪ್ರಾಮಿಸ್ʼ ಸಿನಿಮಾ ಮೂಲಕ ಸೂಚನ್ ಶೆಟ್ಟಿ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದು, ಅವರ ಹೊಸ ಪಯಣಕ್ಕೆ ಮೈತ್ರಿ ಮಂಜುನಾಥ್ ಬಲ ತುಂಬಿದ್ದಾರೆ. ಚಿತ್ರವನ್ನು ಮೈತ್ರಿ ಪ್ರೊಡಕ್ಷನ್‌ನಡಿ ಮಂಜುನಾಥ್ ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ಕರಾವಳಿಯ ಭೂಗತ ಕಥೆ ʼಹಫ್ತಾʼ ಸಿನಿಮಾವನ್ನು ಇದೇ ಸಂಸ್ಥೆ ನಿರ್ಮಾಣ ಮಾಡಿತ್ತು. ನೈಜ ಘಟನೆಯ ಸ್ಫೂರ್ತಿ ಪಡೆದ ಫ್ಯಾಮಿಲಿ ಹಾಗೂ ಕಾಮಿಡಿ ಕಥಾಹಂದರ ಸಿನಿಮಾಗೆ ಗುರುಪ್ರಸಾದ್ ನರ್ನಾಡ್ ಛಾಯಾಗ್ರಹಣ, ಭರತ್ ಮಧುಸೂದನನ್ ಸಂಗೀತ ನಿರ್ದೇಶನ, ನವೀನ್ ಶೆಟ್ಟಿ ಸಂಕಲನ ಚಿತ್ರಕ್ಕಿದೆ. ಸದ್ಯ ಮುಹೂರ್ತ ಮುಗಿಸಿಕೊಂಡಿರುವ ಚಿತ್ರತಂಡ ಶೀಘ್ರದಲ್ಲೇ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ರೂಪೇಶ್ ಶೆಟ್ಟಿ-ಜಾಹ್ನವಿ ಸಿನಿಮಾ ಆಡಿಯೊ ರೈಟ್ಸ್!

Continue Reading

ಕ್ರೈಂ

Roopa Iyer: ನಿರ್ದೇಶಕಿ ರೂಪಾ ಅಯ್ಯರ್‌ಗೂ ಆನ್‌ಲೈನ್‌ ಕಳ್ಳರ ಕಾಟ; ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ 30 ಲಕ್ಷ ರೂ.ಗೆ ಬೇಡಿಕೆ

Roopa Iyer: ಸ್ಯಾಂಡಲ್‌ವುಟ್‌ ನಿರ್ದೇಶಕಿ, ನಟಿ ಅವರಿಗೂ ಆನ್‌ಲೈನ್‌ ಕಳ್ಳರು ಕಾಟ ಕೊಟ್ಟಿದ್ದಾರೆ. ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ 30 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ. ವಂಚನೆಯ ವಾಸಗೆ ಬರುತ್ತಿದ್ದಂತೆ ಎಚ್ಚೆತ್ತ ಅವರು ಇದೀಗ ಸೈಬರ್‌ ಕ್ರೈಂಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

VISTARANEWS.COM


on

Roopa Iyer
Koo

ಬೆಂಗಳೂರು: ಸೈಬರ್‌ ಕ್ರೈಮ್‌ (Cyber Crime)ಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬ್ಲ್ಯಾಕ್‌ ಮೇಲ್‌, ವಿಶೇಷ ಕೊಡುಗೆ, ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡುವ ಅಪರಾಧಿಗಳು ಹಣ ದೋಚುವ ಅದೆಷ್ಟೋ ಪ್ರಸಂಗಗಳು ವರದಿಯಾಗುತ್ತಿವೆ. ಪೊಲೀಸರು ಎಷ್ಟು ಕ್ರಮ ಕೈಗೊಂಡರೂ ಇದಕ್ಕೆ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ. ಇದೀಗ ಸ್ಯಾಂಡಲ್‌ವುಡ್‌ ನಿರ್ದೇಶಕಿ, ನಟಿ ರೂಪಾ ಅಯ್ಯರ್ (Roopa Iyer) ಅವರಿಗೂ ಇಂತಹದ್ದೇ ಅನುಭವವಾಗಿದೆ. ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿದ ಅಪರಾಧಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಕೂಡಲೇ ಎಚ್ಚೆತ್ತ ರೂಪಾ ಅಯ್ಯರ್ ಪೊಲೀಸರಿಗೆ ದೂರು ನೀಡಿದ್ದಾರೆ. ಬುಧವಾರ (ಮೇ 8) ಮಧ್ಯಾಹ್ನದಿಂದ ಗುರುವಾರ ಬೆಳಗ್ಗೆ ತನಕವೂ ತಮ್ಮನ್ನು ಡಿಜಿಟಲ್ ಅರೆಸ್ಟ್ ಮಾಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಪ್ರಕರಣದ ವಿವರ

ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯರ್ ಮನಿ ಲ್ಯಾಂಡ್ರಿಂಗ್ ಪ್ರಕರಣದ ವಿಚಾರಣೆ ನೆಪದಲ್ಲಿ ಕರೆ ಮಾಡಿದ್ದ ವಂಚಕರು 30 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು ಎಂದು ರೂಪಾ ಅಯ್ಯರ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ʼʼಬುಧವಾರ ಮಧ್ಯಾಹ್ನ ಅಪರಿಚಿತ ನಂಬರ್‌ನಿಂದ ಕರೆ ಬಂತು. ತಾವು ಸಿಸಿಬಿ ಅಧಿಕಾರಿಗಳೆಂದು ಕರೆ ಮಾಡಿದ್ದವರು ತಿಳಿಸಿದರು. ಗಾಬರಿಯಿಂದ ಯಾಕೆಂದು ಪ್ರಶ್ನಿಸಿದೆ. ನರೇಶ್ ಗೋಯಲ್ ಮನಿ ಲ್ಯಾಂಡ್ರಿಂಗ್ ಕೇಸ್‌ನಲ್ಲಿ ನಿಮ್ಮ ಹೆಸರಿದೆ. ಹೀಗಾಗಿ ವಿಚಾರಣೆ ನಡೆಸಬೇಕಿದೆ ಎಂದು ಹೇಳಿದ್ದರುʼʼ ಎಂದು ರೂಪಾ ತಿಳಿಸಿದ್ದಾರೆ.

ʼʼಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೇಶದಲ್ಲಿ 247 ಮಂದಿಯನ್ನು ಗುರುತಿಸಲಾಗಿದೆ. ಈ ಪೈಕಿ ನೀವು ಕೂಡ ಒಬ್ಬರು. ನಿಮ್ಮ ಆಧಾರ್‌ ಕಾರ್ಡ್ ಬಳಸಿಕೊಂಡು ಸಿಮ್ ಖರೀದಿಸಲಾಗಿದೆ. ಅದರ ಮೂಲಕ ದೇಶದ್ರೋಹದ ಚಟುವಟಿಕೆ ನಡೆಸಲಾಗಿದೆ. ಈಗಾಗಲೇ ಈ ಕುರಿತು ಮುಂಬೈಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಕರೆ ಮಾಡಿದ್ದವರು ಹೆದರಿಸಿದ್ದರು. ಇದರಿಂದ ಗಾಬರಿಯಾಯಿತುʼʼ ಎಂದು ರೂಪಾ ಘಟನೆಯ ವಿವರ ನೀಡಿದ್ದಾರೆ.

ʼʼನೀವು ಸೆಲೆಬ್ರಿಟಿ ಆಗಿರುವುದರಿಂದ ನಾವು ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡುತ್ತಿಲ್ಲ. ಒಂದು ವೇಳೆ ಈ ಪ್ರಕರಣದಿಂದ ನೀವು ತಪ್ಪಿಸಿಕೊಳ್ಳಬೇಕು ಎಂದಾದರೆ 30 ಲಕ್ಷ ರೂ. ನೀಡಿ ಎಂದು ಕರೆ ಮಾಡಿದ್ದವರು ಹೇಳಿದರು. ಯಾವಾಗ ಅವರು ಹಣದ ಬೇಡಿಕೆ ಇಟ್ಟರೋ ಆಗ ಅನುಮಾನ ಶುರುವಾಯ್ತು. ಕೂಡಲೇ ಎಚ್ಚೆತ್ತು ಸೈಬರ್ ಕ್ರೈಂಗೆ ದೂರು ನೀಡಿದೆʼʼ ಎಂದು ಅವರು ಹೇಳಿದ್ದಾರೆ.

ʼʼಆನ್‌ಲೈನ್ ವಂಚಕರು ಪ್ರಭಾವಿಗಳನ್ನು ಯಾಮಾರಿಸಿ ಹಣ ದೋಚಲು ಮುಂದಾಗಿದ್ದಾರೆ. ವಂಚಕರು ನನ್ನನ್ನು ನಂಬಿಸಲು ಸಿಬಿಐ ಹೆಸರಿನಲ್ಲಿ ನಕಲಿ ನೋಟಿಸ್ ಕೂಡ ಕಳುಹಿಸಿದ್ದಾರೆ. ಒಂದು ವೇಳೆ ಅವರ ಮಾತನ್ನು ನಂಬಿದ್ದರೆ ಲಕ್ಷಾಂತರ ರೂ. ಕಳೆದುಕೊಳ್ಳಬೇಕಾಗಿತ್ತುʼʼ ಎಂದು ರೂಪಾ ತಮ್ಮ ಕರಾಳ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ನಿಮಗೂ ಇಂತಹ ಕರೆ ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಎಂದು ಅಧಿಕಾರಿಗಳು ಸಾವರ್ಜನಿಕರು, ಸೆಲೆಬ್ರಿಟಿಗಳಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Cyber Crime : ಸೈಬರ್‌ ಕ್ರೈಂನಡಿ ಬಂಧನದಿಂದ ಮಾಳವಿಕಾ ಅವಿನಾಶ್ ಪಾರು; ಕೆಜಿಎಫ್‌ನಲ್ಲಿ ನಟಿಸಿದ್ದೇ ವರವಾಯ್ತು!

Continue Reading

ಸ್ಯಾಂಡಲ್ ವುಡ್

Actor Ravichandran: ಕನಸುಗಾರನ ʻಪ್ರೇಮಲೋಕ 2’ ಚಿತ್ರಕ್ಕೆ ನಾಯಕಿ ಫಿಕ್ಸ್‌!

Actor Ravichandran: 1987ರಲ್ಲಿ ರಿಲೀಸ್ ಆದ ‘ಪ್ರೇಮಲೋಕ’ ಸಿನಿಮಾ ರವಿಚಂದ್ರನ್ ಅವರೇ ನಿರ್ಮಾಣ ಮಾಡಿ, ನಟಿಸಿ, ನಿರ್ದೇಶನ ಮಾಡಿದ್ದರು. ಅಂದಿನ ಕಾಲಕ್ಕೆ ಈ ಸಿನಿಮಾ ಬರೋಬ್ಬರಿ 11 ಹಾಡುಗಳನ್ನು ಹೊಂದಿತ್ತು. ಈ ಕಾರಣಗಳಿಂದಾಗಿ ಯಾರೋಬ್ಬ ನಿರ್ಮಾಪಕರು ಮುಂದೆ ಬರಲೇ ಇಲ್ಲ. ಹೀಗಾಗಿ ರವಿಚಂದ್ರನ್‌ ಅವರೇ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಈ ವೇಳೆ ಬೆಂಬಲಕ್ಕೆ ನಿಂತಿದ್ದು ರವಿಚಂದ್ರನ್ ತಂದೆ ವೀರಸ್ವಾಮಿ. ಇದಾದ ಬಳಿಕ ಸಿನಿಮಾ ಗೆಲುವು ಕಂಡಿತ್ತು.

VISTARANEWS.COM


on

Actor Ravichandran female lead in ravichandrans premaloka 2
Koo

ಬೆಂಗಳೂರು: ಹಂಪಿ ಉತ್ಸವದ ಸಮಯದಲ್ಲಿ ಕ್ರೇಜಿ ಸ್ಟಾರ್‌ ರವಿಚಂದ್ರನ್‌ (Actor Ravichandran) ಅವರು ಒಂದು ವರ್ಷದಿಂದ ಪ್ರೇಮಲೋಕ ಸಿನಿಮಾಗೆ ತಯಾರಿ ನಡೆಸುತ್ತಿರುವುದಾಗಿ ಹೇಳಿಕೊಂಡಿದ್ದರು. ಈ ಮೂಲಕ ‘ಪ್ರೇಮಲೋಕ 2’ ಶೀಘ್ರದಲ್ಲಿಯೇ ಅನೌನ್ಸ್ ಆಗಲಿದೆ ಎಂಬ ಸುಳಿವು ನೀಡಿದ್ದರು. ಶೀಘ್ರದಲ್ಲೇ ಆ ಸಿನಿಮಾ ಸೆಟ್ಟೇರಲಿದೆ. ಪುತ್ರ ಮನೋರಂಜನ್ ಹೀರೊ ಆಗಿ ನಟಿಸಲಿದ್ದಾರೆ. ಸದ್ಯ ರವಿಚಂದ್ರನ್ ‘ಪ್ರೇಮಲೋಕ’-2 ಚಿತ್ರದ ಕಥೆ, ಚಿತ್ರಕಥೆ ಸಿದ್ಧಪಡಿಸುತ್ತಿದ್ದಾರೆ.

‘ಪ್ರೇಮಲೋಕ’ ಚಿತ್ರಕ್ಕಾಗಿ ಜ್ಯೂಹಿ ಚಾವ್ಲಾ ಕನ್ನಡಕ್ಕೆ ಬಂದಿದ್ದರು. ಆದರೆ ಈ ಬಾರಿ ಮನೋರಂಜನ್ ಜತೆ ಚೆನ್ನೈ ಚೆಲುವೆ ತೇಜು ಅಶ್ವಿನಿ ರೊಮ್ಯಾನ್ಸ್ ಮಾಡುತ್ತಾರೆ ಎನ್ನುವ ಗುಸುಗುಸು ಶುರುವಾಗಿದೆ. ಮೇ 30 ರವಿಚಂದ್ರನ್ ಅವರ ಬರ್ತ್​ಡೇ. ಅಂದು ‘ಪ್ರೇಮಲೋಕ 2’ ಚಿತ್ರ ಲಾಂಚ್ ಆಗಲಿದೆ. ರವಿಚಂದ್ರನ್ ಅವರ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಅನ್ನೋ ಕುತೂಹಲ ಮೂಡಿದೆ. ಈ ಚಿತ್ರದಲ್ಲಿ 20-25 ಸಾಂಗ್​ಗಳು ಇರಲಿವೆ ಎಂದು ತಂಡ ಹೇಳಿಕೊಂಡಿದೆ.

1987ರಲ್ಲಿ ರಿಲೀಸ್ ಆದ ‘ಪ್ರೇಮಲೋಕ’ ಸಿನಿಮಾ ರವಿಚಂದ್ರನ್ ಅವರೇ ನಿರ್ಮಾಣ ಮಾಡಿ, ನಟಿಸಿ, ನಿರ್ದೇಶನ ಮಾಡಿದ್ದರು. ಅಂದಿನ ಕಾಲಕ್ಕೆ ಈ ಸಿನಿಮಾ ಬರೋಬ್ಬರಿ 11 ಹಾಡುಗಳನ್ನು ಹೊಂದಿತ್ತು. ಈ ಕಾರಣಗಳಿಂದಾಗಿ ಯಾರೋಬ್ಬ ನಿರ್ಮಾಪಕರು ಮುಂದೆ ಬರಲೇ ಇಲ್ಲ. ಹೀಗಾಗಿ ರವಿಚಂದ್ರನ್‌ ಅವರೇ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಈ ವೇಳೆ ಬೆಂಬಲಕ್ಕೆ ನಿಂತಿದ್ದು ರವಿಚಂದ್ರನ್ ತಂದೆ ವೀರಸ್ವಾಮಿ. ಇದಾದ ಬಳಿಕ ಸಿನಿಮಾ ಗೆಲುವು ಕಂಡಿತ್ತು.

ಇದನ್ನೂ ಓದಿ: Pepper Spray: ಪೆಪ್ಪರ್‌ ಸ್ಪ್ರೇ ಬಹಳ ಡೇಂಜರ್‌..ಅದನ್ನು ರಕ್ಷಣೆಗೆ ಬಳಸುವಂತಿಲ್ಲ- ಹೈಕೋರ್ಟ್‌

ಈ ಮುಂಚೆ ರವಿಚಂದ್ರನ್‌ ಅವರು ʻʻದೊಡ್ಡ ಮಗ ಮನೋರಂಜನ್ ನಟಿಸುತ್ತಾನೆ. ಚಿಕ್ಕ ಮಗ ಚಿಕ್ಕ ಪಾತ್ರ ಮಾಡುತ್ತಾನೆ. ನಾನು ತಂದೆಯ ಪಾತ್ರ ಮಾಡುತ್ತೇನೆ. 20-25 ಹಾಡುಗಳು ಇರುತ್ತವೆ. ಎಲ್ಲಾ ವಯಸ್ಸಿನವರಿಗೂ ಸಿನಿಮಾ ಇಷ್ಟ ಆಗುತ್ತದೆ. ಇಲ್ಲಿ ಜಾತಿ, ರಾಜಕೀಯದ ವಿಚಾರ ಇರಲ್ಲ. ಕೇವಲ ಪ್ರೀತಿ ವಿಚಾರ ಇರಲಿದೆ. ಪ್ರತಿಯೊಬ್ಬರಿಗೂ ಸಿನಿಮಾದಲ್ಲಿ ನಟಿಸುವ ಅವಕಾಶ ಇದೆ. ಸಿನಿಮಾದಲ್ಲಿ ಯಾರೆಲ್ಲ ನಟಿಸಬೇಕು ಎಂದಿದ್ದೀರೋ ಇನ್​ಸ್ಟಾಗ್ರಾಮ್‌ ಅಕೌಂಟ್​ಗೆ ಫ್ಯಾಮಿಲಿ ಫೋಟೊ ಹಾಕ್ಕೊಂಡು ಬನ್ನಿʼಎಂದಿದ್ದರು.

Continue Reading

ಸ್ಯಾಂಡಲ್ ವುಡ್

Srinidhi Shetty: ಕೋಲ ಸೇವೆ ಸಲ್ಲಿಸಿದ ಕೆಜಿಎಫ್‌ ಬೆಡಗಿ; ಶ್ರೀನಿಧಿ ಶೆಟ್ಟಿಗೆ ದೈವ ಅಭಯ ನೀಡಿದ್ದೇನು?

Srinidhi Shetty: ತುಳುನಾಡಿನ ಅನೇಕ ಕಲಾವಿದರು ಸಿನಿಮಾ ಕ್ಷೇತ್ರಗಳಲ್ಲಿ ಮಿಂಚುತ್ತಿದ್ದಾರೆ. ಅವರಲ್ಲಿ ಕೆಜಿಎಫ್‌ ಚಿತ್ರದ ನಾಯಕಿ ಶ್ರೀನಿಧಿ ಶೆಟ್ಟಿ ಅವರೂ ಕೂಡ ಒಬ್ಬರು. ಇಡೀ ಭಾರತೀಯ ಚಿತ್ರರಂಗವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ್ದ ಕೆಜಿಎಫ್‌ ಚಿತ್ರದಲ್ಲಿ ಶ್ರೀನಿಧಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.. ಶ್ರೀನಿಧಿ ಶೆಟ್ಟಿಯವರು ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನೆರವೇರಿಸಿದ್ದಾರೆ. ಮಂಗಳೂರಿನ ಹೊರವಲಯದ ಕಿನ್ನಿಗೋಳಿ ತಮ್ಮ ಕುಟುಂಬದ ಮನೆ ತಾಳಿಪಾಡಿಗುತ್ತುವಿನಲ್ಲಿ ಈ ಹರಕೆ ನೇಮೋತ್ಸವ ನಡೆಸಿದ್ದಾರೆ.

VISTARANEWS.COM


on

Srinidhi Shetty Attends Daiva Kola Festivities in Mangalore
Koo

‘ಕೆಜಿಎಫ್’​ ಸಿನಿಮಾ ನಾಯಕಿ ನಟಿ ಶ್ರೀನಿಧಿ ಶೆಟ್ಟಿ (Srinidhi Shetty) ಅವರ ಹುಟ್ಟೂರು ಮಂಗಳೂರು. ಇದೀಗ ನಟಿ ತಮ್ಮ ಕುಟುಂಬದ ದೈವಗಳಿಗೆ ಹೇಳಿಕೊಂಡಿದ್ದ ಹರಕೆಯನ್ನು ತೀರಿಸಿದ್ದಾರೆ.

ಮಂಗಳೂರಿನ ಹೊರವಲಯದಲ್ಲಿರೋ ಕಿನ್ನಿಗೋಳಿಯ ತಾಳಿಪಾಡಿ ಗುತ್ತುವಿನಲ್ಲಿ ಈ ಹರಕೆ ನೇಮೋತ್ಸವ ನಡೆದಿದೆ.

ಇದನ್ನೂ ಓದಿ: Ramana Avatara Movie: ಬಂಪರ್ ಆಫರ್; ಕೇವಲ 99 ರೂ.ಗೆ ಸಿಗಲಿದೆ ‘ರಾಮನ ಅವತಾರ’ ಸಿನಿಮಾ ಟಿಕೆಟ್

ಜಾರಾಂದಾಯ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆಸಲಾಯಿತು. ಇದರಲ್ಲಿ ಶ್ರೀನಿಧಿ ಶೆಟ್ಟಿ ಹಾಗೂ ಅವರ ಕುಟುಂಬದವರು, ಸಂಬಂಧಿಕರು ಪಾಲ್ಗೊಂಡರು.

‘ಮುಂದೆ ಇನ್ನಷ್ಟು ಎತ್ತರಕ್ಕೆ ಏರುತ್ತೀರಿ’ ಎಂದು ದೈವಗಳು ಇದೇ ಸಂದರ್ಭ ಶ್ರೀನಿಧಿ ‌ಶೆಟ್ಟಿಗೆ ಅಭಯ ನೀಡಿವೆಯಂತೆ. ಕರಾವಳಿ ಮೂಲದ ಬಂಟ ಮನೆತನಕ್ಕೆ ಸೇರಿದ ಇವರು ಅಪಾರ ದೈವಭಕ್ತೆ ಕೂಡಾ. ಸಿನೆಮಾ ರಂಗದಲ್ಲಿ ಬ್ಯುಸಿಯಾಗಿದ್ದರೂ, ಸದಾ ದೈವ ದೇವರ ಕಾರ್ಯಗಳಲ್ಲಿ ಭಾಗವಹಿಸುತ್ತಲೇ ಬಂದಿದ್ದಾರೆ.
Continue Reading
Advertisement
Prajwal Revanna Case
ಕರ್ನಾಟಕ12 mins ago

Prajwal Revanna Case: ಪ್ರಜ್ವಲ್ ರೇವಣ್ಣ ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ!

Food Poisoning
ಚಿತ್ರದುರ್ಗ26 mins ago

Food Poisoning: ಮದುವೆ ಮನೆ ಊಟ ತಿಂದವರಿಗೆ ವಾಂತಿ, ಭೇದಿ; ನೂರಾರು ಮಂದಿ ಅಸ್ವಸ್ಥ

Gold Rate Today
ಕರ್ನಾಟಕ39 mins ago

Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

Heavy Rain
ಕರ್ನಾಟಕ49 mins ago

Heavy Rain: ಧಾರಾಕಾರ ಮಳೆಯಿಂದ ಮನೆಗೆ ನುಗ್ಗಿದ ನೀರು; ಮರ ಉರುಳಿ ವಾಹನಗಳು ಜಖಂ

Murder case in Bengaluru rural
ಬೆಂಗಳೂರು ಗ್ರಾಮಾಂತರ1 hour ago

Murder case : ತಡರಾತ್ರಿ ಹರಿದ ನೆತ್ತರು; ಕತ್ತು ಸೀಳಿ ಯುವಕನ ಬರ್ಬರ ಹತ್ಯೆ

Narendra Modi
ದೇಶ1 hour ago

Narendra Modi: “ದಿವ್ಯಾಂಗ ಸಹೋದರಿಯರಿಗೆ ವ್ಯವಸ್ಥೆ ಮಾಡಿ.. ಅಲ್ಲಿವರೆಗೆ ಭಾಷಣ ಮುಂದುವರೆಸಲ್ಲ”; ಪ್ರಧಾನಿ ಮೋದಿ ವಿಡಿಯೋ ವೈರಲ್

Prajwal Revanna Case
ಕರ್ನಾಟಕ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಎಸ್‌ಐಟಿಯ ವಿಶೇಷ ತಂಡ ರಚನೆ; ಶೀಘ್ರ ರೆಡ್‌ ಕಾರ್ನರ್ ನೋಟಿಸ್‌ ಜಾರಿ

K S Rajanna
ದೇಶ2 hours ago

K.S. Rajanna: ಛಲಬಿಡದ ಸಾಧಕನಿಗೆ ಪದ್ಮಶ್ರೀ ಗರಿ; ಅಂಗವೈಕಲ್ಯ ಮೆಟ್ಟಿನಿಂತ ಕನ್ನಡಿಗನಿಗೆ ದೇಶದ ನಮನ- ವೀಡಿಯೋ ವೈರಲ್‌

Viral News
ಕ್ರೈಂ2 hours ago

ಬೆಂಗಳೂರಿನಲ್ಲಿ ಮಿತಿ ಮೀರಿದ ಪುಂಡರ ಹಾವಳಿ; ಹಾಡ ಹಗಲೇ ಯುವತಿಗೆ ಅನ್ಯಕೋಮಿನ ಯುವಕರಿಂದ ಕಿರುಕುಳ

CAA
ದೇಶ3 hours ago

CAA: ಕೇಂದ್ರ ಸೂಚನೆ ಕೊಟ್ಟ ಕೂಡಲೇ ಮಧ್ಯಪ್ರದೇಶದಲ್ಲಿ ಸಿಎಎ ಜಾರಿ; ಸಿಎಂ ಮೋಹನ್‌ ಯಾದವ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ21 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ23 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ1 day ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌