ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ (Actor Darshan) ಕಳೆದ ಮಂಗಳವಾರ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಅವರನ್ನು ಬಂಧಿಸಿದ್ದರು. ಅದೇ ದಿನ ಪವಿತ್ರಾ ಗೌಡ ಸೇರಿದಂತೆ 11 ಆರೋಪಿಗಳ ಬಂಧನವಾಗಿತ್ತು. ಈಗ ಬಂಧಿತರ ಸಂಖ್ಯೆ 20 ದಾಟಿದೆ. ಜೂನ್ 20 ಕ್ಕೆ ದರ್ಶನ್ ಹಾಗೂ ಇತರೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದ್ದು, ನಾಳೆ ನ್ಯಾಯಾಲಯದ ಆದೇಶದಂತೆ ದರ್ಶನ್ ಹಾಗೂ ಇತರ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ಒಳಪಡಬೇಕಾಗಬಹುದು ಎನ್ನಲಾಗಿದೆ. ದರ್ಶನ್ ಮೇಲೆ ರೌಡಿ ಶೀಟರ್ ಓಪನ್ ಮಾಡೋದು ಬಹುತೇಕ ಫಿಕ್ಸ್ ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಹಾಗು ಹಳೆ ಕೇಸ್‌ಗಳನ್ನು ಸೇರಿಸಿ ರೌಡಿ ಶೀಟ್ ತೆರೆಯಲು ಸಿದ್ಧತೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಕೊಲೆ ಕೇಸಲ್ಲಿ ದರ್ಶನ್ ಜೈಲು ಸೇರುತ್ತಿದ್ದಂತೆ ನೋಟಿಸ್ ಕೊಟ್ಟು ರೌಡಿ ಹಾಳೆ ತೆರೆಯಲು ಪೊಲೀಸರ ಸಿದ್ಧತೆ ಆಗುತ್ತಿದೆ ಎನ್ನಲಾಗಿದೆ.
ದರ್ಶನ್ ಮೇಲೆ ರೌಡಿ ಶೀಟರ್ ಓಪನ್ ಮಾಡೋದು ಫಿಕ್ಸ್?
ರೇಣುಕಾಸ್ವಾಮಿ ಕೊಲೆ ಕೇಸ್ ಹಾಗೂ ಹಳೆ ಕೇಸ್‌ಗಳನ್ನು ಸೇರಿಸಿ ದರ್ಶನ್ ಮೇಲೆ ರೌಡಿ ಶೀಟರ್ ಓಪನ್ ತೆರೆಯಲು ಸಿದ್ಧತೆ ಆಗುತ್ತಿದೆ ಎನ್ನಲಾಗಿದೆ. ಮಾಹಿತಿ ಪ್ರಕಾರ ದರ್ಶನ್ ಪುಡಿ ರೌಡಿಗಳ ಗ್ಯಾಂಗ್ ಕಂಡು ಪೊಲೀಸರು ಕೂಡ ಶಾಕ್ ಆಗಿದ್ದಾರೆ. ಬೆಂಗಳೂರು ಸೇರಿದಂತೆ ಪ್ರತೀ ಜಿಲ್ಲೆಯಲ್ಲೂ ರೌಡಿಗಳ ಗ್ಯಾಂಗ್ ಕಟ್ಟಿದ್ದಾರಂತೆ ದರ್ಶನ್. ಆರೋಪಿಗಳ ವಿಚಾರಣೆಯಲ್ಲಿ ದರ್ಶನ್ ಬಗ್ಗೆ ಈ ನಿಜಬಣ್ಣವನ್ನು ಹೊರಹಾಕಿದ್ದಾರೆ ಪೊಲೀಸರು. ಅಸಲಿಗೆ ಕಾನೂನು ಅನ್ನೋದು ಲೆಕ್ಕಕ್ಕೇ ಇಲ್ಲದಂತೆ ದರ್ಶನ್ ವರ್ತಿಸುತ್ತಿದ್ದರು ಎನ್ನಲಾಗಿದೆ. ಪೊಲೀಸ್ ಕಸ್ಟಡಿಯಲ್ಲಿ ಒಂಭತ್ತು ದಿನ ಕಳೆದಿದ್ದಾರೆ ದರ್ಶನ್.
ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಮೃತದೇಹ ಮೊದಲು ಹಾಕಿದ್ದು ಎಲ್ಲಿ? ಬೆಳಕಿಗೆ ಬಂತು ಸ್ಫೋಟಕ ಅಂಶ!
ಇಂದಿನವರೆಗೂ ಪೊಲೀಸ್ ಕಸ್ಟಡಿಯಲ್ಲಿಯೇ ಇದ್ದಾರೆ ನಟ
ಜೂನ್ 11ರ ಮಂಗಳವಾರ ದರ್ಶನ್ ಬಂಧನವಾಗಿದ್ದರು. ಜೂನ್ 11 ರಿಂದ ಇಂದಿನವರೆಗೂ ಪೊಲೀಸ್ ಕಸ್ಟಡಿಯಲ್ಲಿಯೇ ಇದ್ದಾರೆ ನಟ ದರ್ಶನ್. ಸಿನಿಮಾ, ಶೂಟಿಂಗ್ ಎಂದು ಓಡಾಡ್ತಿದ್ದ ನಟನಿಗೆ ಈಗ ಪೊಲೀಸ್ ಠಾಣೆಯಲ್ಲಿ ವಾಸ. ನಾಳೆ ದರ್ಶನ್ ಆಂಡ್ ಗ್ಯಾಂಗ್ ಪೊಲೀಸ್ ಕಸ್ಟಡಿಗೆ ಅಂತ್ಯವಾಗಲಿದೆ. ನಾಳೆ ಕೋರ್ಟ್‌ಗೆ ದರ್ಶನ್ ಹಾಗೂ ಗ್ಯಾಂಗ್‌ವನ್ನು ಪೊಲೀಸರು ಹಾಜರು ಪಡಿಸಲಿದ್ದಾರೆ. ಪ್ರಕರಣದ ತನಿಖೆ ಸಂಬಂಧ ಪೇಪರ್ ವರ್ಕ್ ಕೂಡ ಪೊಲೀಸರು ನಡೆಸುತ್ತಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಮತ್ತೆ ಪುನಃ ಕಸ್ಟಡಿಗೆ ಕೇಳದಿರಲು ಪೊಲೀಸರು ನಿರ್ಧಾರ ಮಾಡಿರುವುದಾಗಿ ವರದಿಯಾಗಿದೆ. ಬಹುತೇಕ ನಾಳೆ ದರ್ಶನ್, ಪವಿತ್ರಗೌಡ ಸೇರಿದಂತೆ ಎಲ್ಲರೂ ಪರಪ್ಪನ ಅಗ್ರಹಾರ ಜೈಲು ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಡಿ ಬಾಸ್ ಸ್ವ- ಇಚ್ಛೆಯ ಹೇಳಿಕೆ
ಪೊಲೀಸ್ ವಿಚಾರಣೆಯಲ್ಲಿ ನಟ ದರ್ಶನ್ ಅಲಿಯಾಸ್ ಡಿ ಬಾಸ್ ಸ್ವ- ಇಚ್ಛೆಯ ಹೇಳಿಕೆ ನೀಡಿದ್ದು, ಅದನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕೊಲೆಯಾದ ವ್ಯಕ್ತಿಯ ಶವವನ್ನು ವಿಲೇವಾರಿ ಮಾಡಿ, ಈ ಪ್ರಕರಣದಲ್ಲಿ ತನ್ನ ಹೆಸರು ಎಲ್ಲಿಯೂ ಬರದಂತೆ ಮಾಡಬೇಕು. ಪೊಲೀಸರು, ಲಾಯರ್ ಮತ್ತು ಶವ ಸಾಗಿಸುವ ವ್ಯಕ್ತಿಗಳಿಗೆ ತಗಲುವ ವೆಚ್ಚವನ್ನು ಬರಿಸಲು ಪ್ರದೂಶ್‌ಗೆ 30 ಲಕ್ಷ ಹಣ ನೀಡಿರುವುದಾಗಿ ದರ್ಶನ್ ಸ್ವ ಇಚ್ಛೆ ಹೇಳಿಕೆ ನೀಡಿದ್ದಾರೆ.
ಆದರೆ ಪಟ್ಟಣಗೆರೆಯ ಶೆಡ್‌ನಲ್ಲಿ ನಡೆದ ಹಲ್ಲೆಯಲ್ಲಿ ತಾನು ಭಾಗಿಯಾಗಿದ್ದೇನೆ ಎಂದು ದರ್ಶನ್ ಒಪ್ಪಿಕೊಂಡಿಲ್ಲ. ಶೆಡ್ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳು, ಜೂನ್ 8ರಂದು ರಾತ್ರಿ ದರ್ಶನ್ ತನ್ನ ಜೀಪಿನಲ್ಲಿ ಶೆಡ್ ಕಡೆಗೆ ಆಗಮಿಸಿದ್ದನ್ನು ತೋರಿಸಿವೆ. ಹತ್ಯೆಯ ನಂತರ ದರ್ಶನ್ ಆರೋಪಿಗಳ ಜೊತೆಗೆ ಪಾರ್ಟಿ ಮಾಡಿದ್ದು ಕೂಡ ಪ್ರತ್ಯಕ್ಷದರ್ಶಿಗಳ ಸಾಕ್ಷಿಯಿಂದ ಗೊತ್ತಾಗಿದೆ. ಆದರೆ ಪಟ್ಟಣಗೆರೆಯ ಶೆಡ್‌ನಲ್ಲಿ ಯಾವುದೇ ಸಿಸಿಟಿವಿ ಸಾಕ್ಷಿಗಳನ್ನು ಆರೋಪಿಗಳು ಉಳಿಸಿಲ್ಲ.