Actor Darshan: ಗಂಟೆಗಟ್ಟಲೆ ವಿಚಾರಣೆ ನಡೆಸಿದ್ರೂ ಕೆಲವು ಸಾಕ್ಷ್ಯಗಳ ಬಗ್ಗೆ ಬಾಯ್ಬಿಡದ ಆರೋಪಿಗಳು! - Vistara News

ಸ್ಯಾಂಡಲ್ ವುಡ್

Actor Darshan: ಗಂಟೆಗಟ್ಟಲೆ ವಿಚಾರಣೆ ನಡೆಸಿದ್ರೂ ಕೆಲವು ಸಾಕ್ಷ್ಯಗಳ ಬಗ್ಗೆ ಬಾಯ್ಬಿಡದ ಆರೋಪಿಗಳು!

Actor Darshan: ರೇಣುಕಾಸ್ವಾಮಿಯನ್ನು ಹೆಚ್ಚಾಗಿ ಹಲ್ಲೆ ಮಾಡಿದ್ದು ಇದೇ ಆರೋಪಿ ವಿನಯ್. ವಿನಯ್ ಮೊಬೈಲ್‌ನಲ್ಲಿ ವೀಡಿಯೋ ಸಾಕ್ಷ್ಯ ಸಿಕ್ಕಿದ್ದು, ವೀಡಿಯೊ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಮುಂಜಾನೆಯಿಂದಲೂ ವಿಡಿಯೋ ಕಳುಹಿಸಿದ್ದ ವ್ಯಕ್ತಿಯ ಬಗ್ಗೆ ಬಾಯಿಬಿಡುತ್ತಿಲ್ಲ ಆರೋಪಿ ವಿನಯ್‌. ಇತ್ತ ಮೊಬೈಲ್‌ನಲ್ಲಿ ಕೆಲ ನಂಬರ್‌ಗಳನ್ನು ವಿನಯ್‌ ಡಿಲೀಟ್ ಮಾಡಿದ್ದು ಪರಿಶೀಲನೆ ವೇಳೆ ಬಯಲಾಗಿದೆ. ಹೀಗಾಗಿ ಮೊಬೈಲ್‌ವನ್ನು ಎಫ್ ಎಸ್ ಎಲ್ ರವಾನೆ ಮಾಡಿದ್ದು ರಿಟ್ರೀವ್ ಮಾಡೋ ಕೆಲಸ ಆಗುತ್ತ ಇದೆ.

VISTARANEWS.COM


on

Actor Darshan Accused who did not talk about some evidence
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ದರ್ಶನ್‌ (Actor Darshan) ಕೇಸ್‌ಗೆ ಸಂಬಂಧಪಟ್ಟಂತೆ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಾಲ್ವರು ಆರೋಪಿಗಳ ಪ್ರತ್ಯೇಕ ವಿಚಾರಣೆ ಆಗುತ್ತಿದೆ. ದರ್ಶನ್ ಮನೆಯಲ್ಲಿ ಸಿಕ್ಕ 40 ಲಕ್ಷ ರೂ, ಹಣದ ಬಗ್ಗೆ ಹಾಗೂ ಸಾಕ್ಷ್ಯಗಳ ನಾಶ ಮಾಡುವ ಫ್ಲಾನ್ ಬಗ್ಗೆ ತನಿಖೆ ಆಗುತ್ತಿದೆ. ಎಸಿಪಿ ಚಂದನ್ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ. ಕಳೆದ ಎರಡು ಗಂಟೆಗಳಿಂದ ನಟ ದರ್ಶನ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಅದರಲ್ಲೂ ಮುಂಜಾನೆಯಿಂದಲೂ ಪೊಲೀಸರು ಆರೋಪಿ ವಿನಯ್‌ನನ್ನು ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದಾರೆ.

ರೇಣುಕಾಸ್ವಾಮಿಯನ್ನು ಹೆಚ್ಚಾಗಿ ಹಲ್ಲೆ ಮಾಡಿದ್ದು ಇದೇ ಆರೋಪಿ ವಿನಯ್. ವಿನಯ್ ಮೊಬೈಲ್‌ನಲ್ಲಿ ವೀಡಿಯೋ ಸಾಕ್ಷ್ಯ ಸಿಕ್ಕಿದ್ದು, ವೀಡಿಯೊ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಮುಂಜಾನೆಯಿಂದಲೂ ವಿಡಿಯೋ ಕಳುಹಿಸಿದ್ದ ವ್ಯಕ್ತಿಯ ಬಗ್ಗೆ ಬಾಯಿಬಿಡುತ್ತಿಲ್ಲ ಆರೋಪಿ ವಿನಯ್‌. ಇತ್ತ ಮೊಬೈಲ್‌ನಲ್ಲಿ ಕೆಲ ನಂಬರ್‌ಗಳನ್ನು ವಿನಯ್‌ ಡಿಲೀಟ್ ಮಾಡಿದ್ದು ಪರಿಶೀಲನೆ ವೇಳೆ ಬಯಲಾಗಿದೆ. ಹೀಗಾಗಿ ಮೊಬೈಲ್‌ವನ್ನು ಎಫ್ ಎಸ್ ಎಲ್ ರವಾನೆ ಮಾಡಿದ್ದು ರಿಟ್ರೀವ್ ಮಾಡೋ ಕೆಲಸ ಆಗುತ್ತ ಇದೆ.

ಮಾತ್ರವಲ್ಲ ರೇಣುಕಾ ಸ್ವಾಮಿಯನ್ನು ಕರೆಂಟ್‌ ಹೊಡೆದು ಸಾಯಿಸಿರುವುದಾಗಿ ಆರೋಪಿ ವಿನಯ್‌ ಒಪ್ಪಿಕೊಂಡಿದ್ದಾನೆ. ಎಲೆಕ್ಟ್ರಿಕ್ ಡಿವೈಸ್‌ ಎಲ್ಲಿ ಖರೀದಿ ಮಾಡಿದ್ದು ಎನ್ನುವ ಬಗ್ಗೆ ಇನ್ನೊಬ್ಬ ಆರೋಪಿ ಬಾಯಿಬಿಡದ ಧನರಾಜ್ ಬಾಯಿ ಬಿಡುತ್ತಿಲ್ಲ. ಪ್ರದೂಶ್ ಹಾಗೂ ವಿನಯ್ ಇಬ್ಬರನ್ನೂ ಜತೆಯಾಗಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಕೆಲ ಸಾಕ್ಷಿಗಳಿಗೆ ಹಣದ ಆಸೆ ತೋರಿಸಿದ್ದೇ ಈ ಇಬ್ಬರು. ಯಾರಿಗೆಲ್ಲ ಹಣದ ಆಸೆ ತೋರಿಸಿದ್ರಿ? ಯಾರಿಗೆಲ್ಲ ಈಗಾಗಲೇ ಹಣ ಕೊಟ್ಟಿದ್ದೀರ? ಎನ್ನುವ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಕಳೆದ ಎರಡು ಗಂಟೆಗಳಿಂದ ನಾಲ್ಕು ಆರೋಪಿಗಳ ವಿಚಾರಣೆ ಆಗುತ್ತಲೇ ಇದೆ.

ಇದನ್ನೂ ಓದಿ: Actor Darshan: ದರ್ಶನ್‌ ಪ್ರಕರಣ; ಶಿವಣ್ಣನ ವಿರುದ್ಧ ಪ್ರಶಾಂತ್‌ ಸಂಬರಗಿ ಆಕ್ರೋಶ!

ಇನ್ನು ಮೂಲಗಳ ಪ್ರಕಾರ ದರ್ಶನ್ ಪ್ರಕರಣದಲ್ಲಿ ಮತ್ತಷ್ಟು ಜನರು ಕಂಬಿ ಹಿಂದೆ ಬೀಳುವ ಎಲ್ಲಾ ಲಕ್ಷಣಗಳು ಕಂಡಿವೆ ಎನ್ನಲಾಗಿದೆ. ಒಬ್ಬೊಬ್ಬನನ್ನು ವಿಚಾರಣೆ ನಡೆಸಿದಾಗಲು ಹೊಸ ಹೊಸ ಹೆಸರು ಹೊರ ಬರುತ್ತಿದೆ. ಈಗ ಮತ್ತೊಬ್ಬ ವ್ಯಕ್ತಿಯ ಹೆಸರು ಕೊಲೆ ಕೇಸಿನಲ್ಲಿ ಕೇಳಿ ಬರುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಸಿನಿಮಾ

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

VISTARANEWS.COM


on

ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ಮಾಪಕ ದಿಲೀಪ್‌ ರಾಜ್‌ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. 47 ವರ್ಷ ವಯಸ್ಸಿನ ದಿಲೀಪ್‌ ರಾಜ್‌ ಅವರನ್ನು ಬೆಳಗಿನ ಜಾವ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.


ದಿಲೀಪ್ ರಾಜ್ ಕನ್ನಡ ಕಿರುತೆರೆ ಮತ್ತು ಬೆಳ್ಳಿತೆರೆಯಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯರಾಗಿದ್ದರು.
‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ಲವ್‌ ಮಾಕ್‌ಟೇಲ್‌-3 ಸೇರಿದಂತೆ ಹಲವು ಚಿತ್ರಗಳಲ್ಲಿ ಅವರು ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಮೂಲಕ ಮನೆಮಾತಾಗಿದ್ದರು. ನಿರ್ಮಾಪಕರಾಗಿಯೂ ಅವರು ಹಲವು ಧಾರಾವಾಹಿಗಳನ್ನು ನಿರ್ಮಾಣ ಮಾಡಿದ್ದರು.


ಸ್ಯಾಂಡಲ್‌ವುಡ್‌ನ ನಟರು, ನಿರ್ದೇಶಕರು,ನಿರ್ಮಾಪಕರು ಸೇರಿದಂತೆ ಚಿತ್ರರಂಗ ಗಣ್ಯರು ದಿಲೀಪ್‌ ರಾಜ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದಿಲೀಪ್ ರಾಜ್ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ.

Continue Reading

Latest

ರಾಜಕುಮಾರ್‌ ಸಮಾಧಿಗೆ ಭೂಮಿ: ವಿವಾದ ಹುಟ್ಟು ಹಾಕಿದ ನಟ ಚೇತನ್‌ ವಿರುದ್ಧ ಅಭಿಮಾನಿಗಳ ಆಕ್ರೋಶ; ದೂರು ದಾಖಲು

VISTARANEWS.COM


on

ಬೆಂಗಳೂರು: ವರನಟ ಡಾ. ರಾಜ್‌ಕುಮಾರ್ ಅವರ ಸಮಾಧಿ ಸ್ಥಳಕ್ಕೆ ಕಂಠೀರವ ಸ್ಟುಡಿಯೋ ಆವರಣದಲ್ಲಿ 2.5 ಎಕರೆ ಭೂಮಿ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಟ ಚೇತನ್ ಅಹಿಂಸಾ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ರಾಜ್ಯಾದ್ಯಂತ ರಾಜ್‌ಕುಮಾರ್‌ ಅಭಿಮಾನಿಗಳು ಚೇತನ್‌ ವಿರುದ್ಧ ತಿರುಗಿ ಬಿದ್ದಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಅವರ ವಿರುದ್ಧ ದೂರು ದಾಖಲಿಸಿವೆ.
ರಾಜ್‌ಕುಮಾರ್ ಅಭಿಮಾನಿಗಳ ಸಂಘಟನೆ ರಾಜ್‌ಕುಮಾರ್ ಸೇನೆ ಬಸವೇಶ್ವರನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿ ನಟ ಚೇತನ್ ಅಹಿಂಸಾ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಪಡಿಸಿದೆ. ರಾಜ್‌ಕುಮಾರ್ ಅಭಿಮಾನಿಗಳಾದ ನಮಗೆ ಅವಮಾನ ಉಂಟಾಗಿದ್ದು, ಚೇತನ್‌ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ‌.
ಡಾ. ರಾಜ್‌ಕುಮಾರ್ ಅವರ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? 21ನೇ ಶತಮಾನದಲ್ಲಿ ಪ್ರಮುಖ ಹೋರಾಟವೇ ಭೂಮಿಯಾಗಿದೆ. ಸರ್ಕಾರ ಅದನ್ನು ಗಮನದಲ್ಲಿಟ್ಟುಕೊಂಡು ಭೂಮಿಯನ್ನು ಸಾರ್ವಜನಿಕರ ಉಪಯೋಗಕ್ಕೆ ಹಂಚಬೇಕು. ಮತಗಳ ಲಾಭದ ಉದ್ದೇಶದಿಂದ ಹಂಚಬಾರದು ಎಂದು ಅಣ್ಣಾವ್ರ ಜನ್ಮದಿನದಂದೇ ಸಾಮಾಜಿಕ ಜಾಲತಾಣಗಳಲ್ಲಿ ಚೇತನ್ ಪೋಸ್ಟ್ ಮಾಡಿದ್ದರು
ತಮ್ಮ ಅಭಿಪ್ರಾಯ ಕುರಿತು ಪ್ರತಿಕ್ರಿಯೆ ನೀಡಿರುವ ಚೇತನ್, ನಾನು ಆಕ್ಷೇಪ ಎತ್ತಿದ್ದು ರಾಜ್ ಕುಮಾರ್ ಅವರಿಗೆ ಸಂಬಂಧಿಸಿದ್ದಲ್ಲ. ನಾನು ಅಮೆರಿಕಾದಲ್ಲಿ ಇದ್ದಾಗಲೂ ಅವರ ಸಿನೆಮಾ ನೋಡಿಕೊಂಡು ಬೆಳೆದಿದ್ದೇನೆ. ಚಿತ್ರರಂಗಕ್ಕೆ ಅವರು ಕೊಟ್ಟ ಕೊಡುಗೆ ಅಪಾರ. ಆದರೆ ಅವರ ಕಾಲಾನಂತರ ಅವರ ಹೆಸರಲ್ಲಿ ಸರ್ಕಾರ ಭೂಮಿ ಕೊಟ್ಟಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದೇನೆ. ಮತ ಗಳಿಕೆಯ ಉದ್ದೇಶದಿಂದಲೇ ಸರ್ಕಾರ ಭೂಮಿ ಕೊಟ್ಟಿದೆ. ಅದರ ಬಗ್ಗೆ ಪ್ರಶ್ನೆ ಎತ್ತಿದ್ದೇನೆ. ಚಿತ್ರರಂಗದಲ್ಲಿ ಸಾಕಷ್ಟು ಮಂದಿ ಕೊಡುಗೆ ಕೊಟ್ಟಿದ್ದಾರೆ ಎಂದಿದ್ದಾರೆ.
ಚೇತನ್‌ ಹೇಳಿಕೆಯಲ್ಲಿ ಏನಿದೆ?
ಸರ್ಕಾರಗಳು ಭೂಮಿಯನ್ನು ಮಂಜೂರು ಮಾಡುವಾಗ ಕೇವಲ ಮತ ಬ್ಯಾಂಕ್ ಮೇಲೆ ಕಣ್ಣಿಡಬಾರದು. ಅದರ ಬದಲು ದೂರದೃಷ್ಟಿ ಮತ್ತು ಸಾರ್ವಜನಿಕ ಉಪಯುಕ್ತತೆಯನ್ನು ಗಮನಿಸಬೇಕು. 21ನೇ ಶತಮಾನದ ಭಾರತದಲ್ಲಿ ಭೂಮಿಗಾಗಿ ದೊಡ್ಡ ಹೋರಾಟವೇ ನಡೆಯುತ್ತಿದೆ. ಕೇವಲ ರಾಜಕೀಯ ಲಾಭಕ್ಕಾಗಿ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಸರಿಯಲ್ಲ ಎಂದು ಪರೋಕ್ಷವಾಗಿ ಟೀಕಿಸಿದ್ದಾರೆ.
ಪುಟ್ಟಣ್ಣ ಕಣಗಾಲ್, ಸರೋಜಾ ದೇವಿ, ವಿಷ್ಣುವರ್ಧನ್ ಸೇರಿದಂತೆ ಅನೇಕ ಮಂದಿ ಕೊಡುಗೆ ನೀಡಿದ್ದಾರೆ. ಆದರೆ ಅವರ ಸಮಾಧಿಗಳಿಗೆ ಜಾಗ ಕೊಟ್ಟಿಲ್ಲ. ಕುವೆಂಪು ಅವರ ಸಮಾಧಿಯನ್ನೇ ಕುಪ್ಪಳ್ಳಿಯಲ್ಲಿ ಮಾಡಲಾಗಿದೆ. ರಾಜ್‌ಕುಮಾರ್‌ ಅವರ ಸಮಾಧಿಯನ್ನು ಗಾಜನೂರಿನಲ್ಲಿ ಮಾಡಬಹುದಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಮಗೆ ರಾಜ್‌ಕುಮಾರ್ ಅವರ ಮೇಲೆ ಒಬ್ಬ ಶ್ರೇಷ್ಠ ಕಲಾವಿದ ಎಂಬ ಗೌರವವಿದೆ. ಆದರೆ, ಸ್ಮಾರಕ ಸಂಕೀರ್ಣಕ್ಕಾಗಿ ಬೆಂಗಳೂರಿನ ಪ್ರಮುಖ ಜಾಗದಲ್ಲಿ 2.5 ಎಕರೆ ಭೂಮಿಯನ್ನು ಮಂಜೂರು ಮಾಡಿದ್ದು ಎಷ್ಟು ಸಮಂಜಸ? ಎಂದು ಪ್ರಶ್ನಿಸಿದ್ದಾರೆ.
ಅಣ್ಣಾವ್ರ ಕನ್ನಡ ಭಾಷೆ, ಕಲೆ ಮತ್ತು ನಾಡಿಗೆ ನೀಡಿದ ಕೊಡುಗೆಯನ್ನು ಅರಿಯದೆ ಚೇತನ್ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಅಭಿಮಾನಿಗಳು ಕಿಡಿಕಾರಿದ್ದಾರೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಸಮಾಧಿ ಸ್ಥಳಗಳಿಗೆ ಎಕರೆಗಟ್ಟಲೆ ಜಾಗ ನೀಡಿದಾಗ ಚೇತನ್ ಅವರಿಗೆ ಸಾರ್ವಜನಿಕ ಉಪಯುಕ್ತತೆ ನೆನಪಾಗಲಿಲ್ಲವೇ? ಕೋಟ್ಯಂತರ ಕನ್ನಡಿಗರ ಆರಾಧ್ಯ ದೈವದ ಸ್ಮಾರಕದ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ ಎಂದು ನೆಟ್ಟಿಗರು ತಿರುಗೇಟು ನೀಡಿದ್ದಾರೆ.
ಈ ಹಿಂದೆಯೂ ಚೇತನ್‌ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಕಾನೂನು ಸಂಕಷ್ಟ ಎದುರಿಸಿದ್ದರು. ಅನೇಕ ರಾಜಕೀಯ ಪಕ್ಷಗಳ ಕೆಂಗಣ್ಣಿಗೂ ಗುರಿಯಾಗಿದ್ದರು.

Continue Reading

Latest

ಗ್ಯಾಂಗ್‌ಸ್ಟರ್ ಸಿನಿಮಾ ಎಂಬ ಭ್ರಮೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಯಶ್; ‘ಟಾಕ್ಸಿಕ್’ ಹಿಂದಿದೆ ಬೇರೆಯದೇ ಪ್ಲ್ಯಾನ್‌!

VISTARANEWS.COM


on

ಸ್ಯಾಂಡಲ್‌ವುಡ್‌ನಿಂದ ಜಾಗತಿಕ ಮಟ್ಟಕ್ಕೆ ಬೆಳೆದಿರುವ ರಾಕಿಂಗ್ ಸ್ಟಾರ್ ಯಶ್, ತಮ್ಮ ಮುಂದಿನ ಸಿನಿಮಾ ‘ಟಾಕ್ಸಿಕ್’ ಬಗ್ಗೆ ಅಭಿಮಾನಿಗಳಲ್ಲಿ ಇದ್ದ ಕುತೂಹಲಕ್ಕೆ ಹೊಸ ಟ್ವಿಸ್ಟ್ ನೀಡಿದ್ದಾರೆ. ಇತ್ತೀಚೆಗೆ ಅಮೆರಿಕದ ಲಾಸ್ ವೇಗಾಸ್‌ನಲ್ಲಿ ನಡೆದ ‘ಸಿನಿಮಾಕಾನ್ 2026’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಶ್, ಈ ಸಿನಿಮಾ ಕೇವಲ ರಕ್ತಪಾತದ ಗ್ಯಾಂಗ್‌ಸ್ಟರ್ ಕಥೆಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೇಲ್ನೋಟಕ್ಕೆ ಇದು ಆಕ್ಷನ್ ಸಿನಿಮಾದಂತೆ ಕಂಡರೂ, ಕಥೆಯ ಒಳಗೆ ಮಾನವನ ಮನಸ್ಥಿತಿಯ ಆಳವಾದ ಪದರಗಳಿವೆ ಮತ್ತು ಇದು ಪ್ರತಿಯೊಬ್ಬರಿಗೂ ಹತ್ತಿರವಾಗುವಂತಹ ಭಾವನಾತ್ಮಕ ಕಥೆಯನ್ನು ಹೊಂದಿದೆ ಎಂದು ಅವರು ಅಚ್ಚರಿಯ ಮಾಹಿತಿ ಹಂಚಿಕೊಂಡಿದ್ದಾರೆ.

ವಿಶೇಷವೆಂದರೆ, ‘ಟಾಕ್ಸಿಕ್’ ಕೇವಲ ಭಾರತೀಯ ಭಾಷೆಗಳಿಗೆ ಸೀಮಿತವಾಗಿಲ್ಲ. ಈ ಚಿತ್ರವನ್ನು ಕನ್ನಡದ ಜೊತೆಗೆ ನೇರವಾಗಿ ಇಂಗ್ಲಿಷ್ ಭಾಷೆಯಲ್ಲೂ ಚಿತ್ರೀಕರಿಸಲಾಗಿದ್ದು, ಅಂತರರಾಷ್ಟ್ರೀಯ ಪ್ರೇಕ್ಷಕರನ್ನು ಸೆಳೆಯುವ ಗುರಿ ಹೊಂದಿದೆ. ಜಾಗತಿಕ ಮಟ್ಟದ ತಂತ್ರಜ್ಞರು ಈ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದು, ದೃಶ್ಯ ವೈಭವದ ಜೊತೆಗೆ ಪ್ರೇಕ್ಷಕರನ್ನು ಆಳವಾಗಿ ಯೋಚಿಸುವಂತೆ ಮಾಡುವ ವಿಭಿನ್ನ ಶೈಲಿಯ ಸಿನಿಮಾ ಇದಾಗಲಿದೆ ಎಂಬ ಭರವಸೆಯನ್ನು ಯಶ್ ನೀಡಿದ್ದಾರೆ. ಈ ಸುದ್ದಿಯು ಯಶ್ ಅವರ ಅಭಿಮಾನಿಗಳಲ್ಲಿ ಸಿನಿಮಾದ ಮೇಲಿರುವ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಚಿತ್ರದ ಬಿಡುಗಡೆ ವಿಚಾರಕ್ಕೆ ಬರುವುದಾದರೆ, ಈ ಹಿಂದೆ ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಸಿನಿಮಾ ವಿಳಂಬವಾಗಬಹುದು ಎಂಬ ವದಂತಿಗಳಿದ್ದವು. ಆದರೆ, ಸದ್ಯಕ್ಕೆ ಲಭ್ಯವಿರುವ ಮಾಹಿತಿಯ ಪ್ರಕಾರ ಎಲ್ಲ ಅಡೆತಡೆಗಳನ್ನು ದಾಟಿ ಸಿನಿಮಾ ಜೂನ್ 4, 2026 ರಂದು ಅದ್ಧೂರಿಯಾಗಿ ವಿಶ್ವದಾದ್ಯಂತ ತೆರೆಗೆ ಬರಲು ಸಜ್ಜಾಗಿದೆ. ಕಿಯಾರಾ ಅಡ್ವಾಣಿ, ನಯನತಾರಾ ಅವರಂತಹ ಘಟಾನುಘಟಿ ಕಲಾವಿದರ ದಂಡೇ ಈ ಸಿನಿಮಾದಲ್ಲಿದ್ದು, ಜೂನ್ ತಿಂಗಳಿನಲ್ಲಿ ‘ಟಾಕ್ಸಿಕ್’ ಹವಾ ಶುರುವಾಗುವುದು ಗ್ಯಾರಂಟಿ ಎನ್ನಲಾಗುತ್ತಿದೆ.

Continue Reading

ಸಿನಿಮಾ

Dolly Dhananjay: ಕೋಟೆ ನಾಡಿನ ಕನ್ಯೆ ಜತೆಗೆ ಸಪ್ತಪದಿ ತುಳಿಯಲ್ಲಿದ್ದಾರೆ ಡಾಲಿ ಧನಂಜಯ್‌

Dolly Dhananjay : ಮುಂದಿನ ವರ್ಷ ಫೆಬ್ರವರಿ ತಿಂಗಳಲ್ಲಿ ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ ಜೋಡಿ ಹಸೆಮಣೆ ಏರಲಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ಡಾಲಿ ಧನಂಜಯ್‌ ತಮ್ಮ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ.

VISTARANEWS.COM


on

Dolly Dhananjay

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ನಟರಾಕ್ಷಸ ಡಾಲಿ ಧನಂಜಯ್‌ (Dolly Dhananjay) ತಮ್ಮ ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ್ದಾರೆ.

Sandalwood star Dali Dhananjay And dhanya They are getting married next year

ಹಲವು ದಿನಗಳ ಮೌನಕ್ಕೆ ತೆರೆ ಎಳೆದಿರುವ ಧನಂಜಯ್ ಬೆಳಕಿನ ಹಬ್ಬ ದೀಪಾವಳಿಯಂದು ಬಾಳ ಸಂಗತಿಯನ್ನು ಪರಿಚಯಿಸಿದ್ದಾರೆ.

Sandalwood star Dali Dhananjay And dhanya They are getting married next year

ಡಾಕ್ಟರ್ ಧನ್ಯತಾ ಜತೆಗೆ ಸಪ್ತಪದಿ ತುಳಿಯಲಿದ್ದಾರೆ. ಕೋಟೆ ನಾಡು ಚಿತ್ರದುರ್ಗದ ಧನ್ಯತಾ ಅವರೊಂದಿಗೆ ಮುಂದಿನ ವರ್ಷ ಫೆಬ್ರವರಿ 16 ರಂದು ಅದ್ಧೂರಿಯಾಗಿ ವಿವಾಹ ನಡೆಯಲಿದೆ.

ಸಾಂಸ್ಕೃತಿಕ ನಗರಿ ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಧನ್ಯತಾ ಹಾಗೂ ಧನಂಜಯ್‌ ವಿವಾಹ ನಡೆಯಲಿದೆ.

Sandalwood star Dali Dhananjay And dhanya They are getting married next year

ಸೌತ್ ಸಿನಿಮಾ ಇಂಡಸ್ಟ್ರಿ ತಾರೆಯರು ಹಾಗು ಹಲವು ರಾಜಕೀಯ ಗಣ್ಯರು ಡಾಲಿ ಧನಂಜಯ್ ವಿವಾಹಕ್ಕೆ ಸಾಕ್ಷಿಯಾಗಲಿದ್ದಾರೆ.

Sandalwood star Dali Dhananjay And dhanya They are getting married next year

ವಿಭಿನ್ನ ರೀತಿಯ ಫೋಟೊಶೂಟ್‌ ನಡೆಸಿ ತಮ್ಮ ಹುಡುಗಿಯನ್ನು ಪರಿಚಯಿಸಿದ ಡಾಲಿ ಧನಂಜಯ್‌

Sandalwood star Dali Dhananjay And dhanya They are getting married next year
Continue Reading
Advertisement
Latest6 hours ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest6 hours ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ6 hours ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest7 hours ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest9 hours ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest11 hours ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest1 day ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

ಅವಿಭಾಗೀಕೃತ1 day ago

ಬೆಂಗಳೂರಿಗೆ ʼಆರನೇ ಗ್ಯಾರಂಟಿʼ – ʼನನ್ನ ಖಾತೆ ನನ್ನ ಹಕ್ಕುʼ

ಪ್ರಮುಖ ಸುದ್ದಿ1 day ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ1 day ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌