ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ (Actor Darshan). ಕಸ್ಟಡಿಯಲ್ಲಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳನ್ನು ಪಟ್ಟಣಗೆರೆಯ ಶೆಡ್‌ಗೆ ಬುಧವಾರ ಕರೆದೊಯ್ದು ಸ್ಥಳ ಮಹಜರು ನಡೆಸಿದರು. ಆರೋಪಿಗಳನ್ನು ತಂಡಗಳಾಗಿ ವಿಂಗಡಿಸಿ, ಶೆಡ್‌ನ ಪ್ರತಿ ಮೂಲೆಯಲ್ಲೂ ಪರಿಶೀಲನೆ ನಡೆಸಿ ಅಗತ್ಯ ಮಾಹಿತಿ ಕಲೆ ಹಾಕಲಾಗಿದೆ. ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಮತ್ತೊಬ್ಬ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಬಂಧಿತನನ್ನು ಪ್ರದೋಶ್ (Paradosh) ಎಂದು ಗುರುತಿಲಾಗಿದ್ದು, ಈತ ಕೂಡ ಸ್ಯಾಂಡಲ್ ವುಡ್ ನಟನಾಗಿದ್ದಾನೆ. ಕನ್ನಡದ ಕೆಲ ಚಿತ್ರಗಳಲ್ಲಿ ಅಭಿನಯ ಮಾಡಿರುವ ಈತ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ A14 ಆರೋಪಿಯಾಗಿದ್ದಾನೆ. ರೇಣುಕಾ ಸ್ವಾಮಿ ಮೃತಪಟ್ಟ ಬಳಿಕ ಗಾಬರಿಗೊಂಡ ದರ್ಶನ್ 30 ಲಕ್ಷ ರೂ. ನೀಡಿ ಬಾಡಿಯನ್ನು ಎಲ್ಲಾದರು ಬಿಸಾಕುವಂತೆ ಹೇಳುತ್ತಾರೆ. ಆಗ ತನ್ನ ಆಪ್ತ, ಹೋಟೆಲ್ ಉದ್ಯಮಿ ಪ್ರದೋಶ್ ದರ್ಶನ್ ಹೇಳಿದಾಗ ಪ್ರದೋಶ್ ಮತ್ತಿತರರು ದೇಹವನ್ನು ಸ್ಕಾರ್ಪಿಯೋ ಕಾರಿನಲ್ಲಿ ಒಯ್ದು ಸುಮ್ಮನಹಳ್ಳಿಯ ಅಪಾರ್ಟ್‌ಮೆಂಟ್ ಒಂದರ ಮುಂಭಾಗದ ಮೋರಿ ಬಳಿ ಎಸೆದು ಹೋಗಿದ್ದಾರೆ.
ಯಾರು ಈ ಪ್ರದೋಶ್?
ʻಬೃಂದಾವನʼ, ʻಬುಲ್ ಬುಲ್ʼ ಚಿತ್ರಗಳಲ್ಲಿ ಪ್ರದೋಶ್ ನಟಿಸಿದ್ದಾನೆ. ಇದಲ್ಲದೆ ಬಿಜೆಪಿ ಸಚಿವರೊಬ್ಬರ ಜೊತೆ ಆಪ್ತ ಸಹಾಯಕನಾಗಿ ಕೂಡ ಕೆಲಸ ಮಾಡಿದ್ದು, ಮಾತ್ರವಲ್ಲದೇ ಬಿಜೆಪಿ ಐಟಿ ವಿಭಾಗದಲ್ಲಿಯೂ ಕೆಲಸ ಮಾಡಿದ್ದ ಎಂದು ವರದಿಯಾಗಿದೆ.
ಇದನ್ನೂ ಓದಿ: Actor Darshan: ಪವಿತ್ರಾ ಗೌಡ ಜೈಲು ಸೇರುತ್ತಿದ್ದಂತೆ ಮಾಜಿ ಪತಿ ಪ್ರತ್ಯಕ್ಷ; ಅವರು ಹೇಳಿದ್ದೇನು?
ನಿನ್ನೆಯಷ್ಟೇ ಬಿಗಿ ಭದ್ರತೆಯಲ್ಲಿ ದರ್ಶನ್, ಪವಿತ್ರಾಗೌಡ ಸೇರಿ 13 ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಪಟ್ಟಣಗೆರೆ ಶೆಡ್‌ನ ಎಲ್ಲ ಕಡೆ ಪರಿಶೀಲನೆ ನಡೆಸಿ, ಪ್ರಕರಣದ ಬಗ್ಗೆ ಇಂಚಿಂಚೂ ಮಾಹಿತಿ ಕಲೆಹಾಕಲಾಗಿದೆ. ಘಟನೆಯಲ್ಲಿ ಯಾರ ಪಾತ್ರ ಏನು? ಯಾರು ಸ್ಥಳದಲ್ಲಿ ಇದ್ದರು ಎಂದು ಒಬ್ಬೊಬ್ಬರ ಬಳಿಯಿಂದ ಮಾಹಿತಿ ಪಡೆಯಲಾಗಿದೆ. ಸ್ಥಳ ಮಹಜರಿನ ಪ್ರತಿ ಹಂತದಲ್ಲಿ ವಿಡಿಯೊ ಸೆರೆಹಿಡಿಯಲಾಗಿದೆ.
ಪ್ರಕರಣದಲ್ಲಿ ಮತ್ತೊಬ್ಬ ಮಹಿಳೆ ಭಾಗಿ!
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಒಟ್ಟು 17 ಆರೋಪಿಗಳ ಪೈಕಿ 13 ಮಂದಿಯನ್ನು ಬಂಧಿಸಲಾಗಿದೆ. ಇದರಲ್ಲಿ ಮತ್ತೊಬ್ಬ ಮಹಿಳೆ ಕೂಡ ಭಾಗಿಯಾಗಿರುವುದು ತಿಳಿದುಬಂದಿದೆ. ಆರೋಪಿ ಅನು ಎಂಬ ಮಹಿಳೆ ಎಸ್ಕೇಪ್ ಆಗಿದ್ದಾಳೆ. ಜಗದೀಶ್ @ ಜಗ್ಗ, ಅನು, ರವಿ, ರಾಜು ಎಂಬುವವರು ಸದ್ಯ ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ರೇಣುಕಾಸ್ವಾಮಿ ಹತ್ಯೆ ಹೇಗೆ ನಡೆದಿತ್ತು?
ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್ ಸೇರಿ ಹಲ್ಲೆ ಮಾಡಿದ್ದರು.
ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ 80 ಪರ್ಸೆಂಟ್ ಸಾವನ್ನಪ್ಪಿದ್ದ. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ನಟ ದರ್ಶನ್ ಸಹ ಹಲ್ಲೆ ಮಾಡಿದ್ದಾರೆ.
ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸಂಜೆ 6.30ರ ಸುಮಾರಿಗೆ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದ. ಅದಾದ ಮೇಲೆ ರಾತ್ರಿ ಒಂದು ಗಂಟೆವರೆಗೆ ಮೃತದೇಹದೊಂದಿಗೆ ಹಂತಕರು ಇದ್ದರು. ಬಳಿಕ ದರ್ಶನ್‌ಗೆ ರಾಘವೇಂದ್ರ ಹಾಗೂ ವಿನಯ್ ಮಾಹಿತಿ ನೀಡಿದ್ದರು. ಬಳಿಕ ಶವ ಬಿಸಾಡುವುದರ ಬಗ್ಗೆ ಡೀಲ್ ನಡೆದಿದೆ. ನಂತರ ಜೂನ್ 9ರಂದು ಬೆಳಗ್ಗೆ ಸುಮನಹಳ್ಳಿ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು.