Site icon Vistara News

Actor Darshan: ಮನೆ ಊಟ, ಹಾಸಿಗೆ ಪುಸ್ತಕಕ್ಕೆ ಬೇಡಿಕೆ ಇಟ್ಟ ದರ್ಶನ್‌; ದೇಹದ ತೂಕ ಇಳಿದ ಭಯದಲ್ಲಿ ಕೋರ್ಟ್ ಮೊರೆ!

Actor Darshan asked For Home Food And Bed He Ask In Court

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ (Renuka swamy Murder) ಪ್ರಕರಣದಲ್ಲಿ ದರ್ಶನ್‌ (Actor Darshan: ) ಜೈಲು ಸೇರಿದ್ದಾರೆ. ದರ್ಶನ್ ಅವರು ಜೈಲಿನಲ್ಲಿದ್ದು ಒಂದು ತಿಂಗಳು ಆಗುತ್ತಾ ಬಂದಿದೆ. ಜಿಮ್‌ನಲ್ಲಿ ವರ್ಕೌಟ್‌ ಮಾಡಿಕೊಂಡು , ಹೊರಗಡೆ ಮೀನು, ಮಟನ್‌ ತಿಂದು ಕೊಂಡು ಹಾಯಾಗಿದ್ದ ದರ್ಶನ್‌, ಕೈದಿಗಳಿಗೆ ಯಾವ ರೀತಿಯ ಊಟ ನೀಡುತ್ತಾರೋ ಅದನ್ನೇ ಸೇವಿಸಬೇಕು.  ಹೀಗಾಗಿ ದರ್ಶನ್‌ ಅವರು ಸರಿಯಾಗಿ ಊಟ ಮಾಡುತ್ತಿಲ್ಲ ಎಂದು ತಿಳಿದು ಬಂದಿದೆ. ಈ ಕಾರಣದಿಂದಲೇ ಅವರು 25 ದಿನಗಳಲ್ಲಿ ಬರೋಬ್ಬರಿ 10 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದು ವರದಿ ಆಗಿದೆ. . ಈ ಕಾರಣದಿಂದ ದರ್ಶನ್ ಅವರು ಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಊಟ, ಹಾಸಿಗೆ ಜೊತೆ ಇನ್ನಷ್ಟು ವಸ್ತುಗಳನ್ನು ಕೋರಿ ನಟ ದರ್ಶನ್ ಕೋರ್ಟ್​ಗೆ ಮನವಿ ಮಾಡಿದ್ದಾರೆ.

ವಕೀಲ ಪ್ರವೀಣ್ ತಿಮ್ಮಯ್ಯ ಅವರ ಮೂಲಕ ಅರ್ಜಿ ಸಲ್ಲಿಕೆಯಾಗಿದೆ. ದರ್ಶನ್‌ಗೆ ಈಗ ದೇಹದ ತೂಕ ಇಳಿಕೆ ಆಗುತ್ತಿರುವ ಭಯವೂ ಕಾಡುತ್ತಿದೆ. ಊಟ, ಹಾಸಿಗೆ, ಪುಸ್ತಕ, ಬಟ್ಟೆ, ಚಮಚವನ್ನು ಮನೆಯಿಂದ ತರಿಸಿಕೊಳ್ಳಲು ದರ್ಶನ್ ಕೋರ್ಟ್ ಮುಂದೆ ಬೇಡಿಕೆ ಇಟ್ಟಿದ್ದಾರೆ. ಇವುಗಳನ್ನೆಲ್ಲಾ ಮನೆಯಿಂದ ಪಡೆಯಲು ಜೈಲು ಅಧಿಕಾರಿಗಳು ಅನುಮತಿಸಿಲ್ಲ. ಜೈಲಿನಲ್ಲಿ ನೀಡುತ್ತಿರುವ ಊಟ ಅವರಿಗೆ ಜೀರ್ಣವಾಗುತ್ತಿಲ್ಲ. ಅವರಿಗೆ ಫುಡ್ ಪಾಯಿಸನಿಂಗ್ ಆಗುತ್ತಿದೆ. ಇದರ ಜೊತೆಗೆ ಭೇದಿ ಕೂಡ ಆಗುತ್ತಿದೆ. ಹಲವು ಕೆಜಿಗಳಷ್ಟು ತೂಕವನ್ನು ದರ್ಶನ್ ಕಳೆದುಕೊಂಡಿದ್ದಾರೆ. ಹೀಗೆಂದು ಜೈಲಿನ ವೈದ್ಯರೇ ಅಭಿಪ್ರಾಯ ನೀಡಿದ್ದಾರೆ.

ಮನೆ ಊಟಕ್ಕೆ ಅನುಮತಿ ಕೋರಿದ್ದಕ್ಕೆ ಕೋರ್ಟ್ ಆದೇಶವಿಲ್ಲವೆಂದು ಜೈಲು ಅಧಿಕಾರಿಗಳು ಅನುಮತಿ ನೀಡಿಲ್ಲ’ ಎಂದು ಎಂದು ದರ್ಶನ್ ಪರ ವಕೀಲರು ಹೇಳಿದ್ದಾರೆ. ಮನೆ ಊಟಕ್ಕೆ ಅನುಮತಿ ನೀಡಿದರೆ ಯಾರಿಗೂ ತೊಂದರೆಯಾಗಲ್ಲ. ಹೀಗಾಗಿ ಕುಟುಂಬದವರಿಂದ ಮನೆ ಊಟ ಪಡೆಯಲು ಅನುಮತಿ ನೀಡಬೇಕು’ ಎಂದು ದರ್ಶನ್ ಪರ ವಕೀಲರು ಕೋರಿದ್ದಾರೆ.

ಇದನ್ನೂ ಓದಿ: Actor Darshan: ಆರೋಪಿಗಳಿಗೆ ಗಂಟಲು ಮುಳ್ಳಾದ ಗುರುತು ಪತ್ತೆ ಪರೇಡ್‌, ಬೆಟ್ಟು ಮಾಡಿ ತೋರಿಸಿದ ಸಾಕ್ಷಿಗಳು

ನಟ ದರ್ಶನ್ ಅವರು ಜೈಲಿನಲ್ಲಿದ್ದು ಒಂದು ತಿಂಗಳು ಆಗುತ್ತಾ ಬಂದಿದೆ. ಹೊರಗಿದ್ದಾಗ ಅವರು ಮಾಂಸದೂಟ ಮಾಡಿಕೊಂಡು ಹಾಯಾಗಿ ಇದ್ದರು. ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿದ್ದರು. ಆದರೆ, ಜೈಲಿನಲ್ಲಿ ಆ ರೀತಿ ಇಲ್ಲ. ಜೈಲಿನ ಇತರ ಕೈದಿಗಳಿಗೆ ಯಾವ ರೀತಿಯ ಊಟ ನೀಡುತ್ತಾರೋ ಅದನ್ನೇ ಸೇವಿಸಬೇಕು. ದರ್ಶನ್ ಅವರಿಗೆ ನಿತ್ಯ ಚಿಂತೆ ಕಾಡುತ್ತಿದೆ. ಯಾವಾಗ ಹೊರಗೆ ಬರುತ್ತೇನೋ ಎನ್ನುವ ಆತಂಕ ಮೂಡಿದೆ. ಹೀಗಾಗಿ ಅವರು ಜೈಲಿನಲ್ಲಿ ಸರಿಯಾಗಿ ಊಟ ಮಾಡುತ್ತಿಲ್ಲ.

Exit mobile version