ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ (Actor Darshan) ಅವರು ಸಿನಿರಂಗಕ್ಕೆ ಪದಾರ್ಪಣೆ ಮಾಡಿ 25 ವರ್ಷಗಳು ಕಳೆದಿವೆ. ದರ್ಶನ್ ಅವರ ನೆಚ್ಚಿನ ಸೆಲೆಬ್ರಿಟಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ‘ಬೆಳ್ಳಿ ಪರ್ವ’ ಆಚರಣೆಗೆ ಮುಂದಾಗಿದ್ದಾರೆ. ಅದ್ಧೂರಿಯಾಗಿ ಈ ಕಾರ್ಯಕ್ರಮ ಇಂದು (ಫೆಬ್ರವರಿ 17)ರರಂದು ನಡೆಯಲಿದೆ. ಶ್ರೀ ಆದಿಚುಂಚನಗಿರಿ ಶ್ರೀಗಳು, ಶ್ರೀ ಸುತ್ತೂರು ಶ್ರೀಗಳು, ಹಾಗೂ ಸಂಸದೆ, ಚಿತ್ರನಟಿ ಸುಮಲತಾ ಅಂಬರೀಶ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೆರವೇರಲಿದೆ. ಈಗಾಗಲೇ ಸಂಜೆಯ ಸಂಭ್ರಮದಕ್ಕೆ ಸಕಲ ಸಿದ್ಧತೆಗಳೂ ಕಳೆದೆರಡು ದಿನಗಳಿಂದ ಆರಂಭ ಆಗಿದೆ.
ಶ್ರೀರಂಗಪಟ್ಟಣದಲ್ಲಿ ದರ್ಶನ್ ಆಪ್ತ ಇಂಡುವಾಳು ಸಚ್ಚಿದಾನಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಈಗಾಗಲೇ ಸಂಜೆಯ ಸಂಭ್ರಮಕ್ಕೆ ಸಕಲ ಸಿದ್ಧತೆಗಳೂ ಕಳೆದೆರಡು ದಿನಗಳಿಂದ ಆರಂಭ ಆಗಿದೆ. ಕನ್ನಡ ಚಿತ್ರರಂಗದ ತಾರೆಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಸುಮಲತಾ ಅಂಬರೀಷ್, ಡಾಲಿ ಧನಂಜಯ್, ವಿನೋದ್ ಪ್ರಭಾಕರ್, ಪ್ರಜ್ವಲ್ ದೇವರಾಜ್, ನಿನಾಸಂ ಸತೀಶ್, ಅಭಿಷೇಕ್ ಅಂಬರೀಷ್, ಧನ್ವೀರ್, ಚಿಕ್ಕಣ್ಣ, ವಿನೋದ್ ರಾಜ್, ನೆನಪಿರಲಿ ಪ್ರೇಮ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.
ವೇದಿಕೆ ಮೇಲೆ ಚಂದನವನದ ನಟ-ನಟಿಯರು ಮನರಂಜನೆ ನೀಡಲಿದ್ದಾರೆ. ಸೋನು ಗೌಡ, ಸಾನ್ಯ ಅಯ್ಯರ್, ಬೃಂದಾ ಆಚಾರ್ಯ, ಶರಣ್ಯ ಶೆಟ್ಟಿ, ಪ್ರಿಯಾಂಕಾ ಮುಂತಾದವರು ಡ್ಯಾನ್ಸ್ ಮಾಡಲಿದ್ದಾರೆ.ಸುಮಾರು 25 ಸಾವಿರಕ್ಕೂ ಅಧಿಕ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಹೀಗಾಗಿ ಅಷ್ಟೂ ಆಸನಗಳಿಗೆ ವ್ಯವಸ್ಥೆ ಮಾಡಲಾಗಿದೆ. ಇನ್ನು ಈ ಬೆಳ್ಳಿ ಪರ್ವ ಕಾರ್ಯಕ್ರಮದಲ್ಲಿ ದರ್ಶನ್ ಫೇವರಿಟ್ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಸಂಗೀತ ಕಾರ್ಯಕ್ರಮ ನೀಡುತ್ತಿದ್ದಾರೆ.
ಇದನ್ನೂ ಓದಿ: Actor Darshan: ಮಹಿಳೆಗೆ ನಾಯಿ ಕಚ್ಚಿದ ಕೇಸ್; ಚಾರ್ಜ್‌ಶೀಟ್‌ನಲ್ಲಿ ನಟ ದರ್ಶನ್ ಹೆಸರು ಕೈಬಿಟ್ಟ ಪೊಲೀಸರು
ಇದನ್ನೂ ಓದಿ: Actor Darshan: ದರ್ಶನ್ ಚಿತ್ರರಂಗಕ್ಕೆ ಬಂದು 25 ವರ್ಷ; ಹೇಗಿರಲಿದೆ ‘ಬೆಳ್ಳಿ ಪರ್ವ’ ಆಚರಣೆ?
25ನೇ ವರ್ಷಕ್ಕೆ ದರ್ಶನ್ ಅವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅವರ ನಟನೆಯ ‘ಕಾಟೇರ’ ಚಿತ್ರ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ದರ್ಶನ್ ಸಿನಿಕರಿಯರ್‌ನಲ್ಲಿ ಹೊಸ ಮೈಲುಗಲ್ಲು ಸೃಷ್ಟಿಸಿದ್ದ ಕಾಟೇರ ಬಾಕ್ಸಾಫೀಸ್ ನಲ್ಲಿ ಕೋಟಿ ಕೋಟಿ ಲೂಟಿ ಮಾಡಿತ್ತು. ಪ್ಯಾನ್ ಇಂಡಿಯಾ ಚಿತ್ರಗಳ ಅಬ್ಬರದ ನಡುವೆಯೂ ನಮ್ಮ ನೆಲದ ಕಥೆಗೆ ಪ್ರೇಕ್ಷಕ ಜೈಕಾರ ಹಾಕಿದ್ದರು. ರಾಕ್‌ಲೈನ್ ವೆಂಕಟೇಶ್ ನಿರ್ಮಿಸಿರುವ ಈ ಸಿನಿಮಾವನ್ನು ಒಟಿಟಿಗೆ ಜೀ 5 ವಹಿವಾಟು ಮುಗಿಸಿತ್ತು. ನಿರ್ಮಾಪಕರು ಹಾಗೂ ಒಟಿಟಿ ವೇದಿಕೆ ಜೊತೆ ಮಾಡಿಕೊಂಡ ಒಡಂಬಡಿಕೆಯಂತೆ ‘ಕಾಟೇರ’ ಈಗಾಗಲೇ ಪ್ರೀಮಿಯರ್ ಆಗುತ್ತಿದೆ.