ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ (Actor Darshan). ಕಸ್ಟಡಿಯಲ್ಲಿರುವ ನಟ ದರ್ಶನ್ (Actor Darshan), ಪವಿತ್ರಾ ಗೌಡ ಸೇರಿ ಇತರ ಆರೋಪಿಗಳನ್ನು ಪಟ್ಟಣಗೆರೆಯ ಶೆಡ್‌ಗೆ ಬುಧವಾರ ಕರೆದೊಯ್ದು ಸ್ಥಳ ಮಹಜರು ನಡೆಸಿದರು. ಕೇಸ್ನಲ್ಲಿ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಅವರ ಜೊತೆ ಪವಿತ್ರಾ ಕೂಡ ಬಂಧನಕ್ಕೆ ಒಳಗಾಗಿದ್ದಾರೆ. ಸದ್ಯ ಇವರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಈ ಪ್ರಕರಣದ ಬಗ್ಗೆ ಆರ್ಜಿವಿ ಮಾತನಾಡಿದ್ದಾರೆ. ದರ್ಶನ್ ಅವರು ಕೊಲೆ ಕೇಸ್ನಲ್ಲಿ ಭಾಗಿ ಆಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಹೊಸ ಹೊಸ ಕಥೆ ಹೇಳುತ್ತಿದ್ದಾರೆ ಎಂಬರ್ಥದಲ್ಲಿ ಆರ್ಜಿವಿ ಮಾತನಾಡಿದ್ದಾರೆ.
ಎಕ್ಸ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ. ʻʻ”ಚಿತ್ರ ನಿರ್ಮಾಪಕರು ಚಿತ್ರಕಥೆಯನ್ನು ಅಂತಿಮಗೊಳಿಸಿದ ನಂತರವೇ ಚಿತ್ರೀಕರಣವನ್ನು ಪ್ರಾರಂಭಿಸುತ್ತಾರೆ. ಚಿತ್ರೀಕರಣ ನಡೆಯುತ್ತಿರುವಾಗ ಸಾಕಷ್ಟು ಬಾರಿ ನಿರ್ಮಾಪಕರು ಬರೆಯುತ್ತಾರೆ. ಆದರೆ ದರ್ಶನ್ ಕೊಲೆ ಪ್ರಕರಣದಲ್ಲಿ, ಸಿನಿಮಾ ಬಿಡುಗಡೆ ಆದ ಬಳಿಕ ಚಿತ್ರಕಥೆ ಬರೆಯಲಾಗುತ್ತಿದೆ’ ಎಂದಿದ್ದಾರೆ. ದರ್ಶನ್ ಅವರು ಕೊಲೆ ಕೇಸ್ನಲ್ಲಿ ಭಾಗಿ ಆಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಹೊಸ ಹೊಸ ಕಥೆ ಹೇಳುತ್ತಿದ್ದಾರೆ ಎಂಬರ್ಥದಲ್ಲಿ ಆರ್ಜಿವಿ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: Actor Darshan : ನಟ ದರ್ಶನ್ ವಿರುದ್ಧ ಸಿಡಿದೆದ್ದ ಮಂಡ್ಯ ರೈತರು; ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ
ಇನ್ನೊಂದು ಪೋಸ್ಟ್‌ನಲ್ಲಿ ʻʻವೈಯಕ್ತಿಕ ಜೀವನದಲ್ಲಿ ಮಧ್ಯಪ್ರವೇಶಿಸುತ್ತಿರುವ ಅಭಿಮಾನಿಯನ್ನು ಕೊಲ್ಲಲು ಸ್ಟಾರ್ ನಟ ಕಟ್ಟರ್ ಅಭಿಮಾನಿಗಳನ್ನೇ ಬಳಿಸಿಕೊಂಡಿದ್ದಾರೆ. ಇದು ಸ್ಟಾರ್ ಹೀರೋಗಳ ಆರಾಧನಾ ಸಂಸ್ಕೃತಿಯ ವಿಲಕ್ಷಣತೆಗೆ ಸೂಕ್ತ ಉದಾಹರಣೆ. ವ್ಯಕ್ತಿ ಆರಾಧನೆ ಅತಿರೇಕಕ್ಕೆ ಹೋದರೆ ಯಾವ ರೀತಿಯ ದುರಂತ ಸಂಭವಿಸಬಹುದು ಎನ್ನುವುದಕ್ಕೆ ಇದು ಉತ್ತಮ ಉದಾಹರಣೆ”ಎಂದು ಬರೆದುಕೊಂಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಹೇಗೆ ನಡೆದಿತ್ತು?
ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್ ಸೇರಿ ಹಲ್ಲೆ ಮಾಡಿದ್ದರು.
ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ 80 ಪರ್ಸೆಂಟ್ ಸಾವನ್ನಪ್ಪಿದ್ದ. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ನಟ ದರ್ಶನ್ ಸಹ ಹಲ್ಲೆ ಮಾಡಿದ್ದಾರೆ.
ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸಂಜೆ 6.30ರ ಸುಮಾರಿಗೆ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದ. ಅದಾದ ಮೇಲೆ ರಾತ್ರಿ ಒಂದು ಗಂಟೆವರೆಗೆ ಮೃತದೇಹದೊಂದಿಗೆ ಹಂತಕರು ಇದ್ದರು. ಬಳಿಕ ದರ್ಶನ್‌ಗೆ ರಾಘವೇಂದ್ರ ಹಾಗೂ ವಿನಯ್ ಮಾಹಿತಿ ನೀಡಿದ್ದರು. ಬಳಿಕ ಶವ ಬಿಸಾಡುವುದರ ಬಗ್ಗೆ ಡೀಲ್ ನಡೆದಿದೆ. ನಂತರ ಜೂನ್ 9ರಂದು ಬೆಳಗ್ಗೆ ಸುಮನಹಳ್ಳಿ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು.