Site icon Vistara News

Actor Darshan: ದರ್ಶನ್ & ಗ್ಯಾಂಗ್ ಪೊಲೀಸ್ ವಿಚಾರಣೆ ಲೈವ್ ಸ್ಟ್ರೀಮಿಂಗ್ ಆಗಬೇಕು ಎಂದ ಉಪೇಂದ್ರ!

Actor Darshan case real star upendra react about case

ಬೆಂಗಳೂರು: ದರ್ಶನ್‌ (Actor Darshan) ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಉಪೇಂದ್ರ ಅವರು ಈಗ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ʻʻಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು. ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರಿದಿದ್ದು ಎಲ್ಲವನ್ನೂ ವಿಡಿಯೊ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದುʼʼಎಂದು ನೇರವಾಗಿಯೇ ಹೇಳಿಕೊಂಡಿದ್ದಾರೆ.

ಉಪೇಂದ್ರ ಎಕ್ಸ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. ʻʻದರ್ಶನ್ – ರೇಣುಕಾ ಸ್ವಾಮಿ – ಪಾರದರ್ಶಕ ವಿಚಾರಣೆ …..
ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟಿವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ,
ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ…… ಯಾವುದೇ ಕೇಸ್ ಆದರೂ ಆ ಕೇಸ್ ನ ವಿಚಾರಣೆಯ ವೀಡಿಯೊ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂದ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು.

ಇದನ್ನೂ ಓದಿ: Shah Rukh Khan: ʻನಾಯಕ್‌ʼ ಸಿನಿಮಾಗೆ ಶಾರುಖ್‌ ಹೀರೊ ಆಗಬೇಕಿತ್ತು! 1 ರೂ. ಅಡ್ವಾನ್ಸ್ ಪಡೆದಿದ್ದರು!

(ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರಿದಿದ್ದು ಎಲ್ಲವನ್ನೂ ವಿಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು) ಅದೇ ರೀತಿ
ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವಿಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ.

ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟಿವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೇ ಪೊಲೀಸ್ ಮತ್ತು ಟಿವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆʼʼಎಂದು ಬರೆದುಕೊಂಡಿದ್ದಾರೆ.

ದರ್ಶನ್‌ ಕೈವಾಡವೇನು?

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮತ್ತೊಂದಿಷ್ಟು ಮೂಲಗಳ ಪ್ರಕಾರ, ರೇಣುಕಾಸ್ವಾಮಿ ಮೇಲೆ ದರ್ಶನ್‌ ಅವರೇ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದಾದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಂತರ ಶವವನ್ನು ಚರಂಡಿ ಬಳಿ ಎಸೆಯಲಾಗಿತ್ತು ಎನ್ನಲಾಗಿದೆ.

Exit mobile version