Site icon Vistara News

Actor Darshan: ಎಲ್ಲಾ ಹಣೆಬರಹ ಸ್ವಾಮಿ ಏನು ಮಾಡೋದು? ದರ್ಶನ್‌ ಕೇಸ್‌ ಬಗ್ಗೆ ಶಿವಣ್ಣ ಮಾತು!

Actor Darshan case Shivaraj Kumar reaction

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ (ಶಿವಾನಂದ ಸರ್ಕಲ್) ಉದ್ಘಾಟನಾ ಸಮಾರಂಭವನ್ನು (Actor Darshan) ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಹೊಸ ಕಟ್ಟಡವನ್ನು ಉದ್ಘಾಟಿಸಿದರು. ಈ ವೇಳೆ ನಟ ಶಿವರಾಜ್‌ಕುಮಾರ್‌ ಕೂಡ ಭಾಗಿಯಾಗಿದ್ದರು. ಈ ವೇಳೆ ದರ್ಶನ್‌ (Actor Darshan) ಕುರಿತಾಗಿ ಮಾತನಾಡಿದರು.

ಶಿವಣ್ಣ ಮಾತನಾಡಿ ʻʻಈ ವಿಚಾರದ ಬಗ್ಗೆ ಬೇಸರ ಆಗತ್ತೆ. ಅದೆಲ್ಲ ಹಣೆಬರಹ. ಹಣೆ ಬರಹ ಅನ್ನೋದು ಒಂದು ಇರುತ್ತೆ. ಏನೇ ಮಾತನಾಡಿದರೂ ಅದು ಸರಿನಾ ಎಂದು ಯೋಚನೆ ಮಾಡಬೇಕು. ನಾವು ಬಂದರೋದು ಎದುರಿಸಲೇ ಬೇಕು. ಈಗಾಗಲೇ ತನಿಖೆ ಆಗುತ್ತಿದೆ. ಯಾಕಪ್ಪ ಹೀಗೆ ಆಯ್ತು ಅಂತ ಬೇಜಾರ ಆಗುತ್ತೆ. ಎರಡೂ ಕುಟಂಬಗಳು ಬೇಜಾರಿನ ಲ್ಲಿದೆ. ನ್ಯಾಯ ಎಲ್ಲಿದೆ ಮುಂದೆ ಗೊತ್ತಾಗತ್ತೆʼʼಎಂದರು.

ಇದನ್ನೂ ಓದಿ: Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

ಕನ್ನಡ ಚಲನಚಿತ್ರಗಳ ಬೆಳವಣಿಗೆಗೆ ಸರ್ಕಾರದಿಂದ ಸಹಾಯ ಎಂದ ಸಿದ್ದರಾಮಯ್ಯ

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡದ ಉದ್ಘಾಟಿಸಿ ನಂತರ ಮಾಧ್ಯಮದವರೊಂದಿಗೆ ಸಿದ್ದರಾಮಯ್ಯ ಮಾತನಾಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಿನ್ನೆ ರಾತ್ರಿ 8.00 ಗಂಟೆಗೆ ಸಮಾಯ ಕೊಟ್ಟಿದ್ದರು. ಈ ಕಾರ್ಯಕ್ರಮಕ್ಕಾಗಿ ನಿನ್ನೆಯೇ ದೆಹಲಿಯಿಂದ ಹೊರಟು ಉದ್ಘಾಟನೆ ತಪ್ಪಿಸಬಾರದೆಂದು ಆಗಮಿಸಿದ್ದೇನೆ ಎಂದರು.

ʻʻ1972 ರಿಂದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದವರು ಅನೇಕ ಚಟುವಟಿಕೆಗಳಲ್ಲಿ ಭಾಗವಹಿಸಿ ಬಹಳ ಕಷ್ಟದ ದಿನಗಳಿದ್ದರೂ ಕೂಡ ಚಲನಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ನಿರ್ಮಾಪಕರಿಗೆ ಅಭಿನಂದಿಸುತ್ತೇನೆʼʼ ಎಂದು ತಿಳಿಸಿದ ಮುಖ್ಯಮಂತ್ರಿಗಳು ಕಟ್ಟಡವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ ಎಂದರು.

ʻʻಆರ್ಥಿಕ ಸಹಾಯವನ್ನು ಸಂಘ ಕೇಳಿಯೇ ಇಲ್ಲ. ಸರ್ಕಾರದಿಂದ ಆರ್ಥಿಕ ಸಹಾಯ ಮಾಡಿಯೇ ಮಾಡುತ್ತದೆ
ಮೈಸೂರಿನಲ್ಲಿ ಚಿತ್ರ ನಗರಿ ನಿರ್ಮಾಣವನ್ನು ಪಿ.ಪಿ.ಪಿ ಮಾದರಿಯಲ್ಲಿ ಕೈಗೊಳ್ಳಲಿದ್ದು, ನೂರು ಎಕರೆಗೂ ಹೆಚ್ಚು ಜಮೀನು ಒದಗಿಸಿದೆ . ಚಿತ್ರನಗರಿ ಡಾ: ರಾಜ್ ಕುಮಾರ್ ಅವರ ಕನಸಾಗಿತ್ತು ಅದನ್ನು ನನಸಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ .ಕನ್ನಡದಲ್ಲಿ ಸರ್ಕಾರದ ವತಿಯಿಂದ ಓಟಿಟಿ ವೇದಿಕೆ ಸೃಜಿಸಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿ ಸರ್ಕಾರ ಇದನ್ನು ಪರಿಶೀಲಿಸಿದ ಕ್ರಮ ಕೈಗೊಳ್ಳಲಿದೆ. ಕನ್ನಡ ಚಿತ್ರಗಳಿಗೆ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆʼʼ ಎಂದರು.

Exit mobile version