ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಬಗ್ಗೆ ದರ್ಶನ್ (Darshan) ನನಗೆ ಏನೂ ಗೊತ್ತಿಲ್ಲ ಎನ್ನುತ್ತಿದ್ದಾರೆ ದರ್ಶನ್ (Actor Darshan ) . ಈ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧ ಇಲ್ಲ ಎನ್ನುತ್ತಿದ್ದಾರೆ. ಈ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಹಾಗೂ ದರ್ಶನ್ ಎ2 ಆರೋಪಿ ಆಗಿದ್ದು. 17 ಮಂದಿ ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಈ ಪ್ರಕರಣ ಬಯಲಾದ ನಂತರ ದರ್ಶನ್ ಕ್ರಿಮಿನಲ್ ಬುದ್ಧಿಯ ಪ್ರಕರಣಗಳು ಒಂದೊಂದಾಗಿ ಹೊರಕ್ಕೆ ಬರುತ್ತಿದೆ. ಹೀಗಿದ್ದರೂ ದಚ್ಚು ಅಭಿಮಾನಿಗಳು ʻʻದರ್ಶನ್ ಕಂಡರೆ ಆಗದವರು ಮಾಡಿರುವ ಕೆಲಸ, ಅವರ ಏಳಿಗೆ ಸಹಿಸದವರು ಮಾಡುತ್ತಿರುವ ಈ ರೀತಿ ಅವರಿಗೆ ತೊಂದರೆ ನೀಡುತ್ತಿದ್ದಾರೆ. ಬಾಸ್ ಜತೆ ನಾವಿದ್ದೇವೆʼʼಎಂದು ಹೇಳುತ್ತಿದ್ದಾರೆ. ಮಾತ್ರವಲ್ಲ ʻದಾಸʼನ ಕಷ್ಟ ಕಂಡು ಕಣ್ಣೀರಿಡುತ್ತಿದ್ದಾರೆ.
ಇದೀಗ ಮಹಿಳಾ ಅಭಿಮಾನಿ ಒಬ್ಬರು ವಿಡಿಯೊ ಮೂಲಕ ಕಣ್ಣಿರು ಹಾಕಿರುವ ವಿಡಿಯೊ ವೈರಲ್ ಆಗುತ್ತಿದೆ. ವಿಡಿಯೊದಲ್ಲಿ ಮಹಿಳಾ ಅಭಿಮಾನಿ ʻʻನೀವು ಅಪರಾಧಿನೋ, ನಿರಾಪರಾಧಿನೋ ಗೊತ್ತಿಲ್ಲ. ಆದರೆ ನಿಮ್ಮನ್ನು ಈ ಸ್ಥಿತಿಯಲ್ಲಿ ನೋಡೊದು ತುಂಬ ಕಷ್ಟ ಆಗ್ತಿದೆ. ಆದರೆ ನಿಮ್ಗೆ ಯಾವುದೆ ಕಷ್ಟ ಬಂದ್ರು ನಿಮ್ಮ ಜತೆ ಯಾವಗ್ಲೂ ಇರುತ್ತೇವೆʼʼಎಂದು ಬಿಕ್ಕಿ ಬಿಕ್ಕಿ ಅತ್ತು ಹೇಳಿಕೊಂಡಿದ್ದಾರೆ. ಇನ್ನು ಕೆಲವರು ಸೋಷಿಯಲ್ ಮೀಡಿಯಾ ಮೂಲಕ ದರ್ಶನ್ ಅವರಿಗೆ ಕ್ಲಾಸ್ ತೆಗದುಕೊಂಡಿದ್ದಾರೆ.
ಇದನ್ನೂ ಓದಿ: Actor Darshan: ಸೋದರ ಮಾವಂದಿರನ್ನೇ ಬೀದಿಪಾಲು ಮಾಡಿದ್ದ ದರ್ಶನ್, ಒಂದೊಂದಾಗಿ ಹೊರಬರುತ್ತಿದೆ ‘ದಾಸ’ನ ದುರ್ಬುದ್ಧಿ !
ದರ್ಶನ್ ಅವರು ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದಾರೆ. ಈಗಾಗಲೇ ಪೊಲೀಸ್ ಕಸ್ಟಡಿ ಅವಧಿ ಪೂರ್ಣಗೊಳ್ಳುವ ಹಂತ ತಲುಪಿದೆ. ದರ್ಶನ್ ತಮಗೆ ಇರುವ ಪ್ರಭಾವ ಬಳಸಿಕೊಂಡು ಹೊರಗೆ ಬರುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಆ ರೀತಿ ಆಗಿಲ್ಲ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇದರಿಂದ ಅವರು ಕಂಗಾಲಾಗಿದ್ದಾರೆ.
ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್ ಸೇರಿ ಹಲ್ಲೆ ಮಾಡಿದ್ದರು. ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ ಸ್ಥಿತಿ ಗಂಭೀರವಾಗಿತ್ತು. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ.
ಕೊನೆಗೆ ನಟ ದರ್ಶನ್ ಸಹ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸಂಜೆ 6.30ರ ಸುಮಾರಿಗೆ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದ. ಅದಾದ ಮೇಲೆ ರಾತ್ರಿ ಒಂದು ಗಂಟೆವರೆಗೆ ಮೃತದೇಹದೊಂದಿಗೆ ಹಂತಕರು ಇದ್ದರು. ಬಳಿಕ ದರ್ಶನ್‌ಗೆ ರಾಘವೇಂದ್ರ ಹಾಗೂ ವಿನಯ್ ಮಾಹಿತಿ ನೀಡಿದ್ದರು. ಬಳಿಕ ಶವ ಬಿಸಾಡುವುದರ ಬಗ್ಗೆ ಡೀಲ್ ನಡೆದಿದೆ. ನಂತರ ಜೂನ್ 9ರಂದು ಬೆಳಗ್ಗೆ ಸುಮನಹಳ್ಳಿ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು. ರೇಣುಕಾಸ್ವಾಮಿಗೆ ಒದ್ದಿರುವುದು ನಿಜ ಎಂಬುದಾಗಿ ವಿಚಾರಣೆ ವೇಳೆ ದರ್ಶನ್ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.