ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renuka Swamy murder case) ಸ್ಯಾಂಡಲ್‌ವುಡ್ ನಟ ದರ್ಶನ್ (Actor Darshan) ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಂಬಿ ಎಣಿಸುತ್ತಿದ್ದು, ಅವರ ಭವಿಷ್ಯ ಇಂದು (ಜೂನ್ 15) ನಿರ್ಧಾರವಾಗಲಿದೆ. ಇನ್ನೊಂದೆಡೆ ರೇಣುಕಾ ಸ್ವಾಮಿಯ ಕೊಲೆ ಪ್ರಕರಣದಲ್ಲಿ ಚಿತ್ರದುರ್ಗದ ಅನುಕುಮಾರ್ ಅಲಿಯಾಸ್ ಅನು ಕೂಡ ಆರೋಪಿಯಾಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇದರಿಂದ ಮನನೊಂದು ಅನು ತಂದೆ ಚಂದ್ರಣ್ಣ ಹೃದಯಾಘಾತದಿಂದ ನಿಧನರಾಗಿದ್ದಾರೆ. ಘಟನೆಯ ಕುರಿತಂತೆ ಅನು ಕುಟುಂಬದವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಕುಟುಂಬದವರು ಮಾಹಿತಿ ನೀಡಿ ʻʻಮಗ ಅರೆಸ್ಟ್ ಆಗಿದ್ದಕ್ಕೆ ತಂದೆಗೆ ಹೀಗೆ ಆಗಿದೆ. ಮಗ ಇಲ್ಲದೇ ಚಂದ್ರಣ್ಣ ಅವರನ್ನು ಮಣ್ಣಾಗಿಸಲು ಬಿಡುವುದಿಲ್ಲ. ಎಷ್ಟೇ ದಿನ ಆದರೂ ಶವ ಇಲ್ಲೇ ಇಡುತ್ತೇವೆ. ಅನು ಬರುವವರೆಗೂ ಶವ ಎತ್ತಲ್ಲʼʼಎಂದು ಹೇಳಿಕೆ ನೀಡಿದ್ದಾರೆ.
ಇನ್ನು ಅನುಕುಮಾರ್ ಚಿಕ್ಕಪ್ಪ ಕೂಡ ಪ್ರತಿಕ್ರಿಯೆ ನೀಡಿ ‘ನನ್ನ ಅಣ್ಣನ ಸಾವಿಗೆ ದರ್ಶನ್ ಕಾರಣ. ಅವರೊಬ್ಬರೇ ಕೊಲೆ ಮಾಡಿದ್ದರೆ ಆಗಿತ್ತು. 16 ಜನರನ್ನು ಇಟ್ಟುಕೊಂಡು ಮಾಡೋದು ಬೇಕಿರಲಿಲ್ಲ. ಇಲ್ಲಿ ಬಡವರೇ ಸಾಯೋದು;ʼʼಎಂದು ಬೇಸರ ಹೊರ ಹಾಕಿದ್ದಾರೆ.
ಇದನ್ನೂ ಓದಿ: Actor Darshan: ಪ್ರಾಯಶ್ಚಿತದ ಬೇಗೆಯಲ್ಲಿ ದರ್ಶನ್; ದುಃಖ ತೋಡಿಕೊಂಡ ಚಾಲೆಂಜಿಂಗ್ ಸ್ಟಾರ್ ಹೇಳಿದ್ದೇನು?
ಮತ್ತೊಬ್ಬ ವ್ಯಕ್ತಿ ಪೊಲೀಸ್ ವಶಕ್ಕೆ
ಈ ಮಧ್ಯೆ ಪೊಲೀಸರು ತಡರಾತ್ರಿ ದರ್ಶನ್ ಮತ್ತು ಸಹಚರರಿಗೆ ಸಹಾಯ ಮಾಡಿದ್ದ ಇನ್ನೋರ್ವ ವ್ಯಕ್ತಿಯನ್ನೂ ವಶಕ್ಕೆ ಪಡೆದಿದ್ದಾರೆ. ಈತ ಆರೋಪಿಗಳ ಮೊಬೈಲ್ ಡೇಟಾ ಡಿಲೀಟ್ ಮಾಡಲು ಸಹಾಯ ಮಾಡಿದ್ದ ಎನ್ನಲಾಗಿದ್ದು, ಆತನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಏನಿದು ಪ್ರಕರಣ?
ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ವ್ಯಕ್ತಿಯ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ ಹಲವರ ಹೆಸರು ಕೇಳಿ ಬಂದಿದೆ. ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್ ಸೇರಿ ಹಲ್ಲೆ ಮಾಡಿದ್ದರು.
ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ 80 ಪರ್ಸೆಂಟ್ ಸಾವನ್ನಪ್ಪಿದ್ದ. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ನಟ ದರ್ಶನ್ ಸಹ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸಂಜೆ 6.30ರ ಸುಮಾರಿಗೆ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದ. ಅದಾದ ಮೇಲೆ ರಾತ್ರಿ ಒಂದು ಗಂಟೆವರೆಗೆ ಮೃತದೇಹದೊಂದಿಗೆ ಹಂತಕರು ಇದ್ದರು. ಬಳಿಕ ದರ್ಶನ್‌ಗೆ ರಾಘವೇಂದ್ರ ಹಾಗೂ ವಿನಯ್ ಮಾಹಿತಿ ನೀಡಿದ್ದರು. ಬಳಿಕ ಶವ ಬಿಸಾಡುವುದರ ಬಗ್ಗೆ ಡೀಲ್ ನಡೆದಿದೆ. ನಂತರ ಜೂನ್ 9ರಂದು ಬೆಳಗ್ಗೆ ಸುಮನಹಳ್ಳಿ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು. ಜೂನ್ 11ರಂದು ದರ್ಶನ್ ಸಹಿತ ಹಲವರನ್ನು ಪೊಲೀಸರು ಬಂಧಿಸಿದ್ದರು.