Site icon Vistara News

Actor Darshan: ಕೃಷಿ ಇಲಾಖೆ ರಾಯಭಾರಿ ಹುದ್ದೆಯಿಂದ ಕೊಲೆ ಆರೋಪಿ ದರ್ಶನ್‌ ವಜಾ!

Actor Darshan continue as Agriculture Department ambassador What MB Patil said

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸ್‌ ಕಸ್ಟಡಿ ಪಾಲಾಗಿರುವ ನಟ ದರ್ಶನ್  (Actor Darshan) ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯೂ ಆಗಿದ್ದರು. ದರ್ಶನ್‌ 2021ರ ಫೆಬ್ರವರಿಯಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ದರ್ಶನ್‌ ಕೃಷಿ ಇಲಾಖೆಯ ರಾಯಭಾರಿಯಾಗಿದ್ದರು. ಇದೀಗ ರೇಣುಕಾಚಾರ್ಯ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿದೆ. ಕೊಲೆ ಆರೋಪ ಎದುರಿಸುತ್ತಿರುವ ನಟ ದರ್ಶನ್ (Darshan) ಅವರು ಕೃಷಿ ಇಲಾಖೆಯ ರಾಯಭಾರಿ ಹುದ್ದೆಯಿಂದ ವಜಾ ಮಾಡುವುದು ಖಚಿತವಾಗಿದೆ. ದರ್ಶನ್‌ ಇನ್ನು ಕೃಷಿ ರಾಯಭಾರಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ಈ ಬಗ್ಗೆ ಎಂ.ಬಿ ಪಾಟೀಲ್ ಮಾತನಾಡಿ ʻʻದರ್ಶನ್‌ಗೆ ರಾಜಮರ್ಯಾದೆಯ ಪ್ರಶ್ನೆಯೇ ಇಲ್ಲ. ಆರೋಪಿ ಆರೋಪಿಯೇ. ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆ ಆಗುತ್ತದೆ. ದರ್ಶನ್ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ. ಈ ರೀತಿಯ ಘಟನೆ ಆದ ಬಳಿಕ ರಾಯಭಾರಿಯಾಗಿ ಮುಂದುವರಿಸಲು ಆಗುವುದಿಲ್ಲʼʼ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ, ಬಾಡೂಟ, ಎಣ್ಣೆ ಪಾರ್ಟಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿತ್ತು. ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ ಬಳಕೆ, ಅರಣ್ಯ ಸಿಬ್ಬಂದಿ ಜತೆ ‌ಬಾಡೂಟ, ಎಣ್ಣೆ ಪಾರ್ಟಿ ಮಾಡುವ ಮೂಲಕ ಅರಣ್ಯ ಮತ್ತು ವನ್ಯಜೀವಿ ಕಾಯ್ದೆ ಉಲ್ಲಂಘಿಸಿದ್ದಾರೆ ಎನ್ನಲಾಗಿತ್ತು. ನಟ ದರ್ಶನ್ ಅವರು ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯೂ ಆಗಿದ್ದು, ಜಿಲ್ಲೆಯ ಮುತ್ತೋಡಿ, ಭದ್ರ ವನ್ಯಜೀವಿ ತಾಣದಲ್ಲಿ ಖಾಸಗಿ ವಾಹನ ಬಳಕೆ ಮಾಡಿದ್ದಾರೆ. ಅಲ್ಲದೇ ಸೂಕ್ಷ್ಮ ಪ್ರದೇಶಗಳಲ್ಲಿ ಅರಣ್ಯ ಸಿಬ್ಬಂದಿ ಜತೆ ‌ಬಾಡೂಟ, ಎಣ್ಣೆ ಪಾರ್ಟಿ ಮಾಡಿದ್ದಾರೆ ಎನ್ನಲಾಗಿತ್ತು. ವನ್ಯಜೀವಿ ಧಾಮಗಳಿಗೆ ದರ್ಶನ್ ಭೇಟಿ ನೀಡಿದ ಫೋಟೋಗಳು‌ ಸದ್ಯ ವೈರಲ್ ಆಗಿದ್ದವು.

ಇದನ್ನೂ ಓದಿ: Actor Darshan: ಎಷ್ಟೇ ದಿನ ಆದರೂ ಚಂದ್ರಣ್ಣನ ಶವ ಎತ್ತಲ್ಲ; ಅನು ತಂದೆ ನಿಧನಕ್ಕೆ ಸಂಬಂಧಿಕರ ಕಣ್ಣೀರು

ಅರಣ್ಯದ ಸೂಕ್ಷ್ಮ ಪ್ರದೇಶದಲ್ಲಿ ಖಾಸಗಿ ಕಾರುಗಳ ಬಳಕೆ ನಿಷಿದ್ಧ. ಆದರೂ ದರ್ಶನ್‌ ಅವರಿಗೆ ಖಾಸಗಿ ವಾಹನ ಬಳಸಲು ಅನುಮತಿ ನೀಡಲಾಗಿದೆ ಎಂದು ಚಿಕ್ಕಮಗಳೂರಿನ ಅರಣ್ಯ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಗಂಭೀರ ಆರೋಪ ಮಾಡಿದ್ದರು. ಸಾಮಾನ್ಯ ಜನರಿಗೆ ಮಾತ್ರ ಕಠಿಣ ನಿಯಮಗಳು, ಸೆಲೆಬ್ರಿಟಿಗಳಿಗಾದರೆ ನಿಯಮ ಅನ್ವಯಿಸಲ್ಲವೇ ಎಂದು ಜನರು ಪ್ರಶ್ನಿಸಿಸಿದ್ದರು.

ಮತ್ತೊಂದು ಪ್ರಕರಣದಲ್ಲಿ ಎಫ್‌ಐಆರ್‌

ಮೈಸೂರಿನ ಟಿ. ನರಸೀಪುರದಲ್ಲಿರುವ ಫಾರ್ಮ್ ಹೌಸ್‌ನಲ್ಲಿ ನಾಲ್ಕು ಬಾರ್‌ ಹೆಡೆಡ್‌ ಗೂಸ್‌ (ವಿಶಿಷ್ಟ ಪ್ರಭೇದದ ಬಾತುಕೋಳಿ)ಗಳನ್ನು ಸಾಕಿದ ಹಿನ್ನೆಲೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದರ್ಶನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ನಟ ದರ್ಶನ್, ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎನ್ನಲಾಗಿದೆ. ಅರಣ್ಯ ಇಲಾಖೆಯ ವಿಚಕ್ಷಣಾ ವಿಭಾಗದಿಂದ ಎಫ್‌ಐಆರ್ ದಾಖಲಿಸಲಾಗಿದೆ. ಐದು ನೋಟಿಸ್‌ ನೀಡಿದ್ದು, ಇದುವರೆಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಿಲ್ಲ ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.

Exit mobile version