ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ ದರ್ಶನ್. ದರ್ಶನ್ ಪರ ಒಲವು ತೋರಿದವರ (Actor Darshan) ಸಂಖ್ಯೆ ತೀರಾ ಕಡಿಮೆ. ಹಲವು ನಟ ನಟಿಯರು ದರ್ಶನ್ ಪರ ಧ್ವನಿ ಎತ್ತುತ್ತಿದ್ದಾರೆ. ಈ ಸಾಲಿಗೆ ಗಾಯಕಿ ಡಾ.ಶಮಿತಾ ಮಲ್ನಾಡ್ (dr shamitha malnad) ಸೇರ್ಪಡೆಯಾಗಿದ್ದರು. ಇದೀಗ ವಿಸ್ತಾರ ಜತೆ ಶಮಿತಾ ಮಾತನಾಡಿ ʻʻವಿಜಯಲಕ್ಷ್ಮಿ ಹಾಗೂ ದರ್ಶನ್ ನಡುವೆ ಬೆಟ್ಟದಷ್ಟು ಪ್ರೀತಿ ಇದೆ. ಪ್ರೀತಿಸಿ ಮದುವೆ ಆದ ನಂತರ ವಿಜಯಲಕ್ಷ್ಮಿ ಅವರು ದರ್ಶನ್‌ಗಾಗಿ ತಮ್ಮ ಕರಿಯರ್‌ನೇ ತ್ಯಾಗ ಮಾಡಿದ್ದಾರೆʼʼಎಂದು ಹೇಳಿದ್ದಾರೆ.
ಗಾಯಕಿ ಶಮಿತಾ ಮಲ್ನಾಡ್ ಮಾತನಾಡಿ ʻʻದರ್ಶನ್ ಅರೆಸ್ಟ್ ಆದ ನಂತರ ವಿಜಯಲಕ್ಷ್ಮಿ ಅವರನ್ನು ನಾನು ಭೇಟಿ ಮಾಡಿದ್ದೆ. ವಿಜಯಲಕ್ಷ್ಮಿ ಅವರು ಗಟ್ಟಿಗಿತ್ತಿ, ಇಂತ ಸಂದರ್ಭದಲ್ಲೂ ಮೆಂಟಲಿ ತುಂಬಾ ಸ್ಟ್ರಾಂಗ್ ಆಗಿದ್ದಾರೆ. ಪಕ್ಕಾ ಫ್ಯಾಮಿಲಿ ವಿಮೆನ್ ಅವರು. ವಿಜಯಲಕ್ಷ್ಮಿ ಹಾಗೂ ದರ್ಶನ್ ನಡುವೆ ಬೆಟ್ಟದಷ್ಟು ಪ್ರೀತಿ ಇದೆ. ಪ್ರೀತಿಸಿ ಮದುವೆ ಆದ ನಂತರ ವಿಜಯಲಕ್ಷ್ಮಿ ಅವರು ದರ್ಶನ್‌ಗಾಗಿ ತಮ್ಮ ಕರಿಯರ್‌ನೇ ತ್ಯಾಗ ಮಾಡಿದ್ದಾರೆ. ವಿಜಯಲಕ್ಷ್ಮಿ ಸಾಮಾನ್ಯ ಹೆಣ್ಣಲ್ಲ, ಆಕೆಯ ಸ್ಟ್ಯಾಂಡರರ್ಡ್‌ಗೆ ಜಾಬ್ ಆಫರ್ ಬಂದಿದ್ದು ರಿಜೆಕ್ಟ್ ಮಾಡಿದ್ಲು. ಗಂಡ, ಮಗ ಇದೇ ಆಕೆಯ ಪ್ರಪಂಚʼʼಎಂದರು.
ದರ್ಶನ್ ಕುರಿತು ಶಮಿತಾ ಮಾತನಾಡಿ ʻʻದರ್ಶನ್ ಅವರನ್ನು ಮೊದಲು ನೋಡಿದ್ದು ಮೆಜೆಸ್ಟಿಕ್ ಸಿನಿಮಾದ ಚಿತ್ರದ ಸೆಟ್‌ನಲ್ಲಿ. ಈ ಹುಡುಗ ಯಾರು, ಇಷ್ಟೊಂದ್ ಹೈಟ್ ಇದಾರೆ ಅನ್ಕೊಂಡಿದೆ. ತುಂಬಾ ಕಷ್ಟ ಪಟ್ಟು ಕಣ್ಣೀರು ಹಾಕಿ ಮೇಲೆ ಬಂದ ವ್ಯಕ್ತಿ. ಸಾರಥಿ ಸಿನಿಮಾದಲ್ಲಿ ನನ್ನ ಕಂಠದ ಎರಡೂ ಟೈಟಲ್ ಟ್ರ್ಯಾಕ್ ಸೆಲೆಕ್ಟ್ ಮಾಡಿದ್ದೆ ದರ್ಶನ್.ಅಂದಿನಿಂದಲೂ ದರ್ಶನ್ ಹಾಗು ನನ್ನ ನಡುವೆ ಅಣ್ಣ ತಂಗಿ ಸಂಬಂಧ ಬೆಳೆದಿದೆ. ವಿಜಯಲಕ್ಷ್ಮಿ ನನ್ನ ಆಪ್ತ ಸ್ನೇಹಿತೆ. ದರ್ಶನ್ ಈ ಪರಿಸ್ಥಿತಿಗೆ ಪವಿತ್ರಾ ಗೌಡ ಕಾರಣ ಅಂತ ದೂಷಿಸೋಕೆ ಆಗಲ್ಲ. ನಾನು ಡಾಕ್ಟರ್ ಆಗಿ ಹೇಳ್ತಿದೀನಿ ದರ್ಶನ್‌ಗೆ ಕೌನ್ಸೆಲಿಂಗ್ ಅಗತ್ಯ ಇಲ್ಲ. ಹಾಗೆ ನೋಡುದ್ರೆ ಪ್ರತಿ ವ್ಯಕ್ತಿಗೂ ಕೌನ್ಸೆಲಿಂಗ್ ಅಗತ್ಯವಿದೆ. ಕಷ್ಟ ಬಂದಾಗ ರಕ್ತಸಂಬಂಧಿಗಳು ದೂರ ಆಗ್ತಾರೆʼʼಎಂದರು.
ಇದನ್ನೂ ಓದಿ: Actor Darshan: ʻಚಿತ್ರಾಲ್ʼ ಬಿಕಿನಿ ಮಾಡೆಲ್, ಕೆಟ್ಟ ಕಮೆಂಟ್ ಮಾಡಬೇಡಿ ಎಂದ ವಿನಯ್ ಗೌಡ !
ಇದಕ್ಕೂ ಮುಂಚೆ ಶಮಿತಾ ಅವರು ಪೋಸ್ಟ್‌ನನಲ್ಲಿ ʻʻʻʻಮನಸೇ ಮನಸೇ,,, ಸೋಲೋ ಗೆಲುವೋ, ನೋವೋ ನಲಿವೋ, ಏಳೋ ಬೀಳೋ,,ಕಲ್ಲೋ ಮುಳ್ಳೋ ಜೀವನದ ಹಾದಿ ಸುಲಭವಲ್ಲ.. ಯಶಸ್ಸಿನ ಹಾದಿ ಸುಗಮವಲ್ಲ… ಹಸಿವು, ಅವಮಾನ, ನೋವುಂಡು ಯಶಸ್ಸು ಗಳಿಸಿದ ಹೆಸರು
ದರ್ಶನ್ ತೂಗುದೀಪ.. ಸಹಚರ, ಗೆಳೆಯ, ಸೋದರ, ಎಷ್ಟೋ ಜನರಿಗೆ ಸಹಾಯ ಹಸ್ತ ನೀಡಿ ಜೀವನವಾಗಿದ್ದವರು, ಒಳ್ಳೆ ಕೆಲಸಗಳಿಗೆ ಕೈ ಚಾಚಿದ್ದವರು,, ಜಾರಿ ಬಿದ್ದಾಗ ಆಳಿಗೊಂದು ಕಲ್ಲಾಗೋದು ಬೇಡಾ…. ಅವರ ಅಭಿನಯ, ಭೇದವಿಲ್ಲದ ಪ್ರೀತಿ, ಸರಳತೆ, ಸ್ನೇಹ ಅಭಿಮಾನದ ಸಿಹಿ ಉಂಡವರು ನಾವು, ಅಭಿಮಾನಿಯಾಗಿ ಸಿನಿಮಾ ಅಭಿನಯ ನೋಡಿ ಅತ್ತು, ನಕ್ಕು, ಚಪ್ಪಾಳೆ ಶಿಳ್ಳೆ ಹೊಡೆದು ಸಂಭ್ರಮಿಸಿದವರು ನಾವು,, ಆರಡಿ ದೇಹವ ಮೂರಡಿ ಬಗ್ಗಿಸಿ ತಗ್ಗಿ ನಮ್ಮೊಂದಿಗೆ ವಿನಯದಿ ಮಾತಾಡುವಾಗ ಹೆಮ್ಮೆ ಪಟ್ಟವರು ನಾವು,,, ತಪ್ಪಾಗಿದೆಯೋ ಇಲ್ಲವೋ ಏನಾಗಿದೆ ಎಂದು ಅರಿಯದವರು ನಾವು.. ಹಣಕ್ಕೆ ಬಗ್ಗದೆ ಪ್ರೀತಿಗೆ ಬಗ್ಗಿದವರು ಅವರು,,, ತಪ್ಪಾಗಿದ್ದರೆ ನ್ಯಾಯಾಂಗವಿದೆ, ಕಾನೂನಿದೆ,,,
ಶಿಕ್ಷೆ ಇದೇʼʼಎಂದು ಬರೆದುಕೊಂಡಿದ್ದರು.
ʻʻ ಅಕಾಲ ನಿಧನರಾದ ಶ್ರೀ ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ,,, ಅವರ ಕುಟುಂಬ ಹಾಗೂ ಹಲವು ನೊಂದ ಕುಟುಂಬಗಳಿಗೆ ನಮ್ಮೆಲ್ಲರ ಸಾಂತ್ವನ ,, ನೆರವು, ಆಸರೆ, ನ್ಯಾಯ ಬೇಕಿದೆ,, ಹಾಗೆ ಸೋಶಿಯಲ್ ಮೀಡಿಯಾವನ್ನು ದಯವಿಟ್ಟು ಒಳಿತಿಗೆ ಉಪಯೋಗಿಸಿ,, ಎಲ್ಲರ ಮೇಲೆ ಗೌರವವಿರಲಿ,, ಕಾಮೆಂಟ್ಸ್, ಪೋಸ್ಟ್, ಮೇಲೆ ಹಿಡಿತವಿರಲಿ,,
ದರ್ಶನ್ ಅಣ್ಣಾ,, ಕನ್ನಡದ ಕುಟುಂಬ,, ಚಲನಚಿತ್ರದ ಕುಟುಂಬ ನಮ್ಮ ಕುಟುಂಬ,, ಕಲಾವಿದರ ಕುಟುಂಬ,, ಏನೇ ಆದರೂ ನಮ್ಮ ಮನೆಯವರ ಜೊತೆ ನಾವು ಯಾವಾಗ್ಲೂ ಜೊತೆ ಇರುತ್ತೇವೆ,, ಅಲ್ಲವೇ??? ಹಾಗೆ ಪ್ರೀತಿ ಅಭಿಮಾನ ಬದಲಾಗದು,, ತಪ್ಪು ಯಾರು ಮಾಡಿದ್ದರೂ ಶಿಕ್ಷೆ ಆಗಬೇಕು .. ನ್ಯಾಯ ಎಲ್ಲರಿಗೂ ಒಂದೇ,,, ದರ್ಶನ್ ಅವರನ್ನು ಪ್ರೀತಿಸುವ ಎಲ್ಲರಿಗೂ ನೋವಾಗಿದೆ,,ಸಂಕಟವಾಗಿದೆ,, ಇದು ಸಂಯಮ, ತಾಳ್ಮೆ, ಪ್ರಾರ್ಥನೆಯ ಸಮಯ,,
ಸಿಟ್ಟು, ಕೋಪ, ಅಸಹನೆ, ಹತಾಶೆ ದರ್ಶನ್ ಹಾಗೂ ಅವರ ಕುಟುಂಬಕ್ಕೆ ಇನ್ನಷ್ಟು ತೊಂದರೆ ಒಡ್ಡಬಹುದು,,
ಚಿನ್ನ ಕುದಿವ ಕುಲುಮೆಯಲ್ಲಿದೆ, ಕಲ್ಮಶ ಕಳೆದು ಅಪರಂಜಿ ಆಗಿ ಶುದ್ಧವಾಗಿ ಬರಲು ಸಮಯ ಬೇಕು,,, ಕಾಯೋಣ ,, ಸಮಾಧಾನದಿಂದ..ದರ್ಶನ್ ಅಣ್ಣಾ ಅವರಿಗಾಗಿ ಪ್ರಾರ್ಥಿಸೋಣ, ಹಾರೈಸೋಣ…ʼʼಎಂದು ಬರೆದುಕೊಂಡಿದ್ದರು.