Site icon Vistara News

Actor Darshan: ಕಸ್ಟಡಿಯಲ್ಲಿ ʻಡಿ ಬಾಸ್‌ʼ; ನೆಚ್ಚಿನ ನಟನ ವಿರುದ್ಧ ತಿರುಗಿ ಬಿದ್ರಾ ʻದಚ್ಚುʼ ಫ್ಯಾನ್ಸ್?

Actor Darshan fans turn against D boss

ಬೆಂಗಳೂರು: ನಟ ದರ್ಶನ್ (Actor Darshan) ಜತೆಗೆ ವಿನಯ್, ಪ್ರದೋಶ್ ಮತ್ತು ಧನರಾಜ್ ಕಸ್ಟಡಿ ಅಂತ್ಯವಾಗುತ್ತಿದ್ದು, ಪೊಲೀಸರು ಸಂಜೆ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈಗಾಗಲೇ 12 ದಿನ ಪೊಲೀಸ್ ಕಸ್ಟಡಿಯಲ್ಲಿ ಕಳೆದಿರುವ ದರ್ಶನ್ ಮತ್ತು ಇನ್ನಿತರ ಆರೋಪಿಗಳಿಗೆ ಕೋರ್ಟ್‌ ಬಹುತೇಕ ನ್ಯಾಯಾಂಗ ಬಂಧನದ ಆದೇಶ ನೀಡುವ ಸಾಧ್ಯತೆ ಇದೆ. ಕೋರ್ಟ್ ವಿಚರಣೆಗೆ ಮೊದಲೇ ಬಹುತೇಕ ದಚ್ಚು ಅಭಿಮಾನಿಗಳು ನಟನ ವಿರುದ್ಧ ತಿರುಗಿ ಬಿದ್ದಿದ್ದಾರೆ.

ನಟ ದರ್ಶನ್ ಹಾಗೂ ಅವರ ತಂಡದ ಕರಾಳ ಮುಖ ಒಂದೊಂದೇ ಬಯಲು ಆಗುತ್ತಿದ್ದಂತೆ ದರ್ಶನ್ ಮೇಲೆ ಅಭಿಮಾನಿಗಳಿಗೆ ಅಭಿಮಾನ ಕಡಿಮೆ ಆದಂತಿದೆ. ದರ್ಶನ್ ಅಂದ್ರೆ ಜೀವ ಬಿಡ್ತಿದ್ದ ಫ್ಯಾನ್ಸ್, ಇದೀಗ ದರ್ಶನ್ ಹೆಸರನ್ನು ಎಲ್ಲಿಯೂ ನೋಡಲು ಇಷ್ಟ ಪಡುತ್ತಿಲ್ಲ. ಬೈಕ್‌ನಲ್ಲಿ, ಎಲ್ಲಾದರೂ ದರ್ಶನ್‌ ಹೆಸರು ಕಂಡರೆ ಅದನ್ನು ಅಳಿಸುತ್ತಿದ್ದಾರೆ. ದಚ್ಚು ಹೆಸರು ತೆಗೆಯುತ್ತಿರುವ ವಿಡಿಯೊ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಕೆಲವರು ಈ ವಿಡಿಯೊಗೆ ಸಾಥ್‌ ಕೊಟ್ಟಿದ್ದಾರೆ. ʻʻನಿಮ್ಮ ತಂದೆ ತಾಯಿಗಳು ನಿಜವಾದ ಹಿರೋಗಳು ಅವರೆ ನಿಮಗೆ ಪ್ರೇರಣೆʼʼಎಂದು ಕಮೆಂಟ್‌ ಮಾಡಿದ್ದಾರೆ. ಇನ್ನು ಕೆಲವರು ʻʻಕಷ್ಟದ ಸಮಯದಲ್ಲಿ ಬೆನ್ನ ಹಿಂದೆ ಇರುವರು ನಿಜವಾದ ಅಭಿಮಾನಿಗಳುʼʼಎಂದು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Actor Darshan: ಬದುಕು ನಾಯಿ ಪಾಡು ಆಗ್ಬಿಟ್ಟಿದೆ ಎಂದಿದ್ದ ದರ್ಶನ್;‌ ʻದಚ್ಚುʼ ಏಳು ಬೀಳು ಕುರಿತು ಗಣೇಶ್‌ ಕಾಸರಗೋಡು ಹೇಳಿದ್ದು ಹೀಗೆ!

ಪೊಲೀಸರಿಂದ ಸಿದ್ಧತೆ

ದರ್ಶನ್ ಸೇರಿ 4 ಜನ ಬಂಧಿತ ಆರೋಪಿಗಳನ್ನು ಇಂದು ಕೋರ್ಟ್‌ಗೆ ಹಾಜರು ಪಡಿಸಲಿರುವ ಪೊಲೀಸರು ಅದಕ್ಕಾಗಿ ಸಿದ್ಧತೆ ಕೈಗೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಸಂಬಂಧ ಕಳೆದ 12 ದಿನಗಳಿಂದ ಎಲ್ಲ 17 ಆರೋಪಿಗಳ ವಿಚಾರಣೆ ನಡೆಸಿರುವ ಪೊಲೀಸರು ಈಗಾಗಲೇ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ನಂತರ ಕೃತ್ಯಕ್ಕೆ ಸಂಬಂಧಿಸಿದ ಹಲವೆಡೆ ಮಹಜರು ಪ್ರಕ್ರಿಯೆ ನಡೆಸಿ, ಕೊಲೆಗೆ ಸಂಬಂಧಿಸಿದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನೂ ಸಂಗ್ರಹಿಸಿದ್ದಾರೆ.

ಕೊಲೆ ನಡೆದ ಆರ್.ಆರ್‌.ನಗರ ಶೆಡ್ ಬಳಿಯಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ, ಮೃತದೇಹ ಪತ್ತೆಯಾದ ಜಾಗ, ಆರೋಪಿಗಳು ಚಲನವಲನ ನಡೆಸಿದ್ದ ಜಾಗಗಳಲ್ಲಿನ ಸಾಕ್ಷ್ಯ ಕಲೆ ಹಾಕಿದ್ದಾರೆ. ಈಗಾಗಲೇ ಕೃತ್ಯಕ್ಕೆ ಬಳಸಿದ್ದ ವಸ್ತುಗಳು ಸೀಜ್ ಮಾಡಲಾಗಿದೆ. ಕೃತ್ಯ ನಡೆದ ದಿನ ಆರೋಪಿಗಳ ಸಂಪರ್ಕದಲ್ಲಿದ್ದ ನಟ ಚಿಕ್ಕಣ್ಣ, ದರ್ಶನ್ ಪತ್ನಿ ವಿಜಯಲಕ್ಷ್ಮೀ ಮತ್ತಿತರರ ಹೇಳಿಕೆಗಳನ್ನೂ ದಾಖಲಿಸಲಾಗಿದೆ.

ಡಿ ಗ್ಯಾಂಗ್ ಕೊಲೆಯ ಆರೋಪ ಸಾಬೀತು ಪಡಿಸಲು ಪ್ರತಿಯೊಂದು ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಬಟ್ಟೆಗಳು, ರಕ್ತ ಮತ್ತು ಕೂದಲಿನ ಮಾದರಿ ಪಡೆದು ಎಫ್ಎಸ್ಎಲ್‌ಗೆ ರವಾನಿಸಿದ್ದಾರೆ. ಆರೋಪಿಗಳ ಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದ್ದು, ಮೊಬೈಲ್ ಡೇಟಾ ರಿಟ್ರೀವ್ ಮಾಡಿ ತನಿಖೆ ಕೈಗೊಳ್ಳಲಾಗಿದೆ. ತನಿಖೆ ವಿಚಾರವಾಗಿ ಖುದ್ದು ಕಮಿಷನರ್ ದಯಾನಂದ್ ನಿಗಾ ವಹಿಸಿದ್ದು, ಪ್ರತಿದಿನ ತನಿಖೆ ‌ವರದಿ ಪಡೆದು‌ ಚಾರ್ಜ್ ಶೀಟ್ ತಯಾರಿಕೆಗೆ ಸಿದ್ಧತೆ ನಡೆಸಿದ್ದಾರೆ. ದರ್ಶನ್‌ ಜೈಲಿಗೆ ಹೋಗುತ್ತಾರಾ ಎನ್ನುವ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ.

Exit mobile version