ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ (Actor Darshan) ಜೈಲು ಸೇರಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನು ಹಲವು ನಾಯಕರು, ಸೆಲೆಬ್ರಿಟಿಗಳು ರೇಣುಕಾ ಸ್ವಾಮಿ ಕುಟುಂಬಕ್ಕೆ ಸಹಾಯವನ್ನು ಮಾಡಿದ್ದಾರೆ. ನಿನ್ನೆಯಷ್ಟೇ ವಿನೋದ್ ರಾಜ್ ಅವರು ಚಿತ್ರದುರ್ಗಕ್ಕೆ ಹೋಗಿ ಸಂತ್ರಸ್ತ ರೇಣುಕಾ ಸ್ವಾಮಿ ಕುಟುಂಬವನ್ನು ಭೇಟಿ ಮಾಡಿ ಸಾಂತ್ವಾನ ಹೇಳುವ ಜತೆಗೆ 1 ಲಕ್ಷ ರೂಪಾಯಿ ಹಣ ಸಹಾಯವನ್ನು ಸಹ ಮಾಡಿದ್ದರು. ಇದೀಗ ‘ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ರಾಜಕಾರಣಿ ಶಂಕರೇಗೌಡ ಪಾತ್ರದಲ್ಲಿ ನಟ ಗಣೇಶ್ ರಾವ್ (Ganesh Rao) ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿ ದರ್ಶನ್ ಪರವಾಗಿ ಮಾತನಾಡಿದರು. ಜತೆಗೆ ರೇಣುಕಾಸ್ವಾಮಿ ಕುಟುಂಬಕ್ಕೆ ಗಣೇಶ್ ರಾವ್ ಹಣ ಸಹಾಯ ಮಾಡಿದರು.
ಮೃತ ರೇಣುಕಾಸ್ವಾಮಿ ಅವರ ಮನೆಗೆ ನಟ ಗಣೇಶ್ ರಾವ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿದ ನಟ ಗಣೇಶ್ ರಾವ್, ರೇಣುಕಾಸ್ವಾಮಿ ಅವರ ಕುಟುಂಬಸ್ಥರ ಮುಂದೆಯೇ ದರ್ಶನ್ ಪರವಾಗಿ ಮಾತನಾಡಿದರು.
ಗಣೇಶ್ ರಾವ್ ಮಾತನಾಡಿ ʻʻನಾವು ಯಾರನ್ನೂ ಸಮರ್ಥಿಸಿಕೊಳ್ಳುತ್ತಿಲ್ಲ. ದರ್ಶನ್ ಜತೆ ನಾವು 13 ಸಿನಿಮಾಗಳನ್ನು ಮಾಡಿದ್ದೇವೆ. ಆ ಮನುಷ್ಯ ಅಷ್ಟು ಕ್ರೂರಿ ಅಲ್ಲ. ಸೆಲೆಬ್ರಿಟಿ ಆದ ಕಾರಣ ಹೆಸರು ಮುನ್ನಲೆಗೆ ಬರುತ್ತಿದೆ. ನನಗೆ ಆತ್ಮ ಸಾಕ್ಷಿ ಹೇಳುತ್ತ ಇದೆ. ದರ್ಶನ್ ಅವರು ಆ ಮಟ್ಟಕ್ಕೆ ಇಳಿಯಲು ಸಾಧ್ಯವಿಲ್ಲ. ಅವರ ಜತೆ ಇದ್ದ ಸಂಗಡಿಗರು ಹೀಗೆ ಮಾಡಿದ್ದರಿಂದ ಅಪವಾಧ ಅವರ ಮೇಲೆ ಹೀಗೆ ಬಂದಿದೆ. ಇಲ್ಲಿ ಬಿಂಬಿಸುತ್ತಿರುವುದು ದರ್ಶನ್ ಅವರನ್ನು. ನ್ಯಾಯಾಲಕ್ಕೆ ಮುಂಚೆನೆ ಅವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ ಬಿಟ್ಟಿದ್ದಾರೆ. ತಪ್ಪು ಮಾಡಿದರೆ ಶಿಕ್ಷೆ ಅನುಭವಿಸಲಿ. ಆದರೆ ತಪ್ಪು ಮಾಡದೇನೇ ಅಪವಾಧ ಹೊರಿಸುವುದು ಸರಿಯಲ್ಲ. ಕೆಲವರು ಅವರೇ ಕಣ್ಣಾರೆ ನೋಡಿರೋ ತರ ಮಾತನಾಡುತ್ತಾರೆ. ಈ ದುರ್ಘಟನೆ ನಡೆಯಬಾರದಿತ್ತು. ರೇಣುಕಾಸ್ವಾಮಿ ಮನೆಯವರು ನೋವು ಅನುಭವಿಸುತ್ತಿದ್ದಾರೆ. ಅವರಿಗೆ ದುಃಖ ಭರಿಸುವ ಶಕ್ತಿಯನ್ನ ದೇವರು ಕೊಡಲಿ. ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ. ನ್ಯಾಯಾಲಯದ ಮೇಲೆ ನಂಬಿಕೆ ಇದೆ. ಮಾನವೀಯತೆ ದೃಷ್ಟಿಯಿಂದ ನೊಂದಿರುವ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದಿದ್ವಿʼʼ ಎಂದರು.
ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ
ಇದಕ್ಕೂ ಮುಂಚೆ ಮುಂಚೆ ಚಿತ್ರದುರ್ಗಕ್ಕೆ ತೆರಳಿದ ನಟ ವಿನೋದ್ ರಾಜ್ ಮಾತನಾಡಿ, ‘ಮನೆಗೆ ಆಧಾರ ಸ್ತಂಭವಾದ ಮಗನನ್ನು ಕಳೆದುಕೊಂಡಿದ್ದಾರೆ. ಕುಟುಂಬ ಪರಿತಪಿಸುತ್ತಿರುವ ಸ್ಥಿತಿ ಕಂಡು ಕರಳುಕಿತ್ತು ಬರುತ್ತಿದೆ. ಜೀವನದಲ್ಲಿ ಮನುಷ್ಯ ಹೇಗೆ ಬಾಳಬೇಕು, ಹೇಗೆ ನಡೆದುಕೊಳ್ಳಬೇಕು, ಯಾವ ದಿಕ್ಕಿನಲ್ಲಿ ಮಾನವೀಯತೆ, ಮನುಷತ್ವ ಸಾಗುತ್ತಿದೆ, ಮನುಷ್ಯತ್ವ ಇದೆಯಾ ಎನ್ನುವುದು ನಮ್ಮನ್ನೇ ಮುಟ್ಟಿಕೊಂಡು ನೋಡುವಂತಹ ಕಾಲ ಬಂದಿದೆ. ಜೀವನ ಇಡೀ ಸಂಪದಾನೆ, ಹೆಸರು ಮಾಡುವುದು ಅಲ್ಲವೇ ಅಲ್ಲ. ಜೀವನ ಇಡಿ ಜೀವಗಳ ಬಗ್ಗೆ ಕಾಳಜಿ ತೆಗೆದುಕೊಂಡು ಬದುಕಬೇಕು. ಪ್ರತಿಯೊಬ್ಬರ ಜೀವನದಲ್ಲೂ ಜೀವಗಳಿವೆ. ಜೀವರಾಶಿಗಳನ್ನ ಭಗವಂತ ತಂದೆ ತಾಯಿ ರೂಪದಲ್ಲಿ ಸೃಷ್ಟಿ ಮಾಡಿರುತ್ತಾನೆ. ಅವರೂ ಕೂಡ ಚೆನ್ನಾಗಿ ಇರಬೇಕು ಎಂದು ಬೆಳೆಸುತ್ತಾರೆ. ಎಲ್ಲೋ ಒಂದು ಅತಾಚುರ್ಯ, ಕೆಟ್ಟದ್ದು ನಡೆಯುತ್ತೆ. ಕೆಟ್ಟದ್ದು ಜಾಸ್ತಿ ಆದಾಗ ಇಂತಹ ಪರಿಸ್ಥಿತಿ ಬರುತ್ತದೆ. ಆದರೆ ಇದು ಹೆಚ್ಚಾಗಬಾರದು. ಸಮಾಜದಲ್ಲಿ ಉನ್ನತವಾದ ಸ್ಥಾನ ಎತ್ತರದ ಮಟ್ಟದಲ್ಲಿರುವವರು ವಿವೇಕ ಮರೆಯಬಾರದು, ಅಚಾತುರ್ಯ ನಡೆಯುತ್ತವೆ, ಮುಂದಿನ ತಲೆಮಾರುಗಳು ಹೀಗೆ ಆಗದಂತೆ ಎಚ್ಚರವಹಿಸಬೇಕು, ಮಾಧ್ಯಮ ತಿದ್ದಿಬುದ್ದಿ ಹೇಳಿದಂತೆ ಅನುಸರಿಸಿಕೊಂಡು ಸಾಗಬೇಕು’ ಎಂದು ವಿನೋದ್ ರಾಜ್ಕುಮಾರ್ ಹೇಳಿದ್ದರು. .