ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Actor Darshan ) ತೂಗುದೀಪ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ದೂಡುತಿದ್ದಾರೆ. ಹಲವು ಅಭಿಮಾನಿಗಳು ದರ್ಶನ್ರನ್ನು ಭೇಟಿಯಾಗಲು ಪ್ರತಿನಿತ್ಯ ಜೈಲಿನ ಬಳಿ ಬರುತ್ತಿದ್ದಾರೆ. ಆದರೆ ಪೊಲೀಸರು ಯಾರಿಗೂ ಅವಕಾಶ ನೀಡುತ್ತಿಲ್ಲ. ಕೇವಲ ಕುಟುಂಬ ಸದಸ್ಯರಿಗೆ ಹಾಗೂ ವಕೀಲರಿಗಷ್ಟೆ ಅವಕಾಶ ನೀಡಲಾಗಿದೆ. ಭಾನುವಾರ ರಜೆ ಹಿನ್ನೆಲೆಯಲ್ಲಿ ಯಾರಿಗೂ ಭೇಟಿಯಾಗುವ ಅವಕಾಶ ಇರುವುದಿಲ್ಲ. ಹೀಗಿದ್ದರೂ ಕೆಲ ಅಭಿಮಾನಿಗಳು ಬಂದಿದ್ದರು. ಇದೀಗ ಪರಪ್ಪನ ಅಗ್ರಹಾರ ಜೈಲು ಬಳಿ ದರ್ಶನ್ ಭೇಟಿಗೆ ವಯೋವೃದ್ಧೆ ಬಂದಿದ್ದಾರೆ.
ಹುಬ್ಬಳ್ಳಿಯಿಂದ ಅಜ್ಜಿ ರಾಜೇಶ್ವರಿ ಅವರು ದರ್ಶನ್ ನೋಡಲು ಬಂದಿದ್ದಾರೆ. ತುಂಬಾ ದೂರದಿಂದ ಬಂದಿದ್ದೇನೆ ನನ್ನನ್ನು ಭೇಟಿಯಾಗಲು ಬಿಡಿ ಎಂದು ಪೊಲೀಸರ ಬಳಿ ಮನವಿ ಮಾಡಿದ್ದಾರೆ. ʻಎರಡು ಬಾರಿ ದರ್ಶನ್ ಅವರನ್ನು ನಾನು ಭೇಟಿ ಆಗಿದ್ದೇನೆ. ಅವನು ತಪ್ಪು ಮಾಡಿದ್ದಾನೆ ಆದರೆ ಶಿಕ್ಷೆ ಕೊಡಬೇಡಿ. ಎಲ್ಲರೂ ತಪ್ಪು ಮಾಡುತ್ತಾರೆ ಅವನು ಸಹ ಮಾಡಿದ್ದಾನೆ. ನಾನು ದೂರದಿಂದ ಬಸ್ಸಿನಲ್ಲಿ ಬಂದಿದ್ದೇನೆ ಎಂದು ಗೋಗೆರೆದಿದ್ದಾರೆ.
ನಿನ್ನೆ ಕೂಡ ಭಾನುವಾರ ಆದ ಕಾರಣ ದರ್ಶನ್ ಭೇಟಿಗೆ ಯಾರಿಗೂ ಅವಕಾಶ ಇರಲಿಲ್ಲ. ಆದರೂ ನಟ ದರ್ಶನ್ ಭೇಟಿಗೆ ವಿಶೇಷ ಚೇತನ ಆಗಮಿಸಿದ್ದರು, ದಾಸಪ್ಪ ವೃತ್ತಿ ಮಾಡುವ ವಿಶೇಷ ಚೇತನ ಅಭಿಮಾನಿ, ಕಿವಿ ಕೇಳಿಸದಿದ್ದರು ಶಂಖ ಊದುತ್ತಾ, ಜಾಗಟೆ ಬಾರಿಸುತ್ತ ಜೈಲಿನ ಬಳಿ ಬಂದಿದ್ದರು. ತುರುವೆಕೆರೆಯ ಜಡಿಯೊ ಗ್ರಾಮದ ವಿಶೇಷ ಚೇತನ ಅಭಿಮಾನಿಯಾಗಿದ್ದರು ʻʻನಟ ದರ್ಶನ್ ಒಳ್ಳೆಯ ವ್ಯಕ್ತಿ. ಅಂತಹವರನ್ನು ಜೈಲಿನಲ್ಲಿಟ್ಟರೆ ಸಿನಿ ಕಾರ್ಮಿಕರು, ನಿರ್ಮಾಪಕರಿಗೆ ತೊಂದರೆ. ಅವ್ರು ತಪ್ಪು ಮಾಡಿರಬಹುದು. ಆದರೆ ನಟ ದರ್ಶನ್ ಸಾಕಷ್ಟು ಸಮಾಜಸೇವೆ ಮಾಡಿದ್ದಾರೆ ಮಾನವೀಯತೆ ದೃಷ್ಟಿಯಿಂದ ಬಿಡುಗಡೆ ಮಾಡಬೇಕು. ದರ್ಶನ್ ಬಿಡುಗಡೆಗಾಗಿ ಗೃಹ ಮಂತ್ರಿ ಜಿ ಪರಮೇಶ್ವರ ಭೇಟಿಗೆ ಹೋಗಿದ್ದೆ. ಆದರೆ ಅವರು ಸಿಗಲಿಲ್ಲʼʼ ಎಂದು ವಿಶೇಷ ಚೇತನ ಅಭಿಮಾನಿ ಗೋವಿಂದ ರಾಜು ಹೇಳಿಕೆ ನೀಡಿದ್ದರು.
ಇದನ್ನೂ ಓದಿ; Actor Darshan: ದರ್ಶನ್ ಕುಟುಂಬ ಜೈಲಿಗೆ ಎಂಟ್ರಿ; ಖಾಸಗಿ ಕಾರಿನಲ್ಲಿ ಕರೆದೊಯ್ದ ಪೊಲೀಸ್ ಸಿಬ್ಬಂದಿ
ರೇಣುಕಾ ಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್ (Actor Darshan) ಸೆರೆವಾಸ ಇಂದು ಹತ್ತನೇ ದಿನಕ್ಕೆ ಕಾಲಿಟ್ಟಿದೆ. ಇಷ್ಟು ದಿನವೂ ದರ್ಶನ್ ಅವರ ಅಮ್ಮ ಹಾಗೂ ತಮ್ಮ ಮಗನ ಭೇಟಿಗೆ ಸೆರೆಮನೆಯತ್ತ ಕಾಲಿಟ್ಟಿರಲಿಲ್ಲ. ಇದೀಗ ದರ್ಶನ್ ತಾಯಿ, ತಮ್ಮ, ಪತ್ನಿ , ಮಗ ಭೇಟಿ ಮಾಡಿದ್ದಾರೆ. ಆದರೀಗ ಖಾಸಗಿ ವಾಹನದಲ್ಲಿಯೇ ನಟ ದರ್ಶನ್ ಕುಟುಂಬ ಜೈಲಿಗೆ ಎಂಟ್ರಿ ಕೊಟ್ಟಿರುವುದು ತಿಳಿದು ಬಂದಿದೆ. ಹೀಗಾಗಿ ಸಾಮಾನ್ಯರಿಗೊಂದು ಕಾನೂನು ನಟ ದರ್ಶನ್ ಕುಟುಂಬಕ್ಕೆ ಒಂದು ಕಾನೂನು ಎನ್ನುವಂತಾಗಿದೆ