ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಟ ದರ್ಶನ್ ಬಂಧಿಸುವಾಗ (Actor Darshan) ನಾನಾ ಸಮಸ್ಯೆಯನ್ನು ಎದುರಿಸಬೇಕಾಯಿತು. ಪೊಲೀಸರು ಬಂಧಿಸಲು ಹೋದಾಗ ದರ್ಶನ್ ಇದ್ದ ರೂಮ್ ನಂಬರ್ ಹೇಳದೇ ಹೋಟೆಲ್ ಸಿಬ್ಬಂದಿ ಸತಾಯಿಸಿದ್ದರು ಎನ್ನಲಾಗಿದೆ. ಹೋಟೆಲ್‌ನಲ್ಲಿ ಕೆಲಕಾಲ ಕಾದಿದ್ದ ಪೊಲೀಸರಿಗೆ, ದಿಢೀರನೆ ಮೂವರು ಬಾಡಿ ಗಾರ್ಡ್ಸ್ ಬಂದಿದ್ದರು. ಪೊಲೀಸರನ್ನು ಕಂಡು ತುರಾತುರಿಯಲ್ಲಿ ದರ್ಶನ್ ಕಾರಿನಲ್ಲಿ ಹೋಗುತ್ತಿದ್ದ ಬಾಡಿ ಗಾರ್ಡ್ಸ್ ಅಡ್ಡ ಹಾಕಿ ಮೊಬೈಲ್ ಪಡೆದಿದ್ದರು. ದರ್ಶನ್ ರೂಂ ತೋರಿಸುವಂತೆ ಬಾಡಿ ಗಾರ್ಡ್ಸ್‌ಗೆ ಪೊಲೀಸರು ಗದರಿಸಿದ್ದರು.
ಬಳಿಕ ರೂಮ್ ತೋರಿಸಲು ಕರೆದುಕೊಂಡು ಹೋಗಿದ್ದರು. ಮತ್ತೊಂದು ಕೀ ಬಳಸಿ ದರ್ಶನ್ ಇದ್ದ ರೂಮ್ ಓಪನ್ ಮಾಡಿದ್ದರು. ಈ ವೇಳೆ ರೂಮಿನಲ್ಲಿ ಸ್ನಾನ ಮಾಡುತ್ತಿದ್ದ ನಟ ದರ್ಶನ್ ಎರಡೇ ನಿಮಿಷದಲ್ಲಿ ಬಾತ್ ರೂಮ್‌ನಿಂದ ಹೊರ ಬಂದಿದ್ದರು. ಪೊಲೀಸರು ನಮ್ಮ ಜತೆಗೆ ಬರಬೇಕು ಎಂದಾಗ ಬಟ್ಟೆ ಹಾಕಿಕೊಂಡು ಬರುತ್ತೇನೆ ಸಾರ್ ಎಂದಿದ್ದರು. ಬಳಿಕ ದರ್ಶನ್‌ನನ್ನು ಎಸಿಪಿ ಚಂದನ್ ಹಾಗೂ ಇನ್‌ಸ್ಪೆಕ್ಟರ್ ಗಿರೀಶ್ ನಾಯ್ಕ್ ಪೊಲೀಸ್ ಜೀಪ್ ಹತ್ತಿಸಿಕೊಂಡು ಬೆಂಗಳೂರಿಗೆ ಕರೆತಂದಿದ್ದರು.
ಇದನ್ನೂ ಓದಿ:
ಏಳು ಸಂಪುಟಗಳಾಗಿ ವಿಂಗಡಿಸಿ ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ
ಸಂಪುಟ -1
ಚಾರ್ಜ್ ಶೀಟ್ ಮತ್ತು ಪೂರಕವಾದ ದಾಖಲೆಗಳು
ಸಂಪುಟ-2
ತನಿಖಾ ಕಾಲದಲ್ಲಿ ಸಂಗ್ರಹಿಸಲಾದ ಸಿಡಿಆರ್ ಡೇಟಾ
ಸಂಪುಟ 3
ತನಿಖಾ ಕಾಲದಲ್ಲಿ ಆರೋಪಿಗಳಿಂದ ವಶಪಡಿಸಿಕೊಂಡ ಮಾಲು ಪಟ್ಟಿ ಮತ್ತು ಮಹಜರು ದಾಖಲೆ
ಸಂಪುಟ 3ಎ
ಮಾಲುಪಟ್ಟಿ ಮತ್ತು ಪಂಚನಾಮೆ ರಿಟ್ರೀವ್ ಪಂಚನಾಮೆಗಳು
ಸಂಪುಟ 4
ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳ ಹೇಳಿಕೆ ಸಿಆರ್ ಪಿಸಿ 161 ಹಾಗೂ 164 ಹೇಳಿಕೆಗಳು
ಸಂಪುಟ 5
ತನಿಖಾ ಕಾಲದಲ್ಲಿ ಸಂಗ್ರಹಿಸಿದ ದಾಖಲೆಗಳು
ಸಂಪುಟ 5ಎ
ತನಿಖಾ ಕಾಲದಲ್ಲಿ ಸಂಗ್ರಹಿಸಿದ ಡಿಜಿಟಲ್ ಮತ್ತು ಟೆಕ್ನಿಕಲ್ ದಾಖಲೆಗಳು
ಸಂಪುಟ 6
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ, ವೈದ್ಯರ ಅಭಿಪ್ರಾಯ ಮತ್ತು ತಜ್ಞರ ವರದಿ
ಸಂಪುಟ 7
ಆರೋಪಿಗಳು ಬಳಸುತ್ತಿದ್ದ ಮೊಬೈಲ್ ರಿಟ್ರೀವ್ ವರದಿ, ಡೇಟಾ ವರದಿ, ಡೇಟಾ ಅನಾಲಿಸಿಸ್ ವರದಿ ಹಾಗೂ ಸ್ವಇಚ್ಚೆ ಹೇಳಿಕೆಗಳು
ವಿಚಾರಣೆ ವೇಳೆ ಕಣ್ಣೀರು ಹಾಕುತ್ತಿದ್ದ ಪವಿತ್ರಾಗೌಡ
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಸಿಲುಕಿದ ಪವಿತ್ರ ಗೌಡ ಪೊಲೀಸ್ ಕಸ್ಟಡಿಯಲ್ಲಿದ್ದಾಗ ದಿನನಿತ್ಯ ಕಣ್ಣೀರು ಹಾಕುತ್ತಿದ್ದರು ಎನ್ನಲಾಗಿದೆ. ಪೊಲೀಸರ ಮುಂದೆ ಕೈ ಕಟ್ಟಿ ನಿಲುತ್ತಿದ್ದ ಪವಿತ್ರಾಗೌಡ ಅಳುತ್ತಲೇ ಘಟನೆ ಬಗ್ಗೆ ಹೇಳುತ್ತಿದ್ದರು.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ