Site icon Vistara News

Actor Darshan : ಪವಿತ್ರಾಗೌಡಗೆ ಅಶ್ಲೀಲ ಫೋಟೊ ಕಳಿಸಿದ್ದು ದೃಢ; ಆದ್ರೆ ರೇಣುಕಾಸ್ವಾಮಿ ಕೊಲೆಯಲ್ಲಿ ಈ ಮೂವರು ಭಾಗಿಯೇ ಆಗಿಲ್ಲ! ಯಾರವರು?

Actor Darshan and gang

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder case) ಸಂಬಂಧಿಸಿದಂತೆ ಸ್ಫೋಟಕ ತಿರುವು ಸಿಕ್ಕಿದೆ. ಈಗಾಗಲೇ ದರ್ಶನ್‌ ಮತ್ತು ಗ್ಯಾಂಗ್‌ (Actor Darshan) ಜೈಲಿನಲ್ಲಿ ಬಂಧಿಯಾಗಿದ್ದಾರೆ. ಚಾರ್ಜ್ ಶೀಟ್‌ನಲ್ಲಿ ರೇಣುಕಾಸ್ವಾಮಿ ಕೊಲೆಯಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳು ಭಾಗಿಯಾಗಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಚಾರ್ಜ್​​​ಶೀಟ್​​​ನಲ್ಲಿ ಕೊಲೆಯಲ್ಲಿ ಮೂವರು ಆರೋಪಿಗಳ ಪಾತ್ರವಿಲ್ಲ ಎಂದು ಉಲ್ಲೇಖಿಸಲಾಗಿದೆ.

ನಿಖಿಲ್ ನಾಯ್ಕ್, ಕೇಶವಮೂರ್ತಿ ಹಾಗೂ ಕಾರ್ತಿಕ್ ಈ ಮೂವರು ಆರಂಭದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರಿಗೆ ತಾವೇ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ದಾಗಿ ಸೆರೆಂಡರ್ ಆಗಿದ್ದರು. ಆದರೆ ಈಗ ಈ ಕೊಲೆಯಲ್ಲಿ ಮೂವರ ಪಾತ್ರ ಇಲ್ಲ ಎಂಬುದು ಸಾಬೀತಾಗಿದೆ. ನಿಖಿಲ್ ನಾಯ್ಕ್, ಕೇಶವಮೂರ್ತಿ, ಕಾರ್ತಿಕ್‌ ಮೇಲೆ ಕೊಲೆ ಕೇಸ್‌ ಇಲ್ಲದಿದ್ದರೂ, ಚಾರ್ಜ್​​​ಶೀಟ್​​​ನಲ್ಲಿ 201 ಅಡಿ ಸಾಕ್ಷಿ ನಾಶ ಆರೋಪವಿದೆ. ಮೂವರ ವಿರುದ್ಧ ಸಾಕ್ಷ್ಯ ನಾಶ ಮಾಡಿದ ಆರೋಪವನ್ನು ಪೊಲೀಸರು ಪ್ರಸ್ತಾಪ ಮಾಡಿದ್ದಾರೆ. ಸಾಕ್ಷಿ ನಾಶ ಹಾಗೂ ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿದ್ದಾಗಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Road Accident : ಯಶವಂತಪುರ ಫ್ಲೈಓವರ್‌ ಮೇಲಿಂದ ಬಿದ್ದು ಛಿದ್ರಗೊಂಡ ಕಾರು; ಭೀಕರ ಅಪಘಾತಕ್ಕೆ ಬೆಚ್ಚಿ ಬಿದ್ದ ಜನ

ಪವಿತ್ರಾಗೌಡಗೆ ಅಶ್ಲೀಲ ಫೋಟೊ ಕಳಿಸಿದ್ದು ದೃಢ

ದರ್ಶನ್ ಮತ್ತು ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ರೇಣುಕಾ ಸ್ವಾಮಿ ಪವಿತ್ರಾಗೌಡಗೆ ಅಶ್ಲೀಲ ಫೋಟೊಗಳನ್ನು ಕಳಿಸಿರುವುದು ದೃಢವಾಗಿದೆ. ಪವಿತ್ರಾಗೌಡ ಇನ್ಸ್ಟಾಗ್ರಾಮ್‌ ಅಕೌಂಟ್‌ಗೆ ರೇಣುಕಾ ಸ್ವಾಮಿ ಬಳಸುತ್ತಿದ್ದ ಅಕೌಂಟ್‌ನಿಂದ ಫೋಟೊ ಕಳಿಸಿರುವುದನ್ನು ಪೊಲೀಸರು ಖಚಿತಪಡಿಸಿಕೊಂಡಿದ್ದಾರೆ.

ರೇಣುಕಾಸ್ವಾಮಿ ಫೋಟೊ ಕಳಿಸಿರುವ ಬಗ್ಗೆ ಮಾಹಿತಿ ನೀಡುವಂತೆ ಕಾಮಾಕ್ಷಿಪಾಳ್ಯ ಪೊಲೀಸರು ಇನ್ಸ್ಟಾಗ್ರಾಂಗೆ ಪತ್ರ ಬರೆದಿದ್ದರು. ಇದೀಗ ಪೊಲೀಸರ ಮನವಿಗೆ ಸ್ಪಂದಿಸಿ ಮಾಹಿತಿ ಕೊಟ್ಟಿದ್ದಾರೆ. ಪವಿತ್ರಾಗೌಡಗೆ ಕಳುಹಿಸಿದ್ದ ಮೇಸೆಜ್‌ಗಳು ಹಾಗೂ ಅಶ್ಲೀಲ ಫೋಟೊ ಬಗ್ಗೆ ಇನ್ಸ್ಟಾಗ್ರಾಂ ಖಚಿತಪಡಿಸಿದೆ. ತನಿಖಾ ತಂಡ ಈ ಮಾಹಿತಿಯನ್ನು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದೆ.

ಚಾರ್ಜ್‌ಶೀಟ್‌ ಸಲ್ಲಿಕೆ ಯಾವಾಗ?

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.3ರಂದು ಚಾರ್ಜ್‌ ಶೀಟ್‌ ಸಲ್ಲಿಕೆ ಮಾಡಲಾಗುತ್ತದೆ ಎನ್ನಲಾಗಿತ್ತು. ಆದರೆ ಮಂಗಳವಾರ ಚಾರ್ಜ್ ಶೀಟ್ ಸಲ್ಲಿಕೆ ಮಾಡುವುದು ಅನುಮಾನವಾಗಿದೆ. 4,500 ಪುಟಗಳ ಒಟ್ಟು 22 ಪ್ರತಿಗಳ ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಪ್ರಿಂಟಿಂಗ್ ಆ್ಯಂಡ್ ಬೈಂಡಿಂಗ್ ಕಾರ್ಯ ಮುಗಿಯದ ಕಾರಣ ಇವತ್ತು ಚಾರ್ಜ್‌ಶೀಟ್‌ ಸಲ್ಲಿಕೆ ಮಾಡುವುದು ಅನುಮಾನವಾಗಿದೆ. ಇನ್ನು ಚಾರ್ಜ್ ಶೀಟ್ ಸಲ್ಲಿಕೆ ಹಿನ್ನೆಲೆಯಲ್ಲಿ ಮಾಗಡಿ ರಸ್ತೆಯ ಡಿಸಿಪಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳಿಂದ ಚರ್ಚೆ ನಡೆಯುತ್ತಿದೆ. ನಾಳೆ ಬುಧವಾರ ಚಾರ್ಜ್ ಶೀಟ್‌ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಸಿಪಿ ಚಂದನ್‌, ಇನ್ಸ್‌ಸೆಕ್ಟರ್‌ಗಳಿಂದ ಚರ್ಚೆ ನಡೆಯುತ್ತಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಪ್ರತಿಕ್ರಿಯಿಸಿದ್ದಾರೆ.ಈಗಾಗಲೇ ನಮ್ಮ ಎಲ್ಲಾ ತನಿಖೆ ಮುಗಿದಿದೆ. ಸದ್ಯ ಸ್ಕ್ರಟಿನ ಆಗಬೇಕಿದೆ. ಕೆಲವೊಂದು ಅಬ್ಸರ್ ವೇಷನ್ ಮಾಡಿದ್ದು ತಿದ್ದುಪಡಿಯಾಗುತ್ತಿದೆ. ಬೆಂಗಳೂರು ಎಫ್ ಎಸ್ ಎಲ್ ನಿಂದ ಎಲ್ಲಾ ವರದಿ ಬಂದಿದೆ. ಹೈದರಾಬಾದ್‌ನಿಂದ ಬರಬೇಕಾದ ವರದಿ ಕೆಲವು ಬಂದಿಲ್ಲ. ಹೊರತುಪಡಿಸಿ ಚಾರ್ಜ್ ಶೀಟ್ ಸಲ್ಲಿಕೆ ಮಾಡುತ್ತೇವೆ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version