ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ (Actor Darshan) ಮನೆ ಊಟ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿ ಎಂಬ ಆದೇಶ ಈಗಾಗಲೇ ಬಂದಿದೆ. ಹೀಗಾಗಿ ದರ್ಶನ್‌ಗೆ ಸಂಕಷ್ಟಗಳು ಮಾತ್ರ ನಿವಾರಣೆ ಆಗುತ್ತಿಲ್ಲ. ದರ್ಶನ್ ಬೇಗ ಬಿಡುಗಡೆ ಆಗಲಿ ಎಂದು ವಿಜಯಲಕ್ಷ್ಮೀ ಅವರು ದೇವರ ಮೋರೆ ಹೋಗಿದ್ದು ಗೊತ್ತೇ ಇದೆ. ವಿಜಯಲಕ್ಷ್ಮೀ ಅವರು ಇತ್ತೀಚೆಗೆ ಕೊಲ್ಲೂರಿಗೆ ತೆರಳಿದ್ದರು. ಮೂಕಾಂಬಿಕಾ ದೇವಿಯ ಎದುರು ವಿಶೇಷ ಪೂಜೆಯನ್ನು ಅವರು ಮಾಡಿಸಿದ್ದರು. ಪೂಜೆಯ ಸಂದರ್ಭದಲ್ಲಿ ತೆಗೆದುಕೊಂಡು ಬಂದ ಪ್ರಸಾದವನ್ನು ಜೈಲಿಗೆ ತಂದಿದ್ದಾರೆ ವಿಜಯಲಕ್ಷ್ಮಿ.
ದರ್ಶನ್ ಅವರು ಹೊರಗೆ ಬರಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಕೇಸ್ ತುಂಬಾನೇ ಗಂಭೀರ ಆಗಿದೆ. ಎಲ್ಲರ ಕಣ್ಣು ಈ ಕೇಸ್ಮೇಲೆ ಇದೆ. ಅಲ್ಲದೆ, ಇನ್ನು ಈ ಕೇಸ್ನಲ್ಲಿ ಚಾರ್ಜ್ಶೀಟ್ ಸಲ್ಲಿಕೆ ಆಗಿಲ್ಲ. ಈ ಎಲ್ಲಾ ಕಾರಣದಿಂದ ಅವರಿಗೆ ಜಾಮೀನಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಶೀಘ್ರವೇ ಪೊಲೀಸರು ಕೋರ್ಟ್ ಎದುರು ಚಾರ್ಜ್ಶೀಟ್ ಸಲ್ಲಿಕೆ ಮಾಡಲಿದ್ದಾರೆ.
ದರ್ಶನ್ ಮನೆ ಊಟದ ಅರ್ಜಿ ವಜಾ ಆಗಲು ಕಾರಣ ಇದು
ಕರ್ನಾಟಕ ಪ್ರಿಸನ್ಸ್ ಕರೆಕ್ಷನ್ ಮ್ಯಾನ್ಯುಲ್ 2021ರ ಸೆಕ್ಷನ್ 728ರ ಪ್ರಕಾರ ಕೊಲೆ ಆರೋಪಿಗೆ ಮನೆ ಊಟಕ್ಕೆ ಅವಕಾಶ ಇಲ್ಲ. ಅಲ್ಲದೆ ಜೈಲು ಅಧಿಕಾರಿಗಳು ನೀಡಿರುವ ವರದಿಯಲ್ಲಿ ಮನೆಯೂಟದ ಅವಶ್ಯಕತೆ ಕಾಣಿಸುತ್ತಿಲ್ಲ. ಜತೆಗೆ ಮನೆ ಊಟದ ಅವಶ್ಯಕತೆ ಸಂಬಂಧ ಪೂರಕವಾದ ವೈದ್ಯಕೀಯ ಪ್ರಮಾಣಪತ್ರಗಳು ಇಲ್ಲ-ಈ ಮೂರು ಅಂಶಗಳನ್ನಿಟ್ಟು ದರ್ಶನ್ ಅರ್ಜಿ ವಜಾಗೊಂಡಿದೆ.
ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬೆನ್ನಲ್ಲೇ ಸಂಧಾನಕ್ಕೆ ಹೋಗಿದ್ದಲ್ಲ ಎಂದ ವಿನೋದ್ ರಾಜ್ !
ದರ್ಶನ್ ಪರ ವಕೀಲ ವಕೀಲರ ವಾದ ಏನಾಗಿತ್ತು?
ಜುಲೈ 22ರಂದು ದರ್ಶನ್ ಪರ ವಕೀಲ ವಕೀಲ ರಾಘವೇಂದ್ರ ವಾದ ಮಂಡಿಸಿ, ದರ್ಶನ್‌ಗೆ ಜೈಲು ಊಟ ಜೀರ್ಣವಾಗುತ್ತಿಲ್ಲ, ಅತಿಸಾರವಾಗುತ್ತಿದೆ. ಹೀಗಾಗಿ ಖಾಸಗಿ ಊಟ, ಹಾಸಿಗೆ ಕೆಳಲಾಗುತ್ತಿದೆ. ವಿಚಾರಣಾಧೀನ ಕೈದಿಗೆ ಮನೆಯೂಟ ಪಡೆಯಲು ಅವಕಾಶವಿದೆ. ತನಿಖೆ ಪೂರ್ಣವಾಗದ ಸಂಧರ್ಬದಲ್ಲಿ ಮನೆ ಊಟ ನೀಡಲು ಅವಕಾಶವಿದೆ. ಕರ್ನಾಟಕ ಕಾರಾಗೃಹ ಕಾಯ್ದೆ ಪ್ರಕಾರ ಸಿವಿಲ್ ಕೈದಿ ಹಾಗೂ ವಿಚಾರಣಾಧೀನ ಕೈದಿಗೆ ಸ್ವಂತ ಹಣದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಅಧಿಕಾರಿಗಳೇ ರೇಷನ್ ನೀಡಬೇಕು. ಸೆಂಟ್ರಲ್ ಕಿಚನ್‌ನಲ್ಲಿ ಅಡುಗೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಮನವಿ ಸಲ್ಲಿಸಿದ್ದರು.
ದರ್ಶನ್ ಒಬ್ಬ ಸೆಲೆಬ್ರಿಟಿ ಅಗಿರುವುದರಿಂದ ಪ್ರಚಾರ ಸಿಗುತ್ತದೆ. ಆಗಾಗಿಯೇ ಜೈಲು ಅಧಿಕಾರಿಗಳು ಮನೆ ಊಟಕ್ಕೆ ಅವಕಾಶ ನೀಡುತ್ತಿಲ್ಲ. ಆರೋಪ ಸಾಬೀತಾಗುವವರೆಗೂ ಮುಗ್ಧನೆಂದು ಪರಿಗಣಿಸಿ ಮನೆ ಊಟ, ಹಾಸಿಗೆ ಒದಗಿಸಬೇಕೆಂದು ಹೇಳಿದ್ದರು.