ಬೆಂಗಳೂರು: ಬೆಂಗಳೂರಿನ ರಾಜಾಜಿನಗರದ ರಾಜ್ ಕುಮಾರ್ ರಸ್ತೆಯಲ್ಲಿರುವ ಜೆಟ್ ಲ್ಯಾಗ್ ಪಬ್ (Jet lag Party Case) ಎಂಬ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಸೆಲೆಬ್ರಿಟಿಗಳು ಸಮಯ ಮೀರಿ ಪಾರ್ಟಿ ಮಾಡಿದ್ದರು. ಪೊಲೀಸ್ ಹಾಗೂ ಅಬಕಾರಿ ನಿಯಮಗಳನ್ನು (Excise Rules) ಗಾಳಿಗೆ ತೂರಿ ಮುಂಜಾನೆವರೆಗೂ ಪಾರ್ಟಿ ಮಾಡಿದ ಆರೋಪದಲ್ಲಿ ನಟ ದರ್ಶನ್ (Actor Darshan) ಹೆಸರೂ ಇತ್ತು. ಇದೀಗ ಈ ಪ್ರಕರಣ ಸಂಬಂಧ ನಟ ದರ್ಶನ್ ಸೇರಿ ಎಲ್ಲರಿಗೂ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆ ನಡೆಸಿದ ಪೊಲೀಸರು ಈಗ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ (Chargesheet) ಸಲ್ಲಿಕೆ ಮಾಡಿದೆ. ತಡ ರಾತ್ರಿ ಪಾರ್ಟಿ ಮಾಡಿಲ್ಲ, ಆರೋಪಿಗಳು ಊಟದ ಪಾರ್ಟಿ ಮಾಡಿದ್ದರು ಎಂದು ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಏನಿದು ಪ್ರಕರಣ?
ಜನವರಿ 3ರಂದು ರಾತ್ರಿ ಸೌಂದರ್ಯ ಜಗದೀಶ್ ಒಡೆತನದ ಜೆಟ್ ಲ್ಯಾಗ್ ಪಬ್‌ನಲ್ಲಿ ಕನ್ನಡ ಸಿನಿಮಾ ಒಂದರ ಸಕ್ಸಸ್ ಪಾರ್ಟಿ ನಡೆದಿತ್ತು. ಖ್ಯಾತ ನಟ-ನಟಿಯರು, ನಿರ್ಮಾಪಕರು ಸೇರಿದಂತೆ ಹಲವಾರು ಸಿನಿಮಾ ಸೆಲೆಬ್ರೆಟಿಗಳು ಭಾಗಿಯಾಗಿದ್ದರು. ರಾತ್ರಿ 10 ಗಂಟೆ ಬಳಿಕ ಆರಂಭವಾಗಿದ್ದ ಪಾರ್ಟಿ ನಿಯಮ ಪ್ರಕಾರ ಪ್ರಕಾರ ರಾತ್ರಿ 1 ಗಂಟೆಗೆ ಮುಗಿಯಬೇಕಾಗಿತ್ತು. ಆದರೆ, ಪೊಲೀಸರನ್ನು ಕೇರ್ ಮಾಡದ ಪಬ್ ಮಾಲೀಕರು ಹಾಗೂ ಅಲ್ಲಿನ ಸಿಬ್ಬಂದಿ ಸೆಲೆಬ್ರಿಟಿಗಳಿಗೆ ಮುಂಜಾನೆವರೆಗೂ ಪಾರ್ಟಿ ಮಾಡಲು ಅವಕಾಶ ಮಾಡಿಕೊಟ್ಟಿದ್ದರು.
ಇದನ್ನೂ ಓದಿ: Actor Darshan: ಸತೀಶ್ ನೀನಾಸಂ-ರಚಿತಾ `ಮ್ಯಾಟ್ನಿ’ ಸಿನಿಮಾಗೆ ಡಿ ಬಾಸ್ ದರ್ಶನ್ ಸಾಥ್!
ಸ್ಥಳಕ್ಕೆ ಹೋಗಿದ್ದ ಪೊಲೀಸರು ಪಬ್ ಕ್ಲೋಸ್ ಮಾಡುವಂತೆ ಸೂಚಿಸಿದ್ದರು. ಆದರೆ, ಅದಕ್ಕೆ ಕೇರ್ ಮಾಡದ ಪಬ್ ಮಾಲೀಕರು ಸೆಲೆಬ್ರೆಟಿಗಳಿಗೆ ತುಂಡು ಗುಂಡು ಸಪ್ಲೈ ಮಾಡಿ ಮೋಜು ಮಸ್ತಿ ಮಾಡಲು ಅವಕಾಶ ನೀಡಿದ್ದರು. ಬಳಿಕ ಮುಂಜಾನೆ ಐದು ಗಂಟೆ ಸುಮಾರಿಗೆ ದಾಳಿ ಮಾಡಿದ ಪೊಲೀಸರು ಪಬ್ ಮಾಲೀಕರಾದ ಶಶಿರೇಖಾ ಜಗದೀಶ್ ಹಾಗೂ ಪಬ್ ಕ್ಯಾಶಿಯರ್ ಪ್ರಕಾಶ್ ವಿರುದ್ಧ ಕೆಪಿ. ಆಕ್ಟ್ ಹಾಗೂ ಅಬಕಾರಿ ಕಾಯಿದೆಯಡಿ ಕೇಸು ದಾಖಲಿಸಿದ್ದರು.
ಈ ಸಂಬಂಧ ನಟ ದರ್ಶನ್, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ (Rockline Venkatesh) ಸೇರಿ 8 ಮಂದಿಗೆ ನೋಟಿಸ್ ಜಾರಿಯಾಗಿತ್ತು. ನಟ ದರ್ಶನ್, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ನಿರ್ದೇಶಕ ತರುಣ್ ಸುಧೀರ್, ಸಂಗೀತ ನಿರ್ದೇಶಕ ಹರಿಕೃಷ್ಣ, ನಟರಾದ ನಿನಾಸಂ ಸತೀಶ್, ಡಾಲಿ ಧನಂಜಯ್, ಅಭಿಷೇಕ್ ಅಂಬರೀಶ್ ಹಾಗೂ ಚಿಕ್ಕಣ್ಣ ಅವರಿಗೆ ಪ್ರಧಾನವಾಗಿ ನೋಟಿಸ್ ಜಾರಿ ಮಾಡಲಾಗಿತ್ತು. 8 ಜನರು ವಿಚಾರಣೆಗೆ ಹಾಜರಾಗಿ ನಾವು ಪಾರ್ಟಿ ಮಾಡಿಲ್ಲ. ಕೇವಲ ಊಟ ಮಾತ್ರ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಆಧಾರಿಸಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ.