ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ 12 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ನಟ ದರ್ಶನ್ (Actor Darshan) ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರಿಂದ (Actor Darshan), ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಆಗಿದ್ದಾರೆ. ಪರಪ್ಪನ ಅಗ್ರಹಾರ (Actor Darshan) ಜೈಲಿನ ಬಳಿ ಬಿಗಿ ಬಂಧೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ದರ್ಶನ್‌ಗೆ ಈಗಾಗಲೇ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ಸಹ ನೀಡಲಾಗಿದೆ.ದರ್ಶನ್‌ಗೆ ವಿಚಾರಣಾಧೀನ ಕೈದಿ ಸಂಖ್ಯೆ 6106 ನ್ನು ನೀಡಲಾಗಿದೆ. ಇನ್ನು ನ್ಯಾಯಾಂಗ ಬಂಧನಕ್ಕೆ ಒಳಪಟ್ಟ ಧನರಾಜ್ಗೆ 6107, ವಿನಯ್ಗೆ 6108, ಪ್ರದೂಶ್ಗೆ 6109 ಸಂಖ್ಯೆಗಳನ್ನು ನೀಡಲಾಗಿದೆ.
ಪರಪ್ಪನ ಅಗ್ರಹಾರದಲ್ಲಿ ಮೂರು ವಿಶೇಷ ಬ್ಯಾರಕ್ಗಳಿದ್ದು, ಇತರೆ ಕೈದಿಗಳಿಂದ ಅಪಾಯವಿರುವ ಆರೋಪಿಗಳನ್ನು ಈ ಬ್ಯಾರಕ್ನಲ್ಲಿ ಇಡಲಾಗುತ್ತಿದೆ. ಇದೀಗ ದರ್ಶನ್ ಅನ್ನು ಮೂರನೇ ಬ್ಯಾರಕ್ನಲ್ಲಿ ಇರಿಸಲಾಗಿದೆ.ಪರಪ್ಪನ ಅಗ್ರಹಾರದಲ್ಲಿ ಮೂರು ವಿಶೇಷ ಬ್ಯಾರಕ್ಗಳಿದ್ದು, ಇತರೆ ಕೈದಿಗಳಿಂದ ಅಪಾಯವಿರುವ ಆರೋಪಿಗಳನ್ನು ಈ ಬ್ಯಾರಕ್ನಲ್ಲಿ ಇಡಲಾಗುತ್ತಿದೆ. ಇದೀಗ ದರ್ಶನ್ ಅನ್ನು ಮೂರನೇ ಬ್ಯಾರಕ್ನಲ್ಲಿ ಇರಿಸಲಾಗಿದೆ.. ಪವಿತ್ರಾ ಗೌಡಗೆ ವಿಚಾರಣಾಧೀನ ಕೈದಿ ನಂಬರ್‌ವನ್ನು ಜೈಲಾಧಿಕಾರಿಗಳು ನೀಡಿದ್ದರು. ಪವಿತ್ರಾ ಗೌಡ ವಿಚಾರಣಾಧೀನ(UTP)ಕೈದಿ ನಂಬರ್ 6024 ಆಗಿತ್ತು.
ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ 2011ರಲ್ಲಿ ದರ್ಶನ್ 28 ದಿನ ಜೈಲು ಪಾಲಾಗಿದ್ದರು. ಅಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಜಾಮೀನು ನಿರಾಕರಣೆಗೊಂಡ ಬಳಿಕ, ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದರು. ಇದೀಗ 13 ವರ್ಷಗಳ ಬಳಿಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲಿಗೆ ಹೋಗಿದ್ದಾರೆ.
ಇದನ್ನೂ ಓದಿ: Actor Darshan: ಜೈಲು ಸೇರಿದ ನಟ ದರ್ಶನ್ ಮುಂದೆ ಇರೋ ಆಯ್ಕೆಗಳೇನು?
ನಟ ದರ್ಶನ್‌ಗೆ ಪ್ರಭಾವಿ ರಾಜಕಾರಣಿಗಳ ಸಂಪರ್ಕ ಇರುವುದರಿಂದ ಪಾರದರ್ಶಕವಾಗಿ ತನಿಖೆ ನಡೆಸಲು ರಾಜ್ಯ ಸರ್ಕಾರ ಈ ಬಾರಿ ಖಡಕ್ ನಿರ್ಧಾರ ತೆಗೆದುಕೊಂಡಿದೆ. ಪ್ರಕರಣದಲ್ಲಿ ಯಾರೂ ಒತ್ತಡ ಹಾಕಬೇಡಿ ಎಂದು ಕೂಡ ಸಚಿವರಿಗೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇದರಿಂದ ಪೊಲೀಸರು ಅಗತ್ಯ ಸಾಕ್ಷ್ಯ ಸಂಗ್ರಹಣೆ ಮಾಡುತ್ತಿದ್ದು, ಕೋರ್ಟ್‌ನಲ್ಲಿ ವಕೀಲರು ಸಮರ್ಥ ವಾದ ಮಂಡಿಸುತ್ತಿದ್ದಾರೆ. ಹೀಗಾಗಿ ಆರೋಪಿಗಳೆಲ್ಲಾ ಪರಪ್ಪನ ಅಗ್ರಹಾರ ಸೇರಿದ್ದಾರೆ.
ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿರೋದಕ್ಕೆ ಸೂಕ್ತ ಸಾಕ್ಷ್ಯಗಳಿವೆ. ಈ ನಾಲ್ಕು ಮಂದಿ ರೇಣುಕಾಸ್ವಾಮಿ ಕೊಲೆಯಲ್ಲಿ ಭಾಗಿಯಾಗಿದ್ದಾರೆ. ಇವರಿಗೆ ನೆಲದ ಕಾನೂನಿನ ಮೇಲೆ ಕಿಂಚಿತ್ತು ಗೌರವ ಇಲ್ಲ. ಎ1 ಪ್ರಚೋದನೆಗೆ ದರ್ಶನ್ ಮತ್ತು ಟೀಂ ಒಳಗಾಗಿ ಕೃತ್ಯ ಮಾಡಿದೆ. ಎಲ್ಲರಿಗೂ ಕೊಲ್ಲುವ ಸಮಾನ ಉದ್ದೇಶವೂ ಕಂಡು ಬಂದಿದೆ. ಅದಕ್ಕಾಗಿ ಲಕ್ಷಾಂತರ ರೂಪಾಯಿನ್ನು ಬಳಕೆ ಮಾಡಿದ್ದಾರೆ ಎಂದು ರಿಮ್ಯಾಂಡ್ ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ. ವಾದ-ಪ್ರತಿವಾದ ಆಲಿಸಿದ ಬಳಿಕ ಆರೋಪಿಗಳನ್ನು ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಜಡ್ಜ್ ಆದೇಶ ನೀಡಿದರು.