ಬೆಂಗಳೂರು: ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಪವಿತ್ರಾ ಗೌಡ ನಡುವೆ ದೊಡ್ಡ ವಾರ್ ನಡೆದಿದ್ದು ಗೊತ್ತೇ ಇದೆ. ಮಾಡೆಲ್ ಪವಿತ್ರ ಗೌಡ ಅವರು ನಟ ದರ್ಶನ್ (Darshan Thoogudeepa) ಜತೆಗಿನ ಫೋಟೊಗಳನ್ನು ಹಂಚಿಕೊಂಡಿದ್ದರು. ಇದಾದ ಮೇಲೆ ಆ ಪೋಸ್ಟ್ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಖಡಕ್ ಆಗಿಯೇ ಪ್ರತಿಕ್ರಿಯಿಸಿದ್ದರು. ವಿಜಯಲಕ್ಷ್ಮಿ ಪೋಸ್ಟ್‌ನಲ್ಲಿ ಪವಿತ್ರಾ ಅವರ ಗಂಡ ಹಾಗೂ ಮಗಳ ಫೋಟೊವನ್ನು ಹಂಚಿಕೊಂಡಿದ್ದರು. ಆದರೀಗ ಪವಿತ್ರಾ ಗೌಡ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಈ ಮಧ್ಯೆ ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ಏಕಾಏಕಿ ಪ್ರತ್ಯಕ್ಷವಾಗಿದ್ದಾರೆ. ಮಾಧ್ಯಮವೊಂದಕ್ಕೆ ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.
ಸಂಜಯ್ ಸಿಂಗ್ ಮಾತನಾಡಿ ʻʻಹೌದು.. ನಾನು ಉತ್ತರ ಪ್ರದೇಶದ ಹುಡುಗ. 2002ರಲ್ಲಿ ಬೆಂಗಳೂರಿಗೆ ಬಂದಿದ್ದೆ. ಆ ಟೈಮ್‌ನಲ್ಲಿ ನನಗೆ ಪವಿತ್ರಾ ಗೌಡ ಪರಿಚಯ ಆಗಿ, ಪ್ರೀತಿ ಆಗಿ, ಮದುವೆ ಆಗಿರೋದು. ಮಗಳ ಜತೆ ವರ್ಷಕ್ಕೆ ಒಂದು ಸಾರಿ…. ಎರಡು ವರ್ಷಕ್ಕೆ ಒಂದು ಸಾರಿ ಹೀಗೆ ಫೋನ್‌ನಲ್ಲಿ ಮಾತಾಡುತ್ತೀನಿ. ಆದರೆ, ಡೈರೆಕ್ಟ್ ಆಗಿ ಮಾತಾಡೋಕೆ ಆಗಲ್ಲ. ಯಾಕಂದ್ರೆ ಅವಳ ಫೋನ್ ನಂಬರ್ ನನ್ನ ಬಳಿ ಡೈರೆಕ್ಟ್ ಆಗಿಲ್ಲ. ನಮ್ಮ ಅತ್ತೆ ಮಾವನಿಗೆ ಫೋನ್ ಮಾಡಿದರೆ, ಮಗಳ ಬಳಿ ಮಾತಾಡಬಹುದುʼʼಎಂದಿದ್ದಾರೆ.
ʻʻಈ ಘಟನೆ ಬಳಿಕ ಮಗಳ ಹತ್ತಿರ ಮಾತನಾಡಿಲ್ಲ. ಯಾಕಂದ್ರೆ, ಅವಳ ಪರಿಸ್ಥಿತಿ ನನಗೆ ಗೊತ್ತಿದೆ. ಅವಳು ನನ್ನ ಹಾಗೆ. ಅವಳಿಗೆ ಕೋಪ ಬಂದರೆ ಏನ್ ಮಾಡಿಕೊಳ್ತಾಳೋ ಅವಳಿಗೆ ಗೊತ್ತಿಲ್ಲ. ಆ ಟೈಮ್‌ನಲ್ಲಿ ನಾನು ತೊಂದರೆ ಕೊಡುವುದು ಇಷ್ಟ ಪಡುವುದಿಲ್ಲʼʼಎಂದಿದ್ದಾರೆ.
ಇದನ್ನೂ ಓದಿ: Actor Darshan Arrested : ಪದೇ ಪದೆ ಕ್ರಿಮಿನಲ್ ಚಟುವಟಿಕೆ; ನಟ ದರ್ಶನ್ ರೌಡಿ ಪಟ್ಟಿಗೆ ಸೇರ್ಪಡೆ?
ಪವಿತ್ರಾ ಗೌಡ ಬಗ್ಗೆ ಈ ಹಿಂದೆ ವಿಜಯಲಕ್ಷ್ಮಿ ಬರೆದುಕೊಂಡಿದ್ದೇನು?
ವಿಜಯಲಕ್ಷ್ಮಿ ಈ ಬಗ್ಗೆ ಪೋಸ್ಟ್ ಮಾಡಿ ʻʻಬೇರೊಬ್ಬರ ಗಂಡನ ಚಿತ್ರವನ್ನು ಪೋಸ್ಟ್ ಮಾಡುವ ಮೊದಲು ಈ ಮಹಿಳೆಗೆ ಸೆನ್ಸ್ ಮೊದಲು ಇರಬೇಕು. ಇದೀಗ ಆಕೆಯ ಕ್ಯಾರೆಕ್ಟರ್ ಹಾಗೂ ನೈತಿಕ ನಿಲುವಿನ ಬಗ್ಗೆ ತೋರಿಸುತ್ತಿದೆ. ವಿವಾಹಿತನೆಂದು ತಿಳಿದರೂ ಕೂಡ ತಮ್ಮ ವೈಯಕ್ತಿಕ ಅಗತ್ಯತೆಯಿಂದ ಈ ರೀತಿ ನಡೆದುಕೊಳ್ಳುತ್ತಿದ್ದಾರೆ. ಈ ಎಲ್ಲ ಫೋಟಗಳು ಪವಿತ್ರಾ ಮತ್ತು ಸಂಜಯ್ ಸಿಂಗ್ ಅವರ ಮಗಳು ಖುಷಿ ಗೌಡ ಅವರದ್ದು. ನಾನು ಸಾಮಾನ್ಯವಾಗಿ ವೈಯಕ್ತಿಕ ವಿಷಯಗಳ ಬಗ್ಗೆ ಧ್ವನಿ ಎತ್ತಲು ಸೋಷಿಯಲ್ ಮೀಡಿಯಾವನ್ನು ಬಖಸುವುದಿಲ್ಲ. ಆದರೆ ಈಗ ನನ್ನ ಕುಟುಂಬದ ಹಿತದೃಷ್ಟಿಯಿಂದ ಧ್ವನಿ ಎತ್ತುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ. ಇಡೀ ಸಮಾಜಕ್ಕೆ ವಿಭಿನ್ನ ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಅಂದರೆ ಸಂಜಯಸಿಂಗ್ , ಖುಷಿಗೌಡ, ಪವಿತ್ರ ಗೌಡ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದುʼʼಎಂದು ಬರೆದುಕೊಂಡಿದ್ದರು.
ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬುವರನ್ನು ಹೊಡೆದು ಕೊಂದ ಆರೋಪದ ಮೇಲೆ ಪೊಲೀಸ್ ವಶದಲ್ಲಿರುವ ನಟ ದರ್ಶನ್ ವಿರುದ್ಧ (Actor Darshan Arrested) ರೌಡಿ ಪಟ್ಟಿ ತೆರೆಯಲು ಬೆಂಗಳೂರು ನಗರ ಪೊಲೀಸರು ಸಿದ್ದ ರಾಗಿದ್ದಾರೆ ಎಂಬುದಾಗಿ ವರದಿಯಾಗಿದೆ. ಪದೇ ಪದೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವ ಅವರ ಮೇಲೆ ಕಾನೂನಿನ ಹಿಡಿತ ಸ್ಥಾಪಿಸಲು ರೌಡಿ ಪಟ್ಟಿ ಅನಿವಾರ್ಯ ಎಂಬ ಅಭಿಪ್ರಾಯ ಹಿರಿಯ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾದ ಆರೋಪಿ ಮೇಲೆ ರೌಡಿ ಪಟ್ಟಿಯನ್ನು ತೆರೆಯಲಾಗುತ್ತದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲೂ ದರ್ಶನ್ ಪ್ರಮುಖ ಆರೋಪಿ. ಹೀಗಾಗಿ ಅವರ ಮೇಲೆಯೂ ರೌಡಿ ಶೀಟರ್ ಓಪನ್ ಮಾಡಬೇಕು ಎಂಬ ಅಭಿಪ್ರಾಯಗಳು ಕೇಳಿ ಬಂದಿದೆ.
ಕೌಟುಂಬಿಕ ಕಲಹದಲ್ಲಿ ʼದಾಸʼ
ದರ್ಶನ್ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು. ಇನ್ನು ಕೌಟುಂಬಿಕ ಕಲಹದಲ್ಲಿಯೂ 28 ದಿನಗಳ ಕಾಲ ಜೈಲಿನಲ್ಲಿ ಇದ್ದು ಬಂದಿದ್ದರು. 2011ರಲ್ಲಿ ವಿಜಯಲಕ್ಷ್ಮಿ ಮೇಲೆ ದರ್ಶನ್ ಮಾರಣಾಂತಿಕ ಹಲ್ಲೆ ಮಾಡಿದ್ದರು. 2016ರಲ್ಲಿ ಮತ್ತೊಮ್ಮೆ ದರ್ಶನ್ ವಿರುದ್ಧ ವಿಜಯಲಕ್ಷ್ಮಿ ದೂರು ನೀಡಿದ್ದ ಘಟನೆಯೂ ನಡೆದಿತ್ತು. ಮಗನನ್ನು ಹತ್ಯೆ ಮಾಡುವುದಾಗಿಯೂ ದರ್ಶನ್ ಬೆದರಿಸುವುದಾಗಿ ಕೇಳಿ ಬಂದಿತ್ತು. ಮಾತ್ರವಲ್ಲ ವಿಜಯಲಕ್ಷ್ಮಿ ಅವರಿಗೆ ಸಿಗರೇಟ್‌ನಿಂದ ಸುಟ್ಟು ಗಾಯಗೊಳಿಸಿದ್ದರು. ಅಂಬರೀಶ್ ಮಧ್ಯಪ್ರವೇಶದಿಂದ ವಿಜಯಲಕ್ಷ್ಮಿ ಎಲ್ಲವನ್ನೂ ಮರೆತು ರಾಜಿ ಸಂಧಾನಕ್ಕೆ ಒಪ್ಪಿದ್ದರು.